ರಾಜಕೀಯ
ಅಭಿವೃದ್ಧಿ ಬಗ್ಗೆ ಮಾಧ್ಯಮ ಚರ್ಚೆಗೆ ಬನ್ನಿ; ಎಚ್‌ಡಿಕೆಗೆ ಡಿಕೆಶಿ ಸವಾಲು
ಬೆಂಗಳೂರು: ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ವೈಲೆಂಟ್ ಆಗಿದ್ದಾರೆ. ಕೆಲವು ರ‍್ಷಗಳಿಂದ ಎಚ್ಡಿಕೆ ಬಗ್ಗೆ ಸಾಫ್ಟ್ ಕರ‍್ನರ್ ಹೊಂದಿದ್ದ ಡಿಕೆಶಿ ಈಗ ಸಿಡಿದಿದ್ದಾರೆ. ಹಳೇ ದೋಸ್ತಿ ಕುಮಾರಸ್ವಾಮಿ ವಿರುದ್ಧ ಬಹಿರಂಗವಾಗಿಯೇ ತೊಡೆ ತಟ್ಟಿದ್ದಾರೆ. ಅಲ್ಲದೆ, ತಮ್ಮ ತಮ್ಮ ಕಾಲದ ಅಭಿವೃದ್ಧಿಗಳ ಬಗ್ಗೆ ರ‍್ಚೆ ನಡೆಸಲು ಮಾಧ್ಯಮಗಳ ಮುಂದೆ ಬರುವಂತೆ ಎಚ್.ಡಿ. ಕುಮಾರಸ್ವಾಮಿಗೆ ಡಿ.ಕೆ. ಶಿವಕುಮಾರ ಅವರು ಬಹಿರಂಗ ಸವಾಲು ಹಾಕಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸರ‍್ಪಡೆ ಕರ‍್ಯಕ್ರಮದಲ್ಲಿ ಮಾತನಾಡಿದ ಅವರು, ನನಗೆ ಏಕೆ ಡಿಕೆ ಅಂತಾ ಹೆಸರಿಟ್ಡಿದ್ದಾರೆ? ಅವರದು ಯಾಕೆ ಎಚ್ಡಿಕೆ ಅಂತಾ ಇದೆ? ನನ್ನದು ಕನಕಪುರ, ಅವರದ್ದು ಹಾಸನ ಎಂದು ಹೇಳಿದರು. ಅಲ್ಲದೆ, ಅಭಿವೃದ್ಧಿ ಬಗ್ಗೆ ಮಾಧ್ಯಮಗಳಲ್ಲಿ ಬಹಿರಂಗ ರ‍್ಚೆ ಮಾಡಲು ಬರಲಿ ಎಂದು ಸವಾಲು ಹಾಕಿದ್ದಾರೆ.
ರಾಮನಗರ ಜಿಲ್ಲೆ ಹೆಸರಿನ ಬಗ್ಗೆ ನಾವು ಜನರ ಬಳಿ ಕೇಳುತ್ತಿದ್ದೇವೆ. ಕುಮಾರಸ್ವಾಮಿ ಬಳಿ ನಾವು ಕೇಳುತ್ತಿಲ್ಲ. ರಾಮನಗರಕ್ಕೆ ನನ್ನ ಕೊಡುಗೆ ಅಲ್ಲ, ಕುಮಾರಸ್ವಾಮಿ ಕೊಡುಗೆ ಏನು? ಅಧಿವೇಶನದಲ್ಲಿ ಮಾತನಾಡೋಣ. ಎರಡು ಬಾರಿ ಸಿಎಂ ಆಗಿದ್ದವರು ಅವರು. ಎಷ್ಟು ಅಭಿವೃದ್ಧಿ ಮಾಡಿದ್ದಾರೆ? ಅವರನ್ನೇ ಕೇಳಿಕೊಳ್ಳಲಿ. ಐದು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಜಿಲ್ಲೆ ಆಗುತ್ತಿದೆ. ಹಾರೋಹಳ್ಳಿ ಹೊಸ ತಾಲೂಕು ಆಗಿದೆ. ಅದನ್ನು ಕುಮಾರಸ್ವಾಮಿ ಮಾಡಿದ್ದಾರೆ. ಕನಕಪುರದಲ್ಲಿ ರಸ್ತೆ ಇರಲಿಲ್ಲ ಎಂಬ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರೆ. ಒಮ್ಮೆ ಕನಕಪುರಕ್ಕೆ ಹೋಗಿ ನೋಡಲಿ. ನಾನು ಓಪನ್ ಡಿಬೇಟ್ಗೆ ರೆಡಿ ಇದ್ದೇನೆ. ನನ್ನ ಇತಿಹಾಸ, ಕುಮಾರಸ್ವಾಮಿ ಇತಿಹಾಸ ರ‍್ಚೆ ಆಗಲಿ. ಐ ಆ್ಯಮ್ ರೆಡಿ ಎಂದು ಡಿ.ಕೆ. ಶಿವಕುಮಾರ್ ಪಂಥಾಹ್ವಾನ ನೀಡಿದರು.
ಕುಮಾರಣ್ಣ ಮೈತ್ರಿ ರ‍್ನಾಟಕಕ್ಕೆ ಮಾತ್ರ ಎನ್ನುತ್ತಿದ್ದಾರೆ. ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಕೇರಳಕ್ಕೆ ಒಂದು ಭಾಗ, ರ‍್ನಾಟಕಕ್ಕೆ ಒಂದು ಭಾಗ ಎಂದು ಹೇಗೆ ಮಾಡುತ್ತಾರೋ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದರು.
ಜೆಡಿಎಸ್ ಎನ್ಡಿಎಗೆ ಸೇರಿದ ಕಾರಣ, ಕೇರಳ ಸೇರಿದಂತೆ ಇತರೇ ರಾಜ್ಯಗಳ ಜೆಡಿಎಸ್ ಪಕ್ಷದ ನೂರಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅದರಲ್ಲೂ ‘ಇಂಡಿಯಾ’ಕ್ಕೆ ಸೇರುತ್ತಿದ್ದಾರೆ. ನಾನು ಕೇವಲ ಪಕ್ಷಕ್ಕೆ ಆಹ್ವಾನ ನೀಡಲು ಬಂದಿಲ್ಲ. ಒಬ್ಬೊಬ್ಬ ನಾಯಕರು, ಕರ‍್ಯರ‍್ತರು ಕನಿಷ್ಠ ೧೦ ಜನರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಗುರಿ ನೀಡಲು ಬಂದಿದ್ದೇನೆ. ಕಾಂಗ್ರೆಸ್ ಪಕ್ಷವೇ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ, ಎಲ್ಲರೂ ಸೇರಿ ಮತ್ತಷ್ಟು ಪಕ್ಷವನ್ನು ಬಲಪಡಿಸೋಣ. ಇತರರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಕೆಲಸವನ್ನು ಬೆಂಗಳೂರಿಗೆ ಬಂದು ಮಾಡಬೇಕಾಗಿಲ್ಲ, ನೀವು ಇರುವ ಸ್ಥಳಗಳಲ್ಲೇ ಈ ಕೆಲಸ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ಕರೆ ನೀಡಿದರು.
ಕಳೆದ ರ‍್ಷ ಇದೇ ಹೊತ್ತಿನಲ್ಲಿ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರ ಜತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕುತ್ತಿದ್ದೆವು. ಆದರೆ, ಇಂದು ತಾಯಿ ಚಾಮುಂಡೇಶ್ವರಿಗೆ ಪುಷ್ಪರ‍್ಚನೆ ಮಾಡಿ ಅಂಬಾರಿ ಜತೆ ಹೆಜ್ಜೆ ಹಾಕುತ್ತಿದ್ದೇವೆ. ಅಂಬಾರಿ ಮೆರವಣಿಗೆಯಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಟ್ಯಾಬ್ಲೋ ಮೆರವಣಿಗೆ ಮಾಡಲಾಯಿತು. ಇಡೀ ದೇಶವೇ ‘ರ‍್ನಾಟಕ ಮಾದರಿ’ ಅನುಕರಣೆ ಮಾಡಲು ಕಾಯುತ್ತಿದೆ. ಈ ದೇಶದ ಪ್ರಧಾನಿ ಮೋದಿಯವರು ಗ್ಯಾರಂಟಿ ಯೋಜನೆಯಿಂದ ರಾಜ್ಯ ದಿವಾಳಿಯಾಗುತ್ತದೆ ಎಂದೆಲ್ಲ ಹೇಳಿದರು. ಆದರೆ ಈಗ ಐದು ಗ್ಯಾರಂಟಿಗಳ ಬಗ್ಗೆ ಎಲ್ಲರೂ ವ್ಯಾಖ್ಯಾನ ಮಾಡುತ್ತಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.
ಬೆಂಗಳೂರು
Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!
ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.
ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.
ಖಾಲಿ ಸೈಟ್ ಸ್ವಚ್ಛವಾಗಿಡುವುದು ಕಡ್ಡಾಯ
2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.
ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.
ಕಸ ತೆರವು ಮಾಡದಿದ್ದರೆ ಭಾರಿ ದಂಡ!
ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.
ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.
- 20×30 ಸೈಟ್: ₹19,200ರಿಂದ ದಂಡ
- 30×40 ಸೈಟ್: ₹38,400ರವರೆಗೆ ದಂಡ
- ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ
ಹೀಗಾಗಿ ಖಾಲಿ ಸೈಟ್ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.
ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ
ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
ರಾಜ್ಯ
B Nagendra ದಿಢೀರ್ Delhi ಭೇಟಿ; Congress High Command ಜೊತೆ ಮಹತ್ವದ ಮಾತುಕತೆ ಸಾಧ್ಯತೆ!
ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಚಿವ B Nagendra ಅವರು ರಾತ್ರೋರಾತ್ರಿ ರಾಷ್ಟ್ರ ರಾಜಧಾನಿ Delhi ಗೆ ತೆರಳಿದ್ದಾರೆ. ಸದ್ಯ ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಇಂದು Congress High Command ನ ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ.
ರಾಜ್ಯ ರಾಜಕೀಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ವಿವಾದ ತೀವ್ರವಾಗಿರುವ ಸಂದರ್ಭದಲ್ಲೇ ನಾಗೇಂದ್ರ ಅವರ ದಿಢೀರ್ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. ಪ್ರಕರಣದ ವಿಚಾರವಾಗಿ ವಿರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದು, ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಸಿದ್ಧತೆ ನಡೆಸಿವೆ. ಹೀಗಾಗಿ ನಾಗೇಂದ್ರ ಅವರ ದೆಹಲಿ ಪ್ರವಾಸಕ್ಕೆ ರಾಜಕೀಯ ಮಹತ್ವ ಬಂದಿದೆ.
ಖರ್ಗೆ ಸೇರಿದಂತೆ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ
ದೆಹಲಿಯಲ್ಲಿ ಸಚಿವ ನಾಗೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಪಕ್ಷದ ವರಿಷ್ಠರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ಹೆಸರು ರಾಜಕೀಯವಾಗಿ ಪದೇಪದೆ ಚರ್ಚೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮ್ಮ ನಿಲುವನ್ನು ಹೈಕಮಾಂಡ್ ಮುಂದೆ ಸ್ಪಷ್ಟಪಡಿಸುವ ಉದ್ದೇಶದಿಂದ ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಸಚಿವ ಸ್ಥಾನಕ್ಕೆ ಕಂಟಕವಾಗುತ್ತಾ ವಿವಾದ?
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನೂ ವಿರೋಧ ಪಕ್ಷಗಳು ನೀಡಿವೆ.
ಇದರ ನಡುವೆಯೇ ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಸಚಿವ ಸ್ಥಾನದಲ್ಲಿ ಮುಂದುವರಿಯುತ್ತಾರೆಯೇ ಅಥವಾ ಪ್ರಕರಣದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಳ್ಳುತ್ತಾರೆಯೇ ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಹೆಚ್ಚಾಗಿದೆ.
ದೆಹಲಿ ಭೇಟಿಯ ಬಳಿಕ ಸಿಗಲಿದೆಯೇ ಸ್ಪಷ್ಟ ಚಿತ್ರಣ?
ಸಚಿವ ನಾಗೇಂದ್ರ ಅವರ ದೆಹಲಿ ಭೇಟಿಯ ಪ್ರಮುಖ ಉದ್ದೇಶವೇನು ಎಂಬುದು ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಆದರೆ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಹಾಗೂ ತಮ್ಮ ವಿರುದ್ಧದ ರಾಜಕೀಯ ಆರೋಪಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ವಿರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಸಂದರ್ಭದಲ್ಲಿ ನಾಗೇಂದ್ರ ಅವರ ದೆಹಲಿ ಭೇಟಿ ನಡೆದಿದೆ. ಹೀಗಾಗಿ ಕಾಂಗ್ರೆಸ್ ವರಿಷ್ಠರೊಂದಿಗೆ ನಡೆಯುವ ಮಾತುಕತೆ ಹಾಗೂ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಮತ್ತು ಕಾಂಗ್ರೆಸ್ ಹೈಕಮಾಂಡ್ ಸಚಿವ ನಾಗೇಂದ್ರ ಅವರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆ ಎಂಬುದು ಇದೀಗ ರಾಜ್ಯ ರಾಜಕೀಯದ ಪ್ರಮುಖ ಚರ್ಚೆಯಾಗಿದೆ.
-
ಬೆಂಗಳೂರು7 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!
-
ದೇಶ10 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
-
ಬೆಂಗಳೂರು11 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ಬೆಂಗಳೂರು9 ಗಂಟೆಗಳು agoBengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
-
ಬೆಂಗಳೂರು10 ಗಂಟೆಗಳು agoNalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
-
ದೇಶ8 ಗಂಟೆಗಳು agoNepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್
-
ರಾಜ್ಯ8 ಗಂಟೆಗಳು agoMysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
-
ಬೆಂಗಳೂರು10 ಗಂಟೆಗಳು agoAnand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
