Connect with us

ಬೆಂಗಳೂರು

ಉಪಚುನಾವಣೆಯಲ್ಲೂ ಕುಟುಂಬ ರಾಜಕಾರಣಕ್ಕೆ ಮಣೆ: ಮೂರನೇ ತಲೆಮಾರಿನ ಕುಡಿಗಳು ‘ರಾಜಕೀಯ ರಂಗಪ್ರವೇಶಕ್ಕೆ’ವೇದಿಕೆ ಸಜ್ಜು!

Published

on

ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಸಮರ ರಂಗೇರಿದ್ದು, ಮಾಜಿ ಮುಖ್ಯಮಂತ್ರಿಗಳಿಬ್ಬರ ಮಕ್ಕಳು ‘ರಾಜಕೀಯ ರಂಗಪ್ರವೇಶಕ್ಕೆ’ ಅಣಿಯಾಗಿದ್ದಾರೆ.

ಶಿಗ್ಗಾಂವಿ ಕ್ಷೇತ್ರಕ್ಕೆ ಬಿಜೆಪಿಯಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಚನ್ನಪಟ್ಟಣ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇನ್ನೂ ಸಂಡೂರು ಕ್ಷೇತ್ರದಿಂದ ಈ ಹಿಂದೆ ಶಾಸಕರಾಗಿ ಈಗ ಸಂಸದರಾಗಿ ಆಯ್ಕೆಯಾದ ಈ.ತುಕಾರಾಮ್ ಪತ್ನಿ ಅನ್ನಪೂರ್ಣ ಮೊದಲ ಬಾರಿ ಸ್ಪರ್ಧಿಸುತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿಗಳ ಕುಟುಂಬ ಸದಸ್ಯರು ರಾಜಕಾರಣ ಪ್ರವೇಶ ರಾಜ್ಯದಲ್ಲಿ ಹೊಸದೇನಲ್ಲ. ಮಾಜಿ ಮುಖ್ಯಮಂತ್ರಿ ದಿ. ಡಿ.ದೇವರಾಜ ಅರಸು ಅವರಿಂದ ಹಿಡಿದು ಬಿ.ಎಸ್‌.ಯಡಿಯೂರಪ್ಪ, ಹೆಚ್.ಡಿ.ಕುಮಾರಸ್ವಾಮಿ ಕುಟುಂಬದ ಕುಡಿಗಳು ರಾಜಕೀಯ ರಂಗಪ್ರವೇಶ ಮಾಡಿ ಸೋಲು – ಗೆಲುವು ಕಂಡಿದ್ದಾರೆ. ಇದೀಗ ಉಪಚುನಾವಣೆಯಲ್ಲಿ ಮಾಜಿ ಸಿಎಂ ಹೆಚ್​ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಅವರು ರಾಜಕೀಯ ಅಸ್ತಿತ್ವಕ್ಕಾಗಿ ಹೋರಾಟ ನಡೆಸಲು ಸಜ್ಜಾಗಿದ್ದಾರೆ.

ಮೂರನೇ ತಲೆಮಾರು: ಹೆಚ್.ಡಿ.ದೇವೇಗೌಡ, ಎಸ್.ಆರ್.ಬೊಮ್ಮಾಯಿ ಸಹ ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು. ರಾಜ್ಯ ರಾಜಕಾರಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಕುಟುಂಬ ಸದಸ್ಯರು ಶಾಸಕ, ಸಂಸದರಾದರೂ ಮುಖ್ಯಮಂತ್ರಿ ಆಗುವ ಯೋಗ ಲಭಿಸಿದ್ದು ಹೆಚ್. ಡಿ.ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ ಅವರಿಗೆ ಮಾತ್ರ. ಇದೀಗ ಮೂರನೇ ತಲೆಮಾರಿನ ನಿಖಿಲ್ ಕುಮಾರಸ್ವಾಮಿ ಹಾಗೂ ಭರತ್ ಬೊಮ್ಮಾಯಿ ಚುನಾವಣಾ ಅಖಾಡದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಮೂರನೇ ಬಾರಿಗೆ ಸ್ಪರ್ಧೆ: ಚನ್ನಪಟ್ಟಣ ಕ್ಷೇತ್ರದ ಉಪ ಚುನಾವಣೆ ಮೂಲಕ ನಿಖಿಲ್ ಕುಮಾರಸ್ವಾಮಿ ಮೂರನೇ ಬಾರಿಗೆ ಸ್ಪರ್ಧೆಗಿಳಿದ್ದಾರೆ. 2019 ರಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಸೋತಿದ್ದರು. ಆಗ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತದಿಂದ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಈಗ ಮೂರನೇ ಬಾರಿಗೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್​​ಡಿಎ ಅಭ್ಯರ್ಥಿ ಯಾಗಿ ಕಣಕ್ಕಿಳಿದಿದ್ದಾರೆ. ಇಂದು ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ. ಒಕ್ಕಲಿಗ ಸಮುದಾಯದ ಮತಗಳೇ ನಿರ್ಣಾಯಕವಾಗಿರುವ ಕ್ಷೇತ್ರದಲ್ಲಿ ಈ ಬಾರಿ ನಿಖಿಲ್ ಜಯಭೇರಿ ಬಾರಿಸುತ್ತಾರಾ ಕಾದುನೋಡಬೇಕು.

ಮೊದಲ ಬಾರಿಗೆ ಅಖಾಡಕ್ಕೆ: ಶಿಗ್ಗಾಂವಿಯಲ್ಲಿ ಸತತವಾಗಿ ನಾಲ್ಕು ಬಾರಿ ಗೆದ್ದಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕ್ಷೇತ್ರದಲ್ಲಿ ಸಂಪೂರ್ಣವಾಗಿ ಪ್ರಾಬಲ್ಯವಿದೆ. ಈ ಕ್ಷೇತ್ರದಲ್ಲಿ ಲಿಂಗಾಯತ ಹಾಗೂ ಮುಸ್ಲಿಂ ಸಮುದಾಯದ ಮತಗಳೇ ನಿರ್ಣಾಯಕ. ಮೊದಲ ಬಾರಿಗೆ ಭರತ್ ಬೊಮ್ಮಾಯಿ ಸ್ಪರ್ಧಿಸುತ್ತಿದ್ದರೂ, 2023 ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಂದೆ ಪರವಾಗಿ ಶಿಗ್ಗಾಂವಿ ಕ್ಷೇತ್ರದಲ್ಲಿ ಸಂಘಟನೆ ಮಾಡಿ ಕ್ಷೇತ್ರದ ಪರಿಚಯ ಮಾಡಿಕೊಂಡಿದ್ದಾರೆ. ಇದರ ಜೊತೆಗೆ ತಂದೆಯ ರಾಜಕೀಯ ಪಟ್ಟು ಮತ್ತು ತಂತ್ರಗಾರಿಕೆಯನ್ನು ಹತ್ತಿರದಿಂದ ನೋಡಿದ್ದು, ಅದು ಸಹ ಈ ಚುನಾವಣೆಯಲ್ಲಿ ಸಹಕಾರಿಯಾಗಲಿದೆ. ಹಾಗಾಗಿ, ರಾಜಕೀಯಕ್ಕೆ ಇಳಿಯಲು ಭರತ್ ನಿರ್ಧಾರ ಮಾಡಿದರೆಂದು ವಿಶ್ಲೇಷಿಸಲಾಗುತ್ತಿದೆ.

ಸಂಡೂರು ಕ್ಷೇತ್ರದಲ್ಲಿ ಶಾಸಕರಾಗಿದ್ದ ಈ.ತುಕಾರಾಮ್ ಅವರು ಹೈಕಮಾಂಡ್ ಸೂಚನೆ ಮೇರೆಗೆ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಬಿಜೆಪಿ ಸ್ಪರ್ಧಿ ಬಿ. ಶ್ರೀರಾಮುಲು ಅವರನ್ನು ಸೋಲಿಸಿ ಸಂಸದರಾದರು. ಪಕ್ಷ ನಿಷ್ಠೆಯ ಕಾರಣಕ್ಕೆ ಈ.ತುಕಾರಾಮ್ ಅವರ ಪತ್ನಿ ಅನ್ನಪೂರ್ಣ ಅವರಿಗೆ ಟಿಕೆಟ್​ ಸಿಕ್ಕಿದೆ ಎಂದು ವಿಶ್ಲೇಷಿಸಲಾಗಿದೆ.

ಸಂಡೂರು ಕ್ಷೇತ್ರದಿಂದ‌ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿದ್ದ ಈ.ತುಕಾರಾಮ್ ಅವರು ಕ್ಷೇತ್ರದಲ್ಲಿ ಬಿಗಿ ಹಿಡಿತವಿದೆ. ಸಂಡೂರು ಎಸ್​ಟಿ ವರ್ಗದ ವಿಧಾನಸಭಾ ಕ್ಷೇತ್ರವಾಗಿದ್ದು, ಪರಿಶಿಷ್ಟ ಪಂಗಡದ ಪ್ರಾಬಲ್ಯ ಹೊಂದಿರುವ ಕ್ಷೇತ್ರ ಇದಾಗಿದೆ. ಒಟ್ಟಾರೆ, ರಾಜಕಾರಣಿಗಳ ಕುಟುಂಬದ ಸದಸ್ಯರು ಈ ಉಪಚುನಾವಣೆಯಲ್ಲಿ ಗೆದ್ದು ಬೀಗುವರೇ ಎಂಬುದು ಚುನಾವಣಾ ಫಲಿತಾಂಶದವರೆಗೂ ಕಾಯಬೇಕು.

ಬೆಂಗಳೂರು

Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್‌ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ

Published

on

ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.

ಈ ವೇಳೆ ಹೆಬ್ಬಾಳ ಮಾರ್ಗದ ಬಸ್‌ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್‌ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.

Continue Reading

ಬೆಂಗಳೂರು

ಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ

Published

on

ಬೆಂಗಳೂರು: ‘ಬೇಡ ಬ್ರೋ’… ಇದೇ ಘೋಷಣೆಯೊಂದಿಗೆ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸ್ ವತಿಯಿಂದ ಗ್ಲೋಬಲ್ ವಿಲೇಜ್‌ನಲ್ಲಿ ಡ್ರಗ್ಸ್ ವಿರೋಧಿ ಬೃಹತ್ ಜಾಗೃತಿ ಅಭಿಯಾನ ನಡೆಯಿತು. ಯುವಜನಾಂಗವನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವೈದ್ಯರು, ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯೆ ಡಾ. ಮಾತಂಗಿ, ದೇಶದಲ್ಲಿ ಮಾದಕ ವ್ಯಸನ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿದ್ದು, ವಿಶೇಷವಾಗಿ 18ರಿಂದ 25 ವರ್ಷದೊಳಗಿನ ಯುವಕರು ಡ್ರಗ್ಸ್ ಜಾಲಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಗಾಂಜಾ, ಅಪೀಮು ಸೇರಿದಂತೆ ವಿವಿಧ ಮಾದಕ ವಸ್ತುಗಳು ಯುವಕರ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯವನ್ನು ಹಾಳು ಮಾಡುತ್ತಿವೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳು ಉತ್ತಮ ಮೌಲ್ಯಗಳನ್ನು ಬೆಳೆಸುವ ಸಂದೇಶ ನೀಡಬೇಕು ಎಂದು ಅವರು ಕರೆ ನೀಡಿದರು.

ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಪೊಲೀಸರು ಹಾಗೂ ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದರು. ಕೆಲವು ಕಾಲೇಜುಗಳಲ್ಲಿ ಡ್ರಗ್ಸ್ ಜಾಲದ ಬಗ್ಗೆ ಆತಂಕಕಾರಿ ಮಾಹಿತಿ ದೊರೆಯುತ್ತಿದ್ದು, ಯುವಕರನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ಡ್ರಗ್ಸ್ ವಿರುದ್ಧದ ‘ಬೇಡ ಬ್ರೋ’ ಅಭಿಯಾನ ಸಮಾಜದಲ್ಲಿ ದೊಡ್ಡ ಜಾಗೃತಿ ಮೂಡಿಸಬೇಕು ಎಂದು ಆಶಿಸಿದರು.

ನೈರುತ್ಯ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣ ಮಾತನಾಡಿ, ಇಂದಿನ ಕಾಲದಲ್ಲಿ ಬಂದೂಕಿಗಿಂತ ಡ್ರಗ್ಸ್ ಸಮಾಜವನ್ನು ಹೆಚ್ಚು ಅಪಾಯಕ್ಕೆ ತಳ್ಳುತ್ತಿದೆ ಎಂದು ಎಚ್ಚರಿಸಿದರು. ಎಸಿಪಿ ಸತ್ಯವತಿ ಕೂಡ ಕ್ಷಣಿಕ ಸುಖಕ್ಕಾಗಿ ವ್ಯಸನದ ದಾರಿ ಹಿಡಿಯಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು “ಡ್ರಗ್ಸ್‌ಗೆ ಬೇಡ… ಬದುಕಿಗೆ ಹೌದು” ಎಂಬ ಸಂದೇಶದೊಂದಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು.

Continue Reading

ರಾಜ್ಯ

Cabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?

Published

on

ಬೆಂಗಳೂರು: Cabinet Expansion ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗಳು ಮತ್ತೆ ವೇಗ ಪಡೆದಿದ್ದು, ಶೀಘ್ರದಲ್ಲೇ ರಾಜ್ಯದ ಪ್ರಮುಖ ನಾಯಕರಿಗೆ ದೆಹಲಿ ಬುಲಾವ್ ಬರಬಹುದಾದ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿರುವ ಹಿನ್ನೆಲೆ, ಅದರ ಮೊದಲು ಸಂಪುಟ ವಿಸ್ತರಣೆ ನಡೆಯಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದು, ಬರ ಹಾಗೂ ಪ್ರವಾಹದಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಹಕ್ಕು ಮಂಡಿಸುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.

Continue Reading

Trending