ರಾಜಕೀಯ
ಎಲ್ಲ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹2000 ಕೋಟಿ ವಿತರಣೆ: ಸಿಎಂ ಘೋಷಣೆ – CM SIDDARAMAIAH
ಬೆಳಗಾವಿ: ”ಅಪೆಂಡಿಕ್ಸ್ ಇ ನಲ್ಲಿ 4,000 ಕೋಟಿ ರೂ., ಗ್ರಾಮೀಣ ರಸ್ತೆಗೆ 2,000 ಕೋಟಿ ರೂ. ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ 2000 ಕೋಟಿ ರೂ. ವಿತರಣೆ ಮಾಡುತ್ತೇವೆ. ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿರಲಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ. ಇದು ಖಚಿತ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ”ಅಭಿವೃದ್ಧಿ ಪರ್ವ ರಾಜ್ಯದಲ್ಲಿ ನಿರಂತರತೆ ಕಾಯ್ದುಕೊಂಡಿದೆ. ವಿಧಾನಸಭೆ, ಪರಿಷತ್ನಲ್ಲಿ ಮತ್ತು ಸದನದ ಹೊರಗೆ ನಮ್ಮ ಅಭಿವೃದ್ಧಿಯ ದಾಖಲೆಗಳು, ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಿ. ಎದೆ ಎತ್ತಿ ಮಾತನಾಡಿ” ಎಂದು ಕಾಂಗ್ರೆಸ್ ಶಾಸಕರಿಗೆ ಕರೆ ನೀಡಿದರು.
ಸತ್ಯದ ದಾಖಲೆಗಳನ್ನು, ಅಂಕಿ – ಅಂಶಗಳನ್ನು ಜನರ ಮುಂದಿಟ್ಟು ಎದೆ ಎತ್ತಿ ಸತ್ಯ ಹೇಳಿ. ವಕ್ಫ್ ವಿಚಾರ ಬಿಜೆಪಿಗೆ ತಿರುಗುಬಾಣವಾಗಿದೆ. ಅತಿ ಹೆಚ್ಚು ನೋಟಿಸ್ ಕೊಟ್ಟಿರುವುದು, ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲೇ ಹೇಳಿದೆ. ಯಡಿಯೂರಪ್ಪ, ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಿದ್ದಾಗಲೇ ವಕ್ಫ್ ಆಸ್ತಿ ತೆರವುಗೊಳಿಸಲು ನೋಟಿಸ್ ಕೊಡಲಾಗಿದೆ. ಹೀಗಾಗಿ, ಬಿಜೆಪಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಕಿಡಿಕಾರಿದರು.
”once a waqf property… Always a waqf property ಅಂತ ಸುಪ್ರೀಂಕೋರ್ಟ್ ತೀರ್ಪು ಬಂದಿವೆ. ಸಚಿವ ಜಮೀರ್ ಅವರು ಸಮರ್ಥವಾಗಿ ಉತ್ತರ ನೀಡುತ್ತಾರೆ. ಪರಿಷತ್ನಲ್ಲಿ ಈಗಾಗಲೇ ಕೊಟ್ಟಿದ್ದಾರೆ. ಬಿಜೆಪಿ 9 ವರ್ಷಗಳ ಕಾಲ ರಾಜ್ಯದಲ್ಲಿ ಅಧಿಕಾರದಲ್ಲಿದ್ದಾಗ, ಸಮ್ಮಿಶ್ರ ಸರ್ಕಾರದಲ್ಲಿದ್ದಾಗಲೂ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಕೆಲಸ ಮಾಡಲಿಲ್ಲ. ಪ್ರಾದೇಶಿಕ ತಾರತಮ್ಯ ಹೋಗಲಾಡಿಸಲು ಬಿಜೆಪಿ ಪ್ರಯತ್ನವನ್ನೇ ಮಾಡಲಿಲ್ಲ” ಎಂದು ಆರೋಪಿಸಿದರು.
ಇದು ಬಿಜೆಪಿಯ ಸತ್ಯವಾದ ಮುಖ- ಸಿದ್ದರಾಮಯ್ಯ ಲೇವಡಿ: ”ನಂಜುಂಡಪ್ಪ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲೂಕುಗಳು ಇರುವುದೇ ಉತ್ತರ ಕರ್ನಾಟಕದಲ್ಲಿ. 176ರಲ್ಲಿ 116 ತಾಲೂಕುಗಳು ಹಿಂದುಳಿದಿವೆ. ಇವುಗಳ ಅಭಿವೃದ್ಧಿಗೆ ವಿಶೇಷ ಅನುದಾನ ಕೊಡಬೇಕು ಅಂತಲೂ ಹೇಳಿದ್ದಾರೆ. ನಂಜುಂಡಪ್ಪ ವರದಿಯ ಅನುಷ್ಠಾನ ಮತ್ತು ಸಾಮಾಜಿಕ, ಆರ್ಥಿಕ ಬದಲಾವಣೆ ಕುರಿತಂತೆ ಅಧ್ಯಯನ ನಡೆಸಿ ವರದಿ ನೀಡಲು ಗೋವಿಂದರಾವ್ ಅವರ ಸಮಿತಿಯನ್ನು ರಚಿಸಲಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ 371ಜೆ ಸಂವಿಧಾನ ತಿದ್ದುಪಡಿ ಮಾಡಲು ಸಾಧ್ಯವೇ ಇಲ್ಲ ಎಂದು ಕೇಂದ್ರದಲ್ಲಿದ್ದ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಎಲ್.ಕೆ.ಅಡ್ವಾಣಿ ಅವರು ತಿರಸ್ಕರಿಸಿದ್ದರು. ಇದು ಬಿಜೆಪಿಯ ಸತ್ಯವಾದ ಮುಖ” ಎಂದು ಆಪಾದಿಸಿದರು.
”ಬಿಜೆಪಿ ನೈತಿಕವಾಗಿ ಕುಸಿದಿದೆ. ಮೂರೂಕ್ಕೆ ಮೂರೂ ಉಪಚುನಾವಣೆಯಲ್ಲಿ ನಾವು ಗೆದ್ದಿರುವುದು, ಬಿಜೆಪಿ ಕೈಯಿಂದ ಎರಡು ಸೀಟುಗಳನ್ನು ಕಾಂಗ್ರೆಸ್ ಗೆದ್ದಿರುವುದು ಅವರನ್ನು ರಾಜ್ಯದ ಜನತೆ ತಿರಸ್ಕರಿಸಿರುವುದಕ್ಕೆ ಸ್ಪಷ್ಟ ನಿದರ್ಶನ. ನನ್ನ ಮೇಲೆ, ನಮ್ಮ ಸರ್ಕಾರದ ಮೇಲೆ ಮಾಡಿದ ಸರಣಿ ಸುಳ್ಳು ಆರೋಪ, ಅಪಪ್ರಚಾರ ಮಾಡಿದರೂ ಅದೆಲ್ಲವನ್ನೂ ತಿರಸ್ಕರಿಸಿ ರಾಜ್ಯದ ಜನತೆ ನಮ್ಮ ಕೈ ಹಿಡಿದಿದ್ದಾರೆ. ಇತ್ತೀಚೆಗೆ ನಾವು ಹಾಸನದಲ್ಲಿ ಮಾಡಿದ ಸ್ವಾಭಿಮಾನಿ ಸಮಾವೇಶ ಐತಿಹಾಸಿಕವಾದುದು” ಎಂದರು.
”ನಾವು 2013ರಿಂದ 2018ರವರೆಗೆ ಅಧಿಕಾರದಲ್ಲಿದ್ದಾಗ ಅವರು ಕೇಳಿದ್ದನ್ನೆಲ್ಲಾ ಸಿಬಿಐ ತನಿಖೆಗೆ ಒಪ್ಪಿಸಿದೆವು. ಆದರೂ ಸಿಬಿಐ ತನಿಖೆಯಲ್ಲಿ ಬಿಜೆಪಿಯ ಒಂದೂ ಆರೋಪ ಸಾಬೀತಾಗಲಿಲ್ಲ. ಅವರು ಅಧಿಕಾರದಲ್ಲಿದ್ದಾಗ ನಾವು ಕೇಳಿದ ಒಂದನ್ನೂ ಸಿಬಿಐ ತನಿಖೆಗೆ ಕೊಡಲಿಲ್ಲ. ಈಗ ಮತ್ತೆ ಅದೇ ಸಿಬಿಐ ರಾಗ ಎಳೆಯುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಸಿಬಿಐ ಅನ್ನು “ಚೋರ್ ಬಚಾವೋ ಸಂಸ್ಥೆ” ಎಂದಿದ್ದರು. ಈಗ ಇವರಿಗೆ ಸಿಬಿಐ ಮೇಲೆ ಪ್ರೀತಿ ಬಂದಿದೆ” ಎಂದು ವ್ಯಂಗ್ಯವಾಡಿದರು.
ಹೆಚ್ಚೆಚ್ಚು ಜನ ಸಂಪರ್ಕ ಸಭೆ ಮಾಡಿ: ”ನಮ್ಮ ಸಚಿವರು ಮತ್ತು ಶಾಸಕರು ಅವರವರ ಉಸ್ತುವಾರಿಯ ಜಿಲ್ಲೆ, ಕ್ಷೇತ್ರಗಳಲ್ಲಿ ಹೆಚ್ಚೆಚ್ಚು ಜನಸಂಪರ್ಕ ಸಭೆ ನಡೆಸಿ ಜನರ ಸಮಸ್ಯೆಗಳನ್ನು ಬಗೆಹರಿಸಿ. ಹಣಕ್ಕೆ ಸಮಸ್ಯೆ ಇಲ್ಲ, ಹಣ ಇದೆ. ಜನರ ಕೆಲಸ ಮಾಡಿ. ಬಿಜೆಪಿ ಅಧಿಕಾರದಲ್ಲಿದ್ದಾಗ ಒಂದೇ ಒಂದು ಮನೆ ಕೊಡಲಿಲ್ಲ. ಅವರು ಯಾವ ಮುಖ ಇಟ್ಟುಕೊಂಡು ನಮ್ಮನ್ನು ಪ್ರಶ್ನಿಸುತ್ತಿದ್ದಾರೆ” ಎಂದು ಶಾಸಕರನ್ನು ಪ್ರಶ್ನಿಸಿದರು.
ಎಲ್ಲ ಕ್ಷೇತ್ರಗಳಿಗೆ ₹2000 ಕೋಟಿ ವಿತರಣೆ: ”ಮಳೆ ಹಾನಿ ಸರಿಪಡಿಸಲು ಅಪೆಂಡಿಕ್ಸ್ ಇ ನಲ್ಲಿ ₹4,000 ಕೋಟಿ, ಗ್ರಾಮೀಣ ರಸ್ತೆ ಹಾಳಾಗಿರುವುದಕ್ಕೆ ₹2000 ಕೋಟಿ ಹಾಗೆಯೇ ಸಿಟಿ, ಟೌನ್ ರಸ್ತೆಗಳಿಗೂ ಹೆಚ್ಚುವರಿ ಹಣ ಕೊಡುತ್ತಿದ್ದೇವೆ. ಮುಂದಿನ ವರ್ಷದಿಂದ ರಾಜ್ಯದ ಆರ್ಥಿಕ ಸಾಮರ್ಥ್ಯ ಇನ್ನಷ್ಟು ಹೆಚ್ಚುತ್ತದೆ. ಆಗ ಇನ್ನಷ್ಟು ಅಭಿವೃದ್ಧಿಯ ವೇಗ ಹೆಚ್ಚುತ್ತದೆ. ಎಲ್ಲಾ ಕ್ಷೇತ್ರಗಳಿಗೂ ಎಲ್ಲಾ ಪಕ್ಷದ ಶಾಸಕರ ಕ್ಷೇತ್ರಗಳಿಗೂ ₹2000 ಕೋಟಿ ವಿತರಣೆ ಮಾಡುತ್ತೇವೆ. ಆದ್ದರಿಂದ ನಮ್ಮ ಶಾಸಕರು ಎದೆ ಎತ್ತಿ ಮಾತನಾಡಿ. ಅವರ ಬಾಯಿ ಮುಚ್ಚಿಸಿ” ಎಂದು ತಿಳಿಸಿದರು.
ಬೆಂಗಳೂರು
Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!
ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.
ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.
ಖಾಲಿ ಸೈಟ್ ಸ್ವಚ್ಛವಾಗಿಡುವುದು ಕಡ್ಡಾಯ
2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.
ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.
ಕಸ ತೆರವು ಮಾಡದಿದ್ದರೆ ಭಾರಿ ದಂಡ!
ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.
ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.
- 20×30 ಸೈಟ್: ₹19,200ರಿಂದ ದಂಡ
- 30×40 ಸೈಟ್: ₹38,400ರವರೆಗೆ ದಂಡ
- ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ
ಹೀಗಾಗಿ ಖಾಲಿ ಸೈಟ್ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.
ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ
ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
ರಾಜ್ಯ
Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ
ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.
ಫಲವತ್ತಾದ ಜಮೀನು ಕೈಗಾರಿಕೆಗೆ?
ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.
ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?
ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.
165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ
ರಾಜ್ಯ
B Nagendra ದಿಢೀರ್ Delhi ಭೇಟಿ; Congress High Command ಜೊತೆ ಮಹತ್ವದ ಮಾತುಕತೆ ಸಾಧ್ಯತೆ!
ನವದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಸಚಿವ B Nagendra ಅವರು ರಾತ್ರೋರಾತ್ರಿ ರಾಷ್ಟ್ರ ರಾಜಧಾನಿ Delhi ಗೆ ತೆರಳಿದ್ದಾರೆ. ಸದ್ಯ ದೆಹಲಿಯ ಖಾಸಗಿ ಹೋಟೆಲ್‌ನಲ್ಲಿ ವಾಸ್ತವ್ಯ ಹೂಡಿರುವ ಅವರು, ಇಂದು Congress High Command ನ ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ.
ರಾಜ್ಯ ರಾಜಕೀಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದ ವಿವಾದ ತೀವ್ರವಾಗಿರುವ ಸಂದರ್ಭದಲ್ಲೇ ನಾಗೇಂದ್ರ ಅವರ ದಿಢೀರ್ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. ಪ್ರಕರಣದ ವಿಚಾರವಾಗಿ ವಿರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿದ್ದು, ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಲು ಸಿದ್ಧತೆ ನಡೆಸಿವೆ. ಹೀಗಾಗಿ ನಾಗೇಂದ್ರ ಅವರ ದೆಹಲಿ ಪ್ರವಾಸಕ್ಕೆ ರಾಜಕೀಯ ಮಹತ್ವ ಬಂದಿದೆ.
ಖರ್ಗೆ ಸೇರಿದಂತೆ ವರಿಷ್ಠರನ್ನು ಭೇಟಿಯಾಗುವ ಸಾಧ್ಯತೆ
ದೆಹಲಿಯಲ್ಲಿ ಸಚಿವ ನಾಗೇಂದ್ರ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ನ ಹಿರಿಯ ನಾಯಕರನ್ನು ಭೇಟಿಯಾಗುವ ಸಾಧ್ಯತೆಯಿದೆ. ರಾಜ್ಯದಲ್ಲಿ ಸದ್ಯ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು ಹಾಗೂ ತಮ್ಮ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಪಕ್ಷದ ವರಿಷ್ಠರಿಗೆ ಮಾಹಿತಿ ನೀಡುವ ಸಾಧ್ಯತೆ ಇದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರ ಹೆಸರು ರಾಜಕೀಯವಾಗಿ ಪದೇಪದೆ ಚರ್ಚೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ತಮ್ಮ ನಿಲುವನ್ನು ಹೈಕಮಾಂಡ್ ಮುಂದೆ ಸ್ಪಷ್ಟಪಡಿಸುವ ಉದ್ದೇಶದಿಂದ ಅವರು ದೆಹಲಿಗೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಸಚಿವ ಸ್ಥಾನಕ್ಕೆ ಕಂಟಕವಾಗುತ್ತಾ ವಿವಾದ?
ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣವನ್ನು ಮುಂದಿಟ್ಟುಕೊಂಡು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನೂ ವಿರೋಧ ಪಕ್ಷಗಳು ನೀಡಿವೆ.
ಇದರ ನಡುವೆಯೇ ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತಿರುವುದು ಹಲವು ಪ್ರಶ್ನೆಗಳಿಗೆ ಕಾರಣವಾಗಿದೆ. ಸಚಿವ ಸ್ಥಾನದಲ್ಲಿ ಮುಂದುವರಿಯುತ್ತಾರೆಯೇ ಅಥವಾ ಪ್ರಕರಣದ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಯಾವುದೇ ನಿರ್ಧಾರ ಕೈಗೊಳ್ಳುತ್ತಾರೆಯೇ ಎಂಬ ಕುತೂಹಲ ರಾಜ್ಯ ರಾಜಕೀಯದಲ್ಲಿ ಹೆಚ್ಚಾಗಿದೆ.
ದೆಹಲಿ ಭೇಟಿಯ ಬಳಿಕ ಸಿಗಲಿದೆಯೇ ಸ್ಪಷ್ಟ ಚಿತ್ರಣ?
ಸಚಿವ ನಾಗೇಂದ್ರ ಅವರ ದೆಹಲಿ ಭೇಟಿಯ ಪ್ರಮುಖ ಉದ್ದೇಶವೇನು ಎಂಬುದು ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಆದರೆ ರಾಜ್ಯದ ಪ್ರಸ್ತುತ ರಾಜಕೀಯ ಪರಿಸ್ಥಿತಿ, ವಾಲ್ಮೀಕಿ ಅಭಿವೃದ್ಧಿ ನಿಗಮದ ಪ್ರಕರಣ ಹಾಗೂ ತಮ್ಮ ವಿರುದ್ಧದ ರಾಜಕೀಯ ಆರೋಪಗಳ ಕುರಿತು ಹೈಕಮಾಂಡ್ ಜೊತೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ವಿರೋಧ ಪಕ್ಷಗಳು ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿರುವ ಸಂದರ್ಭದಲ್ಲಿ ನಾಗೇಂದ್ರ ಅವರ ದೆಹಲಿ ಭೇಟಿ ನಡೆದಿದೆ. ಹೀಗಾಗಿ ಕಾಂಗ್ರೆಸ್ ವರಿಷ್ಠರೊಂದಿಗೆ ನಡೆಯುವ ಮಾತುಕತೆ ಹಾಗೂ ಸಭೆಯ ಬಳಿಕ ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳ ಬಗ್ಗೆ ಸ್ಪಷ್ಟತೆ ಸಿಗುವ ನಿರೀಕ್ಷೆಯಿದೆ.
ಮುಂದಿನ ದಿನಗಳಲ್ಲಿ ಪ್ರಕರಣದ ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಮತ್ತು ಕಾಂಗ್ರೆಸ್ ಹೈಕಮಾಂಡ್ ಸಚಿವ ನಾಗೇಂದ್ರ ಅವರ ವಿಚಾರದಲ್ಲಿ ಯಾವ ನಿಲುವು ತೆಗೆದುಕೊಳ್ಳುತ್ತದೆ ಎಂಬುದು ಇದೀಗ ರಾಜ್ಯ ರಾಜಕೀಯದ ಪ್ರಮುಖ ಚರ್ಚೆಯಾಗಿದೆ.
-
ದೇಶ23 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ಬೆಂಗಳೂರು6 ಗಂಟೆಗಳು agoEid Milad ಮೆರವಣಿಗೆ ಗಲಾಟೆ: ಪುನೀತ್ ಕೆರೆಹಳ್ಳಿ ಸೇರಿ ಹಲವರ ವಿರುದ್ಧ FIR, 6 ಮಂದಿ ಬಂಧನ
-
ದೇಶ5 ಗಂಟೆಗಳು agoMantralaya: ಇಂದಿನಿಂದ ಸಪ್ತರಾತ್ರೋತ್ಸವ ಆರಂಭ; ಮಹಾರಥೋತ್ಸವ, ತೆಪ್ಪೋತ್ಸವ ಸೇರಿದಂತೆ ಹಲವು ಕಾರ್ಯಕ್ರಮ
-
ಬೆಂಗಳೂರು5 ಗಂಟೆಗಳು agoNalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
-
ಬೆಂಗಳೂರು3 ಗಂಟೆಗಳು agoBengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
-
ದೇಶ5 ಗಂಟೆಗಳು agoNepal Flood: ನೇಪಾಳದಲ್ಲಿ ಸಿಲುಕಿದ ಕನ್ನಡಿಗರೇ ಗಮನಿಸಿ; ಸರ್ಕಾರದಿಂದ Google Form ಬಿಡುಗಡೆ
-
ರಾಜ್ಯ6 ಗಂಟೆಗಳು agoB Nagendra ದಿಢೀರ್ Delhi ಭೇಟಿ; Congress High Command ಜೊತೆ ಮಹತ್ವದ ಮಾತುಕತೆ ಸಾಧ್ಯತೆ!
-
ಬೆಂಗಳೂರು5 ಗಂಟೆಗಳು agoAnand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
