Blog
ಐತಿಹಾಸಿಕ ದಸರಾ ಬರದ ಕರಿ ನೆರಳು!
ಕಳೆದ ಐದು ವರ್ಷಗಳಲ್ಲಿ ಉತ್ತಮವಾಗಿ ಮಳೆಯಾಗಿದ್ದು ಕರೋನದಿಂದಾಗಿ ಒಂದೆರಡು ವರ್ಷಗಳ ಕಾಲ ದಸರಾ ಆಚರಣೆಗೆ ಅಡ್ಡಿಯಾಗಿತ್ತು ಹೀಗಾಗಿ ಸರಳವಾಗಿ ಸಂಪ್ರದಾಯಿಕವಾಗಿ ದಸರಾ ನಡೆದಿತ್ತು ಆದರೆ ಕಳೆದ ವರ್ಷ ಅದನ್ನೆಲ್ಲ ಮರೆತು ದಸರಾ ಆಚರಣೆ ಅದ್ದೂರಿಯಾಗಿ ವಿಜೃಂಭಣೆಯಾಗಿ ನಡೆದಿತ್ತು ಬರ ಕಾಣಿಸಿದಾಗಲೆಲ್ಲ ಮೈಸೂರು ದಸರಾ ಸರಳವಾಗಿ ನಡೆದು ನಿದರ್ಶನಗಳಿವೆ,ಈಗಾಗಲೇ ಐತಿಹಾಸಿಕ ದಸರಾವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸರ್ವ ರೀತಿಯ ತಯಾರಿಗಳು ನಡೆಯುತ್ತಿವೆ ಅರಮನೆಯ ಅಂಗಳ ಪ್ರವೇಶಿಸಿರುವ ಅಭಿಮನ್ಯು ನೇತೃತ್ವದ ಗಜಪಡೆಯ ಮೊದಲ ತಂಡ ತಾಲಿಮು ಆರಂಭಿಸಿದೆ ಈಗಿರುವಾಗಲೇ ರಾಜ್ಯವನ್ನು ಬರ ಕಾಡಲಾರಂಭಿಸಿದೆ, ಬರದ ನಡುವೆಯೂ ಅದ್ದೂರಿಯಾಗಿ ದಸರಾ ಆಚರಣೆ ಹೇಗೆ ಎಂಬುದು ಸಾರ್ವಜನಿಕ ಪ್ರಶ್ನೆಯಾಗಿದೆ?
ಈ ಬಾರಿ ಮುಂಗಾರು ದುರ್ಬಲವಾದ ಪರಿಣಾಮ ಹಳೆ ಮೈಸೂರು ಭಾಗದ ಕೆರೆಕಟ್ಟೆಗಳು ಜಲಾಶಯಗಳು ಭರ್ತಿಯಾಗಲೇ ಇಲ್ಲ ಮಳೆಯನ್ನು ನಂಬಿ ವ್ಯವಸಾಯ ಮಾಡುವ ರೈತರು ಬೆಳೆದ ಬೆಳೆಗಳಿಗೆ ಜಲಾಶಯಗಳಿಂದ ನೀರು ಹರಿಸಬಹುದು ಎಂಬ ನಂಬಿಕೆಯಿಂದ ಕಾದು ಕೂತಿರುವಂತಾಗಿದೆ. ಬರದ ಬೆನ್ನಲ್ಲೇ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿದ ಪರಿಣಾಮ ಜಲಾಶಯಗಳು ಬರಿದಾಗಿದೆ.ಕುಡಿಯಲು ನೀರಿಲ್ಲದ ಪರಿಸ್ಥಿತಿ ಇರುವಾಗ ಕೃಷಿ ತಾನೇ ಹೇಗೆ ಮಾಡುವುದು ಕೃಷಿ ಮಾಡಿಲ್ಲವೆಂದರೆ ರೈತರ ಜೀವನ ಹೇಗೆ ನಡೆಯುವುದು,ರಾಜ್ಯದಲ್ಲಿ 196 ತಾಲೂಕುಗಳಲ್ಲಿ ಬರ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಬರೆದ ನಡುವೆ ಅದ್ದೂರಿ ದಸರಾ ನಡೆಸಲು ಸಾಧ್ಯವೇ ಹೀಗೊಂದು ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ,ಮೈಸೂರು ವ್ಯಾಪ್ತಿಯನ್ನು ಹೊರತುಪಡಿಸಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಇಲ್ಲದಂತಾಗಿದೆ ಹೀಗಾಗಿ ರೈತರು ಬರದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಸರ್ಕಾರ ಈ ಬಗ್ಗೆ ಗಮನ ಹರಿಸಬೇಕಾಗಿದೆ.ಶೀಘ್ರವೇ ತಮ್ಮ ತಾಲೂಕು, ಜಿಲ್ಲೆಗಳನ್ನು ಬರಪಡಿತ ಎಂದು ಘೋಷಿಸಿ ಹೀಗಿರುವಾಗ ಸರ್ಕಾರ ಯಾವ ರೀತಿ ಕ್ರಮಗಳನ್ನು ಕೈಗೊಳ್ಳುತ್ತದೆ. ಅದು ದಸರಾ ಅದ್ಧೂರಿ ಆಚರಣೆ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ? ಎಂಬಿತ್ಯಾದಿ ಪ್ರಶ್ನೆಗಳನ್ನು ಹುಟ್ಟು ಹಾಕುತ್ತಿದೆ. ದಸರಾ ಅದ್ದೂರಿ ಆಚರಣೆಯ ಮೇಲೆ ಯಾವ ರೀತಿ ಪರಿಣಾಮವನ್ನು ಬೀರುತ್ತದೆ ಎಂದು ಕಾದು ನೋಡಬೇಕಿದೆ..
Blog
11ನೇ ಮೈಲಿ ಬಳಿ ಬೆಂಕಿಯ ಕೆನ್ನಾಲಿಗೆ; ಚಾಲಕರ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ದುರಂತ
ಚಿಕ್ಕಬಳ್ಳಾಪುರ, ಜು.10: ಚಿಕ್ಕಬಳ್ಳಾಪುರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ 11ನೇ ಮೈಲಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪೆಟ್ರೋಲ್ ಟ್ಯಾಂಕರ್ ಲಾರಿ ಮರಕ್ಕೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ. ಬೆಂಕಿಯ ಜ್ವಾಲೆ ಪಕ್ಕದಲ್ಲಿದ್ದ ಹಾಲಿನ ಟ್ಯಾಂಕರ್ಗೂ ವ್ಯಾಪಿಸಿ ಎರಡೂ ವಾಹನಗಳು ಬಹುತೇಕ ಸುಟ್ಟು ಕರಕಲಾಗಿವೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪೆಟ್ರೋಲ್ ಟ್ಯಾಂಕರ್ ಅತಿವೇಗದಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಟ್ಯಾಂಕರ್‌ನಲ್ಲಿ ಕ್ಷಣಾರ್ಧದಲ್ಲೇ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ವಾಹನ ಸಂಪೂರ್ಣವಾಗಿ ಅಗ್ನಿಗಾಹುತಿಯಾಗಿದೆ.
ಈ ವೇಳೆ ಸಮೀಪದಲ್ಲಿದ್ದ ಹಾಲಿನ ಟ್ಯಾಂಕರ್ ರಿವರ್ಸ್ ಪಡೆಯುತ್ತಿದ್ದಾಗ ಬೆಂಕಿಯ ಜ್ವಾಲೆ ಅದಕ್ಕೂ ವ್ಯಾಪಿಸಿದೆ. ಎರಡೂ ವಾಹನಗಳಲ್ಲಿ ಬೆಂಕಿ ವ್ಯಾಪಿಸುತ್ತಿದ್ದರೂ, ಚಾಲಕರು ಸಮಯಪ್ರಜ್ಞೆ ತೋರಿಸಿ ತಕ್ಷಣ ವಾಹನಗಳಿಂದ ಹೊರಗೆ ಜಿಗಿದ ಪರಿಣಾಮ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಬೆಂಕಿಯ ತೀವ್ರತೆಯಿಂದ ಕೆಲಕಾಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.
ಈ ಘಟನೆ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ನಿಖರ ಕಾರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕವಾಗಿ ಅತಿವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಪ್ರಕರಣ ದಾಖಲಿಸಿ ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಅಧಿಕಾರಿಗಳು ವಾಹನ ಚಾಲಕರು ಸಂಚಾರ ನಿಯಮಗಳನ್ನು ಪಾಲಿಸಿ ಸುರಕ್ಷಿತವಾಗಿ ವಾಹನ ಚಲಾಯಿಸುವಂತೆ ಮನವಿ ಮಾಡಿದ್ದಾರೆ.
Blog
ಧರ್ಮಸ್ಥಳದಲ್ಲಿ ವಿಜಯೇಂದ್ರ ಸ್ಪಷ್ಟನೆ: ಸತ್ಯ ಹೊರಬರಲಿದೆ, ನಾನು ತಪ್ಪು ಮಾಡಿಲ್ಲ
ಬೆಳ್ತಂಗಡಿ, ದಕ್ಷಿಣ ಕನ್ನಡ: ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಧರ್ಮಸ್ಥಳದಲ್ಲಿ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಡ್ಡಮತದಾನದ ಹಿಂದೆ ತಾವಿಲ್ಲ ಎಂದು ಪುನರುಚ್ಚರಿಸಿದಷ್ಟೇ ಅಲ್ಲದೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಯಾವುದೇ ವ್ಯವಹಾರಿಕ ಅಥವಾ ಆತ್ಮೀಯ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಅಲ್ಲಿಂದ ಮಂಗಳೂರಿಗೆ ಬಂದು ಧರ್ಮಸ್ಥಳದಲ್ಲಿ ದೇವರ ದರ್ಶನ ಪಡೆದಿದ್ದೇನೆ ಎಂದು ತಿಳಿಸಿದ ವಿಜಯೇಂದ್ರ, ರಾಜ್ಯಸಭೆ ಚುನಾವಣೆಯಲ್ಲಿ ನಡೆದ ಅಡ್ಡಮತದಾನದಿಂದ ಲಕ್ಷಾಂತರ ಬಿಜೆಪಿ ಕಾರ್ಯಕರ್ತರಿಗೆ ನೋವಾಗಿದೆ. ಈ ಬೆಳವಣಿಗೆಯಿಂದ ತಮಗೂ ಮಾನಸಿಕವಾಗಿ ಬೇಸರವಾಗಿದೆ ಎಂದು ಹೇಳಿದರು.
ಧರ್ಮಸ್ಥಳದಲ್ಲಿ ಸತ್ಯಾಸತ್ಯತೆ ಬಹಿರಂಗಪಡಿಸುವ ಉದ್ದೇಶದಿಂದ ಶಾಸಕರಿಂದ ಆಣೆ-ಪ್ರಮಾಣ ಮಾಡಿಸಬೇಕೆಂದು ಭಾವನಾತ್ಮಕವಾಗಿ ಹೇಳಿದ್ದೆ. ಆದರೆ ಪಕ್ಷದ ಹಿರಿಯ ನಾಯಕರು ಆ ಹಂತಕ್ಕೆ ಹೋಗುವುದು ಬೇಡ ಎಂದು ಸಲಹೆ ನೀಡಿದ ಹಿನ್ನೆಲೆಯಲ್ಲಿ ಆ ನಿರ್ಧಾರವನ್ನು ಕೈಬಿಟ್ಟಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆಶೀರ್ವಾದದಿಂದ ಪಕ್ಷದ ರಾಜ್ಯಾಧ್ಯಕ್ಷನ ಜವಾಬ್ದಾರಿ ಸಿಕ್ಕಿದೆ. ಅಂತಹ ಸಂದರ್ಭದಲ್ಲಿ ಪಕ್ಷಕ್ಕೆ ದ್ರೋಹ ಮಾಡುವ ಅಥವಾ ಕೀಳುಮಟ್ಟದ ರಾಜಕೀಯ ಮಾಡುವ ಪ್ರಶ್ನೆಯೇ ಇಲ್ಲ ಎಂದು ವಿಜಯೇಂದ್ರ ಹೇಳಿದರು.
ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ವಿವಿಧ ಹೆಸರುಗಳನ್ನು ತೇಲಿಬಿಟ್ಟು ಬಿಜೆಪಿ ಶಾಸಕರ ಬಗ್ಗೆ ಅನುಮಾನ ಮೂಡಿಸುವ ಪ್ರಯತ್ನ ಮಾಡುತ್ತಿದೆ. ನಮ್ಮೊಳಗೂ ಅನುಮಾನದ ವಾತಾವರಣ ನಿರ್ಮಾಣವಾಗಿರುವುದು ನಿಜ. ಆದರೆ ಸತ್ಯ ಇಂದು ಅಲ್ಲದಿದ್ದರೂ ನಾಳೆ ಹೊರಬರುತ್ತದೆ. ಕೇಂದ್ರ ನಾಯಕತ್ವಕ್ಕೂ ಎಲ್ಲ ಮಾಹಿತಿಯಿದ್ದು, ನನಗೆ ಯಾವುದೇ ತನಿಖಾ ವರದಿ ಬಂದಿಲ್ಲ ಎಂದು ತಿಳಿಸಿದರು.
ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರು ಚುನಾವಣೆಗೆ ಮೊದಲೇ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ ಎಂದು ಹೇಳಿದ್ದರು. ಅವರ ಅಭಿಪ್ರಾಯವನ್ನು ಉತ್ತಮ ಉದ್ದೇಶದಿಂದ ನೀಡಲಾಗಿದೆ ಎಂದು ಸ್ವಾಗತಿಸುತ್ತೇನೆ ಎಂದ ವಿಜಯೇಂದ್ರ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಆರೋಪಗಳಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಿದರು.
ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಪಕ್ಷ ಸಂಘಟನೆಗೆ ಮತ್ತಷ್ಟು ಬಲ ತುಂಬಲಾಗುವುದು. ಬಿಡದಿ ಭೂಸ್ವಾಧೀನ ಪ್ರಕರಣದಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸಕ್ಕೆ ಬಿಜೆಪಿ ಅವಕಾಶ ನೀಡುವುದಿಲ್ಲ. ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಭ್ರಷ್ಟಾಚಾರ ನಡೆದಿದೆ ಹಾಗೂ ಮತದಾರರ ಪಟ್ಟಿಯಲ್ಲಿ ಅಕ್ರಮ ಹೆಸರು ಸೇರ್ಪಡೆ ವಿಚಾರದಲ್ಲಿ ಕಾಂಗ್ರೆಸ್ ಅಪಪ್ರಚಾರ ನಡೆಸುತ್ತಿದೆ ಎಂದು ಅವರು ಆರೋಪಿಸಿದರು.
“ನಾನು ಯಾವುದೇ ತಪ್ಪು ಮಾಡಿಲ್ಲ. ಒಬ್ಬ ಭಕ್ತನಾಗಿ ಧರ್ಮಸ್ಥಳಕ್ಕೆ ಬಂದಿದ್ದೇನೆ. ಸಮಯ ಬಂದಾಗ ಎಲ್ಲ ಸತ್ಯವೂ ಹೊರಬರುತ್ತದೆ. ಎಲ್ಲವನ್ನೂ ಕಾಲವೇ ನಿರ್ಧರಿಸುತ್ತದೆ” ಎಂದು ವಿಜಯೇಂದ್ರ ಹೇಳಿದರು.
ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಪೂಂಜ, ಯಶಪಾಲ್ ಸುವರ್ಣ, ರಾಜೇಶ್ ನಾಯ್ಕ್, ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಭಾಗೀರಥಿ ಮುರುಳ್ಯ ಸೇರಿದಂತೆ ಕರಾವಳಿ ಭಾಗದ ಹಲವು ಬಿಜೆಪಿ ಶಾಸಕರು ಹಾಗೂ ಪಕ್ಷದ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.
Blog
ಕಡಿಮೆ ಕ್ಯಾಲೋರಿ, ಹೆಚ್ಚು ಪೋಷಕಾಂಶ: ರಂಬುಟಾನ್ ಹಣ್ಣಿನತ್ತ ಜನರ ಒಲವು
ಆರೋಗ್ಯಕರ ಆಹಾರಗಳತ್ತ ಜನರ ಆಸಕ್ತಿ ಹೆಚ್ಚುತ್ತಿರುವ ಹಿನ್ನೆಲೆ, ಉಷ್ಣವಲಯದ ಹಣ್ಣಾದ ರಂಬುಟಾನ್ ತನ್ನ ಪೌಷ್ಟಿಕಾಂಶದ ಗುಣಗಳಿಂದ ಗಮನ ಸೆಳೆಯುತ್ತಿದೆ. ಕಡಿಮೆ ಕ್ಯಾಲೋರಿ, ಹೆಚ್ಚಿನ ನೀರಿನ ಅಂಶ ಮತ್ತು ಸಮೃದ್ಧ ಪೋಷಕಾಂಶಗಳನ್ನು ಹೊಂದಿರುವ ಈ ಹಣ್ಣು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವವರಿಗೆ ಉತ್ತಮ ಆಯ್ಕೆಯಾಗಿ ಪರಿಗಣಿಸಲಾಗುತ್ತಿದೆ.
ತಜ್ಞರ ಪ್ರಕಾರ, ರಂಬುಟಾನ್‌ನಲ್ಲಿ ಸಮೃದ್ಧವಾಗಿರುವ ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ ಶಕ್ತಿಶಾಲಿ ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಇದು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಿ, ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
ರಂಬುಟಾನ್ ಹಣ್ಣಿನ ಆರೋಗ್ಯ ಪ್ರಯೋಜನಗಳು – ಮುಖ್ಯಾಂಶಗಳುಆರೋಗ್ಯಕರ ಆಹಾರ ಪದ್ಧತಿಯಲ್ಲಿ ರಂಬುಟಾನ್ ಸೇರಿಸಿಕೊಳ್ಳುವುದರಿಂದ ಹಲವು ಪೌಷ್ಟಿಕ ಲಾಭಗಳನ್ನು ಪಡೆಯಬಹುದು.ರಂಬುಟಾನ್ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ನೀರಿನ ಅಂಶ ಹೊಂದಿರುವ ಪೌಷ್ಟಿಕ ಹಣ್ಣು.ವಿಟಮಿನ್ ಸಿ ಸಮೃದ್ಧವಾಗಿದ್ದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸಿ ಜೀವಕೋಶಗಳನ್ನು ರಕ್ಷಿಸುತ್ತದೆ.ಫೈಬರ್ ಅಂಶ ಜೀರ್ಣಕ್ರಿಯೆ ಸುಧಾರಿಸಿ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.ಆರೋಗ್ಯಕರ ಕರುಳಿನ ಸೂಕ್ಷ್ಮಜೀವಿಗಳ ಬೆಳವಣಿಗೆಗೆ ನೆರವಾಗುತ್ತದೆ.ಹೊಟ್ಟೆ ತುಂಬಿದ ಅನುಭವ ನೀಡುವ ಮೂಲಕ ತೂಕ ನಿಯಂತ್ರಣಕ್ಕೆ ಸಹಕಾರಿ.ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸಿ ಚರ್ಮದ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ.ಕ್ಯಾಲ್ಸಿಯಂ, ರಂಜಕ, ಮೆಗ್ನೀಸಿಯಮ್, ತಾಮ್ರ ಮತ್ತು ಪೊಟ್ಯಾಸಿಯಮ್ ಖನಿಜಗಳು ಮೂಳೆ, ಸ್ನಾಯು ಮತ್ತು ಹೃದಯದ ಆರೋಗ್ಯಕ್ಕೆ ನೆರವಾಗುತ್ತವೆ.ಹಣ್ಣಿನ ಬಿಳಿ ತಿರುಳು ಮಾತ್ರ ಸೇವನೆಗೆ ಯೋಗ್ಯ.ಸಿಪ್ಪೆ ಮತ್ತು ಬೀಜಗಳನ್ನು ಹಸಿಯಾಗಿ ತಿನ್ನಬಾರದು; ಅವು ವಿಷಕಾರಿ ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ.
-
ದೇಶ19 hours agoಬಿಹಾರ ರಾಜಕೀಯದಲ್ಲಿ ಭಾರಿ ಟ್ವಿಸ್ಟ್: ನಾಮಪತ್ರದ ಮರುದಿನವೇ BJP ಅಭ್ಯರ್ಥಿ ಬದಲಾವಣೆ, ಪ್ರಶಾಂತ್ ಕಿಶೋರ್ ವಿರುದ್ಧ ಹೊಸ ಮುಖ!
-
ದೇಶ19 hours ago20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ
-
ದೇಶ19 hours agoIran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ
-
ದೇಶ20 hours ago40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್ಗೆ; FTA ಮೂಲಕ ಹೊಸ ಅಧ್ಯಾಯ
-
ದೇಶ17 hours agoಕಾಶ್ಮೀರ ನಕ್ಷೆ ತಪ್ಪಾಗಿ ಪ್ರದರ್ಶನ; ಬಾಂಗ್ಲಾದೇಶದಲ್ಲೇ ಭಾರತದ ಅಧಿಕಾರಿ ಖಡಕ್ ಆಕ್ಷೇಪ
-
ಚುನಾವಣೆ18 hours agoನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
-
ದೇಶ18 hours ago14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್ಗೆ ಜನ ಫಿದಾ
-
ದೇಶ20 hours agoಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್ನಲ್ಲಿ ಖಲಿಸ್ತಾನಿ ಘೋಷಣೆ
