ದೇಶ
ಕರ್ಣಾಟದ ಬ್ಯಾಂಕ್ ನಲ್ಲಿ ರಾಜೀನಾಮೆ ಪರ್ವ, ಕುಸಿದ ಬ್ಯಾಂಕ್ ಷೇರು
ಬೆಂಗಳೂರು: ಖಾಸಗಿ ವಲಯದ ಕರ್ಣಾಟಕ ಬ್ಯಾಂಕ್ ನ ವ್ಯವಸ್ಧಾಪಕ ನಿರ್ದೇಶಕ ಮತ್ತು ಕಾರ್ಯನಿರ್ವಾಹಕ ನಿರ್ದೇಶಕರು ರಾಜೀನಾಮೆ ನೀಡಿದ್ದು, ಆಡಳಿತ ಮಂಡಳಿ ಸಹ ಭಾನುವಾರ ಅಂಗೀಕಾರ ಮಾಡಿದೆ, ಇನ್ನು ಖಾಲಿ ಇರುವ ಎರಡೂ ಹುದ್ದೆಗಳಿಗೆ ಸೂಕ್ತ ಅಭ್ಯರ್ಥಿಗಳನ್ನು ಹುಡುಕಲು ಬ್ಯಾಂಕ್ ಶೋಧನಾ ಸಮಿತಿಯನ್ನು ರಚಿಸಿದೆ ಎಂದು ತಿಳಿಸಿದೆ,
ರಾಜೀನಾಮೆ ಅಂಗೀಕರಿಸಿರುವ ಬ್ಯಾಂಕ್ ಶ್ರೀಕೃಷ್ಣನ್ ಹರಿ ಹರ ಶರ್ಮಾ ಅವರು ಬ್ಯಾಂಕಿನ ಎಂಡಿ ಮತ್ತು ಸಿಇಒ ಸ್ಧಾನಕ್ಕೆ ರಾಜೀನಾಮೆ ನೀಡಲು ವೈಯುಕ್ತಿಕ ಕಾರಣಗಳನ್ನು ನೀಡಿದ್ದಾರೆ ಹಾಗೂ ಮುಂಬೈಗೆ ಮರಳಿ ಹೋಗುವ ನಿರ್ಧಾರವನ್ನು ಸಹ ಉಲ್ಲೇಖಿಸಿದ್ದಾರೆ, ಹಾಗಾಗಿ ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದಿದೆ, ಹಾಗೆಯೇ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್ ರಾವ್ ಕೂಡ ಮಂಗಳೂರಿಗೆ ಸ್ಧಳಾಂತರಗೊಳ್ಳಲು ಸಾಧ್ಯವಾಗುವುದಿಲ್ಲ ಎನ್ನುವ ಕಾರಣ ಹಾಗೂ ಅನೇಕ ವೈಯಕ್ತಿಕ ಕಾರಣಗಳನ್ನು ನೀಡಿದ್ದು, ಅವರ ರಾಜೀನಾಮೆ ಅಂಗೀಕಾರವಾಗಿದ್ದು, ಜುಲೈ 31 2025 ರಿಂದ ಜಾರಿಗೆ ಬರಲಿದೆ ಎಂದು ಬ್ಯಾಂಕ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ,
ಕೆಲ ಮಾಹಿತಿಗಳ ಪ್ರಕಾರ ಕಳೆದ ತಿಂಗಳಷ್ಟೇ ಆಡಿಟಿಂಗ್ ವೇಳೆ ಒಂದೂವರೆ ಕೋಟಿ ರೂ ವಹಿವಾಟಿನಲ್ಲಿ ವ್ಯತ್ಯಾಸ ಆಗಿರುವುದು ಬೆಳಕಿಗೆ ಬಂದಿದೆ, ಅದರ ಜೊತೆಗೆ ಕನ್ಸಲ್ಟೆಂಟ್ ಸೇವೆ ಹಾಗೂ ಇತರ ಉದ್ದೇಶಗಳಿಗೆ ನಿರ್ದೇಶಕರು 1.53 ಕೋಟಿ ರೂ ಖರ್ಚು ಮಾಡಿದ್ದರು, ಇದಕ್ಕೆ ಅನುಮತಿ ಇರಲಿಲ್ಲ, ಹಾಗಾಗಿ ರಾಜೀನಾಮೆ ನೀಡಿರಬಹುದು ಎನ್ನಲಾಗುತ್ತಿದೆ,
ಇನ್ನು ವ್ಯವಸ್ಧಾಪಕ ನಿರ್ದೇಶಕ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು ರಾಜೀನಾಮೆ ನೀಡಿದ ನಂತರ ಸೋಮವಾರ ಕರ್ಣಾಟಕ ಬ್ಯಾಂಕ್ ಷೇರು ಬೆಲೆ ಶೇ.84 ರಷ್ಟು ಕುಸಿದಿದೆ, ಮೇ 27 ರಂದು ಆಕ್ಸಿನ್ ಸೆಕ್ಯುರಿಟೀಸ್ ಪ್ರಕಟಿಸಿದ ಸ್ಟಾಕ್ ರಿಸರ್ಚ್ ವರದಿಯ ಪ್ರಕಾರ ಬ್ರೋಕರೇಜ್ ಕರ್ಣಾಟಕ ಬ್ಯಾಂಕ್ ಷೇರುಗಳ ಮೇಲೆ ರೇಟಿಂಗ್ ನೀಡಿದ್ದು, 270 ರೂಗಳ ಗುರಿ ಬೆಲೆಯನ್ನು ನಿಗದಿಪಡಿಸಲಾಗಿತ್ತು ಅದರೆ ಈಗ 190 ಕ್ಕೆ ಇಳಿದಿದೆ,
ರಾಜ್ಯ
KRS ಡ್ಯಾಂಗೆ ಭಾರೀ ಶಾಕ್! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.
ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.
ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್‌ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್‌ಗೆ ಕುಸಿದಿದೆ.
ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.
110 ಅಡಿ ದಾಟಿದ KRS ನೀರಿನ ಮಟ್ಟ
ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.
ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.
ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.
ದೇಶ
KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ
ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.
KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್‌ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?
KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.
KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
73 ಸಾವಿರ ಉದ್ಯೋಗ ಭರವಸೆ ಏನಾಯಿತು?
ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್‌ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.
ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ
ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.
ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.
ದೇಶ
Nepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
ನೇಪಾಳ: ಭೀಕರ ಪ್ರವಾಹದಿಂದ ತತ್ತರಿಸಿರುವ Nepal ದಲ್ಲಿ ಮಾನವೀಯತೆಯನ್ನೇ ಪ್ರಶ್ನಿಸುವಂತಹ ಘಟನೆ ಬೆಳಕಿಗೆ ಬಂದಿದೆ. ಪ್ರವಾಹದಲ್ಲಿ ಕೊಚ್ಚಿಹೋಗಿ ಮೃತಪಟ್ಟಿದ್ದ ಮಹಿಳೆಯ ಮೃತದೇಹದಿಂದ ಚಿನ್ನದ ಕಿವಿಯೋಲೆಗಳನ್ನು ಕಳ್ಳತನ ಮಾಡಿದ ಆರೋಪದ ಮೇಲೆ ಇಬ್ಬರನ್ನು ನೇಪಾಳ ಪೊಲೀಸರು ಬಂಧಿಸಿದ್ದಾರೆ.
ನೇಪಾಳದ ನಾರಾಯಣಿ ನದಿಯಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋಗಿದ್ದ ಮಹಿಳೆಯ ಮೃತದೇಹವನ್ನು ದಡಕ್ಕೆ ಎಳೆದು ತರುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಆಕೆಯ ಕಿವಿಯೋಲೆಗಳನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯ 41 ಸೆಕೆಂಡ್‌ಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಪ್ರಕರಣ ಪೊಲೀಸರ ಗಮನಕ್ಕೆ ಬಂದಿದೆ.
ವೈರಲ್ ವಿಡಿಯೋದಲ್ಲಿ ಏನಿತ್ತು?
ವೈರಲ್ ಆಗಿರುವ ವಿಡಿಯೋದಲ್ಲಿ ಇಬ್ಬರು ಯುವಕರು ಮರದ ಹಲಗೆಗಳ ಸಹಾಯದಿಂದ ನೀರಿನಲ್ಲಿ ತೇಲಿ ಬಂದ ಮಹಿಳೆಯ ಮೃತದೇಹವನ್ನು ದಡದತ್ತ ಎಳೆದು ತರುತ್ತಿರುವುದು ಕಂಡುಬಂದಿದೆ. ಈ ವೇಳೆ ಮಹಿಳೆಯ ತಲೆಯ ಕೂದಲನ್ನು ಹಿಡಿದು ಮೃತದೇಹವನ್ನು ಎಳೆದಾಡಿದ್ದಾರೆ.
ನಂತರ ಮಹಿಳೆಯ ಎರಡೂ ಕಿವಿಗಳಲ್ಲಿದ್ದ ಚಿನ್ನದ ಓಲೆಗಳನ್ನು ತೆಗೆದು ಒಂದು ಬದಿಗೆ ಇಡುತ್ತಿರುವ ದೃಶ್ಯವೂ ವಿಡಿಯೋದಲ್ಲಿ ಕಂಡುಬಂದಿದೆ. ಸಮೀಪದಲ್ಲಿದ್ದ ಕೆಲವರು ಈ ಘಟನೆಯನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು.
ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ ನೇಪಾಳ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ಯಾರು?
ಚಿಟ್ವಾನ್ ಪೊಲೀಸರು ನಡೆಸಿದ ತನಿಖೆಯಲ್ಲಿ ಮೃತ ಮಹಿಳೆ ಪ್ರವಾಹದ ಸಂದರ್ಭದಲ್ಲಿ ನಾರಾಯಣಿ ನದಿಗೆ ಕೊಚ್ಚಿಹೋಗಿದ್ದರು ಎಂಬ ಮಾಹಿತಿ ತಿಳಿದುಬಂದಿದೆ. ವೈರಲ್ ವಿಡಿಯೋ ಆಧರಿಸಿ ಆರೋಪಿಗಳನ್ನು ಗುರುತಿಸಿದ ಪೊಲೀಸರು 25 ವರ್ಷದ ಮದನ್ ಗುರುಂಗ್ ಮತ್ತು 38 ವರ್ಷದ ಉಮೇಶ್ ಚೌಧರಿ ಅವರನ್ನು ಬಂಧಿಸಿದ್ದಾರೆ.
ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಗುರುವಾರ ಭಾರತ್ಪುರ ಮಹಾನಗರ-1ರ ಪೊಖರಾ ಬಸ್ ಪಾರ್ಕ್ ಸಮೀಪ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರವಾಹದ ನಡುವೆ ಮುಂದುವರಿದ ರಕ್ಷಣಾ ಕಾರ್ಯ
ನೇಪಾಳದಲ್ಲಿ ಭೀಕರ ಪ್ರವಾಹದಿಂದ ಭಾರೀ ಪ್ರಮಾಣದ ಹಾನಿ ಸಂಭವಿಸಿದ್ದು, ನೂರಾರು ಮಂದಿ ಮೃತಪಟ್ಟಿದ್ದಾರೆ. ಸಾವಿರಾರು ಜನರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ.
ಇಂತಹ ಸಂಕಷ್ಟದ ಸಂದರ್ಭದಲ್ಲಿ ಸಂತ್ರಸ್ತರ ಮೇಲೆ ದರೋಡೆ ಅಥವಾ ಯಾವುದೇ ರೀತಿಯ ಅಮಾನವೀಯ ಕೃತ್ಯ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನೇಪಾಳ ಪೊಲೀಸರು ಎಚ್ಚರಿಸಿದ್ದಾರೆ.
-
ಬೆಂಗಳೂರು24 ಗಂಟೆಗಳು agoBengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್ಗೆ ಲಕ್ಷಕ್ಕೂ ಹೆಚ್ಚು!
-
ಬೆಂಗಳೂರು21 ಗಂಟೆಗಳು agoLiver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ
-
ಬೆಂಗಳೂರು3 ಗಂಟೆಗಳು agoMake My Propertyz ಟೈಟಲ್ ಸ್ಪಾನ್ಸರ್; ಮೋಹನ್, ಆಂಜನಪ್ಪ, ಹರೀಶ್, ಸಂತೋಷ್, ಗೌರೀಶ್, Hosa Suddi, ಶಿವಕುಮಾರ್ರಿಂದ ಕ್ರೀಡೆಗೆ ಬೆಂಬಲ!
-
ದೇಶ1 ಗಂಟೆ agoNepal Flood Horror: ಮಹಿಳೆಯ ಮೃತದೇಹದಿಂದ ಆಭರಣ ಕಳವು; ವೈರಲ್ ವಿಡಿಯೋ ಆಧರಿಸಿ ಇಬ್ಬರ ಬಂಧನ
-
ದೇಶ4 ಗಂಟೆಗಳು agoPM Narendra Modi Foreign Visit: ಮೋದಿ 4 ದಿನಗಳ ವಿದೇಶ ಪ್ರವಾಸ, ಎಸ್ಸಿಒ ಶೃಂಗಸಭೆಯಲ್ಲಿ ಭಾಗಿ
-
ದೇಶ4 ಗಂಟೆಗಳು agoNepal ಭೀಕರ ಪ್ರವಾಹ: ಸಾವಿನ ಸಂಖ್ಯೆ 469ಕ್ಕೆ ಏರಿಕೆ, ಸಾವಿರಕ್ಕೂ ಹೆಚ್ಚು ಮಂದಿ ನಾಪತ್ತೆ!
-
ಸಿನಿಮಾ3 ಗಂಟೆಗಳು ago‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?
-
ದೇಶ4 ಗಂಟೆಗಳು agoMantralaya ದಲ್ಲಿ ಭಕ್ತಿಯ ವೈಭವ: ರಾಯರ ಆರಾಧನೆಗೆ ಚಾಲನೆ, ಆಗಸ್ಟ್ 31ಕ್ಕೆ ಮಹಾರಥೋತ್ಸವ
