Connect with us

ದೇಶ

ಕಳ್ಳತನಕ್ಕೆಂದು ಬಂದ ದುಷ್ಕರ್ಮಿಯಿಂದ ಬಾಲಿವುಡ್ ನಟ ಸೈಫ್ ಅಲಿ ಖಾನ್​ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು – ACTOR SAIF ALI KHAN

Published

on

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಕಳ್ಳನೋರ್ವ ಚಾಕುವಿನಿಂದ ದಾಳಿ ಮಾಡಿರುವ ಘಟನೆ ನಡೆದಿದೆ. ಹಲ್ಲೆಯಿಂದ ನಟ ಗಾಯಗೊಂಡಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂಬೈ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಮುಂಬೈನ ಬಾಂದ್ರಾದಲ್ಲಿರುವ ನಟ ಸೈಫ್ ಅಲಿ ಖಾನ್ ಮನೆಗೆ ದುಷ್ಕರ್ಮಿಯೊಬ್ಬ ಕಳ್ಳತನಕ್ಕೆಂದು ಬಂದಿದ್ದ. ಈ ವೇಳೆ ನಟನಿಗೆ ಆತ ಚಾಕುವಿನಿಂದು ಇರಿದು ಪರಾರಿಯಾಗಿದ್ದಾನೆ. ಘಟನೆ ವೇಳೆ ನಟನ ಕುಟುಂಬಸ್ಥರು ಕೂಡ ಮನೆಯಲ್ಲಿದ್ದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಚಾಕು ಇರಿತದಿಂದ ನಟ ಸೈಫ್ ಅಲಿ ಖಾನ್ ಗಾಯಗೊಂಡಿದ್ದು, ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಬೆನ್ನಲ್ಲೇ ನಟನ ಮನೆಗೆ ಬಾಂದ್ರಾ ಪೊಲೀಸರು ಆಗಮಿಸಿ, ತನಿಖೆ ಕೈಗೊಂಡಿದ್ದಾರೆ.

ದೇಶ

Kadapa ದಲ್ಲಿ ಕೋವಿಡ್ ಆತಂಕ; ಆರೋಗ್ಯ ಇಲಾಖೆ ಹೈ ಅಲರ್ಟ್ ಘೋಷಣೆ

Published

on

ಆಂಧ್ರಪ್ರದೇಶ: ಇಡೀ ಜಗತ್ತನ್ನೇ ತಲ್ಲಣಗೊಳಿಸಿದ್ದ ಕೋವಿಡ್-19 (Covid-19) ಸೋಂಕಿನ ಆತಂಕ ಮತ್ತೊಮ್ಮೆ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಳ್ಳತೊಡಗಿದೆ. ವೈಎಸ್‌ಆರ್ ಕಡಪ ಜಿಲ್ಲೆಯಲ್ಲೇ ಇತ್ತೀಚೆಗೆ ಎಂಟು ಮಂದಿಯಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದು ಆರೋಗ್ಯ ಇಲಾಖೆಯನ್ನು ಎಚ್ಚರಕ್ಕೆ ತಂದಿದೆ.

ಮೃತರಲ್ಲಿ ರಾಜಂಪೇಟೆಯ 52 ವರ್ಷದ ವ್ಯಕ್ತಿಯೊಬ್ಬರು ವೇಲ್ಲೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವನ್ನಪ್ಪಿದ್ದಾರೆ. ಮತ್ತೊಬ್ಬ 43 ವರ್ಷದ ವ್ಯಕ್ತಿ ಕಡಪ ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊನೆಯುಸಿರೆಳೆದಿದ್ದಾರೆ. ಇದೇ ವೇಳೆ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರಿಗೂ ಸೋಂಕು ದೃಢಪಟ್ಟಿದ್ದು, ಅವರು ಸದ್ಯ ಗೃಹಬಂಧನದಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೊಸ ಪ್ರಕರಣಗಳು ಬೆಳಕಿಗೆ ಬಂದ ತಕ್ಷಣ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ತೀವ್ರಗೊಳಿಸಿದೆ. ಸೋಂಕು ಪೀಡಿತ ಪ್ರದೇಶಗಳಿಂದ ಗಂಟಲು ದ್ರವದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗುತ್ತಿದೆ. ಪ್ರಸ್ತುತ ಹರಡುತ್ತಿರುವ ವೈರಸ್ ಯಾವ ರೂಪಾಂತರಕ್ಕೆ ಸೇರಿದೆ ಎಂಬುದನ್ನು ತಿಳಿಯಲು ಮಾದರಿಗಳನ್ನು ಪುಣೆಯ ಪ್ರಯೋಗಾಲಯಕ್ಕೆ ಜಿನೋಮ್ ಸೀಕ್ವೆನ್ಸಿಂಗ್‌ಗಾಗಿ ರವಾನಿಸಲಾಗಿದೆ.

ರಾಜ್ಯದ ಜಿಲ್ಲಾ ಉಸ್ತುವಾರಿ ಸಚಿವೆ ಸವಿತಾ ಅವರು ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೆ ತರಲು ಸೂಚಿಸಿದ್ದಾರೆ. ಸಾರ್ವಜನಿಕರು ಹೆಚ್ಚು ಜನಸಂದಣಿ ಇರುವ ಪ್ರದೇಶಗಳು ಹಾಗೂ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ವೈದ್ಯಕೀಯ ಇಲಾಖೆ ಸಲಹೆ ನೀಡಿದೆ.

ಜ್ವರ, ಕೆಮ್ಮು ಅಥವಾ ಉಸಿರಾಟದ ತೊಂದರೆ ಕಾಣಿಸಿಕೊಂಡರೆ ತಕ್ಷಣ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಐಸೋಲೇಷನ್ ವಾರ್ಡ್‌ಗಳು ಮತ್ತು ಅಗತ್ಯ ಹಾಸಿಗೆಗಳನ್ನು ಸಜ್ಜುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಾಗರಿಕರು ಅನಗತ್ಯ ಆತಂಕಕ್ಕೆ ಒಳಗಾಗದೆ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Continue Reading

ದೇಶ

Thailand ಪಬ್‌ನಲ್ಲಿ ಭೀಕರ ಅಗ್ನಿ ಅವಘಡ; 27 ಸಾವು, 60ಕ್ಕೂ ಹೆಚ್ಚು ಮಂದಿಗೆ ಗಾಯ

Published

on

ಬ್ಯಾಂಕಾಕ್: Thailand ರಾಜಧಾನಿ ಬ್ಯಾಂಕಾಕ್‌ನ ಜನಪ್ರಿಯ ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕನಿಷ್ಠ 27 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸಂಭವಿಸಿದ ಈ ದುರಂತದಿಂದ ಮನರಂಜನಾ ಕೇಂದ್ರದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನೆ ನಡೆದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಸುಮಾರು ಅರ್ಧ ಗಂಟೆಯ ಕಾರ್ಯಾಚರಣೆಯ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿತು. ಆದರೆ ಅಷ್ಟರಲ್ಲಾಗಲೇ ಹಲವು ಮಂದಿ ಹೊಗೆ ಮತ್ತು ಜ್ವಾಲೆಯಲ್ಲಿ ಸಿಲುಕಿ ಸಾವನ್ನಪ್ಪಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೊಗಳಲ್ಲಿ ಬೆಂಕಿಯಿಂದ ತಪ್ಪಿಸಿಕೊಳ್ಳಲು ಜನರು ಪಬ್‌ನ ಮುಖ್ಯ ದ್ವಾರದ ಮೂಲಕ ಓಡಿ ಬರುತ್ತಿರುವ ದೃಶ್ಯಗಳು ಕಂಡುಬಂದಿವೆ.

ಸ್ಥಳೀಯ ಅಧಿಕಾರಿಗಳ ಪ್ರಕಾರ, ಮೃತರಲ್ಲಿ 9 ಪುರುಷರು ಮತ್ತು 18 ಮಹಿಳೆಯರು ಸೇರಿದ್ದಾರೆ. ಇನ್ನೂ ಹಲವರ ಸ್ಥಿತಿ ಗಂಭೀರವಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಪ್ರಾಥಮಿಕ ಮಾಹಿತಿಯಂತೆ, ವಿದ್ಯುತ್ ಸಂಪರ್ಕದ ಕಟ್-ಔಟ್ ಸ್ವಿಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಘಟನೆ ವೇಳೆ ಕಾರ್ಯಕ್ರಮ ನೀಡುತ್ತಿದ್ದ ಸಂಗೀತಗಾರರೊಬ್ಬರು ತಿಳಿಸಿದ್ದಾರೆ. ಆದಾಗ್ಯೂ, ಅಗ್ನಿ ಅವಘಡಕ್ಕೆ ನಿಖರ ಕಾರಣವೇನು ಎಂಬುದನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ.

ಬ್ಯಾಂಕಾಕ್‌ನ ಚತುಚಕ್ ಜಿಲ್ಲೆಯಲ್ಲಿ ಇರುವ ಈ ಪಬ್ ಸ್ಥಳೀಯವಾಗಿ ಜನಪ್ರಿಯ ಮನರಂಜನಾ ಕೇಂದ್ರವಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಬ್ಯಾಂಕಾಕ್ ಗವರ್ನರ್ ಚಾಟ್‌ಚಾರ್ಟ್ ಸಿಟ್ಟಿಪುಂಟ್, ಕಟ್ಟಡದ ಒಳಾಂಗಣ ಅಲಂಕಾರಗಳು ಬೆಂಕಿ ವೇಗವಾಗಿ ಹರಡಲು ಕಾರಣವಾಗಿರಬಹುದು ಎಂದು ಪ್ರಾಥಮಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಸಮಗ್ರ ತನಿಖೆ ಮುಂದುವರಿದಿದ್ದು, ಸುರಕ್ಷತಾ ನಿಯಮ ಉಲ್ಲಂಘನೆಯ ಆಯಾಮದಲ್ಲಿಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

Continue Reading

ದೇಶ

ಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ

Published

on

ಮೈಸೂರು: ಗಾನಕೋಗಿಲೆ ಎಸ್. ಜಾನಕಿ ಅವರಿಗೆ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ಭಾನುವಾರ ಭಾವುಕ ವಿದಾಯ ನೀಡಲಾಯಿತು. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಲಾಗಿದ್ದು, ಮೈಸೂರು ಜಿಲ್ಲಾಡಳಿತದಿಂದ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಯಿತು.

ಎಸ್. ಜಾನಕಿ ಅವರ ಪತಿ ರಾಮಪ್ರಸಾದ್ ಅವರು 1997ರಲ್ಲೇ ನಿಧನರಾಗಿದ್ದರು. ಅವರ ಏಕೈಕ ಪುತ್ರ ಮುರಳಿ ಕೃಷ್ಣ ಕೂಡ 2026ರ ಜನವರಿಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು. ಕುಟುಂಬದಲ್ಲಿ ಪುರುಷ ವಾರಸುದಾರರಿಲ್ಲದ ಕಾರಣ, ಜಾನಕಿ ಅವರ ಮೊಮ್ಮಗಳು ಅಪ್ಸರಾ ಕುಟುಂಬದ ಪರವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ ಅಜ್ಜಿಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಭಾವುಕ ಕ್ಷಣ ಕಂಡು ಸ್ಥಳದಲ್ಲಿದ್ದ ಅಭಿಮಾನಿಗಳು ಕಣ್ಣೀರಿಟ್ಟರು.

1956ರಲ್ಲಿ ರಾಮಪ್ರಸಾದ್ ಅವರನ್ನು ವಿವಾಹವಾಗಿದ್ದ ಎಸ್. ಜಾನಕಿ, ತಮ್ಮ ಪತಿಯನ್ನು ಪ್ರೀತಿಯಿಂದ ‘ರಾಮು’ ಎಂದು ಕರೆಯುತ್ತಿದ್ದರು. ಜಾನಕಿ ಅವರ ಸಂಗೀತ ಪಯಣದಲ್ಲಿ ರಾಮಪ್ರಸಾದ್ ಸದಾ ಬೆಂಬಲವಾಗಿ ನಿಂತಿದ್ದು, ಅವರ ಯಶಸ್ಸಿನ ಹಿಂದಿನ ಪ್ರಮುಖ ಶಕ್ತಿಯಾಗಿದ್ದರು ಎಂದು ಕುಟುಂಬದವರು ನೆನಪಿಸಿಕೊಂಡರು.

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ಸಾವಿರಾರು ಅಮರ ಗೀತೆಗಳಿಗೆ ಧ್ವನಿಯಾಗಿದ್ದ ಎಸ್. ಜಾನಕಿ, 2017ರ ಅಕ್ಟೋಬರ್ 28ರಂದು ಮೈಸೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮದಲ್ಲಿ ಸಾರ್ವಜನಿಕ ಗಾಯನಕ್ಕೆ ವಿದಾಯ ಹೇಳಿದ್ದರು. ಮಲಯಾಳಂ ಚಿತ್ರದ ‘ಅಮ್ಮ ಪೂವಿನುಂ’ ಜೋಗುಳ ಗೀತೆ ಅವರ ಗಾಯನ ಬದುಕಿನ ಕೊನೆಯ ದಾಖಲಾದ ಹಾಡಾಗಿ ಉಳಿದಿದೆ.

ಗಾನಕೋಗಿಲೆ ಎಸ್. ಜಾನಕಿ ಭೌತಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಮಧುರ ಕಂಠ, ಅಮರ ಗೀತೆಗಳು ಮತ್ತು ಅಪಾರ ಸಂಗೀತ ಸೇವೆ ಭಾರತೀಯ ಸಂಗೀತ ಲೋಕದಲ್ಲಿ ಸದಾಕಾಲ ಜೀವಂತವಾಗಿರಲಿವೆ.

Continue Reading

Trending