Connect with us

ಬೆಂಗಳೂರು

ಕಾಂಗ್ರೆಸ್‌ಗೆಹೋದವರಿಗೆಮರ್ಯಾದೆಸಿಗೋಲ್ಲ ಮಾಜಿಸಚಿವಸಿ.ಟಿ.ರವಿ

ಕಾಂಗ್ರೆಸ್ಗೆ ಹೋದವರಿಗೆ ಮರ್ಯಾದೆ ಸಿಗೋಲ್ಲ ಮಾಜಿ ಸಚಿವ ಸಿ.ಟಿ.ರವಿ

Published

on

ಕಾಂಗ್ರೆಸ್ಗೆ ಹೋದವರಿಗೆ ಮರ್ಯಾದೆ ಸಿಗೋಲ್ಲ ಮಾಜಿ ಸಚಿವ ಸಿ.ಟಿ.ರವಿ

ಚಿಕ್ಕಮಗಳೂರುಜನರ ಜೊತೆ ಇರುವುದು ನಮಗೆ ಸಂತೋಷ ತರುವ ಸಂಗತಿ. ಆದರೆ, ಜನಸಾಮಾನ್ಯರ ಜೊತೆ ಇರುವುದು ಕಾಂಗ್ರೆಸಿಗರಿಗೆ ಕೀಳರಮೆ, ಅಪರಾಧ ಅನಿಸುತ್ತೆ. ಒಡ್ಡೋಲಗದ ಮೂಲಕವೇ ತಮ್ಮನ್ನು ಗುರುತಿಸಿಕೊಳ್ಳಲು ಕಾಂಗ್ರೆಸ್ಸಿಗರು ಪ್ರಯತ್ನಿಸುತ್ತಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ವ್ಯಂಗ್ಯವಾಡಿದರು.   ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಬಿಜೆಪಿ ಶಾಸಕರ ಬಗ್ಗೆ ಟ್ವಿಟ್‌ ಮೂಲಕ ಕಾಂಗ್ರೆಸ್‌ ವ್ಯಂಗ್ಯವಾಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚಂದ್ರಯಾನ 140 ಕೋಟಿ ಜನರಿಗೆ ಸೇರಿದ್ದು ಎಂದು ಸ್ವತಃ ಪ್ರಧಾನಿಯೇ ಹೇಳಿದ್ದಾರೆ. ಈ 140 ಕೋಟಿಯಲ್ಲಿ ಕಾಂಗ್ರೆಸ್‌ನವರೂ ಇದ್ದಾರೆ ಎಂದು ಭಾವಿಸಿದ್ದೇನೆ. ಇಲ್ಲ ಅಂದುಕೊಂಡರೆ ಅದು ಅವರ ದುರ್ದೈವ ಎಂದರು. ಚಂದ್ರಯಾನ-3 ಬಗ್ಗೆ ದೇಶವೇ ಸಂಭ್ರಮಿಸಿದೆ. ಇದು ಒಂದು ಪಕ್ಷಕ್ಕೆ ಸೀಮಿತವಾದುದಲ್ಲ, ಮೋದಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಬಂದಿದ್ದರು. ನಮ್ಮವರು ಜನರ ಜೊತೆ ಇದ್ದು ಪ್ರಧಾನಿಯನ್ನು ಸ್ವಾಗತಿಸಿದ್ದಾರೆ ಎಂದಷ್ಟೆಹೇಳಿದರು.   ಪಕ್ಷ ಸೇರುವವರನ್ನು ಮರ್ಯಾದೆ ಕೊಟ್ಟು ಕರೆದುಕೊಳ್ಳುತ್ತಿಲ್ಲ. ಬಂದವರು ಲಾಸ್ಟ್‌ ಬೆಂಚ್‌ ಅಂತ ಅವರೇ ಹೇಳಿದ್ದಾರೆ. ಹಾಗಾಗಿ ಮರ್ಯಾದೆ ಇರೋರು ಯಾರೂ ಕಾಂಗ್ರೆಸ್‌ ಸೇರುವುದಿಲ್ಲ. ಹೋಗುವವರಿಗೆ ನಾನೇನೂ ಹೇಳಲ್ಲ. ಯಾವ ಭಯಕ್ಕೆ ಹೋಗುತ್ತಿದ್ದಾರೋ ಗೊತ್ತಿಲ್ಲ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದರು. ನಮ್ಮಪ್ಪನೂ ಬಿಜೆಪಿ ಅಲ್ಲ. ನಮ್ಮಪ್ಪ ದೇವೇಗೌಡರ ಪಾರ್ಟಿ ಸೇರಿಕೋ ಎಂದಿದ್ದರು. ನಾವು ಯಡಿಯೂರಪ್ಪನ ಹೋರಾಟ ನೋಡಿ ಬಂದವರು.   ಅವರ ಜೊತೆ ಪಕ್ಷ ಕಟ್ಟಿದ್ದೇವೆ. ಪಕ್ಷ ಉಳಿಸಿಕೊಂಡು ಹೋಗುವ ಕೆಲಸ ಮಾಡುತ್ತೇವೆ. ಈಗ ಹೋಗುತ್ತೇವೆ ಅಂತ ಹೋದರೆ ಅವರಿಗೂ ಮರ್ಯಾದೆ ಸಿಗುವುದಿಲ್ಲ ಎಂದರು. ಪಕ್ಷ ಬಿಡುತ್ತಿರುವವರ ಬಗ್ಗೆ ವದಂತಿಗಳು ಹರಡುತ್ತಿವೆ. ಆ ವಿಚಾರವಾಗಿ ನಾನು ಮುನಿರತ್ನ, ಕೆ.ಗೋಪಾಲಯ್ಯ, ಎಸ್‌.ಟಿ.ಸೋಮಶೇಖರ್‌ ಜೊತೆ ಮಾತನಾಡಿದ್ದೇನೆ. ಅವರು ಸುಳ್ಳುಸುದ್ದಿ ಎಂದಿದ್ದಾರೆ. ವದಂತಿ ಬಗ್ಗೆ ಅವರು ಸ್ಪಷ್ಟನೆ ನೀಡಿದ್ದಾರೆ. ಹಾಗಾಗಿ ಯಾರೂ ಕಾಂಗ್ರೆಸ್‌ ಸೇರುತ್ತಿಲ್ಲ ಎಂದರು.

ಬೆಂಗಳೂರು

Badminton ಕೋರ್ಟ್‌ನಲ್ಲಿ ಮಹಾ ಕದನ; Make My Propertyz, MRCL, Hosa Suddi, ಗೌರೀಶ್, ಆಂಜನಪ್ಪ, ಹರೀಶ್, ಶಿವಕುಮಾರ್ ಕೈಜೋಡಿಕೆ!

Published

on

By

ಬೆಂಗಳೂರು: ಕ್ರೀಡಾಭಿಮಾನಿಗಳು ಹಾಗೂ ಬ್ಯಾಡ್ಮಿಂಟನ್ ಪ್ರೇಮಿಗಳಿಗಾಗಿ ಬೆಂಗಳೂರಿನಲ್ಲಿ ಆಗಸ್ಟ್ 29ರಂದು ‘MMP ಶಟಲ್ ಟೂರ್ನಮೆಂಟ್ 2026’ ನಡೆಯಲಿದೆ. ಕ್ರೀಡೆಯನ್ನು ಉತ್ತೇಜಿಸುವುದರ ಜೊತೆಗೆ ಯುವ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಈ ಪಂದ್ಯಾವಳಿ ಆಯೋಜಿಸಲಾಗಿದೆ.

ಮೇಕ್ ಮೈ ಪ್ರಾಪರ್ಟೀಸ್ (Make My Propertyz) ಶೀರ್ಷಿಕೆ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿಯಲ್ಲಿ 16 ತಂಡಗಳ ಒಟ್ಟು 32 ಆಟಗಾರರು ಭಾಗವಹಿಸಲಿದ್ದಾರೆ. ಗೋಲ್ಡನ್ ಫೆದರ್ಸ್‌ನಲ್ಲಿ ನಾಲ್ಕು ಅಂಕಣಗಳಲ್ಲಿ 21 ಅಂಕಗಳ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ.

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ Make My Propertyz, ಕ್ರೀಡೆ ಮತ್ತು ಯುವಜನರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಟೂರ್ನಮೆಂಟ್‌ಗೆ ಬೆಂಬಲ ನೀಡಿದೆ. ಪ್ಲಾಟಿನಂ ಪ್ರಾಯೋಜಕರಾಗಿ MRCL Infrastructure Pvt Ltd ಕೈಜೋಡಿಸಿದೆ. ಮೋಹನ್ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಮಾಜಿ ಕಾರ್ಪೊರೇಟರ್ ಆರ್. ಆಂಜನಪ್ಪ ಅವರು ಗೋಲ್ಡ್ ಸ್ಪಾನ್ಸರ್ ಆಗಿ ಪಂದ್ಯಾವಳಿಗೆ ಬೆಂಬಲ ನೀಡಿದ್ದಾರೆ. ಸ್ಥಳೀಯವಾಗಿ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಅವರು ಸಾರ್ವಜನಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಎಂ. ಹರೀಶ್ ಕುಮಾರ್ ಅವರು ಕೂಡ ಕ್ರೀಡೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. ಮುಂಬರುವ GBA ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ಹೊಂದಿರುವ ಹರೀಶ್, ಬಡವರು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಉದ್ದೇಶದೊಂದಿಗೆ ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗುವ ಆಶಯ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಗೋಲ್ಡನ್ ಫೆದರ್ಸ್ ಮೂಲಕ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಪ್ರೋತ್ಸಾಹ

ಪಂದ್ಯಾವಳಿ ನಡೆಯಲಿರುವ ಗೋಲ್ಡನ್ ಫೆದರ್ಸ್ ಸಂಸ್ಥೆಯ ಸಂಸ್ಥಾಪಕ ಗೌರೀಶ್ ಮತ್ತು ಲೋಕೇಶ್ ಅವರು ತಮ್ಮ ಕ್ಲಬ್ ಮೂಲಕ ಬ್ಯಾಡ್ಮಿಂಟನ್ ಆಟಗಾರರನ್ನು ಬೆಳೆಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಯುವ ಆಟಗಾರರಿಗೆ ತರಬೇತಿ, ಅಭ್ಯಾಸ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಮೂಲಕ ಸ್ಥಳೀಯ ಬ್ಯಾಡ್ಮಿಂಟನ್ ಪ್ರತಿಭೆಗಳನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ.

ವಿಶೇಷವಾಗಿ ನಾಗದೇವನಹಳ್ಳಿಯಲ್ಲಿ ಗೌರೀಶ್ ಅವರು ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರಿಯರಾಗಿದ್ದು, ಸ್ಥಳೀಯವಾಗಿ ವಿವಿಧ ಸಮಾಜಮುಖಿ ಚಟುವಟಿಕೆಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.

Hosa Suddi ಮತ್ತು ಶಿವಕುಮಾರ್‌ರಿಂದ ಬೆಂಬಲ

ಕನ್ನಡ ಸುದ್ದಿಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ Hosasuddi.in (Hosa Suddi) ಕೂಡ ಈ ಪಂದ್ಯಾವಳಿಗೆ ಸಿಲ್ವರ್ ಪ್ರಾಯೋಜಕರಾಗಿ ಬೆಂಬಲ ನೀಡುತ್ತಿದೆ. ಸ್ಥಳೀಯ ಕ್ರೀಡಾ ಪ್ರತಿಭೆಗಳು, ಯುವಜನರ ಚಟುವಟಿಕೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ Hosasuddi.in ನಿರಂತರವಾಗಿ ಬೆಂಬಲ ನೀಡುತ್ತಿದೆ.

ಇದೇ ವೇಳೆ ಶಿವಕುಮಾರ್ ಅವರು ಕೂಡ ಸಿಲ್ವರ್ ಸ್ಪಾನ್ಸರ್ ಆಗಿ ಪಂದ್ಯಾವಳಿಗೆ ಕೈಜೋಡಿಸಿದ್ದಾರೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಶಿವಕುಮಾರ್ ಅವರು ಕ್ರೀಡೆ ಹಾಗೂ ಯುವಜನರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ.

ಒಟ್ಟಿನಲ್ಲಿ, ‘One Team, One Dream, One Champion’ ಹಾಗೂ ‘Smash Limits, Create Legends’ ಎಂಬ ಘೋಷವಾಕ್ಯಗಳೊಂದಿಗೆ ನಡೆಯಲಿರುವ MMP ಶಟಲ್ ಟೂರ್ನಮೆಂಟ್ 2026 ಕೇವಲ ಬ್ಯಾಡ್ಮಿಂಟನ್ ಪಂದ್ಯಾವಳಿಯಾಗಿರದೆ, ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವುದು, ಯುವಕರನ್ನು ಉತ್ತೇಜಿಸುವುದು ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲ ನೀಡುವ ವೇದಿಕೆಯಾಗಲಿದೆ.

Continue Reading

ಸಿನಿಮಾ

‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?

Published

on

By

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಕಿಯಾರಾ ಅಡ್ವಾಣಿ ಹಾಗೂ ರುಕ್ಮಿಣಿ ವಸಂತ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಇದೀಗ ಬಾಕ್ಸ್ ಆಫೀಸ್ ಮಾತ್ರವಲ್ಲದೆ ಕಾನೂನು ವಿಚಾರದಿಂದಲೂ ಸುದ್ದಿಯಾಗಿದೆ. ಚಿತ್ರದ ಕುರಿತು ಸುಳ್ಳು, ಮಾನಹಾನಿಕರ ಅಥವಾ ನಿಂದನಾತ್ಮಕ ವಿಷಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳದಂತೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿರುವುದಾಗಿ ವರದಿಯಾಗಿದೆ.

ಯೂಟ್ಯೂಬರ್ ಸೂರಜ್ ಕುಮಾರ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತಮಗೆ ಬಂದಿರುವ ಕಾನೂನು ನೋಟಿಸ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಐಪ್ಲೆಕ್ಸ್ ಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಈ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಪರವಾಗಿ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.

ನೋಟಿಸ್‌ನಲ್ಲಿ, ‘ಟಾಕ್ಸಿಕ್’ ಸಿನಿಮಾಗೆ ಸಂಬಂಧಿಸಿದಂತೆ ಡಿಜಿಟಲ್ ಮತ್ತು ಆನ್‌ಲೈನ್ ಮಾಧ್ಯಮಗಳಲ್ಲಿ ಕಂಟೆಂಟ್ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪಿಟಿಐ ವರದಿ ಪ್ರಕಾರ, ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ 22ರಂದು ವಿವಿಧ ಪ್ರತಿವಾದಿಗಳ ವಿರುದ್ಧ ಎಕ್ಸ್-ಪಾರ್ಟಿ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚಿತ್ರದ ಕುರಿತು ಸುಳ್ಳು ಅಥವಾ ಮಾನಹಾನಿಕರ ವಿಷಯಗಳ ಪ್ರಕಟಣೆ ಮತ್ತು ಪ್ರಸಾರವನ್ನು ತಡೆಯುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ವರದಿಯಾಗಿದೆ. ಚಿತ್ರದ ಕುರಿತು ವಿಮರ್ಶೆಗಳು ಮತ್ತು ಸಾಮಾಜಿಕ ಮಾಧ್ಯಮ ಚರ್ಚೆಗಳು ಮುಂದುವರಿದಿರುವ ಬೆನ್ನಲ್ಲೇ ಈ ಕಾನೂನು ಬೆಳವಣಿಗೆ ಗಮನ ಸೆಳೆದಿದೆ.

Continue Reading

ರಾಜ್ಯ

B.Nagendra ರಾಜೀನಾಮೆ ಫಿಕ್ಸ್ ಆಯ್ತಾ? ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್‌ನ ‘ಡ್ಯಾಮೇಜ್ ಕಂಟ್ರೋಲ್’

Published

on

By

ಬೆಂಗಳೂರು: ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಇದೀಗ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ B.Nagendra ಅವರ ರಾಜೀನಾಮೆಗೆ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇತ್ತೀಚಿನ ಬೆಳವಣಿಗೆಯಲ್ಲಿ ನಾಗೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧತೆ ವ್ಯಕ್ತಪಡಿಸಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ. ಆದರೆ, ನಾಗೇಂದ್ರ ಅವರ ಕಚೇರಿ ಈ ವರದಿಗಳನ್ನು ತಳ್ಳಿಹಾಕಿದ್ದು, ರಾಜೀನಾಮೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಈ ನಡುವೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ತನಿಖೆ ಮುಂದುವರಿಸಲು ಸಿಬಿಐ ಕರ್ನಾಟಕ ರಾಜ್ಯಪಾಲರಿಂದ ಅನುಮತಿ ಕೋರಿದೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ಸುಮಾರು 89 ಕೋಟಿ ರೂ. ಅಕ್ರಮಗಳ ಆರೋಪ ಕೇಳಿಬಂದಿದ್ದು, ನಾಗೇಂದ್ರ ವಿರುದ್ಧ ಪ್ರತಿಪಕ್ಷಗಳು ರಾಜಕೀಯವಾಗಿ ಒತ್ತಡ ಹೆಚ್ಚಿಸಿವೆ.

ಆಗಸ್ಟ್ 24ರಂದು ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈ ವಿಚಾರವಾಗಿ ನಡೆದ ಪ್ರತಿಭಟನೆ ಮತ್ತು ವಿಧಾನಮಂಡಲದ ಗದ್ದಲದಿಂದ ರಾಜ್ಯ ಸರ್ಕಾರದ ಮೇಲಿನ ರಾಜಕೀಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ.

ನಾಗೇಂದ್ರ ಅವರು ಈ ಹಿಂದೆ ಕೂಡ ವಾಲ್ಮೀಕಿ ನಿಗಮದ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ 2026ರ ಆಗಸ್ಟ್‌ನಲ್ಲಿ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮತ್ತು ಪ್ರತಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅವರ ಸಚಿವ ಸ್ಥಾನ ಮತ್ತೊಮ್ಮೆ ರಾಜಕೀಯ ಚರ್ಚೆಯ ಕೇಂದ್ರವಾಗಿದೆ.

ಹೀಗಾಗಿ ನಾಗೇಂದ್ರ ಅವರ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಯಾವಾಗ ಹೊರಬೀಳಲಿದೆ ಎಂಬುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ನ ಮುಂದಿನ ನಿರ್ಧಾರ ಮತ್ತು ನಾಗೇಂದ್ರ ಅವರ ಅಧಿಕೃತ ನಿಲುವಿನ ಬಳಿಕವಷ್ಟೇ ಈ ಬೆಳವಣಿಗೆಗೆ ಸ್ಪಷ್ಟತೆ ಸಿಗಲಿದೆ.

Continue Reading

Trending