ದೇಶ
ಗಣೇಶ ಚತುರ್ಥಿ: ಬೆಂಗಳೂರು ಬೆಳಗಾವಿ ನಡುವೆ 2 ಟ್ರಿಪ್ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ
ಗಣೇಶ ಚತುರ್ಥಿ: ಬೆಂಗಳೂರು ಬೆಳಗಾವಿ ನಡುವೆ 2 ಟ್ರಿಪ್ ವಿಶೇಷ ರೈಲು; ಇಲ್ಲಿದೆ ವೇಳಾಪಟ್ಟಿ
ಬೆಳಗಾವಿ: ಗಣೇಶ ಚತುರ್ಥಿ ಹಿನ್ನೆಲೆ ಪ್ರಯಾಣಿಕರ ದಟ್ಟಣೆಯನ್ನು ತಗ್ಗಿಸುವ ನಿಟ್ಟಿನಲ್ಲಿ ಬೆಂಗಳೂರು ಬೆಳಗಾವಿ ಮಾರ್ಗದಲ್ಲಿ ವಿಶೇಷ ರೈಲು ಸಂಚಾರ ನಡೆಸಲಿದೆ.
ಗಣೇಶ ಹಬ್ಬದ ನಿಮಿತ್ತ ಪ್ರಯಾಣಿಕರ ಅನುಕೂಲಕ್ಕಾಗಿ ವಿಶೇಷ ರೈಲು ಸಂಚಾರಕ್ಕೆ ವ್ಯವಸ್ಥೆ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರ ಮನವಿಗೆ ಸ್ಪಂದಿಸಿರುವ ನೈಋುತ್ಯ ರೈಲ್ವೇ ಇಲಾಖೆ ಮಹಾ ಪ್ರಬಂಧಕರು ಯಶವಂತಪುರದಿಂದ ಬೆಳಗಾವಿಗೆ ಮತ್ತು ಬೆಳಗಾವಿಯಿಂದ ಯಶವಂತಪುರಕ್ಕೆ ವಿಶೇಷ ರೈಲು ಸೇವೆ ಕಲ್ಪಿಸಲು ಆದೇಶಿಸಿದ್ದಾರೆ.
- ಯಶವಂತಪುರ-ಬೆಳಗಾವಿ ರೈಲು ಸೆ.15 ರಂದು ಸಂಜೆ 6.15ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು ಸೆ. 16ರ ಬೆಳಗ್ಗೆ 6 ಗಂಟೆಗೆ ಬೆಳಗಾವಿ ತಲುಪಲಿದೆ.
- ಬೆಳಗಾವಿ-ಯಶವಂತಪುರ ರೈಲು ಸೆ.16 ರಂದು ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು 17ರಂದು ಬೆಳಗ್ಗೆ 04.30 ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.
- ಸೆ.17ರಂದು ಸಂಜೆ 6.15 ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು 18ರಂದು ಬೆಳಗ್ಗೆ 6 ಗಂಟೆಗೆ ಬೆಳಗಾವಿ ತಲುಪಲಿದೆ.
- ಸೆ.18ರ ಸಂಜೆ 5.30ಕ್ಕೆ ಬೆಳಗಾವಿಯಿಂದ ಹೊರಟು 19 ರಂದು ಬೆಳಗ್ಗೆ 4.30ಕ್ಕೆ ಯಶವಂತಪುರ ನಿಲ್ದಾಣ ತಲುಪಲಿದೆ.