Connect with us

ಬೆಂಗಳೂರು

ಗ್ರಾಹಕರ ಜೇಬಿಗೆ ಕತ್ತರಿ ಗ್ಯಾರಂಟಿ, ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಕೆ!

Published

on

ಬೆಂಗಳೂರು: ಬೆಸ್ಕಾಂ ಮಾತ್ರವಲ್ಲದೇ ರಾಜ್ಯದ ಇತರೆ ಬೆಸ್ಕಾಂಗಳು ಕೂಡ ದರ ಏರಿಕೆಗೆ ಪ್ರಸ್ತಾವನೆ ಕೊಟ್ಟಿದ್ದು ಸದ್ಯದಲ್ಲೇ ಪ್ರತಿ ಯೂನಿಟ್ ಗೆ ೬೭ ಪೈಸೆ ದರ ಏರಿಕೆ ಸಾಧ್ಯತೆ ಇದೆ ಎಂದು ವರದಿಯಾಗಿದೆ, ದರ ಏರಿಕೆಯು ಒಟ್ಟಿಗೆ ಬಹುತೇಕ ಏಕ ಮಾದರಿಯಲ್ಲಿಯೇ ಆಗಿರಲಿವೆ,
ಮುಂದಿನ ಮೂರು ವರ್ಷಗಳಿಗೆ ವಿದ್ಯುತ್ ದರ ಏರಿಕೆ ಮಾಡಲು ಕರ್ನಾಟಕ ವಿದ್ಯುಶಕ್ತಿ ನಿಯಂತ್ರಣ ಆಯೋಗಕ್ಕೆ ಬೆಸ್ಕಾಂ ಕೂಡ ಪ್ರಸ್ತಾವಣೆ ಸಲ್ಲಿಸಿದೆ, ಪ್ರತಿ ಯೂನಿಟ್‌ಗೆ ಮುಂಬರುವ ಮೊದಲ ವರ್ಷದ ಭಾಗವಾಗಿ ೨೫-೨೬ ಕ್ಕೆ ೬೭ ಪೈಸೆ, ೨೬-೨೭ ಕ್ಕೆ ೭೪ ಪೈಸೆ, ೨೦೨೭-೨೮ ಕ್ಕೆ ೯೧ ಪೈಸೆ ಹೆಚ್ಚಿಸಲು ಪ್ರಸ್ತಾವನೆಯಲ್ಲಿ ಕೋರಲಾಗಿದೆ.
ದರ ಏರಿಕೆ ಪ್ರಸ್ತಾವನೆ ಸಲ್ಲಿಸಲು ನ.೩೦ ಕೊನೆ ದಿನವಾಗಿದ್ದರಿಂದ ಬೆಸ್ಕಾಂ ಸೇರಿ ಇತರೆ ಎಸ್ಕಾಂಗಳು ದರ ಏರಿಕೆ ಮಾಡುವ ಕುರಿತಾಗಿ ಪ್ರಸ್ತಾವನೆಯನ್ನು ನಿಗದಿತ ದಿನಾಂಕದೊಳಗೆ ಸಲ್ಲಿಕೆ ಮಾಡಿವೆ, ಇದರಿಂದ ಹೊಸ ವರ್ಷದಿಂದಲೇ ದರ ಏರಿಕೆಯಾಗುವ ಸಾಧ್ಯತೆ ಇದ್ದು, ಗ್ರಾಹಕರ ಜೇಬಿಜೆ ಕತ್ತರಿ ಬೀಳಲಿದೆ, ಅದರೆ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳು ನಿಗದಿತ ಉಚಿತ ವಿದ್ಯುತ್ ಯೂನಿಟ್ಸ್ ಗಿಂತಲೂ ಹೆಚ್ಚು ಬಳಸಿದ್ದಲ್ಲಿ ಮಾತ್ರ ಹೊಸ ದರ ಅನ್ವಯಿಸಲಿದೆ ಎಂದು ಹೇಳಲಾಗುತ್ತಿದೆ,

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

CM D K Shiv Kumar ಕೈ ಶಾಸಕರ ಜೊತೆ ಡಿಕೆಶಿ ಮಹತ್ವದ ಸಭೆ; ಅನುದಾನಕ್ಕೆ ಗ್ರೀನ್‌ ಸಿಗ್ನಲ್‌, SIRಗೆ ಫುಲ್‌ ಫೋಕಸ್‌

Published

on

ಬೆಂಗಳೂರು: CM D K Shiv Kumar ಅವರು ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕಾಂಗ್ರೆಸ್‌ ಶಾಸಕರೊಂದಿಗೆ ದಿನಪೂರ್ತಿ ಸಭೆ ನಡೆಸಿ ಕ್ಷೇತ್ರಗಳ ಅಭಿವೃದ್ಧಿ, ಅನುದಾನ, ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಿದರು. ಶಾಸಕರ ಕುಂದುಕೊರತೆ ಹಾಗೂ ಬೇಡಿಕೆಗಳನ್ನು ಆಲಿಸಿದ ಸಿಎಂ, ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಸಚಿವರು ಹಾಗೂ ಶಾಸಕರು ಉಪಸ್ಥಿತರಿದ್ದರು. ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನದಿಂದ ವಂಚಿತರಾದ ಕೆಲವು ಶಾಸಕರ ಅಸಮಾಧಾನಕ್ಕೂ ಸಭೆಯಲ್ಲಿ ಗಮನ ನೀಡಲಾಗಿದೆ. ಶಾಸಕರೊಂದಿಗೆ ನೇರವಾಗಿ ಚರ್ಚಿಸಿದ ಸಿಎಂ, ಅವರ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳು ಮತ್ತು ಅನುದಾನದ ಅಗತ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಅನುದಾನಕ್ಕೆ ಶಾಸಕರ ಒತ್ತಾಯ

ಸಭೆಯಲ್ಲಿ ಬಹುತೇಕ ಕಾಂಗ್ರೆಸ್‌ ಶಾಸಕರು ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಬಜೆಟ್‌ನಲ್ಲಿ ಘೋಷಿಸಿರುವಂತೆ ಕ್ಷೇತ್ರವಾರು ಅನುದಾನ ಬಿಡುಗಡೆ ಮಾಡಬೇಕು. ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಹೆಚ್ಚುವರಿ ಅನುದಾನ ಅಗತ್ಯವಿದೆ ಎಂದು ಶಾಸಕರು ಸಿಎಂ ಗಮನಕ್ಕೆ ತಂದಿದ್ದಾರೆ.

ಶಾಸಕರ ಬೇಡಿಕೆಗಳಿಗೆ ಸಿಎಂ ಡಿ.ಕೆ.ಶಿವಕುಮಾರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎನ್ನಲಾಗಿದೆ. ಕ್ಷೇತ್ರಗಳ ಅಭಿವೃದ್ಧಿ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಇದೇ ವೇಳೆ ಹಲವು ಶಾಸಕರು ತಮ್ಮ ಕ್ಷೇತ್ರ ಹಾಗೂ ಜಿಲ್ಲೆಗಳಲ್ಲಿರುವ ಸಮಸ್ಯೆಗಳನ್ನೂ ಪ್ರಸ್ತಾಪಿಸಿದ್ದಾರೆ. ಸಚಿವರು ಶಾಸಕರ ಅಹವಾಲುಗಳಿಗೆ ಸ್ಪಂದಿಸಬೇಕು ಮತ್ತು ಶಾಸಕರ ಸಂಪರ್ಕಕ್ಕೆ ಸಿಗಬೇಕು ಎಂದು ಒತ್ತಾಯಿಸಿದ್ದಾರೆ.

SIR ಬಗ್ಗೆ ವಿಶೇಷ ಗಮನ

ಕಾಂಗ್ರೆಸ್‌ ಶಾಸಕರ ಸಭೆಯಲ್ಲಿ SIR (Special Intensive Revision) ವಿಚಾರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದ ಅರ್ಹ ಮತದಾರರನ್ನು ಗುರುತಿಸಿ, ಅವರ ಹೆಸರು ಪಟ್ಟಿಗೆ ಸೇರ್ಪಡೆಯಾಗುವಂತೆ ಸಹಕರಿಸಲು ಶಾಸಕರಿಗೆ ಸೂಚನೆ ನೀಡಲಾಗಿದೆ.

ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈತಪ್ಪದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಚುನಾವಣಾ ಆಯೋಗವು ಸುಮಾರು 43 ಲಕ್ಷ ಮತದಾರರಿಗೆ ನೋಟಿಸ್‌ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ, ನೋಟಿಸ್‌ ಪಡೆದವರಿಗೆ ಅಗತ್ಯ ದಾಖಲೆಗಳನ್ನು ಒದಗಿಸುವಲ್ಲಿ ಸಹಾಯ ಮಾಡುವಂತೆ ಶಾಸಕರಿಗೆ ಸಲಹೆ ನೀಡಲಾಗಿದೆ.

ಖಾಯಂ ನಿವಾಸ ಪ್ರಮಾಣಪತ್ರ ಸೇರಿದಂತೆ ಅಗತ್ಯ ದಾಖಲೆಗಳನ್ನು ಪಡೆಯಲು ನೋಟಿಸ್‌ ಪಡೆದ ಮತದಾರರಿಗೆ ನೆರವು ನೀಡಬೇಕು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಕ್ಷೇತ್ರ ಮಟ್ಟದಲ್ಲಿ ಕೆಲಸ ಮಾಡುವಂತೆ ಸಭೆಯಲ್ಲಿ ಸೂಚನೆ ನೀಡಲಾಗಿದೆ ಎನ್ನಲಾಗಿದೆ.

ಗ್ಯಾರಂಟಿ ಸಮಿತಿ, ಭಾರತ್ ಜೋಡೋ ಸಂಘದ ಚರ್ಚೆ

ಸಭೆಯ ಬಳಿಕ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಅಧಿವೇಶನದ ಬಳಿಕ ಎಲ್ಲಾ ಶಾಸಕರು ಬೆಂಗಳೂರಿನಲ್ಲಿರುವ ಹಿನ್ನೆಲೆಯಲ್ಲಿ ಸಿಎಂ ಸಭೆ ಕರೆದಿದ್ದರು ಎಂದು ತಿಳಿಸಿದರು. SIR ಜೊತೆಗೆ ಗ್ರಾಮೀಣ ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಹಾಗೂ ಭಾರತ್ ಜೋಡೋ ಸಂಘ ರಚನೆ ಕುರಿತು ಚರ್ಚೆ ನಡೆದಿದೆ ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವೂ ಸಭೆಯಲ್ಲಿ ಪ್ರಸ್ತಾಪವಾಗಿದೆ. 2028ರ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಪ್ರಗತಿಪರ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಸಿಎಂ ಸಲಹೆ ನೀಡಿದ್ದಾರೆ ಎಂದು ಬೇಳೂರು ಗೋಪಾಲಕೃಷ್ಣ ಹೇಳಿದರು.

ಸಚಿವರು 15 ದಿನಕ್ಕೊಮ್ಮೆ ತಾಲೂಕುಗಳಿಗೆ ತೆರಳಿ ಸ್ಥಳೀಯ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವುದಾಗಿಯೂ ಸಿಎಂ ಭರವಸೆ ನೀಡಿದ್ದಾರೆ ಎಂದು ಅವರು ತಿಳಿಸಿದರು.

ಒಟ್ಟಿನಲ್ಲಿ, ಅನುದಾನ, SIR, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ಕ್ಷೇತ್ರಾಭಿವೃದ್ಧಿ ಸೇರಿದಂತೆ ಹಲವು ವಿಚಾರಗಳ ಕುರಿತು ನಡೆದ ಕಾಂಗ್ರೆಸ್‌ ಶಾಸಕರ ಸಭೆ ರಾಜ್ಯ ರಾಜಕೀಯದಲ್ಲಿ ಮಹತ್ವ ಪಡೆದುಕೊಂಡಿದೆ.

Continue Reading

ಅಪರಾಧ

Renukaswamy Murder Case ನಲ್ಲಿ ಮಹತ್ವದ ಬೆಳವಣಿಗೆ: ಮಾಫಿ ಸಾಕ್ಷಿಯಾದ ಪ್ರದೋಷ್, ಮುಂದೆ ಏನಾಗಲಿದೆ?

Published

on

ಬೆಂಗಳೂರು: ಚಿತ್ರದುರ್ಗ ಮೂಲದ Renukaswamy Murder Case ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ಪುರಸ್ಕರಿಸಿದ್ದು, ಇದೀಗ ಅವರು ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷಿ ನುಡಿಯಲು ಅವಕಾಶ ದೊರೆತಿದೆ.

ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರದೋಷ್ ರಾವ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುದೀರ್ಘ ವಿಚಾರಣೆ ನಡೆದಿತ್ತು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶೆ ಸುಜಾತ ಎಂ. ಸಮಭ್ರಾಣಿ ಅವರು ಮಂಗಳವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.

ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕಾರ

ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಬಾರದು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಕೋರ್ಟ್‌ಗೆ ಮನವಿ ಮಾಡಲಾಗಿತ್ತು.

ಆದರೆ, ದರ್ಶನ್ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ನ್ಯಾಯಾಲಯ ಪರಿಗಣಿಸದೆ, ಪ್ರದೋಷ್ ರಾವ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿದೆ. ಹೀಗಾಗಿ ಪ್ರಕರಣದ ತನಿಖೆ ಹಾಗೂ ಮುಂದಿನ ವಿಚಾರಣೆಯಲ್ಲಿ ಪ್ರದೋಷ್ ನೀಡಲಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ಪ್ರಕರಣಕ್ಕೆ ಸಿಗಲಿದೆಯೇ ಮಹತ್ವದ ತಿರುವು?

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಇದೀಗ ಸರ್ಕಾರದ ಪರ ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿದ್ದಾರೆ. ಪ್ರಕರಣದ ಘಟನೆಗಳು, ಆರೋಪಿಗಳ ಪಾತ್ರ ಹಾಗೂ ಕೃತ್ಯದ ಬಳಿಕ ನಡೆದ ಬೆಳವಣಿಗೆಗಳ ಕುರಿತು ಅವರು ನೀಡಬಹುದಾದ ಮಾಹಿತಿ ತನಿಖೆಗೆ ಪ್ರಮುಖವಾಗುವ ಸಾಧ್ಯತೆಯಿದೆ.

ವಿಶೇಷವಾಗಿ ಕೊಲೆ ನಡೆದ ಸ್ಥಳದಲ್ಲಿನ ಘಟನೆಗಳು ಹಾಗೂ ಬಳಿಕ ಸಾಕ್ಷ್ಯ ನಾಶಕ್ಕೆ ನಡೆದಿತ್ತೆನ್ನಲಾದ ಪ್ರಯತ್ನಗಳ ಕುರಿತು ಪ್ರದೋಷ್ ನೀಡುವ ಹೇಳಿಕೆ ಪ್ರಕರಣದ ದಿಕ್ಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಮಾಫಿ ಸಾಕ್ಷಿಯಾಗಲು ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದಲ್ಲಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ. ಅವರ ಹೇಳಿಕೆಯಲ್ಲಿ ಯಾವೆಲ್ಲ ಪ್ರಮುಖ ಅಂಶಗಳು ಹೊರಬರಲಿವೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

Continue Reading

ಬೆಂಗಳೂರು

Kannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!

Published

on

ಬೆಂಗಳೂರು: Kannada Sahitya Parishat ನ ಪ್ರತಿಷ್ಠಿತ **‘ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ದತ್ತಿ ಪ್ರಶಸ್ತಿ’**ಗೆ 2025 ಹಾಗೂ 2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರು ತಮ್ಮ ಮಾಸಿಕ ಗೌರವ ಸಂಭಾವನೆಯನ್ನು ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ಹಿರಿಯ ಸಾಹಿತಿಗಳನ್ನು ಗೌರವಿಸಲು ಬಳಸುವ ಉದ್ದೇಶದಿಂದ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.

60 ವರ್ಷ ಪೂರ್ಣಗೊಳಿಸಿರುವ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿ ವರ್ಷ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯು ತಲಾ 30 ಸಾವಿರ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. 2021ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

2025ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

2025ನೇ ಸಾಲಿಗೆ ಬೆಂಗಳೂರಿನ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ ಹಾಗೂ ಹಿರಿಯ ಸಾಹಿತಿ ಡಾ. ಲತಾ ಗುತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರು

2026ನೇ ಸಾಲಿಗೆ ಬಾಗಲಕೋಟೆಯ ಹಿರಿಯ ಸಾಹಿತಿ ಡಾ. ಶ್ರೀರಾಮ ಇಟ್ಟಣ್ಣವರ ಹಾಗೂ ಬೆಂಗಳೂರಿನ ಹಿರಿಯ ಲೇಖಕಿ ಡಾ. ಪದ್ಮಿನಿ ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ.

ಆಯ್ಕೆ ಸಮಿತಿಯಲ್ಲಿ ಯಾರೆಲ್ಲ ಇದ್ದರು?

ಆಗಸ್ಟ್ 25, 2026ರಂದು ಆಡಳಿತಾಧಿಕಾರಿ ಕೆ.ಎ. ದಯಾನಂದ, ಭಾ.ಆ.ಸೇ. ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ, ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಮಲ್ಲಿಕಾ ಘಂಟಿ ಹಾಗೂ ದತ್ತಿ ದಾನಿಗಳಾದ ನಾಡೋಜ ಡಾ. ಮನು ಬಳಿಗಾರ್ ಉಪಸ್ಥಿತರಿದ್ದರು.

ಎರಡು ವರ್ಷಗಳ ಪ್ರಶಸ್ತಿ ಪುರಸ್ಕೃತರನ್ನು ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

Trending