ರಾಜಕೀಯ
ದಾರಿ ತಪ್ಪಿಸುವ ಬಿಜೆಪಿ-ಜೆಡಿಎಸ್ ಮಾತನ್ನು ಕೇಳಬೇಡಿ ಎಂದು ಸಿಎಂ ಸಿದ್ದರಾಮಯ್ಯ
ಹಾಸನ: ಕರ್ನಾಟಕದ ಇತಿಹಾಸದಲ್ಲಿ ಬಿಜೆಪಿ-ಜೆಡಿಎಸ್ ಆಗಲಿ ಯಾವತ್ತೂ ಸುಭದ್ರ ಸರ್ಕಾರ ನೀಡಲು ಆಗಿಲ್ಲ, ಹೀಗಾಗಿ ಅಧಿಕಾರ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು,
ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸುಭದ್ರ ಸರ್ಕಾರ ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವೆಂದ ಅವರು ಕುಮಾರಸ್ವಾಮಿ ಸಿಎಂ ಆಗಿದ್ದು ಒಮ್ಮೆ ಬಿಜೆಪಿ ಹಾಗೂ ನಮ್ಮಿಂದ, ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಅಧಿಕಾರಕ್ಕೆ ಬಂದಿದ್ದರು, ಅವರಿಂದ ಸುಭದ್ರ ಸರ್ಕಾರ ಕೊಡಲು ಸಾಧ್ಯವಾಗಲಿಲ್ಲ, ನಾವು ಕುಮಾರಸ್ವಾಮಿರನ್ನು ಬೆಂಬಲಿಸಿ ಸರ್ಕಾರ ರಚಿಸಲು ಬೆಂಬಲ ನೀಡಿದ್ವಿ, ಅವರಿಗೆ ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ ಎಂದು ಸಿಎಂ ಹೇಳಿದರು,
ಬಡವರ ಹೊಟ್ಟೆಗೆ ಹೊಡೆಯುವವರು ಬಿಜೆಪಿ ಜೆಡಿಎಸ್ ನವರೇ ಹೊರತು ಕಾಂಗ್ರೆಸ್‍ನವರಲ್ಲ, ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ, ಪ್ರಧಾನಿ ಮೋದಿ ಅವರಿಗೆ ನಮ್ಮ ಸರ್ಕಾರ ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ಎಂದು ಅಕ್ಕಿ ಕೊಡಲಿಲ್ಲ, ಹೀಗಾಗಿ ಪತ್ರಿ ಬಿಪಿಎಲ್ ಕಾರ್ಡ್‍ದಾರರಿಗೆ 170 ರೂಪಾಯಿ ಕೊಡುತ್ತಿದ್ದೇವೆ ಎಂದರು,
ನಿಮ್ಮ ಪಕ್ಷ ಅಧಿಕಾರವಿರುವ ಯಾವ ರಾಜ್ಯದಲ್ಲಾದರೂ 10 ಕೆಜಿ ಅಕ್ಕಿ ಕೊಡುತ್ತಿರುವುದು ನಿಜವೇ ಅದರೇ ನಾನು ರಾಜಕೀಯ ನಿವೃತ್ತಿ ಕೊಡುತ್ತೇನೆ ಎಂದು ಸಿಎಂ ಘೋಷಣೆ ಮಾಡಿದರು, ಮೋದಿಯವರು ಆದಿಯಾಗಿ ಪಂಚ ಗ್ಯಾರಂಟಿ ಯೋಜನೆಗಳು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು, ನಾವು ಜಾರಿ ಮಾಡಿದ್ದೇವೆ, ಜಾರಿ ಮಾಡಿದರೆ ರಾಜ್ಯದ ಬೊಕ್ಕಸ ಖಾಲಿ ಎಂದ್ರು, ಹಾಗೂ ಆಯ್ತಾ? ಎಲ್ಲಾ ಗ್ಯಾರಂಟಿಗಳನ್ನು ವಿರೋಧಿಸಿದ ಅವರೇ ನಮ್ಮ ಯೋಜನೆಗಳನ್ನು ನಕಲು ಮಾಡಿದರು, ಅವರು ಬಡವರ ವಿರೋಧಿಗಳು ಎಂದು ಕುಟುಕಿದರು,
ಇನ್ನು ರಾಜ್ಯದ ಪಾಲಿನ ತೆರಿಗೆಯನ್ನು ಸಮರ್ಪಕವಾಗಿ ಕೇಂದ್ರ ನೀಡುತ್ತಿಲ್ಲ, ನಾಲ್ಕುವರೆ ಲಕ್ಷ ಕೋಟಿ ರೂಪಾಯಿ ತೆರಿಗೆ ನೀಡುತ್ತಿದ್ದೇವೆ, ಆದರೆ 60 ಸಾವಿರ ಕೋಟಿ ರೂಪಾಯಿ ಮಾತ್ರ ನಮಗೆ ವಾಪಸ್ ಕೊಡುತ್ತಿದ್ದಾರೆ, ಬಡವರು ರೈತರಿಗೆ ಅನ್ಯಾಯವಾಗುತ್ತಿದೆ, ನಬಾರ್ಡ್‍ನಿಂದ ನಮ್ಮ ರೈತರಿಗೆ ಕೇಂದ್ರದಿಂದ ಮೋಸ ಆಗಿದೆ, ಈ ಬಗ್ಗೆ ಯಾವತ್ತಾದರೂ ಹೆಚ್ ಡಿ ದೇವೇಗೌಡ ಅವರೇ, ಕುಮಾರಸ್ವಾಮಿ ಯಾವತ್ತಾದರೂ ಈ ಬಗ್ಗೆ ಕೇಂದ್ರಕ್ಕೆ ಪ್ರಶ್ನಿಸಿದ್ದೀರಾ ಎಂದು ಕೇಳಿದರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಇವರು ಯಾರೂ ಬೆಂಬಲಿಸಿಲ್ಲ, ರಾಜ್ಯ ಯಾವ ಸಂಸದರೂ ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಅಬ್ಬರಿಸಿದರು,
ದೇವೇಗೌಡರು ಚನ್ನಪಟ್ಟಣದಲ್ಲಿ ಸಿದ್ರಾಮಯ್ಯನ ಗರ್ವಭಂಗ ಮಾಡ್ತೀನಿ, ಅಂತಾ ಹಲ್ಲು ಕಚ್ಚಿಕೊಂಡು ಹೇಳಿದ್ರು, ಸರ್ಕಾರ ಕಿತ್ತೊಗೆಯಿರಿ ಅಂದ್ರು, ನನಗಿಂತ ದೇವೇಗೌಡರು 15 ವರ್ಷ ದೊಡ್ಡವರು, ಅವರಿಂದ ಇಂತಹ ಮಾತು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ತಿರುಗೇಟು ನೀಡಿದರು,
ಹಾಸನದಲ್ಲಿ ಮಹಿಳೆಯರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ, ಅಲ್ಲಿ ಚನ್ನಪಟ್ಟಣಕ್ಕೆ ಹೋಗಿ ನಿಖಿಲ್ ಪರ ಅಪ್ಪ-ಅಜ್ಜ ಇಬ್ಬರೂ ಕಣೀರು ಹಾಕ್ತಾರೆ, ಇಲ್ಲಿ ಕಣ್ಣೀರು ಹಾಕಬೇಕಿತ್ತು ಎಂದು ತಿವಿದರು, ನಾನು ಜೆಡಿಎಸ್ ಬಿಡಲಿಲ್ಲ, ಆ ಹಿಂದೆ ಸಮಾವೇಶ ಮಾಡಿದ್ದಕ್ಕೆ ಅವರೇ ಉಚ್ಚಾಟಿಸಿದರು, ಕೋಮುವಾದಿಗಳ ಜೊತೆ ಸೇರಿಕೊಂಡಿರವ ಜೆಡಿಎಸ್ ನಾವು ಜಾತ್ಯಾತೀತ ಎಂದು ಹೇಳಿಕೊಳ್ಳವ ನಿಮಗೆ ಯಾವುದೇ ನೈತಿಕತೆ ಇಲ್ಲ ಎಂದು ಗುಡುಗಿದರು,
ಅಭಿಮಾನಿಗಳೇ ದೇವರು ಎಂದು ವರನಟ ಡಾ ರಾಜಕುಮಾರ್ ಹೇಳಿದ್ರು, ನಮಗೆ ಮತದಾರ ಬಂಧುಗಳೇ ದೇವರು, ಇದು ಕಾಂಗ್ರೆಸ್ ಪಕ್ಷದ ಸಮಾವೇಶ ಮಾತ್ರವಲ್ಲ ಇದು ಸ್ವಾಭಿಮಾನ ಒಕ್ಕೂಟದ ಸಮಾವೇಶ, ಪಕ್ಷವನ್ನು ಸೇರಿಸಿಕೊಂಡು ಸಮಾವೇಶ ಮಾಡಿದ್ದೇವೆ, ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಲು, ಈ ಸಮಾವೇಶ ಎಂದು ಸಿಎಂ ಒತ್ತಿ ಹೇಳಿದರು, ದಾರಿ ತಪ್ಪಿಸುವ ಬಿಜೆಪಿ-ಜೆಡಿಎಸ್ ಮಾತನ್ನು ಕೇಳಬೇಡಿ ಎಂದು ಸಿಎಂ ಕರೆ ನೀಡಿದರು,
ರಾಜ್ಯ
Cabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?
ಬೆಂಗಳೂರು: Cabinet Expansion ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗಳು ಮತ್ತೆ ವೇಗ ಪಡೆದಿದ್ದು, ಶೀಘ್ರದಲ್ಲೇ ರಾಜ್ಯದ ಪ್ರಮುಖ ನಾಯಕರಿಗೆ ದೆಹಲಿ ಬುಲಾವ್ ಬರಬಹುದಾದ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ.
ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿರುವ ಹಿನ್ನೆಲೆ, ಅದರ ಮೊದಲು ಸಂಪುಟ ವಿಸ್ತರಣೆ ನಡೆಯಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ.
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದು, ಬರ ಹಾಗೂ ಪ್ರವಾಹದಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇತ್ತ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಹಕ್ಕು ಮಂಡಿಸುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.
ರಾಜ್ಯ
Mysore ನಲ್ಲಿ ಬಿ.ವೈ. ವಿಜಯೇಂದ್ರ ಹೇಳಿದ್ದೇನು? ಕಾಂಗ್ರೆಸ್, ಮೋದಿ ಹಾಗೂ ದಸರಾ ಕುರಿತು ತೀಕ್ಷ್ಣ ಮಾತು
ಮೈಸೂರು: Mysore ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಜ್ಯ ಸರ್ಕಾರದ ಹಲವು ನೀತಿಗಳ ಕುರಿತು ಟೀಕಿಸಿದ್ದಾರೆ. ಮೈಸೂರಿನಲ್ಲಿ ನಡೆದ ಕಾಯಕ ಸಮಾಜಗಳ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಕೇವಲ ಜಾತಿಯ ಕಾರಣದಿಂದಲೇ ಪ್ರಧಾನಿಯವರನ್ನು ಗುರಿಯಾಗಿಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
“ಅತ್ಯಂತ ಹಿಂದುಳಿದ ವರ್ಗದಿಂದ ಬಂದಿರುವ ನರೇಂದ್ರ ಮೋದಿ ದೇಶದ ಪ್ರಧಾನಿಯಾಗಿರುವುದನ್ನು ಕಾಂಗ್ರೆಸ್ ನಾಯಕರು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ” ಎಂದು ವಿಜಯೇಂದ್ರ ಹೇಳಿದರು. ಅಲ್ಲದೆ, ಅಲ್ಪಸಂಖ್ಯಾತರ ಓಲೈಕೆಗಾಗಿ ರಾಜ್ಯ ಸರ್ಕಾರ ಬಹುಸಂಖ್ಯಾತರ ಹಿತಾಸಕ್ತಿಯನ್ನು ಕಡೆಗಣಿಸುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರಿಗೆ ವಾಸದ ದೃಢೀಕರಣ ಪತ್ರಗಳನ್ನು ನೀಡಲಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದು, ಈ ಕುರಿತು ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು. ಈ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಲಭ್ಯವಾಗಿಲ್ಲ.
ಇದೇ ವೇಳೆ, ಮೈಸೂರಿನ ವಿಶ್ವವಿಖ್ಯಾತ ದಸರಾ ಮಹೋತ್ಸವದ ಸಂದರ್ಭದಲ್ಲಿ ಕಂಬಳ ಆಯೋಜಿಸುವ ಸರ್ಕಾರದ ಪ್ರಸ್ತಾವಕ್ಕೂ ಅವರು ವಿರೋಧ ವ್ಯಕ್ತಪಡಿಸಿದರು. ಕಂಬಳ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಅದನ್ನು ಅಲ್ಲಿಯೇ ಇನ್ನಷ್ಟು ಅದ್ದೂರಿಯಾಗಿ ನಡೆಸಬೇಕು. ಮೈಸೂರಿನ ಐತಿಹಾಸಿಕ ದಸರಾ ಸಂಪ್ರದಾಯದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ, ಸರ್ಕಾರ ಜನರ ಭಾವನೆಗಳಿಗೆ ಗೌರವ ನೀಡಿ ರಾಜ್ಯದ ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರಾಜ್ಯ
Bengaluru 2nd Airport: ದಕ್ಷಿಣ ಬೆಂಗಳೂರಿನ ಜನರಿಗೆ ಗುಡ್ ನ್ಯೂಸ್! ಡಿಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು: Bengaluru 2nd Airport ನಗರದ ಬಹುಕಾಲದ ನಿರೀಕ್ಷೆಯಾಗಿರುವ ಎರಡನೇ ವಿಮಾನ ನಿಲ್ದಾಣ (Bengaluru Second Airport) ನಿರ್ಮಾಣ ಯೋಜನೆಗೆ ಮಹತ್ವದ ಬೆಳವಣಿಗೆ ಸಿಕ್ಕಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಹೊಸ ವಿಮಾನ ನಿಲ್ದಾಣವು ಬೆಂಗಳೂರು ದಕ್ಷಿಣ ಭಾಗದಲ್ಲೇ ನಿರ್ಮಾಣವಾಗುವ ಸಾಧ್ಯತೆ ಹೆಚ್ಚಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಸಭೆಯ ಬಳಿಕ ಮಾತನಾಡಿದ ಅವರು, ಈಗಾಗಲೇ ಬಂದಿರುವ ಪ್ರಸ್ತಾವನೆಗಳಲ್ಲಿ ಹೆಚ್ಚಿನವು ದಕ್ಷಿಣ ಬೆಂಗಳೂರಿಗೆ ಸಂಬಂಧಿಸಿದ್ದು, ಸರ್ಕಾರ ಕೆಲವು ಪ್ರಮುಖ ಷರತ್ತುಗಳನ್ನು ಮುಂದಿಟ್ಟಿದೆ ಎಂದರು.
“ಹೊಸ ವಿಮಾನ ನಿಲ್ದಾಣಕ್ಕಾಗಿ ಯಾವುದೇ ಗ್ರಾಮವನ್ನು ಸ್ಥಳಾಂತರಿಸಬಾರದು. ಭೂಸ್ವಾಧೀನಕ್ಕೆ ಕಡಿಮೆ ವೆಚ್ಚವಾಗಬೇಕು. ಕಡಿಮೆ ಜಾಗದಲ್ಲಿಯೇ ತಾಂತ್ರಿಕವಾಗಿ ಕಾರ್ಯಸಾಧುವಾಗುವ ಪ್ರದೇಶವನ್ನು ಆಯ್ಕೆ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಪ್ರಸ್ತುತ ಚೂಡಹಳ್ಳಿ (ಕನಕಪುರ ರಸ್ತೆ-ಮೈಸೂರು ರಸ್ತೆ ನಡುವೆ) ಹಾಗೂ ಸೋಮನಹಳ್ಳಿ (ಕನಕಪುರ ರಸ್ತೆ-ಬನ್ನೇರುಘಟ್ಟ ರಸ್ತೆ ನಡುವೆ) ಪ್ರಮುಖ ಆಯ್ಕೆಗಳಾಗಿ ಪರಿಗಣನೆಯಲ್ಲಿವೆ. ಈ ಪ್ರದೇಶಗಳಲ್ಲಿ ಸಾವಿರಾರು ಎಕರೆ ಭೂಮಿ ಲಭ್ಯವಿರುವುದರಿಂದ ಅಧಿಕಾರಿಗಳು ತಾಂತ್ರಿಕ ಹಾಗೂ ಭೂಸ್ವಾಧೀನದ ಸಾಧ್ಯತೆಗಳನ್ನು ಪರಿಶೀಲಿಸುತ್ತಿದ್ದಾರೆ.
ಪ್ರಸ್ತುತ ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ವರ್ಷದಿಂದ ವರ್ಷಕ್ಕೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ದಕ್ಷಿಣ ಬೆಂಗಳೂರಿನ ಜನರು ವಿಮಾನ ನಿಲ್ದಾಣ ತಲುಪಲು ಹಲವು ಗಂಟೆಗಳ ಕಾಲ ಪ್ರಯಾಣಿಸಬೇಕಾಗುತ್ತಿರುವುದರಿಂದ, ಹೊಸ ವಿಮಾನ ನಿಲ್ದಾಣ ನಿರ್ಮಾಣವು ಸಂಚಾರ ದಟ್ಟಣೆ ಕಡಿಮೆ ಮಾಡುವುದರ ಜೊತೆಗೆ ಪ್ರಯಾಣದ ಸಮಯವನ್ನು ಉಳಿಸುವ ನಿರೀಕ್ಷೆಯಿದೆ.
ರಾಜ್ಯ ಸರ್ಕಾರ ಅಂತಿಮವಾಗಿ ಸೂಕ್ತ ಸ್ಥಳವನ್ನು ಗುರುತಿಸಿದ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದ್ದು, ಅನುಮೋದನೆ ದೊರೆತ ನಂತರ ಯೋಜನೆಗೆ ಅಧಿಕೃತ ಚಾಲನೆ ಸಿಗಲಿದೆ.
-
ಬೆಂಗಳೂರು16 hours agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ದೇಶ15 hours agoಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
-
ಸುತ್ತ ಮುತ್ತ19 hours agoBorivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
-
ದೇಶ17 hours agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ದೇಶ16 hours agoಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
-
ರಾಜ್ಯ19 hours agoS Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
-
ರಾಜ್ಯ23 hours agoಮಹಾರಾಜ ಕಾಲೇಜು ಮೈದಾನದಲ್ಲಿ ಎಸ್. ಜಾನಕಿಗೆ ಅಂತಿಮ ನಮನ; ಅಭಿಮಾನಿಗಳ ಕಣ್ಣೀರಿನ ಸಾಗರ
-
ಕ್ರೀಡೆ17 hours agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
