ರಾಜಕೀಯ
ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ ನನ್ನ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಸ್ ಟಿ ಸೋಮಶೇಖರ್
ಬೆಂಗಳೂರು: ಕುಂಬಳಗೋಡು ಪೊಲೀಸ್ ಠಾಣೆ ಉದ್ಘಾಟನೆಗೆ ಮೊದಲೇ ಯೋಜನೆ ಮಾಡಲಾಗಿತ್ತು, ಹೀಗಾಗಿ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಹಾಜರಾಗಲು ಸಾಧ್ಯವಾಗಲಿಲ್ಲ ಎಂದು ಶಾಸಕ ಎಸ್ ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ, ವರಿದಿಗಾರರೊಂದಿಗೆ ಮಾತನಾಡಿದ ಅವರು ಮೊದಲು ನ.16 ರಂದು ಪೊಲೀಸ್ ಠಾಣೆ ಉದ್ಘಾಟನೆ ಎಂದಿದ್ದರು, ಬಳಿಕ ನ. 15ಕ್ಕೆ ಕಾರ್ಯಕ್ರಮ ಎಂದು ಗೃಹಸಚಿವರು ತಿಳಿಸಿದರು, ಹೀಗಾಗಿ ಬಿ.ವೈ.ವಿಜಯೇಂದ್ರ ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿಲ್ಲ ನಾನು ಬಿಜೆಪಿಯಿಂದ ದೂರ ಉಳಿಯುತ್ತಿಲ್ಲ ನನ್ನ ಕ್ಷೇತ್ರದ ಕೆಲಸ ಮಾಡುತ್ತಿದ್ದೇನೆ ಎಂದು ಸ್ಪಷ್ಟ ಪಡಿಸಿದ್ದರು,
ರಾಜ್ಯಧ್ಯಾಕ್ಷ ಸ್ಧಾನಕ್ಕೆ ವಿಜಯೇಂದ್ರ ಆಯ್ಕೆ ಸರಿಯಾಗಿದೆ ಇಂದಿನ ಪರಿಸ್ಧಿತಿಗೆ ಅವರ ಆಯ್ಕೆ ನೂರಕ್ಕೆ ನೂರರಷ್ಟು ಸೂಕ್ತವಾಗಿದೆ ಈ ಹಿಂದೆ ವಿಜಯೇಂದ್ರ ರಾಜ್ಯ ಉಪಾಧ್ಯಕ್ಷರಾಗಿದ್ದರು, ಅವರಿಗೆ ಅನುಭವ ಇದೆ, ಎಲ್ಲ ಜಿಲ್ಲೆಯ ನಾಯಕರು ಅವರಿಗೆ ಪರಿಚಯ ಇದೆ, ಹೀಗಾಗಿ ಮುಂದಿನ ಚುನಾವಣೆಗೆ ಒಳ್ಳೆಯ ಬೆಳವಣಿಗೆ ಎಂದರು,
ವಿಜಯೇಂದ್ರ ಆಯ್ಕೆ ಕುಟುಂಬ ರಾಜಕಾರಣ ಎಂಬ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಇದು ಕುಟುಂಬ ರಾಜಕೀಯ ಅಲ್ಲ ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲಲ್ಲ ಎಂದ ಮೇಲೆ ಅವರ ಮಗನಿಗೆ ಅಧಿಕಾರ ನೀಡಿದ್ದಾರೆ, ಬಿ.ವೈ.ರಾಘವೇಂದ್ರ ಹಿಂದೆ ಲೋಕಸಭಾ ಸದಸ್ಯರಾಗಿದ್ದರು, ಈಗ ವಿಜಯೇಂದ್ರ ಎಂ ಎಲ್ ಎ ಆಗಿದ್ದಾರೆ ಅಷ್ಟೇ ಎಂದರು,