Connect with us

ಬೆಂಗಳೂರು

ನೆಹರು ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆ, ಈಗಲೇ ನೋದಾಯಿಸಿ

Published

on

ಬೆಂಗಳೂರು: ಜ.10 ರಂದು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ,
ಟೆಲಿಸ್ಕೋಪಿಕ್ ಅವಲೋಕನಗಳನ್ನು ಬೈನಾಕ್ಯುಲರ್ ಆಧಾರಿತ ಅಧ್ಯಯನಗಳು ಹೀಗೆ ಹಲವು ಅಚ್ಚರಿ ವಿಷಯಗಳನ್ನು ತಿಳಿದುಕೊಳ್ಳುವ ಆಸಕ್ತರು ಈ ಕೂಡಲೇ ನಿಮ್ಮ ಹೆಸರನ್ನು info@taralaya.org ನಲ್ಲಿ ನೋಂದಾಯಿಸಿಕೊಳ್ಳಬಹುದು,
ತಾರಾಲಯದಲ್ಲಿ ರಾತ್ರಿ ಆಕಾಶ ವೀಕ್ಷಣೆಗೆ 13 ವರ್ಷ ಮತ್ತು ಅದಕ್ಕಿಂತ ಮೇಲಿನ ವಯೋಮಾನದವರಿಗೆ ಮಾತ್ರ ಅವಕಾಶವಿದೆ, ಪ್ರವೇಶ ಶುಲ್ಕ 750 ರೂಪಾಯಿ ಇರಲಿದ್ದು, ಬೆಳಗ್ಗೆ 10 ರಿಂದ ಬೆಳಗ್ಗೆ 4-30 ಗಂಟೆಯವರೆಗೆ ವೀಕ್ಷಣೆ ಮಾಡಬಹುದು, ಹೆಚ್ಚಿನ ಮಾಹಿತಿಗೆ 080-22379725/22266084ಗೆ ಸಂಪರ್ಕಿಸುವಂತೆ ವಾರ್ತಾ ಇಲಾಖೆ ಪ್ರಕಟಣೆ ಮೂಲಕ ತಿಳಿಸಿದೆ,

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜಕೀಯ

B Nagendra ರಾಜೀನಾಮೆ: ಕಾಂಗ್ರೆಸ್‌ನಲ್ಲಿ ಬಿಗ್ ಟ್ವಿಸ್ಟ್, ಹೈಕಮಾಂಡ್ ಮುಂದಿದೆ ಮಹತ್ವದ ನಿರ್ಧಾರ!

Published

on

By

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಚಿವ B Nagendra ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಆದರೆ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬೇಕೇ ಎಂಬ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ರಾಜ್ಯ ನಾಯಕತ್ವದ ನಡುವೆ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಅಂಗೀಕಾರದ ಬಗ್ಗೆ ಕುತೂಹಲ

ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮತ್ತಷ್ಟು ಮುಜುಗರವಾಗದಂತೆ ರಾಜಕೀಯವಾಗಿ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಿರಂತರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಇದೀಗ ನಾಗೇಂದ್ರ ಅವರ ರಾಜೀನಾಮೆ ಸಲ್ಲಿಕೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆದರೆ ರಾಜೀನಾಮೆ ಸಲ್ಲಿಸಿರುವುದು ಮಾತ್ರ ಖಚಿತವಾಗಿದ್ದು, ಅದನ್ನು ಅಂಗೀಕರಿಸುವ ಕುರಿತು ಅಂತಿಮ ನಿರ್ಧಾರ ಇನ್ನೂ ಹೊರಬಿದ್ದಿಲ್ಲ ಎನ್ನಲಾಗಿದೆ.

ಬಳ್ಳಾರಿ ಚಲೋಗೂ ಮುನ್ನವೇ ಬಿಗ್ ಟ್ವಿಸ್ಟ್

ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ‘ಬಳ್ಳಾರಿ ಚಲೋ ಪಾದಯಾತ್ರೆ’ ನಡೆಸಲು ಘೋಷಿಸಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗಿದೆ.

ಆದರೆ ಬಿಜೆಪಿ ಪಾದಯಾತ್ರೆ ಆರಂಭಕ್ಕೂ ಮುನ್ನವೇ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಈ ಬೆಳವಣಿಗೆಯ ನಂತರ ಬಿಜೆಪಿ ತನ್ನ ಹೋರಾಟದ ಮುಂದಿನ ಕಾರ್ಯತಂತ್ರವನ್ನು ಹೇಗೆ ರೂಪಿಸಲಿದೆ ಎಂಬುದೂ ಗಮನ ಸೆಳೆದಿದೆ.

ಸಿಎಂ ಡಿಕೆಶಿ ಮತ್ತು ಹೈಕಮಾಂಡ್ ನಿರ್ಧಾರವೇನು?

ನಾಗೇಂದ್ರ ಅವರ ರಾಜೀನಾಮೆ ಪತ್ರ ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಂದಿದ್ದು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ.

ರಾಜೀನಾಮೆಯನ್ನು ಅಂಗೀಕರಿಸಿದರೆ, ಹಗರಣದ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮವೆಂದು ಕಾಂಗ್ರೆಸ್ ಇದನ್ನು ಬಿಂಬಿಸುವ ಸಾಧ್ಯತೆಯಿದೆ. ಮತ್ತೊಂದೆಡೆ, ರಾಜೀನಾಮೆಯನ್ನು ತಿರಸ್ಕರಿಸಿ ನಾಗೇಂದ್ರ ಅವರನ್ನು ಮುಂದುವರಿಸುವ ನಿರ್ಧಾರ ಕೈಗೊಂಡರೆ ಪ್ರತಿಪಕ್ಷಗಳಿಂದ ಮತ್ತಷ್ಟು ರಾಜಕೀಯ ಒತ್ತಡ ಎದುರಾಗುವ ಸಾಧ್ಯತೆಯಿದೆ.

ಹೀಗಾಗಿ ಬಿ. ನಾಗೇಂದ್ರ ಅವರ ರಾಜೀನಾಮೆ ಅಂಗೀಕಾರವಾಗುತ್ತದೆಯೇ ಅಥವಾ ಅವರು ಸಚಿವರಾಗಿ ಮುಂದುವರಿಯುತ್ತಾರೆಯೇ ಎಂಬುದು ಇದೀಗ ರಾಜ್ಯ ರಾಜಕೀಯದ ಪ್ರಮುಖ ಪ್ರಶ್ನೆಯಾಗಿದೆ.

Continue Reading

ಬೆಂಗಳೂರು

Badminton ಕೋರ್ಟ್‌ನಲ್ಲಿ ಮಹಾ ಕದನ; Make My Propertyz, MRCL, Hosa Suddi, ಗೌರೀಶ್, ಆಂಜನಪ್ಪ, ಹರೀಶ್, ಶಿವಕುಮಾರ್ ಕೈಜೋಡಿಕೆ!

Published

on

By

ಬೆಂಗಳೂರು: ಕ್ರೀಡಾಭಿಮಾನಿಗಳು ಹಾಗೂ ಬ್ಯಾಡ್ಮಿಂಟನ್ ಪ್ರೇಮಿಗಳಿಗಾಗಿ ಬೆಂಗಳೂರಿನಲ್ಲಿ ಆಗಸ್ಟ್ 29ರಂದು ‘MMP ಶಟಲ್ ಟೂರ್ನಮೆಂಟ್ 2026’ ನಡೆಯಲಿದೆ. ಕ್ರೀಡೆಯನ್ನು ಉತ್ತೇಜಿಸುವುದರ ಜೊತೆಗೆ ಯುವ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಹಾಗೂ ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲ ನೀಡುವ ಉದ್ದೇಶದಿಂದ ಈ ಪಂದ್ಯಾವಳಿ ಆಯೋಜಿಸಲಾಗಿದೆ.

ಮೇಕ್ ಮೈ ಪ್ರಾಪರ್ಟೀಸ್ (Make My Propertyz) ಶೀರ್ಷಿಕೆ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಈ ಪಂದ್ಯಾವಳಿಯಲ್ಲಿ 16 ತಂಡಗಳ ಒಟ್ಟು 32 ಆಟಗಾರರು ಭಾಗವಹಿಸಲಿದ್ದಾರೆ. ಗೋಲ್ಡನ್ ಫೆದರ್ಸ್‌ನಲ್ಲಿ ನಾಲ್ಕು ಅಂಕಣಗಳಲ್ಲಿ 21 ಅಂಕಗಳ ಮಾದರಿಯಲ್ಲಿ ಪಂದ್ಯಗಳು ನಡೆಯಲಿವೆ.

ರಿಯಲ್ ಎಸ್ಟೇಟ್ ಕ್ಷೇತ್ರದಿಂದ ಕ್ರೀಡೆಗೆ ಬೆಂಬಲ

ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ Make My Propertyz, ಕ್ರೀಡೆ ಮತ್ತು ಯುವಜನರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಟೂರ್ನಮೆಂಟ್‌ಗೆ ಬೆಂಬಲ ನೀಡಿದೆ. ಪ್ಲಾಟಿನಂ ಪ್ರಾಯೋಜಕರಾಗಿ MRCL Infrastructure Pvt Ltd ಕೈಜೋಡಿಸಿದೆ. ಮೋಹನ್ ಅವರು ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದು, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ಮಾಜಿ ಕಾರ್ಪೊರೇಟರ್ ಆರ್. ಆಂಜನಪ್ಪ ಅವರು ಗೋಲ್ಡ್ ಸ್ಪಾನ್ಸರ್ ಆಗಿ ಪಂದ್ಯಾವಳಿಗೆ ಬೆಂಬಲ ನೀಡಿದ್ದಾರೆ. ಸ್ಥಳೀಯವಾಗಿ ಜನರೊಂದಿಗೆ ನಿರಂತರ ಸಂಪರ್ಕ ಹೊಂದಿರುವ ಅವರು ಸಾರ್ವಜನಿಕ ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಎಂ. ಹರೀಶ್ ಕುಮಾರ್ ಅವರು ಕೂಡ ಕ್ರೀಡೆ ಮತ್ತು ಸಾಮಾಜಿಕ ಚಟುವಟಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. ಮುಂಬರುವ GBA ಚುನಾವಣೆಯಲ್ಲಿ ಸ್ಪರ್ಧಿಸುವ ಉದ್ದೇಶ ಹೊಂದಿರುವ ಹರೀಶ್, ಬಡವರು ಹಾಗೂ ಅಗತ್ಯವಿರುವವರಿಗೆ ನೆರವಾಗುವ ಉದ್ದೇಶದೊಂದಿಗೆ ಸಾರ್ವಜನಿಕ ಸೇವೆಯಲ್ಲಿ ಸಕ್ರಿಯರಾಗುವ ಆಶಯ ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ಗೋಲ್ಡನ್ ಫೆದರ್ಸ್ ಮೂಲಕ ಬ್ಯಾಡ್ಮಿಂಟನ್ ಪ್ರತಿಭೆಗಳಿಗೆ ಪ್ರೋತ್ಸಾಹ

ಪಂದ್ಯಾವಳಿ ನಡೆಯಲಿರುವ ಗೋಲ್ಡನ್ ಫೆದರ್ಸ್ ಸಂಸ್ಥೆಯ ಸಂಸ್ಥಾಪಕರಾದ ಗೌರೀಶ್ ಮತ್ತು ಲೋಕೇಶ್ ಅವರು ತಮ್ಮ ಕ್ಲಬ್ ಮೂಲಕ ಬ್ಯಾಡ್ಮಿಂಟನ್ ಆಟಗಾರರನ್ನು ಬೆಳೆಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಯುವ ಆಟಗಾರರಿಗೆ ತರಬೇತಿ, ಅಭ್ಯಾಸ ಹಾಗೂ ಸ್ಪರ್ಧೆಗಳಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸುವ ಮೂಲಕ ಸ್ಥಳೀಯ ಬ್ಯಾಡ್ಮಿಂಟನ್ ಪ್ರತಿಭೆಗಳನ್ನು ಬೆಳೆಸುವ ಕೆಲಸ ಮಾಡುತ್ತಿದ್ದಾರೆ.

ವಿಶೇಷವಾಗಿ ನಾಗದೇವನಹಳ್ಳಿಯಲ್ಲಿ ಗೌರೀಶ್ ಅವರು ಸಮಾಜ ಸೇವಾ ಕಾರ್ಯಗಳಲ್ಲೂ ಸಕ್ರಿಯರಾಗಿದ್ದು, ಸ್ಥಳೀಯವಾಗಿ ವಿವಿಧ ಸಮಾಜಮುಖಿ ಚಟುವಟಿಕೆಗಳಿಗೆ ತಮ್ಮದೇ ಆದ ರೀತಿಯಲ್ಲಿ ಕೊಡುಗೆ ನೀಡುತ್ತಿದ್ದಾರೆ.

Hosa Suddi ಮತ್ತು ಶಿವಕುಮಾರ್‌ರಿಂದ ಬೆಂಬಲ

ಕನ್ನಡ ಸುದ್ದಿಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿರುವ Hosasuddi.in (Hosa Suddi) ಕೂಡ ಈ ಪಂದ್ಯಾವಳಿಗೆ ಸಿಲ್ವರ್ ಪ್ರಾಯೋಜಕರಾಗಿ ಬೆಂಬಲ ನೀಡುತ್ತಿದೆ. ಸ್ಥಳೀಯ ಕ್ರೀಡಾ ಪ್ರತಿಭೆಗಳು, ಯುವಜನರ ಚಟುವಟಿಕೆಗಳು ಹಾಗೂ ಸಮಾಜಮುಖಿ ಕಾರ್ಯಕ್ರಮಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ Hosasuddi.in ನಿರಂತರವಾಗಿ ಬೆಂಬಲ ನೀಡುತ್ತಿದೆ.

ಇದೇ ವೇಳೆ ಶಿವಕುಮಾರ್ ಅವರು ಕೂಡ ಸಿಲ್ವರ್ ಸ್ಪಾನ್ಸರ್ ಆಗಿ ಪಂದ್ಯಾವಳಿಗೆ ಕೈಜೋಡಿಸಿದ್ದಾರೆ. ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಶಿವಕುಮಾರ್ ಅವರು ಕ್ರೀಡೆ ಹಾಗೂ ಯುವಜನರ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ.

ಟೂರ್ನಮೆಂಟ್ ಯಶಸ್ಸಿಗಾಗಿ SAM ಮತ್ತು ತಂಡದ ಭರ್ಜರಿ ಸಿದ್ಧತೆ

ಈ ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸುವ ಹೊಣೆಗಾರಿಕೆಯನ್ನು SAM ಮತ್ತು ಅವರ ತಂಡ ವಹಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಟೂರ್ನಮೆಂಟ್‌ನ ಪ್ರತಿಯೊಂದು ವ್ಯವಸ್ಥೆಯ ಮೇಲೂ ವಿಶೇಷ ಗಮನ ಹರಿಸಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಆಟಗಾರರ ನೋಂದಣಿ, ಪಂದ್ಯಗಳ ವ್ಯವಸ್ಥೆ, ಅಂಕಣ ಸಿದ್ಧತೆ, ಕಾರ್ಯಕ್ರಮದ ನಿರ್ವಹಣೆ, ಪ್ರಾಯೋಜಕರ ಸಮನ್ವಯ ಸೇರಿದಂತೆ ಹಲವು ಜವಾಬ್ದಾರಿಗಳನ್ನು ತಂಡವು ಸಮರ್ಪಕವಾಗಿ ನಿರ್ವಹಿಸುತ್ತಿದೆ.

ಟೂರ್ನಮೆಂಟ್‌ ಅನ್ನು ದೊಡ್ಡ ಮಟ್ಟದಲ್ಲಿ ಹಾಗೂ ಅಚ್ಚುಕಟ್ಟಾಗಿ ನಡೆಸಬೇಕು ಎಂಬ ಉದ್ದೇಶದಿಂದ SAM ಮತ್ತು ತಂಡ ಹಗಲಿರುಳು ಶ್ರಮಿಸುತ್ತಿದ್ದಾರೆ. ಕಾರ್ಯಕ್ರಮದ ಸಿದ್ಧತೆ ಮತ್ತು ಸಂಘಟನಾ ಕಾರ್ಯದಲ್ಲಿ ಅವರು ತೋರಿಸುತ್ತಿರುವ ಬದ್ಧತೆ ಹಾಗೂ ಪರಿಶ್ರಮಕ್ಕೆ ಟೂರ್ನಮೆಂಟ್‌ನ ಸದಸ್ಯರು ಮತ್ತು ಭಾಗಿಯಾಗಿರುವ ಹಲವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಪ್ರತಿಯೊಬ್ಬ ಆಟಗಾರನಿಗೂ ಉತ್ತಮ ಅನುಭವ ಸಿಗಬೇಕು, ಪಂದ್ಯಾವಳಿ ಯಾವುದೇ ಅಡಚಣೆಯಿಲ್ಲದೆ ನಡೆಯಬೇಕು ಮತ್ತು MMP ಶಟಲ್ ಟೂರ್ನಮೆಂಟ್ 2026 ದೊಡ್ಡ ಯಶಸ್ಸು ಕಾಣಬೇಕು ಎಂಬ ಗುರಿಯೊಂದಿಗೆ SAM ಮತ್ತು ತಂಡ ಕಾರ್ಯನಿರ್ವಹಿಸುತ್ತಿದೆ.

ಒಟ್ಟಿನಲ್ಲಿ, ‘One Team, One Dream, One Champion’ ಹಾಗೂ ‘Smash Limits, Create Legends’ ಎಂಬ ಘೋಷವಾಕ್ಯಗಳೊಂದಿಗೆ ನಡೆಯಲಿರುವ MMP ಶಟಲ್ ಟೂರ್ನಮೆಂಟ್ 2026 ಕೇವಲ ಬ್ಯಾಡ್ಮಿಂಟನ್ ಪಂದ್ಯಾವಳಿಯಾಗಿರದೆ, ಸ್ಥಳೀಯ ಕ್ರೀಡಾ ಪ್ರತಿಭೆಗಳನ್ನು ಬೆಳೆಸುವುದು, ಯುವಕರನ್ನು ಉತ್ತೇಜಿಸುವುದು ಮತ್ತು ಸಮಾಜಮುಖಿ ಚಟುವಟಿಕೆಗಳಿಗೆ ಬೆಂಬಲ ನೀಡುವ ವೇದಿಕೆಯಾಗಲಿದೆ.

Continue Reading

ಸಿನಿಮಾ

‘Toxic’ ವಿರುದ್ಧ ಮಾತನಾಡಿದವರಿಗೆ ಕಾನೂನು ನೋಟಿಸ್? ಚಿತ್ರತಂಡದ ನಡೆಗೆ ಕಾರಣವೇನು?

Published

on

By

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್, ಕಿಯಾರಾ ಅಡ್ವಾಣಿ ಹಾಗೂ ರುಕ್ಮಿಣಿ ವಸಂತ್ ಅಭಿನಯದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಇದೀಗ ಬಾಕ್ಸ್ ಆಫೀಸ್ ಮಾತ್ರವಲ್ಲದೆ ಕಾನೂನು ವಿಚಾರದಿಂದಲೂ ಸುದ್ದಿಯಾಗಿದೆ. ಚಿತ್ರದ ಕುರಿತು ಸುಳ್ಳು, ಮಾನಹಾನಿಕರ ಅಥವಾ ನಿಂದನಾತ್ಮಕ ವಿಷಯಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳದಂತೆ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿರುವುದಾಗಿ ವರದಿಯಾಗಿದೆ.

ಯೂಟ್ಯೂಬರ್ ಸೂರಜ್ ಕುಮಾರ್ ಅವರು ತಮ್ಮ ‘ಎಕ್ಸ್’ ಖಾತೆಯಲ್ಲಿ ತಮಗೆ ಬಂದಿರುವ ಕಾನೂನು ನೋಟಿಸ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಬೆಂಗಳೂರಿನ ಐಪ್ಲೆಕ್ಸ್ ಸಾಫ್ಟ್‌ವೇರ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಮೂಲಕ ಈ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್‌ಸ್ಟರ್ ಮೈಂಡ್ ಕ್ರಿಯೇಷನ್ಸ್ ಪರವಾಗಿ ನೋಟಿಸ್ ನೀಡಿದೆ ಎಂದು ವರದಿಯಾಗಿದೆ.

ನೋಟಿಸ್‌ನಲ್ಲಿ, ‘ಟಾಕ್ಸಿಕ್’ ಸಿನಿಮಾಗೆ ಸಂಬಂಧಿಸಿದಂತೆ ಡಿಜಿಟಲ್ ಮತ್ತು ಆನ್‌ಲೈನ್ ಮಾಧ್ಯಮಗಳಲ್ಲಿ ಕಂಟೆಂಟ್ ಹಂಚಿಕೊಂಡಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಪಿಟಿಐ ವರದಿ ಪ್ರಕಾರ, ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಆಗಸ್ಟ್ 22ರಂದು ವಿವಿಧ ಪ್ರತಿವಾದಿಗಳ ವಿರುದ್ಧ ಎಕ್ಸ್-ಪಾರ್ಟಿ ಮಧ್ಯಂತರ ತಡೆಯಾಜ್ಞೆ ನೀಡಿದೆ. ಚಿತ್ರದ ಕುರಿತು ಸುಳ್ಳು ಅಥವಾ ಮಾನಹಾನಿಕರ ವಿಷಯಗಳ ಪ್ರಕಟಣೆ ಮತ್ತು ಪ್ರಸಾರವನ್ನು ತಡೆಯುವಂತೆ ಆದೇಶಿಸಲಾಗಿದೆ ಎಂದು ವರದಿಯಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ, ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದೆ ಎಂದು ವರದಿಯಾಗಿದೆ. ಚಿತ್ರದ ಕುರಿತು ವಿಮರ್ಶೆಗಳು ಮತ್ತು ಸಾಮಾಜಿಕ ಮಾಧ್ಯಮ ಚರ್ಚೆಗಳು ಮುಂದುವರಿದಿರುವ ಬೆನ್ನಲ್ಲೇ ಈ ಕಾನೂನು ಬೆಳವಣಿಗೆ ಗಮನ ಸೆಳೆದಿದೆ.

Continue Reading

Trending