Connect with us

ರಾಜಕೀಯ

ನೇರವಾಗಿ ಸತ್ಯ ಹೇಳಲು ಭಯವೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

Published

on

ಸರಿ, ನಾವೆಲ್ಲಾ ಕಳ್ಳರೇ ಒಪ್ಕೊತೀನಿ: ಕುಮಾರಸ್ವಾಮಿಯವರೇ ನೀವು ಸತ್ಯ ಹರಿಶ್ಚಂದ್ರ ಏನೂ ತಿಂದಿಲ್ಲ ಅಂತಾ ಆಣೆ ಮಾಡಿ'
ನೇರವಾಗಿ ಸತ್ಯ ಹೇಳಲು ಭಯವೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು; ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಟ್ವೀಟ್ ಸಮರ ಸಾರಿದ್ದಾರೆ, ಕಳೆದ ಬಾರಿಯ ಮೈತ್ರಿ ಸರ್ಕಾರದ ಪತನಕ್ಕೆ ಸಿದ್ದರಾಮಯ್ಯರನ್ನು ಹೊಣೆಯಾಗಿಸಿರುವ ಎಚ್ಡಿಕೆ, ಕುಣಿಯಲಾರವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ, ಅದರೆ ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ಮೈತ್ರಿ ದ್ರೋಹಕ್ಕೆ ಏನು ಹೇಳುವುದು ಎಂದು ಕುಟುಕಿದ್ದಾರೆ,
ಸಿದ್ದರಾಮಯ್ಯನವರೇ ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ, ದೈಂiÀರ್iವಾಗಿ, ನೇರವಾಗಿ ಸತ್ಯ ಹೇಳಲು ಭಯವೇ, ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ ಎಂದು ಕಟುವಾಗಿ ಪ್ರಶ್ನಸಿದ್ದಾರೆ,
ಬೆಕ್ಕು ಕಣ್ಮುಚ್ಚಿ ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ, ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದು ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನು ಹಂಚಿಕೆ ಮಾಡುತ್ತಿದ್ದೆವು, ನೀವು ಕೇಳಬಹುದಿತ್ತು, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು ಎಂದಿದ್ದಾರೆ,
ಇಷ್ಟಕ್ಕೂ ಇನ್ನೊಬ್ಬರ ಇದ್ದ ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ, ಅದೆಂಥ ಶೋಭೆ? ಛೀ ಛೀ ವೆಸ್ಟ್ ಎಂಡ್‍ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ, ಅದರೆ ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಗದಲ್ಲಿ ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಸವಾಲು ಹಾಕಿದ್ದಾರೆ,

ರಾಜ್ಯ

B.Nagendra ರಾಜೀನಾಮೆ ಫಿಕ್ಸ್ ಆಯ್ತಾ? ವಾಲ್ಮೀಕಿ ಹಗರಣದಲ್ಲಿ ಕಾಂಗ್ರೆಸ್‌ನ ‘ಡ್ಯಾಮೇಜ್ ಕಂಟ್ರೋಲ್’

Published

on

By

ಬೆಂಗಳೂರು: ಕರ್ನಾಟಕದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಇದೀಗ ಮತ್ತೊಮ್ಮೆ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಚಿವ B.Nagendra ಅವರ ರಾಜೀನಾಮೆಗೆ ಬಿಜೆಪಿ ಸೇರಿದಂತೆ ಪ್ರತಿಪಕ್ಷಗಳು ನಿರಂತರವಾಗಿ ಒತ್ತಾಯಿಸುತ್ತಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಈ ವಿಚಾರವಾಗಿ ಚರ್ಚೆ ನಡೆದಿದೆ ಎಂಬ ಮಾಹಿತಿ ಹೊರಬಿದ್ದಿದೆ.

ಇತ್ತೀಚಿನ ಬೆಳವಣಿಗೆಯಲ್ಲಿ ನಾಗೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಸಂಪರ್ಕಿಸಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧತೆ ವ್ಯಕ್ತಪಡಿಸಿದ್ದಾರೆ ಎಂದು ಕೆಲವು ವರದಿಗಳು ತಿಳಿಸಿವೆ. ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ಸ್ಥಾನದಿಂದ ಕೆಳಗಿಳಿಯಲು ಸಿದ್ಧ ಎಂದು ಅವರು ಹೇಳಿರುವುದಾಗಿ ವರದಿಯಾಗಿದೆ. ಆದರೆ, ನಾಗೇಂದ್ರ ಅವರ ಕಚೇರಿ ಈ ವರದಿಗಳನ್ನು ತಳ್ಳಿಹಾಕಿದ್ದು, ರಾಜೀನಾಮೆ ಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಈ ನಡುವೆ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದೆ. ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಾಗೇಂದ್ರ ವಿರುದ್ಧ ತನಿಖೆ ಮುಂದುವರಿಸಲು ಸಿಬಿಐ ಕರ್ನಾಟಕ ರಾಜ್ಯಪಾಲರಿಂದ ಅನುಮತಿ ಕೋರಿದೆ ಎಂದು ವರದಿಯಾಗಿದೆ. ಪ್ರಕರಣದಲ್ಲಿ ಸುಮಾರು 89 ಕೋಟಿ ರೂ. ಅಕ್ರಮಗಳ ಆರೋಪ ಕೇಳಿಬಂದಿದ್ದು, ನಾಗೇಂದ್ರ ವಿರುದ್ಧ ಪ್ರತಿಪಕ್ಷಗಳು ರಾಜಕೀಯವಾಗಿ ಒತ್ತಡ ಹೆಚ್ಚಿಸಿವೆ.

ಆಗಸ್ಟ್ 24ರಂದು ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿದ್ದರು. ಈ ವಿಚಾರವಾಗಿ ನಡೆದ ಪ್ರತಿಭಟನೆ ಮತ್ತು ವಿಧಾನಮಂಡಲದ ಗದ್ದಲದಿಂದ ರಾಜ್ಯ ಸರ್ಕಾರದ ಮೇಲಿನ ರಾಜಕೀಯ ಒತ್ತಡ ಮತ್ತಷ್ಟು ಹೆಚ್ಚಾಗಿದೆ.

ನಾಗೇಂದ್ರ ಅವರು ಈ ಹಿಂದೆ ಕೂಡ ವಾಲ್ಮೀಕಿ ನಿಗಮದ ಪ್ರಕರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಂತರ 2026ರ ಆಗಸ್ಟ್‌ನಲ್ಲಿ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಮತ್ತು ಪ್ರತಿಪಕ್ಷಗಳ ಪ್ರತಿಭಟನೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ ಅವರ ಸಚಿವ ಸ್ಥಾನ ಮತ್ತೊಮ್ಮೆ ರಾಜಕೀಯ ಚರ್ಚೆಯ ಕೇಂದ್ರವಾಗಿದೆ.

ಹೀಗಾಗಿ ನಾಗೇಂದ್ರ ಅವರ ರಾಜೀನಾಮೆ ಕುರಿತು ಅಂತಿಮ ನಿರ್ಧಾರ ಯಾವಾಗ ಹೊರಬೀಳಲಿದೆ ಎಂಬುದೇ ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ನ ಮುಂದಿನ ನಿರ್ಧಾರ ಮತ್ತು ನಾಗೇಂದ್ರ ಅವರ ಅಧಿಕೃತ ನಿಲುವಿನ ಬಳಿಕವಷ್ಟೇ ಈ ಬೆಳವಣಿಗೆಗೆ ಸ್ಪಷ್ಟತೆ ಸಿಗಲಿದೆ.

Continue Reading

ಬೆಂಗಳೂರು

Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!

Published

on

By

ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.

ಖಾಲಿ ಸೈಟ್‌ ಸ್ವಚ್ಛವಾಗಿಡುವುದು ಕಡ್ಡಾಯ

2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.

ಕಸ ತೆರವು ಮಾಡದಿದ್ದರೆ ಭಾರಿ ದಂಡ!

ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.

ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.

  • 20×30 ಸೈಟ್‌: ₹19,200ರಿಂದ ದಂಡ
  • 30×40 ಸೈಟ್‌: ₹38,400ರವರೆಗೆ ದಂಡ
  • ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ

ಹೀಗಾಗಿ ಖಾಲಿ ಸೈಟ್‌ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.

ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ

ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Continue Reading

ರಾಜ್ಯ

Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ

Published

on

By

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಫಲವತ್ತಾದ ಜಮೀನು ಕೈಗಾರಿಕೆಗೆ?

ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.

ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?

ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ

Continue Reading

Trending