ದೇಶ
ಪಾಪಿ ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸಿ-ಓವೈಸಿ
ಹೈದರಾಬಾದ್: ಜಿಹಾದ್ ಹೆಸರಿನಲ್ಲಿ ಅಮಾಯಕರನ್ನು ಕೊಲ್ಲುವವರನ್ನು ಖಂಡಿಸುತ್ತೇನೆ ಎಂದು ಎಐಎಂಐಎಂ ಮುಖ್ಯಸ್ಧ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ,
ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿ ನಡೆದ ಎರಡು ವಾರಗಳ ನಂತರ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ಭಾರತ ಮಿಲಿಟಿರಿ ಕಾರ್ಯಾಚರಣೆ ನಡೆಸಿದ್ದು, ಆಪರೇಷನ್ ಸಿಂಧೂರ ಹೆಸರಿನಲ್ಲಿ ಉಗ್ರರ ನೆಲೆಗಳನ್ನು ಭಾರತೀಯ ಸೇನೆ ನಾಶ ಮಾಡಿದೆ, ಇದೀಗ ಭಾರತದ ಪ್ರತೀಕಾರಕ್ಕೆ ಸಂಬಂಧಿಸದಂತೆ ಓವೈಸಿ ಪ್ರತಿಕ್ರಿಯೆ ನೀಡಿದ್ದಾರೆ, ಪಾಕಿಸ್ತಾನದ 9 ಸ್ಧಳಗಳಲ್ಲಿ ದಾಳಿ ಮಾಡುವ ಮೂಲಕ ಉಗ್ರರಿಗೆ ತಿರುಗೇಟು ನೀಡಿರುವ ಭಾರತೀಯ ಸೇನೆಯ ದಿಟ್ಟ ಕ್ರಮವನ್ನು ಓವೈಸಿ ಮುಕ್ತ ಕಂಠದಿಂದ ಶ್ಲಾಘಿಸಿದ್ದು, ಪಾಕಿಸ್ತಾನದ ಭಯೋತ್ಪಾದನೆಯ ಮೂಲ ಯಾರೇ ಆಗಲಿ ಜಿಹಾದ್ ಹೆಸರಿನಲ್ಲಿ ಅಮಾಯಕರನ್ನು ಕೊಲ್ಲುವವರನ್ನು ಖಂಡಿಸುತ್ತೇನೆ ಎಂದಿದ್ದಾರೆ,
ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಓವೈಸಿ ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸಲು ಸೇನೆಗೆ ಕರೆ ನೀಡಿದ್ದಾರೆ,
ನಮ್ಮ ರಕ್ಷಣಾ ಪಡೆಗಳು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಿದ ಸರ್ಜಿಕಲ್ ದಾಳಿಯನ್ನು ನಾನು ಸ್ವಾಗತಿಸುತ್ತೇನೆ, ಮತ್ತೊಂದು ಪಹಲ್ಗಾಮ್ ಘಟನೆ ಇನ್ನೆಂದೂ ಸಂಭವಿಸದಂತೆ ಪಾಕಿಸ್ತಾನಕ್ಕೆ ಪಾಠ ಕಲಿಸಬೇಕು, ಪಾಕಿಸ್ತಾನದಲ್ಲಿರುವ ಉಗ್ರರ ಕೇಂದ್ರಗಳನ್ನು ಸಂಪೂರ್ಣವಾಗಿ ನಾಶಪಡಿಸಬೇಕು, ಜೈ ಹಿಂದ್ ಎಂದು ಬರೆದಿದ್ದಾರೆ,