ರಾಜ್ಯ
ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾಂತಿಯುತವಾಗಿ ತೆರೆಕಂಡ ದತ್ತಮಾಲಾ ಅಭಿಯಾನ.
ಚಿಕ್ಕಮಗಳೂರು,ತಾಲೂಕಿನ ವಿವಾದಿತ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನದ ಮುಕ್ತಾಯದ ದಿನವಾದ ಇಂದು ಸರ್ಕಾರ ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ದಾಖಲಾತಿಗಳನ್ನು ಕೂಲಂಕುಶವಾಗಿ ಪರಿಶೀಲಿಸಿ ದತ್ತಪೀಠವನ್ನ ಹಿಂದೂಗಳಿಗೆ ಒಪ್ಪಿಸಬೇಕೆಂದು ಆಗ್ರಹಿಸಿ ಧರ್ಮ ಸಭೆಯಲ್ಲಿ ಕೇಳಿ ಬಂದಿದೆ. ದತ್ತಪೀಠ ಸಂಪೂರ್ಣ ಹಿಂದುಗಳ ಪೀಠವಾಗಬೇಕು. ಸರ್ಕಾರ ಒಂದು ವೇಳೆ ದತ್ತಪೀಠ ಎಂಬ ನಾಮಪಾಲಕವನ್ನು ತೆಗೆದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ. ಇಲ್ಲಿರುವ ಗೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರಿಸಿ ಹಿಂದೂಗಳ ಪೂಜೆಗೆ ಅನುಕೂಲ ಮಾಡಿಕೊಡಬೇಕೆಂದು ಪ್ರಮೋದ್ ಮುತಾಲಿಕ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರಮೋದ್ ಮುತಾಲಿಕ್, ಗಂಗಾಧರ್ ಕುಲಕರ್ಣಿ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಧರ್ಮ ಸಭೆ
ನ.05ರ ಬೆಳಗ್ಗೆ ಚಿಕ್ಕಮಗಳೂರು ನಗರದ ಶಂಕರಮಠದ ಬಳಿ ಶ್ರೀ ರಾಮ ಸೇನೆಯ ಪ್ರಮೋದ್ ಮುತಾಲಿಕ್ ಗಂಗಾಧರ್ ಕುಲಕರ್ಣಿ ನೇತೃತ್ವದಲ್ಲಿ ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಧರ್ಮ ಸಭೆ ನಡೆಸಿದ್ದರು. ಧರ್ಮ ಸಭೆಯ ಬಳಿಕ ಆರಂಭಗೊಂಡ ಶೋಭಾಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಸಾಗಿ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ತೆರಳಿ, ಮಳೆಯಲ್ಲೇ ದತ್ತ ಪಾದುಕೆ ದರ್ಶನ ಪಡೆದರು. ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದ ಬಳಿಯಿರುವ ಹೋಮ ಮಂಟಪದಲ್ಲಿ ಹೋಮ-ಹವನ ನಡೆಸಿದರು. ಮಾಲಾಧಾರಿಗಳ ಜೊತೆ ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದು, ವಿವಿಧ ಮಠಗಳ ಸ್ವಾಮೀಜಿಗಳು, ದತ್ತಪೀಠವನ್ನ ಹಿಂದುಗಳಿಗೆ ಒಪ್ಪಿಸಬೇಕು. ಇಲ್ಲವಾದ್ರೆ, ಸರ್ಕಾರದ ವಿರುದ್ಧ ಹೋರಾಡೋದಾಗಿ ಎಚ್ಚರಿಸಿದರು.ರಾಜ್ಯದ ಮೂಲೆ ಮೂಲೆಗಳಿಂದ ಐದು ಸಾವಿರಕ್ಕೂ ಅಧಿಕ ದತ್ತಮಾಲಾ ಧರಿಗಳು ಆಗಮಿಸಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಸೇರಿದಂತೆ ಜಿಲ್ಲೆಯಾದ್ಯಂತ 2 ಸಾವಿರಕ್ಕೂ ಅಧಿಕ ಪೊಲೀಸರನ್ನ ನಿಯೋಜನೆ ಮಾಡಲಾಗಿದ್ದು, ದತ್ತಮಾಲಾ ಅಭಿಯಾನ ಪೊಲೀಸ್ ಬಿಗಿ ಭದ್ರತೆಯಲ್ಲಿ ಶಾಂತಿಯುತವಾಗಿ ತೆರೆ ಕಂಡಿದೆ. ಒಟ್ಟಾರೆ, ಕಳೆದೊಂದು ವಾರದಿಂದ ಕೆಸರಿಮಯವಾಗಿದ್ದ ಕಾಫಿನಾಡು, ಪೊಲೀಸರು ಸರ್ಪಗಾವಲಿನಿಂದ ಯಾವುದೇ ಅಹಿತಕರ ಘಟನೆ ನಡೆಯದೇ ಎಲ್ಲಾ ಶಾಂತರೀತಿಯಲ್ಲಿ ಶ್ರೀ ರಾಮ ಸೇನೆ ದತ್ತಮಾಲಾ ಅಭಿಯಾನಕ್ಕೆ ತೆರೆ ಬಿದ್ದಿದ್ದು. ಪ್ರತಿ ವರ್ಷದಂತೆ ಈ ವರ್ಷವೂ ದತ್ತಪೀಠ ಹಿಂದುಗಳ ಪೀಠ, ಅದನ್ನ ಹಿಂದೂಗಳಿಗೆ ಒಪ್ಪಿಸಬೇಕೆಂಬ ಕೂಗು ಬಲವಾಗಿತ್ತು.
ಅಪರಾಧ
Renukaswamy Murder Case ನಲ್ಲಿ ಮಹತ್ವದ ಬೆಳವಣಿಗೆ: ಮಾಫಿ ಸಾಕ್ಷಿಯಾದ ಪ್ರದೋಷ್, ಮುಂದೆ ಏನಾಗಲಿದೆ?
ಬೆಂಗಳೂರು: ಚಿತ್ರದುರ್ಗ ಮೂಲದ Renukaswamy Murder Case ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಸಲ್ಲಿಸಿದ್ದ ಮಾಫಿ ಸಾಕ್ಷಿ ಅರ್ಜಿಯನ್ನು ಬೆಂಗಳೂರಿನ ನ್ಯಾಯಾಲಯ ಪುರಸ್ಕರಿಸಿದ್ದು, ಇದೀಗ ಅವರು ಪ್ರಕರಣದಲ್ಲಿ ಸರ್ಕಾರದ ಪರ ಸಾಕ್ಷಿ ನುಡಿಯಲು ಅವಕಾಶ ದೊರೆತಿದೆ.
ನಗರದ 59ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಪ್ರದೋಷ್ ರಾವ್ ಸಲ್ಲಿಸಿದ್ದ ಅರ್ಜಿಯ ಕುರಿತು ಸುದೀರ್ಘ ವಿಚಾರಣೆ ನಡೆದಿತ್ತು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಧೀಶೆ ಸುಜಾತ ಎಂ. ಸಮಭ್ರಾಣಿ ಅವರು ಮಂಗಳವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.
ದರ್ಶನ್ ಪರ ವಕೀಲರ ಆಕ್ಷೇಪ ತಿರಸ್ಕಾರ
ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಪರಿಗಣಿಸಬಾರದು ಎಂದು ನಟ ದರ್ಶನ್ ಪರ ವಕೀಲರು ನ್ಯಾಯಾಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಅವರ ಅರ್ಜಿಯನ್ನು ತಿರಸ್ಕರಿಸುವಂತೆ ಕೋರ್ಟ್‌ಗೆ ಮನವಿ ಮಾಡಲಾಗಿತ್ತು.
ಆದರೆ, ದರ್ಶನ್ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಗಳನ್ನು ನ್ಯಾಯಾಲಯ ಪರಿಗಣಿಸದೆ, ಪ್ರದೋಷ್ ರಾವ್ ಅವರ ಮಾಫಿ ಸಾಕ್ಷಿ ಅರ್ಜಿಯನ್ನು ಅಂಗೀಕರಿಸಿದೆ. ಹೀಗಾಗಿ ಪ್ರಕರಣದ ತನಿಖೆ ಹಾಗೂ ಮುಂದಿನ ವಿಚಾರಣೆಯಲ್ಲಿ ಪ್ರದೋಷ್ ನೀಡಲಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಪ್ರಕರಣಕ್ಕೆ ಸಿಗಲಿದೆಯೇ ಮಹತ್ವದ ತಿರುವು?
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಇದೀಗ ಸರ್ಕಾರದ ಪರ ಮಾಫಿ ಸಾಕ್ಷಿಯಾಗಿ ನ್ಯಾಯಾಲಯದ ಮುಂದೆ ಹೇಳಿಕೆ ನೀಡಲಿದ್ದಾರೆ. ಪ್ರಕರಣದ ಘಟನೆಗಳು, ಆರೋಪಿಗಳ ಪಾತ್ರ ಹಾಗೂ ಕೃತ್ಯದ ಬಳಿಕ ನಡೆದ ಬೆಳವಣಿಗೆಗಳ ಕುರಿತು ಅವರು ನೀಡಬಹುದಾದ ಮಾಹಿತಿ ತನಿಖೆಗೆ ಪ್ರಮುಖವಾಗುವ ಸಾಧ್ಯತೆಯಿದೆ.
ವಿಶೇಷವಾಗಿ ಕೊಲೆ ನಡೆದ ಸ್ಥಳದಲ್ಲಿನ ಘಟನೆಗಳು ಹಾಗೂ ಬಳಿಕ ಸಾಕ್ಷ್ಯ ನಾಶಕ್ಕೆ ನಡೆದಿತ್ತೆನ್ನಲಾದ ಪ್ರಯತ್ನಗಳ ಕುರಿತು ಪ್ರದೋಷ್ ನೀಡುವ ಹೇಳಿಕೆ ಪ್ರಕರಣದ ದಿಕ್ಕಿನ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
ಮಾಫಿ ಸಾಕ್ಷಿಯಾಗಲು ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಂದಿನ ಹಂತದಲ್ಲಿ ಪ್ರದೋಷ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆ ನಡೆಯಲಿದೆ. ಅವರ ಹೇಳಿಕೆಯಲ್ಲಿ ಯಾವೆಲ್ಲ ಪ್ರಮುಖ ಅಂಶಗಳು ಹೊರಬರಲಿವೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.
ಬೆಂಗಳೂರು
Kannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!
ಬೆಂಗಳೂರು: Kannada Sahitya Parishat ನ ಪ್ರತಿಷ್ಠಿತ **‘ನಾಡೋಜ ಡಾ. ಮನು ಬಳಿಗಾರ್ ಸ್ಥಾಪಿಸಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ದತ್ತಿ ಪ್ರಶಸ್ತಿ’**ಗೆ 2025 ಹಾಗೂ 2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷರಾದ ನಾಡೋಜ ಡಾ. ಮನು ಬಳಿಗಾರ್ ಅವರು ತಮ್ಮ ಮಾಸಿಕ ಗೌರವ ಸಂಭಾವನೆಯನ್ನು ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿರುವ ಹಿರಿಯ ಸಾಹಿತಿಗಳನ್ನು ಗೌರವಿಸಲು ಬಳಸುವ ಉದ್ದೇಶದಿಂದ ಈ ದತ್ತಿ ಪ್ರಶಸ್ತಿಯನ್ನು ಸ್ಥಾಪಿಸಿದ್ದಾರೆ.
60 ವರ್ಷ ಪೂರ್ಣಗೊಳಿಸಿರುವ ಒಬ್ಬ ಲೇಖಕ ಹಾಗೂ ಒಬ್ಬ ಲೇಖಕಿಯನ್ನು ಪ್ರತಿ ವರ್ಷ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ. ಪ್ರಶಸ್ತಿಯು ತಲಾ 30 ಸಾವಿರ ರೂ. ನಗದು, ಸ್ಮರಣಿಕೆ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. 2021ರಿಂದ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗುತ್ತಿದೆ.

2025ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
2025ನೇ ಸಾಲಿಗೆ ಬೆಂಗಳೂರಿನ ಹಿರಿಯ ವಿಮರ್ಶಕ ಎಸ್.ಆರ್. ವಿಜಯಶಂಕರ ಹಾಗೂ ಹಿರಿಯ ಸಾಹಿತಿ ಡಾ. ಲತಾ ಗುತ್ತಿ ಅವರನ್ನು ಆಯ್ಕೆ ಮಾಡಲಾಗಿದೆ.
2026ನೇ ಸಾಲಿನ ಪ್ರಶಸ್ತಿ ಪುರಸ್ಕೃತರು
2026ನೇ ಸಾಲಿಗೆ ಬಾಗಲಕೋಟೆಯ ಹಿರಿಯ ಸಾಹಿತಿ ಡಾ. ಶ್ರೀರಾಮ ಇಟ್ಟಣ್ಣವರ ಹಾಗೂ ಬೆಂಗಳೂರಿನ ಹಿರಿಯ ಲೇಖಕಿ ಡಾ. ಪದ್ಮಿನಿ ನಾಗರಾಜು ಅವರನ್ನು ಆಯ್ಕೆ ಮಾಡಲಾಗಿದೆ.
ಆಯ್ಕೆ ಸಮಿತಿಯಲ್ಲಿ ಯಾರೆಲ್ಲ ಇದ್ದರು?
ಆಗಸ್ಟ್ 25, 2026ರಂದು ಆಡಳಿತಾಧಿಕಾರಿ ಕೆ.ಎ. ದಯಾನಂದ, ಭಾ.ಆ.ಸೇ. ಅವರ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ. ಸಂತೋಷ್ ಹಾನಗಲ್ಲ, ಹಂಪಿ ಕನ್ನಡ ವಿಶ್ವವಿದ್ಯಾಲಯದ ನಿವೃತ್ತ ಕುಲಪತಿ ಡಾ. ಮಲ್ಲಿಕಾ ಘಂಟಿ ಹಾಗೂ ದತ್ತಿ ದಾನಿಗಳಾದ ನಾಡೋಜ ಡಾ. ಮನು ಬಳಿಗಾರ್ ಉಪಸ್ಥಿತರಿದ್ದರು.
ಎರಡು ವರ್ಷಗಳ ಪ್ರಶಸ್ತಿ ಪುರಸ್ಕೃತರನ್ನು ಸಮಿತಿಯು ಸರ್ವಾನುಮತದಿಂದ ಆಯ್ಕೆ ಮಾಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಪರಾಧ
Mandya ಜೈಲಲ್ಲೂ ‘ರಾಜಾತಿಥ್ಯ’ ಆರೋಪ: ವಿಚಾರಣಾಧೀನ ಖೈದಿಗೆ ವಿಶೇಷ ವಾರ್ಡ್, ಗೆಳತಿಗೂ ಪ್ರವೇಶ!
ಮಂಡ್ಯ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಖೈದಿಗಳಿಗೆ ವಿಶೇಷ ಸೌಲಭ್ಯ ನೀಡಿದ ಆರೋಪದ ಬೆನ್ನಲ್ಲೇ ಇದೀಗ Mandya ಜಿಲ್ಲಾ ಕಾರಾಗೃಹದಲ್ಲೂ ಇದೇ ರೀತಿಯ ಆರೋಪ ಕೇಳಿಬಂದಿದೆ. ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲದ ವಿಚಾರಣಾಧೀನ ಖೈದಿಯೊಬ್ಬನನ್ನು ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಇರಿಸಿರುವುದು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ (KSLSA) ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ಅಧಿಕಾರಿಗಳ ದಿಢೀರ್ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ.
ಲೋಕಾಯುಕ್ತ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಮಹಮದ್ ಹುಸೇನ್ ಎಂಬ ವಿಚಾರಣಾಧೀನ ಖೈದಿ ಮಿಮ್ಸ್ ಆಸ್ಪತ್ರೆಯ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ, ಆತನಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ಆಸ್ಪತ್ರೆ ಅಧೀಕ್ಷಕರೇ ಮಾಹಿತಿ ನೀಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದರ ನಡುವೆ ಮತ್ತೊಂದು ಅಚ್ಚರಿಯ ವಿಚಾರವೂ ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಖೈದಿ ಇದ್ದ ವಿಶೇಷ ವಾರ್ಡ್‌ನಲ್ಲಿ ಮಹಿಳೆಯೊಬ್ಬರು ಪತ್ತೆಯಾಗಿದ್ದು, ವಿಚಾರಣೆ ವೇಳೆ ಆಕೆ ಖೈದಿಯ ಗೆಳತಿ ಎಂದು ತಿಳಿದುಬಂದಿದೆ ಎನ್ನಲಾಗಿದೆ. ನ್ಯಾಯಾಲಯದ ಅನುಮತಿ ಪಡೆಯದೆ ಆಕೆಗೆ ಖೈದಿಯನ್ನು ಭೇಟಿಯಾಗಲು ಅವಕಾಶ ನೀಡಲಾಗಿತ್ತೇ ಎಂಬ ಪ್ರಶ್ನೆ ಇದೀಗ ಎದುರಾಗಿದೆ.
ಲೋಕಾಯುಕ್ತ ಪ್ರಕರಣದಲ್ಲಿ ಜೈಲು ಸೇರಿದ್ದ ಖೈದಿ
ಶ್ರೀರಂಗಪಟ್ಟಣ ತಾಲೂಕು ಭೂ ದಾಖಲೆಗಳ ಕಚೇರಿಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಮಹಮದ್ ಹುಸೇನ್ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಜುಲೈ 2ರಂದು ದಾಳಿ ನಡೆಸಿದ್ದ ಅಧಿಕಾರಿಗಳು ಸರ್ಕಾರಿ ತಂತ್ರಾಂಶದಲ್ಲಿ ದಾಖಲೆಗಳ ಡಿಜಿಟಲೀಕರಣ, ಆಕಾರ್‌ಬಂಧ್ ದಾಖಲೆ ಹಾಗೂ ನಕಲಿ ದಾಖಲೆ ಸೃಷ್ಟಿಗೆ ಸಹಕರಿಸಿದ ಆರೋಪದ ಹಿನ್ನೆಲೆಯಲ್ಲಿ ಕ್ರಮ ಕೈಗೊಂಡಿದ್ದರು. ಜುಲೈ 3ರಂದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು.
ಆರೋಪಿಯ ವಿರುದ್ಧ ಬಿಎನ್‌ಎಸ್‌ನ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಜೈಲು ವೈದ್ಯಾಧಿಕಾರಿಯ ಸಲಹೆಯ ಮೇರೆಗೆ ಮಹಮದ್ ಹುಸೇನ್ ಅವರನ್ನು ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದ ಆಸ್ಪತ್ರೆ ಅಧೀಕ್ಷಕ
ಆದರೆ ಮಿಮ್ಸ್ ಆಸ್ಪತ್ರೆ ಅಧೀಕ್ಷಕ ಡಾ. ಶಿವಕುಮಾರ್ ಅವರು ಖೈದಿಗೆ ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಇಲ್ಲ ಎಂದು ತಿಳಿಸಿದ್ದಾರೆ. ಅಲ್ಲದೆ, ಆತನನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಸೋಮವಾರ ಸಂಜೆ ಮಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ KSLSA ಹಾಗೂ DLSA ಅಧಿಕಾರಿಗಳ ತಂಡ ಆಸ್ಪತ್ರೆ ಮತ್ತು ಜೈಲಿನಲ್ಲಿನ ವ್ಯವಸ್ಥೆಗಳ ಕುರಿತು ಪರಿಶೀಲನೆ ನಡೆಸಿತು. ವಿಶೇಷ ವಾರ್ಡ್‌ನಲ್ಲಿ ಖೈದಿಯನ್ನು ಇರಿಸಿರುವುದು, ಮಹಿಳೆಗೆ ಪ್ರವೇಶ ನೀಡಿರುವುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಪಡೆದುಕೊಂಡಿದ್ದಾರೆ.
ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ DLSA ಅಧ್ಯಕ್ಷ ಚಂದ್ರಶೇಖರ ಸಿ., KSLSA ಸದಸ್ಯ ಕಾರ್ಯದರ್ಶಿ ಶಶಿಧರ ಶೆಟ್ಟಿ ಸೇರಿದಂತೆ ಅಧಿಕಾರಿಗಳ ತಂಡ ಪರಿಶೀಲನೆ ನಡೆಸಿದೆ.
ಖೈದಿಗೆ ವಿಶೇಷ ವಾರ್ಡ್ ಸೌಲಭ್ಯ ನೀಡಲು ಹಾಗೂ ಮಹಿಳೆಗೆ ಪ್ರವೇಶ ಕಲ್ಪಿಸಲು ಅಗತ್ಯ ಅನುಮತಿ ಪಡೆಯಲಾಗಿತ್ತೇ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ಪರಿಶೀಲನಾ ವರದಿ ಮತ್ತು ಅಧಿಕಾರಿಗಳಿಂದ ಪಡೆಯುವ ಮಾಹಿತಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
-
ಬೆಂಗಳೂರು15 ಗಂಟೆಗಳು agoKannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!
-
ಬೆಂಗಳೂರು22 ಗಂಟೆಗಳು agoB Nagendra ವಿರುದ್ಧ ಬಿಜೆಪಿ-ಜೆಡಿಎಸ್ ದೂರು: ರಾಜ್ಯಪಾಲರಿಗೆ ಮನವಿ ಸಲ್ಲಿಕೆ
-
ದೇಶ20 ಗಂಟೆಗಳು agoIran ಮೇಲೆ America ದ ಹೊಸ ನಿರ್ಬಂಧ! ಭಾರತದ ಅಕ್ಕಿ, ಚಹಾ, ಔಷಧ ರಫ್ತಿಗೆ ಎದುರಾಯ್ತಾ ದೊಡ್ಡ ಹೊಡೆತ?
-
ದೇಶ19 ಗಂಟೆಗಳು agoChina Robot Revolution ರೋಬೋಟ್ ಗಳಿಗೆ ತರಬೇತಿ, ಯುವಕರಿಗೆ ಹೊಸ ಪಾಠ! ಚೀನಾ ಭವಿಷ್ಯದ ಉದ್ಯೋಗಕ್ಕಾಗಿ ಮಾಡುತ್ತಿರುವುದೇನು?
-
ಬೆಂಗಳೂರು21 ಗಂಟೆಗಳು agoUrvashi ಚಿತ್ರಮಂದಿರ ನೆಲಸಮಕ್ಕೆ ದಿಢೀರ್ ಬ್ರೇಕ್! Karnataka High Court ಆದೇಶದ ಹಿಂದಿರುವ ಕಾರಣವೇನು?
-
ಬೆಂಗಳೂರು21 ಗಂಟೆಗಳು agoSignal ನಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಕಾರು ಡಿಕ್ಕಿ! 50 ಅಡಿ ದೂರಕ್ಕೆ ಹಾರಿ ಯುವಕ ಸಾವು
-
ದೇಶ21 ಗಂಟೆಗಳು agoCentre Government ವಿರುದ್ಧ ಮತ್ತೆ ಸಿಡಿದೆದ್ದ CJP! ಸೆ.5ರಂದು ನಡೆಯಲಿದೆ ಬೃಹತ್ ಪ್ರತಿಭಟನಾ ಮೆರವಣಿಗೆ
-
ದೇಶ18 ಗಂಟೆಗಳು ago‘ನನ್ನ ಮಗನನ್ನೇ ಕೊಲ್ಲಲು ಪ್ರಯತ್ನಿಸಿತ್ತು’! Iran ವಿರುದ್ಧ Netanyahu ಗಂಭೀರ ಆರೋಪ
