ಬೆಂಗಳೂರು
ಬಜೆಟ್ನ ಸಂಪೂರ್ಣ ಮಾಹಿತಿ – KARNATAKA BUDGET 2025 LIVE
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಒಟ್ಟು 4,09,549 ಕೋಟಿ ರೂ. ಗಾತ್ರದ ರಾಜ್ಯ ಬಜೆಟ್ ಮಂಡಿಸಿದರು. ವಿಧಾನಸಭೆಯಲ್ಲಿ ಸುಮಾರು 3.30 ಗಂಟೆಗಳ ಕಾಲ ಸಿಎಂ ಬಜೆಟ್ ಪ್ರತಿ ಓದಿದರು. ಈ ಬಾರಿಯ ಬಜೆಟ್ನಲ್ಲಿ 19,262 ಕೋಟಿ ರೂ. ರಾಜಸ್ವ ಕೊರತೆ ಕಂಡುಬಂದಿದೆ. ಇಲಾಖಾವಾರು ಬಜೆಟ್ ಮಾಹಿತಿ ಇಲ್ಲಿದೆ.
ಹಿಂದುಳಿದ ವರ್ಗಗಳ ಕಲ್ಯಾಣ
- ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು 50 ಕೋಟಿ ರೂ
- ಬಾಡಿಗೆ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ 30 ಸ್ವಂತ ಕಟ್ಟಡಗಳನ್ನು ನಿರ್ಮಾಣ
- ಹಿಂದುಳಿದ ವರ್ಗಗಳಲ್ಲಿಯೇ ಅತೀ ಹಿಂದುಳಿದ, ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾಗಿರುವ, 46 ಅಲೆಮಾರಿ, ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ತಲಾ ಒಂದು ಡಿ.ದೇವರಾಜ ಅರಸು ವಸತಿ ಶಾಲೆಗಳ ನಿರ್ಮಾಣ
- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ವತಿಯಿಂದ ಬೈಲಹೊಂಗಲ ತಾಲ್ಲೂಕಿನ ಸಂಗೊಳ್ಳಿ ಮತ್ತು ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ 28 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ
- ಇಂಜಿನಿಯರಿಂಗ್, ಮೆಡಿಕಲ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿ ಜಿಲ್ಲೆಗೆ ಎರಡರಂತೆ 62 ಮೆಟ್ರಿಕ್ ನಂತರದ ವಸತಿ ನಿಲಯಗಳ ನಿರ್ಮಾಣ
- ಸ್ವಂತ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಕಟ್ಟಡ ದುರಸ್ತಿಗೆ 25 ಕೋಟಿ ರೂ
- ಅಲೆಮಾರಿ, ಅರೆಅಲೆಮಾರಿ ಜನಾಂಗದವರ ಕಾಲೋನಿಗಳ ಸಮಗ್ರ ಅಭಿವೃದ್ಧಿಗಾಗಿ 100 ಕೋಟಿ ರೂ ಅನುದಾನ
- ಅಲೆಮಾರಿ, ಅರೆಅಲೆಮಾರಿ ಜನಾಂಗದವರಿಗೆ ಭೂ ಒಡೆತನ ಯೋಜನೆ ಅನುಷ್ಠಾನ ; ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಕೌಶಲ್ಯ ತರಬೇತಿ
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರು ನಗರದಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ಪ್ರಾರಂಭ
- ಜಿಲ್ಲಾ ಕೇಂದ್ರಗಳಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ನಿಲಯಾರ್ಥಿಗಳಿಗೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮತ್ತು ವೃತ್ತಿ ಮಾರ್ಗದರ್ಶನಕ್ಕೆ (career guidance) ತರಬೇತಿ
- ಹಿಂದುಳಿದ ವರ್ಗಗಳ ನಿರುದ್ಯೋಗಿಗಳಿಗೆ ಆಹಾರ ಕಿಯೋಸ್ಟ್ (Kiosk) ಪ್ರಾರಂಭಿಸಲು ವಿದ್ಯುತ್ ಚಾಲಿತ ನಾಲ್ಕು ಚಕ್ರಗಳ ವಾಹನ ಖರೀದಿಗೆ ನಿಗಮದ ವತಿಯಿಂದ ಗರಿಷ್ಠ 3 ಲಕ್ಷ ರೂ ಸಹಾಯಧನ
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26 ನೇ ಸಾಲಿನಲ್ಲಿ 422 ಕೋಟಿ ರೂ. ಅನುದಾನ
1:40 PM, 7 Mar 2025 (IST)
ಗುತ್ತಿಗೆಯಲ್ಲಿ ಮೀಸಲಾತಿ
- 2 ಕೋಟಿ ರೂವರೆಗಿನ ಕಾಮಗಾರಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಗುತ್ತಿಗೆದಾರರಿಗೆ ಮೀಸಲಾತಿ
- ಸರ್ಕಾರದ ವಿವಿಧ ಇಲಾಖೆ, ನಿಗಮ, ಸಂಸ್ಥೆಗಳಲ್ಲಿ ಖರೀದಿಸುವ ಸರಕು ಮತ್ತು ಸೇವೆಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ ಮತ್ತು 2ಬಿ ಸರಬರಾಜುದಾರರಿಗೆ ಒಂದು ಕೋಟಿ ರೂ. ವರೆಗೆ ಮೀಸಲಾತಿ
- ಪ್ರಗತಿ ಕಾಲೋನಿ ಯೋಜನೆಗೆ 2025-26ನೇ ಸಾಲಿನಲ್ಲಿ 222 ಕೋಟಿ ರೂ ವೆಚ್ಚ
- ಪ.ಜಾತಿ, ಪ.ಪಂಗಡ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ಒಟ್ಟು 31 ವಸತಿ ಶಾಲೆಗಳನ್ನು ಪಿಯು ಕಾಲೇಜುಗಳಾಗಿ ಉನ್ನತೀಕರಣ
- ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 26 ಹೊಸ ವಸತಿ ಶಾಲೆಗ ಪ್ರಾರಂಭ
- ಪ.ಜಾತಿಯ 40, ಪ.ಪಂಗಡದ 7, ಹಿಂದುಳಿದ ವರ್ಗಗಳ 14 ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು 61 ಕ್ರೈಸ್ ವಸತಿ ಶಾಲೆಗಳಿಗೆ 1,292 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ
- ಕ್ರೈಸ್ ವಸತಿ ಶಾಲೆಗಳಿಗೆ ಒಟ್ಟು 213 ಕೋಟಿ ರೂ. ವೆಚ್ಚದಲ್ಲಿ ಅಗತ್ಯವಿರುವ ಡೆಸ್ಕ್, ಬೆಂಚ್, ಪೀಠೋಪಕರಣ ಇತ್ಯಾದಿ ಶೈಕ್ಷಣಿಕ ಮೂಲಸೌಕರ್ಯ
- ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ ಸಮಾಜ ಕಲ್ಯಾಣ ಇಲಾಖೆಯ 34 ವಿದ್ಯಾರ್ಥಿನಿಲಯಗಳಿಗೆ 238 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳ ನಿರ್ಮಾಣ
- ಡಾ| ಬಿ.ಆರ್.ಅಂಬೇಡ್ಕರ್ ರವರು ಅಧ್ಯಯನ ಮಾಡಿರುವ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಹಾಗೂ ಕೊಲಂಬಿಯಾ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಾಂಗಕ್ಕೆ ಆಯ್ಕೆಯಾದ ಇಬ್ಬರು ವಿದ್ಯಾರ್ಥಿಗಳಿಗೆ ಡಾ। ಬಿ.ಆರ್.ಅಂಬೇಡ್ಕರ್ ಫೆಲೋಶಿಪ್ ಯೋಜನೆಯಡಿ 1 ಕೋಟಿ ರೂ.
- ಿಗಮಗಳ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಪ.ಜಾತಿಯ 2532 ನಿರುದ್ಯೋಗಿ ಯುವಕ/ಯುವತಿಯರಿಗೆ ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್ ಫುಡ್ ಕಿಯೋಸ್ಟ್ (Kiosk) ಸೌಲಭ್ಯ
- ನಿರಾಶ್ರಿತರ ಮಾನಸಿಕ ಸ್ವಸ್ಥತೆಗಾಗಿ ಬೆಂಗಳೂರಿನ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಕೇಂದ್ರ ಸ್ಥಾಪನೆ
- ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸೇವಾಲಾಲ್ ಪುಣ್ಯಕ್ಷೇತ್ರ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆ ಪ್ರಾರಂಭ
- ದೇಶದ ಪ್ರತಿಷ್ಠಿತ 100 ಶಿಕ್ಷಣ ಸಂಸ್ಥೆಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯುವ ಪ.ಜಾತಿಯ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಬೆಂಬಲ ನೀಡಲು ಪ್ರೋತ್ಸಾಹ ಧನ
- ಸರ್ಕಾರಿ, ಖಾಸಗಿ ಮೆಡಿಕಲ್ & ಇಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ.ಜಾತಿ ಹಾಗೂ ಪ.ಪಂಗಡದ ವಿದ್ಯಾರ್ಥಿಗಳು ಅದೇ ಕಾಲೇಜಿನ ವಸತಿ ನಿಲಯಗಳಲ್ಲಿ ಪ್ರವೇಶ ಪಡೆದಿದ್ದಲ್ಲಿ, ಅವರಿಗೆ ವಸತಿ ನಿಲಯದ ವೆಚ್ಚವಾಗಿ ಪ್ರತಿ ತಿಂಗಳು 3,500/- ರೂ ಪಾವತಿ
- ಪ.ಜಾತಿ/ ಪ.ಪಂಗಡದವರು ಹೈನುಗಾರಿಕೆ ಕೈಗೊಳ್ಳಲು 2 ಎಮ್ಮೆ/ಹಸುಗಳಿಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಠ 1.25 ಲಕ್ಷ ರೂ. ಸಹಾಯಧನ
- ಪ.ಜಾತಿ/ ಪ.ಪಂಗಡದ ಮಹಿಳಾ ಸ್ವಸಹಾಯ ಸಂಘಗಳಿಗೆ ನೀಡುತ್ತಿರುವ 1 ಲಕ್ಷ ರೂ. ಸಾಲ ಮತ್ತು 1.50.ಲಕ್ಷ ರೂ ಸಹಾಯ ಧನವನ್ನು 2.50 ಲಕ್ಷ ರೂ. ಸಾಲ ಮತ್ತು 2.50 ಲಕ್ಷ ರೂಗೆ ಹೆಚ್ಚಳ.
- ಸಮಾಜ ಕಲ್ಯಾಣ ಇಲಾಖೆಯಡಿ ಬರುವ ನಿಗಮಗಳಿಗೆ 2025-26ನೇ ಸಾಲಿನಲ್ಲಿ 488 ಕೋಟಿ ರೂ. ಅನುದಾನ
12:43 PM, 7 Mar 2025 (IST)
ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ ಅನುದಾನ
- ಗೃಹಲಕ್ಷ್ಮಿ ಯೋಜನೆಗೆ ಪ್ರಸಕ್ತ ವರ್ಷದಲ್ಲಿ ಈ ಯೋಜನೆಗೆ 28,608 ಕೋಟಿ ರೂ. ಒದಗಿಸಲಾಗಿದೆ.
- ರಾಜ್ಯದ 37 ಲಕ್ಷ ಮಕ್ಕಳ ಆರೈಕೆ ಮತ್ತು ಕಲಿಕೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 1,000 ರೂ. ಹಾಗೂ ಸಹಾಯಕಿಯರ ಗೌರವಧನವನ್ನು 750 ರೂ. ಹೆಚ್ಚಿಸಲಾಗುವುದು.
- ಸಕ್ಷಮ ಅಂಗನವಾಡಿ ಯೋಜನೆಯಡಿ ರಾಜ್ಯದ 17,454 ಅಂಗನವಾಡಿ ಕೇಂದ್ರಗಳಿಗೆ ಹೆಚ್ಚುವರಿ ಸೌಲಭ್ಯಗಳನ್ನು ಕಲ್ಪಿಸಲು ತಲಾ ಒಂದು ಲಕ್ಷ ರೂ. ನಂತೆ ಒಟ್ಟು 175 ಕೋಟಿ ರೂ. ಒದಗಿಸಲಾಗುವುದು.
- ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕಾಗಿ ನಗರಸಭೆ/ ಪುರಸಭೆಗಳಲ್ಲಿ ಲಭ್ಯವಿರುವ 173 ಸಿ.ಎ ನಿವೇಶನಗಳನ್ನು ನಗರಾಭಿವೃದ್ಧಿ ಇಲಾಖೆಯಿಂದ ಶೇ.50 ರಷ್ಟು ರಿಯಾಯಿತಿ ದರದಲ್ಲಿ ಖರೀದಿಸಲು 10 ಕೋಟಿ ರೂ. ಮೀಸಲಿರಿಸಲಾಗಿದೆ.
- ಮೈಸೂರು ಮತ್ತು ಬೆಳಗಾವಿಯಲ್ಲಿರುವ ವಿಶೇಷ ಮಕ್ಕಳ ಸರ್ಕಾರಿ ವಸತಿಯುತ ಶಾಲೆಗಳನ್ನು ಉನ್ನತೀಕರಿಸಲು ಐದು ಕೋಟಿ ರೂ. ನೀಡಲಾಗುವುದು. ಇವುಗಳ ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೈಗೊಳ್ಳಲಾಗುವುದು.
- Cerebral Palsy, Muscular Dystrophy, Parkinsons ಮತ್ತು Multiple Sclerosis ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ನೀಡುತ್ತಿರುವ ಮಾಸಿಕ 1,000 ರೂ. ಪ್ರೋತ್ಸಾಹಧನ ಯೋಜನೆಯನ್ನು ಆಟಿಸಂ, ಬೌದ್ಧಿಕ ವಿಕಲತೆ ಮತ್ತು ಬಹುವಿಧ ಅಂಗವಿಕಲತೆ (ಶ್ರವಣ ಮತ್ತು ದೃಷ್ಟಿ ನ್ಯೂನ್ಯತೆ) ಕಾಯಿಲೆಗಳಿಂದ ಬಳಲುತ್ತಿರುವ ಆರೈಕೆದಾರರಿಗೂ ವಿಸ್ತರಿಸಲಾಗುವುದು.
- ಬಳ್ಳಾರಿಯ ಸರ್ಕಾರಿ ಶ್ರವಣದೋಷವುಳ್ಳ ಮಕ್ಕಳ ಶಾಲೆ ಹಾಗೂ ಹುಬ್ಬಳ್ಳಿಯ ದೃಷ್ಟಿದೋಷವುಳ್ಳ ಮಕ್ಕಳ ಶಾಲೆಗಳನ್ನು ಪ್ರಾಥಮಿಕ ಶಾಲಾ ಹಂತದಿಂದ ಪ್ರೌಢ ಶಾಲಾ ಹಂತಕ್ಕೆ ಮೇಲ್ದರ್ಜೆಗೇರಿಸಲಾಗುವುದು.
- ವಿಶೇಷ ಪಾಲನಾ ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮತ್ತು ಬಾಧಿತ ಮಕ್ಕಳ ಪೌಷ್ಟಿಕ ಆಹಾರ ಮತ್ತು ಶಿಕ್ಷಣವನ್ನು ಪ್ರೋತ್ಸಾಹಿಸಲು ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಧನ ಸಹಾಯವನ್ನು 1,000 ರೂ.ನಿಂದ 2,000 ರೂ.ಗೆ ಹೆಚ್ಚಿಸಲಾಗುವುದು.
- ರಾಜ್ಯ ಅನುದಾನದಡಿಯಲ್ಲಿ ನಡೆಯುತ್ತಿರುವ ವಸತಿಯುತ ವಿಶೇಷ ಶಾಲೆಗಳ ಮಕ್ಕಳ ಪಥ್ಯಾಹಾರ ಭತ್ಯೆಯನ್ನು ಮಾಸಿಕ 1,750 ರೂ.ಗಳಿಗೆ ಹೆಚ್ಚಿಸಲಾಗುವುದು.
- ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 94,084 ಕೋಟಿ ರೂ. ಒದಗಿಸಲಾಗುವುದು.
- ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗಾಗಿ 2025-26ನೇ ಸಾಲಿನಲ್ಲಿ ಒಟ್ಟಾರೆಯಾಗಿ 62,033 ಕೋಟಿ ರೂ. ಒದಗಿಸಲಾಗುವುದು.
12:40 PM, 7 Mar 2025 (IST)
ಕಂದಾಯ ಇಲಾಖೆ
- ಹೊಸ ಭೂ ಕಂದಾಯ ಕಾಯ್ದೆ ಜಾರಿಗೆ.
- ಹೊಸ 100 ನಾಡ ಕಚೇರಿಗಳ ನಿರ್ಮಾಣ.
- 2025-26 ನೇ ಸಾಲಿನಲ್ಲಿ 21 ತಾಲೂಕುಗಳಲ್ಲಿ ಪ್ರಜಾಸೌಧ ನಿರ್ಮಾಣ ಮಾಡಲು ಕ್ರಮ.
- ಅನುಭವ ಮಂಟಪ ಕಾಮಗಾರಿ ಶೀಘ್ರ ಪೂರ್ಣ.
- ಸಾಮಾಜಿಕ ಭದ್ರತಾ ಪಿಂಚಣಿ ಮಂಜೂರಾತಿ ಸೇವೆ ನೀಡಲು ಸಕಾಲ ಕಾಯ್ದೆಯಡಿ ಪ್ರಸ್ತುತ ಇರುವ ಕಾಲಮಿತಿಯನ್ನು 45 ದಿನಗಳಿಂದ 21 ದಿನಗಳಿಗೆ ಇಳಿಕೆ.
- ಕರ್ನಾಟಕ ಜಲ ಭದ್ರತೆ ಮತ್ತು ವಿಪತ್ತು ತಡೆಯುವಿಕೆ ಕಾರ್ಯಕ್ರಮದಡಿ ವಿಶ್ವಬ್ಯಾಂಕ್ ಸಾಲ ಸೇರಿ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ 2025-31 ರ ಅವಧಿಯಲ್ಲಿ ಕಾರ್ಯಕ್ರಮ.
- ಬೆಂಗಳೂರು ನಗರದಲ್ಲಿ 239 ಕೋಟಿ ರೂ. ವೆಚ್ಚದಲ್ಲಿ ಮಳೆ ನೀರು ಚರಂಡಿಗಳ ಪುನರ್ ನಿರ್ಮಾಣ ಮತ್ತು ಕೆರೆಗಳ ಪುನಃಶ್ಚೇತನ.
- ಬರ ಉಪಶನಕ್ಕಾಗಿ 100 ಕೋಟಿ ರೂ. ವೆಚ್ಚದಲ್ಲಿ ಕೃಷಿ ಹೊಂಡಗಳ ನಿರ್ಮಾಣ.
- ಕಾವೇರಿ-2.0 ತಂತ್ರಾಂಶದ ಮೂಲಕ ಸರ್ಕಾರದ ಇ-ಸ್ಟ್ಯಾಂಪಿಂಗ್ ವ್ಯವಸ್ಥೆ ಜಾರಿ.
- ನೋಂದಣಿ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕಾವೇರಿ-2.0 ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯಡಿಯಲ್ಲಿಯೇ ನಿರ್ವಹಿಸಲು ಕ್ರಮ.
- ಬೆಂಗಳೂರಿನ 36 ನೋಂದಣೀ ಕಚೇರಿಗಳ ಆಧುನೀಕರಣ.
12:38 PM, 7 Mar 2025 (IST)
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
- ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಪಿಂಚಣಿ ಮತ್ತು ಕೆಲವು ನಿರ್ದಿಷ್ಟ ಭತ್ಯೆಗಳನ್ನು ಪರಿಷ್ಕರಿಸಲು ವಾರ್ಷಿಕ 19,401 ಕೋಟಿ ರೂ ವೆಚ್ಚ.
- ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ (KSRSAC) ಕರ್ನಾಟಕ-ಜಿಐಎಸ್ (ಕೆ-ಜಿಐಎಸ್) ಪೋರ್ಟ್ಲ್ನಲ್ಲಿ 29 ಸಾವಿರಕ್ಕೂ ಹೆಚ್ಚು ಕಂದಾಯ ಗ್ರಾಮಗಳ ನಕ್ಷೆ ಡಿಜಿಟಲೀಕರಣಕ್ಕೆ 150 ಕೋಟಿ ರೂ.ಗಳ ನಿಗದಿ.
- ರಾಜ್ಯದ ಬಹುತೇಕ ಕಚೇರಿಗಳಲ್ಲಿ ಸರ್ಕಾರದ ಇ-ಆಫೀಸ್ ತಂತ್ರಾಂಶವನ್ನು ಅಭಿವೃದ್ಧಿಪಡಿಸಲು ಯೋಜನೆ.
- ಸಾರ್ವಜಿನಕರ ಕುಂದು ಕೊರತೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು AI ಚಾಲಿತ ತಂತ್ರಜ್ಞಾನದಿಂದ ನವೀಕರಿಸಿ iPGRS-2.0 ಮೂಲಕ ಕರ್ನಾಟಕ ನಾಗರಿಕ ಕೇಂದ್ರಿತ ಡಿಜಿಟಲ್ ಆಡಳಿತ ಮುಂಚೂಣಿಯಲ್ಲಿಡುವುದು.
12:22 PM, 7 Mar 2025 (IST)
ಧಾರ್ಮಿಕ ದತ್ತಿ ಇಲಾಖೆ
- ದೇವಾಲಯಗಳ ಅರ್ಚಕರಿಗೆ ಪಾವತಿಸುತ್ತಿರುವ ವಾರ್ಷಿಕ ತಸ್ತೀಕ್ ಮೊತ್ತವನ್ನು 60 ರಿಂದ 72 ಸಾವಿರಗಳಿಗೆ ಹೆಚ್ಚಳ.
- ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿಗಳು, ನೌಕರರಿಗೆ ಸರ್ಕಾರದಿಂದಲೇ ನೇರವಾಗಿ ವೇತನ ಪಾವತಿ.
- ಸೊರಬ ತಾಲೂಕಿನ ಚಂದ್ರಗುತ್ತಿ ಗ್ರಾಮವನ್ನು ಧಾರ್ಮಿಕ ತಾಣವಾಗಿ ಅಭಿವೃದ್ಧಿಪಡಿಸಲು ಚಂದ್ರಗುತ್ತಿ ಅಭಿವೃದ್ಧಿ ಪ್ರಾಧಿಕಾರ ರಚನೆ.
- ಧಾಮಿಕ ಸ್ಥಳಗಳ ರಾಜ್ಯದ ಛತ್ರಗಳಲ್ಲಿ ತಂಗುವ ಯಾತ್ರಾರ್ಥಿಗಳಿಗೆ ಮೂಲಸೌಲಭ್ಯ ಕಲ್ಪಿಸುವುದು, ನಿರ್ವಹಣೆ ಮಾಡಲು ಕರ್ನಾಟಕ ದೇವಾಲಯಗಳ ವಸತಿ ಕೋಶ ಪ್ರಾರಂಭ.
- ರಾಜ್ಯದಲ್ಲಿ ಒತ್ತುವರಿಯಾದ ದೇವಾಲಯಗಳ ಆಸ್ತಿಗಳ ಸಂರಕ್ಷಣೆ ಮಾಡಲು ಭೂ-ವರಹಾಠ ಯೋಜನೆಯಲ್ಲಿ ಸ್ಥಿರಾಸ್ತಿಗಳ ದಾಖಲೀಕರಣ.
12:13 PM, 7 Mar 2025 (IST)
ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ
- 26 ಕೋಟಿ ರೂ. ವೆಚ್ಚದ ಬೆಂಗಳೂರಿನ ನೆಫ್ರೊ-ಯುರಾಲಾಜಿ ಸಂಸ್ಥೆಯ ಕಟ್ಟಡವನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುವುದು.
- ಬಾಗಲಕೋಟೆಯಲ್ಲಿ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ವೈದ್ಯಕೀಯ ಕಾಲೇಜನ್ನು ಹಾಗೂ ಕೋಲಾರದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ವೈದ್ಯಕೀಯ ಕಾಲೇಜನ್ನು ಆರಂಭಿಸಲು ಉದ್ದೇಶಿಸಲಾಗಿದೆ.
- ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗವನ್ನು ಆರಂಭಿಸಲಾಗುವುದು.
- ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ 500 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು 297 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಲಾಗುವುದು.
- ಬಾದಾಮಿ ತಾಲ್ಲೂಕಿನ ಕುಳಗೇರಿ ಕ್ರಾಸ್ ಹಾಗೂ ಚಿತ್ರದುರ್ಗದಲ್ಲಿ ಸುಸಜ್ಜಿತ ಟ್ರಾಮಾ ಕೇರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.
- ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಯಲ್ಲಿ ಒಟ್ಟು 100 ಕೋಟಿ ರೂ. ವೆಚ್ಚದಲ್ಲಿ ಪ್ರಾದೇಶಿಕ ಎಂಡೋಕ್ರೈನಾಲಜಿ (Endocrinology) ಕೇಂದ್ರಗಳನ್ನು ಆರಂಭಿಸಲಾಗುವುದು.
- ಮೈಸೂರು ಮತ್ತು ಕಲಬುರಗಿಯ ವೈದ್ಯಕೀಯ ಕಾಲೇಜುಗಳಲ್ಲಿ ನಿಮ್ಹಾನ್ಸ್ ಮಾದರಿಯ ಸಂಸ್ಥೆಗಳನ್ನು ತಲಾ 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು
- ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು.
- ರಾಯಚೂರಿನ ರಾಜೀವ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ಕಿದ್ವಾಯಿ ಪೆರಿಫರೆಲ್ ಕ್ಯಾನ್ಸರ್ ಚಿಕಿತ್ಸಾ ಘಟಕ ಸ್ಥಾಪಿಸಲಾಗುವುದು.
- ಯಲಬುರ್ಗಾ, ಜೇವರ್ಗಿ ಮತ್ತು ಯಾದಗಿರಿಯಲ್ಲಿ ತಲಾ ಆರು ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ನರ್ಸಿಂಗ್ ಕಾಲೇಜುಗಳನ್ನು KKRDB ಅನುದಾನದಲ್ಲಿ ಆರಂಭಿಸಲಾಗುವುದು.
12:06 PM, 7 Mar 2025 (IST)
ನಗದು ರಹಿತ ಚಿಕಿತ್ಸೆ
- ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ ಗುತ್ತಿಗೆ / ಹೊರಗುತ್ತಿಗೆ / ಗೌರವಧನ ಆಧಾರದ ಸಿಬ್ಬಂದಿ ಹಾಗೂ ಅವಲಂಬಿತರಿಗೆ 5 ಲಕ್ಷದವರೆಗೂ ನಗದು ರಹಿತ ಚಿಕಿತ್ಸೆ ನೀಡಲು ಯೋಜನೆ.(ಸಿಬ್ಬಂದಿಯ ಮಾಸಿಕ ವಂತಿಕೆ 100 ರೂ. ಮತ್ತು ಸರ್ಕಾರದ ಮಾಸಿಕ ವಂತಿಕೆ 200 ರೂಗಳೊಂದಿಗೆ ಸುವರ್ ಆರೋಗ್ಯ ಟ್ರಸ್ಟ್ ಮೂಲಕ ಅನುಷ್ಠಾನ)
- ಪ್ರಸವ ಪೂರ್ವ ಮತ್ತು ನವಜಾತ ಶಿಶುಗಳಲ್ಲಿ ಅಪರೂಪದ ಚಯಾಪಚಯ ಖಾಯಿಲೆಗಳ ಪತ್ತೆಗಾಗಿ ಕಾರ್ಯಕ್ರಮ ; ಮೊದಲ ಹಂತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಗಣಿಬಾಧಿತ ಪ್ರದೇಶಗಳಲ್ಲಿ ಪ್ರಾಯೋಗಿಕವಾಗಿ 10 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ
- ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗೆ ಪ್ರಥಮ ಹಂತದಲ್ಲಿ ಗಣಿ ಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 20 ತಾಲ್ಲೂಕುಗಳಲ್ಲಿ 9 ಕೋಟಿ ರೂ. ವೆಚ್ಚದಲ್ಲಿ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ
- ‘ಗೃಹ ಆರೋಗ್ಯ’ ಯೋಜನೆಯಡಿ 2024-25ನೇ ಸಾಲಿನಲ್ಲಿ ಆರು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮತ್ತು ಚಿಕಿತ್ಸಾ ಕಾರ್ಯಕ್ರಮವನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾರಂಭಿಸಲಾಗಿದ್ದು, ಈ ಯೋಜನೆಯನ್ನು 100 ಕೋಟಿ ರೂ. ವೆಚ್ಚದಲ್ಲಿ ರಾಜ್ಯಾದ್ಯಂತ ವಿಸ್ತರಣೆ
- ರಾಜ್ಯದಲ್ಲಿ 108 ಆ್ಯಂಬುಲೆನ್ಸ್ ಸೇವೆಯನ್ನು ಉತ್ತಮಗೊಳಿಸುವ ಉದ್ದೇಶದಿಂದ ಈ ಸೇವೆಯನ್ನು ನಿಯಂತ್ರಣ ಮಾಡುವ ಕಮಾಂಡ್ ಕಂಟ್ರೋಲ್ ಕೇಂದ್ರವನ್ನು ಆರೋಗ್ಯ ಇಲಾಖೆಯ ಅಧೀನಕ್ಕೆ ಒಳಪಡಿಸುವುದರ ಮೂಲಕ ‘ಆರೋಗ್ಯ ಕವಚ’ ಸೇವೆಗೆ ಬಲ
- ಸಾಂಕ್ರಾಮಿಕ ರೋಗಗಳಾದ ಚಿಕೂನ್‌ಗುನ್ಯ, ಡೆಂಗ್ಯೂ ಹಾಗೂ ಮಲೆನಾಡು ಭಾಗದಲ್ಲಿ ಕಾಣಿಸಿಕೊಳ್ಳುವ ಕ್ಯಾಸನೂರು ಕಾಡಿನ ಖಾಯಿಲೆಗಳ (KFD) ಪರಿಣಾಮಕಾರಿ ನಿಯಂತ್ರಣಕ್ಕಾಗಿ 50 ಕೋಟಿ ರೂ. ವೆಚ್ಚದಲ್ಲಿ ವಿಶೇಷ ಅಭಿಯಾನ ರೂಪದಲ್ಲಿ ಮುಂಜಾಗ್ರತಾ ನಿಯಂತ್ರಣ ಕ್ರಮ
- ‘ಶ್ರವಣ ಸಂಜೀವಿನಿ’ ಯೋಜನೆಯಡಿ ಮಕ್ಕಳಲ್ಲಿ ಕಂಡುಬರುವ ಶ್ರವಣದೋಷವನ್ನು ಆರಂಭದಲ್ಲಿಯೇ ಗುರುತಿಸಿ (Cochlear Implant) ಶಸ್ತ್ರಚಿಕಿತ್ಸೆ ಹಾಗೂ ಇಂಪ್ಲಾಂಟ್‌ಗಳ ಬಿಡಿಭಾಗಗಳ ನಿರ್ವಹಣೆ, ದುರಸ್ತಿ, ಬದಲಾವಣೆಗೆ 12 ಕೋಟಿ ರೂ ವೆಚ್ಚ
- ಹೆಚ್ಚಿನ ಟಿ.ಬಿ ಪ್ರಕರಣಗಳಿರುವ ಆರೋಗ್ಯ ಕೇಂದ್ರಗಳಿಗೆ 2025-26ನೇ ಸಾಲಿನಲ್ಲಿ 100 True-NAT machine ಗಳನ್ನ ಒದಗಿಸಲು ಕ್ರಮ
- ಆಶಾ ಕಾರ್ಯಕರ್ತೆಯರಿಗೆ ತಂಡ ಆಧಾರಿತ ಪ್ರೋತ್ಸಾಹಧನ ನೀಡುವುದರ ಮೂಲಕ ಗೌರವಧನವನ್ನು 1,000 ರೂಗೆವ ಹೆಚ್ಚಳ
- ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯನ್ನು ದೃಢಪಡಿಸಲು ಸಂಚಾರಿ ಆಹಾರ ಪ್ರಯೋಗಾಲಯಗಳ ಮೂಲಕ ಆಹಾರ ಮಾದರಿಗಳನ್ನು ವಿಶ್ಲೇಷಿಸಿ, ಅಸುರಕ್ಷಿತ ಮತ್ತು ಕಳಪೆ ಆಹಾರವನ್ನು ಗುರುತಿಸಿ ಕಾನೂನಿನ ಅನುಸಾರ ಕ್ರಮ
- ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಗುಣಮಟ್ಟದ ಔಷಧಗಳನ್ನು ವಿತರಿಸಲು KSMSCL ಸಂಸ್ಥೆಯನ್ನು ಬಲಪಡಿಸಲಾಗುವುದು. ವೈದ್ಯಕೀಯ ಉಪಕರಣಗಳ ಮೇಲ್ವಿಚಾರಣೆ ಮತ್ತು ನಿರ್ವಹಣೆಗಾಗಿ ತಂತ್ರಾಂಶವನ್ನು ಪರಿಚಯಿಸಲು ಕ್ರಮ
- ಸುಟ್ಟ ಗಾಯಗಳ ಸಂತ್ರಸ್ತರ ಚಿಕಿತ್ಸೆಗಾಗಿ ದೇಶದಲ್ಲಿಯೇ ಮೊದಲ ಬಾರಿಗೆ ಸುಟ್ಟ ಗಾಯಗಳ ಚಿಕಿತ್ಸಾ ನೀತಿ ಜಾರಿಗೆ ತರಲಾಗುವುದು
- ಕೆ.ಪಿ.ಎಂ.ಇ ಕಾಯ್ದೆಯಡಿ ನೀಡಲಾಗುವ ಮಾನ್ಯತೆ ಪ್ರಮಾಣ (Accreditation Certificate) 30 ದಿನಗಳ ಕಾಲಮಿತಿಯೊಳಗೆ ಒದಗಿಸಲಾಗುವುದು.
- ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು. ವರ್ಗಾವಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಎಲ್ಲಾ ಅಧಿಕಾರಿ ಸಿಬ್ಬಂದಿ ವರ್ಗದವರಿಗೂ ಪಾರದರ್ಶಕವಾದ ವರ್ಗಾವಣೆ ನೀತಿಯನ್ನು ರೂಪಿಸಲು ಕ್ರಮ
- ರಾಜ್ಯದಲ್ಲಿನ ತಾಲ್ಲೂಕು ಆಸ್ಪತ್ರೆಗಳ ಆಡಳಿತವನ್ನು ಜಿಲ್ಲಾ ಶಸ್ತ್ರಚಿಕಿತ್ಸಕರ ವ್ಯಾಪ್ತಿಗೆ ಒಳಪಡಿಸಲು ಕ್ರಮ
- ಇಲಾಖೆಯಲ್ಲಿ ಖಾಲಿಯಿರುವ Critical Vacancy ಹುದ್ದೆಗಳನ್ನ ತರ್ಕಬದ್ಧಗೊಳಿಸಿ ಆದ್ಯತೆಯ ಆಧಾರದಲ್ಲಿ ಭರ್ತಿಗೆ ಕ್ರಮ
11:55 AM, 7 Mar 2025 (IST)
ಆರೋಗ್ಯ ಇಲಾಖೆ
- ತಾಯಿ ಮರಣ ಪ್ರಮಾಣವನ ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ ರೂ
- ಗರ್ಭಿಣಿಯರಲ್ಲಿ ರಕ್ತಹೀನತೆ ತಡೆಗೆ ಹಿಂದುಳಿದ ಜಿಲ್ಲೆಗಳಲ್ಲಿ ಪೌಷ್ಟಿಕಾಂಶ ಕಿಟ್, ಪ್ರೋತ್ಸಾಹ ಧನ ಹಾಗೂ ತಾಯಂದಿರಿಗೆ ವಾತ್ಸಲ್ಯ ಕಿಟ್‌ಗಳು ವಿತರಣೆ.
- ಹುದ್ದೆಗಳ ಪುನರ್ ಹಂಚಿಕೆಯ ಮೂಲಕ ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ MCH ತಜ್ಞರ ನೇಮಕ
- ತಾಯಿ ಮರಣದ ಕುರಿತು ರಾಜ್ಯ ತಾಂತ್ರಿಕ ತಜ್ಞರ ಸಮಿತಿಯಿಂದ ಆಡಿಟ್ ಮಾಡಿಸಿ ಶಿಫಾರಸ್ಸುಗಳನ್ನು ರಾಜ್ಯ ಅಧಿಕಾರಯುಕ್ತ ಸಮಿತಿ ಮುಂದೆ ಮಂಡನೆ. ಸಮಿತಿಯ ನಿರ್ದೇಶನದಂತೆ ತಾಯಿ ಮರಣ ತಡೆಗಟ್ಟುವ ನಿಟ್ಟಿನಲ್ಲಿ ಯೋಜನೆ
- ಅಥಣಿ, ಹುನಗುಂದ ಮತ್ತು ಮುಧೋಳದಲ್ಲಿ 50 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ಸ್ಥಾಪನೆ ಮಾಡಲು ಅನುಮೋದನೆ
- ಆಶಾಕಿರಣ ರಾಷ್ಟ್ರೀಯ ಅಂಧತ್ವ ನಿವಾರಣಾ ಕಾರ್ಯಕ್ರಮದಡಿ 1.4 ಕೋಟಿ ಜನರಿಗೆ ಕಣ್ಣಿನ ತಪಾಸಣೆ, 3.3 ಲಕ್ಷ ಜನರಿಗೆ ಉಚಿತ ಕನ್ನಡಕ ವಿತರಣೆ ಮತ್ತು 93.80% ಜನರಿಗೆ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ
- ನರವೈಜ್ಞಾನಿಕ ಖಾಯಿಲೆಗಳಿಗೆ ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮದ (KaBHI) ಅಡಿಯಲ್ಲಿ ನಿಮ್ಹಾನ್ಸ್ ಸಹಯೋಗದೊಂದಿಗೆ ಒಟ್ಟು 2.61 ಲಕ್ಷ ತಪಾಸಣೆ ಮಾಡಿ 32,630 ನರರೋಗಿಗಳಿಗೆ ಚಿಕಿತ್ಸೆ ನೀಡಲಾಗಿದೆ. ಈ ಯೋಜನೆಯನ್ನು ಎಲ್ಲಾ ಹಂತದ ಆರೋಗ್ಯ ಕೇಂದ್ರಗಳಿಗೆ ವಿಸ್ತರಿಸಲು 20 ಕೋಟಿ ರೂ.
- ಮಾನಸಿಕ ಅಸ್ವಸ್ಥರ ಆರೈಕೆಗೆ ಜಿಲ್ಲಾ ಮಟ್ಟದ ಆಸ್ಪತ್ರೆಗಳಲ್ಲಿ ಸರ್ಕಾರೇತರ ಸಂಸ್ಥೆಗಳ ಸಹಯೋಗದೊಂದಿಗೆ ಆರೈಕೆ ಕೇಂದ್ರಗಳ ಸ್ಥಾಪನೆ
- ಬೆಂಗಳೂರು ಉತ್ತರ ತಾಲ್ಲೂಕಿನ ವ್ಯಾಪ್ತಿಯಲ್ಲಿ 200 ಹಾಸಿಗೆಯ ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆ ನಿರ್ಮಾಣಕ್ಕೆ 150 ಕೋಟಿ ರೂ. ವೆಚ್ಚ
- ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ಳಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ದಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನ ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣ.ಪೊನ್ನಂಪೇಟೆಯಲ್ಲಿ ಹೊಸ ಸಮುದಾಯ ಆರೋಗ್ಯ ಕೇಂದ್ರ ಆರಂಭ
- ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳ ನವೀಕರಣ
- ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕಣಕ್ಕೆ ಕ್ರಮ
- ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಕೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳ ಸ್ಥಾಪನೆ
- ಮೈಸೂರು ಜಿಲ್ಲೆಯ ತಗಡೂರು ಆರೋಗ್ಯ ಕೇಂದ್ರವನ್ನು 100 ಹಾಸಿಗೆ ಆಸ್ಪತ್ರೆಯನ್ನಾಗಿ ಮೇಲ್ದರ್ಜೆ
- ಹೆಚ್ಚಿನ ದುರಸ್ತಿ ಅಗತ್ಯವಿರುವ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆಗಳನ್ನು 183 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ದುರಸ್ತಿ
- ಕಲ್ಯಾಣ ಕರ್ನಾಟಕ ಭಾಗದ ಆರೋಗ್ಯ ಸೂಚ್ಯಂಕವನ್ನು ವೃದ್ಧಿಸಲು ಒಟ್ಟು 873 ಕೋಟಿ ರೂ. ವೆಚ್ಚದಲ್ಲಿ ಕಾರ್ಯಯೋಜನೆ
11:42 AM, 7 Mar 2025 (IST)
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
- 5,200 ಕೋಟಿ ರೂ. ವೆಚ್ಚದಲ್ಲಿ ಪ್ರಗತಿ ಪಥ ರಸ್ತೆ ಅಭಿವೃದ್ಧಿ ಯೋಜನೆ ಅನುಷ್ಠಾನ.
- ಜಲ ಜೀವನ್ ಮಿಷನ್ ಯೋಜನೆಗೆ 2025-26 ಸಾಲಿಗೆ 6,050 ಕೋಟಿ ರೂ.
- ಕಲ್ಯಾಣ ಕರ್ನಾಟಕ ಭಾಗದಲ್ಲಿ 38 ವಿಧಾನಸಭಾ ಕ್ಷೇತ್ರಗಳಿಗೆ ಘೋಷಿಸಲಾದ ಕಲ್ಯಾಣ ಪಥ ಯೋಜನೆಯಡಿ 1 ಸಾವಿರ ಕೋಟಿ ರೂ. ಮೊತ್ತದ 286 ರಸ್ತೆ ಕಾಮಗಾರಿ ಶೀಘ್ರ ಪೂರ್ಣ.
- ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಿಉ ಇ-ಸ್ವತ್ತು ಅಭಿಯಾನ ಆರಂಭ.
- ಪಂಚತಂತ್ರ ತಂತ್ರಾಂಶ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿಗಳಿಗೂ ವಿಸ್ತರಣೆ.
- ಗ್ರಾಮ ಪಂಚಾಯಿತಿ ದತ್ತು ಕಾರ್ಯಕ್ರಮ ಆರಂಭ.
- ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 500 ಗ್ರಾಮಗಳಲ್ಲಿ ಬೂದು ನೀರು ನಿರ್ವಹಣಾ ಘಟಕಗಳ ನಿರ್ಮಾಣ.
- ರಾಜ್ಯ ಮತ್ತು ಜಿಲ್ಲಾ ರಸ್ತೆಗಳ 5,000 ಕಿ.ಮೀ ಬದಿಗಳಲ್ಲಿ ಸಸಿಗಳನ್ನು ಬೆಳೆಸಲು ಹಸಿರು ಪಥ ನಿರ್ಮಾಣ.
- ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಪಡಿಸಲು ಕೃಷಿ ಪಥ ಯೋಜನೆ ಜಾರಿ.
- ಕೃಷಿ ಕವಚ ಕಾರ್ಯಕ್ರಮದಡಿ ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 50 ಸಾವಿರ ಹೆಕ್ಟೇರ್ ಬದು ನಿರ್ಮಾಣ.
11:39 AM, 7 Mar 2025 (IST)
ಒಳಾಡಳಿತ ಇಲಾಖೆ
- ದೌರ್ಜನ್ಯಕ್ಕೊಳಗಾದ ಮಹಿಳೆಯರು ಹಾಗೂ ಮಕ್ಕಳಿಗೆ ಪೊಲೀಸ್ ನೆರವು ಒದಗಿಸಲು ಬೆಂಗಳೂರಿನಲ್ಲಿ 60 ಮಹಿಳಾ ಔಟ್ ಪೋಸ್ಟ್ ಸ್ಥಾಪನೆ
- ಪ್ರಸ್ತಕ ಸಾಲಿನಲ್ಲಿ 7 ಪೊಲೀಸ್ ಠಾಣೆ ಹಾಗೂ ಕಚೇರಿ ಕಟ್ಟಡಗಳ ಲೋಕಾರ್ಪಣೆ
- ಈ ವರ್ಷದಲ್ಲಿ 30 ಕೋಟಿ ವೆಚ್ಚದಲ್ಲಿ 12 ಪೊಲೀಸ್ ಠಾಣೆ, ಒಂದು ಉಪವಿಭಾಗದ ಕಚೇರಿ, ಎರಡು ವೃತ್ತ ಕಚೇರಿ ಹಾಗೂ ಒಂದು ಹೊರಠಾಣೆ ಕಟ್ಟಡ ನಿರ್ಮಾಣ
- ಒಳಾಡಳಿತ ಇಲಾಖೆ ವ್ಯಾಪ್ತಿಯ ಬರುವ ಎಲ್ಲಾ ಇಲಾಖೆಗಳಿಗೆ ಒಟ್ಟು 1 ಸಾವಿರ ನೂತನ ವಾಹನಗಳ ಖರೀದಿಸಲು ಪೊಲೀಸ್ ಮೊಬಿಲಿಟಿ ಯೋಜನೆಯಡಿ 50 ಕೋಟಿ ಮೀಸಲು
- ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ವಿಶೇಷ ಪ್ಯಾಕೇಜ್
- ಸೈಬರ್ ಹಾಗೂ ಡ್ರಗ್ಸ್ ಅಪರಾಧ ವಿಭಾಗ ಬಲಗೊಳಿಸಲು 5 ಕೋಟಿ ರೂ. ಅನುದಾನ
- ನಂದಿಬೆಟ್ಟದ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆ ನಿರ್ಮಾಣಕ್ಕೆ 80 ಕೋಟಿ ಅನುದಾನ
- ಬೆಂಗಳೂರು ನಗರ ವ್ಯಾಪ್ತಿಯಲ್ಲಿರುವ 8 ವಿಭಾಗಗಳಿಂದ 11ಕ್ಕೆ ಹೆಚ್ಚಳ
- ಬಳ್ಳಾರಿ, ದಾವಣಗೆರೆ, ಮೈಸೂರು ಮತ್ತು ಬೆಂಗಳೂರು ಕೇಂದ್ರ ವಲಯಗಳಲ್ಲಿ ಬಾಂಬ್ ಪತ್ತೆ ನಿಷ್ಕ್ರಿಯ ದಳ ಸ್ಥಾಪನೆ
- ಪೊಲೀಸ್ ಸಿಬ್ಬಂದಿಗಳ ವಾರ್ಷಿಕ ಆರೋಗ್ಯ ತಪಾಸಣೆಗಾಗಿ ಈ ಸಾಲಿನಲ್ಲಿ 1 ಸಾವಿರ ರೂ. 1500ಕ್ಕೆ ಏರಿಕೆ
- ಬಂದೋಬಸ್ತ್ ನಿಯೋಜಿಸುವ ಪೊಲೀಸ್ ಸಿಬ್ಬಂದಿಗಳಿಗೆ ಆಹಾರ ಭತ್ಯೆ ದರ 200ರಿಂದ 300ಕ್ಕೆ ಹೆಚ್ಚಳಕ್ಕೆ ಕ್ರಮ
- ಗೃಹರಕ್ಷಕ ಹಾಗೂ ಪೌರರಕ್ಷಣಾ ಸ್ವಯಂಸೇವಕರು ಕರ್ತವ್ಯ ಸಂದರ್ಭದಲ್ಲಿ ಮರಣ ಹೊಂದಿದರೆ ಅವಲಂಬಿಕ ಕುಟುಂಬಸ್ಥರಿಗೆ ನೀಡುವ ಪರಿಹಾರ 5ಲಕ್ಷದಿಂದ 10 ಲಕ್ಷಕ್ಕೆ ಹೆಚ್ಚಳ
- ಕಾರಾಗೃಹ ಇಲಾಖೆ ಮೂಲಸೌಕರ್ಯ ಅಭಿವೃದ್ಧಿಗೆ 100 ಕೋಟಿ ಅನುದಾನ ಮಂಜೂರು
- ಕೆ.ಸೇಫ್- 2 ಯೋಜನೆಯಡಿ ಉಪಕರಣ ಹಾಘೂ ಕಟ್ಟಡ ನಿರ್ಮಾಣಕ್ಕೆ ಅಗ್ನಿಶಾಮಕ ಇಲಾಖೆಗೆ 50 ಕೋಟಿ ಅನುದಾನ
- ಮೈಸೂರು ನಗರ ವ್ಯಾಪ್ತಿಯಲ್ಲಿ 3 ಕೋಟಿ ವೆಚ್ಚದಲ್ಲಿ ಹೊಸ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕ್ರಮ
11:30 AM, 7 Mar 2025 (IST)
ಶಿಕ್ಷಣ ಇಲಾಖೆ
- ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ನೆರವಿನೊಂದಿಗೆ 2,500 ಕೋಟಿ ರೂ ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್ ಶಾಲೆಗಳ ಪ್ರಾರಂಭ
- ಶಾಲಾಮಕ್ಕಳಿಗೆ ವಿತರಿಸಲಾಗುತ್ತಿರುವ ಮೊಟ್ಟೆ / ಬಾಳೆಹಣ್ಣು ಆರು ದಿನಕ್ಕೆ ವಿಸ್ತರಣೆ ; ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚ
- ವಾರದಲ್ಲಿ ಮೂರು ದಿನ ವಿತರಿಸಲಾಗುತ್ತಿರುವ ಸಾಯಿ ಶ್ಯೂರ್ ರಾಗಿ ಹೆಲ್ತ್ ಮಿಕ್ಸ್ ಪುಡಿಯನ್ನು ಐದು ದಿನಗಳಿಗೆ ವಿಸ್ತರಣೆ ; ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚ ರಾಜ್ಯ ಸರ್ಕಾರವೇ ಭರಿಸಲಿದೆ.
- ಸರ್ಕಾರಿ ಪ್ರಾಥಮಿಕ ಮತ್ತು ಪೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನ ತಲಾ 2,000 ರೂ. ಹೆಚ್ಚಳ
- ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ ಹೆಚ್ಚಳ
- ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಣ
- 2619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ; ಮುಂದಿನ ದಿನಗಳಲ್ಲಿ 70 ಕೋಟಿ ರೂ ವೆಚ್ಚದಲ್ಲಿ 500 ಶಾಲೆಗಳಿಗೆ ವಿಸ್ತರಣೆ
- ‘ಕಲಿಕಾ ಚಿಲುಮೆ’ ಕಾರ್ಯಕ್ರಮದಡಿ ಒಂದರಿಂದ ಐದನೆ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ
- ‘ಗಣಿತ ಗಣಕ’ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿ, ರಾಜ್ಯಾದ್ಯಂತ ವಿಸ್ತರಣೆ
- ‘ಓದು ಕರ್ನಾಟಕ’ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳ ಅಭಿವೃದ್ಧಿ
- ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ‘ಮರುಸಿಂಚನ’ ಕಾರ್ಯಕ್ರಮ ವಿಸ್ತರಣೆ
- ಕನ್ನಡ ಮತ್ತು ಅಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ‘ಕಲಿಕಾದೀಪ’ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಣೆ
- ‘ಜ್ಞಾನಸೇತು’ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್ ಅಕಾಡೆಮಿ ಸಹಯೋಗದಲ್ಲಿ ಯೋಜನೆ
- ರಾಜ್ಯದ 5,000 ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರಿಗೆ ಈ ಯೋಜನೆಯ ಪ್ರಯೋಜನ
- ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್ ಸಹಯೋಗದೊಂದಿಗೆ ಐ-ಕೋಡ್ ಲ್ಯಾಬ್ ಸ್ಥಾಪನೆ. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್ ಎಂದು ಪರಿಗಣಿಸಿ 756 ಶಾಲೆಗಳಿಗೆ ಅನುಕೂಲ
- ‘ವಿದ್ಯಾವಿಜೇತ’ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳು CET/NEET/JEE ತರಬೇತಿ ನೀಡಲಾಗಿದ್ದು, ಸರ್ದ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ
- ‘ನಿರಂತರ’ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆ ಜಾರಿ
- ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗ ಪ್ರಾರಂಭ
- ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೆ: ಕಂಪ್ಯೂಟರ್ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ 500 ಶಾಲೆಗಳಿಗೆ ವಿಸ್ತರಣೆ
- ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at School ಕಾರ್ಯಕ್ರಮ ರೂಪಿಸಲಾಗಿದ್ದು, ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ
- ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಗಳನ್ನು ನೀಡಲಾಗಿದೆ
- ಮಧ್ಯಾಹ್ನ ಉಪಹಾರ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ 200 ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್. ಶಾಲೆಗಳನ್ನಾಗಿ ಉನ್ನತೀಕರಣ
- ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ
- ದಕ್ಷಿಣ ಕನ್ನಡದ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ & ಗೈಡ್ಸ್ ಅಂತರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗೆ 2 ಕೋಟಿ ರೂ
11:26 AM, 7 Mar 2025 (IST)
ನೀರಾವರಿ ಯೋಜನೆಗಳಿಗೆ ಆದ್ಯತೆ
- ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಕಾಲಮಿತಿಯೊಳಗೆ ಪೂರ್ಣ.
- ಒಂದು ಲಕ್ಷದ ಎಪ್ಪತ್ತೇಳು ಸಾವಿರ ಎಕರೆ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಸಾಮರ್ಥ್ಯ.
- ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು, ರೈತರಿಗೆ ಪರಿಹಾರ ವಿತರಣೆಗೆ ಕ್ರಮ.
- 2.01 ಲಕ್ಷ ಎಕರೆ ನೀರಾವರಿ ಸಾಮರ್ಥ್ಯ ಕಲ್ಪಿಸುವ ಬಾಕಿ ಕಾಮಗಾರಿ ಅನುಷ್ಟಾನಗೊಳಿಸಲು ಕ್ರಮ.
- ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ ಪೂರ್ವ ಸಿದ್ಧತಾ ಕಾರ್ಯ ಅಂತಿಮ.
- ಕೇಂದ್ರ ಸರ್ಕಾರದ ಸಕ್ಷಮ ಪ್ರಾಧಿಕಾರಗಳ ತೀರುವಳಿ ದೊರೆತ ಕೂಡಲೇ ಯೋಜನೆ ಅನುಷ್ಠಾನ.
- ಕಳಸಾ – ಬಂಡೂರಾ ನಾಲಾ ತಿರುವು ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ದೊರೆತ ತಕ್ಷಣ ಕಾಮಗಾರಿ ಆರಂಭ.
- ಕೃಷ್ಣಾ ಕಣಿವೆ, ಕಾವೇರಿ ಕಣಿವೆ ಹಾಗೂ ಇತರ ನದಿಗಳ ಕಣಿವೆಯ ವಿವಿಧ ಯೋಜನೆಗಳಡಿ ಬಾಕಿ ಕಾಮಗಾರಿಗಳ ಪೂರ್ಣಗೊಳಿಸಲು ಕ್ರಮ.
- ಜಲಸಂಪನ್ಮೂಲ ಇಲಾಖೆಯಲ್ಲಿ ಕಾಮಗಾರಿಗಳ ಅಂದಾಜು ತಯಾರಿಕೆಯಲ್ಲಿ ಏಕರೂಪದ ತಾಂತ್ರಿಕ ಮಾನದಂಡ ಜಾರಿ.
- ಸಣ್ಣ ನೀರಾವರಿ: ಎತ್ತಿನಹೊಳೆ ಯೋಜನೆಯಿಂದ ಮಧುಗಿರಿ ತಾಲೂಕಿನ 45 ಕೆರೆಗಳು, ಕೊರಟಗೆರೆ ತಾಲೂಕಿನ 62 ಕೆರೆಗಳಿಗೆ ನೀರು ತುಂಬಿಸಲು 553 ಕೋಟಿ ರೂ. ಅನುಷ್ಠಾನಗೊಳಿಸಲು ಕ್ರಮ.
- 1,080 ಕೋಟಿ ರೂ. ಮೊತ್ತದ ವೃಷಭಾವತಿ ವ್ಯಾಲಿ ಮೊದಲನೇ ಹಂತದ 70 ಕೆರೆ ತುಂಬಿಸುವ ಯೋಜನೆ.
- ರಾಜ್ಯಾದ್ಯಂತ ಸಣ್ಣ ನೀರಾವರಿ ಯೋಜನೆಗಳಿಗೆ 2 ಸಾವಿರ ಕೋಟಿ ರೂ.
11:23 AM, 7 Mar 2025 (IST)
ಶಕ್ತಿ ಯೋಜನೆಗೆ 5,300 ಕೋಟಿ ರೂ. ಅನುದಾನ
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ:
- MSME ಘಟಕಗಳಿಗೆ ನೆರವು ನೀಡಲು 185 ಕೋಟಿ ರೂ.
- 90,645 ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ರಿಯಾಯಿತಿ ವಿದ್ಯುತ್ ಸವಲತ್ತು ಒದಗಿಸಲು 100 ಕೋಟಿ ರೂ.
- ಡೀಪ್ ಟೆಕ್ ಅಭಿವೃದ್ಧಿಗಾಗಿ 100 ಕೋಟಿ ರೂ. ಕಾರ್ಪಸ್ ನಿಧಿ ಹಾಗೂ 300 ಕೋಟಿ ರೂ. ಫಂಡ್ ಆಫ್ ಫಂಡ್ ಸ್ಥಾಪನೆ
- ಬೆಂಕಿಗೆ ಹಾನಿಯಾದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್‌ನ ಪುನರ್ ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ.
ಪ್ರವಾಸೋದ್ಯಮ ಇಲಾಖೆ
- ರಾಜ್ಯದ 10 ಜಿಲ್ಲೆಗಳಲ್ಲಿ ಪ್ರವಾಸಿ ತಾಣ ಅಭಿವೃದ್ಧಿ ಪಡಿಸಲು 50 ಕೋಟಿ ಅನುದಾನ
ಸಾರಿಗೆ ಇಲಾಖೆ:
- ಶಕ್ತಿ ಯೋಜನೆಗೆ 5,300 ಕೋಟಿ ರೂ. ಅನುದಾನ
- ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣ ಜಾಗವನ್ನು ಪ್ರಾಜೆಕ್ಟ್ ಮೆಜೆಸ್ಟಿಕ್ ಯೋಜನೆಯಡಿ ಸಾರಿಗೆ ಹಬ್ ನಿರ್ಮಾಣ
- ಹೊನ್ನಾವರ, ಚಾಮರಾಜನಗರ, ಚಿತ್ರದುರ್ಗದಲ್ಲಿ 20 ಕೋಟಿ ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥ ನಿರ್ಮಾಣ.12 ಕೋಟಿ ರೂ. ಅನುದಾನ
- 25 ಕೋಟಿ ರೂ.ವೆಚ್ಚದಲ್ಲಿ ಐದು ಪ್ರಾದೇಶಿಕ ಸಾರಿಗೆ ಕಚೇರಿಗಳ ದಾಖಲೆ ಡಿಜಿಟಲೀಕರಣ
- ಒಟ್ಟು 60 ಸ್ಥಳಗಳಲ್ಲಿ 50 ಕೋಟಿ ರೂ. ವೆಚ್ಚದಲ್ಲಿ AI ಆಧಾರಿತ ವಿದ್ಯುನ್ಮಾನ ಕ್ಯಾಮರಾ ಅಳವಡಿಕೆ
- 14,750 ಹೊಸ ವಿದ್ಯುತ್ ಚಾಲಿತ ಬಸ್ ಸೇರ್ಪಡೆ ಗುರಿ. ಈ ಪೈಕಿ ಬಿಎಂಟಿಸಿಗೆ 9000 ಬಸ್ ಸೇರ್ಪಡೆ
- ವಿವಿಧ ಸಾರಿಗೆ ನಿಗಮಗಳಿಗೆ ಜಿಸಿಸಿ ಆಧಾರದಲ್ಲಿ 1,000 ಹೊಸ ಡೀಸೆಲ್ ಬಸ್
- ಕೆಆರ್.ಪುರಂನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ
11:14 AM, 7 Mar 2025 (IST)
ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ
- ಸಾರ್ವಜನಿಕ ವಿತರಣಾ ವ್ಯವಸ್ಥೆ ಸುಧಾರಣೆಗೆ 5 ಕೋಟಿ ವೆಚ್ಚದಲ್ಲಿ ಸಗಟು ಗೋದಾಮುಗಳಿಗೆ ಸಿಸಿಟಿವಿ, ಜಿಪಿಎಸ್ ಆಧಾರಿತ ವಾಹನ ಟ್ರಾಕಿಂಗ್ ವ್ಯವಸ್ಥೆ ಮತ್ತು ಕಮಾಂಡ್ ಕಂಟ್ರೋಲ್ ಕೇಂದ್ರ ಸ್ಥಾಪನೆ.
- ಅನ್ನಭಾಗ್ಯ ಯೋಜನೆ ಸಗಟು ಲಾಭಾಂಶ ಪ್ರತಿ ಕ್ವಿಂಟ್ವಾಲ್ ಗೆ 35 ರೂ. ನಿಂದ 45 ರೂ. ಹೆಚ್ಚಳ
- ಗೃಹ ಜ್ಯೋತಿಗೆ 10,100 ಕೋಟಿ ರೂ. ಅನುದಾನ
- 8,833 ಕೋಟಿ ವೆಚ್ಚದಲ್ಲಿ 100 ಹೊಸ ಉಪಕೇಂದ್ರಗಳ ಸ್ಥಾಪನೆ
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ:
- MSME ಘಟಕಗಳಿಗೆ ನೆರವು ನೀಡಲು 185 ಕೋಟಿ ರೂ.
- 90,645 ನೇಕಾರರಿಗೆ ಉಚಿತ ವಿದ್ಯುತ್ ಹಾಗೂ ರಿಯಾಯಿತಿ ವಿದ್ಯುತ್ ಸವಲತ್ತು ಒದಗಿಸಲು 100 ಕೋಟಿ ರೂ.
- ಡೀಪ್ ಟೆಕ್ ಅಭಿವೃದ್ಧಿಗಾಗಿ 100 ಕೋಟಿ ರೂ. ಕಾರ್ಪಸ್ ನಿಧಿ ಹಾಗೂ 300 ಕೋಟಿ ರೂ. ಫಂಡ್ ಆಫ್ ಫಂಡ್ ಸ್ಥಾಪನೆ
- ಬೆಂಕಿಗೆ ಹಾನಿಯಾದ ಬೆಂಗಳೂರು ಬಯೋ-ಇನ್ನೋವೇಷನ್ ಸೆಂಟರ್‌ನ ಪುನರ್ ನಿರ್ಮಾಣಕ್ಕೆ ಒಟ್ಟು 57 ಕೋಟಿ ರೂ.
11:10 AM, 7 Mar 2025 (IST)
ಶಾಲಾ ಮಕ್ಕಳಿಗೆ ಆರು ದಿನ ಮೊಟ್ಟೆ ವಿತರಣೆ
- ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ 6 ದಿನಕ್ಕೆ ವಿಸ್ತರಣೆ. ಅಜೀಂ ಪ್ರೇಮ್ಜಿ ಸಹಯೋಗದಲ್ಲಿ ವಾರದಲ್ಲಿ 6 ದಿನ ಶಾಲಾ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು ನೀಡಲು 1,500 ಕೋಟಿ ರೂ. ಮೀಸಲಿಡಲಾವುದು ಎಂದು ಸಿಎಂ ತಿಳಿಸಿದ್ದಾರೆ.
11:05 AM, 7 Mar 2025 (IST)
ಕಾರ್ಮಿಕ ಇಲಾಖೆ
- ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಬ್ಯಾಸಕ್ಕೆ ಪ್ರೋತ್ಸಾಹಿಸಲು ಕಟ್ಟಡ ರಾಜ್ಯದ 31 ಜಿಲ್ಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೂ ವಸತಿ ಶಾಲೆಗಳ ಪ್ರಾರಂಭಕ್ಕೆ 750 ಕೋಟಿ ರೂ.ಗಳ ನಿಗದಿ.
- ನೋಂದಾಯಿತ ಕಾರ್ಮಿಕರಿಗೆ ಶೈಕ್ಷಣಿಕ, ವೈದ್ಯಕೀಯ ಸೌಲಭ್ಯಕ್ಕಾಗಿ ನೀಡುತ್ತಿರುವ ಸಹಾಯಧನ ದ್ವಿಗುಣ
- ಸಹಜ ಮರಣ ಹೊಂದಿದಲ್ಲಿ 1.5 ಲಕ್ಷ ಪರಿಹಾರ. ಕೆಲಸದ ಸ್ಥಳದಲ್ಲಿ ಮರಣಹೊಂದಿದರೆ 8 ಲಕ್ಷ ರೂ.ಗಳ ಪರಿಹಾರ ಘೋಷಣೆ.
- ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯಡಿ 5 ಲಕ್ಷ ಮಿತಿ ಪೂರ್ಣಗೊಂಡಲ್ಲಿ ಹೃದ್ರೋಗ, ಕ್ಯಾನ್ಸ್ರಗೆ 5 ಲಕ್ಷ ರೂ. ಇತರೆ ಕಾಯಿಲೆಗಳಿಗೆ 2 ಲಕ್ಷ ರೂ.ಗಳನ್ನು ಪಾವತಿ.
- ರಾಜ್ಯ ವಿಮಾ ಆಸ್ಪತ್ರೆ(ಇಎಸ್ಐ) ಮೂಲಸೌಲಭ್ಯ ಹೆಚ್ಚಳ ಮಾಡಲು 51 ಕೋಟಿ ರೂ.ಗಳ ನಿಗದಿ
11:03 AM, 7 Mar 2025 (IST)
ಬೆಂಗಳೂರು ನಗರಾಭಿವೃದ್ಧಿ
- ಬೆಂಗಳೂರು ನಗರ ಮೂಲಸೌಕರ್ಯ ಅಭಿವೃದ್ಧಿಗೆ ನೀಡುತ್ತಿದ್ದ 3 ಸಾವಿರ ಕೋಟಿಯಿಂದ 7 ಸಾವಿರ ಕೋಟಿ ಅನುದಾನ ಹೆಚ್ಚಳ
- 40 ಸಾವಿರ ಕೋಟಿ ವೆಚ್ಚದಲ್ಲಿ ಉತ್ತರ-ದಕ್ಷಿಣ ಮತ್ತು ಪೂರ್ವ- ಪಶ್ಚಿಮ ಸುರಂಗ ಮಾರ್ಗದ ಕಾರಿಡಾರ್ ನಿರ್ಮಿಸಲು ಪ್ರಸ್ತಕ ಸಾಲಿನಲ್ಲಿ 19 ಸಾವಿರ ಕೋಟಿ ಮೀಸಲು
- ನಮ್ಮ ಮೆಟ್ರೋ ಹಂತ-3 ಯೋಜನೆಯೊಂದಿಗೆ 8.916 ಕೋಟಿ ರೂ.ವೆಚ್ಚದಲ್ಲಿ 40.50 ಕಿ.ಮೀ ಉದ್ದದ ಡಬಲ್ ಡೆಕ್ಕರ್ ಫ್ಲೇಓವರ್ ರಸ್ತೆ ನಿರ್ಮಾಣ
- ಬಿಬಿಎಂಪಿ ವ್ಯಾಪ್ತಿಯ 460 ಕಿ.ಮೀ.ಆರ್ಟಿರಿಯಲ್ ಮತ್ತು ಸಬ್ ಆರ್ಟಿರಿಯಲ್ ರಸ್ತೆ ಜಾಲ ನಿರ್ಮಾಣಕ್ಕೆ 660 ಕೋಟಿ ಮೀಸಲು
- ರಾಜಧಾನಿಯಲ್ಲಿ 120 ಕಿ.ಮೀ. ಉದ್ದದ ಮೇಲುಸೇತುವೆ ಹಾಗೂ ಗ್ರೇಡ್ ಸಪರೇಟರ್ ನಿರ್ಮಾಣಕ್ಕೆ ಒತ್ತು
- ಬ್ರ್ಯಾಂಡ್ ಬೆಂಗಳೂರು ಅಭಿಯಾನದ ಅಡಿಯಲ್ಲಿ ಮುಂದಿನ ಮೂರು ವರ್ಷಗಳಲ್ಲಿ 413 ಕೋಟಿ ವೆಚ್ಚದಲ್ಲಿ ಸಮಗ್ರ ಆರೋಗ್ಯ ಯೋಜನೆ ಜಾರಿ
- ನಗರದ ಒಳಚರಂಡಿ ಜಾಲ ಹಾಘೂ ಎಸ್ ಟಿಪಿ ನಿರ್ಮಾಣಕ್ಕೆ ಬಿಬಿಎಂಪಿ ಹಾಗೂ ಬೆಂಗಳೂರು ಜಲಮಂಡಳಿಗೆ 3 ಸಾವಿರ ಕೋಟಿ ಆರ್ಥಿಕ ನೆರವು
- ಎಸ್ ಟಿಪಿ ಘಟಕಗಳ ತ್ಯಾಜ್ಯ ಬಳಸಿ ಬಯೋಗ್ಯಾಸ್ ಆಧಾರಿತ ಮತ್ತು ಕಾರ್ಬನ್ ಕ್ರೆಡಿಟ್ ಉಪಯೋಗ ಪಡೆಯಲು ಪಿಪಿಪಿ ಮಾದರಿ ಯೋಜನೆ ಜಾರಿ
- ಮೆಟ್ರೊ ಜಾಲವನ್ನ ದೇವನಹಳ್ಳಿಯವರೆಗೆ ವಿಸ್ತರಣೆ
- ಕಾವೇರಿ ಹಂತ-6 ಅನುಷ್ಠಾನಕ್ಕಾಗಿ ವಿಸ್ಕೃತ ಯೋಜನಾ ವರದಿಗೆ ತಯಾರಿಗೆ ಅಸ್ತು
10:57 AM, 7 Mar 2025 (IST)
ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ:
- ಅಂಗನವಾಡಿ ಕಾರ್ಯಕರ್ತೆಯರ ಗೌರವಧನ 1,000 ರೂ., ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಳ
- ಗೃಹ ಲಕ್ಷ್ಮಿ ಯೋಜನೆಗೆ 2025-26 ಸಾಲಿನಲ್ಲಿ 28,608 ಕೋಟಿ ರೂ. ಅನುದಾನ
- ಮಹಿಳಾ ಉದ್ದೇಶಿತ ಕಾರ್ಯಕ್ರಮಗಳಿಗೆ ಒಟ್ಟು 94,084 ಕೋಟಿ ರೂ. ಅನುದಾನ
- ಮಕ್ಕಳ ಉದ್ದೇಶಿತ ಕಾರ್ಯಕ್ರಮಗಳಿಗೆ 62,033 ಕೋಟಿ ರೂ. ಅನುದಾನ
10:52 AM, 7 Mar 2025 (IST)
ರೇಷ್ಮೆ ಕೃಷಿಗೆ ಉತ್ತೇಜನ
- ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್ ಘಟಕಗಳ ಸ್ಥಾಪನೆ.
- ರಾಮನಗರ ಮತ್ತು ಶಿಡ್ಲಘಟ್ಟ ಹೈಟೆಕ್ ರೇಷ್ಮೆ ಗೂಡಿನ ಮೊದಲ ಹಂತದ ಕಾಮಗಾರಿ ಪೂರ್ಣ. ಪ್ರಸ್ತಕ ಸಾಲಿನಲ್ಲಿ ಎರಡನೇ ಹಂತದ ಕಾಮಗಾರಿಗೆ 250 ಕೋಟಿ ರೂ. ವೆಚ್ಚ.
- ಮೈಸೂರಿನಲ್ಲಿ ರೇಷ್ಮೆಗೂಡಿನ ಮಾರುಕಟ್ಟೆ ನಬಾರ್ಡ್ ಸಹಯೋಗದಲ್ಲಿ ಸ್ಥಾಪನೆ.
- ರೇಷ್ಮೆ ಬೆಳೆ ವಿಸ್ತರಿಸಲು 55 ಕೋಟಿ ರೂ. ಅನುದಾನ.
- ಪಶುಸಂಗೋಪನೆ : ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಅನುಗ್ರಹ ಯೋಜನೆ ಜಾರಿ.
- 2025-26 ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯ ಪ್ರಾರಂಭ.
- 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡ ನಬಾರ್ಡ್ ಸಹಯೋಗದಲ್ಲಿ ನಿರ್ಮಾಣ.
- ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ.
10:49 AM, 7 Mar 2025 (IST)
ತೆರಿಗೆ ಸಂಗ್ರಹ ಗುರಿ
ವಾಣಿಜ್ಯ ತೆರಿಗೆ:
2025-26ರಲ್ಲಿ 1,20,000 ಕೋಟಿ ರೂ. ಸಂಗ್ರಹ ಗುರಿ
2024-25ರಲ್ಲಿ 1,05,000 ಸಂಗ್ರಹಿಸುವ ನಿರೀಕ್ಷೆ
ಅಬಕಾರಿ:
2025-26 ಸಾಲಿನಲ್ಲಿ 40,000 ಕೋಟಿ ಸಂಗ್ರಹದ ಗುರಿ
2024-25 ಸಾಲಿನ ಮಾರ್ಚ್ ಅಂತ್ಯಕ್ಕೆ 36,500 ಸಂಗ್ರಹದ ನಿರೀಕ್ಷೆ
ನೋಂದಣಿ ಮತ್ತು ಮುದ್ರಾಂಕ ಶುಲ್ಕ:
2025-26 ಸಾಲಿನಲ್ಲಿ 28,000 ಕೋಟಿ ರೂ. ಸಂಗ್ರಹದ ಗುರಿ
2024-25ರಲ್ಲಿ 24,000 ಕೋಟಿ ರೂ. ಸಂಗ್ರಹದ ನಿರೀಕ್ಷೆ
ಮೋಟಾರು ವಾಹನ ತೆರಿಗೆ:
2025-26 ಸಾಲಿನಲ್ಲಿ 15,000 ಕೋಟಿ ರೂ. ಸಂಗ್ರಹದ ಗುರಿ
2024-25 ಸಾಲಿನಲ್ಲಿ 12,500 ಕೋಟಿ ರೂ. ಸಂಗ್ರಹದ ನಿರೀಕ್ಷೆ
ಗಣಿ ಮತ್ತು ಭೂ ವಿಜ್ಞಾನ:
2025-26ರಲ್ಲಿ 3,000 ಕೋಟಿ ರೂ. ಖನಿಜ ತೆರಿಗೆ ಸಂಗ್ರಹದ ಗುರಿ. ಒಟ್ಟು 9,000 ಕೋಟಿ ರೂ. ತೆರಿಗೆಯೇತರ ರಾಜಸ್ವ ಸಂಗ್ರಹದ ಗುರಿ
10:41 AM, 7 Mar 2025 (IST)
ಡಿಜಿಟಲ್ ಕೃಷಿ ಕೇಂದ್ರ
- ರಾಜ್ಯದಲ್ಲಿ ಇನ್ನು 5 ಸಾವಿರ ಕಿರು ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ.
- ಪ್ರಸ್ತಕ ವರ್ಷದಲ್ಲಿ 12 ಸಾವಿರ ಕೃಷಿ ಹೊಂಡ ನಿರ್ಮಾಣ.
- ಡಿಜಿಟಲ್ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ.
- ಜೈವಿಕ ಗೊಬ್ಬರ ಮತ್ತಿತರ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆ.
- ಪ್ರಸ್ತಕ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮ.
- ಮಂಡ್ಯ ಕೃಷಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಅನುಮೋದನೆ, ಮೂಲಸೌಕರ್ಯ ಕಲ್ಪಿಸಲು 25 ಕೋಟಿ ರೂ. ಒದಗಿಸಿ, ಪ್ರಸಕ್ತ ಸಾಲಿನಲ್ಲಿ ತರಗತಿಗಳ ಆರಂಭ.
- ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್ ಸೌಲಭ್ಯ.
- ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದ ಸಾವಯವ ಮತ್ತು ಸಿರಿಧಾನ್ಯಗಳ ಹಬ್ ಸ್ಥಾಪನೆ.
- ವಿಜಯಪುರದ ಮುದ್ದೇಬಿಹಾಳ ತಾಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ.
- ತೋಟಗಾರಿಕೆ ಇಲಾಖೆ : ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2 ಜಾರಿ. ಈ ಯೋಜನೆಗೆ 95 ಕೋಟಿ ರೂ. ಅನುದಾನ.
- ರೈತರಿಗೆ ಮಾಹಿತಿ ಒದಗಿಸಲು ಇಂಡಿಯನ್ ಇನ್ಸ್ ಟಿಟ್ಯೂಟ್ ಆಫ್ ಸ್ಪೇಸ್ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪನೆ.
- ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52 ಸಾವಿರ ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯ ಧನ.
- ಮಲೆನಾಡು ಜಿಲ್ಲೆಗಳಲ್ಲಿ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕೆ ಸಸ್ಯ ಸಂರಕ್ಷಣಾ ಕ್ರಮಗಳೀಗೆ 62 ಕೋಟಿ ರೂ.
- ಜೊಯಿಡಾ ತಾಲೂಕು ಅನ್ನು ರಾಜ್ಯದ ಪ್ರಥಮ ಸಾವಯುವ ತಾಲೂಕನ್ನಾಗಿ ನಿರ್ಮಾಣ ಮಾಡಲಾಗುವುದು.
10:37 AM, 7 Mar 2025 (IST)
ಕೃಷಿಗೆ ಅನುದಾನ
- ಕೃಷಿ : ರಾಜ್ಯದಲ್ಲಿ ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ಅನುದಾನ.
- 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಗೆ 440 ಕೋಟಿ ರೂ. ಸಹಾಯ ಧನ.
10:35 AM, 7 Mar 2025 (IST)
4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
- 4,09,549 ಕೋಟಿ ರೂ. ಗಾತ್ರದ ಬಜೆಟ್ ಮಂಡನೆ
- 2025-26 ಸಾಲಿನಲ್ಲಿ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ
- ಬಂಡವಾಳ ವೆಚ್ಚ 26,474 ಕೋಟಿ ರೂ.
- ರಾಜಸ್ವ ವೆಚ್ಚ ಅಂದಾಜು 3,11,739 ಕೋಟಿ ರೂ.
- 19,262 ಕೋಟಿ ರೂ. ರಾಜಸ್ವ ಕೊರತೆಯ ಬಜೆಟ್ ಮಂಡನೆ
- 1,16,000 ಕೋಟಿ ರೂ. ಸಾಲದ ಮೊರೆ
- ಒಟ್ಟು ರಾಜಸ್ವ ಸ್ವೀಕೃತಿ ಅಂದಾಜು 2,92,477 ಕೋಟಿ ರೂ.
- ಈ ಪೈಕಿ 2,08,100 ಕೋಟಿ ಸ್ವಂತ ತೆರಿಗೆ ಸಂಗ್ರಹದ ಗುರಿ
10:33 AM, 7 Mar 2025 (IST)
20 ಲಕ್ಷ ಉದ್ಯೋಗ ಸೃಷ್ಟಿ
- ಕರ್ನಾಟಕ ವೇಗವಾಗಿ ಬೆಳೆಯುತ್ತಿರುವ ರಾಜ್ಯ. ಪ್ರಸಕ್ತ ಸಾಲಿನಲ್ಲಿ ದೇಶದ ಆರ್ಥಿಕತೆಗಿಂತ ರಾಜ್ಯದ ಆರ್ಥಿಕತೆ ಉತ್ತಮವಾಗಿದೆ.
- ಕೈಗಾರಿಕಾ ಮತ್ತು ಉತ್ಪಾದನಾ ವಲಯದ ಅಭಿವೃದ್ಧಿ ಸರ್ಕಾರ ಬದ್ಧವಾಗಿದೆ. 2023ರ ವೇಳೆಗೆ ರಾಜ್ಯದಲ್ಲಿ 20 ಲಕ್ಷ ಉದ್ಯೋಗ ಸೃಜಿಸುವ ಯೋಜನೆ ಇದೆ.
10:33 AM, 7 Mar 2025 (IST)
ಬ್ರ್ಯಾಂಡ್ ಬೆಂಗಳೂರು
- ನಗರಾಭಿವೃದ್ಧಿ, ಕೃಷಿ, ಶಿಕ್ಷಣಕ್ಕೆ ಬಜೆಟ್ನಲ್ಲಿ ಆದ್ಯತೆ. ಜೊತೆಗೆ ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಬೆಂಗಳೂರಿಗೆ ಎಲ್ಲ ಮೂಲಭೂತ ಸೌಕರ್ಯ ಒದಗಿಸಲು ಕ್ರಮ
- ಬಜೆಟ್ನಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಜೊತೆಗೆ 6 ಅಭಿವೃದ್ಧಿ ಆಯಾಮ ಗುರುತಿಸಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತೇವೆ. ಜೊತೆಗೆ ಗ್ರಾಮೀಣ ಅಭಿವೃದ್ಧಿಯೆ ಒತ್ತು ನೀಡುತ್ತೇವೆ.
- ಗೋಪಾಲಕೃಷ್ಣ ಅಡಿಗರ ನುಡಿ ಮೂಲಕ ಬಜೆಟ್ ಮಂಡನೆ ಆರಂಭಿಸಿದ ಸಿಎಂ
10:11 AM, 7 Mar 2025 (IST)
ಬಜೆಟ್ ಮಂಡನೆ ಆರಂಭ
- ಮಂಡಿ ನೋವಿನ ಹಿನ್ನೆಲೆಯಲ್ಲಿ ಕುಳಿತುಕೊಂಡೇ ಬಜೆಟ್ ಮಂಡನೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ
- 15 ಬಾರಿ ನಿಂತುಕೊಂಡು ಬಜೆಟ್ ಓದಿದ್ದ ಸಿಎಂ, ಈ ಬಾರಿ ಮಂಡಿ ನೋವಿನಿಂದಾಗಿ ಕುಳಿತುಕೊಂಡು ಬಜೆಟ್ ಓದುತ್ತಿದ್ದಾರೆ.
ರಾಜ್ಯ
Mysuru Dasara: ಜಂಬೂಸವಾರಿ ಕಣ್ತುಂಬಿಕೊಳ್ಳಲು ಸಿಎಂ ಡಿಕೆ ಶಿವಕುಮಾರ್ ಆಹ್ವಾನ
ಬೆಂಗಳೂರು: ನಾಲ್ಕು ಶತಮಾನಗಳಿಗೂ ಹೆಚ್ಚು ಕಾಲದ ಭವ್ಯ ಇತಿಹಾಸ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹೊಂದಿರುವ ಕರ್ನಾಟಕದ ನಾಡಹಬ್ಬ ಮೈಸೂರು ದಸರಾ(Mysuru Dasara) ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ. ಐತಿಹಾಸಿಕ ಮೈಸೂರು ದಸರಾ ವೈಭವವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಮಾತ್ರವಲ್ಲದೆ ದೇಶದ ವಿವಿಧೆಡೆಯಿಂದಲೂ ಪ್ರವಾಸಿಗರು ಮೈಸೂರಿನತ್ತ ಆಗಮಿಸಲು ಸಜ್ಜಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾರ್ವಜನಿಕರಿಗೆ ಮೈಸೂರು ದಸರಾ ಮಹೋತ್ಸವಕ್ಕೆ ಆತ್ಮೀಯ ಆಹ್ವಾನ ನೀಡಿದ್ದಾರೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಮಾಜಿಕ ಜಾಲತಾಣಗಳ ಮೂಲಕ ದಸರಾ ಮಹೋತ್ಸವದ ವಿಶೇಷತೆಗಳನ್ನು ಹಂಚಿಕೊಂಡು, ಮೈಸೂರು ದಸರಾ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಜನರು ಕುಟುಂಬ ಸಮೇತರಾಗಿ ಆಗಮಿಸಬೇಕು ಎಂದು ಕರೆ ನೀಡಿದ್ದಾರೆ. ನಾಡಿನ ಸಾಂಸ್ಕೃತಿಕ ವೈಭವ, ಜಾನಪದ ಕಲೆ, ಅರಮನೆಯ ಬೆಳಕಿನ ಅಲಂಕಾರ ಮತ್ತು ಜಂಬೂಸವಾರಿಯಂತಹ ಪ್ರಮುಖ ಕಾರ್ಯಕ್ರಮಗಳು ಈ ಬಾರಿಯ ದಸರಾ ಮಹೋತ್ಸವಕ್ಕೆ ಮತ್ತಷ್ಟು ಮೆರುಗು ನೀಡಲಿವೆ ಎಂದು ಅವರು ತಿಳಿಸಿದ್ದಾರೆ.
ಮೈಸೂರು ರಾಜಬೀದಿಗಳಲ್ಲಿ ದೀಪಗಳ ವೈಭವ
ಮೈಸೂರು ದಸರಾ ಎಂದಾಕ್ಷಣ ನೆನಪಾಗುವುದು ಅರಮನೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ಮತ್ತು ರಾಜಬೀದಿಗಳಲ್ಲಿ ಕಾಣಿಸಿಕೊಳ್ಳುವ ಅದ್ದೂರಿ ಬೆಳಕಿನ ಅಲಂಕಾರ. ಈ ಬಾರಿಯೂ ಲಕ್ಷಾಂತರ ವರ್ಣರಂಜಿತ ವಿದ್ಯುತ್ ದೀಪಗಳಿಂದ ಮೈಸೂರಿನ ಪ್ರಮುಖ ಪ್ರದೇಶಗಳನ್ನು ಅಲಂಕರಿಸಲಾಗುತ್ತಿದೆ.
ರಾತ್ರಿ ವೇಳೆಯಲ್ಲಿ ದೀಪಗಳ ಬೆಳಕಿನಲ್ಲಿ ಕಂಗೊಳಿಸುವ ಮೈಸೂರು ನಗರ ಪ್ರವಾಸಿಗರಿಗೆ ವಿಶಿಷ್ಟ ಅನುಭವ ನೀಡಲಿದೆ. ವಿಶೇಷವಾಗಿ ಮೈಸೂರು ಅರಮನೆಯ ವಿದ್ಯುತ್ ದೀಪಾಲಂಕಾರ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಅರಮನೆ ಹಾಗೂ ಪ್ರಮುಖ ರಸ್ತೆಗಳ ಬೆಳಕಿನ ಅಲಂಕಾರವನ್ನು ಕಣ್ತುಂಬಿಕೊಳ್ಳಲು ಪ್ರತಿವರ್ಷದಂತೆ ಈ ಬಾರಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ.
ಜಾನಪದ ಕಲಾತಂಡಗಳ ಪ್ರದರ್ಶನ
ಮೈಸೂರು ದಸರಾ ಕೇವಲ ರಾಜವೈಭವ ಮತ್ತು ಬೆಳಕಿನ ಅಲಂಕಾರಕ್ಕೆ ಸೀಮಿತವಾಗಿಲ್ಲ. ಕರ್ನಾಟಕದ ವಿವಿಧ ಭಾಗಗಳ ಜಾನಪದ ಕಲೆ ಮತ್ತು ಸಂಸ್ಕೃತಿಯನ್ನು ಪರಿಚಯಿಸುವ ವಿವಿಧ ಕಲಾತಂಡಗಳ ಪ್ರದರ್ಶನವೂ ದಸರಾ ಮಹೋತ್ಸವದ ಪ್ರಮುಖ ಭಾಗವಾಗಿದೆ.
ವಿವಿಧ ಜಿಲ್ಲೆಗಳಿಂದ ಆಗಮಿಸುವ ಜಾನಪದ ಕಲಾತಂಡಗಳು ತಮ್ಮ ಸಾಂಪ್ರದಾಯಿಕ ಕಲೆ, ನೃತ್ಯ ಮತ್ತು ಸಂಗೀತದ ಮೂಲಕ ದಸರಾ ಸಂಭ್ರಮಕ್ಕೆ ಮತ್ತಷ್ಟು ರಂಗು ತುಂಬಲಿವೆ. ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ಅವಕಾಶವನ್ನು ದಸರಾ ಮಹೋತ್ಸವ ಒದಗಿಸುತ್ತದೆ.
ಜಾನಪದ ಕಲಾವಿದರ ಪ್ರದರ್ಶನಗಳು ಸ್ಥಳೀಯರು ಮಾತ್ರವಲ್ಲದೆ ಹೊರರಾಜ್ಯಗಳಿಂದ ಆಗಮಿಸುವ ಪ್ರವಾಸಿಗರಿಗೂ ಕರ್ನಾಟಕದ ಸಾಂಸ್ಕೃತಿಕ ವೈವಿಧ್ಯವನ್ನು ಪರಿಚಯಿಸಲಿವೆ.
750 ಕೆಜಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿ
ಮೈಸೂರು ದಸರಾ ಮಹೋತ್ಸವದ ಅತ್ಯಂತ ಪ್ರಮುಖ ಆಕರ್ಷಣೆಗಳಲ್ಲಿ ಜಂಬೂಸವಾರಿ ಪ್ರಮುಖ ಸ್ಥಾನ ಪಡೆದಿದೆ. ಅಲಂಕೃತ ಆನೆಗಳೊಂದಿಗೆ ನಡೆಯುವ ಜಂಬೂಸವಾರಿಯನ್ನು ವೀಕ್ಷಿಸಲು ದೇಶ-ವಿದೇಶಗಳಿಂದಲೂ ಪ್ರವಾಸಿಗರು ಮೈಸೂರಿಗೆ ಆಗಮಿಸುತ್ತಾರೆ.
ಈ ಬಾರಿಯ ಜಂಬೂಸವಾರಿಯಲ್ಲಿ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನು ಹೊತ್ತು ಸಾಗುವ ವೈಭವವನ್ನು ಕಣ್ತುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ. ರಾಜಮಾರ್ಗದಲ್ಲಿ ಸಾಗುವ ಜಂಬೂಸವಾರಿ ಮೈಸೂರು ದಸರಾ ಮಹೋತ್ಸವದ ಐತಿಹಾಸಿಕ ಪರಂಪರೆ ಮತ್ತು ಧಾರ್ಮಿಕ ನಂಬಿಕೆಗಳನ್ನು ಪ್ರತಿಬಿಂಬಿಸುವ ಪ್ರಮುಖ ಕಾರ್ಯಕ್ರಮವಾಗಿದೆ.
ಜಂಬೂಸವಾರಿಯ ಸಂದರ್ಭದಲ್ಲಿ ಅಲಂಕೃತ ಆನೆಗಳು, ವಿವಿಧ ಕಲಾತಂಡಗಳು, ಪೊಲೀಸ್ ಪಡೆಗಳು, ಸಾಂಸ್ಕೃತಿಕ ತಂಡಗಳು ಹಾಗೂ ವಿವಿಧ ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರುಗು ನೀಡುತ್ತವೆ.
ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳಿಂದ ಉದ್ಘಾಟನೆ
ಈ ವರ್ಷದ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳ ಗವಿಮಠದ ಪರಮಪೂಜ್ಯ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳ ದಿವ್ಯ ಹಸ್ತದಿಂದ ಉದ್ಘಾಟಿಸಲಾಗುತ್ತಿದೆ. ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಧಾರ್ಮಿಕತೆ, ಸಂಸ್ಕೃತಿ ಮತ್ತು ಕಲೆಯ ಸಮ್ಮಿಲನವನ್ನು ಕಾಣಬಹುದಾಗಿದೆ.
ದಸರಾ ಉದ್ಘಾಟನೆಯೊಂದಿಗೆ ಮೈಸೂರು ನಗರದಲ್ಲಿ ಹಬ್ಬದ ವಾತಾವರಣ ಮತ್ತಷ್ಟು ಗರಿಗೆದರಲಿದೆ. ಚಾಮುಂಡಿಬೆಟ್ಟದಲ್ಲಿ ನಡೆಯುವ ಸಾಂಪ್ರದಾಯಿಕ ಕಾರ್ಯಕ್ರಮದೊಂದಿಗೆ ನಾಡಹಬ್ಬಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ಕುಟುಂಬ ಸಮೇತರಾಗಿ ಮೈಸೂರಿಗೆ ಬನ್ನಿ: ಸಿಎಂ ಕರೆ
ಮೈಸೂರು ದಸರಾ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ದೇಶದ ಮುಂದೆ ಪರಿಚಯಿಸುವ ಪ್ರಮುಖ ಉತ್ಸವವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಮೈಸೂರು ದಸರಾ ಮಹೋತ್ಸವದಲ್ಲಿ ಭಾಗವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಂದೇಶದಲ್ಲಿ ಆಹ್ವಾನ ನೀಡಿದ್ದಾರೆ.
ಕುಟುಂಬ ಸದಸ್ಯರು ಮತ್ತು ಆತ್ಮೀಯರೊಂದಿಗೆ ಮೈಸೂರಿಗೆ ಆಗಮಿಸಿ ದಸರಾ ವೈಭವವನ್ನು ಕಣ್ತುಂಬಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಕರ್ನಾಟಕದ ವಿಶಿಷ್ಟ ಆತಿಥ್ಯವನ್ನು ಅನುಭವಿಸುವುದರ ಜೊತೆಗೆ, ಮೈಸೂರು ಅರಮನೆ, ಜಂಬೂಸವಾರಿ, ಜಾನಪದ ಕಲಾ ಪ್ರದರ್ಶನಗಳು, ದೀಪಾಲಂಕಾರ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ವೀಕ್ಷಿಸುವ ಅವಕಾಶ ಪ್ರವಾಸಿಗರಿಗೆ ದೊರೆಯಲಿದೆ.
ಹೀಗಾಗಿ ಮೈಸೂರು ದಸರಾ ಮಹೋತ್ಸವ ಮತ್ತೊಮ್ಮೆ ಕರುನಾಡಿನ ಐತಿಹಾಸಿಕ ಪರಂಪರೆ, ಧಾರ್ಮಿಕ ನಂಬಿಕೆ, ಕಲೆ ಮತ್ತು ಸಂಸ್ಕೃತಿಯ ಅದ್ಧೂರಿ ಸಂಗಮವಾಗಿ ಹೊರಹೊಮ್ಮಲು ಸಜ್ಜಾಗಿದೆ. ಮೈಸೂರಿನತ್ತ ಪ್ರವಾಸಿಗರ ಆಗಮನ ಹೆಚ್ಚಾಗುವ ನಿರೀಕ್ಷೆಯಿದ್ದು, ನಾಡಹಬ್ಬದ ಸಂಭ್ರಮಕ್ಕೆ ಇಡೀ ನಗರ ಸಿದ್ಧವಾಗಿದೆ.
Also Read: https://hosasuddi.in/yaduveer-wadiyar-opposes-kambala-during-mysuru-dasara/
ರಾಜ್ಯ
Mysuru Dasara ಉದ್ಘಾಟನೆ: ಚಾಮುಂಡಿಬೆಟ್ಟಕ್ಕೆ ನಾಳೆ ಬೆಳಗ್ಗೆ ಪ್ರವೇಶ ನಿರ್ಬಂಧ
ಮೈಸೂರು: ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ವಿಶ್ವವಿಖ್ಯಾತ ಮೈಸೂರು ದಸರಾ(Mysuru Dasara) ಮಹೋತ್ಸವದ ವೈಭವಯುತ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ನಾಡದೇವತೆ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯಲು ಹಾಗೂ ದಸರಾ ಉದ್ಘಾಟನಾ ಸಮಾರಂಭವನ್ನು ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧ ಜಿಲ್ಲೆಗಳು ಮಾತ್ರವಲ್ಲದೆ ಹೊರರಾಜ್ಯಗಳಿಂದಲೂ ಪ್ರವಾಸಿಗರು ಮೈಸೂರಿನತ್ತ ಆಗಮಿಸಲು ಸಜ್ಜಾಗಿದ್ದಾರೆ. ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುವ ನಿರೀಕ್ಷೆಯಿದೆ.

Mysuru Dasara
ನಾಳೆ ಭಾನುವಾರ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ದೊರೆಯಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ವಿಶೇಷವಾಗಿ ಗಣ್ಯರ ಆಗಮನ ಮತ್ತು ಭದ್ರತಾ ವ್ಯವಸ್ಥೆಯನ್ನು ಗಮನದಲ್ಲಿಟ್ಟುಕೊಂಡು ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು ಮತ್ತು ವಾಹನಗಳ ಪ್ರವೇಶಕ್ಕೆ ನಿರ್ದಿಷ್ಟ ಅವಧಿಯಲ್ಲಿ ನಿರ್ಬಂಧ ವಿಧಿಸಲಾಗಿದೆ.
ನಾಳೆ ಮೈಸೂರು ದಸರಾ ಉದ್ಘಾಟನೆ
ಸಂಪ್ರದಾಯದಂತೆ ನಾಡಿನ ಅಧಿದೇವತೆ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ದಸರಾ ಮಹೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಲಾಗುತ್ತದೆ. ಈ ಬಾರಿ ಕೊಪ್ಪಳದ ಗವಿಮಠದ ಶ್ರೀಗಳು ದಸರಾ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಲಾಗಿದೆ. ಐತಿಹಾಸಿಕ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಹಲವು ಸಚಿವರು, ಗಣ್ಯರು ಹಾಗೂ ಪ್ರಮುಖ ಮಠಾಧೀಶರು ಭಾಗವಹಿಸುವ ನಿರೀಕ್ಷೆಯಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ದಸರಾ ರಾಜ್ಯದ ಪ್ರಮುಖ ಪ್ರವಾಸೋದ್ಯಮ ಆಕರ್ಷಣೆಯಾಗಿ ಹೊರಹೊಮ್ಮುತ್ತಿದೆ. ದಸರಾ ಉದ್ಘಾಟನೆಯೊಂದಿಗೆ ಮೈಸೂರು ನಗರದಲ್ಲಿ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು, ಪ್ರದರ್ಶನಗಳು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ.
Mysuru Dasara ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ
ದಸರಾ ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಬಿಗಿ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ಗಣ್ಯರ ಆಗಮನ, ಸಮಾರಂಭದ ಭದ್ರತೆ ಹಾಗೂ ಶಿಷ್ಟಾಚಾರವನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಸಾರ್ವಜನಿಕರು ಮತ್ತು ವಾಹನಗಳ ಪ್ರವೇಶಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಿದೆ.
ಜಿಲ್ಲಾಡಳಿತದ ಮಾಹಿತಿಯಂತೆ, ನಾಳೆ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರು ಮತ್ತು ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಹೀಗಾಗಿ ಭಕ್ತರು ಮತ್ತು ಪ್ರವಾಸಿಗರು ಈ ಅವಧಿಯಲ್ಲಿ ಚಾಮುಂಡಿಬೆಟ್ಟಕ್ಕೆ ತೆರಳುವುದನ್ನು ತಪ್ಪಿಸುವುದು ಸೂಕ್ತವಾಗಿದೆ.
ಬೆಳಗ್ಗೆಯೇ ಚಾಮುಂಡಿಬೆಟ್ಟಕ್ಕೆ ತೆರಳಲು ಯೋಜನೆ ಮಾಡಿಕೊಂಡಿರುವ ಭಕ್ತರು ತಮ್ಮ ಪ್ರಯಾಣದ ವೇಳಾಪಟ್ಟಿಯನ್ನು ಬದಲಾಯಿಸಿಕೊಳ್ಳಬೇಕಾಗಿದೆ. ಮಧ್ಯಾಹ್ನ 1 ಗಂಟೆಯ ನಂತರ ಚಾಮುಂಡೇಶ್ವರಿ ದರ್ಶನಕ್ಕೆ ಅವಕಾಶ ದೊರೆಯಲಿದೆ ಎಂದು ತಿಳಿಸಲಾಗಿದ್ದು, ಅದರಂತೆ ಪ್ರವಾಸಿಗರು ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳಬಹುದು.
ಪ್ರವಾಸಿಗರಿಗೆ ಜಿಲ್ಲಾಡಳಿತದ ಸಲಹೆ
ಮೈಸೂರು ದಸರಾ ಉದ್ಘಾಟನೆಗೆ ರಾಜ್ಯದ ವಿವಿಧ ಭಾಗಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿರುವುದರಿಂದ, ಪ್ರಮುಖ ಪ್ರವಾಸಿ ತಾಣಗಳಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆಯಿದೆ. ಚಾಮುಂಡಿಬೆಟ್ಟಕ್ಕೆ ತೆರಳುವವರು ಪ್ರವೇಶ ನಿರ್ಬಂಧದ ಸಮಯವನ್ನು ಗಮನದಲ್ಲಿಟ್ಟುಕೊಂಡು ಪ್ರಯಾಣಿಸುವುದು ಅಗತ್ಯವಾಗಿದೆ.
ವಿಶೇಷವಾಗಿ ಬೆಳಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಚಾಮುಂಡಿಬೆಟ್ಟದ ಪ್ರವೇಶ ನಿರ್ಬಂಧ ಇರುವುದರಿಂದ, ಈ ಅವಧಿಯಲ್ಲಿ ಬೆಟ್ಟಕ್ಕೆ ತೆರಳುವ ಪ್ರವಾಸಿಗರು ಅನಗತ್ಯವಾಗಿ ತೊಂದರೆ ಅನುಭವಿಸುವ ಸಾಧ್ಯತೆಯಿದೆ. ಹೀಗಾಗಿ ಮಧ್ಯಾಹ್ನದ ನಂತರ ದರ್ಶನಕ್ಕೆ ತೆರಳುವುದು ಸೂಕ್ತವಾಗಲಿದೆ.
Mysuru Dasara ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ
ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿರುವ ಫಲಪುಷ್ಪ ಪ್ರದರ್ಶನವೂ ಪ್ರವಾಸಿಗರನ್ನು ಆಕರ್ಷಿಸಲು ಸಜ್ಜಾಗಿದೆ. ನಗರದ ಪ್ರಸಿದ್ಧ ಕುಪ್ಪಣ್ಣ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆಗಳು ನಡೆದಿದ್ದು, ಈ ಬಾರಿ ವಿಶೇಷ ವಿಷಯಾಧಾರಿತ ಪರಿಕಲ್ಪನೆಯೊಂದಿಗೆ ಅಲಂಕಾರಗಳನ್ನು ರೂಪಿಸಲಾಗಿದೆ.
ಈ ವರ್ಷದ ಫಲಪುಷ್ಪ ಪ್ರದರ್ಶನದ ಪ್ರಮುಖ ವಿಷಯ ‘ಪ್ರಜಾಪ್ರಭುತ್ವದ ಹಬ್ಬ’ ಎಂಬುದಾಗಿದೆ. ವಿವಿಧ ಬಗೆಯ ಹೂವುಗಳು ಮತ್ತು ಸಸ್ಯಗಳನ್ನು ಬಳಸಿ ವಿಶೇಷ ಅಲಂಕಾರಗಳನ್ನು ಸಿದ್ಧಪಡಿಸಲಾಗಿದ್ದು, ಪ್ರವಾಸಿಗರಿಗೆ ವಿಭಿನ್ನ ದೃಶ್ಯಾನುಭವ ನೀಡುವ ನಿರೀಕ್ಷೆಯಿದೆ.
Mysuru Dasara ಅಕ್ಟೋಬರ್ 11ರಿಂದ 21ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಮೈಸೂರು ದಸರಾ ಪ್ರವಾಸಕ್ಕೆ ಬರುವವರಿಗೆ ಇದು ಮತ್ತೊಂದು ಪ್ರಮುಖ ಆಕರ್ಷಣೆಯಾಗಲಿದೆ. ದಸರಾ ಸಂಭ್ರಮದ ಜೊತೆಗೆ ಫಲಪುಷ್ಪ ಪ್ರದರ್ಶನವನ್ನು ವೀಕ್ಷಿಸಲು ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆಯಿದೆ.
ಮೈಸೂರು ದಸರಾ ಉದ್ಘಾಟನೆಯ ಹಿನ್ನೆಲೆಯಲ್ಲಿ ನಗರದಲ್ಲಿ ಈಗಾಗಲೇ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ದಸರಾ ಕಾರ್ಯಕ್ರಮಗಳಿಗೆ ಆಗಮಿಸುವ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವುದರ ಜೊತೆಗೆ, ಚಾಮುಂಡಿಬೆಟ್ಟದ ಪ್ರವೇಶ ನಿರ್ಬಂಧದ ಸಮಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪ್ರವಾಸದ ವೇಳಾಪಟ್ಟಿಯನ್ನು ರೂಪಿಸಿಕೊಳ್ಳುವುದು ಅಗತ್ಯವಾಗಿದೆ.
Also Read: https://hosasuddi.in/cjp-leaders-detained-inside-delhi-flight-women-cops/
ರಾಜ್ಯ
Karnataka ದಲ್ಲಿ ಮದ್ಯ ಮಾರಾಟದಿಂದ ₹1.10 ಲಕ್ಷ ಕೋಟಿ ಆದಾಯ: 3 ವರ್ಷದಲ್ಲಿ ಭಾರೀ ಏರಿಕೆ
ಬೆಂಗಳೂರು: ಕರ್ನಾಟಕದಲ್ಲಿ(Karnataka) ಮದ್ಯ ಮಾರಾಟದಿಂದ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಹರಿದುಬರುವ ಆದಾಯ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಕಳೆದ ಮೂರು(3) ವರ್ಷಗಳ ಅವಧಿಯಲ್ಲಿ ಅಬಕಾರಿ ಇಲಾಖೆಯ ಮೂಲಕ ಸಂಗ್ರಹವಾಗಿರುವ ರಾಜಸ್ವದ ಮೊತ್ತ ಸುಮಾರು ₹1.10 ಲಕ್ಷ ಕೋಟಿ ತಲುಪಿದೆ. ರಾಜ್ಯದಲ್ಲಿ ಮದ್ಯ ಮಾರಾಟದ ಪ್ರಮಾಣ ಮತ್ತು ಅದರಿಂದ ಸರ್ಕಾರಕ್ಕೆ ಲಭಿಸುವ ಆದಾಯದಲ್ಲಿ ನಿರಂತರ ಏರಿಕೆ ಕಂಡುಬರುತ್ತಿರುವುದು ಗಮನಾರ್ಹವಾಗಿದೆ.
ಮದ್ಯ ಮಾರಾಟವು ಕರ್ನಾಟಕ ಸರ್ಕಾರದ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಿದೆ. ಅಬಕಾರಿ ಇಲಾಖೆಗೆ ನಿಗದಿಪಡಿಸಲಾಗುವ ಆದಾಯ ಗುರಿಯನ್ನು ತಲುಪಲು ಪ್ರತಿವರ್ಷ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಮದ್ಯದ ಸನ್ನದು ಶುಲ್ಕ, ಹೆಚ್ಚುವರಿ ಸನ್ನದು ಶುಲ್ಕ ಹಾಗೂ ಮಾರಾಟದಿಂದ ಸಂಗ್ರಹವಾಗುವ ತೆರಿಗೆಗಳ ಮೂಲಕ ಸರ್ಕಾರಕ್ಕೆ ದೊಡ್ಡ ಪ್ರಮಾಣದ ರಾಜಸ್ವ ಲಭಿಸುತ್ತಿದೆ.
ಮೂರು ವರ್ಷದಲ್ಲಿ ₹1.10 ಲಕ್ಷ ಕೋಟಿ ಆದಾಯ
ಲಭ್ಯವಿರುವ ಅಂಕಿಅಂಶಗಳ ಪ್ರಕಾರ, 2023-24ನೇ ಸಾಲಿನಲ್ಲಿ ಅಬಕಾರಿ ಇಲಾಖೆಯಿಂದ ₹34,628.98 ಕೋಟಿ ಆದಾಯ ಸಂಗ್ರಹವಾಗಿದೆ. 2024-25ನೇ ಸಾಲಿನಲ್ಲಿ ಈ ಮೊತ್ತ ₹35,783.54 ಕೋಟಿಗೆ ಏರಿಕೆಯಾಗಿದೆ. 2025-26ನೇ ಸಾಲಿನಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, ಬರೋಬ್ಬರಿ ₹40,182.98 ಕೋಟಿ ರಾಜಸ್ವ ಸಂಗ್ರಹವಾಗಿದೆ.
ಹೀಗೆ ಮೂರು ವರ್ಷಗಳ ಒಟ್ಟು ಆದಾಯವನ್ನು ಲೆಕ್ಕ ಹಾಕಿದರೆ ಸುಮಾರು ₹1,10,595.50 ಕೋಟಿ ಆಗುತ್ತದೆ. ಅಂದರೆ ಮೂರು ವರ್ಷಗಳಲ್ಲಿ ಮದ್ಯ ಮಾರಾಟ ಮತ್ತು ಅಬಕಾರಿ ವಲಯದಿಂದ ರಾಜ್ಯದ ಬೊಕ್ಕಸಕ್ಕೆ ₹1.10 ಲಕ್ಷ ಕೋಟಿಗೂ ಅಧಿಕ ಮೊತ್ತ ಹರಿದುಬಂದಿದೆ.
2026-27ರಲ್ಲಿ ₹45,000 ಕೋಟಿ ಗುರಿ
ಅಬಕಾರಿ ಇಲಾಖೆಯ ಆದಾಯ ಸಂಗ್ರಹದಲ್ಲಿ ಏರಿಕೆ ಮುಂದುವರಿದಿರುವ ಹಿನ್ನೆಲೆಯಲ್ಲಿ 2026-27ನೇ ಸಾಲಿಗೆ ₹45,000 ಕೋಟಿ ರಾಜಸ್ವ ಸಂಗ್ರಹಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಪ್ರಸಕ್ತ ಆರ್ಥಿಕ ವರ್ಷದ ಮೊದಲ ಆರು ತಿಂಗಳಲ್ಲೇ ಇಲಾಖೆಯು ಗುರಿಯ ಅರ್ಧದಷ್ಟು ಮೊತ್ತದ ಸಮೀಪ ತಲುಪಿದೆ ಎನ್ನಲಾಗಿದೆ.
ಇದೀಗ ರಾಜ್ಯದಲ್ಲಿ ಹಬ್ಬಗಳ ಋತು ಆರಂಭವಾಗಿರುವುದರಿಂದ ಮದ್ಯ ಮಾರಾಟ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹಬ್ಬಗಳು, ಪ್ರವಾಸೋದ್ಯಮ ಚಟುವಟಿಕೆಗಳು ಹಾಗೂ ವಿವಿಧ ಸಾಮಾಜಿಕ ಕಾರ್ಯಕ್ರಮಗಳ ಸಂದರ್ಭದಲ್ಲಿ ಮದ್ಯ ಮಾರಾಟ ಹೆಚ್ಚಾಗುವ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆಯ ಆದಾಯದಲ್ಲೂ ಏರಿಕೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.
ಆನ್‌ಲೈನ್ ಮದ್ಯ ಮಾರಾಟಕ್ಕೆ ಬೇಡಿಕೆ
ಇದರ ನಡುವೆ ರಾಜ್ಯದಲ್ಲಿ ಆನ್‌ಲೈನ್ ಮೂಲಕ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂಬ ಬೇಡಿಕೆಯೂ ಕೇಳಿಬರುತ್ತಿದೆ. ಗ್ರಾಹಕರಿಗೆ ಸುಲಭವಾಗಿ ಮದ್ಯ ಲಭ್ಯವಾಗುವಂತೆ ಆನ್‌ಲೈನ್ ಮಾರಾಟ ವ್ಯವಸ್ಥೆ ಕಲ್ಪಿಸಬೇಕು ಎಂಬ ಚರ್ಚೆ ಹಲವು ಸಂದರ್ಭಗಳಲ್ಲಿ ನಡೆದಿದೆ. ಆದರೆ ಕರ್ನಾಟಕದಲ್ಲಿ ಈ ವ್ಯವಸ್ಥೆಗೆ ಈವರೆಗೆ ಸರ್ಕಾರದಿಂದ ಅಂತಿಮ ಸಮ್ಮತಿ ದೊರೆತಿಲ್ಲ.
ಆನ್‌ಲೈನ್ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ವಿಚಾರದಲ್ಲಿ ಕಾನೂನು, ನಿಯಂತ್ರಣ, ವಯಸ್ಸಿನ ಪರಿಶೀಲನೆ ಹಾಗೂ ಮಾರಾಟದ ಮೇಲ್ವಿಚಾರಣೆ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಬೇಕಾಗುತ್ತದೆ. ಹೀಗಾಗಿ ಈ ಕುರಿತು ಸರ್ಕಾರದ ಅಂತಿಮ ನಿರ್ಧಾರ ಇನ್ನೂ ಮಹತ್ವದ್ದಾಗಿದೆ.
MSILಗೆ ಹೆಚ್ಚುವರಿ ಮದ್ಯದ ಸನ್ನದುಗಳು
ರಾಜ್ಯದಲ್ಲಿ ಮದ್ಯ ಮಾರಾಟ ವ್ಯವಸ್ಥೆಯನ್ನು ವಿಸ್ತರಿಸುವ ಭಾಗವಾಗಿ ಎಂಎಸ್‌ಐಎಲ್ (MSIL) ಸಂಸ್ಥೆಗೆ ಹೊಸ ಸನ್ನದುಗಳನ್ನು ನೀಡುವ ವ್ಯವಸ್ಥೆಯೂ ಇದೆ. ತಾಲ್ಲೂಕಿಗೆ ಕನಿಷ್ಠ ಎರಡು ಸನ್ನದುಗಳಂತೆ ಒಟ್ಟು 352 ಸನ್ನದುಗಳು, ಜಿಲ್ಲಾ ಕೇಂದ್ರಗಳಿಗೆ ತಲಾ ಎರಡು ಸನ್ನದುಗಳಂತೆ 58 ಸನ್ನದುಗಳು ಹಾಗೂ ಎಂಎಸ್‌ಐಎಲ್ ಸಂಸ್ಥೆಯ ಪ್ರಾದೇಶಿಕ ಬೇಡಿಕೆ ಅಧ್ಯಯನದ ಆಧಾರದ ಮೇಲೆ ಕೋರಿಕೆ ಸಲ್ಲಿಸುವ ಸ್ಥಳಗಳಿಗೆ ಸನ್ನದುಗಳನ್ನು ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ.
ಇದರ ಜೊತೆಗೆ ಎಂಎಸ್‌ಐಎಲ್ ಸಂಸ್ಥೆಗೆ ಹೆಚ್ಚುವರಿಯಾಗಿ 900 ಸಿಎಲ್(11-ಸಿ) ಸನ್ನದುಗಳನ್ನು ಹಂಚಿಕೆ ಮಾಡಲಾಗಿದೆ. ರಾಜ್ಯದ 220 ವಿಧಾನಸಭಾ ಕ್ಷೇತ್ರಗಳಿಗೆ ತಲಾ ನಾಲ್ಕರಂತೆ ಒಟ್ಟು 880 ಸನ್ನದುಗಳು ಮತ್ತು ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ತಲಾ ಐದರಂತೆ ಒಟ್ಟು 20 ಸನ್ನದುಗಳನ್ನು ನೀಡಲು ಅನುಮೋದನೆ ನೀಡಲಾಗಿದೆ. ಈ ಮೂಲಕ ರಾಜ್ಯಾದ್ಯಂತ ಒಟ್ಟು 900 ಸನ್ನದುಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.
ನಿಯಮಾನುಸಾರ ಸನ್ನದು ಮಂಜೂರು
ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿ ಮದ್ಯಗಳ ಮಾರಾಟ) ನಿಯಮಗಳು, 1968ರ ನಿಯಮ 3(11-ಸಿ), 8 ಮತ್ತು 8(ಎ)ರಲ್ಲಿ ನಿಗದಿಪಡಿಸಿರುವ ಸನ್ನದು ಶುಲ್ಕ ಹಾಗೂ ಹೆಚ್ಚುವರಿ ಸನ್ನದು ಶುಲ್ಕದ ಆಧಾರದ ಮೇಲೆ ಸನ್ನದು ಮಂಜೂರು ಮಾಡಲಾಗುತ್ತದೆ. ಕರ್ನಾಟಕ ಅಬಕಾರಿ (ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 5ರ ಅನ್ವಯ ಆಕ್ಷೇಪಣಾ ರಹಿತ ಸ್ಥಳಗಳಲ್ಲಿ ಸನ್ನದು ಮಂಜೂರು ಮಾಡುವ ಪ್ರಕ್ರಿಯೆ ನಡೆಯುತ್ತದೆ.
ಒಟ್ಟಿನಲ್ಲಿ, ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದ ಅಬಕಾರಿ ಆದಾಯದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, 2026-27ನೇ ಸಾಲಿನಲ್ಲಿ ₹45,000 ಕೋಟಿ ಗುರಿ ಸಾಧಿಸುವತ್ತ ಇಲಾಖೆ ಸಾಗುತ್ತಿದೆ. ಹಬ್ಬಗಳ ಅವಧಿಯಲ್ಲಿ ಮದ್ಯ ಮಾರಾಟ ಹೆಚ್ಚಾದರೆ ನಿಗದಿತ ಗುರಿಗಿಂತಲೂ ಹೆಚ್ಚಿನ ಆದಾಯ ಸಂಗ್ರಹವಾಗುವ ಸಾಧ್ಯತೆಯಿದೆ.
Also Read: https://hosasuddi.in/karnataka-bjp-leadership-change-vijayendra-ashok/
-
ರಾಜ್ಯ23 ಗಂಟೆಗಳು agoMysuru Dasara 2026: ನಾಳೆ ಉದ್ಘಾಟನೆ, ಶುಭ ಮುಹೂರ್ತ ಮತ್ತು ಖಾಸಗಿ ದರ್ಬಾರ್ ವಿವರ
-
ಸಿನಿಮಾ21 ಗಂಟೆಗಳು agoTrisha Krishnan ಲಾಕೆಟ್ ರಹಸ್ಯ: ವಿಜಯ್ ಜೊತೆಗಿನ ಮದುವೆ ಗಾಸಿಪ್ಗೆ ಮತ್ತೆ ಜೀವ?
-
ರಾಜ್ಯ21 ಗಂಟೆಗಳು agoKarnataka : ಕರ್ನಾಟಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ? ವಿಜಯೇಂದ್ರ, ಆರ್. ಅಶೋಕ್ ಸ್ಥಾನಕ್ಕೆ ಹೊಸಬರ ಚರ್ಚೆ
-
ರಾಜ್ಯ22 ಗಂಟೆಗಳು agoKarnataka: ಆಸ್ಪತ್ರೆ ಔಷಧ ಬಿಲ್ನಲ್ಲಿ ಖರೀದಿ ಬೆಲೆ? ಬೆಂಗಳೂರಿನಲ್ಲಿ ನಕಲಿ ಆಂಟಿಬಯೋಟಿಕ್ ಜಾಲ ಬಯಲು
-
ದೇಶ22 ಗಂಟೆಗಳು agoDelhi: ದೆಹಲಿಯಲ್ಲಿ ಮಮತಾ ಬ್ಯಾನರ್ಜಿ, ಕೇಜ್ರಿವಾಲ್ ಸೇರಿ ನಾಲ್ವರು ಮಾಜಿ ಸಿಎಂಗಳ ವಶಕ್ಕೆ
-
ರಾಜ್ಯ21 ಗಂಟೆಗಳು agoKarnataka ದಲ್ಲಿ ಮದ್ಯ ಮಾರಾಟದಿಂದ ₹1.10 ಲಕ್ಷ ಕೋಟಿ ಆದಾಯ: 3 ವರ್ಷದಲ್ಲಿ ಭಾರೀ ಏರಿಕೆ
-
ದೇಶ22 ಗಂಟೆಗಳು agoAjinkya Shinde ಯಾರು? ಅಭಿಜಿತ್ ದೀಪ್ಕೆ ವಶಕ್ಕೆ ಬಳಿಕ CJP ಪ್ರತಿಭಟನೆಗೆ ನೇತೃತ್ವ
-
ದೇಶ38 ನಿಮಿಷಗಳು agoPM Narendra Modi: ನವರಾತ್ರಿ ಮೊದಲ ದಿನ: ಪ್ರಧಾನಿ ಮೋದಿ ತಾಯಿ ಶೈಲಪುತ್ರಿಗೆ ನಮನ
