ಬೆಂಗಳೂರು
ಬಡ ಮಕ್ಕಳಿಗೆ ಕೊಟ್ಟ ಸವಲತ್ತು ಬಳಕೆ ಆಗ್ತಿಲ್ಲ; ಅಧಿಕಾರಿಗಳ ವಿರುದ್ಧ ಸಿಎಂ ಗರಂ!
ಸಿಎಂ ರಿಂದ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ನಡೆಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ ಕೆಲವೊಂದಷ್ಟು ಮಾಹಿತಿಗಳನ್ನು ಹಂಚಿಕೊಳ್ಳಲಾಗಿದೆ. ಸಭೆಯಲ್ಲಿ ಮಕ್ಕಳ ನಿರ್ಲಕ್ಷ್ಯಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ.ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಯಾಕೆ ಮಾಡುತ್ತಾ ಇದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.
ದಲಿತ, ಬುಡಕಟ್ಟು, ಬಡವರ ಮಕ್ಕಳ ಶಿಕ್ಷಣಕ್ಕೆ ಹಾಸ್ಟೆಲ್ ಗಳಿಗೆ ಇಷ್ಟೆಲ್ಲಾ ಹಣ, ಸವಲತ್ತು ಕೊಡುತ್ತಿದ್ದರೂ ಮಕ್ಕಳ ಶೈಕ್ಷಣಿಕ ಮಟ್ಟ ಏಕೆ ಏರಿಕೆ ಆಗುತ್ತಿಲ್ಲ? ಈ ಬಗ್ಗೆ ನಿರಂತರ ನಿಗಾ ಏಕೆ ವಹಿಸುತ್ತಿಲ್ಲ? ಎಂದು ಪ್ರಶ್ನೆ ಮಾಡಿದ್ದಾರೆ. ಫಲಿತಾಂಶದಲ್ಲಿ ಏರಿಕೆ ಏಕೆ ಆಗುತ್ತಿಲ್ಲ ಎಂದು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ.
ನಿಯಮಿತವಾಗಿ ಹಾಸ್ಟೆಲ್ ಗಳಿಗೆ, ಆಶ್ರಮ ಶಾಲೆಗಳಿಗೆ ಭೇಟಿ ನೀಡಬೇಕು. ನಿರಂತರವಾಗಿ ಗುಣಮಟ್ಟ ಹೆಚ್ಚಿಸಲು ಶ್ರಮಿಸಬೇಕು ಎಂದು ಹೇಳಿದ್ದಾರೆ. ಇಲಾಖೆಗೆ ಆಯವ್ಯಯದಲ್ಲಿ ಬಿಡುಗಡೆಯಾದ ಮೊತ್ತ 1884.01 ಕೋಟಿ ರೂ, ಅದರಲ್ಲಿ 1879.35 ಕೋಟಿ ವೆಚ್ಚವಾಗಿದ್ದು, 99.75 % ಸಾಧನೆಯಾಗಿದೆ. ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ 389 ವಿದ್ಯಾರ್ಥಿ ನಿಲಯಗಳು, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗಳು – 39,541 ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಿದ್ದು 194.71 ಕೋಟಿ ರೂ. ಒದಗಿಸಲಾಗಿದೆ.
ಎಸ್.ಎಸ್.ಎಲ್.ಸಿ. ಯಲ್ಲಿ ಶೇ. 77 ರಷ್ಟು ಫಲಿತಾಂಶ ಬಂದಿದ್ದು, ಫಲಿತಾಂಶ ಉತ್ತಮ ಪಡಿಸಲು ಸೂಚನೆ ನೀಡಲಾಗಿದೆ. 2,90,546 ವಿದ್ಯಾರ್ಥಿಗಳಿಗೆ 50.47 ಕೋಟಿ ರೂ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. 2,48,887 ವಿದ್ಯಾರ್ಥಿಗಳಿಗೆ 302.64 ಕೋಟಿ ರೂ. ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಪಾವತಿ ಮಾಡಲಾಗಿದೆ. ಹಾಸ್ಟೆಲ್‌ಗಳಿಗೆ ಸಂಜೆ ವೇಳೆಗೆ ಭೇಟಿ ನೀಡಿ, ಶುಚಿ ಕಿಟ್‌ಗಳು, ಆಹಾರ ಪದಾರ್ಥ ವಿತರಣೆ ಸಮರ್ಪಕವಾಗಿ ಆಗುತ್ತಿದೆಯೇ ಎಂದು ಪರಿಶೀಲಿಸಬೇಕು ಎಂದಿದ್ದಾರೆ.
ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ
ಕೆಲವು ಆಶ್ರಮ ಶಾಲೆಗಳಲ್ಲಿ ರಾತ್ರಿ ವೇಳೆ ಮಕ್ಕಳು ಇರುವುದಿಲ್ಲ. ಮಕ್ಕಳನ್ನು ರಾತ್ರಿ ಊಟವಾದ ನಂತರ ಮನೆಗೆ ಕರೆದುಕೊಂಡು ಹೋಗುತ್ತಾರೆ. ಚಿಕ್ಕ ಮಕ್ಕಳು ಎಂದು ಮನೆಗೆ ಕರೆದುಕೊಂಡು ಹೋಗುತ್ತಾರೆ. ಎಲ್ಲ ಸೌಲಭ್ಯ ಇದ್ದೂ, ಯಾಕೆ ಮನೆಗೆ ಕರೆದುಕೊಂಡು ಹೋಗುತ್ತಾರೆ? ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಪರಾಮರ್ಶೆ ನಡೆಸಿ, ಪೋಷಕರಿಗೆ ಮನವರಿಕೆ ಮಾಡಲು ಸೂಚನೆ ನೀಡಬೇಕಿದೆ. ಅನುದಾನ ಲಭ್ಯವಿದೆ ಎಂಬ ಕಾರಣಕ್ಕೆ ಬೇಡಿಕೆ ಇಲ್ಲದೆ ಇದ್ದರೂ ಹಾಸಿಗೆ, ಬೆಡ್‌ಶೀಟ್ ಮತ್ತಿತರ ವಸ್ತುಗಳನ್ನು ಅನಗತ್ಯವಾಗಿ ಖರೀದಿಸಿ ಗುಡ್ಡೆಹಾಕಿಕೊಳ್ಳುವುದನ್ನು ಸಹಿಸಲಾಗದು ಎಂದಿದ್ದಾರೆ.
ಅನಗತ್ಯವಾಗಿ ವಿನಾಯಿತಿ ಪಡೆಯುವ ಬದಲು ನೇರವಾಗಿ ಟೆಂಡರ್ ಕರೆದು ಖರೀದಿ, ಸೇವೆಗಳನ್ನು ಪಡೆಯಬೇಕು. ನೀವು ಬಡವರು, ದಲಿತರು, ಆದಿವಾಸಿ, ಬುಡಕಟ್ಟು ಮಕ್ಕಳನ್ನು ಸರಿಯಾಗಿ ನೋಡಿಕೊಳ್ಳಲು ಆಗದಿದ್ದರೆ ನೀವು ಸೇವೆಯಲ್ಲಿರಲು unfit ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆಯನ್ನು ಸಿಎಂ ನೀಡಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ಹಣಕಾಸು ಇಲಾಖೆಯ ಸೂಚನೆಯಂತೆ 2023-24 ರಲ್ಲಿ ಲಭ್ಯವಿದ್ದ 263 ಕೋಟಿ ರೂ. ಖಜಾನೆಗೆ ಜಮಾ ಮಾಡಲಾಗಿದೆ. ಯಾವುದೇ ಯೋಜನೆಯಡಿ ಫಲಾನುಭವಿಗಳ ಆಯ್ಕೆಯಾಗಿಲ್ಲ. ಪ್ರತಿ ವರ್ಷ ಮಾಡಬೇಕಲ್ಲ. ಯಾಕೆ ಮಾಡಿಲ್ಲ ಎಂದು ಸಿಎಂ ಪ್ರಶ್ನೆ ಮಾಡಿದ್ದಾರೆ.
ಇದಕ್ಕೆ ಅಧಿಕಾರಿಗಳಿಂದ ಸಿಎಂ ಸಿದ್ದರಾಮಯ್ಯ ಗೆ ಉತ್ತರ ನೀಡಿದ್ದು ಹೀಗೆ. ಶಾಸಕರು ಫಲಾನುಭವಿಗಳ ಪಟ್ಟಿ ನೀಡಿಲ್ಲ. ಆಯ್ಕೆ ಮಾಡಬೇಕಾದ ಫಲಾನುಭವಿಗಳ ಸಂಖ್ಯೆ ಅತ್ಯಂತ ಕಡಿಮೆ ಇರುವುದರಿಂದ ಸಂದಿಗ್ಧ ಪರಿಸ್ಥಿತಿ ಎದುರಾಗುವ ಹಿನ್ನೆಲೆಯಲ್ಲಿ ಶಾಸಕರು ಆಯ್ಕೆ ಮಾಡಲು ಆಸಕ್ತಿ ತೋರಿಸುತ್ತಿಲ್ಲ ಎಂದು ಉತ್ತರ ನೀಡಿದ್ದಾರೆ. ಫಲಾನುಭವಿಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಸಿಎಂ ಸೂಚನೆ ನೀಡಿದ್ದಾರೆ.
ಬೆಂಗಳೂರು
Nalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
ಬೆಂಗಳೂರು: ಜೆ.ಪಿ.ನಗರದಲ್ಲಿರುವ ಪ್ರತಿಷ್ಠಿತ ನNalanda English Medium School ವಾರ್ಷಿಕೋತ್ಸವ ಹಲವು ವಿಶೇಷತೆಗಳೊಂದಿಗೆ ಗಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ S.Janaki ಅವರ ವಿವಿಧ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯನ ಹಾಗೂ ನೃತ್ಯದ ಮೂಲಕ ಪ್ರಸ್ತುತಪಡಿಸಿ ಗಾನಕೋಗಿಲೆಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮಕ್ಕೆ ಮಿಸ್ ಇಂಡಿಯಾ ಕಿರೀಟ ವಿಜೇತೆ, ಕಿರುತೆರೆ ಹಾಗೂ ಚಲನಚಿತ್ರ ಕಲಾವಿದೆ ಸ್ಮೀತಾಪ್ರಭು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಶೈಕ್ಷಣಿಕ ಸಾಧನೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಅಗತ್ಯ ಎಂದು ಹೇಳಿದರು.
ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆ ಸಾಕಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ಸ್ಮೀತಾಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನಮನ
ವಾರ್ಷಿಕೋತ್ಸವದ ಪ್ರಮುಖ ಆಕರ್ಷಣೆಯಾಗಿ ವಿದ್ಯಾರ್ಥಿಗಳು ಎಸ್. ಜಾನಕಿ ಅವರ ವಿವಿಧ ಭಾಷೆಗಳ ಹಾಡುಗಳನ್ನು ಗಾಯನ ಮತ್ತು ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಸಂಗೀತ ಹಾಗೂ ನೃತ್ಯದ ಸುಂದರ ಸಂಯೋಜನೆ ಪ್ರೇಕ್ಷಕರ ಗಮನ ಸೆಳೆಯಿತು.
ವಿದ್ಯಾರ್ಥಿಗಳ ಈ ವಿಶೇಷ ಪ್ರದರ್ಶನದ ಮೂಲಕ ಅಗಲಿದ ಹಿರಿಯ ಗಾಯಕಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಪಾಲಕರು ಹಾಗೂ ಶಿಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ
ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸ್ಮೀತಾಪ್ರಭು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕುಪ್ಪುರಾಜ್, ಕಾರ್ಯದರ್ಶಿ ಶಿವಶಂಕರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ಬೆಂಗಳೂರು
Anand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
ಬೆಂಗಳೂರು: Kempegowda International Airport ದಲ್ಲಿರುವ ಆನಂದ್ ಸ್ವೀಟ್ಸ್ ಮಳಿಗೆಯಿಂದ ಖರೀದಿಸಿದ್ದ ಸಿಹಿತಿಂಡಿಯಲ್ಲಿ ಕಲ್ಲಿನಂತಿರುವ ಗಟ್ಟಿಯಾದ ವಸ್ತು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿಹಿತಿಂಡಿ ಸೇವಿಸುವ ವೇಳೆ ನಾಲಿಗೆ ಹಾಗೂ ಹಲ್ಲಿಗೆ ಗಾಯವಾಗಿದೆ ಎಂದು ಆರೋಪಿಸಿರುವ ಗ್ರಾಹಕರು ಇದೀಗ ಸಂಸ್ಥೆಗೆ ಕಾನೂನು ನೋಟಿಸ್ ನೀಡಿದ್ದಾರೆ.
ಆಗಸ್ಟ್ 20ರಂದು ಸಂಜೆ 5.48ರ ಸುಮಾರಿಗೆ ಕಾರ್ತಿಕ್ ಗವಾಜಿ ಎಂಬುವವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆನಂದ್ ಸ್ವೀಟ್ಸ್ ಮಳಿಗೆಯಲ್ಲಿ ಒಟ್ಟು ₹2,050 ಮೌಲ್ಯದ ಸಿಹಿತಿಂಡಿಗಳನ್ನು ಖರೀದಿಸಿದ್ದರು. ಇದಕ್ಕಾಗಿ ಫೋನ್‌ಪೇ ಮೂಲಕ ಹಣ ಪಾವತಿಸಲಾಗಿದ್ದು, ವಹಿವಾಟಿನ ದಾಖಲೆಗಳು ತಮ್ಮ ಬಳಿ ಇರುವುದಾಗಿ ಕಾನೂನು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಸಿಹಿತಿಂಡಿಗಳನ್ನು ಉಡುಗೊರೆಯಾಗಿ ನೀಡಲಾಗಿತ್ತು ಎನ್ನಲಾಗಿದ್ದು, ಬಳಿಕ ಅವುಗಳನ್ನು ಸೇವಿಸುವ ಸಂದರ್ಭದಲ್ಲಿ ಗಟ್ಟಿಯಾದ, ಕಲ್ಲಿನಂತಿರುವ ವಸ್ತು ಪದೇಪದೇ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಸಿಹಿತಿಂಡಿ ಸೇವಿಸುತ್ತಿದ್ದ ವ್ಯಕ್ತಿಯ ನಾಲಿಗೆ ಹಾಗೂ ಹಲ್ಲಿಗೆ ಗಾಯವಾಗಿದೆ ಎಂದು ದೂರಲಾಗಿದೆ.
ಆಹಾರ ಗುಣಮಟ್ಟದ ಬಗ್ಗೆ ಪ್ರಶ್ನೆ
ಘಟನೆ ಹಿನ್ನೆಲೆಯಲ್ಲಿ ಸಿಹಿತಿಂಡಿಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಲಾಗಿದೆ. ಉತ್ಪನ್ನದ ತಯಾರಿಕೆ, ಪ್ಯಾಕಿಂಗ್, ಗುಣಮಟ್ಟ ಪರಿಶೀಲನೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಸಂಸ್ಥೆ ಸ್ಪಷ್ಟನೆ ನೀಡಬೇಕು ಎಂದು ಗ್ರಾಹಕರು ಒತ್ತಾಯಿಸಿದ್ದಾರೆ.
ಕಾನೂನು ನೋಟಿಸ್‌ನಲ್ಲಿ ಸಿಹಿತಿಂಡಿಗಾಗಿ ಪಾವತಿಸಿದ ₹2,050 ಹಣವನ್ನು ಮರುಪಾವತಿಸುವುದರ ಜೊತೆಗೆ ಗಾಯಗೊಂಡ ವ್ಯಕ್ತಿಯ ವೈದ್ಯಕೀಯ ಹಾಗೂ ದಂತ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುವಂತೆ ಆಗ್ರಹಿಸಲಾಗಿದೆ. ದೈಹಿಕ ನೋವು, ಮಾನಸಿಕ ಸಂಕಷ್ಟ ಹಾಗೂ ಇತರ ನಷ್ಟಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕೂಡ ಬೇಡಿಕೆ ಇಡಲಾಗಿದೆ.
ದಾಖಲೆ ಸಂರಕ್ಷಣೆಗೆ ಸೂಚನೆ
ಸಂಬಂಧಿತ ಉತ್ಪನ್ನದ ಬ್ಯಾಚ್ ಅಥವಾ ಲಾಟ್ ವಿವರ, ಗುಣಮಟ್ಟ ಪರಿಶೀಲನಾ ದಾಖಲೆಗಳು ಹಾಗೂ ಉತ್ಪನ್ನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಸಿಸಿಟಿವಿ ದೃಶ್ಯಗಳು, ಪಾವತಿ ದಾಖಲೆಗಳು, ಮಾರಾಟ ದಾಖಲೆಗಳು ಹಾಗೂ ಉತ್ಪನ್ನದ ಬ್ಯಾಚ್ ಮಾಹಿತಿಯನ್ನು ಸಂರಕ್ಷಿಸುವಂತೆಯೂ ಸೂಚಿಸಲಾಗಿದೆ.
ನೋಟಿಸ್ ಸ್ವೀಕರಿಸಿದ 48 ಗಂಟೆಗಳೊಳಗೆ ಲಿಖಿತ ಉತ್ತರ ನೀಡಬೇಕು ಎಂದು ಕಾರ್ತಿಕ್ ಗವಾಜಿ ಒತ್ತಾಯಿಸಿದ್ದಾರೆ. ಸೂಕ್ತ ಪ್ರತಿಕ್ರಿಯೆ ಅಥವಾ ಪರಿಹಾರ ದೊರೆಯದಿದ್ದರೆ ಗ್ರಾಹಕ ಆಯೋಗದ ಮೊರೆ ಹೋಗುವುದರ ಜೊತೆಗೆ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆದರೆ, ಸಿಹಿತಿಂಡಿಯಲ್ಲಿ ಪತ್ತೆಯಾಗಿದೆ ಎನ್ನಲಾದ ವಸ್ತುವಿನ ನಿಖರ ಸ್ವರೂಪ ಹಾಗೂ ಆರೋಪದ ಸತ್ಯಾಸತ್ಯತೆ ಅಧಿಕೃತ ಪರಿಶೀಲನೆಯ ಬಳಿಕವೇ ಖಚಿತವಾಗಬೇಕಿದೆ. ಈ ಕುರಿತು ಆನಂದ್ ಸ್ವೀಟ್ಸ್ ಸಂಸ್ಥೆಯ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.
ದೇಶ
Nepal Flood: ನೇಪಾಳದಲ್ಲಿ ಸಿಲುಕಿದ ಕನ್ನಡಿಗರೇ ಗಮನಿಸಿ; ಸರ್ಕಾರದಿಂದ Google Form ಬಿಡುಗಡೆ
ಬೆಂಗಳೂರು: Nepal-ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಪ್ರವಾಹ ಹಾಗೂ ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರ್ಕಾರ ತಕ್ಷಣದ ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ರಾಜ್ಯದ ನಾಗರಿಕರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲು ಸರ್ಕಾರ ಅಧಿಕೃತ Google Form ಬಿಡುಗಡೆ ಮಾಡಿದ್ದು, ಸಂತ್ರಸ್ತರು ಅಥವಾ ಅವರ ಕುಟುಂಬಸ್ಥರು ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಿದೆ.
ಕೈಲಾಶ ಮಾನಸಸರೋವರ ಯಾತ್ರೆಗೆ ತೆರಳಿರುವವರು ಅಥವಾ ಪ್ರವಾಸದ ಉದ್ದೇಶದಿಂದ ನೇಪಾಳ ಹಾಗೂ ಟಿಬೆಟ್ ಗಡಿ ಪ್ರದೇಶಕ್ಕೆ ತೆರಳಿ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರು ಈ ಮೂಲಕ ತಮ್ಮ ವಿವರಗಳನ್ನು ಸಲ್ಲಿಸಬಹುದಾಗಿದೆ. ಸಂತ್ರಸ್ತರ ಕುಟುಂಬಸ್ಥರು ಹಾಗೂ ಪ್ರವಾಸ ಆಯೋಜಕರು ಕೂಡ ಲಭ್ಯವಿರುವ ಮಾಹಿತಿಯನ್ನು ಫಾರ್ಮ್‌ನಲ್ಲಿ ದಾಖಲಿಸಬಹುದು.
ಯಾವ ಮಾಹಿತಿ ನೀಡಬೇಕು?
ಸರ್ಕಾರದ Nepal Flood Relief ಕ್ರಮದ ಭಾಗವಾಗಿ ಬಿಡುಗಡೆ ಮಾಡಿರುವ ಫಾರ್ಮ್‌ನಲ್ಲಿ ಸಂತ್ರಸ್ತರ ಹೆಸರು, ಸಂಪರ್ಕ ಸಂಖ್ಯೆ, ಪ್ರಸ್ತುತ ಇರುವ ಸ್ಥಳ, ಪಾಸ್‌ಪೋರ್ಟ್ ವಿವರಗಳು ಹಾಗೂ ತುರ್ತು ಸಂಪರ್ಕ ಸಂಖ್ಯೆಯಂತಹ ಮಾಹಿತಿಯನ್ನು ದಾಖಲಿಸಬಹುದಾಗಿದೆ.
ಸಂಗ್ರಹವಾಗುವ ಮಾಹಿತಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯ, ನೇಪಾಳದಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ಬೀಜಿಂಗ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗಳೊಂದಿಗೆ ಹಂಚಿಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಇದರಿಂದ ಸಂಕಷ್ಟದಲ್ಲಿರುವ ಕನ್ನಡಿಗರನ್ನು ಶೀಘ್ರವಾಗಿ ಪತ್ತೆಹಚ್ಚಿ ರಕ್ಷಿಸುವ ಕಾರ್ಯಾಚರಣೆಗೆ ನೆರವಾಗಲಿದೆ.
ರಕ್ಷಣೆ ಮತ್ತು ಸುರಕ್ಷಿತ ವಾಪಸಾತಿಗೆ ಕ್ರಮ
ಪ್ರವಾಹದಿಂದ ಸಂಪರ್ಕ ವ್ಯವಸ್ಥೆ ಅಸ್ತವ್ಯಸ್ತವಾಗಿರುವ ಹಿನ್ನೆಲೆಯಲ್ಲಿ ಹಲವು ಯಾತ್ರಿಕರು ಹಾಗೂ ಪ್ರವಾಸಿಗರೊಂದಿಗೆ ಸಂಪರ್ಕ ಸಾಧಿಸುವುದು ಕಷ್ಟಕರವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಸಂಗ್ರಹಿಸುವ ಮಾಹಿತಿಯ ಆಧಾರದ ಮೇಲೆ ರಕ್ಷಣಾ ಕಾರ್ಯಾಚರಣೆ, ಅಗತ್ಯ ವೈದ್ಯಕೀಯ ನೆರವು ಹಾಗೂ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ಕ್ರಮಗಳನ್ನು ತೀವ್ರಗೊಳಿಸಲು ಮುಂದಾಗಿದೆ.
ನೇಪಾಳದಲ್ಲಿ ಭೋಟಿ ಕೋಶಿ ನದಿ ಉಕ್ಕಿ ಹರಿದ ಪರಿಣಾಮ ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿ ತೆರಳಿರುವ ಕನ್ನಡಿಗರ ಕುಟುಂಬಸ್ಥರು ಆತಂಕಕ್ಕೆ ಒಳಗಾಗದೆ ಸರ್ಕಾರಕ್ಕೆ ತಕ್ಷಣ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.
ತುರ್ತು ಸಹಾಯವಾಣಿ
ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರು ಅಥವಾ ಅವರ ಕುಟುಂಬಸ್ಥರು ತುರ್ತು ನೆರವಿಗಾಗಿ ಈ ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು:
- ಸಹಾಯವಾಣಿ: 1070
- ಬೆಂಗಳೂರು ಸಹಾಯವಾಣಿ: 080-22253707
- ಇ-ಮೇಲ್: seockarnataka@gmail.com
ನೇಪಾಳ ಅಥವಾ ಟಿಬೆಟ್ ಗಡಿ ಪ್ರದೇಶದಲ್ಲಿ ತಮ್ಮ ಕುಟುಂಬದವರು ಸಿಲುಕಿರುವ ಮಾಹಿತಿ ಇದ್ದರೆ, ವಿಳಂಬ ಮಾಡದೆ ಸರ್ಕಾರದ Google Form ಮೂಲಕ ವಿವರಗಳನ್ನು ದಾಖಲಿಸಿ, ಅಗತ್ಯವಿದ್ದರೆ ಮೇಲಿನ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.
-
ಬೆಂಗಳೂರು20 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ22 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ21 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ದೇಶ19 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ದೇಶ22 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ22 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ಕ್ರೀಡೆ22 ಗಂಟೆಗಳು agoIndia vs Panama: ವಿಶ್ವಕಪ್ ಆಡಿದ ಪನಾಮ ವಿರುದ್ಧ ಭಾರತ ಸೆಣಸು; ಪಂದ್ಯಕ್ಕೆ ದಿನಾಂಕ ಫಿಕ್ಸ್
-
ದೇಶ22 ಗಂಟೆಗಳು agoPM Narendra Modi ಥರ್ಡ್ ಪಾರ್ಟಿ ಆಡಿಟ್ ಇದ್ದರೂ ಕಳಪೆ ಕಾಮಗಾರಿ ಏಕೆ? ಅಧಿಕಾರಿಗಳಿಗೆ ಮೋದಿ ನೇರ ಪ್ರಶ್ನೆ
