ಆರೋಗ್ಯ
ಬಿಜೆಪಿ ಜೆಡಿಎಸ್ ಪಾದಯಾತ್ರೆಯಲ್ಲಿ ಕಾರ್ಯಕರ್ತಗೆ ಹಾರ್ಟ್ ಅಟ್ಯಾಕ್, ಸಾವು!
ರಾಮನಗರ: ಮುಡಾ, ವಾಲ್ಮೀಕಿ ಹಗರಣವನ್ನು ಮುಂದಿಟ್ಟು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ನಡೆಸುತ್ತಿರುವ ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ ಕಾರ್ಯಕರ್ತೆಯೋರ್ವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ,
ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಚನ್ನಪಟ್ಟಣದ ಬನಶಂಕರಿಯ ಗೌರಮ್ಮ ಎಂಬವವರು ತೀವ್ರ ಎದೆ ನೋವಿನಿಂದ ಬಳಲಿ ಕುಸಿದು ಬಿದ್ದಿದ್ದಾರೆ, ಆಗ ಕೂಡಲೇ ಅವರನ್ನು ಸ್ಧಳೀಐ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಅಸುನೀಗಿದ್ದಾರೆ,
ಮೃತ ಗೌರಮ್ಮ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ,