ಬೆಂಗಳೂರು
ಬೆಂಗಳೂರು | ದರ್ಶನಕ್ಕೆ ಪಾಸ್ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!
ಬೆಂಗಳೂರು: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಅನ್ನೋ ನಂಬಿಕೆ ಲಕ್ಷಾಂತರ ಭಕ್ತಾದಿಗಳಲ್ಲಿ ಇದ್ದೇ ಇರುತ್ತೆ. ಆದ್ರೆ ವೆಂಕಟೇಶ್ವರನ ಪಾಸ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ಭಕ್ತನೊಬ್ಬ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ್ದಾನೆ.
ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಆದ್ದರಿಂದಲೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ. ಅದರಂತೆ ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಇಂದು ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಅನ್ನೋ ನಂಬಿಕೆ ಲಕ್ಷಾಂತರ ಭಕ್ತಾದಿಗಳಲ್ಲಿ ಇರುತ್ತದೆ. ಆದ್ರೆ ಟಿಕೆಟ್ ಎಲ್ಲರಿಗೂ ಸಿಗಲ್ಲ. ಈ ಹಿನ್ನಲೆ, ಬೆಂಗಳೂರಿನ ತಿರುಪತಿ ತಿಮ್ಮಪ್ಪನ ಅಪ್ಪಟ್ಟ ಭಕ್ತನೊಬ್ಬ, ಟಿಕೆಟ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ತನ್ನ ಮನೆಯಲ್ಲೇ ವೆಂಕಟೇಶ್ವರ ಮೂರ್ತಿಯನ್ನು ನಿರ್ಮಿಸಿದ್ದಾರೆ. ಸುಮಾರು 8 ಅಡಿ ಎತ್ತರದಲ್ಲಿ ಬಾಲಾಜಿ ಮೂರ್ತಿಯನ್ನು ನಿರ್ಮಾಣ ಮಾಡಿದ್ದಾರೆ. ಹತ್ತಿ, ಬಟ್ಟೆ, ಪೇಯಿಂಟ್ ಮೂಲಕ ಬಾಲಾಜಿಯನ್ನು ಅಲಂಕರಿಸಲಾಗಿದೆ.
ಜಯನಗರದ ಉಷಾ ಅಪಾರ್ಟ್ಮೆಂಟ್ ನಿವಾಸಿಯಾಗಿರೋ ದೀಪಕ್, ಕಳೆದ 9 ವರ್ಷದಿಂದ ಪ್ರತಿ ತಿಂಗಳು ತಿರುಪತಿ ಬೆಟ್ಟ ಹತ್ತಿಕೊಂಡು ದರ್ಶನ ಮಾಡುತ್ತಿದ್ದರು. ಆದ್ರೇ ಇಂದು ಬಾಲಾಜಿ ದರ್ಶನ ಸಿಗದ ಹಿನ್ನೆಲೆ ಮನೆಯಲ್ಲೇ ದೇಗುಲ ನಿರ್ಮಿಸಿದ್ದಾರೆ. ವೆಂಕಟೇಶ್ವರ ಮೂರ್ತಿ ಜೊತೆ ಲಕ್ಷ್ಮಿ, ವೆಂಕಟೇಶ್ವರ ತೂಗು ಉಯ್ಯಾಲೆ, ವೈಕುಂಠ ದ್ವಾರ ನಿರ್ಮಿಸಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಲು ಸ್ಥಳೀಯ ಜನ ಬರುತ್ತಿದ್ದಾರೆ.
ರಾಜ್ಯ
Government Office ಗಳಿಗೆ ಡಿಸಿ ದಿಢೀರ್ ಭೇಟಿ; ತಡವಾಗಿ ಬಂದ ಅಧಿಕಾರಿಗಳ ವಿರುದ್ಧ ಕಠಿಣ ಸೂಚನೆ
ಬೆಂಗಳೂರು ಗ್ರಾಮಾಂತರ: Government Office ಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಯಕ್ಕೆ ಹಾಜರಾಗುತ್ತಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಸೋಮವಾರ ಬೆಳಗ್ಗೆ ವಿವಿಧ ಇಲಾಖೆಗಳಿಗೆ ದಿಢೀರ್ ಭೇಟಿ ನೀಡಿ ರಿಯಾಲಿಟಿ ಚೆಕ್ ನಡೆಸಿದರು. ಬೆಳಗ್ಗೆ 10.30ರಿಂದ 11 ಗಂಟೆಯೊಳಗೆ ನಡೆದ ಈ ಪರಿಶೀಲನೆ ಅಧಿಕಾರಿಗಳು ಹಾಗೂ ಸಿಬ್ಬಂದಿಯಲ್ಲಿ ಕೆಲಕಾಲ ಆತಂಕ ಮೂಡಿಸಿತು.
ಜಿಲ್ಲಾಡಳಿತ ಭವನದಲ್ಲಿರುವ ಕಂದಾಯ, ಭೂ ದಾಖಲೆ, ಆರೋಗ್ಯ, ಕೃಷಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸೇರಿದಂತೆ ಹಲವು ಕಚೇರಿಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಅಧಿಕಾರಿಗಳು ಸಮಯಕ್ಕೆ ಕಚೇರಿಗೆ ಬಂದಿದ್ದಾರೆಯೇ ಎಂಬುದನ್ನು ಪರಿಶೀಲಿಸಿದರು.
ರಾಜ್ಯ ಸರ್ಕಾರ ಇತ್ತೀಚೆಗೆ ಸರ್ಕಾರಿ ನೌಕರರಿಗೆ ‘ಕರ್ತವ್ಯ’ ಡಿಜಿಟಲ್ ಹಾಜರಾತಿ ಆಪ್ ಮೂಲಕ ಹಾಜರಾತಿ ಕಡ್ಡಾಯಗೊಳಿಸಿದೆ. ಇದರಂತೆ ಬೆಳಗ್ಗೆ 10 ಗಂಟೆಗೆ ಲಾಗಿನ್ ಹಾಗೂ ಸಂಜೆ 5.30ಕ್ಕೆ ಲಾಗ್‌ಔಟ್ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಆಪ್‌ನಲ್ಲಿ ಹಾಜರಾತಿ ದಾಖಲಿಸಿದ್ದಾರೆಯೇ, ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿದ್ದಾರೆಯೇ ಹಾಗೂ ಫೀಲ್ಡ್ ವರ್ಕ್‌ಗೆ ತೆರಳಿದ್ದರೆ ಅದರ ವಿವರವನ್ನು ಆಪ್‌ನಲ್ಲಿ ದಾಖಲಿಸಿದ್ದಾರೆಯೇ ಎಂಬುದನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.
ಪರಿಶೀಲನೆ ವೇಳೆ ಕೆಲವು ಕಚೇರಿಗಳಲ್ಲಿ ಅಧಿಕಾರಿಗಳ ಕುರ್ಚಿಗಳು ಖಾಲಿ ಕಂಡುಬಂದ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. ನಿಗದಿತ ಸಮಯಕ್ಕೆ ಕಡ್ಡಾಯವಾಗಿ ಹಾಜರಾತಿ ದಾಖಲಿಸಬೇಕು, ಇಲ್ಲದಿದ್ದರೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಈ ಅನಿರೀಕ್ಷಿತ ಭೇಟಿ ಸಿಬ್ಬಂದಿಯನ್ನು ಅಚ್ಚರಿಗೆ ದೂಡಿದ್ದು, ಇಂತಹ ಪರಿಶೀಲನೆಗಳು ನಿರಂತರವಾಗಿ ನಡೆದರೆ ಅಧಿಕಾರಿಗಳ ಕಾರ್ಯಕ್ಷಮತೆ ಹೆಚ್ಚುವುದರ ಜೊತೆಗೆ ಸಾರ್ವಜನಿಕರ ಕೆಲಸಗಳು ಸಮಯಕ್ಕೆ ಆಗಲಿವೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗಿದೆ.
ಬೆಂಗಳೂರು
KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ರಾಷ್ಟ್ರಪತಿಗೆ ತನಿಖೆ ಶಿಫಾರಸು
ಬೆಂಗಳೂರು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಅವರ ವಿರುದ್ಧ ಕೇಳಿಬಂದಿರುವ ನೇಮಕಾತಿ ಅಕ್ರಮ, ಸ್ವಜನಪಕ್ಷಪಾತ ಹಾಗೂ ಅಧಿಕಾರ ದುರುಪಯೋಗದ ಆರೋಪಗಳ ಕುರಿತು ತನಿಖೆ ನಡೆಸಲು ಭಾರತದ ಸಂವಿಧಾನದ 317(1)ನೇ ವಿಧಿ ಅಡಿಯಲ್ಲಿ ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ.
ರಾಜ್ಯಪಾಲರ ಆದೇಶದಂತೆ, ತನಿಖೆ ಪೂರ್ಣಗೊಂಡು ರಾಷ್ಟ್ರಪತಿಗಳಿಂದ ಮುಂದಿನ ಆದೇಶ ಬರುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ತಕ್ಷಣದಿಂದಲೇ ಅಮಾನತುಗೊಳಿಸಲಾಗಿದೆ. ಅಲ್ಲಿಯವರೆಗೆ ಆಯೋಗದ ಹಿರಿಯ ಸದಸ್ಯರು ಹಂಗಾಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿಯರು ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಹಿತಾಸಕ್ತಿ ಸಂಘರ್ಷವನ್ನು ಘೋಷಿಸದೇ ಇದ್ದಿರುವುದು, ನೇಮಕಾತಿ ಪ್ರಕ್ರಿಯೆಯಿಂದ ದೂರ ಉಳಿಯದಿರುವುದು ಹಾಗೂ ಮೀಸಲಾತಿ ಸೌಲಭ್ಯ ಪಡೆಯಲು ತಪ್ಪು ಮಾಹಿತಿ ನೀಡಿರುವ ಆರೋಪಗಳು ತನಿಖೆಗೆ ಕಾರಣವಾಗಿವೆ. ಪ್ರಕರಣದಲ್ಲಿ ಅವರ ಪುತ್ರಿಯೊಬ್ಬರು ವಾರ್ಷಿಕ ಆದಾಯವನ್ನು ಕೇವಲ ₹40,000 ಎಂದು ನಮೂದಿಸಿದ ಆದಾಯ ಪ್ರಮಾಣಪತ್ರ ಸಲ್ಲಿಸಿ ಹಿಂದುಳಿದ ವರ್ಗಗಳ ಮೀಸಲಾತಿ ಹಾಗೂ ‘ಕ್ರೀಮಿ ಲೇಯರ್’ ವಿನಾಯಿತಿ ಪಡೆಯಲು ಯತ್ನಿಸಿದ್ದರೆಂಬ ಗಂಭೀರ ಆರೋಪ ಕೇಳಿಬಂದಿದೆ.
ಈ ಸಂಬಂಧ ಕೆಪಿಎಸ್‌ಸಿ ಕಾರ್ಯದರ್ಶಿ ಶೋಭಾ ಅವರ ದೂರಿನ ಮೇರೆಗೆ ಈಗಾಗಲೇ ಎಫ್‌ಐಆರ್ ದಾಖಲಾಗಿದ್ದು, ಆದಾಯ ಪ್ರಮಾಣಪತ್ರ ನೀಡಿದ ಕಂದಾಯ ಇಲಾಖೆಯ ಅಧಿಕಾರಿಗಳ ಪಾತ್ರದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಅಧಿಕಾರ ದುರುಪಯೋಗ ನಡೆದಿದೆಯೇ ಎಂಬುದರ ಕುರಿತು ಪೊಲೀಸರು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಈ ಬೆಳವಣಿಗೆಯಿಂದ ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ಮತ್ತು ಆಡಳಿತ ವ್ಯವಸ್ಥೆಯ ಪಾರದರ್ಶಕತೆ ಕುರಿತು ಹೊಸ ಚರ್ಚೆ ಆರಂಭವಾಗಿದ್ದು, ತನಿಖೆಯ ಅಂತಿಮ ವರದಿಯತ್ತ ರಾಜ್ಯದ ಗಮನ ಕೇಂದ್ರೀಕೃತವಾಗಿದೆ.
ಬೆಂಗಳೂರು
₹13 Crores ವೆಚ್ಚ, 2 ವರ್ಷ ಕಾಯುವಿಕೆ! ವಿಜಯನಗರ ಅಂಡರ್‌ಗ್ರೌಂಡ್ ಮಾರುಕಟ್ಟೆ ಇನ್ನೂ ಬಂದ್; 80ಕ್ಕೂ ಹೆಚ್ಚು ಮಳಿಗೆಗಳು ಖಾಲಿ
ಬೆಂಗಳೂರು: ₹13 Crores ರೂಪಾಯಿ ಸಾರ್ವಜನಿಕರ ತೆರಿಗೆ ಹಣ ವೆಚ್ಚ ಮಾಡಿ ವಿಜಯನಗರದಲ್ಲಿ ನಿರ್ಮಿಸಲಾಗಿರುವ ಅಂಡರ್‌ಗ್ರೌಂಡ್ ಮಾರುಕಟ್ಟೆ (Underground Market) ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ವ್ಯಾಪಾರಿಗಳ ಬಳಕೆಗೆ ಇನ್ನೂ ಲಭ್ಯವಾಗಿಲ್ಲ. ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ 80ಕ್ಕೂ ಹೆಚ್ಚು ಸುಸಜ್ಜಿತ ಮಳಿಗೆಗಳು ಖಾಲಿಯಾಗಿ ಪಾಳುಬಿದ್ದಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ವ್ಯಾಪಾರಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿ ಪಾಲಿಕಾ ಬಜಾರ್ ಮಾದರಿಯಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಸುಮಾರು ₹13 ಕೋಟಿ ವೆಚ್ಚದಲ್ಲಿ ಈ ಮಾರುಕಟ್ಟೆಯನ್ನು ನಿರ್ಮಿಸಲಾಗಿದೆ. ಉದ್ಘಾಟನೆ ನಡೆದಿದ್ದರೂ ಇಂದಿಗೂ ವ್ಯಾಪಾರ ಆರಂಭವಾಗದಿರುವುದು ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸ್ಥಳೀಯರ ಆರೋಪದ ಪ್ರಕಾರ, ಟೆಂಡರ್ ಪ್ರಕ್ರಿಯೆಯ ವಿಳಂಬ ಮತ್ತು ಆಡಳಿತಾತ್ಮಕ ನಿರಾಸಕ್ತಿಯಿಂದ ಈ ಯೋಜನೆ ಸಾರ್ವಜನಿಕರಿಗೆ ಯಾವುದೇ ಪ್ರಯೋಜನ ನೀಡದಂತಾಗಿದೆ.
ಇದೇ ವೇಳೆ ನಗರದಲ್ಲಿ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಣ್ಣ ವ್ಯಾಪಾರಿಗಳು ಸಂಕಷ್ಟ ಎದುರಿಸುತ್ತಿದ್ದಾರೆ. ಆದರೆ ಅವರಿಗೆ ಪರ್ಯಾಯವಾಗಿ ಬಳಸಬೇಕಿದ್ದ ವಿಜಯನಗರ ಅಂಡರ್‌ಗ್ರೌಂಡ್ ಮಾರುಕಟ್ಟೆ ಇನ್ನೂ ಕಾರ್ಯಾರಂಭ ಮಾಡದಿರುವುದು ವ್ಯಾಪಾರಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಮಾರುಕಟ್ಟೆಯೊಳಗಿನ ಲಿಫ್ಟ್, ಎಸ್ಕಲೇಟರ್ ಸೇರಿದಂತೆ ಹಲವು ಸೌಲಭ್ಯಗಳು ಉದ್ಘಾಟನೆಯಾದ ದಿನದಿಂದಲೇ ಬಂದ್ ಆಗಿದ್ದು, ನಿರ್ವಹಣೆಯ ಕೊರತೆಯಿಂದ ಕಟ್ಟಡವು ಪಾಳು ಬೀಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯೇ ನಿರುಪಯುಕ್ತವಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.
ವ್ಯಾಪಾರಿಗಳು ಮತ್ತು ಸ್ಥಳೀಯರು ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಮಳಿಗೆಗಳನ್ನು ಹಂಚಿಕೆ ಮಾಡಿ ವ್ಯಾಪಾರ ಆರಂಭಿಸಲು ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
“ಸರ್ಕಾರ ಸಾರ್ವಜನಿಕರ ತೆರಿಗೆ ಹಣದಲ್ಲಿ ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಸುಸಜ್ಜಿತ ಮಾರುಕಟ್ಟೆ ನಿರ್ಮಿಸಿದೆ. ಆದರೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದೇ ಅದು ಉಪಯೋಗಕ್ಕೆ ಬರುತ್ತಿಲ್ಲ. ಸಚಿವರು ಮತ್ತು ಅಧಿಕಾರಿಗಳು ಕೂಡಲೇ ಕ್ರಮ ಕೈಗೊಂಡು ವ್ಯಾಪಾರಿಗಳಿಗೆ ಮಳಿಗೆಗಳನ್ನು ನೀಡಬೇಕು.”
– ರಮೇಶ್, ವ್ಯಾಪಾರಸ್ಥ
-
ಬೆಂಗಳೂರು21 ಗಂಟೆಗಳು agoಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ
-
ದೇಶ20 ಗಂಟೆಗಳು agoಗಾನಕೋಗಿಲೆ ಎಸ್. ಜಾನಕಿ ಪಂಚಭೂತಗಳಲ್ಲಿ ಲೀನ; ಸರ್ಕಾರಿ ಗೌರವದೊಂದಿಗೆ ಮೈಸೂರಿನಲ್ಲಿ ಅಂತ್ಯಸಂಸ್ಕಾರ
-
ಸುತ್ತ ಮುತ್ತ24 ಗಂಟೆಗಳು agoBorivali Railway Station Viral Video ಪ್ರೇಮಿಗಳ ಹಂಗಾಮಾ? 60 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಿಸಿದ ವೈರಲ್ ವಿಡಿಯೋ
-
ದೇಶ21 ಗಂಟೆಗಳು agoಜಮ್ಮು-ಕಾಶ್ಮೀರದಲ್ಲಿ ಉಗ್ರರ ವೈಭವೀಕರಣ ಆರೋಪ; ಪುಸ್ತಕ ಪ್ರಕಟಿಸಿದ ಮೂವರು ಪ್ರಕಾಶಕರು ಬಂಧನ
-
ದೇಶ22 ಗಂಟೆಗಳು agoManmohan Singh ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರ ಪುಸ್ತಕದಲ್ಲಿ ಹೊಸ ಬಹಿರಂಗ; ರಾಜಕೀಯ ವಲಯದಲ್ಲಿ ಚರ್ಚೆ
-
ರಾಜ್ಯ24 ಗಂಟೆಗಳು agoS Janaki ಹೆಸರನ್ನು ಮೈಸೂರಿನ ಗದ್ದಿಗೆ ರಸ್ತೆಗೆ ನಾಮಕರಣ ಮಾಡಿ: ಕೇರ್ಟೇಕರ್ ನವೀನ್ ಮನವಿ
-
ಕ್ರೀಡೆ22 ಗಂಟೆಗಳು agoSouth Africa ಫುಟ್ಬಾಲ್ಗೆ ಆಘಾತ; ಜೇಡನ್ ಆಡಮ್ಸ್ ಅಕಾಲಿಕ ನಿಧನ
-
ಬೆಂಗಳೂರು21 ಗಂಟೆಗಳು agoShakthi Scheme ಬಳಿಕ BMTC ಸೇವೆ ಹೇಗಿದೆ? ಬಸ್ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ
