Connect with us

ರಾಜಕೀಯ

ಮಂತ್ರಿಗಳೇ ಸರ್ಕಾರದ ಮರ್ಯಾದೆ ತೆಗಿತಿದ್ದಾರೆ: ಯು ಟಿ ಖಾದರ್‌ ಹೀಗೆ ಹೇಳಿದ್ಯಾಕೆ?

Published

on

ಬೆಂಗಳೂರು: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರೇ ನಿಮ್ಮ ಆಡಳಿತದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಕೆಲ ಮಂತ್ರಿಗಳಿಂದ ಸರ್ಕಾರದ ಮರ್ಯಾದೆ ತೆಗೆಯುತ್ತಿದ್ದಾರೆ ಎಂದು ಸದನದಲ್ಲಿ ಸಭಾಧ್ಯಕ್ಷರಾದ ಯು ಟಿ ಖಾದರ್‌ ಅಸಮಾಧಾನ ವ್ಯಕ್ತಪಡಿಸಿದರು. ಸೋಮವಾರ ವಿಧಾನಸಭೆಯಲ್ಲಿ ಗಮನಸೆಳೆಯುವ ಸೂಚನೆ ವೇಳೆ ಸಚಿವರ ಗೈರು ಹಾಜರಿ ಕುರಿತು ಸ್ಪೀಕರ್‌ ಯು ಟಿ ಖಾದರ್‌ ಮಾತನಾಡಿ, ಗಮನ ಸೆಳೆಯುವ ಸೂಚನೆ ವೇಳೆ ಸಚಿವರು ಇಲ್ಲವೆಂದರೆ ಹೇಗೆ ? ಉತ್ತರ ನೀಡಲು ಸಚಿವರು ಇರಬೇಕಲ್ಲವಾ ?ಈ ವೇಳೆ ಸಾರಿಗೆ, ತೋಟಗಾರಿಕೆ, ಕಂದಾಯ, ಲೋಕೋಪಯೋಗಿ ಸಚಿವರ್ಯಾರೂ ಇಲ್ಲ. ಆಗ ಮಂತ್ರಿಗಳನ್ನ ಕರೆಸಿ, ಇಲ್ಲವೆಂದರೆ ಗಮನ ಸೆಳೆಯುವ ಸೂಚನೆ ಬೇಡ. ಶಾಸಕರ ಪ್ರಶ್ನೆಗೆ ಮಂತ್ರಿಗಳು ಉತ್ತರಿಸಬೇಕು. ಮಂತ್ರಿಗಳು ಉತ್ತರಿಸಿದಾಗ ಮಾತ್ರ ಸದನದಲ್ಲಿ ಶಾಸಕರು ಕೂರುತ್ತಾರೆ ಎಂದು ಅಸಮಾಧಾನವನ್ನ ವ್ಯಕ್ತಪಡಿಸಿದರು. ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟ ಶ್ರೀನಿವಾಸ ಪೂಜಾರಿ, ಮುಖ್ಯ ಸಚೇತಕರಾದ ಎನ್. ರವಿಕುಮಾರ್ ಹಾಗೂ ಇತರ ಸದಸ್ಯರು ನಿಯಮ 72 ರಡಿ ನೀಡಿದ್ದ ಸೂಚನೆಗೆ ಉತ್ತರಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ರಾಜ್ಯದಲ್ಲಿ ಅಪರಾಧಗಳನ್ನು ತಡೆಗಟ್ಟಲು ಹಲವಾರು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.

ರಾತ್ರಿ ಗಸ್ತಿಗಾಗಿ ಇ- ಬೀಟ್, ಜೈಲಿನಿಂದ ಹೊರ ಬರುತ್ತಿರುವ ಆರೋಪಿಗಳ ಮೇಲೆ ನಿಗಾ, ನಿಯಮಿತವಾಗಿ ರೌಡಿ ಪೆರೇಡ್, ಮಟ್ಕಾ, ಜೂಜಾಟ, ಅಕ್ರಮ ಮದ್ಯ ಮಾರಾಟ ವಿರುದ್ಧ ನಿರಂತರ ದಾಳಿ ನಡೆಸುವಿಕೆ, ಘೋರ ಅಪರಾಧ ಪ್ರಕರಣಗಳಲ್ಲಿ ಆರೋಪಿಗಳಿಗೆ ಜಾಮೀನು ಸಿಗದಂತೆ ಮಾಡುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಶೀಘ್ರವಾಗಿ ಅಂತಿಮ ವರದಿ ಸಲ್ಲಿಸುವುದು, ಸಿಸಿ ಟಿವಿ ಕ್ಯಾಮೆರಾಗಳ ಅಳವಡಿಕೆ, ಮಹಿಳಾ ಸುರಕ್ಷತೆಗೆ ರಾಣಿ ಚೆನ್ನಮ್ಮ ಪಡೆ ಸ್ಥಾಪನೆ, ಸುಳ್ಳು ಸುದ್ದಿ ದ್ವೇಷದ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಪ್ರಕರಣ ದಾಖಲು ಸೇರಿದಂತೆ ರಾಜ್ಯದಲ್ಲಿ ಸೈಬರ್, ಆರ್ಥಿಕ, ಮಾದಕ ದ್ರವ್ಯಗಳ ಅಪರಾಧವನ್ನು ತಡೆಗಟ್ಟಲು ರಾಜ್ಯಾದ್ಯಂತ 45 CEN ಪೊಲೀಸ್ ಠಾಣೆಗಳನ್ನು ಪ್ರಾರಂಭಿಸಲಾಗಿದೆ ಎಂದರು. ಬೆಂಗಳೂರು ನಗರದಲ್ಲಿ ಸೇಫ್ ಸಿಟಿ ಘಾರ್ ಸೇಫ್ಟಿ ಆಫ್ ವುಮೆನ್ ಯೋಜನೆಯಡಿ ಮಹಿಳೆಯರ ಸುರಕ್ಷತೆಗಾಗಿ ನಗರದ 1640 ಸ್ಥಳಗಳಲ್ಲಿ 4100 ಸಿಸಿ ಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಹಾಗೂ 96 ವೀಕ್ಷಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಸ್ಪಂದನ ಸಹಾವಾಣಿ ಜೊತೆಗೆ ಮಹಿಳಾ ಸಹಾಯವಾಣಿ- 1091 ಸಹ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರ ಮತ್ತು ಮಕ್ಕಳ ಸುರಕ್ಷತೆಗಾಗಿ ಪಿಂಕ್‌ ಹೊಯ್ಸಳ ಮತ್ತು 112 ಗಸ್ತು ವಾಹನಗಳು ದಿನದ 24 ಗಂಟೆಗಳೂ ಕೆಲಸ ನಿರ್ವಹಿಸುತ್ತವೆ ಎಂದರು. ಸರ್ಕಾರದ ಪಂಚ ಗ್ಯಾರೆಂಟಿಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಗೃಹಜ್ಯೋತಿ, ಯುವನಿಧಿ ಯೋಜನೆಗಳಿಂದ ರಾಜ್ಯದ ಸುಮಾರು ನಾಲ್ಕೂವರೆ ಕೋಟಿ ಜನ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು. ದಿನಬಳಕೆ ವಸ್ತು , ವಿದ್ಯುತ್ ದರ ಬೆಲೆ ಏರಿಕೆ, ನಿರುದ್ಯೋಗ, ಬಡತನ ನಿವಾರಣೆ, ಮಹಿಳಾ ಸಬಲೀಕರಣ ಮುಂತಾದವುಗಳನ್ನು ಗಮನದಲ್ಲಿಟ್ಟುಕೊಂಡು ಈ 5 ಗ್ಯಾರೆಂಟಿಗಳನ್ನು ಅನುಷ್ಠಾನಕ್ಕೆ ತರಲಾಗಿದೆ. ಯಾವುದೇ ಕಾರಣಕ್ಕೂ ನೀಡಿರುವ ಗ್ಯಾರೆಂಟಿಗಳನ್ನು ಹಿಂಪಡೆಯುವ ಪ್ರಶ್ನೆಯೇ ಸರ್ಕಾರಕ್ಕಿಲ್ಲ ಎಂದರು.

ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯೂನಿಟ್ ವರೆಗೆ ಗರಿಷ್ಠ ಬಳಕೆ ಮಿತಿಗೆ ಒಳಪಟ್ಟು ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ. ಇದರಿಂದ ರಾಜ್ಯದ 1.60 ಕೋಟಿ ಗ್ರಾಹಕರು ಪ್ರಯೋಜನ ಪಡೆದಿದ್ದಾರೆ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಅರ್ಹ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು 2000 ರೂ ಗಳನ್ನು ನೀಡಲಾಗುತ್ತಿದೆ‌. ಈ ಯೋಜನೆಗೆ 17500 ಕೋಟಿ ರೂ ನಿಗದಿಪಡಿಸಲಾಗಿದ್ದು, ನೋಂದಾಯಿತ 1.17 ಕೋಟಿ ಮಹಿಳಾ ಫಲಾನುಭವಿಗಳಿಗೆ ಇದೇ ಜನವರಿ ವರೆಗೆ ಒಟ್ಟು 11037 ಕೋಟಿ ರೂಗಳನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಜಾರಿಗೊಳಿಸುವ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದೆ. ರಾಜ್ಯದ 3.5 ಕೋಟಿ ಮಹಿಳೆಯರು ಇದರ ಲಾಭ ಪಡೆದುಕೊಂಡಿದ್ದಾರೆ. ಧಾರ್ಮಿಕ ಕೇಂದ್ರಗಳಿಗೂ ಈ ಯೋಜನೆಗೆ ಯಿಂದ ಪುಷ್ಠಿ ದೊರೆತಂತಾಗಿದೆ. ಅಲ್ಲದೆ ಇದರಿಂದ ಉದ್ಯೋಗ ಸೃಷ್ಠಿಯಾಗಿದೆ ಎಂದರು. ಯುವನಿಧಿ ಯೋಜನೆಯಡಿ 2022-23 ನೇ ಸಾಲಿನಲ್ಲಿ ಉತ್ತೀರ್ಣರಾದ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ಕ್ರಮವಾಗಿ ಮಾಸಿಕ 3000ರೂ ಮತ್ತು 1,500 ರೂ ಗಳ ನಿರುದ್ಯೋಗ ಭತ್ಯೆಯನ್ನು ಎರಡು ವರ್ಷಗಳವರೆಗೆ ಅಥವಾ ಎರಡು ವರ್ಷದೊಳಗೆ ಉದ್ಯೋಗ ಪಡೆಯುವರೆಗೆ ಸರ್ಕಾರ ಪಾವತಿಸುತ್ತಿದೆ. ಒಟ್ಟಾರೆಯಾಗಿ ಈ ಯೋಜನೆಗಳು ರಾಜ್ಯದ 7 ಕೋಟಿ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ ಎಂದು ಹೇಳಿದರು.

ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ದೇಶ

KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ

Published

on

By

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್‌ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?

KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

73 ಸಾವಿರ ಉದ್ಯೋಗ ಭರವಸೆ ಏನಾಯಿತು?

ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್‌ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.

ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.

Continue Reading

ರಾಜಕೀಯ

B Nagendra ರಾಜೀನಾಮೆ: ಕಾಂಗ್ರೆಸ್‌ನಲ್ಲಿ ಬಿಗ್ ಟ್ವಿಸ್ಟ್, ಹೈಕಮಾಂಡ್ ಮುಂದಿದೆ ಮಹತ್ವದ ನಿರ್ಧಾರ!

Published

on

By

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಸಚಿವ B Nagendra ಅವರು ತಮ್ಮ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಗುರುವಾರವೇ ನಾಗೇಂದ್ರ ಅವರು ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ತಲುಪಿಸಿದ್ದಾರೆ ಎನ್ನಲಾಗಿದೆ. ಆದರೆ ರಾಜೀನಾಮೆಯನ್ನು ಅಂಗೀಕರಿಸಬೇಕೇ ಅಥವಾ ತಿರಸ್ಕರಿಸಿ ಅವರನ್ನು ಸಚಿವ ಸ್ಥಾನದಲ್ಲಿ ಮುಂದುವರಿಸಬೇಕೇ ಎಂಬ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದ ವರಿಷ್ಠರು ಹಾಗೂ ರಾಜ್ಯ ನಾಯಕತ್ವದ ನಡುವೆ ಚರ್ಚೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ರಾಜೀನಾಮೆ ಅಂಗೀಕಾರದ ಬಗ್ಗೆ ಕುತೂಹಲ

ನಾಗೇಂದ್ರ ಅವರು ಈಗಾಗಲೇ ತಮ್ಮ ರಾಜೀನಾಮೆ ಪತ್ರವನ್ನು ನಾಯಕತ್ವದ ಮುಂದಿಟ್ಟಿದ್ದು, ಸರ್ಕಾರಕ್ಕೆ ಮತ್ತಷ್ಟು ಮುಜುಗರವಾಗದಂತೆ ರಾಜಕೀಯವಾಗಿ ಮುನ್ನೆಚ್ಚರಿಕೆಯ ಹೆಜ್ಜೆ ಇಟ್ಟಿದ್ದಾರೆ ಎನ್ನಲಾಗಿದೆ.

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರ ವಿರುದ್ಧ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿ ನಿರಂತರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಇದೀಗ ನಾಗೇಂದ್ರ ಅವರ ರಾಜೀನಾಮೆ ಸಲ್ಲಿಕೆಯಾಗಿರುವುದು ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಆದರೆ ರಾಜೀನಾಮೆ ಸಲ್ಲಿಸಿರುವುದು ಮಾತ್ರ ಖಚಿತವಾಗಿದ್ದು, ಅದನ್ನು ಅಂಗೀಕರಿಸುವ ಕುರಿತು ಅಂತಿಮ ನಿರ್ಧಾರ ಇನ್ನೂ ಹೊರಬಿದ್ದಿಲ್ಲ ಎನ್ನಲಾಗಿದೆ.

ಬಳ್ಳಾರಿ ಚಲೋಗೂ ಮುನ್ನವೇ ಬಿಗ್ ಟ್ವಿಸ್ಟ್

ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಸೆಪ್ಟೆಂಬರ್ 1ರಿಂದ 10 ದಿನಗಳ ‘ಬಳ್ಳಾರಿ ಚಲೋ ಪಾದಯಾತ್ರೆ’ ನಡೆಸಲು ಘೋಷಿಸಿದೆ. ವಾಲ್ಮೀಕಿ ನಿಗಮದ ಹಗರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲು ಬಿಜೆಪಿ ಸಜ್ಜಾಗಿದೆ.

ಆದರೆ ಬಿಜೆಪಿ ಪಾದಯಾತ್ರೆ ಆರಂಭಕ್ಕೂ ಮುನ್ನವೇ ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಈ ಬೆಳವಣಿಗೆಯ ನಂತರ ಬಿಜೆಪಿ ತನ್ನ ಹೋರಾಟದ ಮುಂದಿನ ಕಾರ್ಯತಂತ್ರವನ್ನು ಹೇಗೆ ರೂಪಿಸಲಿದೆ ಎಂಬುದೂ ಗಮನ ಸೆಳೆದಿದೆ.

ಸಿಎಂ ಡಿಕೆಶಿ ಮತ್ತು ಹೈಕಮಾಂಡ್ ನಿರ್ಧಾರವೇನು?

ನಾಗೇಂದ್ರ ಅವರ ರಾಜೀನಾಮೆ ಪತ್ರ ಇದೀಗ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮುಂದಿದ್ದು, ಕಾಂಗ್ರೆಸ್ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮುಂದಿನ ನಿರ್ಧಾರ ಕೈಗೊಳ್ಳಬೇಕಿದೆ.

ರಾಜೀನಾಮೆಯನ್ನು ಅಂಗೀಕರಿಸಿದರೆ, ಹಗರಣದ ವಿಚಾರದಲ್ಲಿ ಸರ್ಕಾರ ಕೈಗೊಂಡ ಕ್ರಮವೆಂದು ಕಾಂಗ್ರೆಸ್ ಇದನ್ನು ಬಿಂಬಿಸುವ ಸಾಧ್ಯತೆಯಿದೆ. ಮತ್ತೊಂದೆಡೆ, ರಾಜೀನಾಮೆಯನ್ನು ತಿರಸ್ಕರಿಸಿ ನಾಗೇಂದ್ರ ಅವರನ್ನು ಮುಂದುವರಿಸುವ ನಿರ್ಧಾರ ಕೈಗೊಂಡರೆ ಪ್ರತಿಪಕ್ಷಗಳಿಂದ ಮತ್ತಷ್ಟು ರಾಜಕೀಯ ಒತ್ತಡ ಎದುರಾಗುವ ಸಾಧ್ಯತೆಯಿದೆ.

ಹೀಗಾಗಿ ಬಿ. ನಾಗೇಂದ್ರ ಅವರ ರಾಜೀನಾಮೆ ಅಂಗೀಕಾರವಾಗುತ್ತದೆಯೇ ಅಥವಾ ಅವರು ಸಚಿವರಾಗಿ ಮುಂದುವರಿಯುತ್ತಾರೆಯೇ ಎಂಬುದು ಇದೀಗ ರಾಜ್ಯ ರಾಜಕೀಯದ ಪ್ರಮುಖ ಪ್ರಶ್ನೆಯಾಗಿದೆ.

Continue Reading

Trending