ಬೆಂಗಳೂರು
ಮೆಟ್ರೋ ಸ್ಟೇಷನ್ ಬಳಿ ನಡು ರಸ್ತೆಯಲ್ಲೇ ಹೊತ್ತುರಿದ ಕಾರು!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ನಡುರಸ್ತೆಯಲ್ಲಿ ಕಾರು ಹೊತ್ತಿ ಉರಿದಿದೆ, ಕ್ಷಣಮಾತ್ರದಲ್ಲಿ ಕಾರು ಸುಟ್ಟು ಭಸ್ಮವಾಗಿದೆ, ಜಾಲಹಳ್ಳಿ ಮೆಟ್ರೋ ನಿಲ್ದಾಣದ ಬಳಿ ಬರ್ತಿದ್ದಂತೆ ಬೆಂಕಿಯ ಹೆಚ್ಚಾಗಿದ್ದು, ಕ್ಷಣಮಾತ್ರದಲ್ಲಿ ಕಾರಿನ ಒಳಗೆ ಇದ್ದ ಎಲ್ಲರೂ ಕೆಳಗೆ ಇಳಿದಿದ್ದಾರೆ, ಬಾನೆಟ್ ನಲ್ಲಿ ಬೆಂಕಿ ಕಾಣಿಸುತ್ತಿದ್ದಂತೆ ಪ್ರಯಾಣಿಕರು ತಕ್ಷಣ ಕಾರಿನಿಂದ ಕೆಳಗಿಳಿದು ಬಚಾವ್ ಆಗಿದ್ದಾರೆ,
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಸ್ಧಳೀಯ ಪೊಲೀಸರು ಸ್ಧಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ,
ಬೆಂಗಳೂರು
Bengaluru ಪಾರ್ಕ್ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ
ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್‌ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.
ಲಾಲ್‌ಬಾಗ್‌ನಲ್ಲಿ ಬೃಹತ್ ಬ್ಯಾನರ್‌ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.
ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್‌ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.
ಶೇ.28ರಷ್ಟು ವಾರ್ಡ್‌ಗಳಲ್ಲಿ ಪಾರ್ಕ್‌ಗಳೇ ಇಲ್ಲ!
ಐಐಹೆಚ್‌ಎಸ್ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್‌ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.
ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ
ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.
- ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
- ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
- ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
- ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
- ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
- ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.
ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬೆಂಗಳೂರು
Nalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ
ಬೆಂಗಳೂರು: ಜೆ.ಪಿ.ನಗರದಲ್ಲಿರುವ ಪ್ರತಿಷ್ಠಿತ ನNalanda English Medium School ವಾರ್ಷಿಕೋತ್ಸವ ಹಲವು ವಿಶೇಷತೆಗಳೊಂದಿಗೆ ಗಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ S.Janaki ಅವರ ವಿವಿಧ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯನ ಹಾಗೂ ನೃತ್ಯದ ಮೂಲಕ ಪ್ರಸ್ತುತಪಡಿಸಿ ಗಾನಕೋಗಿಲೆಗೆ ಗೌರವ ನಮನ ಸಲ್ಲಿಸಿದರು.
ಕಾರ್ಯಕ್ರಮಕ್ಕೆ ಮಿಸ್ ಇಂಡಿಯಾ ಕಿರೀಟ ವಿಜೇತೆ, ಕಿರುತೆರೆ ಹಾಗೂ ಚಲನಚಿತ್ರ ಕಲಾವಿದೆ ಸ್ಮೀತಾಪ್ರಭು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಶೈಕ್ಷಣಿಕ ಸಾಧನೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಅಗತ್ಯ ಎಂದು ಹೇಳಿದರು.
ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆ ಸಾಕಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ಸ್ಮೀತಾಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು.
ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನಮನ
ವಾರ್ಷಿಕೋತ್ಸವದ ಪ್ರಮುಖ ಆಕರ್ಷಣೆಯಾಗಿ ವಿದ್ಯಾರ್ಥಿಗಳು ಎಸ್. ಜಾನಕಿ ಅವರ ವಿವಿಧ ಭಾಷೆಗಳ ಹಾಡುಗಳನ್ನು ಗಾಯನ ಮತ್ತು ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಸಂಗೀತ ಹಾಗೂ ನೃತ್ಯದ ಸುಂದರ ಸಂಯೋಜನೆ ಪ್ರೇಕ್ಷಕರ ಗಮನ ಸೆಳೆಯಿತು.
ವಿದ್ಯಾರ್ಥಿಗಳ ಈ ವಿಶೇಷ ಪ್ರದರ್ಶನದ ಮೂಲಕ ಅಗಲಿದ ಹಿರಿಯ ಗಾಯಕಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಪಾಲಕರು ಹಾಗೂ ಶಿಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ
ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸ್ಮೀತಾಪ್ರಭು ಬಹುಮಾನ ವಿತರಿಸಿದರು.
ಕಾರ್ಯಕ್ರಮದಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕುಪ್ಪುರಾಜ್, ಕಾರ್ಯದರ್ಶಿ ಶಿವಶಂಕರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.
ಬೆಂಗಳೂರು
Anand Sweets: ಸಿಹಿ ತಿನ್ನುವಾಗ ನಾಲಿಗೆ, ಹಲ್ಲಿಗೆ ಗಾಯ; ₹2,050 ಖರೀದಿಗೆ ಕಾನೂನು ನೋಟಿಸ್
ಬೆಂಗಳೂರು: Kempegowda International Airport ದಲ್ಲಿರುವ ಆನಂದ್ ಸ್ವೀಟ್ಸ್ ಮಳಿಗೆಯಿಂದ ಖರೀದಿಸಿದ್ದ ಸಿಹಿತಿಂಡಿಯಲ್ಲಿ ಕಲ್ಲಿನಂತಿರುವ ಗಟ್ಟಿಯಾದ ವಸ್ತು ಪತ್ತೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಸಿಹಿತಿಂಡಿ ಸೇವಿಸುವ ವೇಳೆ ನಾಲಿಗೆ ಹಾಗೂ ಹಲ್ಲಿಗೆ ಗಾಯವಾಗಿದೆ ಎಂದು ಆರೋಪಿಸಿರುವ ಗ್ರಾಹಕರು ಇದೀಗ ಸಂಸ್ಥೆಗೆ ಕಾನೂನು ನೋಟಿಸ್ ನೀಡಿದ್ದಾರೆ.
ಆಗಸ್ಟ್ 20ರಂದು ಸಂಜೆ 5.48ರ ಸುಮಾರಿಗೆ ಕಾರ್ತಿಕ್ ಗವಾಜಿ ಎಂಬುವವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆನಂದ್ ಸ್ವೀಟ್ಸ್ ಮಳಿಗೆಯಲ್ಲಿ ಒಟ್ಟು ₹2,050 ಮೌಲ್ಯದ ಸಿಹಿತಿಂಡಿಗಳನ್ನು ಖರೀದಿಸಿದ್ದರು. ಇದಕ್ಕಾಗಿ ಫೋನ್‌ಪೇ ಮೂಲಕ ಹಣ ಪಾವತಿಸಲಾಗಿದ್ದು, ವಹಿವಾಟಿನ ದಾಖಲೆಗಳು ತಮ್ಮ ಬಳಿ ಇರುವುದಾಗಿ ಕಾನೂನು ನೋಟಿಸ್‌ನಲ್ಲಿ ತಿಳಿಸಿದ್ದಾರೆ.
ಸಿಹಿತಿಂಡಿಗಳನ್ನು ಉಡುಗೊರೆಯಾಗಿ ನೀಡಲಾಗಿತ್ತು ಎನ್ನಲಾಗಿದ್ದು, ಬಳಿಕ ಅವುಗಳನ್ನು ಸೇವಿಸುವ ಸಂದರ್ಭದಲ್ಲಿ ಗಟ್ಟಿಯಾದ, ಕಲ್ಲಿನಂತಿರುವ ವಸ್ತು ಪದೇಪದೇ ಸಿಕ್ಕಿದೆ ಎಂದು ಆರೋಪಿಸಲಾಗಿದೆ. ಈ ವೇಳೆ ಸಿಹಿತಿಂಡಿ ಸೇವಿಸುತ್ತಿದ್ದ ವ್ಯಕ್ತಿಯ ನಾಲಿಗೆ ಹಾಗೂ ಹಲ್ಲಿಗೆ ಗಾಯವಾಗಿದೆ ಎಂದು ದೂರಲಾಗಿದೆ.
ಆಹಾರ ಗುಣಮಟ್ಟದ ಬಗ್ಗೆ ಪ್ರಶ್ನೆ
ಘಟನೆ ಹಿನ್ನೆಲೆಯಲ್ಲಿ ಸಿಹಿತಿಂಡಿಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಲಾಗಿದೆ. ಉತ್ಪನ್ನದ ತಯಾರಿಕೆ, ಪ್ಯಾಕಿಂಗ್, ಗುಣಮಟ್ಟ ಪರಿಶೀಲನೆ ಹಾಗೂ ಸುರಕ್ಷತಾ ಕ್ರಮಗಳ ಬಗ್ಗೆ ಸಂಸ್ಥೆ ಸ್ಪಷ್ಟನೆ ನೀಡಬೇಕು ಎಂದು ಗ್ರಾಹಕರು ಒತ್ತಾಯಿಸಿದ್ದಾರೆ.
ಕಾನೂನು ನೋಟಿಸ್‌ನಲ್ಲಿ ಸಿಹಿತಿಂಡಿಗಾಗಿ ಪಾವತಿಸಿದ ₹2,050 ಹಣವನ್ನು ಮರುಪಾವತಿಸುವುದರ ಜೊತೆಗೆ ಗಾಯಗೊಂಡ ವ್ಯಕ್ತಿಯ ವೈದ್ಯಕೀಯ ಹಾಗೂ ದಂತ ಚಿಕಿತ್ಸೆಯ ಸಂಪೂರ್ಣ ವೆಚ್ಚವನ್ನು ಭರಿಸುವಂತೆ ಆಗ್ರಹಿಸಲಾಗಿದೆ. ದೈಹಿಕ ನೋವು, ಮಾನಸಿಕ ಸಂಕಷ್ಟ ಹಾಗೂ ಇತರ ನಷ್ಟಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕೂಡ ಬೇಡಿಕೆ ಇಡಲಾಗಿದೆ.
ದಾಖಲೆ ಸಂರಕ್ಷಣೆಗೆ ಸೂಚನೆ
ಸಂಬಂಧಿತ ಉತ್ಪನ್ನದ ಬ್ಯಾಚ್ ಅಥವಾ ಲಾಟ್ ವಿವರ, ಗುಣಮಟ್ಟ ಪರಿಶೀಲನಾ ದಾಖಲೆಗಳು ಹಾಗೂ ಉತ್ಪನ್ನಕ್ಕೆ ಸಂಬಂಧಿಸಿದ ಮಾಹಿತಿಯನ್ನು ಒದಗಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಸಿಸಿಟಿವಿ ದೃಶ್ಯಗಳು, ಪಾವತಿ ದಾಖಲೆಗಳು, ಮಾರಾಟ ದಾಖಲೆಗಳು ಹಾಗೂ ಉತ್ಪನ್ನದ ಬ್ಯಾಚ್ ಮಾಹಿತಿಯನ್ನು ಸಂರಕ್ಷಿಸುವಂತೆಯೂ ಸೂಚಿಸಲಾಗಿದೆ.
ನೋಟಿಸ್ ಸ್ವೀಕರಿಸಿದ 48 ಗಂಟೆಗಳೊಳಗೆ ಲಿಖಿತ ಉತ್ತರ ನೀಡಬೇಕು ಎಂದು ಕಾರ್ತಿಕ್ ಗವಾಜಿ ಒತ್ತಾಯಿಸಿದ್ದಾರೆ. ಸೂಕ್ತ ಪ್ರತಿಕ್ರಿಯೆ ಅಥವಾ ಪರಿಹಾರ ದೊರೆಯದಿದ್ದರೆ ಗ್ರಾಹಕ ಆಯೋಗದ ಮೊರೆ ಹೋಗುವುದರ ಜೊತೆಗೆ ಸಂಬಂಧಪಟ್ಟ ಆಹಾರ ಸುರಕ್ಷತಾ ಅಧಿಕಾರಿಗಳಿಗೆ ದೂರು ನೀಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಆದರೆ, ಸಿಹಿತಿಂಡಿಯಲ್ಲಿ ಪತ್ತೆಯಾಗಿದೆ ಎನ್ನಲಾದ ವಸ್ತುವಿನ ನಿಖರ ಸ್ವರೂಪ ಹಾಗೂ ಆರೋಪದ ಸತ್ಯಾಸತ್ಯತೆ ಅಧಿಕೃತ ಪರಿಶೀಲನೆಯ ಬಳಿಕವೇ ಖಚಿತವಾಗಬೇಕಿದೆ. ಈ ಕುರಿತು ಆನಂದ್ ಸ್ವೀಟ್ಸ್ ಸಂಸ್ಥೆಯ ಅಧಿಕೃತ ಪ್ರತಿಕ್ರಿಯೆ ಇನ್ನಷ್ಟೇ ಹೊರಬರಬೇಕಿದೆ.
-
ಬೆಂಗಳೂರು21 ಗಂಟೆಗಳು agoVande Mataram ಸಂಪೂರ್ಣ ಹಾಡುವ ವಿಚಾರಕ್ಕೆ ರಾಜಕೀಯ ರಂಪಾಟ; CM ಡಿಕೆಶಿ ಹೇಳಿದ್ದೇನು?
-
ರಾಜಕೀಯ23 ಗಂಟೆಗಳು agoValmiki ನಿಗಮದ ಅಕ್ರಮ: ಸಚಿವ ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಡಿಕೆ ಶಿವಕುಮಾರ್ ಹೇಳಿದ್ದೇನು?
-
ರಾಜಕೀಯ23 ಗಂಟೆಗಳು agoValmiki Corporation Scam: ‘ನಾಗೇಂದ್ರ ನಿರಪರಾಧಿ ಎಂದು ಸಾಬೀತಾದರೆ ಸಿಎಂ ಮಾಡಿಕೊಳ್ಳಿ’ ಎಂದ ವಿಜಯೇಂದ್ರ
-
ದೇಶ21 ಗಂಟೆಗಳು agoBJP ಶಾಸಕರ ಖಾಸಗಿ ಕಾರು ತೊಳೆಯಲು ಅಗ್ನಿಶಾಮಕ ವಾಹನ ಬಳಕೆ? ವಿಡಿಯೋ ವೈರಲ್, ಭಾರೀ ಆಕ್ರೋಶ
-
ದೇಶ24 ಗಂಟೆಗಳು agoONAM ಸದ್ಯ ಸವಿಯಲು ಸಾಲಿನಲ್ಲಿ ಕುಳಿತ ಕೋತಿಗಳು! 53 ವರ್ಷಗಳ ಅಪರೂಪದ ಸಂಪ್ರದಾಯ
-
ರಾಜ್ಯ23 ಗಂಟೆಗಳು agoOnline ತರಕಾರಿಗಳಿಗೆ ಕೆಮಿಕಲ್ ಸ್ಪ್ರೇ? ಸಚಿವ ಖಾದರ್ ಸ್ಫೋಟಕ ಹೇಳಿಕೆ, ಶೀಘ್ರದಲ್ಲೇ ಕ್ರಮ
-
ಕ್ರೀಡೆ23 ಗಂಟೆಗಳು agoIndia vs Panama: ವಿಶ್ವಕಪ್ ಆಡಿದ ಪನಾಮ ವಿರುದ್ಧ ಭಾರತ ಸೆಣಸು; ಪಂದ್ಯಕ್ಕೆ ದಿನಾಂಕ ಫಿಕ್ಸ್
-
ದೇಶ23 ಗಂಟೆಗಳು agoPM Narendra Modi ಥರ್ಡ್ ಪಾರ್ಟಿ ಆಡಿಟ್ ಇದ್ದರೂ ಕಳಪೆ ಕಾಮಗಾರಿ ಏಕೆ? ಅಧಿಕಾರಿಗಳಿಗೆ ಮೋದಿ ನೇರ ಪ್ರಶ್ನೆ
