ದೇಶ
ಮೇಕೆದಾಟು ವಿವಾದ ನೀವೇ ಬಗೆಹರಿಸಿಕೊಳ್ಳಿ ಎಂದ ಪ್ರಧಾನಿ ಮೋದಿ
ನವದೆಹಲಿ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮೇಕೆದಾಟು ಯೋಜನೆಗೆ ಸಂಬಂಧಿಸಿದ ವಿವಾದವನ್ನು ಪ್ರಸ್ತಾಪಿಸಿದಾಗ ಪ್ರಧಾನಿ ಮೋದಿ ನೀವೇ ಬಗೆಹರಿಸಿಕೊಳ್ಳಿ ಎಂದು ಹೇಳಿದ್ದಾರಂತೆ
ದೆಹಲಿಯಲ್ಲಿ ಪ್ರಧಾನಿಯನ್ನು ಡಿಕೆಶಿ ಭೇಟಿಯಾಗಿ ರಾಜ್ಯದ ಅನೇಕ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಯೋಜನೆಗಳಿಗೆ ಕೇಂದ್ರದ ಅನುದಾನ ಕೋರಿ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ,
ಮೇಕೆದಾಟು ಯೋಜನೆಯಲ್ಲಿ ಮಧ್ಯಸ್ಧಿಕೆ ವಹಿಸುವಂತೆ ಪ್ರಧಾನಿಗೆ ಮನವಿ ಮಾಡಿದಾಗ ಈ ಸಮಸ್ಯೆ ಬಗೆಹರಿಸಲು ಕರ್ನಾಟಕ ಮತ್ತು ತಮಿಳುನಾಡು ಎರಡು ರಾಜ್ಯಗಳು ಒಟ್ಟಾಗಿ ಕುಳಿತಿಕೊಂಡು ಮಾತುಕತೆ ನಡೆಸಬೇಕು ಅದನ್ನು ನಿಮ್ಮಲ್ಲಿಯೇ ಬಗೆಹರಿಸಿಕೊಳ್ಳಿ ಎಂದಿರುವುದಾಗಿ ಡಿಕೆಶಿ ಹೇಳಿದ್ದಾರೆ,
ಮಹದಾಯಿ ಯೋಜನೆ ವಿಚಾರದಲ್ಲೂ ಪ್ರಧಾನಿ ಮಧ್ಯಸ್ಧಿಕೆ ವಹಿಸಬೇಕು ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಮುಂಬರುವ ಸಚಿವ ಸಂಪುಟ ಸಭೆಯಲ್ಲಿ ಅದನ್ನು ಕೈಗೆತ್ತಿಕೊಳ್ಳುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ,
ಕೇಂದ್ರದ ಬೊಕ್ಕಸಕ್ಕೆ ಬೆಂಗಳೂರು ಅತಿ ಹೆಚ್ಚು ತೆರಿಗೆ ನೀಡುವಲ್ಲಿ ಎರಡನೇ ಸ್ಧಾನದಲ್ಲಿದೆ, ಇತ್ತೀಚಿನ ಕೇಂದ್ರ ಬಜೆಟ್‍ನಲ್ಲಿ ಬೆಂಗಳೂರಿಗೆ ಏನು ಸಿಕ್ಕಿಲ್ಲ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವರಧಿಯಲ್ಲಿ ರಾಜ್ಯವು ಎಲೆಕ್ಟ್ರಾನಿಕ್ ಸಿಟಿಮ ಹೆಬ್ಬಾಳ ಮತ್ತು ನೆಲಮಂಗಲದಲ್ಲಿ ಮೇಲ್ಸೇತುವೆಗಳ ನಿರ್ಮಾಣಕ್ಕೆ ಹಣವನ್ನು ಪಡೆದುಕೊಂಡಿತ್ತು ಎಂದು ಡಿಕೆಶಿ ಹೇಳಿದ್ದಾರೆ,