ಚುನಾವಣೆ
ಮೋದಿ ಸರ್ಕಾರದಿಂದ CAA ಜಾರಿ; ಏನಿದು ಪೌರತ್ವ ತಿದ್ದುಪಡಿ ಕಾಯ್ದೆ?, ಯಾರಿಗೆ ಅನ್ವಯ? ಮುಸ್ಲಿಮರ ವಿರೋಧ ಏಕೆ?
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಪೌರತ್ವ ತಿದ್ದುಪಡಿ ಕಾಯ್ದೆ (CAA) ಸೋಮವಾರದಿಂದ ಜಾರಿಗೆ ಬಂದಿದ್ದು, ಗೃಹ ಸಚಿವಾಲಯವು ಸಿಎಎ ನಿಯಮಗಳ ಕುರಿತು ಅಧಿಸೂಚನೆ ಹೊರಡಿಸಿದೆ. ಈ ಮಸೂದೆಯನ್ನು 2019ರ ಡಿಸೆಂಬರ್ 11ರಂದು ಸಂಸತ್ತಿನಲ್ಲಿ ಮಂಡಿಸಿದಾಗ ಸಾಕಷ್ಟು ವಿರೋಧ ವ್ಯಕ್ತವಾಗಿದ್ದವು. ಆದರೆ ಇದೀಗ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಹೊತ್ತಿನಲ್ಲಿ ಮೋದಿ ಸರ್ಕಾರ ಇದನ್ನು ಜಾರಿಗೆ ತಂದಿದೆ.
ಇಷ್ಟಕ್ಕೂ ಪೌರತ್ವ ತಿದ್ದುಪಡಿ ಕಾಯ್ದೆ ಎಂದರೇನು?
ದೌರ್ಜನ್ಯಕ್ಕೊಳಗಾಗಿ ಭಾರತಕ್ಕೆ ವಲಸೆ ಬಂದಿರುವ ವಿದೇಶಿ ಅಲ್ಪಸಂಖ್ಯಾತರಿಗೆ ಪೌರತ್ವ ನೀಡುವ ಯೋಜನೆಯೇ ಪೌರತ್ವ ತಿದ್ದುಪಡಿ ಕಾಯ್ದೆ (CAA). ಇದರಲ್ಲಿ 1955ರ ಪೌರತ್ವ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, 2014ರ ಡಿಸೆಂಬರ್‌ಗಿಂತ ಮೊದಲು ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೆ ಬೇಸತ್ತು ಭಾರತಕ್ಕೆ ಆಗಮಿಸಿದ ಅಲ್ಪಸಂಖ್ಯಾತ ಹಿಂದೂಗಳು, ಸಿಖ್ಖರು, ಬೌದ್ಧರು, ಜೈನರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ನರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ. 2016 ರಲ್ಲಿ ಲೋಕಸಭೆಯಲ್ಲಿ ಮೊದಲ ಬಾರಿಗೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಮಂಡಿಸಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತದ ಕೊರತೆಯಿಂದ ಅತಂತ್ರ ಸ್ಥಿತಿಯಲ್ಲಿ ತಲುಪಿತ್ತು. ಬಳಿಕ ಅದನ್ನು ಸಂಸದೀಯ ಸಮಿತಿಗೆ (Cabinet Committee) ಕಳುಹಿಸಲಾಯಿತು. ಬಳಿಕ ಮತ್ತೆ ಡಿಸೆಂಬರ್ 2019 ರಲ್ಲಿ ಲೋಕಸಭೆಯಲ್ಲಿ ಮಂಡಿಸಲಾಯಿತು. ಅಲ್ಲಿಂದ ಅಂಗೀಕಾರವಾದ ಬಳಿಕ ರಾಜ್ಯಸಭೆಯಲ್ಲೂ ಅದನ್ನು ಅಂಗೀಕರಿಸಲಾಯಿತು. ಜನವರಿ 10, 2020 ರಂದು ರಾಷ್ಟ್ರಪತಿಗಳ ಆಂಕಿತ ಕೂಡ ಅದಕ್ಕೆ ಲಭಿಸಿತು.
6 ವರ್ಷಗಳಲ್ಲಿ ಭಾರತೀಯ ಪೌರತ್ವ
ಈ ಕಾಯ್ದೆಯ ಅನ್ವಯ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನ ದೇಶಗಳಿಂದ ಭಾರತಕ್ಕ ಆಗಮಿಸಿದ ಈ ನಿರಾಶ್ರಿತರಿಗೆ 6 ವರ್ಷಗಳೊಳಗೆ ಭಾರತೀಯ ಪೌರತ್ವ ನೀಡಲಾಗುವುದು. ತಿದ್ದುಪಡಿಯ ಮೂಲಕ, ಈ ನಿರಾಶ್ರಿತರ ಸ್ವಾಭಾವಿಕತೆಯ ನಿವಾಸದ ಅಗತ್ಯವನ್ನು 11 ವರ್ಷಗಳಿಂದ ಐದು ವರ್ಷಗಳಿಗೆ ಕಡಿಮೆ ಮಾಡಲಾಗಿದೆ. ಮಹತ್ವದ ವಿಷಯ ಎಂದರೆ ಸಿಎಎ ಯಾರ ಪೌರತ್ವವನ್ನು ಕಸಿದುಕೊಳ್ಳುವ ಕಾನೂನಲ್ಲ… ಬದಲಿಗೆ ಅದು ಪೌರತ್ವವನ್ನು ನೀಡುವ ಕಾನೂನು ಆಗಿದೆ.
ದೇಶದ ಮುಸ್ಲಿಮರ ವಿರೋಧವೇಕೆ?
ಈ ಕಾಯ್ದೆಯಲ್ಲಿ ಅಥವಾ ಈ ಕಾನೂನಿನಲ್ಲಿ ಮುಸ್ಲಿಮರನ್ನು ಸೇರಿಸಲಾಗಿಲ್ಲ ಅಲ್ಲದೆ ದೇಶದ ಮುಸ್ಲಿಮರ ಪೌರತ್ವವನ್ನು ಕಸಿದುಕೊಳ್ಳಲಾಗುತ್ತದೆ ಎಂಬ ವಾದ ಕೂಡ ಈ ಕಾಯ್ದೆಗೆ ಮುಸ್ಲಿಮರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎನ್ನಲಾಗಿದೆ. ಈ ಕಾಯಿದೆಯ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಲಾಗುತ್ತದೆ ಮತ್ತು ಇದು ಸಂವಿಧಾನದ 14 ನೇ ವಿಧಿ ಮತ್ತು ಸಮಾನತೆಯ ಹಕ್ಕಿನ
ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದ್ದಾರೆ. ಮೂರು ದೇಶಗಳ ಮುಸ್ಲಿಮರಿಗೆ ಪೌರತ್ವ ನೀಡಬೇಕು ಎಂಬ ಬೇಡಿಕೆಯೂ ಇದೆ.
ಭಾರತೀಯ ಮುಸ್ಲಿಮರಿಗೆ ಬೇಕಿಲ್ಲ ಆತಂಕ
ಇನ್ನು ಮೋದಿ ಸರ್ಕಾರ ಹೇಳಿರುವಂತೆ ಈ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಯಾವುದೇ ಆತಂಕವಿಲ್ಲ. ಭಾರತೀಯ ಮುಸ್ಲಿಮರ ಪೌರತ್ವವನ್ನು ಈ ಕಾಯ್ದೆ ಕಸಿಯುವುದಿಲ್ಲ. ಆದರೆ ಭಾರತೀಯರಲ್ಲದ ಮುಸ್ಲಿಮರಿಗೆ ಪೌರತ್ವ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದೆ.
ಇದುವರೆಗೆ ಅವರಿಗೆ ಪೌರತ್ವ ಹೇಗೆ ಸಿಗುತ್ತಿತ್ತು?
ಯಾರಾದರೂ ಭಾರತದ ಪೌರತ್ವವನ್ನು ಬಯಸಿದರೆ, ಅವರು ಕನಿಷ್ಠ 11 ವರ್ಷಗಳ ಕಾಲ ಭಾರತದಲ್ಲಿ ವಾಸಿಸಬೇಕು ಎಂದು ಕಾನೂನು ಹೇಳುತ್ತದೆ. ಆದರೆ ಹೊಸ ಕಾನೂನಿನ ಪ್ರಕಾರ, ಮೂರು ದೇಶಗಳಿಂದ ಬರುವ ಮುಸ್ಲಿಮೇತರರಿಗೆ 11 ವರ್ಷಗಳ ಬದಲಿಗೆ 6 ವರ್ಷಗಳ ಒಳಗೆ ಪೌರತ್ವ ನೀಡಲಾಗುವುದು ಎನ್ನಲಾಗಿದೆ. ಆದರೆ ಈ ದೇಶಗಳನ್ನು ಹೊರತುಪಡಿಸಿ ಬೇರೆ ದೇಶಗಳಿಂದ ಬರುವ ಜನರು ಯಾವುದೇ ಧರ್ಮ ಅಥವಾ ಸಮುದಾಯಕ್ಕೆ ಸೇರಿದವರಾಗಿದ್ದರೂ ಭಾರತದಲ್ಲಿ 11 ವರ್ಷಗಳ ಕಾಲಾವಧಿ ಪೂರ್ಣಗೊಳಿಸಬೇಕು.
ಸಿಎಎ ಜಾರಿ ಅನುಕೂಲಗಳೇನು?
ಮೋದಿ ಸರ್ಕಾರ ಹೇಳಿದಂತೆ ದಶಕಗಳಿಂದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಧಾರ್ಮಿಕ ಕಿರುಕುಳ ಎದುರಿಸುತ್ತಿರುವ ಮುಸ್ಲಿಮೇತರರಿಗೆ ಗೌರವಯುತ ಜೀವನವನ್ನು ಒದಗಿಸುವುದು ಇದರ ಮತ್ತೊಂದು ಉದ್ದೇಶವಾಗಿದೆ. ಪೌರತ್ವ ಹಕ್ಕುಗಳು ಅವರ ಭಾಷೆ, ಸಾಂಸ್ಕೃತಿಕ ಮ
ಚುನಾವಣೆ
ನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
ಭೋಪಾಲ್: ಮಧ್ಯಪ್ರದೇಶದ ದತಿಯಾ ವಿಧಾನಸಭಾ ಉಪಚುನಾವಣೆಗೆ ಮಾಜಿ ಗೃಹಸಚಿವ ನರೋತ್ತಮ್ ಮಿಶ್ರಾ ಅವರಿಗೆ ಬಿಜೆಪಿ ಟಿಕೆಟ್ ನೀಡದೆ, ಅವರ ಬದಲಿಗೆ ಅಶುತೋಷ್ ತಿವಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ನಿರ್ಧಾರವನ್ನು ವಿರೋಧಿಸಿ ದತಿಯಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ರಘುವೀರ್ ಶರಣ್ ಸೇರಿದಂತೆ ಹಲವು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಟಿಕೆಟ್ ನಿರಾಕರಣೆಯ ಸುದ್ದಿ ಹೊರಬಿದ್ದ ತಕ್ಷಣ ಸಾವಿರಾರು ಬೆಂಬಲಿಗರು NH-44 ಝಾನ್ಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಸುಮಾರು 15 ಕಿಲೋಮೀಟರ್‌ಗಳಷ್ಟು ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು. ಪ್ರತಿಭಟನೆ ವೇಳೆ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಯಿತು.
ದತಿಯಾ ಎಸ್‌ಪಿ ಮಯೂರ್ ಖಾಂಡೇಲ್ವಾಲ್ ಅವರ ಪ್ರಕಾರ, 3,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಮಾರುಕಟ್ಟೆ ಬಂದ್ ಮಾಡಲು ಯತ್ನಿಸಿದ್ದು, ಹಲವು ಬಾರಿ ಮನವಿ ಮಾಡಿದರೂ ರಸ್ತೆ ತಡೆ ಹಿಂಪಡೆಯಲಿಲ್ಲ. ಬಳಿಕ ಪೊಲೀಸರು ಅಶ್ರುವಾಯು ಬಳಸಿದರೂ ಕಲ್ಲು ತೂರಾಟ ಮತ್ತಷ್ಟು ತೀವ್ರಗೊಂಡಿತು. ಘಟನೆಯಲ್ಲಿ ಆರುಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಹೆಚ್ಚುವರಿ ಎಸ್‌ಪಿ ಹಾಗೂ ಎಸ್‌ಪಿಗೂ ಗಾಯಗಳಾಗಿವೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಯಾರು ನರೋತ್ತಮ್ ಮಿಶ್ರಾ?
ನರೋತ್ತಮ್ ಮಿಶ್ರಾ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಗೃಹಸಚಿವರಾಗಿದ್ದಾರೆ. 2008ರಿಂದ ದತಿಯಾ ಕ್ಷೇತ್ರವನ್ನು ಪ್ರತಿನಿಧಿಸಿರುವ ಅವರು ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಗೃಹ, ಆರೋಗ್ಯ, ವೈದ್ಯಕೀಯ ಶಿಕ್ಷಣ, ಜಲಸಂಪನ್ಮೂಲ, ನಗರಾಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳನ್ನು ನಿರ್ವಹಿಸಿದ್ದರು.
ಉಪಚುನಾವಣೆ ಏಕೆ ನಡೆಯುತ್ತಿದೆ?
ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರತಿ ವಿರುದ್ಧ ವಂಚನೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬಳಿಕ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಇದರ ಪರಿಣಾಮವಾಗಿ ದತಿಯಾ ಕ್ಷೇತ್ರಕ್ಕೆ ಜುಲೈ 30ರಂದು ಉಪಚುನಾವಣೆ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಟಿಕೆಟ್ ಘೋಷಣೆಯ ಬೆನ್ನಲ್ಲೇ ಬಿಜೆಪಿ ಒಳಜಗಳ ತೀವ್ರಗೊಂಡಿರುವುದು ಚುನಾವಣೆಗೆ ಹೊಸ ತಿರುವು ನೀಡಿದೆ.
ಚುನಾವಣೆ
ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.
ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.
ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್‌ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
-
ದೇಶ13 hours agoಬಿಹಾರ ರಾಜಕೀಯದಲ್ಲಿ ಭಾರಿ ಟ್ವಿಸ್ಟ್: ನಾಮಪತ್ರದ ಮರುದಿನವೇ BJP ಅಭ್ಯರ್ಥಿ ಬದಲಾವಣೆ, ಪ್ರಶಾಂತ್ ಕಿಶೋರ್ ವಿರುದ್ಧ ಹೊಸ ಮುಖ!
-
ದೇಶ13 hours ago20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ
-
ದೇಶ13 hours agoIran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ
-
ದೇಶ14 hours ago40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್ಗೆ; FTA ಮೂಲಕ ಹೊಸ ಅಧ್ಯಾಯ
-
ಚುನಾವಣೆ12 hours agoನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
-
ದೇಶ12 hours ago14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್ಗೆ ಜನ ಫಿದಾ
-
ದೇಶ11 hours agoಕಾಶ್ಮೀರ ನಕ್ಷೆ ತಪ್ಪಾಗಿ ಪ್ರದರ್ಶನ; ಬಾಂಗ್ಲಾದೇಶದಲ್ಲೇ ಭಾರತದ ಅಧಿಕಾರಿ ಖಡಕ್ ಆಕ್ಷೇಪ
-
ದೇಶ14 hours agoಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್ನಲ್ಲಿ ಖಲಿಸ್ತಾನಿ ಘೋಷಣೆ
