ದೇಶ
ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವು!
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಳಿಮಾವಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,
ಕೆಲ ತಿಂಗಳ ಹಿಂದೆ ಯಡಿಯೂರಪ್ಪ ಅವರು ತಮ್ಮ ನಿವಾಸದಲ್ಲಿ ನನ್ನ ಮಗಳ ಮೇಲೆ ಲೈಂಗಿಕ ಕಿರುಕುಳ ಎಸೆಗಿದ್ದಾರೆಮದು ದೂರು ದಾಖಲಿಸಿದ್ದರು,
ಇದಕ್ಕೆ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ ಮಹಿಳೆ ನನ್ನ ಬಳಿ ಸಹಾಯ ಯಚಿಸಿ ಬಂದಿದ್ದರು, ಪೊಲೀಸ್ ಕಮಿಷನರ್ ಅವರಿಗೆ ಫೋನ್ ಮಾಡಿ ಮಹಿಳೆಗೆ ಸಹಾಯ ಮಾಡುವಂತೆ ಹೇಳಿದ್ದಲ್ಲದೇ ಸ್ವಲ್ಪ ಹಣವನ್ನು ನೀಡಿದ್ದೆ ಎಂದಿದ್ದರು,
ಈ ಮಹಿಳೆ ಹಲವಾರು ಗಣ್ಯ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆಂಬ ಆರೋಪ ಕೇಳಿಬಂದಿತ್ತು