Connect with us

ದೇಶ

ಯತ್ನಾಳ್​, ಇತರ ಭಿನ್ನರ ವಿರುದ್ಧ ತಿರುಗಿ ಬಿದ್ದ ಪಕ್ಷ ನಿಷ್ಠರು; ರಾಷ್ಟ್ರೀಯ ನಾಯಕರಿಗೆ ವರದಿ ನೀಡಲು ಸಿದ್ಧತೆ?

Published

on

ಬೆಂಗಳೂರು: ವಕ್ಫ್​ ಭೂಮಿ ವಿವಾದದ ಹಿನ್ನೆಲೆಯಲ್ಲಿ ಪ್ರತ್ಯೇಕ ಯಾತ್ರೆ ಮಾಡುತ್ತಿರುವ ಪಕ್ಷದ ಭಿನ್ನರ ವಿರುದ್ಧ ಮುಗಿಬಿದ್ದಿರುವ ಪಕ್ಷ ನಿಷ್ಠರ ಪಡೆ, ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡದ ವಿರುದ್ಧ ಕ್ರಮ ಕೈಗೊಳ್ಳುವಂತೆ ದೆಹಲಿ ವರಿಷ್ಠರ ಮೇಲೆ ಒತ್ತಡ ಹೇರಲು ಸಜ್ಜಾಗಿದೆ.

ಇನ್ನೊಂದೆಡೆ, ಉಪಚುನಾವಣೆಯಲ್ಲಿ ತೀವ್ರ ಮುಖಭಂಗ ಅನುಭವಿಸಿದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಘಟಕ, ರಾಜ್ಯ ಪದಾಧಿಕಾರಿಗಳ ಬದಲಾವಣೆ ಹಾಗೂ ಭಿನ್ನಮತೀಯ ನಾಯಕರನ್ನು ನಿಯಂತ್ರಿಸುವ ಕುರಿತು ದೆಹಲಿ ವರಿಷ್ಠರಿಗೆ ದೂರು ಸಲ್ಲಿಸಲು ಸಹ ಮುಂದಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಿಸೆಂಬರ್‌ನಲ್ಲಿ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪಕ್ಷದ ರಾಜ್ಯ ನಾಯಕತ್ವವನ್ನು ತೀವ್ರವಾಗಿ ಟೀಕಿಸುತ್ತಿದ್ದು, ಈ ಕುರಿತು ವಿಜಯೇಂದ್ರ ಕೇಂದ್ರ ನಾಯಕರಿಗೆ ದೂರು ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಇದೆ.

ಉಪಚುನಾವಣೆ ಮುಗಿದ ಬೆನ್ನಲ್ಲೇ ವಿಜಯೇಂದ್ರ ರಾಜೀನಾಮೆಗೆ ಯತ್ನಾಳ್‌ ಮಾಡಿರುವ ಆಗ್ರಹ, ವಕ್ಫ್ ಬಗ್ಗೆ ಯತ್ನಾಳ್‌ ಬಣ ನಡೆಸುತ್ತಿರುವ ಅಭಿಯಾನವೆಲ್ಲವೂ ವಿಜಯೇಂದ್ರ ಬಣವನ್ನು ತೀವ್ರವಾಗಿ ಕೆರಳಿಸಿದೆ. ಜೊತೆಗೆ, ಪಕ್ಷ ವಿರೋಧಿ ಚಟುವಟಿಕೆಯನ್ನು ಹೆಚ್ಚಿಸುತ್ತಿರುವುದರಿಂದ ಅವರನ್ನು ಹಣಿಯುವುದಕ್ಕಾಗಿ ವಿಜಯೇಂದ್ರ ವರಿಷ್ಠರ ಭೇಟಿಗೆ ನಿರ್ಧರಿಸಿದ್ದಾರೆಂದು ಮೂಲಗಳು ಹೇಳಿವೆ.

ಇದರ ನಡುವೆ ವಿಜಯೇಂದ್ರ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಹಾಗೂ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ನೇತೃತ್ವದ ನಿಯೋಗ ದೆಹಲಿಗೆ ತೆರಳಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡಲು ನಿರ್ಧರಿಸಿದೆ. ಇತ್ತೀಚೆಗೆ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಸಭೆ ಸೇರಿದ ಸುಮಾರು 20ಕ್ಕೂ ಹೆಚ್ಚು ಹಿರಿಯ ಮುಖಂಡರು ಈ ತೀರ್ಮಾನಕ್ಕೆ ಬಂದಿದ್ದಾರೆ.

ವಕ್ಫ್ ಒತ್ತುವರಿ ತೆರವು ವಿರೋಧಿ ಹೋರಾಟದ ಹೆಸರಿನಲ್ಲಿ ಪಕ್ಷದ ಕೆಲವು ನಾಯಕರು ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಇದು ಪಕ್ಷ ಸಂಘಟನೆ ಮತ್ತು ಕಾರ್ಯಕರ್ತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತಕ್ಷಣವೇ ಮಧ್ಯಪ್ರವೇಶಿಸಿ ಎಲ್ಲ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದ್ದಾರೆ.

ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಮತ್ತು ಪ್ರತಿ ಪಕ್ಷ ನಾಯಕರನ್ನು ಹೈಕಮಾಂಡ್ ನೇಮಕ ಮಾಡಿದೆ. ಈ ವಿಷಯವಾಗಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ತಲೆಬಾಗಬೇಕು. ಆದರೆ, ಕೆಲವರು ಈ ನಾಯಕತ್ವ ಒಪ್ಪುವುದಿಲ್ಲ ಎಂದು ಹೈಕಮಾಂಡ್​ಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಇಂಥವರನ್ನು ಯಾವುದೇ ಕಾರಣಕ್ಕೂ ಸಹಿಸಬಾರದು ಎಂದು ಹೈಕಮಾಂಡ್​ಗೆ ಮನವರಿಕೆ ಮಾಡಿಕೊಡಲು ಸಭೆಯಲ್ಲಿ ತೀರ್ಮಾನಿಸಿದೆ.

ಕೆಲವೇ ಕೆಲವು ಮಂದಿ ನಡೆಸುತ್ತಿರುವ ಚಟುವಟಿಕೆಗಳಿಂದ ಪಕ್ಷದಲ್ಲಿ ದೊಡ್ಡ ಪ್ರಮಾಣದ ಗೊಂದಲ ಸೃಷ್ಟಿಯಾಗುತ್ತದೆ. ಇದನ್ನು ತಪ್ಪಿಸಿ ಭಿನ್ನಮತೀಯರಿಗೆ ಎಚ್ಚರಿಕೆ ಸಂದೇಶ ರವಾನಿಸುವ ಅಗತ್ಯವಿದೆ ಎಂದು ತಿಳಿಸುವ ದೃಷ್ಟಿಯಿಂದ ನಿಯೋಗದಲ್ಲಿ ದೆಹಲಿಗೆ ತೆರಳಲು ಈ ಸಭೆ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಡಿಸೆಂಬರ್​ನಲ್ಲಿ ಸರ್ಜರಿ: ಮೂರು ಕ್ಷೇತ್ರಗಳ ಉಪಚುನಾವಣೆ ಸೋಲು, ಭಿನ್ನರ ನಡೆಗೆ ಬೇಸತ್ತ ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ ನೀಡಿ, ಉತ್ಸಾಹ ತುಂಬುವುದಕ್ಕಾಗಿ ರಾಜ್ಯ ಬಿಜೆಪಿ ಡಿಸೆಂಬರ್‌ನಲ್ಲಿ ಮೇಜ‌ರ್ ಸರ್ಜರಿಗೆ ಮುಂದಾಗಿದೆ.

ಪಕ್ಷದ ರಾಜ್ಯಾಧ್ಯಕ್ಷರ ಬಗ್ಗೆ ತಗಾದೆ ಮುಂದುವರಿಸಿದರೆ ಸಮರ್ಥರಲ್ಲವೆಂದು ವರಿಷ್ಠರು ಬದಲಾಯಿಸಬಹುದು ಎಂಬ ತಂತ್ರಗಾರಿಕೆಯನ್ನು ಅತೃಪ್ತರ ಬಣ ಹೆಣೆದಿದ್ದರೆ, ಹೊಸ ತಂಡ ಕಟ್ಟಿ ಅತೃಪ್ತರನ್ನು ನಿವಾರಿಸಿಕೊಳ್ಳುವ ಪ್ರತಿತಂತ್ರವನ್ನು ಬಿ.ವೈ.ವಿಜಯೇಂದ್ರ ಹೆಣೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಸೆಂಬರ್​ನಲ್ಲಿ ನಡೆಯಲಿರುವ ‘ಸಂಘಟನಾ ಪರ್ವ’ದ ಭಾಗವಾಗಿ ಬೂತ್, ಮಂಡಲ ಮತ್ತು ಜಿಲ್ಲಾ ಸಮಿತಿಗಳು ಮರು ರಚನೆಯಾಗಲಿವೆ. ಎಲ್ಲ ಸಮುದಾಯಗಳಿಗೆ ನಾಯಕತ್ವ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ದು ಸಂಘಟನೆ ಗಟ್ಟಿಗೊಳಿಸುವ ಚಿಂತನೆ ನಡೆಸಿದ್ದಾರೆ.

ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ವರಿಷ್ಠರಿಗೆ ಶಿಫಾರಸು ಮಾಡುವ ಮೂಲಕ ಅವರ ತಂಡದಲ್ಲಿರುವವರಿಗೆ ಪರೋಕ್ಷ ಎಚ್ಚರಿಕೆ ನೀಡುವ ತಂತ್ರ ರೂಪಿಸಿದ್ದಾರೆ.

ಯತ್ನಾಳ್ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ: “ಬಿಜೆಪಿ ಶಿಸ್ತಿನ ಪಕ್ಷ. ರಾಜ್ಯಾಧ್ಯಕ್ಷರು ರಾಜ್ಯ ಕೋರ್ ಕಮಿಟಿ ಜೊತೆ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು, ಪಕ್ಷದ ನಿಯಮ-ಶಿಸ್ತನ್ನು ಉಲ್ಲಂಘಿಸಿ ಹೇಳಿಕೆ ಕೊಟ್ಟರೆ, ಹೋರಾಟ ಮಾಡಿದರೆ ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ” ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಹೇಳಿದ್ದಾರೆ.

“ಯತ್ನಾಳ್ ಮಾಡುವ ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದಿಲ್ಲ. ರಾಜ್ಯ ನಾಯಕರು, ಜಿಲ್ಲಾ ನಾಯಕರಿಂದಲೂ ಅನುಮತಿ ಪಡೆದಿಲ್ಲ. ಹಾಗಾಗಿ ಅದು ಪಕ್ಷದ ಹೋರಾಟ ಆಗುವುದಿಲ್ಲ. ಅದು ಪಕ್ಷದ ಅಶಿಸ್ತು ಆಗುತ್ತದೆ. ಯತ್ನಾಳ್ ಅವರ ಈ ಕ್ರಮದ ಕುರಿತು ರಾಷ್ಟ್ರನಾಯಕರ ಗಮನಕ್ಕೆ ತರುತ್ತೇವೆ. ಅವರ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ಕೊಡುತ್ತೇವೆ” ಎಂದು ಪಿ.ರಾಜೀವ್ ತಿಳಿಸಿದ್ದಾರೆ.

“ಸ್ವಪ್ರತಿಷ್ಠೆಯಿಂದ ಪ್ರತ್ಯೇಕ ಹೋರಾಟ ಆರಂಭಿಸಿರುವುದು ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅವರ ತಂಡಕ್ಕೆ ಶೋಭೆ ತರುವುದಿಲ್ಲ. ಈಗಲಾದರೂ ಅವರು ಜಾಗೃತರಾಗಿ ಪಕ್ಷ ಬಲಪಡಿಸಲು ಸಹಕಾರ ನೀಡಬೇಕೆಂದು ವಿನಂತಿ ಮಾಡುತ್ತೇನೆ. ನಾವು ಮನವಿ ಮಾಡುವುದನ್ನು ಮಾಡುತ್ತೇವೆ, ಉಳಿದಿದ್ದು ಅವರಿಗೆ, ಕೇಂದ್ರದ ನಾಯಕರಿಗೆ ಬಿಟ್ಟಿದ್ದು. ಇದೆಲ್ಲವೂ ಹೈಕಮಾಂಡ್ ಗಮನದಲ್ಲೂ ಇದೆ, ನೋಡೋಣ” ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಹೇಳಿದ್ದಾರೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು

Liver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ

Published

on

By

ಬೆಂಗಳೂರು: ಯಕೃತ್ತಿನಲ್ಲಿ ಕಂಡುಬರುವ ಗಂಟು, ಗೆಡ್ಡೆ ಹಾಗೂ ಅಸಹಜ ಬೆಳವಣಿಗೆಗಳಿಗೆ ಸಮನ್ವಯದ ತಪಾಸಣೆ, ನಿಖರ ರೋಗನಿರ್ಣಯ ಮತ್ತು ಸಮಗ್ರ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಫೋರ್ಟಿಸ್ ಹೆಲ್ತ್‌ಕೇರ್ ಜಾಲದ ಭಾಗವಾಗಿರುವ ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯಲ್ಲಿ ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಲಾಗಿದೆ.

ರೋಗಿಗಳು ವಿವಿಧ ವೈದ್ಯರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಒಂದೇ ರೀತಿಯ ಪರೀಕ್ಷೆಗಳನ್ನು ಪುನರಾವರ್ತಿಸುವ ಅಗತ್ಯವನ್ನು ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಉದ್ದೇಶವಾಗಿದೆ. ಯಕೃತ್ತಿನ ತಜ್ಞರು, ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ತಜ್ಞರು, ಜಠರ-ಕರುಳಿನ ತಜ್ಞರು, ರೇಡಿಯಾಲಜಿಸ್ಟ್‌ಗಳು, ಕ್ಯಾನ್ಸರ್ ತಜ್ಞರು, ರೋಗಶಾಸ್ತ್ರ ತಜ್ಞರು ಹಾಗೂ ಪೌಷ್ಟಿಕ ಆಹಾರ ತಜ್ಞರು ಒಂದೇ ತಂಡವಾಗಿ ರೋಗಿಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ವೈದ್ಯಕೀಯ ಜಠರರೋಗ ಶಾಸ್ತ್ರ, ಹೆಪಟಾಲಜಿ ಮತ್ತು ಸುಧಾರಿತ ಎಂಡೋಸ್ಕೋಪಿ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಸಲಹೆಗಾರ ಡಾ. ಆದರ್ಶ್ ಸಿ.ಕೆ. ಮಾತನಾಡಿ, ನಿಯಮಿತ ತಪಾಸಣೆ ವೇಳೆ ಯಕೃತ್ತಿನ ಗೆಡ್ಡೆಗಳು ಮತ್ತು ದ್ರವ ತುಂಬಿದ ಚೀಲಗಳು ಆಕಸ್ಮಿಕವಾಗಿ ಪತ್ತೆಯಾಗುತ್ತಿರುವುದು ಹೆಚ್ಚಾಗಿದೆ. ಇವುಗಳಲ್ಲಿ ಅನೇಕವು ಅಪಾಯಕಾರಿಯಲ್ಲದಿದ್ದರೂ, ಕೆಲವು ಯಕೃತ್ತಿನ ಕಾಯಿಲೆ ಅಥವಾ ಆರಂಭಿಕ ಹಂತದ ಕ್ಯಾನ್ಸರ್‌ನ ಸೂಚನೆಯಾಗಿರಬಹುದು. ಹೀಗಾಗಿ ಯಾವ ಗೆಡ್ಡೆಗೆ ಚಿಕಿತ್ಸೆ ಬೇಕು ಮತ್ತು ಯಾವುದನ್ನು ಮೇಲ್ವಿಚಾರಣೆ ಮಾಡಿದರೆ ಸಾಕು ಎಂಬುದನ್ನು ಗುರುತಿಸುವುದು ಪ್ರಮುಖ ಸವಾಲಾಗಿದೆ ಎಂದು ಹೇಳಿದ್ದಾರೆ.

ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಹೇಶ್ ಗೋಪಸೆಟ್ಟಿ, ಚಿಕಿತ್ಸೆಯ ನಿರ್ಧಾರವು ಗೆಡ್ಡೆಯ ಗಾತ್ರ ಮತ್ತು ಸ್ಥಳಕ್ಕೆ ಮಾತ್ರ ಸೀಮಿತವಾಗಿರದೆ ಯಕೃತ್ತಿನ ಕಾರ್ಯಕ್ಷಮತೆ ಹಾಗೂ ರೋಗಿಯ ಒಟ್ಟಾರೆ ಆರೋಗ್ಯವನ್ನೂ ಆಧರಿಸಿರಬೇಕು ಎಂದು ತಿಳಿಸಿದ್ದಾರೆ. ಸಮಗ್ರ ಮೌಲ್ಯಮಾಪನದಿಂದ ಸೂಕ್ತ ಚಿಕಿತ್ಸೆಯನ್ನು ಆಯ್ಕೆ ಮಾಡುವುದರ ಜೊತೆಗೆ, ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಯನ್ನು ತಪ್ಪಿಸಬಹುದು ಎಂದಿದ್ದಾರೆ.

ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಗಲಿ ಮಾತನಾಡಿ, ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಿರುವುದು ರೋಗಿ ಕೇಂದ್ರಿತ ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ಸಮನ್ವಯದ ಆರೋಗ್ಯ ಸೇವೆ ಒದಗಿಸುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಪರಿಣತಿಯನ್ನು ಒಂದೇ ವ್ಯವಸ್ಥೆಯಲ್ಲಿ ಒದಗಿಸುವ ಮೂಲಕ ಚಿಕಿತ್ಸಾ ಫಲಿತಾಂಶ ಮತ್ತು ರೋಗಿಗಳ ಅನುಭವ ಸುಧಾರಿಸುವುದು ಕ್ಲಿನಿಕ್‌ನ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಯಕೃತ್ತಿನ ಚೀಲಗಳು, ರಕ್ತನಾಳದ ಗೆಡ್ಡೆಗಳು, ಫೋಕಲ್ ನೊಡ್ಯುಲರ್ ಹೈಪರ್‌ಪ್ಲಾಸಿಯಾ, ಯಕೃತ್ತಿನ ಕ್ಯಾನ್ಸರ್, ದೇಹದ ಇತರ ಭಾಗಗಳಿಂದ ಯಕೃತ್ತಿಗೆ ಹರಡಿದ ಕ್ಯಾನ್ಸರ್ ಹಾಗೂ ಸಂಕೀರ್ಣ ಯಕೃತ್ತಿನ ಗೆಡ್ಡೆಗಳಿಗೆ ಇಲ್ಲಿ ಸಮಗ್ರ ಮೌಲ್ಯಮಾಪನ ಮತ್ತು ಚಿಕಿತ್ಸಾ ಸಲಹೆ ದೊರೆಯಲಿದೆ. ರೋಗನಿರ್ಣಯದ ನಿಖರತೆ ಹೆಚ್ಚಿಸುವುದು ಮತ್ತು ಚಿಕಿತ್ಸೆಯಲ್ಲಿನ ವಿಳಂಬ ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಗುರಿಯಾಗಿದೆ.

Continue Reading

ದೇಶ

Nepal flood ಮರಿಗಳನ್ನು ಬಿಟ್ಟು ಕದಲಲಿಲ್ಲ! ಪ್ರವಾಹದ ಮಧ್ಯೆ ಆನೆಗಳ ವಾತ್ಸಲ್ಯದ ದೃಶ್ಯ ವೈರಲ್

Published

on

By

ಬಹ್ರೈಚ್: Nepal flood ದಲ್ಲಿ ಉಂಟಾದ ಭೀಕರ ಜಲಪ್ರಳಯದ ರಭಸಕ್ಕೆ ಸಿಲುಕಿದ್ದ 5 ಕಾಡಾನೆಗಳ ಹಿಂಡು ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಕಟರ್ನಿಯಾಘಾಟ್ ಬಳಿಯ ಗಿರ್ಜಾಪುರಿ ಬ್ಯಾರೇಜ್ ಸಮೀಪ ಪ್ರವಾಹದಲ್ಲಿ ಕೊಚ್ಚಿಕೊಂಡು ಬಂದಿದೆ. ಆಗಸ್ಟ್ 25ರಂದು ನಡೆದ ಈ ಘಟನೆಯಲ್ಲಿ ಮೂರು ವಯಸ್ಕ ಆನೆಗಳು ಹಾಗೂ ಎರಡು ಮರಿಗಳು ಪ್ರವಾಹದ ಸುಳಿಗೆ ಸಿಲುಕಿದ್ದವು.

ಕೌಡಿಯಾಲ ನದಿಯಲ್ಲಿ ನೀರಿನ ಹರಿವು ಏಕಾಏಕಿ ಹೆಚ್ಚಾದ ಹಿನ್ನೆಲೆಯಲ್ಲಿ ಆನೆಗಳ ಹಿಂಡು ಸಂಕಷ್ಟಕ್ಕೆ ಸಿಲುಕಿತ್ತು. ನೀರಿನ ರಭಸ ಹೆಚ್ಚಿದ್ದರಿಂದ ಆನೆ ಮರಿಗಳಿಗೆ ತೇಲುವುದು ಕಷ್ಟವಾಗಿತ್ತು. ಈ ವೇಳೆ ವಯಸ್ಕ ಆನೆಗಳು ಮರಿಗಳನ್ನು ಸುತ್ತುವರಿದು ನಿಂತು, ಅವುಗಳನ್ನು ಪ್ರವಾಹದ ರಭಸದಿಂದ ರಕ್ಷಿಸಲು ಪ್ರಯತ್ನಿಸಿರುವುದು ಗಮನ ಸೆಳೆದಿದೆ.

ಮರಿಗಳನ್ನು ಬಿಟ್ಟು ಕದಲದ ದೊಡ್ಡ ಆನೆಗಳು

ಪ್ರವಾಹದ ನೀರು ಅಪಾಯಕಾರಿಯಾಗಿ ಹರಿಯುತ್ತಿದ್ದರೂ ವಯಸ್ಕ ಆನೆಗಳು ಮರಿಗಳನ್ನು ಏಕಾಂಗಿಯಾಗಿ ಬಿಡಲಿಲ್ಲ. ಅವುಗಳ ಸುತ್ತಲೂ ನಿಂತು ಮರಿಗಳಿಗೆ ರಕ್ಷಣೆ ನೀಡುವ ಮೂಲಕ ಸುರಕ್ಷಿತವಾಗಿ ದಡ ಸೇರುವಂತೆ ನೆರವಾದವು.

ಈ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿಯ ಗಮನಕ್ಕೂ ಬಂದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿದ್ದಾರೆ.

ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿದ ಅಧಿಕಾರಿಗಳು

ಆನೆಗಳ ಹಿಂಡು ಅಪಾಯದಲ್ಲಿರುವುದನ್ನು ಗಮನಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನೀರಾವರಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಬಳಿಕ ಗಿರ್ಜಾಪುರಿ ಬ್ಯಾರೇಜ್‌ನ ಗೇಟ್‌ಗಳನ್ನು ಮುಚ್ಚಲಾಗಿದ್ದು, ನೀರಿನ ಹರಿವಿನ ವೇಗವನ್ನು ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ನೀರಿನ ರಭಸ ಕಡಿಮೆಯಾದ ಬಳಿಕ ವಯಸ್ಕ ಆನೆಗಳು ಚೇತರಿಸಿಕೊಂಡಿವೆ. ನಂತರ ಅವು ಎರಡು ಆನೆ ಮರಿಗಳನ್ನು ಸುರಕ್ಷಿತವಾಗಿ ದಂಡೆಯತ್ತ ಕರೆದೊಯ್ದಿವೆ.

ಸುರಕ್ಷಿತವಾಗಿ ಕಾಡಿಗೆ ಮರಳಿದ ಆನೆಗಳು

ಆನೆಗಳ ಹಿಂಡು ದಡ ತಲುಪಿದ ಬಳಿಕ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಬ್ಯಾರೇಜ್ ಪ್ರದೇಶದಿಂದ ದೂರಕ್ಕೆ ಕಳುಹಿಸಿ ಸುರಕ್ಷಿತವಾಗಿ ಕಾಡಿನತ್ತ ಸಾಗುವಂತೆ ಮಾಡಿದ್ದಾರೆ.

ಆಪತ್ತಿನ ಸಮಯದಲ್ಲೂ ಮರಿಗಳನ್ನು ಬಿಟ್ಟು ಹೋಗದೆ ಅವುಗಳನ್ನು ಸುತ್ತುವರಿದು ರಕ್ಷಿಸಿದ ಆನೆಗಳ ವರ್ತನೆ ಸಾರ್ವಜನಿಕರ ಗಮನ ಸೆಳೆದಿದೆ. ಮತ್ತೊಂದೆಡೆ, ಪರಿಸ್ಥಿತಿಯನ್ನು ತ್ವರಿತವಾಗಿ ಅರಿತು ನೀರಾವರಿ ಇಲಾಖೆಯ ಸಹಕಾರದೊಂದಿಗೆ ಬ್ಯಾರೇಜ್ ಗೇಟ್‌ಗಳನ್ನು ಬಂದ್ ಮಾಡಿ ಆನೆಗಳ ಜೀವ ಉಳಿಸಿದ ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಗೂ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

ರಾಜ್ಯ

Mysuru ರಲ್ಲೂ ಭೂಸ್ವಾಧೀನ ವಿವಾದ: 165 ಎಕರೆ ಕೃಷಿ ಭೂಮಿಗೆ KIADB ನೋಟಿಸ್, ರೈತರ ಆಕ್ರೋಶ

Published

on

By

ಮೈಸೂರು: ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿವಾದದ ಬೆನ್ನಲ್ಲೇ ಇದೀಗ Mysuru ಜಿಲ್ಲೆಯಲ್ಲೂ ಫಲವತ್ತಾದ ಕೃಷಿ ಭೂಮಿ ಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪ ಕೇಳಿಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕೈಗಾರಿಕಾ ಉದ್ದೇಶಕ್ಕಾಗಿ 165 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (KIADB) ಪ್ರಾಥಮಿಕ ಅಧಿಸೂಚನೆ ಹೊರಡಿಸಿದೆ ಎನ್ನಲಾಗಿದ್ದು, ಸ್ಥಳೀಯ ರೈತರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರು ವಿಮಾನ ನಿಲ್ದಾಣದ ಸಮೀಪದಲ್ಲಿರುವ ವರುಣಾ ಕ್ಷೇತ್ರದ ಮರಸೆ ಹಾಗೂ ಮದರಗಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಮಿಯನ್ನು ಗುರುತಿಸಲಾಗಿದೆ. ಈ ಪ್ರದೇಶದ ಜಮೀನುಗಳಲ್ಲಿ ರೈತರು ಅಡಕೆ, ಬಾಳೆ, ತೆಂಗು, ಭತ್ತ ಸೇರಿದಂತೆ ವಿವಿಧ ವಾಣಿಜ್ಯ ಹಾಗೂ ಆಹಾರ ಬೆಳೆಗಳನ್ನು ಬೆಳೆಯುತ್ತಿದ್ದಾರೆ.

ಫಲವತ್ತಾದ ಜಮೀನು ಕೈಗಾರಿಕೆಗೆ?

ತಮ್ಮ ಜೀವನಾಧಾರವಾಗಿರುವ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕಾ ಪ್ರದೇಶ ನಿರ್ಮಾಣಕ್ಕಾಗಿ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿರುವುದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದೆ. ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸುತ್ತಿರುವ ಜಮೀನುಗಳನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ ಎಂದು ಸ್ಥಳೀಯ ರೈತರು ಪಟ್ಟುಹಿಡಿದಿದ್ದಾರೆ.

ವಿಮಾನ ನಿಲ್ದಾಣದ ಸಮೀಪವಿರುವ ಮರಸೆ-ಮದರಗಳ್ಳಿ ಭಾಗದಲ್ಲಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಉದ್ದೇಶದಿಂದ KIADB ಪ್ರಾಥಮಿಕ ಅಧಿಸೂಚನೆ ಹೊರಡಿಸಿರುವುದಾಗಿ ತಿಳಿದುಬಂದಿದೆ. ಭೂಸ್ವಾಧೀನ ಪ್ರಕ್ರಿಯೆ ಮುಂದುವರಿದರೆ ತಮ್ಮ ಕೃಷಿ ಮತ್ತು ಜೀವನೋಪಾಯಕ್ಕೆ ತೀವ್ರ ಹೊಡೆತ ಬೀಳಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಬಿಡದಿ ಮಾದರಿಯಲ್ಲಿ ಮೈಸೂರಲ್ಲೂ ಹೋರಾಟ?

ಬೆಂಗಳೂರು ಸಮೀಪದ ಬಿಡದಿಯಲ್ಲಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟದ ಮಾದರಿಯಲ್ಲೇ ಮೈಸೂರಿನಲ್ಲೂ ಪ್ರತಿಭಟನೆ ತೀವ್ರಗೊಳಿಸಲು ರೈತ ಸಂಘಟನೆಗಳು ಹಾಗೂ ಭೂಮಾಲೀಕರು ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

165 ಎಕರೆ ಕೃಷಿ ಭೂಮಿ ಸ್ವಾಧೀನದ ವಿಚಾರ ಇದೀಗ ವರುಣಾ ಕ್ಷೇತ್ರದಲ್ಲಿ ರಾಜಕೀಯ ಹಾಗೂ ರೈತ ಹೋರಾಟಕ್ಕೆ ಕಾರಣವಾಗುವ ಸಾಧ್ಯತೆ ಇದೆ. ಸರ್ಕಾರದ ಭೂಸ್ವಾಧೀನ ಪ್ರಸ್ತಾವನೆಗೆ ರೈತರ ಪ್ರತಿಕ್ರಿಯೆ ಮತ್ತು ಮುಂದಿನ ಕ್ರಮಗಳತ್ತ ಇದೀಗ ಗಮನ ಹರಿದಿದೆ

Continue Reading

Trending