Connect with us

ಬೆಂಗಳೂರು

ರಾಮನಗರ ಜಿಲ್ಲೆ ಹೆಸರು ಬದಲಾವಣೆ.. ಡಿ.ಕೆ ಶಿವಕುಮಾರ್‌ ಕನಸಿಗೆ ಹೆಚ್‌ಡಿಕೆ ಖಡಕ್ ಸವಾಲು; ಏನಂದ್ರು?

Published

on

ನವದೆಹಲಿ: ರಾಮನಗರ ಜಿಲ್ಲೆಯ ಹೆಸರು ಬದಲಾವಣೆ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಡಿಸಿಎಂ ಡಿ.ಕೆ ಶಿವಕುಮಾರ್ ನಿಯೋಗ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಗ್ಗೆ ಮನವಿ ಸಲ್ಲಿಸಿದ್ದು, ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ದೆಹಲಿಯಲ್ಲಿ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಅವರು ರಾಮನಗರಕ್ಕೆ ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡುವ ಡಿ.ಕೆ ಶಿವಕುಮಾರ್ ಪ್ರಸ್ತಾಪಕ್ಕೆ ತೀಕ್ಷ್ಣವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೊಸ ಸರ್ಕಾರ ರಚನೆ ಮಾಡಿದ ಮೇಲೆ ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿದ್ದಾರೆ. ರಾಮನಗರ ಜಿಲ್ಲೆ ಮಾಡಿದ್ದರ ಉದ್ದೇಶ ಆ ವ್ಯಕ್ತಿಗೆ ಏನು ಗೊತ್ತಿದೆ. ರಾಮನ ಹೆಸರಿರುವ ರಾಮನಗರಕ್ಕೆ ಅದರದೇ ಆದ ಇತಿಹಾಸ ಇದೆ. ಅಲ್ಲಿ ಯಾವ್ಯಾವ ಬೆಲೆ ಏರಿಕೆ ಮಾಡಿದ್ದಾರೆ ನೋಡಿದ್ದೇವೆ. ಭೂಮಿ ಲಪಾಟಿಸಿ ಯಾವುದರ ಬೆಲೆ ಏರಿಕೆ ಮಾಡಿದ್ದಾರೆ ಗೊತ್ತಿದೆ. ಇದೆಲ್ಲ ಬಿಟ್ಟು ಅಭಿವೃದ್ಧಿ ಮಾಡುವುದು ಕಲಿಯಲಿ ಎಂದು ಹೆಚ್‌ಡಿಕೆ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರು ವಂಶಸ್ಥರು ನಾವು, ಅಲ್ಲಿಗೆ ಸೇರಬೇಕು. ಬೆಂಗಳೂರಿಗೆ ಸೇರ್ಪಡೆಯಾದರೆ ಮೂಟೆಗಟ್ಟಲೇ ತುಂಬಬಹುದು. ನಾನು ಬೆಂಗಳೂರಿಗೆ ನಾಲ್ಕು ತಾಲೂಕುಗಳನ್ನು ಸೇರಿಸುತ್ತೇನೆ. ಭೂಮಿ ಮಾರಾಟ ಮಾಡಬೇಡಿ ಎಂದು ಹೇಳಿದ್ದರು. ರಾಮನಗರ ನಾವು ಮಾಡಿದ್ದು ತೆಗೆಯಬೇಕು ಎನ್ನುವುದು ಅವರ ಉದ್ದೇಶ. ದೇವೇಗೌಡರು, ನಾನು ಏನು ಅಭಿವೃದ್ಧಿ ಮಾಡಿದ್ದೇವೆ ಅನ್ನೋದು ಜನರಿಗೆ ಗೊತ್ತಿದೆ. ಅದಕ್ಕೆ ಇವರ ಸರ್ಟಿಫಿಕೇಟ್ ಬೇಕಿಲ್ಲ.

ಈ ಹಿಂದೆ ಕನಕಪುರ ಸಾತನೂರು ಹೇಗಿತ್ತು. ಆಗ ಇವರು ಯಾರದೋ ಸೇವೆ ಮಾಡಿಕೊಂಡಿದ್ದರು. ಈಗ ರಾಮನಗರ ಹೆಸರು ಬದಲಾಯಿಸಿದರೂ ನಾನು ಮತ್ತೆ ಬಂದೇ ಬರ್ತಿನಿ ಆ ವಿಶ್ವಾಸ ಇದ್ದೇ ಇದೆ. ನಾಲ್ಕು ತಾಲೂಕು ಸೇರಿ ಬೆಂಗಳೂರು ದಕ್ಷಿಣ ಮಾಡಲು ಹೊರಟಿದ್ದಾರೆ. ಈಗಾಗಲೇ ಬೆಂಗಳೂರು ದಕ್ಷಿಣ ಕ್ಷೇತ್ರ ಅಂತಾ ಇದೆಯಲ್ಲ. ಬೇರೆ ಹೆಸರು ಇಟ್ಟಿದ್ದರೆ ಆಗಿರೋದು ಆದರೆ ಅದು ಮಾಡ್ತಿಲ್ಲ.

ಅವರು ಮಾತ್ರ ಬೆಂಗಳೂರಿನವರು ಅವರ ಸಾಧನೆ ಚಿರಾಯುವಾಗಿ ಉಳಿಯಬೇಕು. ಹೆಸರು ಬದಲಾವಣೆ ಮಾಡಿದರೆ ಏನು ಸಿಗುತ್ತೆ ಅವರು ಹೇಳಬೇಕು. ಹೆಸರು ಬದಲಾವಣೆ ಮಾಡಿದರೆ ಎಲ್ಲ ಸರ್ಕಾರಿ ದಾಖಲೆಗಳಿಗೆ ತೊಂದರೆಯಾಗಲಿದೆ. ಹೊಸ ಪ್ರಕ್ರಿಯೆ ಶುರುವಾಗಲಿದೆ. ರಾಮನಗರ ಅವಳಿ ನಗರ ಮಾಡಿದ್ದರೆ ಒಂದು ಹೆಸರು ಬಂದಿರೋದು. ನೋಡೋಣ ಮುಂದೇನಾಗುತ್ತೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಬೆಂಗಳೂರು

Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!

Published

on

By

ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.

ಖಾಲಿ ಸೈಟ್‌ ಸ್ವಚ್ಛವಾಗಿಡುವುದು ಕಡ್ಡಾಯ

2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.

ಕಸ ತೆರವು ಮಾಡದಿದ್ದರೆ ಭಾರಿ ದಂಡ!

ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.

ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.

  • 20×30 ಸೈಟ್‌: ₹19,200ರಿಂದ ದಂಡ
  • 30×40 ಸೈಟ್‌: ₹38,400ರವರೆಗೆ ದಂಡ
  • ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ

ಹೀಗಾಗಿ ಖಾಲಿ ಸೈಟ್‌ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.

ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ

ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Continue Reading

ಬೆಂಗಳೂರು

Bengaluru ಪಾರ್ಕ್‌ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ

Published

on

By

ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್‌ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಲಾಲ್‌ಬಾಗ್‌ನಲ್ಲಿ ಬೃಹತ್ ಬ್ಯಾನರ್‌ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.

ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್‌ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್‌ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.

ಶೇ.28ರಷ್ಟು ವಾರ್ಡ್‌ಗಳಲ್ಲಿ ಪಾರ್ಕ್‌ಗಳೇ ಇಲ್ಲ!

ಐಐಹೆಚ್‌ಎಸ್‌ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್‌ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ

ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.

  1. ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
  2. ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
  3. ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
  4. ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
  5. ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
  6. ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.

ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Continue Reading

ಬೆಂಗಳೂರು

Nalanda English Medium School ವಾರ್ಷಿಕೋತ್ಸವದಲ್ಲಿ ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನೃತ್ಯ ನಮನ

Published

on

By

ಬೆಂಗಳೂರು: ಜೆ.ಪಿ.ನಗರದಲ್ಲಿರುವ ಪ್ರತಿಷ್ಠಿತ ನNalanda English Medium School ವಾರ್ಷಿಕೋತ್ಸವ ಹಲವು ವಿಶೇಷತೆಗಳೊಂದಿಗೆ ಗಮನ ಸೆಳೆಯಿತು. ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ನಿಧನರಾದ ಖ್ಯಾತ ಗಾಯಕಿ S.Janaki ಅವರ ವಿವಿಧ ಭಾಷೆಗಳ ಜನಪ್ರಿಯ ಹಾಡುಗಳನ್ನು ಗಾಯನ ಹಾಗೂ ನೃತ್ಯದ ಮೂಲಕ ಪ್ರಸ್ತುತಪಡಿಸಿ ಗಾನಕೋಗಿಲೆಗೆ ಗೌರವ ನಮನ ಸಲ್ಲಿಸಿದರು.

ಕಾರ್ಯಕ್ರಮಕ್ಕೆ ಮಿಸ್ ಇಂಡಿಯಾ ಕಿರೀಟ ವಿಜೇತೆ, ಕಿರುತೆರೆ ಹಾಗೂ ಚಲನಚಿತ್ರ ಕಲಾವಿದೆ ಸ್ಮೀತಾಪ್ರಭು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಪರಿಪೂರ್ಣ ವ್ಯಕ್ತಿತ್ವ ವಿಕಸನಕ್ಕೆ ಶೈಕ್ಷಣಿಕ ಸಾಧನೆಯ ಜೊತೆಗೆ ಪಠ್ಯೇತರ ಚಟುವಟಿಕೆಗಳೂ ಅತ್ಯಂತ ಅಗತ್ಯ ಎಂದು ಹೇಳಿದರು.

ಶಿಕ್ಷಣದ ಜತೆಗೆ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆ ಸಾಕಷ್ಟು ಮುತುವರ್ಜಿ ವಹಿಸುತ್ತಿದೆ ಎಂದು ಸ್ಮೀತಾಪ್ರಭು ಮೆಚ್ಚುಗೆ ವ್ಯಕ್ತಪಡಿಸಿದರು.

ಎಸ್. ಜಾನಕಿ ಗೀತೆಗಳಿಗೆ ವಿದ್ಯಾರ್ಥಿಗಳ ನಮನ

ವಾರ್ಷಿಕೋತ್ಸವದ ಪ್ರಮುಖ ಆಕರ್ಷಣೆಯಾಗಿ ವಿದ್ಯಾರ್ಥಿಗಳು ಎಸ್. ಜಾನಕಿ ಅವರ ವಿವಿಧ ಭಾಷೆಗಳ ಹಾಡುಗಳನ್ನು ಗಾಯನ ಮತ್ತು ನೃತ್ಯದ ಮೂಲಕ ಪ್ರಸ್ತುತಪಡಿಸಿದರು. ಸಂಗೀತ ಹಾಗೂ ನೃತ್ಯದ ಸುಂದರ ಸಂಯೋಜನೆ ಪ್ರೇಕ್ಷಕರ ಗಮನ ಸೆಳೆಯಿತು.

ವಿದ್ಯಾರ್ಥಿಗಳ ಈ ವಿಶೇಷ ಪ್ರದರ್ಶನದ ಮೂಲಕ ಅಗಲಿದ ಹಿರಿಯ ಗಾಯಕಿಗೆ ಗೌರವ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಪ್ರತಿಭೆಗೆ ಪಾಲಕರು ಹಾಗೂ ಶಿಕ್ಷಕರಿಂದ ಮೆಚ್ಚುಗೆ ವ್ಯಕ್ತವಾಯಿತು.

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಬಹುಮಾನ

ಕಳೆದ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ಸ್ಮೀತಾಪ್ರಭು ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕುಪ್ಪುರಾಜ್, ಕಾರ್ಯದರ್ಶಿ ಶಿವಶಂಕರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು.

Continue Reading

Trending