ಅಪರಾಧ
ರೇಣುಕಾಸ್ವಾಮಿ ಮರ್ಡರ್ ಕೇಸ್-ದರ್ಶನ್ ಗ್ಯಾಂಗ್ ಗೆ ಮತ್ತೆ ಡವಡವ!
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಪವಿತ್ರ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮೇಲೆ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿತ್ತು, ಈ ಅರ್ಜಿಯನ್ನು ಜ.24 ರಂದು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲಿದೆ,
ಕಳೆದ ಡಿಸೆಂಬರ್ ನಲ್ಲಿ ನಟ ದರ್ಶನ್ ಪವಿತ್ರಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು ಹೈ ಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು ರದ್ದು ಕೋರಿ ಮೇಲ್ಮನವಿ ಸಲ್ಲಿಸಿತ್ತು,
ಒಂದು ವೇಳೆ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ಅರ್ಜಿ ರದ್ದಾದರೆ ಪವಿತ್ರಾ ಗೌಡ,ನಟ ದರ್ಶನ್, ಜಗದೀಶ್ ಜಗ್ಗ ಅಲಿಯಾಸ್ ಜಗ್ಗ, ಅನುಕುಮಾರ್ ಅಲಿಯಾಸ್ ಅನು, ಆರ್.ನಾಗರಾಜು, ಎಂ ಲಕ್ಷ್ಮಣ್, ಪ್ರದೋಶ್ ಎಸ್ ರಾವ್, ಮತ್ತೆ ಜೈಲಿಗೆ ಸೇರಬೇಕಾಗುತ್ತದೆ, ಆ ನಂತರ ಸುಪ್ರೀಂ ಕೋರ್ಟ್ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿ ನಟ ಮತ್ತೆ ಜಾಮೀನು ಅರ್ಜಿ ಹಾಕಬಾಹುದು..