ವಕ್ಫ್ ಮಸೂದೆ ತಿದ್ದುಪಡಿಗೆ ಅಂಗೀಕಾರ-ಅನ್ವರ್ ಮಾಣಿಪ್ಪಾಡಿಗೆ ವಿದೇಶದಿಂದ ಜೀವ ಬೆದರಿಕೆ! |

ಅಪರಾಧ

ವಕ್ಫ್ ಮಸೂದೆ ತಿದ್ದುಪಡಿಗೆ ಅಂಗೀಕಾರ-ಅನ್ವರ್ ಮಾಣಿಪ್ಪಾಡಿಗೆ ವಿದೇಶದಿಂದ ಜೀವ ಬೆದರಿಕೆ!

Published

on

ಮಂಗಳೂರು: ವಕ್ಫ್ ಕಾಯಿದೆ ತಿದ್ದುಪಡಿ ಮಾಡಿದ್ದಕ್ಕೆ ಒಂದೆಡೆ ಕಾಂಗ್ರೆಸ್ ನಾಯಕರು ಭಾರೀ ಆಕ್ರೋಶ ಹೊರಹಾಕುತ್ತಿದ್ದರೆ, ಇತ್ತ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ,
ಲೋಕಸಭೆ ಹಾಗೂ ರಾಜ್ಯ ಸಭೆ ಎರಡರಲ್ಲೂ ಕೂಡ ವಕ್ಫ್ ಮಸೂದೆ ಅಂಗೀಕಾರವಾದ ಬೆನ್ನಲ್ಲೆ ಅನ್ವರ್ ಮಾಣಿಪ್ಪಾಡಿ ಅವರಿಗೆ ಇಂಟರ್ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದು, ಮಂಗಳೂರು ನಗರ ಪೊಲೀಸ್‍ರು ದೂರು ದಾಖಲಿಸಿಕೊಂಡಿದ್ದಾರೆ,
ಸದ್ಯ ಮಂಗಳೂರಿನಲ್ಲಿ ನೆಲೆಸಿರುವ ಅನ್ವರ್ ಮಾಣಿಪ್ಪಾಡಿ ಅವರಿಗೆ ವಕ್ಫ್ ಮಸೂದೆ ಅಂಗೀಕಾರವಾದ ಬೆನ್ನಲ್ಲೇ ವಿದೇಶಿ ಸಂಖ್ಯೆಗಳಿಂದ ಇಂಟರ್ನೆಟ್ ಮೂಲಕ ಕರೆ ಮಾಡಿ ಹಿಂದಿ, ಮರಾಠಿ, ಇಂಗ್ಲೀಷ್ ಹಾಗೂ ಕನ್ನಡ ಸೇರಿ ಹಲವಾರು ಭಾಷೆಗಳಿಂದ ಬೆದರಿಕೆ ಕರೆ ಬರುತ್ತಿದೆ ಎಂದು ಆರೋಪಿಸಿದ್ದಾರೆ,
ಕರೆ ಮಾಡಿದವರೆಲ್ಲ ನಿನ್ನನ್ನು ಬಿಡುವುದಿಲ್ಲ, ನಿಮ್ಮ ಸಮುದಾಯದವರೇ ನಿನ್ನನ್ನು ಒಂದು ಗತಿ ಕಾಣಿಸುತ್ತಾರೆ ಎಂದು ಬೆದರಿಕೆ ಹಾಕಿದ್ದಾರೆ, ಸದ್ಯ ಈ ಬಗ್ಗೆ ಮಂಗಳೂರು ಕಮಿಷನರ್ ಅನುಪಮ್ ಅಗರವಾಲ್ ಗೆ ದೂರು ನೀಡಿದ್ದು, ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ,

Trending

Exit mobile version