Connect with us

ಅಪರಾಧ

ವೈದ್ಯನ ಯಡವಟ್ಟು, ಹೆರಿಗೆ ವೇಳೆ ಮಗುವಿನ ಮರ್ಮಾಂಗವೇ ಕಟ್​.. ದಾವಣಗೆರೆಯಲ್ಲೊಂದು ಬೆಚ್ಚಿ ಬೀಳಿಸಿದ ಘಟನೆ

Published

on

ದಾವಣಗೆರೆ: ವೈದ್ಯರ ಯಡವಟ್ಟಿನಿಂದ ಮಗುವಿನ ಮರ್ಮಾಂಗವೇ ಕತ್ತರಿಸಿದ ಹೋದ ಆರೋಪವೊಂದು ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರಿಂದ ಹೆರಿಗೆ ಮಾಡಿಸುವ ವೇಳೆ ಈ ದುರ್ಘಟನೆ ನಡೆದಿದೆ.

ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರೋ ಮಹಿಳೆಯೊಬ್ಬರು ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಹೆರಿಗೆ ವೇಳೆ ಮಹಿಳೆಗೆ ಸಿಸರಿನ್ ಮಾಡಿಸಲು ಮುಂದಾದರು. ಆದರೆ ಈ ವೇಳೆ ಅವಘಡ ನಡೆದಿದೆ ಎನ್ನಲಾಗಿದೆ.

ಜೂನ್ 27 ರಂದು ಈ ಘಟನೆ ನಡೆದಿದೆ. ವೈದ್ಯ ನಿಜಾಮುದ್ದೀನ್ ಎಂಬವರು ಮಹಿಳೆಗೆ ಸಿಸರಿನ್​ ಮಾಡಿಸುವ ವೇಳೆ ಮಗುವಿನ ಮರ್ಮಾಂಗ ಕತ್ತರಿಸಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಬಳಿಕ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದು, ಕೊನೆಗೆ ಮಗುವನ್ನ ಬಾಪುಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆದರೆ ಬೇಸರದ ಸಂಗತಿ ಎಂದರೆ ಸತತ ಚಿಕಿತ್ಸೆ ನಂತರ ಮಗು ಸಾವನ್ನಪ್ಪಿದೆ.

ಸದ್ಯ ಮಗುವಿನ ಸಾವಿಗೆ ವೈದ್ಯರು ಕಾರಣ ಅಂತ ಪೋಷಕರ ಆರೋಪಿಸಿದ್ದಾರೆ. ಜೊತೆಗೆ ಆಕ್ರೋಶ ಹೊರಹಾಕಿದ್ದಾರೆ. ಜಿಲ್ಲಾಸ್ಪತ್ರೆ ಮುಂದೆ ಪೋಷಕರ ಪ್ರತಿಭಟನೆ ಮಾಡಿದ್ದಾರೆ. ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನ ಅಮಾನತು ಮಾಡುವಂತೆ ಪೋಷಕರು ಒತ್ತಾಯಿಸಿದ್ದಾರೆ.

J S Vasudev is a journalist and writer with 15 years of experience in writing and journalism. He founded Hosasuddi.in in 2023 with a vision to deliver credible and timely Kannada news. With a strong passion for journalism, he focuses on presenting news in a clear, simple and reader-friendly manner. His work covers current affairs, Karnataka news, national developments, business, technology and social issues. He believes in independent journalism and responsible reporting that puts readers first. His guiding motto is “Write on Your Own,” reflecting his commitment to original and independent content. Through Hosasuddi.in, he continues to contribute to Kannada digital journalism with dedication and integrity.

ಅಪರಾಧ

ಪತ್ನಿಯ ಜೊತೆ ಜಗಳಕ್ಕೆ ಬೇಸತ್ತು Police ಠಾಣೆ ಎದುರೇ ಟ್ರಾನ್ಸ್‌ಫಾರ್ಮರ್ ಏರಿದ ವ್ಯಕ್ತಿ! ಮುಂದೇನಾಯ್ತು?

Published

on

ಬಳ್ಳಾರಿ: ಪತ್ನಿಯೊಂದಿಗೆ ನಡೆದ ಜಗಳದಿಂದ ಬೇಸರಗೊಂಡ ವ್ಯಕ್ತಿಯೊಬ್ಬ Police ಠಾಣೆ ಎದುರಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿ ಕುಳಿತ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ವ್ಯಕ್ತಿ ಟ್ರಾನ್ಸ್‌ಫಾರ್ಮರ್ ಮೇಲೆ ಕುಳಿತಿರುವುದನ್ನು ಕಂಡು ಸ್ಥಳೀಯರು ಹಾಗೂ ಪೊಲೀಸರು ಕೆಲಕಾಲ ಆತಂಕಕ್ಕೊಳಗಾಗಿದ್ದರು. ಬಳಿಕ ಪೊಲೀಸರು ಮತ್ತು ಸ್ಥಳೀಯರು ಮನವೊಲಿಸಿ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.

ಬಳ್ಳಾರಿಯ ಬ್ರೂಸ್‌ಪೇಟೆ ಪೊಲೀಸ್ ಠಾಣೆ ಎದುರು ಈ ಘಟನೆ ನಡೆದಿದೆ. ಮುಂಡರಗಿ ಪ್ರದೇಶದ ನಿವಾಸಿ ಇಸ್ಮಾಯಿಲ್ ಎಂಬಾತ ಪತ್ನಿಯೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದ ಎನ್ನಲಾಗಿದೆ.

ಪತ್ನಿಯೊಂದಿಗೆ ಜಗಳ, ಏಕಾಏಕಿ ಟ್ರಾನ್ಸ್‌ಫಾರ್ಮರ್ ಏರಿದ

ಪೊಲೀಸ್ ಠಾಣೆಯ ಬಳಿ ಪತಿ-ಪತ್ನಿ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ವೇಳೆ ಜಗಳದಿಂದ ತೀವ್ರವಾಗಿ ಬೇಸರಗೊಂಡ ಇಸ್ಮಾಯಿಲ್ ಏಕಾಏಕಿ ಠಾಣೆ ಎದುರಿನ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಏರಿದ್ದಾನೆ.

ವ್ಯಕ್ತಿ ಟ್ರಾನ್ಸ್‌ಫಾರ್ಮರ್ ಏರುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ವಿದ್ಯುತ್ ಸಂಪರ್ಕದ ಅಪಾಯವೂ ಇದ್ದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಪರಿಸ್ಥಿತಿಯ ಗಂಭೀರತೆಯನ್ನು ಅರಿತು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಮನವೊಲಿಕೆ

ಟ್ರಾನ್ಸ್‌ಫಾರ್ಮರ್ ಮೇಲೆ ವ್ಯಕ್ತಿ ಕುಳಿತಿರುವುದನ್ನು ಗಮನಿಸಿದ ಪೊಲೀಸರು ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಕ್ರಮ ಕೈಗೊಂಡಿದ್ದಾರೆ. ಬಳಿಕ ಪೊಲೀಸರು ಹಾಗೂ ಸ್ಥಳೀಯರು ಇಸ್ಮಾಯಿಲ್ ಅವರೊಂದಿಗೆ ಮಾತುಕತೆ ನಡೆಸಿ ಕೆಳಗಿಳಿಯುವಂತೆ ಮನವಿ ಮಾಡಿದ್ದಾರೆ.

ಸತತ ಮನವೊಲಿಕೆಯ ನಂತರ ಇಸ್ಮಾಯಿಲ್ ಟ್ರಾನ್ಸ್‌ಫಾರ್ಮರ್‌ನಿಂದ ಕೆಳಗಿಳಿದಿದ್ದು, ಪೊಲೀಸರು ಆತನನ್ನು ಸುರಕ್ಷಿತವಾಗಿ ಕರೆದುಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್

ಘಟನೆ ನಡೆದ ಸಂದರ್ಭದಲ್ಲಿ ಸ್ಥಳೀಯರೊಬ್ಬರು ತಮ್ಮ ಮೊಬೈಲ್‌ನಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ ಎನ್ನಲಾಗಿದೆ. ಇದೀಗ ಆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಳ್ಳಾರಿಯಲ್ಲಿ ನಡೆದ ಘಟನೆಯ ಕುರಿತು ಚರ್ಚೆ ನಡೆಯುತ್ತಿದೆ.

ಪತ್ನಿಯೊಂದಿಗೆ ಉಂಟಾದ ಕೌಟುಂಬಿಕ ವಿಚಾರದ ಹಿನ್ನೆಲೆಯಲ್ಲಿ ವ್ಯಕ್ತಿ ಈ ರೀತಿ ವರ್ತಿಸಿದ್ದಾನೆ ಎನ್ನಲಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಿ ಯಾವುದೇ ಅನಾಹುತ ಸಂಭವಿಸದಂತೆ ತಡೆದಿದ್ದಾರೆ.

Continue Reading

ಬೆಂಗಳೂರು

APMC ಯಲ್ಲಿ ಬಾಲಕಾರ್ಮಿಕ ಸಿಕ್ಕಿದ್ದೇ ತಡ; ಬೆಂಗಳೂರಿನಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್, 17 ಮಕ್ಕಳು ರಕ್ಷಣೆ

Published

on

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು APMCಗೆ ದಿಢೀರ್ ಭೇಟಿ ನೀಡಿದ ಬೆನ್ನಲ್ಲೇ ಬೆಂಗಳೂರು ಪೊಲೀಸರು ನಗರದಾದ್ಯಂತ ಬಾಲಕಾರ್ಮಿಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇದುವರೆಗೆ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.

ಇತ್ತೀಚೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಎಪಿಎಂಸಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಾರ್ಮಿಕನೊಬ್ಬ ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು. ಈ ವೇಳೆ ಸ್ಥಳೀಯ ಪೊಲೀಸರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ, ಮಹಿಳಾ ಕೂಲಿ ಕಾರ್ಮಿಕರು ತಮ್ಮ ಮಕ್ಕಳನ್ನೇ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿದ್ದವು.

ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸೂಚನೆ ಬೆನ್ನಲ್ಲೇ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.

ಹೋಟೆಲ್, ಅಂಗಡಿ, ಗ್ಯಾರೇಜ್‌ಗಳಲ್ಲಿ ಪರಿಶೀಲನೆ

ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಹೋಟೆಲ್‌ಗಳು, ಅಂಗಡಿಗಳು, ಗ್ಯಾರೇಜ್‌ಗಳು, ಪೆಟ್ರೋಲ್ ಬಂಕ್‌ಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಪೊಲೀಸರು ವ್ಯಾಪಕ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲವು ಕಡೆ ಬಾಲಕಾರ್ಮಿಕರು ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.

ಕಾರ್ಯಾಚರಣೆಯ ಮೂಲಕ ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಮುಂದುವರಿದಿರುವುದು ಬೆಳಕಿಗೆ ಬಂದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಸ್ಥಳಗಳ ಬಗ್ಗೆ ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.

ಉತ್ತರ ವಿಭಾಗದಲ್ಲೇ 100ಕ್ಕೂ ಹೆಚ್ಚು ಕಡೆ ತಪಾಸಣೆ

ಈ ಕುರಿತು ಉತ್ತರ ವಿಭಾಗದ ಡಿಸಿಪಿ ನ್ಯಾಮಗೌಡ ಮಾಹಿತಿ ನೀಡಿದ್ದು, ಉತ್ತರ ವಿಭಾಗವೊಂದರಲ್ಲೇ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಇದುವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ನಗರದ ಇತರ ಭಾಗಗಳಲ್ಲೂ ಬಾಲಕಾರ್ಮಿಕರ ಪತ್ತೆಗಾಗಿ ವಿಶೇಷ ಪರಿಶೀಲನೆ ಮುಂದುವರಿದಿದೆ.

ಸಿಎಂ ಡಿ.ಕೆ. ಶಿವಕುಮಾರ್ ಅವರ ಎಪಿಎಂಸಿ ಭೇಟಿಯ ಸಂದರ್ಭದಲ್ಲಿ ಬಾಲಕಾರ್ಮಿಕ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆರಂಭವಾದ ಈ ಕಾರ್ಯಾಚರಣೆ ಇದೀಗ ಬೆಂಗಳೂರಿನಾದ್ಯಂತ ವಿಸ್ತರಿಸಲಾಗಿದೆ.

Continue Reading

ಅಪರಾಧ

Majestic ರೈಲು ಬೋಗಿಗೆ ಬೆಂಕಿ ಇಟ್ಟಿದ್ದು ಯಾರು? ಸಿಸಿಟಿವಿ ಪರಿಶೀಲನೆ ಬಳಿಕ ಆರೋಪಿ ಅರೆಸ್ಟ್!

Published

on

ಬೆಂಗಳೂರು: Majestic ರೈಲು ನಿಲ್ದಾಣದಲ್ಲಿ ಖಾಲಿಯಾಗಿ ನಿಂತಿದ್ದ ಹಳೆಯ ರೈಲು ಬೋಗಿಗೆ ಬೆಂಕಿ ತಗುಲಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲ್ವೆ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಗಾಂಜಾ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ಸಿಗರೇಟ್ ಸೇದಿ ಬೋಗಿಯೊಳಗೆ ಬಿಸಾಡಿದ್ದರಿಂದ ಬೆಂಕಿ ಹೊತ್ತಿಕೊಂಡಿರುವುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಖಾಲಿ ಬೋಗಿಯಲ್ಲಿ ಕಾಣಿಸಿಕೊಂಡ ಬೆಂಕಿ

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಖಾಲಿಯಾಗಿ ನಿಂತಿದ್ದ ಬೋಗಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಘಟನೆಯ ಬಳಿಕ ರೈಲ್ವೆ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಮುಂದಾಗಿದ್ದರು.

ಈ ವೇಳೆ ಆರ್‌ಪಿಎಫ್ ಹಾಗೂ ನಗರ ರೈಲ್ವೆ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ, ರೈಲು ನಿಲ್ದಾಣದಲ್ಲಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ.

ಮಲಗಲು ಬಂದಿದ್ದ ವ್ಯಕ್ತಿಯಿಂದ ಅವಘಡ

ಪೊಲೀಸರ ತನಿಖೆಯಲ್ಲಿ ಮಹಾರಾಷ್ಟ್ರದ ನಾಶಿಕ್ ಜಿಲ್ಲೆಯ ರವಿ ಗೋರಖ್ ತಿರ್ವ ಎಂಬ ವ್ಯಕ್ತಿ ಖಾಲಿ ಬೋಗಿಗೆ ಮಲಗಲು ಹೋಗಿದ್ದ ಎನ್ನುವುದು ತಿಳಿದುಬಂದಿದೆ.

ಗಾಂಜಾ ನಶೆಯಲ್ಲಿದ್ದ ಆತ ಬೋಗಿಯೊಳಗೆ ಸಿಗರೇಟ್ ಸೇದಿ, ನಂತರ ಅದನ್ನು ಅಲ್ಲಿಯೇ ಬಿಸಾಡಿದ್ದಾನೆ. ಸಿಗರೇಟ್‌ನಿಂದ ಸಣ್ಣದಾಗಿ ಹೊತ್ತಿಕೊಂಡ ಕಿಡಿ ನಿಧಾನವಾಗಿ ದೊಡ್ಡ ಪ್ರಮಾಣದ ಬೆಂಕಿಗೆ ಕಾರಣವಾಗಿದೆ ಎನ್ನಲಾಗಿದೆ.

ಬೆಂಕಿ ಕಾಣಿಸಿಕೊಂಡ ಕೂಡಲೇ ಆರೋಪಿ ರೈಲಿನಿಂದ ಕೆಳಗಿಳಿದು ಸ್ಥಳದಿಂದ ಪರಾರಿಯಾಗಿದ್ದಾನೆ.

ಸಿಸಿಟಿವಿ ಮೂಲಕ ಆರೋಪಿಯ ಪತ್ತೆ

ಘಟನೆ ಬಳಿಕ ಆರ್‌ಪಿಎಫ್ ಹಾಗೂ ನಗರ ರೈಲ್ವೆ ಪೊಲೀಸರು ಜಂಟಿಯಾಗಿ ತನಿಖೆ ಕೈಗೊಂಡಿದ್ದಾರೆ. ರೈಲು ನಿಲ್ದಾಣದಲ್ಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿಯನ್ನು ಗುರುತಿಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಪೇಂಟರ್ ವೃತ್ತಿಯಲ್ಲಿ ಇದ್ದು, ಕಲ್ಯಾಣ ಮಂಟಪಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮಲಗುತ್ತಿದ್ದ ಎನ್ನಲಾಗಿದೆ.

ತಡರಾತ್ರಿ ಬೋಗಿಗೆ ಬಂದಿದ್ದ ಆರೋಪಿ

ಭಾನುವಾರ ತಡರಾತ್ರಿ ಮಲಗುವ ಉದ್ದೇಶದಿಂದ ಖಾಲಿ ರೈಲು ಬೋಗಿಗೆ ಆರೋಪಿ ಬಂದಿದ್ದ ಎನ್ನಲಾಗಿದೆ. ಈ ವೇಳೆ ಸಿಗರೇಟ್ ಸೇದಿ ಅದನ್ನು ಬೋಗಿಯೊಳಗೆ ಬಿಸಾಡಿದ್ದರಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

Continue Reading

Trending