ಚುನಾವಣೆ
ಸರ್ಕಾರವನ್ನು ಡಿಸ್ಮಿಸ್ ಮಾಡ್ಬೇಕು ಎಚ್ ಡಿ ಕುಮಾರಸ್ವಾಮಿ
ಚನ್ನಪಟ್ಟಣ: ಕುಕ್ಕರ್ ಹಂಚ್ಕೊಂಡು, ಇಸ್ತ್ರಿಪೆಟ್ಟಿಗೆ ಹಚ್ಕೊಂಡು, ಪಾಂಪ್ಲೆಟ್ ಹಂಚ್ಕೊಂಡು ನಡೆಸಿರೋ ಚುನಾವಣೆ ಇದು. ಇದನ್ನೇ ಮರುಳಾಗ್ಬೇಡಿ ಅಂತ ಜನರಿಗೆ ಹೇಳೋದು ಎಂದು ರಾಜ್ಯ ಸರ್ಕಾರದ ವಿರುದ್ಧ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ತೀವ್ರ ವಾಗ್ಧಾಳಿ ನಡೆಸಿದರು.
ವರುಣಾ ಕ್ಷೇತ್ರದಲ್ಲಿ ಮಡಿವಾಳ ಸಮಾಜದ ಮುಖಂಡರು ವ್ಯವಸ್ಥೆ ಮಾಡಿ, ತಂದೆಯವರಿಂದ ಕುಕ್ಕರ್, ಇಸ್ತ್ರಿಪೆಟ್ಟಿಗೆ ಸಾವಿರಾರು ಜನರಿಗೆ ಹಂಚಿದ್ದರಿಂದ ದೊಡ್ಡ ಪ್ರಮಾಣದ ಓಟ್ ಸಿಕ್ಕಿದವು, ಕಾರ್ಯಕ್ರಮವೂ ಯಶಸ್ವಿಯಾಗಿತ್ತು ಎಂದು ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಕೆ ವೈರಲ್ ಆದ ಬೆನ್ನಲ್ಲೇ ಇದಕ್ಕೆ ಮಾಜಿ ಸಿಎಂ ಎಚ್ಡಿಕೆ ಚನ್ನಪಟ್ಟಣದಲ್ಲಿ ಪ್ರತಿಕ್ರಿಯೆ ನೀಡಿದರು. ಚನ್ನಪಟ್ಟಣದಲ್ಲಿ ಮರುಳಾಗಿಲ್ಲ ಬಿಡಿ ನನ್ನ ಜನ. ಆದ್ರೆ ರಾಮನಗರದಲ್ಲಿಯೂ ಇದೇ ನಡೀತಲ್ಲ. ಕೇಂದ್ರ ಚುನಾವಣಾ ಆಯೋಗ ಸರಿಯಾಗಿ ತೀರ್ಮಾನ ಮಾಡಿದರೆ, ಈ ಸರ್ಕಾರವನ್ನು ಡಿಸ್ಮಿಸ್ ಮಾಡಬೇಕು” ಎಂದು ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಕಾಂಗ್ರೆಸ್ ಅಭ್ಯರ್ಥಿಗಳನ್ನು ಡಿಬಾರ್ ಮಾಡಬೇಕು. ಏನ್ ಮಾಡ್ತಿದೆ ಕೇಂದ್ರ ಸರ್ಕಾರ ಅನ್ನೋದು ಗೊತ್ತಿಲ್ಲ ಎಂದರು. ಈ ಸರಕಾರ ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿದೆ. ಜನರಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರೇ ಗ್ಯಾರಂಟಿ ಕೂಪನ್ ಗಳ ಮೇಲೆ ಸಹಿ ಮಾಡಿ ಮನೆಮನೆಗೂ ಹಂಚಿಕೆ ಮಾಡಿದ್ದಾರೆ. ಈ ಕೂಪನ್ ಗಳ ಬಗ್ಗೆ ಆಯೋಗ ತನಿಖೆ ನಡೆಸಿ, ರಾಜ್ಯದ ಆ ಪಕ್ಷದ 135 ಶಾಸಕರ ಸದಸ್ಯತ್ವ ರದ್ದುಗೊಳಿಸುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಚುನಾವಣಾ ಆಯೋಗವನ್ನು ಒತ್ತಾಯ ಮಾಡಿದರು. ಬಿಜೆಪಿ ಜತೆ ಮೈತ್ರಿ ಕುರಿತ ಚರ್ಚೆಗೆ ಗುರುವಾರ ದೆಹಲಿಗೆ ಹೋಗುತ್ತಿದ್ದೇನೆ. ಆ ಪಕ್ಷದ ಹೈಕಮಾಂಡ್ ನ ಕೆಲ ಉನ್ನತ ನಾಯಕರನ್ನು ಭೇಟಿ ಮಾಡುತ್ತೇನೆ. ಭೇಟಿ ಬಳಿಕ ಏನು ಚರ್ಚೆ ಆಗುತ್ತದೋ ನೋಡೊಣ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಕಳೆದ ವಿಧಾನಸಭೆ ಚುನಾವಣೆ ನಡೆದಿದ್ದೇ ಕುಕ್ಕರ್, ಮಿಕ್ಸಿ, ತವಾಗಳ ಮೇಲೆಯೇ. ಈ ಚುನಾವಣೆ ನಡೆಸಿದ್ದೇ ಕುಕ್ಕರ್, ಇಸ್ತ್ರಿಪೆಟ್ಟಿಗೆ, ತವಾ ಹಂಚಿಕೊಂಡು. ಅವುಗಳಿಂದಲೇ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಗೆದ್ದಿದೆ. ಇದರ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.ಯಾವುದೇ ಕಾರಣಕ್ಕೂ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.
ನಾನು ವಿಧಾನಸಭೆಯಲ್ಲಿ ಚನ್ನಪಟ್ಟಣದಿಂದ ಗೆದ್ದಿದ್ದೇನೆ. ಚನ್ನಪಟ್ಟಣದ ಜನರು ನನಗೆ ಆಶೀರ್ವಾದ ಮಾಡಿದ್ದಾರೆ. ಹೀಗಾಗಿ ನಾನು ಲೋಕಸಭೆಗೆ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ಅಂತಹ ಆಲೋಚನೆಯೂ ಇಲ್ಲ ಎಂದು ಅವರು ತಿಳಿಸಿದರು.
ಬೆಂಗಳೂರು
Voter List ಯಲ್ಲಿ ಒಂದೇ ಹೆಸರು ಎರಡು ಕಡೆ ಇದೆಯಾ? ಕ್ರಿಮಿನಲ್ ಕೇಸ್ ಬಗ್ಗೆ BBMP ಆಯುಕ್ತರ ಎಚ್ಚರಿಕೆ
ಬೆಂಗಳೂರು: Voter List ಯಲ್ಲಿ ಒಬ್ಬರ ಹೆಸರು ಒಂದಕ್ಕಿಂತ ಹೆಚ್ಚು ಕಡೆ ಕಂಡುಬಂದರೆ ಅಂತಹವರ ವಿರುದ್ಧ ಕಠಿಣ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆ ಆಯುಕ್ತ ಕೆ.ಎನ್. ರಮೇಶ್ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.
ನಮೂನೆ-6 ಮತ್ತು 8 ಅರ್ಜಿಗಳ ಮರುಪರಿಶೀಲನೆ
ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುತ್ತಿರುವ ನಮೂನೆ-6 ಮತ್ತು ನಮೂನೆ-8 ಅರ್ಜಿಗಳನ್ನು ಕಟ್ಟುನಿಟ್ಟಾಗಿ ಮರುಪರಿಶೀಲಿಸಲಾಗುವುದು ಎಂದು ಆಯುಕ್ತರು ತಿಳಿಸಿದ್ದಾರೆ. ಅರ್ಹತೆ ಹೊಂದಿರುವ ಪ್ರಕರಣಗಳನ್ನು ಮಾತ್ರ ಪರಿಗಣಿಸಲಾಗುತ್ತದೆ.
2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದ ಮತದಾರರು ಹಾಗೂ ತಾಂತ್ರಿಕ ವ್ಯತ್ಯಾಸಗಳು ಕಂಡುಬಂದಿರುವ ಪ್ರಕರಣಗಳಿಗೆ ಚುನಾವಣಾ ಆಯೋಗದ ನಿಯಮಾವಳಿಗಳಂತೆ ಈಗಾಗಲೇ ನೋಟಿಸ್ ಜಾರಿ ಮಾಡಲಾಗುತ್ತಿದೆ. ಸಂಬಂಧಪಟ್ಟ ಮತದಾರರು ನಿಗದಿತ ಪ್ರಕ್ರಿಯೆಯಂತೆ ವಿಚಾರಣೆಗೆ ಹಾಜರಾಗಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
237 AEROಗಳ ನೇಮಕ
ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವ ಉದ್ದೇಶದಿಂದ ಒಟ್ಟು 237 ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು (AERO) ನೇಮಕ ಮಾಡಲಾಗಿದೆ. ಅವರಿಗೆ ಅಗತ್ಯ ತರಬೇತಿಯನ್ನೂ ನೀಡಲಾಗಿದೆ ಎಂದು ಕೆ.ಎನ್. ರಮೇಶ್ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಾರ್ಡ್ ಕಚೇರಿಗಳಲ್ಲಿ ಪ್ರತಿದಿನ ಸುಮಾರು 50ರಿಂದ 60 ಪ್ರಕರಣಗಳ ವಿಚಾರಣೆ ನಡೆಸಲು ವ್ಯವಸ್ಥೆ ಮಾಡಲಾಗಿದೆ. ವಿಚಾರಣೆಗೆ ಹಾಜರಾಗಲು ಸಂಬಂಧಪಟ್ಟವರಿಗೆ ಕನಿಷ್ಠ ಏಳು ದಿನಗಳ ಕಾಲಾವಕಾಶ ನೀಡಲಾಗುತ್ತದೆ.
ಮೊದಲ ನೋಟಿಸ್ನಲ್ಲಿ ನೀಡಿರುವ ದಿನಾಂಕದಂದು ಅನಿವಾರ್ಯ ಕಾರಣಗಳಿಂದ ಹಾಜರಾಗಲು ಸಾಧ್ಯವಾಗದವರಿಗೆ ಮತ್ತೊಂದು ಅವಕಾಶ ಕಲ್ಪಿಸಲಾಗುವುದು. ಅಂತಹವರಿಗೆ ಎರಡನೇ ನೋಟಿಸ್ ನೀಡುವ ವ್ಯವಸ್ಥೆಯೂ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿಯರು, ವಿಶೇಷಚೇತನರಿಗೆ ಮನೆ ಬಾಗಿಲಲ್ಲೇ ಪರಿಶೀಲನೆ
ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರಿಗೆ ಯಾವುದೇ ತೊಂದರೆಯಾಗದಂತೆ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ.
ಆಸ್ಪತ್ರೆಗೆ ದಾಖಲಾಗಿರುವವರು, 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ವಿಶೇಷಚೇತನರು ಕಚೇರಿಗಳಿಗೆ ಅಲೆದಾಡುವ ಅಗತ್ಯವಿಲ್ಲ. ಮಾನವೀಯ ನೆಲೆಗಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೇ ಅವರಿರುವ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ.
ಬೂತ್ ಮಟ್ಟದ ಅಧಿಕಾರಿ (BLO) ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿ (AERO) ಖುದ್ದಾಗಿ ಮನೆಗೆ ಭೇಟಿ ನೀಡಿ ಅಗತ್ಯ ದಾಖಲೆಗಳು ಮತ್ತು ಮಾಹಿತಿಯನ್ನು ಪರಿಶೀಲಿಸಲಿದ್ದಾರೆ ಎಂದು ಆಯುಕ್ತ ಕೆ.ಎನ್. ರಮೇಶ್ ಸ್ಪಷ್ಟಪಡಿಸಿದ್ದಾರೆ.
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಮೂಲಕ ಅರ್ಹ ಮತದಾರರ ಹೆಸರುಗಳನ್ನು ಖಚಿತಪಡಿಸುವುದರ ಜೊತೆಗೆ, ಒಂದೇ ವ್ಯಕ್ತಿಯ ಹೆಸರು ಹಲವು ಕಡೆ ದಾಖಲಾಗಿರುವಂತಹ ದೋಷಗಳನ್ನು ಪತ್ತೆಹಚ್ಚಿ ನಿಯಮಾನುಸಾರ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ದೇಶ
ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ
ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.
ಈ ಘೋಷಣೆ ಪಂಜಾಬ್ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.
ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.
ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ
ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.
2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬೆಂಗಳೂರು
SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.
ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.
ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಅಧಿಕಾರಿಗೆ ಗಾಯ
ಹಲ್ಲೆಯಲ್ಲಿ ಸ್ಲಂ ಡೆವಲಪ್ಮೆಂಟ್ ಬೋರ್ಡ್ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಪ್ರಕರಣ ದಾಖಲು, ಇಬ್ಬರ ಬಂಧನ
ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
-
ಬೆಂಗಳೂರು4 ಗಂಟೆಗಳು agoAPMC ಯಲ್ಲಿ ಬಾಲಕಾರ್ಮಿಕ ಸಿಕ್ಕಿದ್ದೇ ತಡ; ಬೆಂಗಳೂರಿನಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್, 17 ಮಕ್ಕಳು ರಕ್ಷಣೆ
-
ರಾಜ್ಯ7 ಗಂಟೆಗಳು agoBIG NEWS Gram Panchayati ಚುನಾವಣೆ: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ; ಚುನಾವಣೆ ಯಾವಾಗ?
-
ಬೆಂಗಳೂರು4 ಗಂಟೆಗಳು agoBengaluru ಟ್ರಾಫಿಕ್ಗೆ ಬಿಗ್ ರಿಲೀಫ್! ₹16,980 ಕೋಟಿ ಯೋಜನೆಗೆ ಗ್ರೀನ್ ಸಿಗ್ನಲ್; ಸುರಂಗ ರಸ್ತೆ ನಿರ್ಮಾಣಕ್ಕೆ ಚಾಲನೆ
-
ಬೆಂಗಳೂರು4 ಗಂಟೆಗಳು agoತಾಯಂದಿರ ಕನಸುಗಳಿಗೆ ಮತ್ತೆ ರೆಕ್ಕೆ; ಜೀ ಕನ್ನಡದಲ್ಲಿ ‘Dance Karnataka Dance – ಸೂಪರ್ ಮಾಮ್’!
-
ದೇಶ7 ಗಂಟೆಗಳು agoNational News BRICS Summit 2026: ದೆಹಲಿಯ ಭಾರತ್ ಮಂಟಪಂ ಹೇಗಿದೆ? ಜಾಗತಿಕ ನಾಯಕರ ಸ್ವಾಗತಕ್ಕೆ ಅದ್ಧೂರಿ ಸಿದ್ಧತೆ!
-
ದೇಶ4 ಗಂಟೆಗಳು agoIRCTC ದಾಖಲೆ: ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ರೈಲು ಟಿಕೆಟ್ ಬುಕಿಂಗ್; ಹೊಸ ದಾಖಲೆ ಸೃಷ್ಟಿ!
-
ದೇಶ7 ಗಂಟೆಗಳು agoBRICS Membership: ಪಾಕಿಸ್ತಾನಕ್ಕೆ ಶಾಕ್; ಭಾರತದಿಂದಲೇ ಬಿತ್ತು ಸದಸ್ಯತ್ವಕ್ಕೆ ಬ್ರೇಕ್?
-
ದೇಶ3 ಗಂಟೆಗಳು agoBRICS ಶೃಂಗಸಭೆಯಲ್ಲಿ PM MODI ಮಾಸ್ಟರ್ ಪ್ಲ್ಯಾನ್; ವಿಶ್ವ ಆಡಳಿತ ಬದಲಿಸಲು 10 ಅಂಶಗಳ ರೋಡ್ಮ್ಯಾಪ್!
