ಚುನಾವಣೆ
ಸಿಎಂ ಸಿದ್ದರಾಮಯ್ಯ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ
ಬೆಂಗಳೂರು: 2022 ರಲ್ಲಿ ರಾಜ್ಯದಲ್ಲಿ ನಡೆದಿದ್ದ ಪ್ರತಿಭಟನಾ ಮೆರವಣಿಗೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಪಿ ಕೆ ಮಿಶ್ರಾ ಅವರ ಪೀಠವು ಕರ್ನಾಟಕ ಸರ್ಕಾರ ಮತ್ತು ಪ್ರಕರಣದ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯ ಸಚಿವರಾದ ಎಂ ಬಿ ಪಾಟೀಲ್ ಮತ್ತು ರಾಮಲಿಂಗಾ ರೆಡ್ಡಿ ಅವರಿಗೆ 10,000 ರೂಪಾಯಿ ದಂಡ ವಿಧಿಸಿದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮಾರ್ಚ್ 6 ರಂದು ವಿಶೇಷ ನ್ಯಾಯಾಲಯ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬೆಂಗಳೂರಿನ ನಿವಾಸಕ್ಕೆ ಮುತ್ತಿಗೆ ಹಾಕಿದ ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ತಮ್ಮ ಗ್ರಾಮದ ಸಾರ್ವಜನಿಕ ಕಾಮಗಾರಿಗೆ ಶೇ. 40ರಷ್ಟು ಕಮಿಷನ್‌ಗೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಪೊಲೀಸರ ಪ್ರಕಾರ ಈ ಪ್ರಕರಣ ರಸ್ತೆಗಳನ್ನು ಬಂದ್ ಮಾಡಿ, ಪ್ರಯಾಣಿಕರಿಗೆ ತೊಂದರೆ ಉಂಟು ಮಾಡಿದ್ದಕ್ಕೆ ಸಂಬಂಧಿಸಿದ್ದಾಗಿದೆ.
ಟಾಟಾ ಅಡ್ವಾನ್ಸಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಕಂಪನಿಯು ಮೂರು ಯೋಜನೆಗಳಿಗೆ 1,030 ಕೋಟಿ ರೂ. ಬಂಡವಾಳ ಹೂಡಲಿದೆ. ಇವುಗಳ ಪೈಕಿ 420 ಕೋಟಿ ರೂ.ಗಳು ನಾಗರಿಕ ವಿಮಾನಗಳನ್ನು ಸರಕು ಸಾಗಣೆ ವಿಮಾನಗಳನ್ನಾಗಿ (ಫ್ರೈಟರ್) ಪರಿವರ್ತಿಸುವ ಘಟಕ ಸ್ಥಾಪನೆಗೆ ವಿನಿಯೋಗಿಸಲಿದೆ. ಜೊತೆಗೆ 310 ಕೋಟಿ ರೂ. ಹೂಡಿಕೆಯೊಂದಿಗೆ ಗನ್ ತಯಾರಿಕೆ ಘಟಕ ಮತ್ತು 300 ಕೋಟಿ ರೂ. ವೆಚ್ಚದಲ್ಲಿ ವಿಮಾನಯಾನ ಮತ್ತು ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿಯನ್ನು ಕೈಗೆತ್ತಿಕೊಳ್ಳಲಿದೆ. ಇದರಿಂದ 450 ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ತಿಳಿಸಿದರು. ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಮತ್ತು ಕೋಲಾರದಲ್ಲಿ ಟಿಎಎಸ್ಎಲ್ ಸ್ಥಾಪಿಸಲಿರುವ ಗನ್ ತಯಾರಿಕೆ ಘಟಕದ ಮೂಲಕ ಕಂಪನಿಗೆ ಅಗತ್ಯವಿರುವ 13 ಸಾವಿರ ಬಿಡಿಭಾಗಗಳ ಪೈಕಿ ಶೇಕಡ 50ರಷ್ಟನ್ನು ಪೂರೈಸಿಕೊಳ್ಳುವ ಆಲೋಚನೆ ಹೊಂದಿದೆ. ಇದರಿಂದಾಗಿ 300ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ 2-3 ಸಾವಿರ ಜನರಿಗೆ ಉದ್ಯೋಗಗಳು ಸಿಗಲಿವೆ. 1939ರಷ್ಟು ಹಿಂದೆಯೇ ಬೆಂಗಳೂರಿನಲ್ಲಿ ಎಚ್ಎಎಲ್ ಸ್ಥಾಪನೆಯಾಗುವುದರೊಂದಿಗೆ ರಾಜ್ಯವು ವೈಮಾನಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ ಎಂದು ಅರು ಹೇಳಿದರು. ರಕ್ಷಣಾ ಇಲಾಖೆಗೆ ಬೇಕಾಗುವ ವಿಮಾನಗಳು ಮತ್ತು ಹೆಲಿಕಾಪ್ಟರುಗಳ ಪೈಕಿ ಶೇಕಡ 67ರಷ್ಟು ಕರ್ನಾಟಕದಲ್ಲೇ ತಯಾರಾಗುತ್ತಿದೆ. ಜತೆಗೆ ದೇಶದ ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದ ರಫ್ತು ವಹಿವಾಟಿಗೆ ರಾಜ್ಯವು ಶೇಕಡ 65ರಷ್ಟು ಕೊಡುಗೆ ನೀಡುತ್ತಿದೆ. ದೇಶದಲ್ಲಿ ಈ ವಲಯದಲ್ಲಿರುವ ಕಂಪನಿಗಳ ಪೈಕಿ ಶೇ.70ರಷ್ಟು ಕಂಪನಿಗಳು ಕರ್ನಾಟಕದಲ್ಲೇ ನೆಲೆ ಹೊಂದಿವೆ.
ಚುನಾವಣೆ
ನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
ಭೋಪಾಲ್: ಮಧ್ಯಪ್ರದೇಶದ ದತಿಯಾ ವಿಧಾನಸಭಾ ಉಪಚುನಾವಣೆಗೆ ಮಾಜಿ ಗೃಹಸಚಿವ ನರೋತ್ತಮ್ ಮಿಶ್ರಾ ಅವರಿಗೆ ಬಿಜೆಪಿ ಟಿಕೆಟ್ ನೀಡದೆ, ಅವರ ಬದಲಿಗೆ ಅಶುತೋಷ್ ತಿವಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿರುವುದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಈ ನಿರ್ಧಾರವನ್ನು ವಿರೋಧಿಸಿ ದತಿಯಾ ಬಿಜೆಪಿ ಘಟಕದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದ್ದು, ಜಿಲ್ಲಾಧ್ಯಕ್ಷ ರಘುವೀರ್ ಶರಣ್ ಸೇರಿದಂತೆ ಹಲವು ಕೌನ್ಸಿಲರ್‌ಗಳು ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ಟಿಕೆಟ್ ನಿರಾಕರಣೆಯ ಸುದ್ದಿ ಹೊರಬಿದ್ದ ತಕ್ಷಣ ಸಾವಿರಾರು ಬೆಂಬಲಿಗರು NH-44 ಝಾನ್ಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪರಿಣಾಮ ಸುಮಾರು 15 ಕಿಲೋಮೀಟರ್‌ಗಳಷ್ಟು ಸಂಚಾರ ದಟ್ಟಣೆ ಉಂಟಾಗಿ ಸಾರ್ವಜನಿಕರು ಪರದಾಡುವಂತಾಯಿತು. ಪ್ರತಿಭಟನೆ ವೇಳೆ ಕೆಲವರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಯನ್ನು ನಿಯೋಜಿಸಲಾಯಿತು.
ದತಿಯಾ ಎಸ್‌ಪಿ ಮಯೂರ್ ಖಾಂಡೇಲ್ವಾಲ್ ಅವರ ಪ್ರಕಾರ, 3,000ಕ್ಕೂ ಹೆಚ್ಚು ಪ್ರತಿಭಟನಾಕಾರರು ಮಾರುಕಟ್ಟೆ ಬಂದ್ ಮಾಡಲು ಯತ್ನಿಸಿದ್ದು, ಹಲವು ಬಾರಿ ಮನವಿ ಮಾಡಿದರೂ ರಸ್ತೆ ತಡೆ ಹಿಂಪಡೆಯಲಿಲ್ಲ. ಬಳಿಕ ಪೊಲೀಸರು ಅಶ್ರುವಾಯು ಬಳಸಿದರೂ ಕಲ್ಲು ತೂರಾಟ ಮತ್ತಷ್ಟು ತೀವ್ರಗೊಂಡಿತು. ಘಟನೆಯಲ್ಲಿ ಆರುಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಹೆಚ್ಚುವರಿ ಎಸ್‌ಪಿ ಹಾಗೂ ಎಸ್‌ಪಿಗೂ ಗಾಯಗಳಾಗಿವೆ. ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.
ಯಾರು ನರೋತ್ತಮ್ ಮಿಶ್ರಾ?
ನರೋತ್ತಮ್ ಮಿಶ್ರಾ ಮಧ್ಯಪ್ರದೇಶದ ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಗೃಹಸಚಿವರಾಗಿದ್ದಾರೆ. 2008ರಿಂದ ದತಿಯಾ ಕ್ಷೇತ್ರವನ್ನು ಪ್ರತಿನಿಧಿಸಿರುವ ಅವರು ಶಿವರಾಜ್ ಸಿಂಗ್ ಚೌಹಾಣ್ ಸರ್ಕಾರದಲ್ಲಿ ಗೃಹ, ಆರೋಗ್ಯ, ವೈದ್ಯಕೀಯ ಶಿಕ್ಷಣ, ಜಲಸಂಪನ್ಮೂಲ, ನಗರಾಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳನ್ನು ನಿರ್ವಹಿಸಿದ್ದರು.
ಉಪಚುನಾವಣೆ ಏಕೆ ನಡೆಯುತ್ತಿದೆ?
ಕಾಂಗ್ರೆಸ್ ಶಾಸಕ ರಾಜೇಂದ್ರ ಭಾರತಿ ವಿರುದ್ಧ ವಂಚನೆ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬಳಿಕ ಅವರ ಶಾಸಕ ಸ್ಥಾನ ರದ್ದುಗೊಂಡಿದೆ. ಇದರ ಪರಿಣಾಮವಾಗಿ ದತಿಯಾ ಕ್ಷೇತ್ರಕ್ಕೆ ಜುಲೈ 30ರಂದು ಉಪಚುನಾವಣೆ ನಡೆಯಲಿದ್ದು, ಆಗಸ್ಟ್ 3ರಂದು ಮತ ಎಣಿಕೆ ನಡೆಯಲಿದೆ. ಟಿಕೆಟ್ ಘೋಷಣೆಯ ಬೆನ್ನಲ್ಲೇ ಬಿಜೆಪಿ ಒಳಜಗಳ ತೀವ್ರಗೊಂಡಿರುವುದು ಚುನಾವಣೆಗೆ ಹೊಸ ತಿರುವು ನೀಡಿದೆ.
ಚುನಾವಣೆ
ಐದು ನಗರ ಪಾಲಿಕೆ ಚುನಾವಣೆ ಕಾವು: ಕಾಂಗ್ರೆಸ್ ಸೇರಿದಂತೆ ಪಕ್ಷಗಳಲ್ಲಿ ಚಟುವಟಿಕೆ ಜೋರು
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಆಗಸ್ಟ್ 31ರೊಳಗೆ ಕಡ್ಡಾಯವಾಗಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ಸಿದ್ಧತೆಗಳನ್ನು ಚುರುಕುಗೊಳಿಸಿದೆ. ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದ್ದು, ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಯುವ ನಿರೀಕ್ಷೆ ಮೂಡಿದೆ.
ಸುಪ್ರೀಂ ಕೋರ್ಟ್ ಮೊದಲು ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸೂಚಿಸಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ, ಸಿಬ್ಬಂದಿ ಕೊರತೆ ಹಾಗೂ ಆಡಳಿತಾತ್ಮಕ ಕಾರಣಗಳನ್ನು ಪರಿಗಣಿಸಿ ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿದೆ. ಆದರೆ ಇದೇ ಅಂತಿಮ ಅವಕಾಶವಾಗಿದ್ದು, ಮತ್ತೊಮ್ಮೆ ಯಾವುದೇ ಕಾರಣಕ್ಕೂ ಕಾಲಾವಕಾಶ ನೀಡುವುದಿಲ್ಲ ಎಂದು ನ್ಯಾಯಪೀಠ ಸ್ಪಷ್ಟ ಎಚ್ಚರಿಕೆ ನೀಡಿದೆ.
ರಾಜ್ಯ ಸರ್ಕಾರವು ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ಕೋರಿ ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಚುನಾವಣಾ ಪ್ರಕ್ರಿಯೆ ವೇಗ ಪಡೆಯಲು ಕಾರಣವಾಗಿದೆ. ಈ ಬೆಳವಣಿಗೆಯ ನಂತರ ರಾಜ್ಯ ಚುನಾವಣಾ ಆಯೋಗ ಸದ್ದಿಲ್ಲದೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಗುರುತಿಸುವಿಕೆ, ಚುನಾವಣಾ ಸಿಬ್ಬಂದಿ ನಿಯೋಜನೆ ಹಾಗೂ ಇತರೆ ಆಡಳಿತಾತ್ಮಕ ಕಾರ್ಯಗಳು ಈಗಾಗಲೇ ನಡೆಯುತ್ತಿವೆ. ಎಲ್ಲ ಸಿದ್ಧತೆಗಳು ಪೂರ್ಣಗೊಂಡ ಬಳಿಕ ಜುಲೈ 10ರೊಳಗೆ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ವೇಳಾಪಟ್ಟಿ ಘೋಷಣೆಯಾದ ತಕ್ಷಣ ಜಿಬಿಎ ವ್ಯಾಪ್ತಿಯಲ್ಲಿ ಮಾದರಿ ನೀತಿಸಂಹಿತೆ ಜಾರಿಗೆ ಬರಲಿದೆ.
ಇತ್ತ ರಾಜಕೀಯ ಪಕ್ಷಗಳೂ ಚುನಾವಣಾ ಕಣಕ್ಕೆ ಇಳಿಯಲು ಸಜ್ಜಾಗಿವೆ. ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಐದು ನಗರ ಪಾಲಿಕೆಗಳ ವ್ಯಾಪ್ತಿಯ ಮುಖಂಡರು ಮತ್ತು ಕಾರ್ಯಕರ್ತರಿಗೆ ಸಂಘಟನಾ ಚಟುವಟಿಕೆಗಳನ್ನು ತೀವ್ರಗೊಳಿಸುವಂತೆ ಸೂಚಿಸಿದೆ. ಮನೆಮನೆಗೆ ಭೇಟಿ, ಸರ್ಕಾರದ ಸಾಧನೆಗಳ ಪ್ರಚಾರ, ಗ್ಯಾರಂಟಿ ಯೋಜನೆಗಳ ಮಾಹಿತಿ ಹಾಗೂ ವಾರ್ಡ್‌ವಾರು ಮತದಾರರ ಸಂಪರ್ಕ ಅಭಿಯಾನಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ.
ಜಿಬಿಎ ಚುನಾವಣೆಗಳು ಬೆಂಗಳೂರು ನಗರ ಆಡಳಿತದ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಚುನಾವಣೆಗಳಾಗಿದ್ದು, ರಾಜಕೀಯ ಪಕ್ಷಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಚುನಾವಣೆ
GBA ELECTION : ಜುಲೈ ಮೊದಲ ವಾರದಲ್ಲೇ ವೇಳಾಪಟ್ಟಿ? ಬೆಂಗಳೂರು ರಾಜಕೀಯ ಕಣ ರಂಗೇರಲು ಸಜ್ಜು
ಬೆಂಗಳೂರು: ಸುಪ್ರೀಂ ಕೋರ್ಟ್ ನೀಡಿರುವ ಕಟ್ಟುನಿಟ್ಟಿನ ಆದೇಶದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆ ಆಗಸ್ಟ್ 31ರೊಳಗೆ ನಡೆಸುವುದು ಬಹುತೇಕ ಖಚಿತವಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗವು ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಿದೆ.
ಮೂಲಗಳ ಪ್ರಕಾರ, ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ಅಧಿಕೃತ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಜುಲೈ 10ರೊಳಗೆ ದಿನಾಂಕ ಘೋಷಣೆಯಾಗಬಹುದು ಎಂದು ಹೇಳಲಾಗುತ್ತಿದ್ದು, ವೇಳಾಪಟ್ಟಿ ಪ್ರಕಟವಾದ ತಕ್ಷಣವೇ ಬೆಂಗಳೂರು ನಗರದಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ಆಗಸ್ಟ್ ಮೂರನೇ ವಾರದಲ್ಲಿ ಮತದಾನ ನಡೆಸುವ ಬಗ್ಗೆ ಆಯೋಗ ಚಿಂತನೆ ನಡೆಸಿದೆ.
ಈ ಹಿಂದೆ ಜೂನ್ 30ರೊಳಗೆ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಗಡುವು ನೀಡಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಹಾಗೂ ಸಿಬ್ಬಂದಿ ಕೊರತೆಯನ್ನು ಪರಿಗಣಿಸಿ ನ್ಯಾಯಾಲಯವು ಗಡುವನ್ನು ಆಗಸ್ಟ್ 31ರವರೆಗೆ ವಿಸ್ತರಿಸಿತ್ತು. ಜೊತೆಗೆ, ಯಾವುದೇ ಕಾರಣಕ್ಕೂ ಮತ್ತೆ ಚುನಾವಣೆ ಮುಂದೂಡುವ ಪ್ರಸ್ತಾಪವನ್ನು ತನ್ನ ಮುಂದೆ ತರಬಾರದು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡಿದೆ. ಸೆಪ್ಟೆಂಬರ್ ಅಂತ್ಯದವರೆಗೆ ಕಾಲಾವಕಾಶ ನೀಡುವಂತೆ ಸರ್ಕಾರ ಸಲ್ಲಿಸಿದ್ದ ಮನವಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ.
ಇದರ ಬೆನ್ನಲ್ಲೇ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಅಂತಿಮಗೊಳಿಸುವುದು, ಮತಗಟ್ಟೆಗಳ ಸಿದ್ಧತೆ ಹಾಗೂ ಸಿಬ್ಬಂದಿ ನಿಯೋಜನೆ ಸೇರಿದಂತೆ ಹಲವು ಕಾರ್ಯಗಳಲ್ಲಿ ತೊಡಗಿದೆ. ರಾಜಕೀಯ ಪಕ್ಷಗಳೂ ಚುನಾವಣೆಗೆ ಸಜ್ಜಾಗಿವೆ. ಕಾಂಗ್ರೆಸ್ ತನ್ನ ಗ್ಯಾರಂಟಿ ಯೋಜನೆಗಳು ಮತ್ತು ಸರ್ಕಾರದ ಸಾಧನೆಗಳನ್ನು ಜನರಿಗೆ ತಲುಪಿಸಲು ಕಾರ್ಯಕರ್ತರಿಗೆ ಸೂಚನೆ ನೀಡಿದೆ. ಬಿಜೆಪಿ, ಕಳೆದ ಆರು ವರ್ಷಗಳಿಂದ ಚುನಾವಣೆ ನಡೆಯದ ಪರಿಣಾಮ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ಆರೋಪಿಸುತ್ತಿದೆ. ಇತ್ತ ಬಿಜೆಪಿ-ಜೆಡಿಎಸ್ ಮೈತ್ರಿಯೂ ಚುನಾವಣಾ ಅಖಾಡಕ್ಕೆ ಸಜ್ಜಾಗಿದ್ದು, ಪಂಚ ಪಾಲಿಕೆ ಚುನಾವಣೆ ಭಾರೀ ಪೈಪೋಟಿಗೆ ಸಾಕ್ಷಿಯಾಗುವ ನಿರೀಕ್ಷೆ ಮೂಡಿದೆ.
-
ದೇಶ13 hours agoಬಿಹಾರ ರಾಜಕೀಯದಲ್ಲಿ ಭಾರಿ ಟ್ವಿಸ್ಟ್: ನಾಮಪತ್ರದ ಮರುದಿನವೇ BJP ಅಭ್ಯರ್ಥಿ ಬದಲಾವಣೆ, ಪ್ರಶಾಂತ್ ಕಿಶೋರ್ ವಿರುದ್ಧ ಹೊಸ ಮುಖ!
-
ದೇಶ13 hours ago20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ
-
ದೇಶ13 hours agoIran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ
-
ದೇಶ14 hours ago40 ವರ್ಷಗಳ ಬಳಿಕ ಭಾರತೀಯ ಪ್ರಧಾನಿ ನ್ಯೂಜಿಲ್ಯಾಂಡ್ಗೆ; FTA ಮೂಲಕ ಹೊಸ ಅಧ್ಯಾಯ
-
ಚುನಾವಣೆ12 hours agoನರೋತ್ತಮ್ ಮಿಶ್ರಾಗೆ ಬಿಜೆಪಿ ಟಿಕೆಟ್ ಕೈತಪ್ಪಿದ ಬೆನ್ನಲ್ಲೇ ಭಾರೀ ಬಂಡಾಯ! ರಸ್ತೆ ತಡೆ, ಕಲ್ಲು ತೂರಾಟ, ಹಲವು ರಾಜೀನಾಮೆ
-
ದೇಶ12 hours ago14 ಗಂಟೆಯಲ್ಲಿ 265 ಕಿ.ಮೀ ಪಯಣ; MLA ಸುರೇಶ್ ಕುಮಾರ್ ಅವರ ಫಿಟ್ನೆಸ್ಗೆ ಜನ ಫಿದಾ
-
ದೇಶ11 hours agoಕಾಶ್ಮೀರ ನಕ್ಷೆ ತಪ್ಪಾಗಿ ಪ್ರದರ್ಶನ; ಬಾಂಗ್ಲಾದೇಶದಲ್ಲೇ ಭಾರತದ ಅಧಿಕಾರಿ ಖಡಕ್ ಆಕ್ಷೇಪ
-
ದೇಶ14 hours agoಪ್ರಧಾನಿ ಮೋದಿ ಭದ್ರತೆಗೆ ಬೆದರಿಕೆ? ಆಸ್ಟ್ರೇಲಿಯಾದ ಹೋಟೆಲ್ನಲ್ಲಿ ಖಲಿಸ್ತಾನಿ ಘೋಷಣೆ
