ಬೆಂಗಳೂರು
ಸಿಎಂ ಸಿದ್ದು ಗೆ 10 ಸಾವಿರ ರೂ ಫೈನ್ ಹಾಕಿದ ಹೈಕೋರ್ಟ್
ಬೆಂಗಳೂರು: ಪ್ರತಿಭಟನೆಯ ವೇಳೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ 10 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ, 2022ರ ಏಪ್ರಿಲ್‍ನಲ್ಲಿ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ರೇಸ್ ಕೋರ್ಸ್ ರಸ್ತೆಯ ಬಳಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯ ವೇಳೆ ರಸ್ತೆ ತಡೆ ನಡೆಸಲಾಗಿತ್ತು, ನ್ಯಾ ಕೃಷ್ಣ ದೀಕ್ಷತ್ ಅವರ ನೇತೃತ್ವದಲ್ಲಿ ಪೀಠ ಈ ಆದೇಶ ಹೊರಡಿಸಿದೆ, ಪ್ರತಿಭಟನೆ ವೇಳೆ ರಸ್ತೆ ತಡೆ ನಡೆಸಿದ್ದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದಲ್ಲದೇ ವಾಹನದಟ್ಟಣೆ ಕೂಡ ಉಂಟಾಗಿತ್ತೆಂದು ಅವರ ವಿರುದ್ಧ ದೂರು ನೀಡಲಾಗಿತ್ತು, ಈ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ 10 ಸಾವಿರ ರೂ ದಂಡ ವಿಧಿಸಿ ಆದೇಶ ಹೊರಡಿಸಿದೆ,