ಬೆಂಗಳೂರು
ಹೆಚ್‌ಡಿಕೆ ಆರೋಗ್ಯದಲ್ಲಿ ಚೇತರಿಕೆ: ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಸಾಧ್ಯತೆ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅನಾರೋಗ್ಯದ ಕಾರಣದಿಂದ ಖಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ, ಅವರು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ,
ಆದಿಚುಂಚನಗಿರಿ ಮಹಾಸಂಸ್ಧಾಪನ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಅರೋಗ್ಯವನು ವಿಚಾರಿಸಿದರು, ನಂತರ ಅವರು ಮಾತನಾಡುತ್ತ ಕುಮಾರಸ್ವಾಮಿ ಅವರು ತುಂಬಾ ಚೆನ್ನಾಗಿದ್ದಾರೆ, ಅವರ ಆರೋಗ್ಯ ಸ್ಧಿರವಗಿದೆ, ಆರೋಗ್ಯದಲ್ಲಿ ಚೇತರಿಕೆದ್ದು ಯಾವುದೇ ತೊಂದರೆ ಇಲ್ಲ, ಚಿಕಿತ್ಸೆಗೆ ಸ್ಪಂದಿಸಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ, ಐಸಿಯುನಿಂದ ವಾರ್ಡ್ಗೆ ಶಿಫ್ಟ್ ಮಾಡುತ್ತಾರೆ, ಕೆಲವು ದಿನ ವಿಶ್ರಾಂತಿ ಪಡೆಯುವಂತೆ ಸಲಹ ಕೊಟ್ಟಿದ್ದೇನೆ ಎಂದರು,
ಬೆಂಗಳೂರು
ತಾಯಂದಿರ ಕನಸುಗಳಿಗೆ ಮತ್ತೆ ರೆಕ್ಕೆ; ಜೀ ಕನ್ನಡದಲ್ಲಿ ‘Dance Karnataka Dance – ಸೂಪರ್ ಮಾಮ್’!
ಬೆಂಗಳೂರು: ಕನ್ನಡ ಕಿರುತೆರೆಯ ಜನಪ್ರಿಯ ವಾಹಿನಿ ಜೀ ಕನ್ನಡ, ಕರ್ನಾಟಕದ ತಾಯಂದಿರ ನೃತ್ಯ ಪ್ರತಿಭೆ ಹಾಗೂ ಕನಸುಗಳಿಗೆ ಹೊಸ ವೇದಿಕೆ ಕಲ್ಪಿಸಲು ‘Dance Karnataka Dance – ಸೂಪರ್ ಮಾಮ್’ ರಿಯಾಲಿಟಿ ಶೋನೊಂದಿಗೆ ಮತ್ತೆ ವೀಕ್ಷಕರ ಮನೆಮನ ತಲುಪಲು ಸಜ್ಜಾಗಿದೆ.

ಸೆಪ್ಟೆಂಬರ್ 12ರಿಂದ ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ 7:30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ. ಕುಟುಂಬ, ಉದ್ಯೋಗ ಹಾಗೂ ದಿನನಿತ್ಯದ ನೂರಾರು ಜವಾಬ್ದಾರಿಗಳ ನಡುವೆಯೂ ನೃತ್ಯದ ಮೇಲಿನ ತಮ್ಮ ಆಸಕ್ತಿಯನ್ನು ಜೀವಂತವಾಗಿರಿಸಿಕೊಂಡಿರುವ ಸ್ಪೂರ್ತಿದಾಯಕ ತಾಯಂದಿರ ಕಥೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಲಿವೆ.
ಕುಟುಂಬದ ನಡುವೆ ಬದಿಗೊತ್ತಿದ್ದ ಕನಸುಗಳಿಗೆ ಮರುಜೀವ
ತಾಯಂದಿರು ತಮ್ಮ ಜೀವನದ ಬಹುಪಾಲು ಸಮಯವನ್ನು ಕುಟುಂಬ ಹಾಗೂ ಮನೆಯ ಜವಾಬ್ದಾರಿಗಳಿಗೆ ಮೀಸಲಿಡುತ್ತಾರೆ. ಈ ಜವಾಬ್ದಾರಿಗಳ ನಡುವೆ ಅವರ ಸ್ವಂತ ಆಸೆ-ಆಕಾಂಕ್ಷೆಗಳು ಮತ್ತು ಕನಸುಗಳು ಕೆಲವೊಮ್ಮೆ ಹಿಂದೆ ಸರಿಯುತ್ತವೆ.
ಅಂತಹ ತಾಯಂದಿರಿಗೆ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ತಮ್ಮ ನೃತ್ಯದ ಮೇಲಿನ ಪ್ರೀತಿಯನ್ನು ಮತ್ತೊಮ್ಮೆ ಕಂಡುಕೊಳ್ಳಲು ಹಾಗೂ ಪ್ರತಿಭೆಯನ್ನು ಅನಾವರಣಗೊಳಿಸಲು ವೇದಿಕೆಯಾಗಲಿದೆ.
ವರ್ಷಗಳಿಂದ ಬದಿಗೊತ್ತಿದ್ದ ಕನಸುಗಳಿಗೆ ಮರುಜೀವ ನೀಡುವುದರ ಜೊತೆಗೆ, ತಮ್ಮ ಪ್ರತಿಭೆ ಮತ್ತು ಆತ್ಮವಿಶ್ವಾಸವನ್ನು ಮತ್ತೊಮ್ಮೆ ಪ್ರದರ್ಶಿಸಲು ಈ ಕಾರ್ಯಕ್ರಮ ಅವಕಾಶ ಕಲ್ಪಿಸಲಿದೆ.
ವಿವಿಧ ಭಾಗಗಳ ತಾಯಂದಿರ ವಿಭಿನ್ನ ಕಥೆಗಳು
ಆಡಿಷನ್ ಸಂಚಿಕೆಗಳಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಿರುವ ತಾಯಂದಿರನ್ನು ವೀಕ್ಷಕರಿಗೆ ಪರಿಚಯಿಸಲಾಗುತ್ತದೆ. ನೃತ್ಯದ ಮೇಲಿನ ತಮ್ಮ ಆಸಕ್ತಿ ಹಾಗೂ ಪ್ರತಿಭೆಯನ್ನು ವೇದಿಕೆಯಲ್ಲಿ ಪ್ರದರ್ಶಿಸಲಿರುವ ಅವರು, ತಮ್ಮ ವೈಯಕ್ತಿಕ ಬದುಕಿನ ಪಯಣ, ಕನಸುಗಳು ಮತ್ತು ಆಕಾಂಕ್ಷೆಗಳನ್ನೂ ಹಂಚಿಕೊಳ್ಳಲಿದ್ದಾರೆ.
ಕುಟುಂಬ ಹಾಗೂ ಇತರ ಜವಾಬ್ದಾರಿಗಳ ನಡುವೆ ತಮ್ಮ ಕನಸುಗಳಿಗೆ ಮತ್ತೊಮ್ಮೆ ಆದ್ಯತೆ ನೀಡುವ ಅವರ ಪ್ರಯತ್ನಗಳು ಕಾರ್ಯಕ್ರಮದ ಪ್ರಮುಖ ಹೈಲೈಟ್‌ಗಳಾಗಲಿವೆ.
ಪ್ರತಿಯೊಬ್ಬ ಸ್ಪರ್ಧಿಯೂ ತನ್ನದೇ ಆದ ಕಥೆ ಮತ್ತು ನೃತ್ಯ ಶೈಲಿಯೊಂದಿಗೆ ವೇದಿಕೆಯೇರಲಿದ್ದು, ವಿಭಿನ್ನ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಲಿವೆ.
ಅನುಶ್ರೀ ನಿರೂಪಣೆ, ಶಿವರಾಜ್ ಕುಮಾರ್ ಸೇರಿ ತಾರೆಯರ ತೀರ್ಪುಗಾರರ ಬಳಗ
ಜನಪ್ರಿಯ ನಿರೂಪಕಿ ಅನುಶ್ರೀ ಅವರು ತಮ್ಮ ವಿಶಿಷ್ಟ ನಿರೂಪಣಾ ಶೈಲಿಯ ಮೂಲಕ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಸ್ಪರ್ಧಿಗಳಿಗೆ ಮಾರ್ಗದರ್ಶನ ನೀಡಲಿರುವ ತೀರ್ಪುಗಾರರ ಬಳಗದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಖ್ಯಾತ ನಿರ್ದೇಶಕ ತರುಣ್ ಸುಧೀರ್, ನಟ ವಿಜಯ್ ರಾಘವೇಂದ್ರ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಇರಲಿದ್ದಾರೆ.
ತಮ್ಮ ಅನುಭವ ಮತ್ತು ವಿಭಿನ್ನ ದೃಷ್ಟಿಕೋನಗಳ ಮೂಲಕ ತೀರ್ಪುಗಾರರು ಸ್ಪರ್ಧಿಗಳ ನೃತ್ಯ ಪ್ರದರ್ಶನವನ್ನು ಮೌಲ್ಯಮಾಪನ ಮಾಡುವುದರ ಜೊತೆಗೆ ಅವರಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಸೆ.12ರಿಂದ ‘ಸೂಪರ್ ಮಾಮ್’ಗಳ ನೃತ್ಯ ಪಯಣ
ವಿವಿಧ ಹಿನ್ನೆಲೆಯಿಂದ ಬಂದಿರುವ ತಾಯಂದಿರು ತಮ್ಮದೇ ಆದ ಅನುಭವ, ವ್ಯಕ್ತಿತ್ವ ಮತ್ತು ನೃತ್ಯ ಪ್ರತಿಭೆಯೊಂದಿಗೆ ವೇದಿಕೆಯೇರಲಿದ್ದಾರೆ. ಅವರ ನೃತ್ಯ ಪ್ರದರ್ಶನಗಳ ಜತೆಗೆ ಬದುಕಿನ ಕಥೆಗಳೂ ವೀಕ್ಷಕರಿಗೆ ಪರಿಚಯವಾಗಲಿವೆ.
ಕುಟುಂಬದವರ ಕನಸುಗಳಿಗೆ ಸದಾ ಬೆಂಬಲವಾಗಿ ನಿಂತಿರುವ ಈ ತಾಯಂದಿರು, ಇದೀಗ ತಮ್ಮದೇ ಕನಸುಗಳನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಇಡಲಿದ್ದಾರೆ.
ಸೆಪ್ಟೆಂಬರ್ 12 ಮತ್ತು 13ರಂದು ರಾತ್ರಿ 7:30ಕ್ಕೆ ಜೀ ಕನ್ನಡದಲ್ಲಿ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ – ಸೂಪರ್ ಮಾಮ್’ ಪ್ರಸಾರವಾಗಲಿದೆ. ಕಾರ್ಯಕ್ರಮವನ್ನು ಯಾವುದೇ ಸಮಯದಲ್ಲೂ ಕನ್ನಡ ಜೀ5ನಲ್ಲಿ ವೀಕ್ಷಿಸಬಹುದು.
ಬೆಂಗಳೂರು
APMC ಯಲ್ಲಿ ಬಾಲಕಾರ್ಮಿಕ ಸಿಕ್ಕಿದ್ದೇ ತಡ; ಬೆಂಗಳೂರಿನಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್, 17 ಮಕ್ಕಳು ರಕ್ಷಣೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು APMCಗೆ ದಿಢೀರ್ ಭೇಟಿ ನೀಡಿದ ಬೆನ್ನಲ್ಲೇ ಬೆಂಗಳೂರು ಪೊಲೀಸರು ನಗರದಾದ್ಯಂತ ಬಾಲಕಾರ್ಮಿಕರ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಇದುವರೆಗೆ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
ಇತ್ತೀಚೆಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಎಪಿಎಂಸಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಾರ್ಮಿಕನೊಬ್ಬ ಕೆಲಸ ಮಾಡುತ್ತಿರುವುದು ಪತ್ತೆಯಾಗಿತ್ತು. ಈ ವೇಳೆ ಸ್ಥಳೀಯ ಪೊಲೀಸರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ, ಮಹಿಳಾ ಕೂಲಿ ಕಾರ್ಮಿಕರು ತಮ್ಮ ಮಕ್ಕಳನ್ನೇ ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಸೂಚನೆ ಬೆನ್ನಲ್ಲೇ ಪೊಲೀಸರು ವಿಶೇಷ ಕಾರ್ಯಾಚರಣೆ ಆರಂಭಿಸಿದ್ದಾರೆ.
ಹೋಟೆಲ್, ಅಂಗಡಿ, ಗ್ಯಾರೇಜ್‌ಗಳಲ್ಲಿ ಪರಿಶೀಲನೆ
ಬೆಂಗಳೂರು ನಗರದ ವಿವಿಧ ಭಾಗಗಳಲ್ಲಿ ಹೋಟೆಲ್‌ಗಳು, ಅಂಗಡಿಗಳು, ಗ್ಯಾರೇಜ್‌ಗಳು, ಪೆಟ್ರೋಲ್ ಬಂಕ್‌ಗಳು ಸೇರಿದಂತೆ ಹಲವು ಸ್ಥಳಗಳಲ್ಲಿ ಪೊಲೀಸರು ವ್ಯಾಪಕ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಕೆಲವು ಕಡೆ ಬಾಲಕಾರ್ಮಿಕರು ಕೆಲಸ ಮಾಡುತ್ತಿರುವುದು ಪತ್ತೆಯಾಗಿದೆ.
ಕಾರ್ಯಾಚರಣೆಯ ಮೂಲಕ ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಮುಂದುವರಿದಿರುವುದು ಬೆಳಕಿಗೆ ಬಂದಿದೆ. ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ಸ್ಥಳಗಳ ಬಗ್ಗೆ ಪೊಲೀಸರು ಪರಿಶೀಲನೆ ಮುಂದುವರಿಸಿದ್ದಾರೆ.
ಉತ್ತರ ವಿಭಾಗದಲ್ಲೇ 100ಕ್ಕೂ ಹೆಚ್ಚು ಕಡೆ ತಪಾಸಣೆ
ಈ ಕುರಿತು ಉತ್ತರ ವಿಭಾಗದ ಡಿಸಿಪಿ ನ್ಯಾಮಗೌಡ ಮಾಹಿತಿ ನೀಡಿದ್ದು, ಉತ್ತರ ವಿಭಾಗವೊಂದರಲ್ಲೇ 100ಕ್ಕೂ ಹೆಚ್ಚು ಸ್ಥಳಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.
ಇದುವರೆಗೆ ನಡೆಸಿದ ಕಾರ್ಯಾಚರಣೆಯಲ್ಲಿ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ನಗರದ ಇತರ ಭಾಗಗಳಲ್ಲೂ ಬಾಲಕಾರ್ಮಿಕರ ಪತ್ತೆಗಾಗಿ ವಿಶೇಷ ಪರಿಶೀಲನೆ ಮುಂದುವರಿದಿದೆ.
ಸಿಎಂ ಡಿ.ಕೆ. ಶಿವಕುಮಾರ್ ಅವರ ಎಪಿಎಂಸಿ ಭೇಟಿಯ ಸಂದರ್ಭದಲ್ಲಿ ಬಾಲಕಾರ್ಮಿಕ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆರಂಭವಾದ ಈ ಕಾರ್ಯಾಚರಣೆ ಇದೀಗ ಬೆಂಗಳೂರಿನಾದ್ಯಂತ ವಿಸ್ತರಿಸಲಾಗಿದೆ.
ಬೆಂಗಳೂರು
Bengaluru ಟ್ರಾಫಿಕ್‌ಗೆ ಬಿಗ್ ರಿಲೀಫ್! ₹16,980 ಕೋಟಿ ಯೋಜನೆಗೆ ಗ್ರೀನ್ ಸಿಗ್ನಲ್; ಸುರಂಗ ರಸ್ತೆ ನಿರ್ಮಾಣಕ್ಕೆ ಚಾಲನೆ
ಬೆಂಗಳೂರು: Bengaluru ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬೃಹತ್ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಮುಖ ಸಭೆಯಲ್ಲಿ ಒಟ್ಟು ₹16,980 ಕೋಟಿ ಅಂದಾಜು ವೆಚ್ಚದ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

ಈ ಯೋಜನೆಗಳ ಪೈಕಿ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್‌ವರೆಗೆ ನಿರ್ಮಾಣವಾಗಲಿರುವ 16.75 ಕಿ.ಮೀ ಉದ್ದದ ಮೊದಲ ಹಂತದ ಸುರಂಗ ರಸ್ತೆ ಪ್ರಮುಖ ಆಕರ್ಷಣೆಯಾಗಿದೆ.
ಸಿಲ್ಕ್ ಬೋರ್ಡ್‌ನಿಂದ ಹೆಬ್ಬಾಳವರೆಗೆ ಸುರಂಗ ರಸ್ತೆ
ಬೆಂಗಳೂರಿನ ಅತ್ಯಂತ ಜನನಿಬಿಡ ಪ್ರದೇಶಗಳನ್ನು ಸಂಪರ್ಕಿಸುವ ಉದ್ದೇಶದಿಂದ ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಹೆಬ್ಬಾಳ ಜಂಕ್ಷನ್‌ವರೆಗೆ 16.75 ಕಿ.ಮೀ ಉದ್ದದ ಸುರಂಗ ರಸ್ತೆ ನಿರ್ಮಿಸಲು ಯೋಜಿಸಲಾಗಿದೆ.
ನಗರದ ಪ್ರಮುಖ ಮಾರ್ಗಗಳ ಮೇಲಿನ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಈ ಸುರಂಗ ರಸ್ತೆ ಪ್ರಮುಖ ಪಾತ್ರ ವಹಿಸಲಿದೆ ಎಂದು ನಿರೀಕ್ಷಿಸಲಾಗಿದೆ.
11 ಎಲಿವೇಟೆಡ್ ಕಾರಿಡಾರ್‌ಗಳಿಗೆ ಟೆಂಡರ್
ಸುರಂಗ ರಸ್ತೆಯ ಜೊತೆಗೆ ನಗರದ ವಿವಿಧ ಪ್ರಮುಖ ರಸ್ತೆಗಳನ್ನು ಸಂಪರ್ಕಿಸುವ 120 ಕಿ.ಮೀ ಉದ್ದದ 13 ಎಲಿವೇಟೆಡ್ ಕಾರಿಡಾರ್‌ಗಳ ಯೋಜನೆಯನ್ನೂ ಕೈಗೆತ್ತಿಕೊಳ್ಳಲಾಗಿದೆ.
ಇವುಗಳ ಪೈಕಿ ₹13,262.70 ಕೋಟಿ ವೆಚ್ಚದ 11 ಕಾರಿಡಾರ್‌ಗಳಿಗೆ ಟೆಂಡರ್ ಪ್ರಕ್ರಿಯೆ ಆರಂಭವಾಗಿದೆ. ಇದರ ಭಾಗವಾಗಿ 29.10 ಕಿ.ಮೀ ಉದ್ದದ 9 ಮೇಲ್ಸೇತುವೆಗಳ ನಿರ್ಮಾಣದ ಟೆಂಡರ್ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ.
ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಶೀಘ್ರದಲ್ಲೇ ಕಾಮಗಾರಿಗಳಿಗೆ ಚಾಲನೆ ದೊರೆಯುವ ನಿರೀಕ್ಷೆಯಿದೆ.
ಭೂಸ್ವಾಧೀನಕ್ಕೆ BDA ಹೊಣೆ
ಈ ಬೃಹತ್ ಮೂಲಸೌಕರ್ಯ ಯೋಜನೆಗಳಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೆತ್ತಿಕೊಳ್ಳಲಿದೆ.
ಯೋಜನೆಗಳು ಪೂರ್ಣಗೊಂಡ ಬಳಿಕ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಗಮನಾರ್ಹವಾಗಿ ಕಡಿಮೆಯಾಗುವ ನಿರೀಕ್ಷೆಯಿದ್ದು, ಒಟ್ಟಾರೆ ಸಂಚಾರ ದಟ್ಟಣೆ ಶೇ.40ರಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಸಿಲ್ಕ್ ಬೋರ್ಡ್-ಕೆ.ಆರ್. ಪುರಂ ರಸ್ತೆಗೂ ₹450 ಕೋಟಿ
ನಗರದ ಅತ್ಯಂತ ಜನನಿಬಿಡ ಮಾರ್ಗಗಳಲ್ಲಿ ಒಂದಾಗಿರುವ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್. ಪುರಂವರೆಗಿನ ಹೊರವರ್ತುಲ ರಸ್ತೆಯನ್ನು ₹450 ಕೋಟಿ ವೆಚ್ಚದಲ್ಲಿ ಸಂಪೂರ್ಣವಾಗಿ ಉನ್ನತೀಕರಿಸಲು ನಿರ್ಧರಿಸಲಾಗಿದೆ.
ಈ ರಸ್ತೆಯ ಅಭಿವೃದ್ಧಿಯಿಂದ ಪ್ರಮುಖ ಐಟಿ ಹಾಗೂ ವಾಣಿಜ್ಯ ಪ್ರದೇಶಗಳ ನಡುವಿನ ಸಂಚಾರ ಮತ್ತಷ್ಟು ಸುಗಮವಾಗುವ ನಿರೀಕ್ಷೆಯಿದೆ.
ರಾಜಕಾಲುವೆ ಅಭಿವೃದ್ಧಿಗೂ ₹2,000 ಕೋಟಿ
ಬೆಂಗಳೂರಿನಲ್ಲಿ ಮಳೆಗಾಲದ ಸಂದರ್ಭದಲ್ಲಿ ಪದೇಪದೇ ಎದುರಾಗುವ ಪ್ರವಾಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸರ್ಕಾರ ಮತ್ತೊಂದು ಮಹತ್ವದ ಯೋಜನೆಗೆ ಹಸಿರು ನಿಶಾನೆ ತೋರಿಸಿದೆ.
ವಿಶ್ವಬ್ಯಾಂಕ್ ನೆರವಿನೊಂದಿಗೆ ₹2,000 ಕೋಟಿ ವೆಚ್ಚದಲ್ಲಿ ರಾಜಕಾಲುವೆಗಳ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ತೀರ್ಮಾನಿಸಲಾಗಿದೆ. ರಾಜಕಾಲುವೆಗಳ ಸಾಮರ್ಥ್ಯ ಹೆಚ್ಚಿಸುವ ಮೂಲಕ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಒಟ್ಟಿನಲ್ಲಿ, ಸುರಂಗ ರಸ್ತೆ, ಎಲಿವೇಟೆಡ್ ಕಾರಿಡಾರ್‌ಗಳು, ಮೇಲ್ಸೇತುವೆಗಳು, ಹೊರವರ್ತುಲ ರಸ್ತೆ ಅಭಿವೃದ್ಧಿ ಹಾಗೂ ರಾಜಕಾಲುವೆಗಳ ಸುಧಾರಣೆ ಸೇರಿದಂತೆ ಹಲವು ಬೃಹತ್ ಯೋಜನೆಗಳಿಗೆ ಅನುಮೋದನೆ ದೊರೆತಿರುವುದು ಬೆಂಗಳೂರಿನ ಸಂಚಾರ ಮತ್ತು ಮೂಲಸೌಕರ್ಯ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗೆ ನಾಂದಿ ಹಾಡುವ ನಿರೀಕ್ಷೆ ಮೂಡಿಸಿದೆ.
-
ಆರೋಗ್ಯ23 ಗಂಟೆಗಳು agoRare Medical Condition ಪುರುಷ ಕ್ರೋಮೋಸೋಮ್, ಪುರುಷನ ದೇಹಲಕ್ಷಣ… ಆದರೆ ಒಳಗೆ ಗರ್ಭಕೋಶ! ಈ ಅಪರೂಪದ ಕಾಯಿಲೆ ಯಾವುದು?
-
ರಾಜ್ಯ23 ಗಂಟೆಗಳು agoVande Mataram ಗಾಯನಕ್ಕೆ ಹೊಸ ನಿಯಮ! ಕೇಂದ್ರದ ಮಾರ್ಗಸೂಚಿ vs ಕರ್ನಾಟಕ ಸರ್ಕಾರದ ಆದೇಶ
-
ರಾಜ್ಯ4 ಗಂಟೆಗಳು agoBIG NEWS Gram Panchayati ಚುನಾವಣೆ: ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ; ಚುನಾವಣೆ ಯಾವಾಗ?
-
ದೇಶ4 ಗಂಟೆಗಳು agoNational News BRICS Summit 2026: ದೆಹಲಿಯ ಭಾರತ್ ಮಂಟಪಂ ಹೇಗಿದೆ? ಜಾಗತಿಕ ನಾಯಕರ ಸ್ವಾಗತಕ್ಕೆ ಅದ್ಧೂರಿ ಸಿದ್ಧತೆ!
-
ದೇಶ5 ಗಂಟೆಗಳು agoAmerica- Israiel ಗೆ ಇರಾನ್ ಅಧ್ಯಕ್ಷರ ನೇರ ಎಚ್ಚರಿಕೆ; ‘ಒತ್ತಡ ಹೇರಿದರೆ ತಕ್ಕ ಉತ್ತರ’ ಎಂದ ಪೆಜೆಶ್ಕಿಯಾನ್!
-
ಬೆಂಗಳೂರು1 ಗಂಟೆ agoBengaluru ಟ್ರಾಫಿಕ್‌ಗೆ ಬಿಗ್ ರಿಲೀಫ್! ₹16,980 ಕೋಟಿ ಯೋಜನೆಗೆ ಗ್ರೀನ್ ಸಿಗ್ನಲ್; ಸುರಂಗ ರಸ್ತೆ ನಿರ್ಮಾಣಕ್ಕೆ ಚಾಲನೆ
-
ದೇಶ1 ಗಂಟೆ agoIRCTC ದಾಖಲೆ: ಒಂದೇ ದಿನ 20 ಲಕ್ಷಕ್ಕೂ ಹೆಚ್ಚು ರೈಲು ಟಿಕೆಟ್ ಬುಕಿಂಗ್; ಹೊಸ ದಾಖಲೆ ಸೃಷ್ಟಿ!
-
ಬೆಂಗಳೂರು1 ಗಂಟೆ agoAPMC ಯಲ್ಲಿ ಬಾಲಕಾರ್ಮಿಕ ಸಿಕ್ಕಿದ್ದೇ ತಡ; ಬೆಂಗಳೂರಿನಾದ್ಯಂತ ಪೊಲೀಸರ ಸ್ಪೆಷಲ್ ಡ್ರೈವ್, 17 ಮಕ್ಕಳು ರಕ್ಷಣೆ
