Connect with us

ದೇಶ

ಅಡ್ವಾನ್ಸ್​ ಬುಕಿಂಗ್​​​ನಲ್ಲೇ 100 ಕೋಟಿ ದಾಟಿದ ‘ಪುಷ್ಪ 2’: ಮೊದಲ ದಿನವೇ 275 ಕೋಟಿ ಗಳಿಸುವ ಸಾಧ್ಯತೆ

ಬಹು ನಿರೀಕ್ಷಿತ ”ಪುಷ್ಪ: ದಿ ರೂಲ್​​” ಅಬ್ಬರಕ್ಕೆ ಅದ್ಧೂರಿ ವೇದಿಕೆ ಸಜ್ಜಾಗಿದೆ. ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭಗೊಂಡಿದ್ದು, ವಿಶ್ವಾದ್ಯಂತ 12,500 ಸ್ಕ್ರೀನ್​​​ಗಳಲ್ಲಿ ಪುಷ್ಪರಾಜ್​ ಸದ್ದು ಮಾಡಲಿದ್ದಾನೆ. ರಿಲೀಸ್​ ಟೈಮ್​ ಅತ್ಯಂತ ಸಮೀಪದಲ್ಲಿದ್ದು, ರಾಷ್ಟ್ರಪ್ರಶಸ್ತಿ ವಿಜೇತ ನಟ ಅಲ್ಲು ಅರ್ಜುನ್ ಮತ್ತು ಬಹುಭಾಷಾ ಬಹುಬೇಡಿಕೆ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಸಿನಿಮಾ ಸುತ್ತಲಿನ ಕ್ರೇಜ್​​ ಅಭೂತಪೂರ್ವ ಅಂತಲೇ ಹೇಳಬಹುದು. ಬಹುನಿರೀಕ್ಷಿತ ಚಿತ್ರ ತನ್ನ ಅಡ್ವಾನ್ಸ್​​ ಬುಕಿಂಗ್​ ಕಲೆಕ್ಷನ್​ ವಿಷಯದಿಂದ ಕೋಟ್ಯಂತರ ಜನರ ಗಮನ ಸೆಳೆದಿದೆ. ಸಿನಿಮಾ ಬಿಗ್​ ಬ್ಲಾಕ್​ಬಸ್ಟರ್ ಆಗಲಿದೆ ಎಂಬುದು ಈಗಾಗಲೇ ಸ್ಪಷ್ಟವಾಗಿದೆ.

ವಿಶ್ವಾದ್ಯಂತದ ಮುಂಗಡ ಬುಕಿಂಗ್ – 100 ಕೋಟಿ ರೂ. ಕಲೆಕ್ಷನ್​​: ಬಿಡುಗಡೆಗೂ ಮುನ್ನ ಪುಷ್ಪ ಸೀಕ್ವೆಲ್​​ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ದೊಡ್ಡ ಮೊತ್ತವನ್ನು ಸಂಗ್ರಹಿಸಿದೆ. ಚಿತ್ರ ತಯಾರಕರ ಲೇಟೆಸ್ಟ್ ಅಪ್ಡೇಟ್ಸ್ ಪ್ರಕಾರ, ಸಿನಿಮಾ ವಿಶ್ವಾದ್ಯಂತ ಅಡ್ವಾನ್ಸ್ ಟಿಕೆಟ್​ ಬುಕಿಂಗ್‌ನಲ್ಲಿ 100 ಕೋಟಿ ರೂಪಾಯಿ ದಾಟಿದೆ. ನಾಯಕ ನಟ ಅಲ್ಲು ಅರ್ಜುನ್ ಸಿಂಹಾಸನದ ಮೇಲೆ ಕುಳಿತಿರುವ ಪವರ್​ಫುಲ್​​ ಪೋಸ್ಟರ್ ಅನಾವರಣಗೊಳಿಸಿ ಚಿತ್ರತಂಡ ಈ ಮಾಹಿತಿ ಹಂಚಿಕೊಂಡಿದೆ. “ಪುಷ್ಪ2: ದಿ ರೂಲ್​​ ಅಡ್ವಾನ್ಸ್​​ ಬುಕಿಂಗ್​​ನಲ್ಲಿ 100 ಕೋಟಿ ರೂ.ನ ಗಡಿ ದಾಟಿದೆ. ಭಾರತದ ಅತಿ ದೊಡ್ಡ ಚಿತ್ರವು ದಾಖಲೆಗಳನ್ನು ಮುರಿಯುತ್ತಿದೆ” ಎಂಬ ಕ್ಯಾಪ್ಷನ್​​​ ನೆಟ್ಟಿಗರ ಗಮನ ಸೆಳೆದಿದೆ.

ರಶ್ಮಿಕಾ ಮಂದಣ್ಣ, ಅಲ್ಲು ಅರ್ಜುನ್‌ ವೃತ್ತಿಜೀವನದ ದೊಡ್ಡ ದಾಖಲೆ: ದೊಡ್ಡ ಮಟ್ಟದ ಪೂರ್ವ ವ್ಯವಹಾರದೊಂದಿಗೆ, ಪುಷ್ಪ 2 ಈಗಾಗಲೇ ಸೂಪರ್​ ಸ್ಟಾರ್​ ಅಲ್ಲು ಅರ್ಜುನ್ ಅವರ ‘ಬಿಗ್ಗೆಸ್ಟ್​​ ಓಪನರ್’​ (ದೇಶೀಯ ಮತ್ತು ವಿಶ್ವಾದ್ಯಂತದ ಮೊದಲ ದಿನದ ಕಲೆಕ್ಷನ್​) ಆಗಲಿದೆ ಎಂದು ಸಿನಿಮಾ ಇಂಡಸ್ಟ್ರಿ ಟ್ರ್ಯಾಕರ್​​ ಸ್ಯಾಕ್ನಿಲ್ಕ್ ವರದಿ ಮಾಡಿದೆ. ಮೊದಲ ದಿನವೇ ಚಿತ್ರ ಹಲವು ದಾಖಲೆಗಳನ್ನು ಮುರಿಯಲು ಸಜ್ಜಾಗಿದೆ. ಆರಂಭಿಕ ಅಂದಾಜಿನ ಪ್ರಕಾರ, ಪುಷ್ಪಾ 2 ತೆರೆಕಂಡ ದಿನವೇ 250-275 ಕೋಟಿ ರೂಪಾಯಿಗಳ ನಡುವೆ ಕಲೆಕ್ಷನ್​ ಮಾಡುವ ಸಾಧ್ಯತೆಗಳಿವೆ.

2 ಮಿಲಿಯನ್ ಟಿಕೆಟ್‌ ಸೇಲ್​​, ಆರ್​ಆರ್​ಆರ್​​​ ದಾಖಲೆ ಉಡೀಸ್​​: 2 ಮಿಲಿಯನ್‌ಗಿಂತಲೂ ಹೆಚ್ಚು ಟಿಕೆಟ್‌ಗಳು ಈಗಾಗಲೇ ಮಾರಾಟವಾದ್ದು, ಭಾರತೀಯ ಚಲನಚಿತ್ರ ರಂಗದಲ್ಲೇ ಅತಿದೊಡ್ಡ ಓಪನಿಂಗ್‌ಗಳಲ್ಲಿ ಒಂದಾಗಲಿದೆ. ಟ್ರೇಡ್​​ ಅಂದಾಜುಗಳನ್ನು ನಂಬುವುದಾದರೆ, ಪುಷ್ಪ ಸೀಕ್ವೆಲ್​​​ ಎಸ್ಎಸ್ ರಾಜಮೌಳಿ ಅವರ 2022ರ ಬ್ಲಾಕ್​ಬಸ್ಟರ್ ಆರ್​ಆರ್​ಆರ್​ ದಾಖಲೆಯನ್ನು ಪುಡಿಗಟ್ಟುವ ಸಾಧ್ಯತೆ ಹೆಚ್ಚಿದೆ. ಸೌತ್​ ಸೂಪರ್​ಸ್ಟಾರ್​ಗಳಾದ ಜೂನಿಯರ್​ ಎನ್​ಟಿಆರ್​​​ ಮತ್ತು ರಾಮ್​ಚರಣ್​​​ ಮುಖ್ಯಭೂಮಿಕೆಯ ಆರ್​ಆರ್​ಆರ್​​ ಜಾಗತಿಕವಾಗಿ ಮೊದಲ ದಿನ 223 ಕೋಟಿ ರೂ. ಕಲೆಕ್ಷನ್​ ಮಾಡಿತ್ತು.

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

ದೇಶ

ಭಾರತ vs ಅಮೆರಿಕ: ರಷ್ಯಾದ ತೈಲದ ಬಗ್ಗೆ ಉದ್ವಿಗ್ನತೆ, ಸೇನೆಯಿಂದ ತಿರುಗೇಟು

ಬೆಂಗಳೂರು: ರಷ್ಯಾದಿಂದ ಕಚ್ಚಾ ತೈಲ ಖರೀದಿಯ ಕುರಿತು ಭಾರತ-ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವಂತಾಗಿದೆ. ಭಾರತ ರಷ್ಯಾದಿಂದ ತೈಲ ಆಮದು ಮಾಡುತ್ತಿರುವುದಕ್ಕೆ ಅಮೆರಿಕ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, ಭಾರತೀಯ ಸೇನೆ ಅಮೆರಿಕದ ದ್ವೇಧಾಚರಣೆ ವಿರುದ್ಧ ತಿರುಗೇಟು ನೀಡಿದೆ.

ಸೋಷಿಯಲ್ ಮೀಡಿಯಾದಲ್ಲಿ “ಈ ದಿನ ಆ ವರ್ಷ – ಯುದ್ಧದ ನಿರ್ಮಾಣ – 05 ಆಗಸ್ಟ್ 1971” ಎಂಬ ಶೀರ್ಷಿಕೆಯಡಿ ಸೇನೆಯು 1971ರ ಯುದ್ಧದ ಕಾಲದ ಪತ್ರಿಕಾ ಕಟಿಂಗ್‌ ಹಂಚಿಕೊಂಡಿದೆ. 1954ರಿಂದ 1971ರವರೆಗೆ ಅಮೆರಿಕ ಪಾಕಿಸ್ತಾನಕ್ಕೆ ಶಸ್ತ್ರಾಸ್ತ್ರ ಪೂರೈಸಿದ ಬಗ್ಗೆ ಪೇಪರ್ ಕಟಿಂಗ್‌ ಉಲ್ಲೇಖಿಸುತ್ತಾ, “ಅಮೆರಿಕ ಪಾಕ್ ಪರ ಕೆಲಸ ಮಾಡಿತ್ತಲ್ಲವೆ?” ಎಂದು ಪ್ರಶ್ನಿಸಿದೆ.

ಇದು ಉಕ್ರೇನ್ ವಿರುದ್ಧದ ಯುದ್ಧಕ್ಕೆ ಭಾರತ ಹಣ ಒದಗಿಸುತ್ತಿದೆ ಎಂಬ ಅಮೆರಿಕದ ಆರೋಪಕ್ಕೆ ಪ್ರತಿಕ್ರಿಯೆಯಾಗಿದೆ. ಭಾರತವು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದ ಟೀಕೆಗಳನ್ನು ‘ಅಸಮರ್ಥನೀಯ ಹಾಗೂ ಅಸಮಂಜಸ’ವೆಂದು ತಿರಸ್ಕರಿಸಿದೆ. ಭಾರತ ತನ್ನ ತೈಲ ನೀತಿಯನ್ನು ಆರ್ಥಿಕ ಶಕ್ತಿಯ ದೃಷ್ಟಿಯಿಂದ ಮುಂದುವರಿಸುತ್ತಿದೆ.

Continue Reading

ದೇಶ

ಸೇನೆ ಕುರಿತ ಹೇಳಿಕೆ: ಸುಪ್ರೀಂ ಕೋರ್ಟ್ ಟೀಕೆಗೆ ಪ್ರಿಯಾಂಕಾ ಗಾಂಧಿಯಿಂದ ಕಠಿಣ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ಸೇನೆ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ಇದೀಗ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.

ರಾಹುಲ್ ಗಾಂಧಿಯ ವಿರುದ್ಧ ಸುಪ್ರೀಂ ಕೋರ್ಟ್ ನೀಡಿದ ಟೀಕೆಗೆ ಪ್ರತಿಕ್ರಿಯಿಸಿ ಪ್ರಿಯಾಂಕಾ ಗಾಂಧಿ,

“ಯಾರು ನಿಜವಾದ ಭಾರತೀಯರು ಎಂಬುದನ್ನು ನಿರ್ಧರಿಸಲು ನ್ಯಾಯಾಧೀಶರು ಯೋಗ್ಯರಲ್ಲ. ರಾಹುಲ್ ಗಾಂಧಿಗೆ ಭಾರತೀಯ ಸೇನೆಯ ಬಗ್ಗೆ ಅಪಾರ ಗೌರವವಿದೆ. ಅವರು ಎಂದಿಗೂ ಸೇನೆಯ ವಿರುದ್ಧ ಕೆಟ್ಟ ಮಾತುಗಳನ್ನು ಮಾತನಾಡಲ್ಲ,” ಎಂದು ತಿಳಿಸಿದ್ದಾರೆ.

ಗಲ್ವಾನ್ ಕಣಿವೆ ಸಂಘರ್ಷ ಕುರಿತು ಮಾತನಾಡಿದ ವೇಳೆ ರಾಹುಲ್ ಗಾಂಧಿ ನೀಡಿದ ಹೇಳಿಕೆಯನ್ನು ಸುಪ್ರೀಂ ಕೋರ್ಟ್ ‘ಅನುಚಿತ’ ಎಂದು ಖಂಡಿಸಿದ್ದು, “ನಿಜವಾದ ಭಾರತೀಯರು ಈ ರೀತಿ ಮಾತನಾಡುವುದಿಲ್ಲ” ಎಂದು ಹೇಳಿದ್ದಾರೆ. ಇದನ್ನು ಪ್ರಿಯಾಂಕಾ ಗಾಂಧಿ ಪ್ರಶ್ನಿಸಿದ್ದು, “ವಿರೋಧ ಪಕ್ಷದ ನಾಯಕರಾಗಿ ಸರ್ಕಾರವನ್ನು ಪ್ರಶ್ನಿಸುವುದು ರಾಹುಲ್ ಅವರ ಕರ್ತವ್ಯ. ನ್ಯಾಯಮೂರ್ತಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ,” ಎಂದಿದ್ದಾರೆ.

ಅದೇ ರೀತಿ, ಪ್ರಿಯಾಂಕಾ ಗಾಂಧಿ ಸರ್ಕಾರದ ನಡೆಗೆ ಶಂಕೆ ವ್ಯಕ್ತಪಡಿಸಿ,

“ರಾಹುಲ್ ಗಾಂಧಿಯ ಪ್ರಶ್ನೆಗಳಿಗೆ ಸರ್ಕಾರದ ಬಳಿ ಉತ್ತರಗಳಿಲ್ಲ. ಅವರು ಚರ್ಚೆಗೆ ತಯಾರಿಲ್ಲ. ಸಂಸತ್ತನ್ನು ಸರಿಯಾಗಿ ನಡೆಸಲಾಗುತ್ತಿಲ್ಲ. ಇದನ್ನೆಲ್ಲಾ ಮರೆಮಾಚಲು ಈ ರೀತಿಯ ತಂತ್ರಗಳನ್ನು ಬಳಸುತ್ತಿದ್ದಾರೆ,” ಎಂದು ವಾಗ್ದಾಳಿ ನಡೆಸಿದ್ದಾರೆ.

Continue Reading

Trending