Connect with us

ರಾಜಕೀಯ

ದಾರಿ ತಪ್ಪಿಸುವ ಬಿಜೆಪಿ-ಜೆಡಿಎಸ್ ಮಾತನ್ನು ಕೇಳಬೇಡಿ ಎಂದು ಸಿಎಂ ಸಿದ್ದರಾಮಯ್ಯ

ಹಾಸನ: ಕರ್ನಾಟಕದ ಇತಿಹಾಸದಲ್ಲಿ ಬಿಜೆಪಿ-ಜೆಡಿಎಸ್ ಆಗಲಿ ಯಾವತ್ತೂ ಸುಭದ್ರ ಸರ್ಕಾರ ನೀಡಲು ಆಗಿಲ್ಲ, ಹೀಗಾಗಿ ಅಧಿಕಾರ ಕೊಡಬೇಕಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು,
ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಸುಭದ್ರ ಸರ್ಕಾರ ನೀಡಲು ಕಾಂಗ್ರೆಸ್ ನಿಂದ ಮಾತ್ರ ಸಾಧ್ಯವೆಂದ ಅವರು ಕುಮಾರಸ್ವಾಮಿ ಸಿಎಂ ಆಗಿದ್ದು ಒಮ್ಮೆ ಬಿಜೆಪಿ ಹಾಗೂ ನಮ್ಮಿಂದ, ಬಿಜೆಪಿಯವರು ಆಪರೇಷನ್ ಕಮಲದ ಮೂಲಕ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಅಧಿಕಾರಕ್ಕೆ ಬಂದಿದ್ದರು, ಅವರಿಂದ ಸುಭದ್ರ ಸರ್ಕಾರ ಕೊಡಲು ಸಾಧ್ಯವಾಗಲಿಲ್ಲ, ನಾವು ಕುಮಾರಸ್ವಾಮಿರನ್ನು ಬೆಂಬಲಿಸಿ ಸರ್ಕಾರ ರಚಿಸಲು ಬೆಂಬಲ ನೀಡಿದ್ವಿ, ಅವರಿಗೆ ಸರ್ಕಾರ ಉಳಿಸಿಕೊಳ್ಳಲು ಆಗಲಿಲ್ಲ ಎಂದು ಸಿಎಂ ಹೇಳಿದರು,
ಬಡವರ ಹೊಟ್ಟೆಗೆ ಹೊಡೆಯುವವರು ಬಿಜೆಪಿ ಜೆಡಿಎಸ್ ನವರೇ ಹೊರತು ಕಾಂಗ್ರೆಸ್‍ನವರಲ್ಲ, ಬಡವರಿಗೆ ಪಂಚ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ, ಪ್ರಧಾನಿ ಮೋದಿ ಅವರಿಗೆ ನಮ್ಮ ಸರ್ಕಾರ ದುಡ್ಡು ಕೊಡ್ತೀವಿ ಅಕ್ಕಿ ಕೊಡಿ ಎಂದು ಅಕ್ಕಿ ಕೊಡಲಿಲ್ಲ, ಹೀಗಾಗಿ ಪತ್ರಿ ಬಿಪಿಎಲ್ ಕಾರ್ಡ್‍ದಾರರಿಗೆ 170 ರೂಪಾಯಿ ಕೊಡುತ್ತಿದ್ದೇವೆ ಎಂದರು,
ನಿಮ್ಮ ಪಕ್ಷ ಅಧಿಕಾರವಿರುವ ಯಾವ ರಾಜ್ಯದಲ್ಲಾದರೂ 10 ಕೆಜಿ ಅಕ್ಕಿ ಕೊಡುತ್ತಿರುವುದು ನಿಜವೇ ಅದರೇ ನಾನು ರಾಜಕೀಯ ನಿವೃತ್ತಿ ಕೊಡುತ್ತೇನೆ ಎಂದು ಸಿಎಂ ಘೋಷಣೆ ಮಾಡಿದರು, ಮೋದಿಯವರು ಆದಿಯಾಗಿ ಪಂಚ ಗ್ಯಾರಂಟಿ ಯೋಜನೆಗಳು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು, ನಾವು ಜಾರಿ ಮಾಡಿದ್ದೇವೆ, ಜಾರಿ ಮಾಡಿದರೆ ರಾಜ್ಯದ ಬೊಕ್ಕಸ ಖಾಲಿ ಎಂದ್ರು, ಹಾಗೂ ಆಯ್ತಾ? ಎಲ್ಲಾ ಗ್ಯಾರಂಟಿಗಳನ್ನು ವಿರೋಧಿಸಿದ ಅವರೇ ನಮ್ಮ ಯೋಜನೆಗಳನ್ನು ನಕಲು ಮಾಡಿದರು, ಅವರು ಬಡವರ ವಿರೋಧಿಗಳು ಎಂದು ಕುಟುಕಿದರು,
ಇನ್ನು ರಾಜ್ಯದ ಪಾಲಿನ ತೆರಿಗೆಯನ್ನು ಸಮರ್ಪಕವಾಗಿ ಕೇಂದ್ರ ನೀಡುತ್ತಿಲ್ಲ, ನಾಲ್ಕುವರೆ ಲಕ್ಷ ಕೋಟಿ ರೂಪಾಯಿ ತೆರಿಗೆ ನೀಡುತ್ತಿದ್ದೇವೆ, ಆದರೆ 60 ಸಾವಿರ ಕೋಟಿ ರೂಪಾಯಿ ಮಾತ್ರ ನಮಗೆ ವಾಪಸ್ ಕೊಡುತ್ತಿದ್ದಾರೆ, ಬಡವರು ರೈತರಿಗೆ ಅನ್ಯಾಯವಾಗುತ್ತಿದೆ, ನಬಾರ್ಡ್‍ನಿಂದ ನಮ್ಮ ರೈತರಿಗೆ ಕೇಂದ್ರದಿಂದ ಮೋಸ ಆಗಿದೆ, ಈ ಬಗ್ಗೆ ಯಾವತ್ತಾದರೂ ಹೆಚ್ ಡಿ ದೇವೇಗೌಡ ಅವರೇ, ಕುಮಾರಸ್ವಾಮಿ ಯಾವತ್ತಾದರೂ ಈ ಬಗ್ಗೆ ಕೇಂದ್ರಕ್ಕೆ ಪ್ರಶ್ನಿಸಿದ್ದೀರಾ ಎಂದು ಕೇಳಿದರು, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಇವರು ಯಾರೂ ಬೆಂಬಲಿಸಿಲ್ಲ, ರಾಜ್ಯ ಯಾವ ಸಂಸದರೂ ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಅಬ್ಬರಿಸಿದರು,
ದೇವೇಗೌಡರು ಚನ್ನಪಟ್ಟಣದಲ್ಲಿ ಸಿದ್ರಾಮಯ್ಯನ ಗರ್ವಭಂಗ ಮಾಡ್ತೀನಿ, ಅಂತಾ ಹಲ್ಲು ಕಚ್ಚಿಕೊಂಡು ಹೇಳಿದ್ರು, ಸರ್ಕಾರ ಕಿತ್ತೊಗೆಯಿರಿ ಅಂದ್ರು, ನನಗಿಂತ ದೇವೇಗೌಡರು 15 ವರ್ಷ ದೊಡ್ಡವರು, ಅವರಿಂದ ಇಂತಹ ಮಾತು ನಾನು ನಿರೀಕ್ಷೆ ಮಾಡಿರಲಿಲ್ಲ ಎಂದು ತಿರುಗೇಟು ನೀಡಿದರು,
ಹಾಸನದಲ್ಲಿ ಮಹಿಳೆಯರು ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ, ಅಲ್ಲಿ ಚನ್ನಪಟ್ಟಣಕ್ಕೆ ಹೋಗಿ ನಿಖಿಲ್ ಪರ ಅಪ್ಪ-ಅಜ್ಜ ಇಬ್ಬರೂ ಕಣೀರು ಹಾಕ್ತಾರೆ, ಇಲ್ಲಿ ಕಣ್ಣೀರು ಹಾಕಬೇಕಿತ್ತು ಎಂದು ತಿವಿದರು, ನಾನು ಜೆಡಿಎಸ್ ಬಿಡಲಿಲ್ಲ, ಆ ಹಿಂದೆ ಸಮಾವೇಶ ಮಾಡಿದ್ದಕ್ಕೆ ಅವರೇ ಉಚ್ಚಾಟಿಸಿದರು, ಕೋಮುವಾದಿಗಳ ಜೊತೆ ಸೇರಿಕೊಂಡಿರವ ಜೆಡಿಎಸ್ ನಾವು ಜಾತ್ಯಾತೀತ ಎಂದು ಹೇಳಿಕೊಳ್ಳವ ನಿಮಗೆ ಯಾವುದೇ ನೈತಿಕತೆ ಇಲ್ಲ ಎಂದು ಗುಡುಗಿದರು,
ಅಭಿಮಾನಿಗಳೇ ದೇವರು ಎಂದು ವರನಟ ಡಾ ರಾಜಕುಮಾರ್ ಹೇಳಿದ್ರು, ನಮಗೆ ಮತದಾರ ಬಂಧುಗಳೇ ದೇವರು, ಇದು ಕಾಂಗ್ರೆಸ್ ಪಕ್ಷದ ಸಮಾವೇಶ ಮಾತ್ರವಲ್ಲ ಇದು ಸ್ವಾಭಿಮಾನ ಒಕ್ಕೂಟದ ಸಮಾವೇಶ, ಪಕ್ಷವನ್ನು ಸೇರಿಸಿಕೊಂಡು ಸಮಾವೇಶ ಮಾಡಿದ್ದೇವೆ, ಮತದಾರ ಬಂಧುಗಳಿಗೆ ಕೃತಜ್ಞತೆ ಸಲ್ಲಿಸಲು, ಈ ಸಮಾವೇಶ ಎಂದು ಸಿಎಂ ಒತ್ತಿ ಹೇಳಿದರು, ದಾರಿ ತಪ್ಪಿಸುವ ಬಿಜೆಪಿ-ಜೆಡಿಎಸ್ ಮಾತನ್ನು ಕೇಳಬೇಡಿ ಎಂದು ಸಿಎಂ ಕರೆ ನೀಡಿದರು,

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

ದೇಶ

ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.

ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.

ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

Trending