Connect with us

ದೇಶ

ಮಹಿಳಾ ಅಭಿಮಾನಿ ಸಾವು; ಮೃತಳ ಕುಟುಂಬಕ್ಕೆ ಅಗತ್ಯ ನೆರವಿನ ಭರವಸೆ ನೀಡಿದ ಅಲ್ಲು ಅರ್ಜುನ್​​ ತಂಡ

Published

on

ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರ ‘ಪುಷ್ಪ-2: ದಿ ರೂಲ್​​​’ ಇಂದು ಅದ್ಧೂರಿಯಾಗಿ ಬಿಡುಗಡೆ ಆಗಿದ್ದು, ಬಹುತೇಕ ಮೆಚ್ಚುಗೆ ವ್ಯಕ್ತವಾಗಿದೆ. ಆದ್ರೆ ದುರ್ಘಟನೆಯೊಂದರಲ್ಲಿ, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸದ್ಯ ಈ ಪ್ರಕರಣದ ಬಗ್ಗೆ ಅಲ್ಲು ಅರ್ಜುನ್​​ ತಂಡ ಪ್ರತಿಕ್ರಯೆ ನೀಡಿದೆ.

ಮಹಿಳಾ ಅಭಿಮಾನಿ ಸಾವು: ಇಂದು ಸಿನಿಮಾದ ಅದ್ಧೂರಿ ಬಿಡುಗಡೆ ಹಿನ್ನೆಲೆ, ಕಳೆದ ರಾತ್ರಿ ಹೈದರಾಬಾದ್​ನ ಆರ್​ಟಿಸಿ ಕ್ರಾಸ್ ರೋಡ್​​ನ ಸಂಧ್ಯಾ ಥಿಯೇಟರ್​ನಲ್ಲಿ ಬೆನಿಫಿಟ್ ಶೋ (ಪ್ರೀ ರಿಲೀಸ್​​/ಸ್ಪೆಷಲ್​ ಶೋ) ಏರ್ಪಡಿಸಲಾಗಿತ್ತು. ಇಲ್ಲಿಗೆ ಅಲ್ಲು ಅರ್ಜುನ್​ ಆಗಮಿಸಿದ್ದರು. ಹಾಗಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಬಂದು ಜಮಾಯಿಸಿದ್ದರು. ಸ್ಟಾರ್ ಹೀರೋನನ್ನು ನೋಡಲು ಹೆಚ್ಚಿನ ಸಂಖ್ಯೆಯ ಜನರು ಮುಗಿಬಿದ್ದ ಹಿನ್ನೆಲೆ, ಕಾಲ್ತುಳಿತ ಉಂಟಾಯಿತು. ಘಟನೆಯಲ್ಲಿ ಮಹಿಳಾ ಅಭಿಮಾನಿ ಓರ್ವರು ಮೃತಪಟ್ಟಿದ್ದಾರೆ.

ಪರಿಸ್ಥಿತಿ ನಿಯಂತ್ರಿಸುವ ಸಲುವಾಗಿ, ಪೊಲೀಸರು ಜನರನ್ನು ಚದುರಿಸುವ ವೇಳೆ ರೇವತಿ ಎಂಬ ಮಹಿಳೆ ತಮ್ಮ ಮಗನೊಂದಿಗೆ ಕೆಳಗೆ ಬಿದ್ದಿದ್ದಾರೆ. ಕಾಲ್ತುಳಿತಕ್ಕೆ ಒಳಗಾಗಿ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಆ ಕೂಡಲೇ ಪೊಲೀಸರು ಅಮ್ಮ ಮಗನನ್ನು ಪಕ್ಕಕ್ಕೆ ಕರೆದೊಯ್ದು ಸಿಪಿಆರ್ ಮಾಡಿದ್ದಾರೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮಗನ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಹೀಗಿದೆ ಅಲ್ಲು ಅರ್ಜುನ್ ತಂಡದ ಪ್ರತಿಕ್ರಿಯೆ? ಸಂಧ್ಯಾ ಥಿಯೇಟರ್​ನಲ್ಲಾದ ಘಟನೆಗೆ ಪ್ರತಿಕ್ರಿಯಿಸಿದ ಅಲ್ಲು ಅರ್ಜುನ್ ತಂಡ, ಕಾಲ್ತುಳಿತದ ಘಟನೆ ನಿಜಕ್ಕೂ ದುರಾದೃಷ್ಟಕರ. ಸದ್ಯ ಬಾಲಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕುಟುಂಬಕ್ಕೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದೆ.

ಸುಳ್ಳು ಸುದ್ದಿಗಳನ್ನು ಹರಡಿಸಬೇಡಿ: ಗಾಯಗೊಂಡ ಬಾಲಕ ಶ್ರೀತೇಜ್ ಕಿಮ್ಸ್​​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 78 ಗಂಟೆ ಕಳೆಯೋವರೆಗೂ ಬಾಲಕನ ಆರೋಗ್ಯದ ಬಗ್ಗೆ ಏನೂ ಹೇಳಲಾಗದು. ಸದ್ಯ ಶ್ರೀತೇಜ್‌ಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆದ್ರೆ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಹಲವು ಯೂಟ್ಯೂಬ್ ಚಾನಲ್​​ಗಳು ಬಾಲಕ ಮೃತಪಟ್ಟಿದ್ದಾನೆ ಎಂದು ಸುಳ್ಳು ಸುದ್ದಿ ಹರಡಿಸಲಾಗುತ್ತಿದೆ. ಈ ಬಗ್ಗೆ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ. ದಯವಿಟ್ಟು ಇಂತಹ ಸುದ್ದಿಗಳನ್ನು ಪ್ರಸಾರ ಮಾಡಬೇಡಿ ಎಂದ ಅಲ್ಲು ಅರ್ಜುನ್​​ ತಂಡ, ಎಲ್ಲರೂ ತಮ್ಮ ಬೆಂಬಲಕ್ಕೆ ನಿಲ್ಲುವಂತೆ ಕೋರಿದೆ.

ಮೈತ್ರಿ ಮೂವಿ ಮೇಕರ್ಸ್ ಹೇಳಿಕೆ: ಪುಷ್ಪ 2 ನಿರ್ಮಿಸಿರುವ ದಕ್ಷಿಣ ಚಿತ್ರರಂಗದ ಖ್ಯಾತ ಚಲನಚಿತ್ರ ನಿರ್ಮಾಣ ಸಂಸ್ಥೆ ಈ ಬಗ್ಗೆ ಸೋಷಿಯಲ್​ ಮೀಡಿಯಾ ಪೋಸ್ಟ್​ ಮೂಲಕ ಸಂತಾಪ ವ್ಯಕ್ತಪಡಿಸಿದೆ. ತಮ್ಮ ಅಧಿಕೃತ ಎಕ್ಸ್​ ಪೋಸ್ಟ್​​ನಲ್ಲಿ, ”ಕಳೆದ ರಾತ್ರಿಯ ಸ್ಕ್ರೀನಿಂಗ್ ಸಮಯದಲ್ಲಿ ಸಂಭವಿಸಿರುವ ದುರಂತ ನಮಗೆ ತೀವ್ರ ದುಃಖ ನೀಡಿದೆ. ನಮ್ಮ ಪ್ರಾರ್ಥನೆ ಆ ಕುಟುಂಬ ಮತ್ತು ಚಿಕಿತ್ಸೆಗೊಳಗಾಗಿರುವ ಚಿಕ್ಕ ಮಗುವಿನೊಂದಿಗಿದೆ. ಈ ಕಠಿಣ ಸಂದರ್ಭ ಅವರೊಂದಿಗೆ ನಿಲ್ಲಲು, ಸಾಧ್ಯವಿರುವ ಎಲ್ಲಾ ಬೆಂಬಲ ನೀಡಲು ನಾವು ಬದ್ಧರಾಗಿದ್ದೇವೆ” ಎಂದು ಬರೆದುಕೊಂಡಿದ್ದಾರೆ.

ಸಿಖಂದರಾಬಾದ್‌ನ ಕಿಮ್ಸ್ ಆಸ್ಪತ್ರೆ ಹೇಳಿಕೆ: ಗಾಯಗೊಂಡ ಬಾಲಕನಿಗೆ ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. 8 ವರ್ಷದ ಮಗುವನ್ನು ಅರೆಪ್ರಜ್ಞಾವಸ್ಥೆಯಲ್ಲಿ ಎಲರ್ಜೆನ್ಸಿ ರೂಮ್​ಗೆ ತರಲಾಯಿತು. ಅದಕ್ಕೂ ಮೊದಲು, ಪೊಲೀಸ್ ಮತ್ತು ಜನರು ಪರಿಸ್ಥಿತಿ ಹದಗೊಳಿಸುವ ಪ್ರಯತ್ನ ಮಾಡಿದ್ದರು. ಸಿಪಿಆರ್ ಕೊಡಲಾಗಿತ್ತು. ನಂತರ, ಆಸ್ಪತ್ರೆಗೆ ದಾಖಲಿಸಲಾಯಿತು. ಮಗುವಿನ ಉಸಿರಾಟದಲ್ಲಿ ತೊಂದರೆ ಇತ್ತು. ಮೆದುಳು ಮತ್ತು ಬೆನ್ನುಮೂಳೆಯ ಸಿ.ಟಿ ಸ್ಕ್ಯಾನ್ ಮಾಡಲಾಗಿದೆ. ಯಾವುದೇ ಗಮನಾರ್ಹ ಅಸಹಜತೆಗಳಿಲ್ಲ. ಲ್ಯಾಕ್ಟಿಕ್ ಆಸಿಡೋಸಿಸ್ ಸುಧಾರಿಸಿದ್ದರೂ ಕೂಡಾ ಮಗು ಸಂಪೂರ್ಣ ಚೇತರಿಸಿಕೊಂಡಿಲ್ಲ. ಸ್ಥಿತಿ ಗಂಭೀರವಾಗಿದ್ದು, ವೈದ್ಯಕೀಯ ತಂಡ ನಿಗಾ ವಹಿಸಿದೆ.

ಮುಂದುವರಿದ ತನಿಖೆ: ಸಂಧ್ಯಾ ಥಿಯೇಟರ್​​ನಲ್ಲಾದ ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆಂದು ವರದಿಯಾಗಿದೆ. ಈ ಕುರಿತು ಚಿಕ್ಕಡಪಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಮೈತ್ರಿ ಮೂವಿ ಮೇಕರ್ಸ್ ಮತ್ತು ಮುತ್ತಂಸೆಟ್ಟಿ ಮೀಡಿಯಾ ಈ ಬಿಗ್​ ಬಜೆಟ್​ ಪ್ರಾಜೆಕ್ಟ್​​​ ಅನ್ನು ನಿರ್ಮಾಣ ಮಾಡಿದೆ. ಚಿತ್ರಕ್ಕೆ ಸುಕುಮಾರ್ ಆ್ಯಕ್ಷನ್​ ಕಟ್​ ಹೇಳಿದ್ದಾರೆ. ಸೀಕ್ವೆಲ್​​ನಲ್ಲಿ ಪುಷ್ಪ ರಾಜ್ ಕಥೆ ಮುಂದುವರಿದಿದೆ. ಪುಷ್ಪ ರಾಜ್​ ಪಾತ್ರದಲ್ಲಿ ಅಲ್ಲು ಅರ್ಜುನ್, ಶ್ರೀವಲ್ಲಿಯಾಗಿ ರಶ್ಮಿಕಾ ಮಂದಣ್ಣ ಮತ್ತು ಫಹಾದ್ ಫಾಸಿಲ್ ಭನ್ವರ್ ಸಿಂಗ್ ಶೇಖಾವತ್ ಪಾತ್ರದಲ್ಲಿ ಮುಂದುವರಿದಿದ್ದಾರೆ. ಸಿನಿಮಾ ತನ್ನ ಮೊದಲ ದಿನ ಬರೋಬ್ಬರಿ 270 ಕೋಟಿ ರೂಪಾಯಿ ಕಲೆಕ್ಷನ್​​ ಮಾಡಲಿದೆ ಎಂದು ಇಂಡಸ್ಟ್ರಿ ಮೂಲಗಳು ತಿಳಿಸಿವೆ.

ದೇಶ

“ನರಕದಲ್ಲಿ ಬದುಕಬೇಕಾಗುತ್ತದೆ”: ಇರಾನ್‌ಗೆ ಟ್ರಂಪ್ ಎಚ್ಚರಿಕೆ

Published

on

By

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ತಮ್ಮ Truth Social ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, “ಇರಾನ್ ಮೂಲಸೌಕರ್ಯಗಳ ಮೇಲೆ ಭಾರೀ ದಾಳಿ ನಡೆಯಬಹುದು. ಇತಿಹಾಸದಲ್ಲಿ ಕಾಣದ ರೀತಿಯ ಪ್ರತಿಕ್ರಿಯೆ ಎದುರಿಸಬೇಕಾಗುತ್ತದೆ” ಎಂದು ಕಠಿಣ ಭಾಷೆಯಲ್ಲಿ ಹೇಳಿದ್ದಾರೆ.

ಇದರ ಬೆನ್ನಲ್ಲೇ, ಇರಾನ್ ಒಳಗೆ ಪತನಗೊಂಡಿದ್ದ ಎಫ್-15 ಯುದ್ಧವಿಮಾನ ಕಮಾಂಡರ್‌ರನ್ನು ಅಮೆರಿಕಾ ವಿಶೇಷ ಪಡೆಗಳು ಯಶಸ್ವಿಯಾಗಿ ರಕ್ಷಿಸಿರುವುದನ್ನು ಟ್ರಂಪ್ ಶ್ಲಾಘಿಸಿದ್ದಾರೆ. ಶತ್ರು ಪ್ರದೇಶದಲ್ಲಿದ್ದ ಗಾಯಗೊಂಡ ಸೈನಿಕರನ್ನು ಸುರಕ್ಷಿತವಾಗಿ ಕರೆತಂದಿರುವುದು ಸಾಹಸಮಯ ಕಾರ್ಯಾಚರಣೆಯಾಗಿದೆ ಎಂದು ಅವರು ಹೇಳಿದ್ದಾರೆ.

ಇದೀಗ ಹಾರ್ಮುಜ್ ಜಲಸಂಧಿ ವಿವಾದ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಗಲ್ಫ್ ರಾಷ್ಟ್ರಗಳಿಂದ ಯುರೋಪ್ ಮತ್ತು ಏಷ್ಯಾಕ್ಕೆ ತೈಲ ಸಾಗಾಣಿಕೆ ಮಾಡುವ ಪ್ರಮುಖ ಮಾರ್ಗವೇ ಇದು. ಇರಾನ್ ಈ ಮಾರ್ಗದ ಮೇಲೆ ನಿಯಂತ್ರಣ ಸಾಧಿಸಿರುವುದರಿಂದ ಜಾಗತಿಕ ತೈಲ ಬೆಲೆ ಏರಿಕೆಯ ಆತಂಕ ಎದುರಾಗಿದೆ.

ಇದರ ನಡುವೆ ಇರಾನ್ ಕೂಡ ತಿರುಗೇಟು ನೀಡಿದ್ದು, “ನಮ್ಮ ಮೇಲೆ ದಾಳಿ ಮಾಡಿದರೆ ಅಮೆರಿಕದ ಸೇನಾ ನೆಲೆಗಳ ಮೇಲೆ ಪ್ರತಿದಾಳಿ ನಡೆಸುತ್ತೇವೆ” ಎಂದು ಎಚ್ಚರಿಸಿದೆ.

ಒಟ್ಟಿನಲ್ಲಿ, ಅಮೆರಿಕಾ-ಇರಾನ್ ನಡುವಿನ ವಾಕ್ಸಮರ ಮತ್ತು ಯುದ್ಧದ ವಾತಾವರಣ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಜಾಗತಿಕ ಶಾಂತಿಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.

Continue Reading

ಕ್ರೀಡೆ

ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!

Published

on

By

ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.

ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.

ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.

ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.

ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.

ಆರ್ಸಿಬಿ ಬ್ಯಾಟಿಂಗ್ ವಿವರ:

  • ವಿರಾಟ್ ಕೊಹ್ಲಿ – 28 (18)
  • ಫಿಲ್ ಸಾಲ್ಟ್ – 46 (30)
  • ದೇವದತ್ತ ಪಡಿಕಲ್ – 50 (29)
  • ರಜತ್ ಪಾಟೀದಾರ್ – 48* (19)
  • ಟಿಮ್ ಡೇವಿಡ್ – 70* (25)
Continue Reading

ದೇಶ

ಪೊಲೀಸ್ ವಾಹನವೇ ಪ್ರವೇಶಿಸದ ಗ್ರಾಮ: ಶಾಂತಿಯುತ ಬದುಕಿನ ಅದ್ಭುತ ಕಥೆ

Published

on

By

ಇತ್ತೀಚಿನ ದಿನಗಳಲ್ಲಿ ಸಣ್ಣ ವಿಷಯಕ್ಕೂ ಜಗಳ-ಕೇಸು ಸಾಮಾನ್ಯವಾಗಿರುವ ಸಂದರ್ಭದಲ್ಲೇ, ಬಿಹಾರದ ಒಂದು ಹಳ್ಳಿ ದೇಶಕ್ಕೆ ಮಾದರಿಯಾಗಿ ಹೊರಹೊಮ್ಮಿದೆ. ಕಲಿಯಾಚಕ್ ಗ್ರಾಮ ಕಳೆದ 118 ವರ್ಷಗಳಿಂದ ಯಾವುದೇ ಅಪರಾಧ ದಾಖಲಾಗದೇ ಶಾಂತಿಯುತ ಜೀವನ ನಡೆಸುತ್ತಿರುವುದು ವಿಶೇಷ.

ನಳಂದ ಜಿಲ್ಲೆಯ ಈ ಗ್ರಾಮದಲ್ಲಿ ಸ್ಥಾಪನೆಯಾದ ದಿನದಿಂದಲೂ ಗಂಭೀರ ಅಪರಾಧಗಳೇ ನಡೆದಿಲ್ಲ. ಅಷ್ಟೇ ಅಲ್ಲ, ಇಷ್ಟು ವರ್ಷಗಳಲ್ಲಿ ಪೊಲೀಸ್ ಸೈರನ್ ಕೂಡ ಕೇಳಿಸಿಲ್ಲ ಎಂಬುದು ಆಶ್ಚರ್ಯಕರ ಸಂಗತಿ. ಗ್ರಾಮದಲ್ಲಿ ಯಾವುದೇ ಸಣ್ಣಪುಟ್ಟ ವಿವಾದಗಳು ಉಂಟಾದರೂ, ಹಿರಿಯರು ಕೂತು ಸಮಸ್ಯೆಯನ್ನು ಪರಿಹರಿಸುತ್ತಾರೆ.

ಈ ಗ್ರಾಮ ಹಿಲ್ಸಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುತ್ತದೆ. ಆದರೆ ಪೊಲೀಸ್ ದಾಖಲೆಗಳಲ್ಲಿ ಈ ಗ್ರಾಮದಿಂದ ಒಂದೇ ಒಂದು ದೂರು ಕೂಡ ಇಲ್ಲದಿರುವುದು ಅಧಿಕಾರಿಗಳನ್ನೇ ಅಚ್ಚರಿಗೊಳಿಸಿದೆ.

ಗ್ರಾಮದಲ್ಲಿ ಸುಮಾರು 60 ಕುಟುಂಬಗಳು, 500 ಜನರು ವಾಸಿಸುತ್ತಿದ್ದು, ವಿವಿಧ ಜಾತಿ-ವರ್ಗಗಳ ಜನರು ಸಹೋದರತ್ವದಿಂದ ಬದುಕುತ್ತಿದ್ದಾರೆ. “ಗ್ರಾಮದ ಸಮಸ್ಯೆಗಳನ್ನು ಗ್ರಾಮದಲ್ಲೇ ಬಗೆಹರಿಸಬೇಕು” ಎಂಬುದು ಇವರ ಮೂಲ ತತ್ವವಾಗಿದೆ.

ಈ ಶಾಂತಿಯುತ ವಾತಾವರಣಕ್ಕೆ ಪ್ರಮುಖ ಕಾರಣ ಮಾಜಿ ಪಂಚಾಯಿತಿ ಅಧ್ಯಕ್ಷ ಸಾಧು ಶರಣ್ ಸಿಂಗ್ ಅವರ ಮಾರ್ಗದರ್ಶನ. ಅವರ ಪ್ರಯತ್ನದಿಂದ ಈ ಗ್ರಾಮ ಮಾದರಿಯಾಗಿ ರೂಪುಗೊಂಡಿದೆ.

ಇಲ್ಲಿನ ಯುವಕರು ಕೆಟ್ಟ ಅಭ್ಯಾಸಗಳಿಂದ ದೂರವಿದ್ದು ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳತ್ತ ಗಮನ ಹರಿಸುತ್ತಿದ್ದಾರೆ.

ಗಮನಿಸಿ: ಮೇಲಿನ ವಿವರಗಳು ಬಿಹಾರದ ಕಲಿಯಾಚಕ್ ಗ್ರಾಮದ ಕುರಿತು ಸ್ಥಳೀಯರು ಮತ್ತು ಪೊಲೀಸ್ ಅಧಿಕಾರಿಗಳು ಒದಗಿಸಿದ ಮಾಹಿತಿಯನ್ನು ಆಧರಿಸಿವೆ. ಇದು ಅಪರಾಧ ಮುಕ್ತ ಗ್ರಾಮವಾಗಿ ದೇಶದಲ್ಲಿ ವಿಶೇಷ ಮನ್ನಣೆಯನ್ನು ಗಳಿಸಿದೆ.

ಒಟ್ಟಿನಲ್ಲಿ, ಕಲಿಯಾಚಕ್ ಗ್ರಾಮವು ಒಗ್ಗಟ್ಟು, ಸಹೋದರತ್ವ ಮತ್ತು ಶಾಂತಿಯುತ ಬದುಕಿನ ನಿಜವಾದ ಮಾದರಿಯಾಗಿ ಇಡೀ ದೇಶಕ್ಕೆ ಪ್ರೇರಣೆಯಾಗಿದೆ.

Continue Reading

Trending