Connect with us

ದೇಶ

ಜಿಲ್ಲಾ ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿ ದೋಸ್ತಿ: ನಿಖಿಲ್

ನವದೆಹಲಿ: ಮುಂಬರುವ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡುವು ನಿಟ್ಟಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು,
ಸ್ಧಳೀಯ ಸಂಸ್ಧೆಗಳ ಚುನಾವಣೆ ಹಾಗೂ ಮುಂದಿನ ದಿನಗಳಲ್ಲಿ ಕರ್ನಾಟಕದಲ್ಲಿ ಎನ್‍ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಅಗತ್ಯ ಸಲಹೆ ಸೂಚನೆ ಪಡೆದುಕೊಳ್ಳಲು ನಿಖಿಲ್ ಅವರು ಸೋಮವಾರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದಾರೆ,
ಈಗಾಗಲೇ ಗೃಹ ಸಚಿವರು ಸೋಮವಾರ ತಮ್ಮನ್ನು ಭೇಟಿಯಾಗುವಂತೆ ನಿಖಿಲ್ ಅವರಿಗೆ ಸಮಯ ನೀಡಿದ್ದು, ಅದಕ್ಕೆ ಪೂರ್ವಭಾವಿಯಾಗಿ ಅವರು ನವದೆಹಲಿಯಲ್ಲಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ,
ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಕೂಟ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಬಲ ಹೋರಾಟ ನಡೆಸಿ ಉತ್ತಮ ಫಲಿತಾಂಶ ಸಾಧಿಸಿದೆ, ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಂಬಿಕೆ ಇರಿಸಿದ್ದಾರೆ, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಒಟ್ಟಾಗಿ ಕೆಲಸ ಮಾಡುವ ಅಗತ್ಯ ಇದೆ ಎಂದು ನಿಖಿಲ್ ಅವರು ರಾಧಾ ಮೋಹನ್ ದಾಸ್ ಅಗರ್ವಾಲ್ ಅವರಿಗೆ ಹೇಳಿದ್ದಾರೆ,

ಕ್ರೀಡೆ

ಭಾರತ–ಪಾಕಿಸ್ತಾನ ಟಿ20 ವಿಶ್ವಕಪ್ ಮುಖಾಮುಖಿ: ‘ನಾವು ಸಿದ್ಧ’ ಎಂದ ತಿಲಕ್ ವರ್ಮಾ

ನವದೆಹಲಿ, ಫೆ.11: ಫೆಬ್ರವರಿ 15ರಂದು ಕೊಲಂಬೊದಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ (T20 World Cup) ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಸಂಪೂರ್ಣ ಸಿದ್ಧವಾಗಿದೆ ಎಂದು ತಿಲಕ್ ವರ್ಮಾ (Tilak Varma) ತಿಳಿಸಿದ್ದಾರೆ.

ನಮೀಬಿಯಾ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ನಾವು ಈಗಾಗಲೇ ಸಿದ್ಧರಾಗಿದ್ದೇವೆ. ಆ ಪಂದ್ಯಕ್ಕಾಗಿ ತಂಡ ಉತ್ಸುಕವಾಗಿದೆ” ಎಂದು ಹೇಳಿದರು.

ಅನಿಶ್ಚಿತತೆಗೆ ತೆರೆ

ಸರ್ಕಾರದ ನಿರ್ದೇಶನಗಳ ಹಿನ್ನೆಲೆ ಪಾಕಿಸ್ತಾನ ಕ್ರಿಕೆಟ್ ಬೋರ್ಡ್ (PCB) ಆರಂಭದಲ್ಲಿ ಪಂದ್ಯದಿಂದ ಹಿಂದೆ ಸರಿಯುವುದಾಗಿ ಸೂಚಿಸಿತ್ತು. ಆದರೆ ನಂತರ ಎಲ್ಲಾ ನಿಗದಿತ ಪಂದ್ಯಗಳಲ್ಲಿ ಭಾಗವಹಿಸುವುದಾಗಿ ಐಸಿಸಿಗೆ ತಿಳಿಸಿದ್ದರಿಂದ ಹೈ-ವೋಲ್ಟೇಜ್ ಪಂದ್ಯ ಸುತ್ತಲಿನ ಗೊಂದಲ ಅಂತ್ಯಗೊಂಡಿದೆ.

ಗಾಯದಿಂದ ಮರಳಿದ ತಿಲಕ್

ಗಾಯದ ಸಮಸ್ಯೆಯಿಂದ ಹೊರಗುಳಿದಿದ್ದ ತಿಲಕ್ ವರ್ಮಾ ವಿಶ್ವಕಪ್ ತಂಡಕ್ಕೆ ಮರಳಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. “ವಿಶ್ವಕಪ್ ಗೆಲ್ಲುವುದೇ ನಮ್ಮ ಗುರಿ. ತಂಡಕ್ಕಾಗಿ ಯಾವಾಗಲೂ ಕೊಡುಗೆ ನೀಡಲು ಸಿದ್ಧನಿದ್ದೇನೆ” ಎಂದರು.

ಅಭ್ಯಾಸ ಪಂದ್ಯದಲ್ಲಿ ಭಾರತ ‘ಎ’ ತಂಡ ನಮೀಬಿಯಾವನ್ನು 100 ರನ್‌ಗಳೊಳಗೆ ಆಲೌಟ್ ಮಾಡಿರುವುದರಿಂದ ಸೂರ್ಯಕುಮಾರ್ ಯಾದವ್ ನೇತೃತ್ವದ ತಂಡ ಫೇವರಿಟ್ ಎನ್ನಲಾಗುತ್ತಿದೆ.

ಅಭಿಷೇಕ್ ಶರ್ಮಾ ಸ್ಥಿತಿ

ಹೊಟ್ಟೆ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಅಭಿಷೇಕ್ ಶರ್ಮಾ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ. ಆದರೆ ಮುಂದಿನ ಪಂದ್ಯದಲ್ಲಿ ಅವರು ಹಾಗೂ ಜಸ್ಪ್ರೀತ್ ಬುಮ್ರಾ ಆಡಲಿರುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದು ತಿಲಕ್ ತಿಳಿಸಿದರು.

ಟಿ20 ಸ್ವರೂಪದಲ್ಲಿ ಯಾವುದೇ ತಂಡವನ್ನು ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದರು.

Continue Reading

ದೇಶ

ಬೇಸಿಗೆಗೆ ಮುನ್ನ ಬೆಂಗಳೂರು ಜಲಮಂಡಳಿ ಎಚ್ಚರಿಕೆ: ಕಾವೇರಿ ನೀರಿಗೆ ಪರ್ಯಾಯ ಯೋಜನೆ

ಬೆಂಗಳೂರು: ಶಿವರಾತ್ರಿ ಮುಗಿಯುತ್ತಿದ್ದಂತೆ ನಗರದಲ್ಲಿ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಮಾರ್ಚ್‌ನಿಂದ ಅಧಿಕೃತವಾಗಿ ಬೇಸಿಗೆ (Summer) ಆರಂಭವಾಗಲಿದ್ದು, ನೀರಿನ ಅಭಾವದ ಆತಂಕ ಸಹಜ. ಆದರೆ ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ (Drinking Water) ಕೊರತೆ ಆಗದಂತೆ ಬೆಂಗಳೂರು ಜಲಮಂಡಳಿ (Bengaluru Water Board) ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

54 ಟಿಎಂಸಿ ನೀರು ಲಭ್ಯ

ಸದ್ಯ ಕೆಆರ್‌ಎಸ್ ಜಲಾಶಯದಲ್ಲಿ 54 ಟಿಎಂಸಿ ನೀರು ಲಭ್ಯವಿದ್ದು, ಜುಲೈವರೆಗೆ ಬೆಂಗಳೂರಿಗೆ ಅಗತ್ಯವಿರುವ 14 ಟಿಎಂಸಿ ನೀರು ಸಾಕಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಟ್ಯಾಂಕರ್ ವ್ಯವಸ್ಥೆ ಸಿದ್ಧ

ನೀರಿನ ಕೊರತೆ ಕಾಣಿಸಬಹುದಾದ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲು ಜಲಮಂಡಳಿ ಯೋಜನೆ ರೂಪಿಸಿದೆ. ಬೋರ್‌ವೆಲ್‌ ನೀರು ಬೇಸಿಗೆಯಲ್ಲಿ ಕಡಿಮೆಯಾಗುವ ಸಾಧ್ಯತೆ ಇರುವುದರಿಂದ, ಕಳೆದ ವರ್ಷದಿಂದಲೇ ಬೋರ್‌ವೆಲ್ ನಿರ್ವಹಣೆಯನ್ನು ಜಲಮಂಡಳಿ ವಹಿಸಿಕೊಂಡಿದೆ. ಅಂತರ್ಜಲ ಕುಸಿತ ತಡೆಯಲು ಕ್ರಮ ಕೈಗೊಳ್ಳಲಾಗಿದೆ.

ನೀರು ವ್ಯರ್ಥ ಮಾಡಿದ್ರೆ ದಂಡ

ಕಾವೇರಿ ನೀರನ್ನು ಬೈಕ್, ಕಾರು ತೊಳೆಯಲು ಬಳಸುವುದು ಅಥವಾ ಅನಗತ್ಯವಾಗಿ ಪೋಲು ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಜಲಮಂಡಳಿ ಸಿದ್ಧವಾಗಿದೆ. ವೀಕ್ಷಕರು ಹಾಗೂ ಬ್ಲೂಫೋರ್ಸ್ ತಂಡಗಳು ಪರಿಶೀಲನೆ ನಡೆಸಲಿದ್ದು, ನಿಯಮ ಉಲ್ಲಂಘನೆಗೆ ದಂಡ ವಿಧಿಸಲಾಗುತ್ತದೆ.

ಜನರು ನೀರನ್ನು ಜಾಗರೂಕತೆಯಿಂದ ಬಳಕೆ ಮಾಡಿದರೆ ಬೇಸಿಗೆಯಲ್ಲಿ ಜಲಕ್ಷಾಮ ಸಮಸ್ಯೆ ತಗ್ಗಬಹುದು ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

Continue Reading

ದೇಶ

DONALD TRUMP : ಅಮೆರಿಕ ವಿಶ್ವದ ನಂ.1 ಇಂಧನ ಉತ್ಪಾದಕ: ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್: ಅಮೆರಿಕ ಈಗ ವಿಶ್ವದ ನಂ.1 ಇಂಧನ ಉತ್ಪಾದಕ (Energy Producer) ರಾಷ್ಟ್ರವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾವು ವಿಶ್ವದಲ್ಲೇ ಅತಿ ದೊಡ್ಡ ಇಂಧನ ರಫ್ತುದಾರರಾಗುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಕಳೆದ ಕೆಲವು ತಿಂಗಳುಗಳಲ್ಲಿ ಜಪಾನ್ (Japan), ದಕ್ಷಿಣ ಕೊರಿಯಾ (South Korea), ಭಾರತ ಸೇರಿದಂತೆ ಹಲವು ದೇಶಗಳೊಂದಿಗೆ ಮಾಡಿಕೊಂಡಿರುವ ವ್ಯಾಪಾರ ಒಪ್ಪಂದಗಳು ಅಮೆರಿಕದ ಕಲ್ಲಿದ್ದಲು (Coal) ರಫ್ತಿನಲ್ಲಿ ಗಣನೀಯ ಏರಿಕೆಗೆ ಕಾರಣವಾಗಿವೆ ಎಂದು ಟ್ರಂಪ್ ವಿವರಿಸಿದ್ದಾರೆ. “ಅಮೆರಿಕದ ಕಲ್ಲಿದ್ದಲು ಗುಣಮಟ್ಟ ಜಗತ್ತಿನಲ್ಲಿ ಅತ್ಯುತ್ತಮ” ಎಂದು ಹಲವು ರಾಷ್ಟ್ರಗಳು ನಂಬಿಕೆ ವ್ಯಕ್ತಪಡಿಸಿವೆ ಎಂದು ಅವರು ಹೇಳಿದರು.

ಭಾರತ ನಿಲುವು ಸ್ಪಷ್ಟ

ಇದೇ ವೇಳೆ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ (Vikram Misri) ಇಂಧನ ಖರೀದಿ ಕುರಿತು ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. “ಭಾರತ ತನ್ನ ರಾಷ್ಟ್ರೀಯ ಹಿತಾಸಕ್ತಿಗೆ ಅನುಗುಣವಾಗಿ, ಲಭ್ಯತೆ, ನ್ಯಾಯಯುತ ಬೆಲೆ ಮತ್ತು ಪೂರೈಕೆಯ ವಿಶ್ವಾಸಾರ್ಹತೆ ಆಧರಿಸಿ ಇಂಧನ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ತೈಲ ಮತ್ತು ಇಂಧನ ಕಂಪನಿಗಳು ಮಾರುಕಟ್ಟೆ ಪರಿಸ್ಥಿತಿ, ವೆಚ್ಚ ಹಾಗೂ ಲಾಜಿಸ್ಟಿಕ್ಸ್ ಅಂಶಗಳನ್ನು ಪರಿಗಣಿಸಿ ಖರೀದಿ ನಿರ್ಧಾರಗಳನ್ನು ಕೈಗೊಳ್ಳುತ್ತವೆ ಎಂಬುದನ್ನು ಮಿಶ್ರಿ ಒತ್ತಿ ಹೇಳಿದ್ದಾರೆ.

ಈ ಬೆಳವಣಿಗೆ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅಮೆರಿಕದ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಸೂಚನೆ ನೀಡುತ್ತಿದೆ.

Continue Reading

Trending