ರಾಜಕೀಯ
ವಕ್ಫ್ ಬಗ್ಗೆ ಮಾತನಾಡಿವನ ಬಾಯಿ ಮುಚ್ಚಿಸಿದ್ರಾ ಸಚಿನ ಜಮೀರ್?- ಸ್ಪೋಟಕ ಆಡಿಯೋ ವೈರಲ್

ವಕ್ಫ್ ಬೋರ್ಡ್ ವಿವಾದ ಇಡೀ ರಾಜ್ಯದದ್ಯಂತ ಭಾರೀ ಕೋಲಾಹಲ ವಿಬ್ಬಿಸಿದೆ, ಇದರ ಬೆನ್ನಲ್ಲೇ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷರಿಂದಲೇ ವಕ್ಫ್ ಆಸ್ತಿ ಅತಿಕ್ರಮ ಆರೋಪ ಕೇಳಿ ಬಂದಿದ್ದು, ಇದಕ್ಕೆ ಸಚಿನ ಜಮೀರ್ ಅಹ್ಮದ್ ಗರಂ ಆಗಿದ್ದಾರೆ,
ಚಿತ್ರದುರ್ಗದ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಅನ್ವರ್ ಪಾಷಾ ಎಂಬಾತ ವಕ್ಫ್ ಆಸ್ತಿಯನ್ನು ಅತಿಕ್ರಮ ಮಾಡಿದ್ದಾರೆ ಎಂದು ಮುಸ್ಲಿಂ ಮುಖಂಡ ಇಮ್ತಿಯಾಜ್ ಎಂಬುವವರು ವಿಡಿಯೋ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು,
ಚಿತ್ರದುರ್ಗದ ಆಗಸನಕಲ್ಲುವಿನ ಸರ್ವೆ ನಂ ೨೪ ರಲ್ಲಿನ ೬ ಎಕರೆ ಖಬರ್‌ಸ್ತಾನ್ ಜಾಗವನ್ನು ಅನ್ವರ್ ಪಾಷಾ ಅತಿಕ್ರಮ ಮಾಡಿದ್ದಾರೆ ಎಂದು ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ, ಈ ಬಗ್ಗೆ ಸ್ಧಳೀಯ ಮುಖಂಡರು ಸಚಿವ ಜಮೀರ್ ಅಹ್ಮದ್ ಗೆ ತಿಳಿಸಿದ್ದಾರೆ,
ವಿಷಯ ತಿಳಿಯುತ್ತಿದ್ದಂತೆ ಸಚಿವ ಜಮೀರ್ ಇಮ್ತಿಯಾಜ್ ಗೆ ಕರೆ ಮಾಡಿ ಕೆ ಅನ್ವರ್ ಪಾಷಾ ಗೆ ಕರೆ ಮಾಡಿ ಕ್ಷಮೆ ಕೇಳು ಎಂದು ಒತ್ತಡ ಹೇರಿದ್ದಾರೆ, ಅಷ್ಟೇ ಅಲ್ಲದೆ ಏನೇ ಅದರೂ ಅವನ ಜೊತೆ ನೀನು ಇರು, ಈ ಕೂಡಲೇ ವಿಡಿಯೋ ಮಾಡಿ ಪೋಸ್ಟ್ ಮಾಡು ಹಾಗೆ ನನಗೂ ಕಳಿಸು ಎಂದು ಜಮೀರ್ ಹೇಳಿದ್ದಾರೆ,
ಸದ್ಯ ಸಚಿವ ಜಮೀರ್ ಅಹ್ಮದ್ ಹಾಗೂ ಇಮ್ತಿಯಾಜ್ ನಡುವಿನ ಸಂಭಾಷಣೆಯ ಆಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದೆ,
ಬೆಂಗಳೂರು
ಅಗಸ್ಟ್ 10 ರಂದು ಬೆಂಗಳೂರು ಮೆಟ್ರೋ ಫೇಸ್-3 ಶಂಕುಸ್ಥಾಪನೆ: ಪ್ರಧಾನಿ ಮೋದಿ ಉದ್ಘಾಟನೆ ನೆರವೇರಿಸಲಿದ್ದಾರೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಮತ್ತೊಂದು ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ಫೇಸ್-3 ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 10ರಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ ಪ್ರಕಟಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 10ರಂದು ಪ್ರಧಾನಿ ಮೋದಿ ಮೆಟ್ರೋ ಯೆಲ್ಲೋ ಲೈನ್ ಅನ್ನು ಉದ್ಘಾಟಿಸುವುದರ ಜೊತೆಗೆ ಜೆಪಿ ನಗರ ವೆಗಾಸಿಟಿ ಮಾಲ್‌ನಿಂದ ಕಡಬಗೆರೆವರೆಗೆ ವಿಸ್ತರಿಸಲಾಗಿರುವ ಮೆಟ್ರೋ ಮಾರ್ಗದ ಶಂಕುಸ್ಥಾಪನೆ ಕಾರ್ಯವನ್ನು ಸಹ ನೆರವೇರಿಸಲಿದ್ದಾರೆ,” ಎಂದು ಹೇಳಿದರು.
ಈ ಯೋಜನೆಯು ಸುಮಾರು ₹17,000 ಕೋಟಿ ವೆಚ್ಚದ ಫೇಸ್-3 ಯೋಜನೆಯ ಭಾಗವಾಗಿದೆ. ಮೊದಲೇ ಯೆಲ್ಲೋ ಲೈನ್ ಶಂಕುಸ್ಥಾಪನೆಗೆ ಮೋದಿ ಅವರೇ ಆಗಿದ್ದರೆ, ಈಗ ಉದ್ಘಾಟನೆಯ ಗೌರವವೂ ಅವರಿಗೇ ಸಲ್ಲಲಿದೆ.
ಡಿಸಿಎಂ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ:
ಡಿಸಿಎಂ ಡಿ.ಕೆ. ಶಿವಕುಮಾರ್ ಮೆಟ್ರೋ ಯೋಜನೆಯಲ್ಲಿ ರಾಜ್ಯದ ಪಾತ್ರವಿದೆ ಎಂದು ಹೇಳಿರುವುದರ ಬಗ್ಗೆ ತೇಜಸ್ವಿ ಸೂರ್ಯ ಪ್ರತಿಕ್ರಿಯಿಸುತ್ತಾ, “ಇದುವರೆಗೆ ಈ ಯೋಜನೆಯ ಬಗ್ಗೆ ಯಾವ ರಾಜ್ಯ ಸಚಿವರೂ ಚಿಂತೆ ಮಾಡಿಲ್ಲ. ಪ್ರಧಾನಿ ಬರುವ ಸುದ್ದಿ ತಿಳಿಯುತ್ತಿದ್ದಂತೆ ಕ್ರೆಡಿಟ್ ಕಳಿಸಲು ಮುಂದಾಗಿದ್ದಾರೆ,” ಎಂದು ಟೀಕಿಸಿದರು.
ಫ್ಲೈಓವರ್ ಪ್ರಗತಿಯ ಮೇಲೂ ಟೀಕೆ:
“ಈಜಿಪುರದ 2.5 ಕಿ.ಮೀ ಫ್ಲೈಓವರ್‌ನ್ನು ಎಂಟು ವರ್ಷಗಳಿಂದ ಪೂರ್ಣಗೊಳಿಸಲಾಗಿಲ್ಲ. ಅದರೆ ಇದೀಗ 100 ಕಿ.ಮೀ ರಸ್ತೆಗಳ ಯೋಜನೆ ಪ್ರಾರಂಭಿಸಿದ್ದಾರೆ,” ಎಂದು ಹೇಳಿದ್ದಾರೆ.
ಮೆಟ್ರೋ ಯೋಜನೆಗೆ ಹಿಂದೆ ಸರ್ಕಾರದ ಕೊಡುಗೆ:
ಕೊರೋನಾ ಸಮಯದಲ್ಲೂ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರ್ಕಾರಗಳು ಅನುದಾನ ಒದಗಿಸಿ ಕೆಲಸ ಮುಂದುವರೆದಿದ್ದವು. ಆದರೆ ಇದೀಗ ಎಂಡಿ ನೇಮಕ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ವಿಳಂಬ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.
ರಾಜಕೀಯ
ಮಾಜಿ ಡಿಸಿಎಂ ಈಶ್ವರಪ್ಪ ಮತ್ತೆ ಭಾರೀ ವಾಗ್ದಾಳಿ: ಯಡಿಯೂರಪ್ಪ ಕುಟುಂಬ, ಬಿಜೆಪಿಗೆ ತೀವ್ರ ಕಿಡಿ

ಬಳ್ಳಾರಿ:
ಬಿಜೆಪಿಯಿಂದ ಉಚ್ಚಾಟನೆಯಾದ ನಂತರ ಸೈಲೆಂಟ್ ಆಗಿದ್ದ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಇದೀಗ ಮತ್ತೆ ಸುದ್ದಿಯಲ್ಲಿ ಮೂಡಿದ್ದಾರೆ. ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನ್ನದು ಭಾರತೀಯ ಬಿಜೆಪಿಯ ಟೀಮ್, ಯಾವುದೇ ಗುಂಪಿನೊಂದಿಗೆ ನಾನು ಹೋಗುವುದಿಲ್ಲ. ಆದರೆ ಬಿಜೆಪಿ ಶುದ್ಧೀಕರಣಗೊಳ್ಳಬೇಕು ಎಂಬುದು ಎಲ್ಲರ ಅಭಿಪ್ರಾಯ. ಅದು ನನ್ನದು ಸಹ ಆಗಿದೆ,” ಎಂದು ಪರೋಕ್ಷವಾಗಿ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಶ್ವರಪ್ಪನ ಈ ಹೇಳಿಕೆ ಕೇಸರಿಪಾಳ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಅನೇಕ ನಾಯಕರು ಈಶ್ವರಪ್ಪನ ನೇರ ಭಾಷೆಯ ವಿರುದ್ಧ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.
ಯಡಿಯೂರಪ್ಪನ ಕುಟುಂಬದ ಮದುವೆಯಲ್ಲಿ ಭಾಗವಹಿಸಿದ ಈಶ್ವರಪ್ಪ:
ಇತ್ತೀಚೆಗೆ ಈಶ್ವರಪ್ಪ ಯಡಿಯೂರಪ್ಪನ ಮೊಮ್ಮಗನ ಮದುವೆಯಲ್ಲಿ ಭಾಗವಹಿಸಿ ಎಲ್ಲರಿಗೂ ಆಶ್ಚರ್ಯ ತಂದಿದ್ದರು. ಈ ಘಟನೆಯ ಬಳಿಕ ಅವರು ಮತ್ತೆ ಪಕ್ಷದ ಪರ ನಿಂತು ಮಾತನಾಡಿದ್ದಾರೆ.
ಎಫ್‌ಐಆರ್ ದಾಖಲು:
ಇದಕ್ಕೂ ಮಿಕ್ಕಿ, ಮಾಜಿ ಡಿಸಿಎಂ ಈಶ್ವರಪ್ಪ ಪುತ್ರ ಕಾಂತೇಶ್ ಮತ್ತು ಸೊಸೆ ಶಾಲಿನಿ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿಯಲ್ಲಿ ಕೇಸ್ ದಾಖಲಾಗಿದೆ.
ಅದಕ್ಕೂ ಹಿಂದಿನ ಘಟನೆಗಳು:
ಈ ಪ್ರಕರಣ ಸಂಬಂಧ ಕಳೆದ ಏಪ್ರಿಲ್‌ನಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಲೋಕಾಯುಕ್ತರಿಗೆ ವರದಿ ಸಲ್ಲಿಸಲು ಸೂಚಿಸಿತ್ತು. ಇದೀಗ ಖಾಸಗಿ ವಕೀಲ ವಿನೋದ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ರಾಜಕೀಯ
ಮತಗಳ್ಳತನದ ದಾಖಲೆ ಬಿಡುಗಡೆಗೆ ರಾಹುಲ್ ಗಾಂಧಿ ಸಜ್ಜು: ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಕಾಂಗ್ರೆಸ್ ಯಾವತ್ತೂ “ಹಿಟ್ ಅಂಡ್ ರನ್” ರಾಜಕೀಯ ಮಾಡಲ್ಲ, ಎಲ್ಲದಕ್ಕೂ ದಾಖಲಾತಿಗಳಿವೆ. ಕರ್ನಾಟಕದಲ್ಲಿ ನಡೆದ ಮತಗಳ್ಳತನದ ಬಗ್ಗೆ ದಾಖಲೆಗಳನ್ನು ರಾಹುಲ್ ಗಾಂಧಿ ಬಹಿರಂಗಪಡಿಸುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, “ಇಂದು ದೆಹಲಿಯಲ್ಲಿ ರಾಹುಲ್ ಗಾಂಧಿ ಸುದ್ದಿಗೋಷ್ಠಿ ಮೂಲಕ ಮತಗಳ್ಳತನದ ದಾಖಲೆಗಳನ್ನು ಬಿಡುಗಡೆ ಮಾಡಲಿದ್ದಾರೆ. ಆ.8 ರಂದು ಇದೇ ಕುರಿತು ಕರ್ನಾಟಕದಲ್ಲಿಯೂ ಸಾಕ್ಷ್ಯ ಬಿಡುಗಡೆ ಮಾಡಲಾಗುತ್ತದೆ” ಎಂದು ಹೇಳಿದರು.
ಇದೊಂದು ತೀವ್ರ ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ಆಯೋಗ ಯಾರ ನಿಯಂತ್ರಣದಲ್ಲಿದೆ ಎಂಬುದನ್ನು ಜನತೆಯೇ ನಿರ್ಧರಿಸಬೇಕಿದೆ ಎಂದು ಅವರು ಹೇಳಿದ್ದಾರೆ.
BJP ಪ್ರತಿಕ್ರಿಯೆ ಬಗ್ಗೆ ಖರ್ಗೆ ಪ್ರತಿಸ್ಪಂದನೆ:
“ನಾವು ಆರೋಪವನ್ನೇ ಮಾಡಿಲ್ಲ. documentation ಇದೆ, ಅದನ್ನೇ ತೋರಿಸುತ್ತಿದ್ದೇವೆ. ಬಿಜೆಪಿಯವರು ಏಕೆ ಎಲ್ಲಾ ಸಂಸ್ಥೆಗಳ ವಕ್ತಾರರಂತೆ ಮಾತನಾಡುತ್ತಿದ್ದಾರೆ? ಆಯಾ ಸಂಸ್ಥೆಗಳಿಗೆ ತಮ್ಮದೇ ಆದ ವಕ್ತಾರರು ಇದ್ದಾರೆ, ಅವರು ಸ್ಪಷ್ಟನೆ ನೀಡಲಿ,” ಎಂದು ತೀವ್ರ ಟೀಕೆ ಮಾಡಿದರು.
-
ಬಿಬಿಎಂಪಿ3 months ago
ತಾವರೆಕೆರೆ, ಕುಂಬಳಗೋಡು, ಕಗ್ಗಲಿಪುರ, ಹಾರೋಹಳ್ಳಿಯನ್ನು ಗ್ರೇಟರ್ ಬೆಂಗಳೂರು ಪ್ರದೇಶಕ್ಕೆ
-
ಬೆಂಗಳೂರು2 years ago
ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ಮುಖ್ಯ – ಡಾ. ಕೆ.ಸಿ ರೋಹಿತ್
-
ದೇಶ2 years ago
ಫೀನಿಕ್ಸ್ ನಲ್ಲಿ ವೈಭವದ ರಥೋತ್ಸವದೊಂದಿಗೆ ಹತ್ತು ದಿನಗಳ ಉತ್ಸವಕ್ಕೆ ತೆರೆ
-
ಚುನಾವಣೆ2 years ago
ಬಿಬಿಎಂಪಿ ಚುನಾವಣೆ ಡಿಸೆಂಬರ್ನಲ್ಲಿ ನಡೆಯುವ ಸಾಧ್ಯತೆ: ಸಚಿವರಾಮಲಿಂಗಾರೆಡ್ಡಿ
-
ರಾಜಕೀಯ2 years ago
Gruhalaxmi ಗೃಹಲಕ್ಷಿö್ಮ ಫಲಾನುಭವಿ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ
-
ಬೆಂಗಳೂರು1 year ago
ನೀರಿಲ್ಲ ನೀರಿಲ್ಲ ನಾಳೆ ನಲ್ಲಿಯಲ್ಲಿ ನೀರು ಬರೋದಿಲ್ಲ
-
ಬೆಂಗಳೂರು9 months ago
ಯಶವಂತಪುರ ಕ್ಷೇತ್ರದ ಅಭಿವೃದ್ಧಿಯೇ ನನ್ನ ಮುಖ್ಯ ಉದ್ದೇಶ -ಎಸ್ ಟಿ ಸೋಮಶೇಖರ್
-
ರಾಜ್ಯ2 years ago
ದೇಶದ ಎಲ್ಲಾ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ನೀಡಲು ಮುಂದಾದ ಸರ್ಕಾರ! ಇಂದೇ ಅರ್ಜಿ ಸಲ್ಲಿಸಿ