Connect with us

ರಾಜಕೀಯ

ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೆ ತಪ್ಪೇನು- ಪ್ರತಾಪ್ ಸಿಂಹ

Published

on

ಮೈಸೂರು: ಸಿಎಂ ಸಿದ್ದರಾಮಯ್ಯರನ್ನು ಮಾಜಿ ಸಂಸದ ಸಿಂಹ ಹಾಡಿ ಹೊಗಳಿದ್ದಾರೆ, ಮೈಸೂರಿನ ಕೆಆರ್‍ಎನ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ನಾಮಕರಣ ಮಾಡಲು ಮುಂದಾದ ವಿಚಾರಕ್ಕೆ ಪ್ರತಾಪ್ ಸಿಂಹ ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದಾರೆ, ಅಲ್ಲದೆ ಸಿದ್ದರಾಮಯ್ಯ ಮೈಸೂರಿನ ಸುಪುತ್ರ ಎಂದು ಹೊಗಳುವ ಮೂಲಕ ಎಲ್ಲರ ಹುಬ್ಬೇರುವಂತೆ ಮಡಿದೆ,
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯನವರು ಮೈಸೂರಿನ ಸುಪುತ್ರ, ಸೈದ್ಧಾಂತಿಕವಾಗಿ ಅವರನ್ನು ವಿರೋಧಿಸುತ್ತೇನೆ, ಅದರೆ ರಸ್ತೆಗೆ ಅವರ ಹೆಸರು ನಾಮಕರಣ ಮಾಡುವ ವಿಚಾರದಲ್ಲಿ ಸಣ್ಣತನ ತೋರಿಸುವುದು ಬೇಡ ಎಂದು ಹೇಳಿದ್ದಾರೆ,
ಸ್ಪಷ್ಟ ಬಹುಮತದ ಜೊತೆ ಎರಡು ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಮೈಸೂರಿಗೆ ಸಿದ್ದರಾಮಯ್ಯ ಅವರ ಕೊಡುಗೆ ಬಹಳ ಇದೆ, ಜಯದೇವ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡಿದ್ದು, ಸೂಪರ್ ಸ್ಪೆಷಾಲಿಟಿ, ಆಸ್ಪತ್ರೆ ಕಟ್ಟಿಸಿದ್ದು, ರಾಜಪಥ ಮಾಡಿಸಿದ್ದಾರೆ, 40 ವರ್ಷದಿಂದ ವಿಧಾನಸಭೆಗೆ ಸಿದ್ದರಾಮಯ್ಯ ಹೋಗಿದ್ದಾರೆ, ಅವರ ಹೆಸರು ಇಡುವುದರಲ್ಲಿ ತಪ್ಪೇನಿದೆ, ಈ ವಿಚಾರದಲ್ಲಿ ತಕಾರರು ಎತ್ತಿದರೆ ಮೈಸೂರಿನಲ್ಲಿ ಕಲ್ಲು ಹುಡುಕಿದಂತೆ ಆಗುತ್ತದೆ ಎಂದು ಹೇಳಿದರು,
ಸಾಧಕರು ಬರೀ ಬಿಜೆಪಿಯಲ್ಲಿ ಮಾತ್ರ ಇಲ್ಲ, ಎಲ್ಲಾ ಪಕ್ಷದಲ್ಲೂ ಇದ್ದಾರೆ, ಸಿದ್ದರಾಮಯ್ಯ ಅವರ ಹೆಸರು ಇಡುವ ವಿಚಾರ ಪಕ್ಷಬೇಧ ಮಾಡಬೇಡಿ, ಸಣ್ಣತನ ತೋರಿಸಬೇಡಿ, ಮಹಾರಾಜರ ಹೆಸರು ಎಲ್ಲಾ ಕಡೆ ಇಟ್ಟಿದ್ದೇವೆ, ಮಹಾರಾಜರ ನಂತರವೂ ಅನೇಕ ಸಾಧಕರು ಮೈಸೂರಿನಲ್ಲಿ ಬಂದಿದ್ದಾರೆ, ವಿಶ್ವೇಶ್ವರಯ್ಯ ರಂಥ ಇಂಜಿನಿಯರ್ ಇರದಿದ್ದರೆ ಕನ್ನಂಬಾಡಿ ಕಟ್ಟಲು ಆಗುತ್ತಿತ್ತಾ? ಮಿರ್ಜಾ ಇಸ್ಮಾಯಿಲ್ ಇರದಿದ್ದರೆ ಬೆಂಗಳೂರಿಗೆ ಕರೆಂಟ್ ತೆಗೆದುಕೊಂಡು ಹೋಗಲು ಆಗುತ್ತಿತ್ತಾ? ಒಳ್ಳೆ ಒಳ್ಳೆಯ ದಿವಾನರು ಇದ್ದ ಕಾರಣ ಒಳ್ಳೆ ಅಭಿವೃದ್ಧಿ ಆಗಿದೆ, ಅವರಿಗೆ ಇನ್ನು ಗೌರವ ಸಿಗಬೇಕಿದೆ ಎಂದು ಹೇಳಿದರು,

ದೇಶ

“ಚಾಮರಾಜಪೇಟೆಗೆ ಬಂದ್ರೆ ಸುಮ್ಮನೆ ಇರ್ತಿನಾ?”: ಜಮೀರ್‌ ಟಾಂಗ್‌, ದಾವಣಗೆರೆ ರಾಜಕೀಯ ಕುತೂಹಲ

Published

on

By

ದಾವಣಗೆರೆ ದಕ್ಷಿಣ ಉಪಚುನಾವಣೆ ರಾಜಕೀಯ ಕಣ ದಿನೇದಿನೇ ರಂಗೇರುತ್ತಿದ್ದು, ಸಚಿವ ಜಮೀರ್‌ ಅಹ್ಮದ್‌ ಖಾನ್ ಅವರ ಆಗಮನದಿಂದ ಹೊಸ ತಿರುವು ಪಡೆದುಕೊಂಡಿದೆ. ಹಲವು ದಿನಗಳಿಂದ ಮುಂದುವರಿದಿದ್ದ ಭಿನ್ನಾಭಿಪ್ರಾಯಗಳ ನಡುವೆಯೇ ಅವರು ಕೊನೆಗೂ ದಾವಣಗೆರೆಗೆ ಭೇಟಿ ನೀಡಿ ಪ್ರಚಾರ ಆರಂಭಿಸಿದ್ದಾರೆ.

ಟಿಕೆಟ್‌ ಹಂಚಿಕೆ ವೇಳೆ ಉಂಟಾದ ಗಲಾಟೆ ಸಂದರ್ಭದಲ್ಲಿ ಎಸ್‌ಎಸ್‌ ಮಲ್ಲಿಕಾರ್ಜುನ್ ಅವರು “ಯಾರ್ರಿ ಜಮೀರ್‌ ದಾವಣಗೆರೆ ಬಗ್ಗೆ ಮಾತನಾಡಲು” ಎಂದು ಹೇಳಿದ್ದರಿಂದ ವಿವಾದ ಸೃಷ್ಟಿಯಾಗಿತ್ತು. ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಸಿಕ್ಕಿಲ್ಲ ಎಂಬ ಕಾರಣಕ್ಕೂ ಜಮೀರ್‌ ಅಸಮಾಧಾನಗೊಂಡಿದ್ದರು.

ಆದರೆ ಇದೀಗ ರಾಜಕೀಯ ವಾತಾವರಣ ಬದಲಾಗಿದ್ದು, ಜಮೀರ್‌ ಅವರನ್ನು ಸ್ವತಃ ಮಲ್ಲಿಕಾರ್ಜುನ್‌ ಅವರು ಸ್ವಾಗತಿಸಿ ಪ್ರಚಾರಕ್ಕೆ ಕರೆಸಿಕೊಂಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್‌, “ನಾವಿಬ್ಬರೂ ಸ್ನೇಹಿತರು. ಯಾವುದೇ ಬೇಸರ ಇಲ್ಲ. ಸಿಟ್ಟಿನಲ್ಲಿ ಹೇಳಿದ ಮಾತು ಅಷ್ಟೇ,” ಎಂದು ಸ್ಪಷ್ಟಪಡಿಸಿದರು.

ಇದೇ ವೇಳೆ ಅವರು ಪರೋಕ್ಷವಾಗಿ ಟಾಂಗ್ ಕೊಡುತ್ತಾ, “ನನ್ನ ಕ್ಷೇತ್ರ ಚಾಮರಾಜಪೇಟೆಗೆ ಬಂದು ಯಾರಾದರೂ ಮಾತನಾಡಿದರೆ ನಾನು ಸುಮ್ಮನೆ ಇರ್ತಿನಾ?” ಎಂದು ಪ್ರತಿಕ್ರಿಯೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್‌, “ಈಗ ಎಲ್ಲವೂ ಬಗೆಹರಿದಿದೆ. ನಾವು ಬಹಳ ವರ್ಷಗಳಿಂದ ಸ್ನೇಹಿತರು,” ಎಂದು ಹೇಳಿದರು.

ಈ ಬೆಳವಣಿಗೆ ದಾವಣಗೆರೆ ರಾಜಕೀಯದಲ್ಲಿ ಹೊಸ ಚೈತನ್ಯ ಮೂಡಿಸಿದ್ದು, ಉಪಚುನಾವಣೆ ಕಣದಲ್ಲಿ ಕಾಂಗ್ರೆಸ್‌ ಬಲ ಹೆಚ್ಚಿದಂತೆ ಕಾಣುತ್ತಿದೆ.

Continue Reading

ದೇಶ

ಜಮೀರ್ ಅಹ್ಮದ್‌ಗೆ ಎಐಸಿಸಿಯಲ್ಲಿ ಮಹತ್ವದ ಹುದ್ದೆ!

Published

on

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C. Venugopal ಈ ನಿರ್ಧಾರ ಕೈಗೊಂಡಿದ್ದಾರೆ.

ಪ್ರಸ್ತುತ ಕೇರಳ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಜಮೀರ್ ಅಹ್ಮದ್, ರಾಜ್ಯದ ಉಪಚುನಾವಣೆಗಳ ಪ್ರಚಾರಕ್ಕೆ ಬರಲು ಸಾಧ್ಯವಾಗದೇ ಬ್ಯುಸಿಯಾಗಿದ್ದಾರೆ. ಕೇರಳದ ಹಲವು ಕ್ಷೇತ್ರಗಳಲ್ಲಿ ಮುಸ್ಲಿಂ ಮತಗಳು ನಿರ್ಣಾಯಕವಾಗಿರುವ ಹಿನ್ನೆಲೆಯಲ್ಲಿ, ಅವರನ್ನು ಅಲ್ಲಿಯೇ ಪ್ರಚಾರಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ.

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪಚುನಾವಣೆಯಲ್ಲಿ ಭಾಗವಹಿಸಲು ಜಮೀರ್ ಅವರಿಗೆ ಆಹ್ವಾನ ನೀಡಲಾಗಿದ್ದರೂ, ಕೇರಳದ ಪ್ರಚಾರ ಕಾರ್ಯದಿಂದ ಬಿಡುವಿಲ್ಲ ಎಂಬುದಾಗಿ ಅವರು ಪ್ರತಿಕ್ರಿಯಿಸಿದ್ದಾರೆ. ಮುಖ್ಯಮಂತ್ರಿ Siddaramaiah ಸೂಚನೆ ಇದ್ದರೂ, ಎಐಸಿಸಿ ನಾಯಕತ್ವದಿಂದಲೇ ತಡೆಯಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇದಕ್ಕೂ ನಡುವೆ, ಎಐಸಿಸಿ ಅಲ್ಪಸಂಖ್ಯಾತ ಘಟಕದ ಸಲಹಾ ಪರಿಷತ್ತಿನ ಸದಸ್ಯರಾಗಿ ಜಮೀರ್ ಅಹ್ಮದ್ ಅವರನ್ನು ನೇಮಿಸಲಾಗಿದೆ. ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆಲುವಿಗೆ ಕೇರಳದಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತಿದ್ದು, ಭವಿಷ್ಯದಲ್ಲಿ ನಾಯಕತ್ವದ ಮಟ್ಟದಲ್ಲೂ ಬದಲಾವಣೆ ಸಾಧ್ಯತೆಗಳಿವೆ ಎಂಬ ಚರ್ಚೆ ನಡೆಯುತ್ತಿದೆ.

ಅಲ್ಪಸಂಖ್ಯಾತ ಸಮುದಾಯದ ನಾಯಕರನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸುವ ಉದ್ದೇಶದಿಂದ ಈ ನೇಮಕಾತಿ ನಡೆದಿದ್ದು, ಜಮೀರ್ ಅವರ ಜನಪ್ರಿಯತೆ ದಿನೇದಿನೇ ಏರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ರಾಜ್ಯದಲ್ಲೂ ಉಪಚುನಾವಣೆಗಳ ನಡುವೆ ಅವರ ಗೈರುಹಾಜರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ.

Continue Reading

ದೇಶ

ಸೋಮಣ್ಣ ವಿರುದ್ಧ ಸಿಎಂ ಸಿಡಿತ: “ಕೆಲಸವಿಲ್ಲದ ಮಂತ್ರಿ!”

Published

on

By

ಬಾಗಲಕೋಟೆ: ಬಿಜೆಪಿ ನಾಯಕ V. Somanna ವಿರುದ್ಧ ಮುಖ್ಯಮಂತ್ರಿ Siddaramaiah ತೀವ್ರ ವಾಗ್ದಾಳಿ ನಡೆಸಿದ್ದು, “ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದ ಮಂತ್ರಿ, ಅವರಿಗೆ ಯಾವುದೇ ಕಡತ ಹೋಗುವುದಿಲ್ಲ” ಎಂದು ಟೀಕಿಸಿದರು.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಂದರ್ಭದಲ್ಲಿ ಮಾತನಾಡಿದ ಸಿಎಂ, “ನಾವು ಸೋಲುತ್ತೇವೆ ಎಂಬ ಭಯದಿಂದ ಬಿಜೆಪಿ ನಾಯಕರು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸೋಮಣ್ಣ ಅವರಿಗೆ ಕ್ಷೇತ್ರದಲ್ಲಿ ಪ್ರಚಾರ ಮಾಡಲು ಸಮಯವಿಲ್ಲ” ಎಂದು ಕಿಡಿಕಾರಿದರು. ಮುಖ್ಯಮಂತ್ರಿಗಳ ಸ್ಥಾನ ಕುರಿತು ಬಿಜೆಪಿ ನಾಯಕರು ಮಾತನಾಡುವುದಕ್ಕೆ ಯಾವುದೇ ಅರ್ಥವಿಲ್ಲ, ಅವರು ಕಾಂಗ್ರೆಸ್ ಹೈಕಮಾಂಡ್ ಅಲ್ಲ ಎಂದರು.

ಬಿಜೆಪಿಯ ಮೇಲೆ ವಾಗ್ದಾಳಿ ಮುಂದುವರೆಸಿದ ಸಿದ್ದರಾಮಯ್ಯ, “ಬಿಜೆಪಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಮಾತಿನಲ್ಲಿ ಸತ್ಯವಿಲ್ಲ, ನಡೆದಲ್ಲಿ ನಂಬಿಕೆ ಇಲ್ಲ” ಎಂದು ಟೀಕಿಸಿದರು. ಜೊತೆಗೆ, ಪಕ್ಷದಿಂದ ಉಚ್ಛಾಟನೆಯಾದ Basanagouda Patil Yatnal ಅವರನ್ನು ಮತ್ತೆ ಪ್ರಚಾರಕ್ಕೆ ಕರೆತಂದು ಬಳಸಿಕೊಳ್ಳುತ್ತಿರುವುದು ಬಿಜೆಪಿ ದ್ವಂದ್ವ ನೀತಿಗೆ ಉದಾಹರಣೆ ಎಂದು ಹೇಳಿದರು.

ಇಂಧನ ಹಾಗೂ ಗ್ಯಾಸ್ ಸಿಲಿಂಡರ್ ಸಮಸ್ಯೆ ಕುರಿತು ಮಾತನಾಡಿದ ಅವರು, “ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ರಾಜ್ಯ ಸರ್ಕಾರ ಕೇವಲ ವಿತರಣೆಯನ್ನು ಮಾಡುತ್ತದೆ” ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಪ್ರಧಾನಿ Narendra Modi ಅವರ ಮನೆಗೆ ಮುತ್ತಿಗೆ ಹಾಕಬೇಕು ಎಂಬ ಹೇಳಿಕೆಯನ್ನೂ ನೀಡಿದರು.

ಇನ್ನೂ, ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ, Rahul Gandhi, Sonia Gandhi, Mallikarjun Kharge ಮತ್ತು Priyanka Gandhi ಅವರೇ ಪಕ್ಷದ ಹೈಕಮಾಂಡ್ ಎಂದು ಹೇಳಿದರು.

ಒಟ್ಟಿನಲ್ಲಿ, ಉಪಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ವಾಗ್ವಾದ ಮತ್ತಷ್ಟು ತೀವ್ರಗೊಂಡಿದೆ.

Continue Reading

Trending