Connect with us

ರಾಜಕೀಯ

ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ: ವಿಶೇಷ ಸರಸ್ ಮೇಳ, ಖಾದಿ ಉತ್ಸವಕ್ಕೆ ಚಾಲನೆ – GANDHIJI STATUE AT VEERA SOUDHA

Published

on

ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ‌ ಅನಾವರಣಗೊಳಿಸಿದರು. ಜೊತೆಗೆ, ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ವಿಶೇಷ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀಜಿ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ವೀರಸೌಧದಲ್ಲಿ ಹಬ್ಬದ ವಾತಾವರಣ‌ ನಿರ್ಮಾಣವಾಗಿದೆ. ಇದೇ ವೇಳೆ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಇದೇ ವೇಳೆ ಮುಖ್ಯಮಂತ್ರಿ ಚಾಲನೆ ನೀಡಿದರು.

ವಿಶೇಷ ಸರಸ್ ಮೇಳ, ಖಾದಿ ಉತ್ಸವ: ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ‘ಅಸ್ಮಿತೆ’ ವ್ಯಾಪಾರ ಮೇಳ-2024ವನ್ನು ಉದ್ಘಾಟಿಸಿದರು.

ಜನವರಿ 4ರವರೆಗೆ ಸರಸ್ ಮೇಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಈ ಸರಸ್ ಮೇಳ ಮತ್ತು ಖಾದಿ ಉತ್ಸವವು ಆರಂಭವಾಗಿದ್ದು, ಡಿ.26ರಿಂದ ಜನವರಿ 4ರವರೆಗೆ ನಡೆಯಲಿದೆ.

ಸ್ವ-ಸಹಾಯ ಗುಂಪಿನ ಮಹಿಳೆಯರು ಭಾಗಿ: ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದು, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮೇಳಗಳು ಒಳಗೊಂಡಿದೆ. ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಡಿ.26ರಿಂದ ಜ.04ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ: ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯಲ್ಲಿ ಆಯೋಜಿಸಲಾಗುತ್ತಿರುವ ಸತತ 4ನೇ ವರ್ಷದ ಈ ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುವುದು ವಿಶೇಷತೆಯಾಗಿದೆ.

ಆಕರ್ಷಣೀಯ ಅಕ್ಕ ಕೆಫೆ: ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ‘ಅಕ್ಕ ಕೆಫೆ’ಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಅಂದಾಜು 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಮುಂದುವರೆದು, ‘ಅಕ್ಕ-ಕಫೆ’ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‌ನ್ನು “ಅಕ್ಕ-ಕೆಫೆ” ಶೀರ್ಷಿಕೆಯಡಿ ಆಕರ್ಷಣೀಯವಾಗಿ ಸಿದ್ದಪಡಿಸಲಾಗಿದೆ.

ಸ್ಥಳದಲ್ಲೇ ಆಹಾರ ತಯಾರಿಕೆ: ಈ ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಹೆಸರುವಾಸಿಯಾದ ಗಿರಮಿಟ್/ಚುರುಮರಿ ಮಂಡಕ್ಕಿ, ಜೋಳದ ಖಡಕ್ ರೊಟ್ಟಿ ಸೇರಿದಂತೆ ಹೋಳಿಗೆ, ಮಂಗಳೂರು ನೀರ್‌ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬ್ಯಾಂಬು ಬಿರಿಯಾನಿ ಮುಂತಾದವುಗಳನ್ನು ಸ್ಥಳದಲ್ಲೇ ತಯಾರಿಸಿ ಕೊಡಲಾಗುತ್ತಿದೆ.

ವಿಶೇಷ ಅಭಿಯಾನ: ರಾಜ್ಯದಲ್ಲಿ ಅಭಿಯಾನದಡಿ 2.79 ಲಕ್ಷ ಸ್ವ-ಸಹಾಯ ಗುಂಪುಗಳಡಿ 29.66 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 45 ಸಾವಿರ ಸ್ವ-ಸಹಾಯ ಗುಂಪುಗಳಡಿ 4.50 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಸಂಘಟಿಸಲಾಗಿದ್ದು, ಪ್ರತಿಯೊಬ್ಬ ಮಹಿಳೆಯು ಸ್ಮಾವಲಂಬನೆಯ ಬದುಕಿನೊಂದಿಗೆ ತನ್ನ ಕುಟುಂಬದ ಅಭಿವೃದ್ಧಿಗೆ ಪೂರಕ ಸೇವೆಗಳನ್ನು ಪಡೆಯುವಲ್ಲಿ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.

ಉತ್ಪನ್ನಗಳಿಗೆ ಮಾರುಕಟ್ಟೆ: ರಾಜ್ಯದಲ್ಲಿ ಈ ಮಹಿಳೆಯರು ಉತ್ಪನ್ನಗಳ ಮಾರಾಟಕ್ಕೆ ಪ್ರತಿಯೊಂದು ಹಳ್ಳಿ, ಸಂತೆ, ತಾಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಏರ್ಪಡಿಸುವುದಷ್ಟೆ ಅಲ್ಲದೆ ಇತರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದಂತೆ ಈ ವರ್ಷವು ಸಹ ಮೇಳ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ‌ನಿರ್ದೇಶಕಿ ಪಿ.ಐ.ವಿದ್ಯಾ ಅವರು ತಿಳಿಸಿದರು.

ನವ ನವೀನ ಉತ್ಪನ್ನಗಳು: ಬೆಳಗಾವಿಯ ಈ ಮೇಳದ ಮಳಿಗೆಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ನವಾಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್ ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು ಸೇರಿದಂತೆ ಅನೇಕ ಉತ್ಪನ್ನಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ.

ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ನಾಯಕರು: ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ದೇಶದ ವಿವಿಧ ಭಾಗಗಳಿಂದ ಬರುತ್ತಿರುವ ಗಣ್ಯರಿಗೆ ಸ್ಥಳಿಯ ಕಾಂಗ್ರೆಸ್ ಮಹಿಳಾಮಣಿಗಳು ಆರತಿ ಬೆಳಗಿ ಹಣೆಗೆ ಕುಂಕುಮ ಇಟ್ಟು ಸ್ವಾಗತಿಸಿದರು. ಕನ್ಹಯ್ಯ ಕುಮಾರ್ ಸೇರಿದಂತೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ 120ಕ್ಕೂ ಅಧಿಕ ಗಣ್ಯರಿಗೆ ಸ್ವಾಗತಿಸಲಾಯಿತು. ದಾವಣಗೆರೆಯ ತಂಡದಿಂದ ಬಂಜಾರಾ ನೃತ್ಯದ ಮೂಲಕ ಸ್ವಾಗತ ಕೋರಲಾಯಿತು.

ದೇಶ

ರೈತರು ಸಂಕಷ್ಟದಲ್ಲಿ, ಮಕ್ಕಳು ಇನ್ಸುಲಿನ್‌ಗಾಗಿ ಕಾಯುತ್ತಿದ್ದಾರೆ; ಸರ್ಕಾರದ ವಿರುದ್ಧ ಆರ್. ಅಶೋಕ್ ಟೀಕೆ

Published

on

ಬೆಂಗಳೂರು, ಜು.10: ರಾಜ್ಯದಲ್ಲಿ ಕೃಷಿ ಬಿಕ್ಕಟ್ಟು, ಸಚಿವ ಸಂಪುಟ ವಿಸ್ತರಣೆ ವಿಳಂಬ ಹಾಗೂ ಉಚಿತ ಇನ್ಸುಲಿನ್ ಯೋಜನೆ ಜಾರಿಯಾಗದಿರುವ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ನಾಯಕ ಆರ್. ಅಶೋಕ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಈರುಳ್ಳಿ ಬೆಳೆ ನಾಶವಾಗುತ್ತಿದೆ. ಟೊಮೇಟೊ ಬೆಲೆ ಕುಸಿತ ಹಾಗೂ ಮಧ್ಯವರ್ತಿಗಳ ಸಮಸ್ಯೆಯಿಂದ ಬೆಳೆಗಾರರು ನಷ್ಟ ಅನುಭವಿಸುತ್ತಿದ್ದಾರೆ ಎಂದು ಅಶೋಕ್ ಆರೋಪಿಸಿದ್ದಾರೆ. ಚಿತ್ರದುರ್ಗ, ವಿಜಯಪುರ, ಗದಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರ ಸಮಸ್ಯೆಗಳನ್ನು ಸರ್ಕಾರ ನಿರ್ಲಕ್ಷಿಸಿದೆ ಎಂದು ಅವರು ಟೀಕಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ವಿಚಾರದಲ್ಲಿಯೂ ಸರ್ಕಾರವನ್ನು ಟಾರ್ಗೆಟ್ ಮಾಡಿದ ಅಶೋಕ್, ಮುಖ್ಯಮಂತ್ರಿ ಅಧಿಕಾರ ವಹಿಸಿಕೊಂಡು ತಿಂಗಳುಗಳಾದರೂ ಪೂರ್ಣ ಪ್ರಮಾಣದ ಸಂಪುಟ ರಚನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಕೃಷಿ ಸೇರಿದಂತೆ ಖಾಲಿ ಇರುವ ಪ್ರಮುಖ ಇಲಾಖೆಗೆ ಶೀಘ್ರ ಪೂರ್ಣಾವಧಿ ಸಚಿವರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದೇ ವೇಳೆ, ಟೈಪ್-1 ಮಧುಮೇಹದಿಂದ ಬಳಲುತ್ತಿರುವ ಮಕ್ಕಳಿಗಾಗಿ ಘೋಷಿಸಲಾಗಿದ್ದ ಉಚಿತ ಇನ್ಸುಲಿನ್ ಯೋಜನೆ ಇನ್ನೂ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದು ಅಶೋಕ್ ಆರೋಪಿಸಿದರು. ಟೆಂಡರ್ ಪ್ರಕ್ರಿಯೆ ವಿಳಂಬದಿಂದ ಸಾವಿರಾರು ಮಕ್ಕಳಿಗೆ ಅಗತ್ಯ ಇನ್ಸುಲಿನ್ ಪೂರೈಕೆಯಲ್ಲಿ ತೊಂದರೆ ಉಂಟಾಗಿದೆ ಎಂದು ಅವರು ಹೇಳಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ಸುಲಿನ್ ಕೊರತೆಯಿಂದ ಕೆಲವೆಡೆ ಸ್ವಯಂಸೇವಾ ಸಂಸ್ಥೆಗಳ ನೆರವು ಪಡೆಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದರು.

ಉಚಿತ ಇನ್ಸುಲಿನ್ ವಿತರಣೆಯನ್ನು ತಕ್ಷಣ ಆರಂಭಿಸಬೇಕು ಹಾಗೂ ರೈತರ ಸಮಸ್ಯೆಗಳಿಗೆ ಆದ್ಯತೆ ನೀಡಿ ಕ್ರಮ ಕೈಗೊಳ್ಳಬೇಕು ಎಂದು ಅಶೋಕ್ ಸರ್ಕಾರವನ್ನು ಆಗ್ರಹಿಸಿದರು.

Continue Reading

ದೇಶ

Karnataka SIR : ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಸುಳ್ಳು ಮಾಹಿತಿ? ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು ಸಲ್ಲಿಕೆ

Published

on

ಬೆಂಗಳೂರು, ಜು.8: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಸುಳ್ಳು ಹಾಗೂ ದಾರಿ ತಪ್ಪಿಸುವ ಮಾಹಿತಿಯನ್ನು ಹರಡುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ಬಿಜೆಪಿ, ಈ ಸಂಬಂಧ ರಾಜ್ಯದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರಿಗೆ ಅಧಿಕೃತ ದೂರು ಸಲ್ಲಿಸಿದೆ.

ಬಿಜೆಪಿ ನೀಡಿರುವ ದೂರಿನಲ್ಲಿ, ಭಾರತೀಯ ಚುನಾವಣಾ ಆಯೋಗವು ಸಂವಿಧಾನದ ವಿಧಿ 324ರ ಅಡಿಯಲ್ಲಿ ಸ್ಥಾಪಿತವಾದ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಮತದಾರರ ಪಟ್ಟಿಯ ಸಿದ್ಧತೆ ಮತ್ತು ಪರಿಷ್ಕರಣೆ ಅದರ ಕಾನೂನುಬದ್ಧ ಕರ್ತವ್ಯವಾಗಿದೆ ಎಂದು ಉಲ್ಲೇಖಿಸಲಾಗಿದೆ. ಜೊತೆಗೆ, ಜನತಾ ಪ್ರಾತಿನಿಧ್ಯ ಕಾಯ್ದೆ, 1950ರ ಸೆಕ್ಷನ್ 15ರ ಅನ್ವಯ ಪ್ರತಿಯೊಂದು ಚುನಾವಣಾ ಕ್ಷೇತ್ರಕ್ಕೂ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ಅಧಿಕಾರ ಆಯೋಗಕ್ಕಿದೆ ಎಂದು ತಿಳಿಸಲಾಗಿದೆ.

ಬಿಜೆಪಿ ಪ್ರಕಾರ, ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಉದ್ದೇಶ ಮತದಾರರ ಪಟ್ಟಿಯನ್ನು ನಿಖರವಾಗಿಡುವುದು, ಒಂದಕ್ಕಿಂತ ಹೆಚ್ಚು ಕಡೆ ನೋಂದಣಿಯನ್ನು ತಡೆಯುವುದು, ಮೃತಪಟ್ಟವರ ಹೆಸರನ್ನು ತೆಗೆದುಹಾಕುವುದು ಹಾಗೂ ಅನರ್ಹ ವ್ಯಕ್ತಿಗಳ ಹೆಸರು ಸೇರ್ಪಡೆಯಾಗದಂತೆ ನೋಡಿಕೊಳ್ಳುವುದಾಗಿದೆ.

ಆದರೆ ಕಾಂಗ್ರೆಸ್, ಬಿಜೆಪಿ ಪ್ರೇರಣೆಯಿಂದಲೇ SIR ಪ್ರಕ್ರಿಯೆ ನಡೆಯುತ್ತಿದೆ ಎಂದು ಕರಪತ್ರಗಳು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಸುಳ್ಳು ಆರೋಪ ಮಾಡುತ್ತಿದೆ ಎಂದು ಬಿಜೆಪಿ ದೂರಿನಲ್ಲಿ ಹೇಳಿದೆ. ಚುನಾವಣಾ ಆಯೋಗವು ಬಿಜೆಪಿ ಜೊತೆಗೂಡಿ ಮತದಾರರ ಹೆಸರುಗಳನ್ನು ತೆಗೆದುಹಾಕುತ್ತಿದೆ ಎಂಬ ಆರೋಪವು ಆಯೋಗದ ವಿಶ್ವಾಸಾರ್ಹತೆಗೆ ಧಕ್ಕೆ ತರುವ ಪ್ರಯತ್ನವಾಗಿದೆ ಎಂದು ಬಿಜೆಪಿ ವಾದಿಸಿದೆ.

ಇಂತಹ ಸುಳ್ಳು ಮಾಹಿತಿಯಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗುವ ಸಾಧ್ಯತೆ ಇದ್ದು, ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಚುನಾವಣಾ ಸಿಬ್ಬಂದಿಯ ಸುರಕ್ಷತೆಗೂ ಅಪಾಯ ಎದುರಾಗಬಹುದು ಎಂದು ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ಹೀಗಾಗಿ ಕಾಂಗ್ರೆಸ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, SIR ಪ್ರಕ್ರಿಯೆಗೆ ಅಡ್ಡಿಪಡಿಸದಂತೆ ಚುನಾವಣಾ ಆಯೋಗ ಕ್ರಮ ವಹಿಸಬೇಕೆಂದು ಬಿಜೆಪಿ ತನ್ನ ದೂರಿನಲ್ಲಿ ಆಗ್ರಹಿಸಿದೆ.

ಸೂಚನೆ: ಈ ಆರೋಪಗಳು ಬಿಜೆಪಿಯ ದೂರಿನಲ್ಲಿರುವ ಅಂಶಗಳಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಈ ಕುರಿತು ಅಧಿಕೃತ ಪ್ರತಿಕ್ರಿಯೆ ಇನ್ನೂ ಪ್ರಕಟವಾಗಿಲ್ಲ.

Continue Reading

ದೇಶ

‘ಮೋದಿ ಒಂದೂವರೆ ಗಂಟೆ ನನಗೆ ಬುದ್ಧಿ ಹೇಳಿದರು’ : ಎಚ್.ಡಿ.ಕುಮಾರಸ್ವಾಮಿ

Published

on

ಬೆಂಗಳೂರು: ಕೇಂದ್ರ ಸಚಿವರಾಗಿದ್ದರೂ ರಾಜ್ಯ ರಾಜಕೀಯದಲ್ಲಿ ಮತ್ತೆ ಸಕ್ರಿಯರಾಗಿರುವ ಎಚ್.ಡಿ. ಕುಮಾರಸ್ವಾಮಿ ಅವರ ಇತ್ತೀಚಿನ ಹೇಳಿಕೆ ಕರ್ನಾಟಕ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಮುಂಬರುವ ವಿಧಾನಸಭೆ ಚುನಾವಣೆ ಸಿದ್ಧತೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ತಮ್ಮ ಬಗ್ಗೆ ಹೇಳಿದ್ದ ಮಾತನ್ನು ಕುಮಾರಸ್ವಾಮಿ ಮತ್ತೊಮ್ಮೆ ಸಾರ್ವಜನಿಕವಾಗಿ ಪ್ರಸ್ತಾಪಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ಟೀಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, ಸಮ್ಮಿಶ್ರ ಸರ್ಕಾರದ ಅವಧಿಯನ್ನು ನೆನಪಿಸಿಕೊಂಡರು. “ಪ್ರಧಾನಿ ಮೋದಿ ಅವರು ಒಂದೂವರೆ ಗಂಟೆ ನನ್ನನ್ನು ಪಕ್ಕದಲ್ಲಿ ಕೂರಿಸಿಕೊಂಡು ಮಾತನಾಡಿದ್ದರು. ಕರ್ನಾಟಕಕ್ಕೆ ನಿಮ್ಮಲ್ಲಿ ಉತ್ತಮ ಆಡಳಿತದ ದೃಷ್ಟಿ ಇದೆ. ರಾಜೀನಾಮೆ ನೀಡಿ, ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಎಂದು ಸಲಹೆ ನೀಡಿದ್ದರು. ಆದರೆ ನಾನು ಆ ಸಲಹೆಯನ್ನು ಒಪ್ಪಲಿಲ್ಲ” ಎಂದು ಅವರು ಹೇಳಿದರು.

ರಾಜ್ಯ ರಾಜಕೀಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮತ್ತಷ್ಟು ಬಲಪಡಿಸುವ ಪ್ರಯತ್ನಗಳು ನಡೆಯುತ್ತಿರುವ ಹೊತ್ತಿನಲ್ಲಿ ಕುಮಾರಸ್ವಾಮಿ ನೀಡಿರುವ ಈ ಹೇಳಿಕೆಗೆ ವಿಶೇಷ ರಾಜಕೀಯ ಮಹತ್ವ ಸಿಕ್ಕಿದೆ. ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವುದನ್ನು ಅವರು ಪುನರುಚ್ಚರಿಸಿರುವುದು ರಾಜ್ಯ ಬಿಜೆಪಿ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದೆ.

ಇದೇ ವೇಳೆ ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ವಿಚಾರ, ಒಳಜಗಳ ಹಾಗೂ ಸಂಘಟನಾ ಭಿನ್ನಾಭಿಪ್ರಾಯಗಳು ಮುಂದುವರಿಯುತ್ತಿರುವ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಅವರದ್ದು ಎನ್ನಲಾದ ಆಡಿಯೋ ಕೂಡ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಈ ಬೆಳವಣಿಗೆಗಳು ಬಿಜೆಪಿ ಒಳಗಿನ ಚರ್ಚೆಯನ್ನು ಮತ್ತಷ್ಟು ತೀವ್ರಗೊಳಿಸಿವೆ.

ರಾಜಕೀಯ ವಿಶ್ಲೇಷಕರ ಪ್ರಕಾರ, ಬಿಜೆಪಿ-ಜೆಡಿಎಸ್ ಮೈತ್ರಿಯ ಭವಿಷ್ಯ, ನಾಯಕತ್ವ ಹಾಗೂ ಚುನಾವಣಾ ತಂತ್ರಗಳ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ನೀಡಿರುವ ಹೇಳಿಕೆಗಳು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದ ಪ್ರಮುಖ ಚರ್ಚೆಯಾಗಿ ಪರಿಣಮಿಸುವ ಸಾಧ್ಯತೆ ಇದೆ. ಅವರ ಹೇಳಿಕೆಗಳು ಕಾಂಗ್ರೆಸ್ ವಿರುದ್ಧದ ರಾಜಕೀಯ ವಾಗ್ದಾಳಿಗಿಂತಲೂ ಮೈತ್ರಿ ರಾಜಕಾರಣದ ಸಂದೇಶವನ್ನೇ ಹೆಚ್ಚು ಪ್ರತಿಬಿಂಬಿಸುತ್ತಿವೆ ಎನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ.

Continue Reading

Trending