Connect with us

ಬೆಂಗಳೂರು

ಕಿಕ್ಕಿರಿದ ಜನಸಂದಣಿ, ಲಾಠಿ ಚಾರ್ಜ್‌, ಮನೆಗೆ ತೆರೆಳಲು ಪರದಾಟ – ಎಂ.ಜಿ ರಸ್ತೆಯಲ್ಲಿ ಹತ್ತಾರು ಅವಾಂತರ

ಬೆಂಗಳೂರು: ಹೊಸ ವರ್ಷ (New Year 2025) ಸಂಭ್ರಮಾಚರಣೆಗೆ ಜನ ಸಾಗರವೇ ನೆರೆದಿದ್ದ ಎಂ.ಜಿ ರಸ್ತೆಯಲ್ಲಿ ಹತ್ತಾರು ಅವಾಂತರಗಳು ಉಂಟಾಗಿದೆ. ಸರಿಯಾಗಿ 12 ಗಂಟೆಗೆ ಅದ್ಧೂರಿಯಾಗಿ ಹೊಸ ವರ್ಷ ಕೊಂಡಾಡಿದ ಜನ ಸಮೂಹ ಬಳಿಕ ಮನೆಗೆ ತೆರಳಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಮತ್ತೊಂದೆಡೆ ಚರ್ಚ್‌ಸ್ಟ್ರೀಟ್‌ನಲ್ಲಿ ಕೆಲ, ಯುವಕ, ಯುವತಿಯರು ಕುಡಿದು ಮದ್ಯದ ಅಮಲಿನಲ್ಲಿ ತೇಲಾಡುತ್ತಿರುವ ದೃಶ್ಯಗಳೂ ಕಂಡುಬಂದಿವೆ.

ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ 11 ಗಂಟೆಗೆ ಎಂ.ಜಿ ರಸ್ತೆಯಿಂದ ಮೆಟ್ರೋ ಸಂಚಾರ ಬಂದಾದ ಹಿನ್ನೆಲೆ ಸಮೀಪದ ಟ್ರಿನಿಟಿ ಅಥವಾ ಕಬ್ಬನ್‌ ಪಾರ್ಕ್‌ ನಿಲ್ದಾಣದಿದ ತೆರಳಬೇಕಿತ್ತು. ಇದರಿಂದ ಎಂ.ಜಿ ರಸ್ತೆಯಲ್ಲಿ ಜನದಟ್ಟಣೆ ಉಂಟಾಯಿತು. ನೆರೆದಿದ್ದ ಜನರನ್ನ ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಸಹ ನಡೆಸಿದ್ದಾರೆ.

ತಪ್ಪಿಸಿಕೊಂಡ ಮಗು ತಾಯಿ ಮಡಿಲು ಸೇರಿತು:
ಇನ್ನು ಹೊಸ ವರ್ಷ ಸಂಭ್ರಮಾಚರಣೆ ವೇಳೆ ಕೋರಮಂಗಲ ಪಬ್‌ ಸ್ಟ್ರೀಟ್‌ನಲ್ಲಿ ಮಗುವೊಂದು ತಪ್ಪಿಸಿಕೊಂಡಿತು. ಕೂಡಲೇ ಎಚ್ಚೆತ್ತ ಪೊಲೀಸರು ಕೆಲವೇ ಕ್ಷಣಗಳಲ್ಲಿ ಮಗುವನ್ನು ಪತ್ತೆಮಾಡಿ ಹೆತ್ತವರ ಮಡಿಸಲು ಸೇರಿಸುವಲ್ಲಿ ಯಶಸ್ವಿಯಾದರು.

ದೇಶ

BMTC ಸಿಹಿ ಸುದ್ದಿ: ಪಿಯುಸಿ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಪ್ರಯಾಣ

KSRTC BMTC ಬಸ್ ಬಂದ್ ಇಲ್ಲ ನೌಕರರು ಕಡ್ಡಾಯವಾಗಿ ಡ್ಯೂಟಿಗೆ ಬರಲೇಬೇಕು

ಬೆಂಗಳೂರು: ಪರೀಕ್ಷೆಯ ಒತ್ತಡದಲ್ಲಿರುವ ವಿದ್ಯಾರ್ಥಿಗಳಿಗೆ Bangalore Metropolitan Transport Corporation (BMTC) ಮಹತ್ವದ ಘೋಷಣೆ ಮಾಡಿದೆ. 2025-26ನೇ ಸಾಲಿನ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ಉಚಿತವಾಗಿ ಬಿಎಂಟಿಸಿ ಬಸ್‌ಗಳಲ್ಲಿ ಪ್ರಯಾಣಿಸಬಹುದು.

ವಿದ್ಯಾರ್ಥಿಗಳು ತಮ್ಮ ಪ್ರವೇಶ ಪತ್ರ (Hall Ticket) ತೋರಿಸಿದರೆ ಸಾಕು – ಯಾವುದೇ ಪ್ರಯಾಣ ದರ ಪಾವತಿಸಬೇಕಾಗಿಲ್ಲ ಎಂದು ಸಂಸ್ಥೆ ತಿಳಿಸಿದೆ.

ಫೆಬ್ರವರಿ 28, 2026 ರಿಂದ ಮಾರ್ಚ್ 17, 2026ರವರೆಗೆ ನಡೆಯಲಿರುವ ಪರೀಕ್ಷೆಗಳ ಅವಧಿಯಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ.


ಉಚಿತ ಪ್ರಯಾಣದ ನಿಯಮಗಳು

ಪ್ರವೇಶ ಪತ್ರ ಕಡ್ಡಾಯ: ಬಸ್‌ನಲ್ಲಿ ಪ್ರಯಾಣಿಸುವಾಗ ನಿರ್ವಾಹಕರಿಗೆ ಹಾಲ್ ಟಿಕೆಟ್ ತೋರಿಸಬೇಕು. ಅದೇ ಬಸ್ ಪಾಸ್ ಆಗಿ ಪರಿಗಣಿಸಲಾಗುತ್ತದೆ.

ಸಾಮಾನ್ಯ ಬಸ್‌ಗಳಿಗೆ ಮಾತ್ರ ಅನ್ವಯ: ಈ ಸೌಲಭ್ಯವು ಬಿಎಂಟಿಸಿಯ ಸಾಮಾನ್ಯ (Ordinary) ಬಸ್‌ಗಳಿಗೆ ಮಾತ್ರ. ವಜ್ರ, ಎಸಿ ಅಥವಾ ಇತರೆ ಪ್ರೀಮಿಯಂ ಬಸ್‌ಗಳಿಗೆ ಅನ್ವಯಿಸುವುದಿಲ್ಲ.

ಮನೆ–ಪರೀಕ್ಷಾ ಕೇಂದ್ರ ವ್ಯಾಪ್ತಿ: ವಿದ್ಯಾರ್ಥಿಯ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಹಾಗೂ ಪರೀಕ್ಷೆ ಮುಗಿಸಿ ಮನೆಗೆ ಹಿಂದಿರುಗುವಾಗ ಮಾತ್ರ ರಿಯಾಯಿತಿ ಸಿಗಲಿದೆ.


ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಕ್ರಮಗಳು

  1. ಹೆಚ್ಚುವರಿ ಟ್ರಿಪ್‌ಗಳು: ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಪರೀಕ್ಷೆ ಆರಂಭಕ್ಕೂ ಮುನ್ನ ಮತ್ತು ನಂತರ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಸೂಚನೆ.
  2. ಕೋರಿಕೆ ನಿಲುಗಡೆ (Request Stop): ಪರೀಕ್ಷಾ ಕೇಂದ್ರದ ಸಮೀಪ ಅಧಿಕೃತ ನಿಲುಗಡೆ ಇಲ್ಲದಿದ್ದರೂ ವಿದ್ಯಾರ್ಥಿಗಳ ಬೇಡಿಕೆಗೆ ಅನುಗುಣವಾಗಿ ಬಸ್ ನಿಲ್ಲಿಸಲು ಚಾಲಕರಿಗೆ ನಿರ್ದೇಶನ.
  3. ಟ್ರಿಪ್ ರದ್ದು ಇಲ್ಲ: ಪರೀಕ್ಷಾ ದಿನಗಳಲ್ಲಿ ಯಾವುದೇ ಬಸ್ ಟ್ರಿಪ್‌ಗಳನ್ನು ರದ್ದು ಮಾಡದೆ ಕಡ್ಡಾಯ ಕಾರ್ಯಾಚರಣೆ ನಡೆಸುವಂತೆ ಸೂಚನೆ.

ವಿದ್ಯಾರ್ಥಿಗಳಿಗೆ ದೊಡ್ಡ ನೆರವು

ಬಿಎಂಟಿಸಿಯ ಈ ನಿರ್ಧಾರವು ಸಾವಿರಾರು ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಆರ್ಥಿಕ ಭಾರ ಕಡಿಮೆ ಮಾಡುವುದರ ಜೊತೆಗೆ, ಪರೀಕ್ಷಾ ಕೇಂದ್ರಕ್ಕೆ ಸಮಯಕ್ಕೆ ಸರಿಯಾಗಿ ತಲುಪಲು ನೆರವಾಗಲಿದೆ.

Continue Reading

ದೇಶ

ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಅನುಮತಿ ನಿರೀಕ್ಷೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರ ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ ಎಂದು ಡಿಸಿಎಂ D. K. Shivakumar ವಿಶ್ವಾಸ ವ್ಯಕ್ತಪಡಿಸಿದರು.

ಭಾರತೀಯ ವಿಜ್ಞಾನ ಸಂಸ್ಥೆ (IISc)ಯ ಜೆಜೆ ಟಾಟಾ ಸಭಾಂಗಣದಲ್ಲಿ ನಡೆದ ಅಂತಾರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ (ICDS) ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ಸಹಕಾರ ಸಿಗುವ ಭರವಸೆ ವ್ಯಕ್ತಪಡಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಸಿದ್ಧತೆ

Mekedatu ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಯೋಜನೆ ಪರವಾಗಿದೆ. ಕೇಂದ್ರ ಅನುಮತಿ ದೊರೆತ ಕೂಡಲೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದರು. ಈ ಯೋಜನೆಯಿಂದ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಕುಡಿಯುವ ನೀರು ಹಾಗೂ ಸುಮಾರು 400 ಮೆಗಾವಾಟ್ ವಿದ್ಯುತ್ ಉತ್ಪಾದನೆ ಸಾಧ್ಯವಾಗಲಿದೆ ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ – ರೈತರಿಗೆ ಪರಿಹಾರ

Krishna River ಮೇಲ್ದಂಡೆ ಯೋಜನೆ ವಿಚಾರದಲ್ಲಿ 2013ರ ಕಾಯ್ದೆಯಂತೆ ಭೂಮಿ ಕಳೆದುಕೊಳ್ಳುವ ರೈತರಿಗೆ ಸೂಕ್ತ ಪರಿಹಾರ ನೀಡಲಾಗುತ್ತದೆ. 2025ರ ಡಿಸೆಂಬರ್ ವೇಳೆಗೆ 1.72 ಲಕ್ಷ ಎಕರೆ ಕೃಷಿಭೂಮಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದು ಹೇಳಿದರು.

ಅಣೆಕಟ್ಟು ಸುರಕ್ಷತೆ ರಾಷ್ಟ್ರದ ಆದ್ಯತೆ

ಅಣೆಕಟ್ಟುಗಳು ದೇಶದ ಶಕ್ತಿ ಹಾಗೂ ಪ್ರಗತಿಯ ಪ್ರತೀಕವಾಗಿದ್ದು, ಭಾರತದಲ್ಲಿ ಸುಮಾರು 6,500 ಅಣೆಕಟ್ಟುಗಳಿವೆ. ವಿಶ್ವದಲ್ಲಿ ಅತಿ ಹೆಚ್ಚು ಅಣೆಕಟ್ಟುಗಳಿರುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಕರ್ನಾಟಕದಲ್ಲಿ 232 ಅಣೆಕಟ್ಟುಗಳಿದ್ದು, ಅವುಗಳಲ್ಲಿ ಬಹುಪಾಲು 25 ವರ್ಷಕ್ಕಿಂತ ಹಳೆಯದಾಗಿದೆ.

ಕೇಂದ್ರ ಸರ್ಕಾರವು ವಿಶ್ವ ಬ್ಯಾಂಕ್ ನೆರವಿನೊಂದಿಗೆ ಜಾರಿಗೊಳಿಸಿರುವ Dam Rehabilitation and Improvement Project (DRIP) ಯೋಜನೆಯಡಿ ರಾಜ್ಯದಲ್ಲಿ 58 ಅಣೆಕಟ್ಟುಗಳ ದುರಸ್ತಿಗೆ ಸುಮಾರು 1,500 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಅಣೆಕಟ್ಟುಗಳ ಬಳಿ ಪ್ರವಾಸೋದ್ಯಮಕ್ಕೆ ಮನವಿ

ಅಣೆಕಟ್ಟುಗಳ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ ವಿಧಿಸಿರುವ ನಿರ್ಬಂಧಗಳನ್ನು ಸಡಿಲಗೊಳಿಸಿ ಪ್ರವಾಸೋದ್ಯಮಕ್ಕೆ ಅವಕಾಶ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

“ಜಲವೇ ಸಂಪತ್ತು, ಜಲವೇ ಇಂಧನ, ಜಲವೇ ಜೀವನ” ಎಂದು ಹೇಳಿದ ಅವರು, ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಬದ್ಧತೆ ವ್ಯಕ್ತಪಡಿಸಿದರು.

Continue Reading

ದೇಶ

BENGALURU : ಮಹಾಶಿವರಾತ್ರಿ ಪ್ರಯುಕ್ತ ಬೆಂಗಳೂರು ನಗರದಲ್ಲಿ ಮಾಂಸ ಮಾರಾಟ ನಿಷೇಧ

ಬೆಂಗಳೂರು, ಫೆಬ್ರವರಿ 13: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಫೆಬ್ರವರಿ 15ರಂದು ನಗರದಲ್ಲಿ ಮಾಂಸ ಮಾರಾಟ ಹಾಗೂ ಪ್ರಾಣಿ ವಧೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಕುರಿತು Greater Bengaluru Authority (ಜಿಬಿಎ) ಆದೇಶ ಹೊರಡಿಸಿದೆ.

ಜಿಬಿಎ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಹೊರಡಿಸಿದ ಆದೇಶದ ಪ್ರಕಾರ, ಹಬ್ಬದ ದಿನದಂದು ಪ್ರಾಣಿ ವಧೆ ನಡೆಸುವುದಾಗಲಿ ಅಥವಾ ಮಾಂಸ ಉತ್ಪನ್ನಗಳ ಮಾರಾಟ ಮಾಡುವುದಾಗಲಿ ಸಂಪೂರ್ಣ ನಿಷಿದ್ಧವಾಗಿದೆ.

ಆದೇಶದ ಪ್ರಮುಖ ಅಂಶಗಳು

  • ಫೆಬ್ರವರಿ 15ರಂದು ಮಾಂಸ ಮಾರಾಟ ಸಂಪೂರ್ಣ ಬಂದ್
  • ನಗರ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ನಿಷೇಧ
  • ಹಬ್ಬದ ದಿನ ನಿಯಮ ಉಲ್ಲಂಘಿಸಿದರೆ ಕ್ರಮ
  • ನಾಗರಿಕರು ಹಾಗೂ ವ್ಯಾಪಾರಿಗಳು ಆದೇಶ ಪಾಲನೆ ಮಾಡಬೇಕು

ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಭಕ್ತಿಭಾವದ ವಾತಾವರಣ ಕಾಪಾಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Continue Reading

Trending