Connect with us

ದೇಶ

ತಿರುಪತಿಯಲ್ಲಿ ದುರಂತ – ಕಾಲ್ತುಳಿತಕ್ಕೆ ಮೂಲ ಕಾರಣ ಏನು? ದಿಢೀರ್‌ ಗೇಟ್‌ ಓಪನ್‌ ಮಾಡಿದ್ದು ಯಾಕೆ?

ತಿರುಪತಿ: ಪ್ರಸಿದ್ಧ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ (Tirupati Temple) ಬುಧವಾರ ರಾತ್ರಿ ವೈಕುಂಠ ದ್ವಾರ ದರ್ಶನ (Vaikuntha Dwara Darshan) ಟಿಕೆಟ್‌ ಕೌಂಟರ್‌ ಬಳಿ ನೂಕು ನುಗ್ಗಲು ಸಂಭವಿಸಿ ನಡೆದ ಕಾಲ್ತುಳಿತದಲ್ಲಿ (Stampede) ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಬೈರಾಗಿಪಟ್ಟೇಡ, ಶ್ರೀನಿವಾಸಂ ಮತ್ತು ಸತ್ಯನಾರಾಯಣಪುರಂನಲ್ಲಿ ಕಾಲ್ತುಳಿತ ಸಂಭವಿಸಿದ್ದು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ದುರಂತಕ್ಕೆ ಕಾರಣ ಏನು?
ಜ. 10, 11 ಮತ್ತು 12 ರಂದು ವೈಕುಂಠ ಏಕಾದಶಿ ಇರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 5 ಗಂಟೆಯಿಂದ ವೈಕುಂಠದ್ವಾರ ಸರ್ವದರ್ಶನಕ್ಕೆ ಟಿಕೆಟ್​ ನೀಡಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನ (TTD)ಪ್ರಕಟಿಸಿತ್ತು. ದಿನಕ್ಕೆ 40 ಸಾವಿರದಂತೆ 3 ದಿನಗಳಲ್ಲಿ 1 ಲಕ್ಷದ 20 ಸಾವಿರ ದರ್ಶನ ಟಿಕೆಟ್​ ನೀಡಲು ಟಿಟಿಡಿ ನಿರ್ಧರಿಸಿತ್ತು. 9 ಕಡೆಗಳಲ್ಲಿ 90 ಕೌಂಟರ್‌ಗಳ ಮೂಲಕ ಸರ್ವದರ್ಶನ ಟಿಕೆಟ್​​ ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿತ್ತು.

ವೈಕುಂಠ ದ್ವಾರ ದರ್ಶನದ ಟಿಕೆಟ್‌ ಪಡೆಯಲು ಬುಧವಾರ ಸಂಜೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತಿದ್ದರು. ಭಾರೀ ಸಂಖ್ಯೆಯಲ್ಲಿ ಭಕ್ತರು ಸರದಿಯಲ್ಲಿ ನಿಂತಿದ್ದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಟಿಕೆಟ್‌ ನೀಡಲು ಟಿಟಿಡಿ ಮುಂದಾಯಿತು. ಬೈರಾಗಿಪಟ್ಟೇಡ ರಾಮ ನಾಯ್ಡು ಶಾಲೆಯ ಬಳಿಯ ಕೌಂಟರ್‌ನಲ್ಲಿ ಸಾಲಿನಲ್ಲಿ ನಿಂತಿದ್ದ ಭಕ್ತರೊಬ್ಬರಿಗೆ ದಿಢೀರ್‌ ಉಸಿರಾಟದ ಸಮಸ್ಯೆಯಾಗಿದೆ.

ವೈಕುಂಠ ಏಕಾದಶಿ ಸಂಭ್ರಮದಲ್ಲಿ ದೇಶದ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬರುತ್ತಾರೆ.

ತೀವ್ರವಾಗಿ ಗಾಯಗೊಂಡವರಿಗೆ ಪೊಲೀಸ್‌ ಸಿಬ್ಬಂದಿಯೇ ಪ್ರಾಥಮಿಕ ಆರೈಕೆ ಮಾಡುತ್ತಿರುವುದು ಹಾಗೂ ಗಾಯಾಳುಗಳನ್ನು ಅಂಬುಲೆನ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ದೃಶ್ಯಗಳಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ದೇಶ

ಅಮೆರಿಕ-ರಷ್ಯಾ ವ್ಯವಹಾರ: ಭಾರತದ ಟೀಕೆಗೆ ಟ್ರಂಪ್ ನುಣುಚು ಪ್ರತಿಕ್ರಿಯೆ

ವಾಷಿಂಗ್ಟನ್: ರಷ್ಯಾದಿಂದ ಈಗಲೂ ವ್ಯವಹಾರ ನಡೆಸುತ್ತಿರುವ ಅಮೆರಿಕದ ಕುರಿತಾಗಿ ಭಾರತ ಮಾಡಿರುವ ಗಂಭೀರ ಆರೋಪಕ್ಕೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನುಣುಚು ಪ್ರತಿಕ್ರಿಯೆ ನೀಡಿದ್ದಾರೆ.

ಭಾರತ ಆರೋಪಿಸಿದಂತೆ, ಅಮೆರಿಕ 2024ರಲ್ಲಿ 1.1 ಶತಕೋಟಿ ಡಾಲರ್‌ ಮೌಲ್ಯದ ರಸಗೊಬ್ಬರ, 878 ಮಿಲಿಯನ್ ಡಾಲರ್‌ ಮೌಲ್ಯದ ಪಲ್ಲಾಡಿಯಮ್‌ ಸೇರಿದಂತೆ ಹಲವು ಅಮೂಲ್ಯ ಲೋಹಗಳನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಯುರೇನಿಯಂ ಹೆಕ್ಸಾಫ್ಲೋರೈಡ್‌ನಂತಹ ಪರಮಾಣು ಉತ್ಪನ್ನಗಳ ಆಮದು ಕೂಡ ಮುಂದುವರಿದಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಟ್ರಂಪ್, “ನನಗೆ ಈ ವ್ಯಾಪಾರದ ವಿವರಗಳು ತಿಳಿದಿಲ್ಲ, ನಾನು ಪರಿಶೀಲನೆ ಮಾಡುತ್ತೇನೆ” ಎಂದು ತಿಳಿಸಿದ್ದಾರೆ.

ಭಾರತದ ಖಡಕ್ ಪ್ರತಿಕ್ರಿಯೆ:
ಭಾರತ, ತನ್ನ ರಷ್ಯಾ ತೈಲ ಆಮದು ಬಗ್ಗೆ ಅಮೆರಿಕದ ಟೀಕೆಗೆ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದೆ. ಯುರೋಪ್ ದೇಶಗಳೇ ರಷ್ಯಾದಿಂದ ಭಾರಿ ಪ್ರಮಾಣದಲ್ಲಿ ಎಲ್‌ಎನ್‌ಜಿ, ರಸಗೊಬ್ಬರ, ಲೋಹಗಳನ್ನು ಆಮದು ಮಾಡಿಕೊಳ್ಳುತ್ತಿವೆ. 2024ರಲ್ಲಿ ಯುರೋಪಿಯನ್ ಒಕ್ಕೂಟವು 67.5 ಬಿಲಿಯನ್ ಯುರೋಗಳಷ್ಟು ಸರಕು ವ್ಯಾಪಾರ ಹಾಗೂ 17.2 ಬಿಲಿಯನ್ ಯುರೋಗಳಷ್ಟು ಸೇವಾ ವ್ಯಾಪಾರವನ್ನು ರಷ್ಯಾ ಜೊತೆ ನಡೆಸಿದೆ.

ಟ್ರಂಪ್ ಅವರ ಆರೋಪ:
ಟ್ರಂಪ್ ಹೇಳುವಂತೆ, ಭಾರತ ರಷ್ಯಾದ ತೈಲವನ್ನು ಖರೀದಿ ಮಾಡುತ್ತಿದ್ದು, ಅದನ್ನು ಮುಕ್ತ ಮಾರುಕಟ್ಟೆಯಲ್ಲಿ ಲಾಭಕ್ಕಾಗಿ ಮಾರಾಟ ಮಾಡುತ್ತಿದೆ. ಅವರು ಈ ಕಾರಣಕ್ಕಾಗಿ ಭಾರತದಿಂದ ಸಂಗ್ರಹಿಸಬೇಕಾದ ಸುಂಕವನ್ನು ಹೆಚ್ಚಿಸುವುದಾಗಿ ಹೇಳಿದ್ದಾರೆ.

ಭಾರತದ ನಿಲುವು:
ಭಾರತ, ತನ್ನ ರಾಷ್ಟ್ರೀಯ ಹಿತಾಸಕ್ತಿಗಳನ್ನು ಕಾಪಾಡುವ ಸಲುವಾಗಿ ಕಚ್ಚಾ ತೈಲವನ್ನು ರಷ್ಯಾದಿಂದ ಆಮದು ಮಾಡಿಕೊಳ್ಳುತ್ತಿದೆ. ಇಂಧನದ ದರಗಳನ್ನು ಜನತೆಗೆ ಕೈಗೆಟುಕುವಂತೆ ಇರಿಸಲು ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

Continue Reading

ಕ್ರೀಡೆ

ರಿಷಭ್ ಪಂತ್ ಮಾನವೀಯತೆ: ಬಡ ವಿದ್ಯಾರ್ಥಿನಿಗೆ BCA ಪ್ರವೇಶಕ್ಕೆ ₹40,000 ನೆರವು!

ಬಾಗಲಕೋಟೆ: ಟೀಂ ಇಂಡಿಯಾದ ವಿಕೆಟ್ ಕೀಪರ್ ಹಾಗೂ ತೀಕ್ಷ್ಣ ಬ್ಯಾಟ್ಸ್‌ಮನ್ ರಿಷಭ್ ಪಂತ್ ಅವರು ಕ್ರೀಡಾಕ್ಷೇತ್ರದಷ್ಟೇ ದಾನಶೀಲತೆಯಲ್ಲೂ ಮಾದರಿಯಾಗಿದ್ದಾರೆ. ಇತ್ತೀಚೆಗೆ ಅವರು ಬಾಗಲಕೋಟೆ ಜಿಲ್ಲೆಯ ಬಡ ವಿದ್ಯಾರ್ಥಿನಿಯೊಬ್ಬಳಿಗೆ ಆರ್ಥಿಕ ನೆರವು ನೀಡಿ ಜನಮನ ಗೆದ್ದಿದ್ದಾರೆ.

ಬೀಳಗಿ ತಾಲ್ಲೂಕಿನ ರಬಕವಿ ಗ್ರಾಮದ ಜ್ಯೋತಿ ಕಣಬೂರಮಠ ದ್ವಿತೀಯ ಪಿಯುಸಿಯಲ್ಲಿ 85% ಅಂಕ ಗಳಿಸಿದ್ದರೂ, ಮನೆ ಪರಿಸ್ಥಿತಿಯಿಂದ BCA ಕೋರ್ಸ್‌ಗೆ ಸೇರುವ ಕನಸು ತೊಡೆತಗೊಂಡಿತ್ತು. ತಂದೆ ಚಿಕ್ಕ ಟೀ ಅಂಗಡಿ ನಡೆಸುವವರಾಗಿದ್ದು ಶುಲ್ಕ ಪಾವತಿಸಲು ಸಾಧ್ಯವಾಗಿರಲಿಲ್ಲ.

ಇದನ್ನು ಗುತ್ತಿಗೆದಾರ ಅನಿಲ್ ಹುಣಸಿಕಟ್ಟಿ ಅವರು ಗಮನಿಸಿ, ತಮ್ಮ ಸಂಪರ್ಕಗಳಿಂದ ರಿಷಭ್ ಪಂತ್ ಅವರ ಗಮನಕ್ಕೆ ತಂದರು. ಇದನ್ನು ಕೇಳಿದ ಪಂತ್, ಜುಲೈ 17ರಂದು ₹40,000 ನೇರವಾಗಿ BLDE ಕಾಲೇಜಿನ ಖಾತೆಗೆ ವರ್ಗಾಯಿಸಿ, ಜ್ಯೋತಿಯ ಮೊದಲ ಸೆಮಿಸ್ಟರ್ ಶುಲ್ಕವನ್ನು ಭರಿಸಿದರು.

ಜ್ಯೋತಿ ಎಮೋಶನಲ್ ಆಗಿ, “ರಿಷಭ್ ಪಂತ್ ಸಹಾಯದಿಂದ ನನ್ನ ಕನಸು ಸಾಧ್ಯವಾಯಿತು. ಅವರಿಗೆ ದೇವರು ಆಯುಷ್ಯ ಕೊಡಲಿ,” ಎಂದಿದ್ದಾರೆ.

Continue Reading

ದೇಶ

ಪಿಎಂ ಮೋದಿ ಆಗಸ್ಟ್ 10ರಂದು ಬೆಂಗಳೂರಿಗೆ: ನಮ್ಮ ಮೆಟ್ರೋ ಹಳದಿ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗದ (Yellow Line) ಉದ್ಘಾಟನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು (PM Modi) ಆಗಸ್ಟ್ 10ರಂದು ಬೆಂಗಳೂರಿಗೆ ಬರುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿಯವರು ಆಗಸ್ಟ್ 10ರಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವ ಉದ್ದೇಶದಿಂದ ಬರುತ್ತಿದ್ದಾರೆ. ಅವರ ಭೇಟಿಗೆ ಸಿದ್ಧತೆಗಳು ನಡೆಯುತ್ತಿವೆ. ಟೈಮ್ ಟು ಟೈಮ್ ಕಾರ್ಯಕ್ರಮಗಳ ಬಗ್ಗೆ ಇನ್ನೂ ವಿವರ ಬಾಕಿಯಿದೆ,” ಎಂದು ಹೇಳಿದರು.

ವೈಭವದಿಂದ ಕಾರ್ಯಕ್ರಮ?
ಆದರೆ, ಮೂಲ ಯೋಜನೆಗೆ ಬದಲಾವಣೆ ಆಗಿದೆ. ಈಗ ಪ್ರಧಾನಿಯವರು ಕೇವಲ ಹಳದಿ ಮಾರ್ಗದ ಮೆಟ್ರೋ ಮತ್ತು ವಂದೇ ಭಾರತ್ ರೈಲು ಉದ್ಘಾಟನೆಗೆ ಮಾತ್ರ ಭಾಗಿಯಾಗಲಿದ್ದಾರೆ. ಬಿಜೆಪಿ ಕಾರ್ಯಕರ್ತರ ಸಮಾವೇಶ ಮತ್ತು ರೋಡ್ ಶೋ ಕಾರ್ಯಾಚರಣೆಗಳು ರದ್ದುಪಡಿಸಲಾಗಿದೆ.

ಇದರ ಪರಿಣಾಮವಾಗಿ, ಒಂದು ವರ್ಷದಿಂದ ಮೋದಿಯವರ ಆಗಮನದ ನಿರೀಕ್ಷೆಯಲ್ಲಿದ್ದ ಬಿಜೆಪಿ ಕಾರ್ಯಕರ್ತರು ನಿರಾಸೆಗೊಳಗಾಗಿದ್ದಾರೆ ಎಂದು ವರದಿಯಾಗಿದೆ.

Continue Reading

Trending