ರಾಜಕೀಯ
ಸುಮಲತಾ ಅಂಬರೀಶ್ ಗೆ ಬಿಗ್ ಶಾಕ್- ಕೈ ಹಿಡಿದ ಆಪ್ತ!
ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಷ್ ಗೆ ಬಿಗ್ ಶಾಕ್ ಎದುರಾಗಿದೆ, ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಬೇಲೂರು ಸೋಮಶೇಖರ್, ಸುಮಲತಾ ಬಳಗವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ, ಮಂಡ್ಯ ಶಾಸಕರಾದ ಗಣಿಗ ರವಿಕುಮಾರ್ ಅವರು ಸೋಮಶೇಖರ್ ಅವರನ್ನು ಸೆಳೆದುಕೊಂಡಿದ್ದು, ಅವರ ನೇತೃತ್ವದಲ್ಲಿಯೇ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದೆ,
ಪಿಎಲ್‍ಡಿ ಬ್ಯಾಂಕ್ ನಿರ್ದೇಶಕರ ಸ್ಧಾನಕ್ಕೆ ಚುನಾವಣೆ ಮುಂದಿರುವಂತೆಯೇ ಈ ಬೆಳವಣಿಗೆ ನಡೆದಿದೆ, ನಿರ್ದೇಶಕ ಸ್ಧಾನದ ಆಕಾಂಕ್ಷಿಯಾಗಿರುವ ಸೋಮಶೇಖರ್, ಸುಮಲತಾ ಬಣವನ್ನು ಕಾಂಗ್ರೆಸ್ ಕೈ ಹಿಡಿದಿದ್ದಾರೆನ್ನಲಾಗಿದೆ,
ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದೆಯಾಗಿದ್ದ ಸುಮಲತಾ ಬಳಿಕ ಬಿಜೆಪಿ ಸೇರ್ಪಡೆಯಾಗಿದ್ದರು, 2025 ರಿಂದ ಮಂಡ್ಯದ ರಾಜಕಾರಣದಲ್ಲಿ ಸಕ್ರಿಯವಾಗಿ ತೊಡುಗಿಕೊಳ್ಳುವುದಾಗಿ ಸುಮಲತಾ ಘೋಷಿಸಿದ್ದು, ಮಂಡ್ಯದಲ್ಲಿಯೇ ನಿವಾಸವನ್ನು ಬಾಡಿಗೆಗೆ ಪಡೆದಿದ್ದರು, ಈಗ ಸುಮಲತಾ ಮಂಡ್ಯಕ್ಕೆ ಕಾಲಿಡುತ್ತಿರುವಂತೆಯೇ ಕಾಂಗ್ರೆಸ್ ಏಟು ನೀಡಿದೆ,
ದೇಶ
“ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದ ಡಿಕೆಶಿ, ಅಸ್ಸಾಂ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆದಿದೆ ಎಂದು ತಿಳಿಸಿದ್ದರೂ, ಅವರ ಹೇಳಿಕೆಗಳು ರಾಜಕೀಯ ವಲಯದಲ್ಲಿ ಕುತೂಹಲ ಹೆಚ್ಚಿಸಿವೆ.
“ನಾನು ದೆಹಲಿಗೆ ಬಂದಿರೋದೇ ರಾಜಕಾರಣ ಮಾಡಲು. ಏನೂ ಮಾತನಾಡದೆ ಸುಮ್ಮನೆ ಹೋಗಲು ಸಾಧ್ಯವೇ?” ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರೂಪೇಶ್ ಬಘೇಲ್ ಜೊತೆಗೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿದ ಅವರು, ಅಸ್ಸಾಂ ಸೇರಿದಂತೆ ಇತರೆ ರಾಜ್ಯಗಳ ಚುನಾವಣಾ ಸ್ಥಿತಿಗತಿಗಳ ಕುರಿತು ಚರ್ಚೆ ನಡೆದಿದೆ ಎಂದರು. “ಎಲ್ಲಾ ವಿಚಾರಗಳನ್ನು ಮಾತನಾಡಲೇಬೇಕು. ಕಾಲವೇ ಎಲ್ಲಕ್ಕೂ ಉತ್ತರ ಕೊಡಲಿದೆ” ಎಂಬ ಅವರ ಮಾತುಗಳಿಗೆ ಹಲವು ಅರ್ಥಗಳು ನೀಡಲಾಗುತ್ತಿದೆ.
ಇದೇ ವೇಳೆ ಬಜೆಟ್ ಪೂರ್ವಸಿದ್ಧತಾ ಸಭೆಗೆ ಗೈರಾಗಿದ್ದ ಡಿಕೆಶಿ ದೆಹಲಿಗೆ ತೆರಳಿರುವುದು ಗಮನಾರ್ಹ. ಸಿಎಂ ಸಿದ್ದರಾಮಯ್ಯ ಅವರ ಅನುಮತಿ ಪಡೆದುಕೊಂಡೇ ಅವರು ತೆರಳಿದ್ದಾರೆ ಎನ್ನಲಾಗಿದ್ದರೂ, ದೆಹಲಿಯ ರಾಜಕೀಯ ಚಟುವಟಿಕೆಗಳು ಕುತೂಹಲ ಹುಟ್ಟಿಸಿವೆ. ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದರಾ? ಎಂಬ ಪ್ರಶ್ನೆಗೆ ಅವರು ಸ್ಪಷ್ಟ ಉತ್ತರ ನೀಡಿಲ್ಲ.
ರಾಜ್ಯ ನಾಯಕತ್ವ ವಿಚಾರದಲ್ಲಿ ರಾಹುಲ್ ಗಾಂಧಿಯ ನಿರ್ಧಾರವೇ ಅಂತಿಮ ಎಂಬುದು ಕಾಂಗ್ರೆಸ್ ವಲಯದ ನಿಲುವು. ಇದೀಗ ಡಿಕೆಶಿ ರಾಹುಲ್ ಗಾಂಧಿಯನ್ನು ಭೇಟಿ ಮಾಡುವ ಸಾಧ್ಯತೆಗಳೂ ಚರ್ಚೆಯಾಗುತ್ತಿವೆ. ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಹೊಸ ತಿರುವು ಪಡೆಯುವ ಸೂಚನೆ ನೀಡಿದೆ.
ಅಪರಾಧ
BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.
ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.
ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.
ದೇಶ
“ಉರ್ಕೆ ಉಂಡ್ರಾ?”: ಮಧುಗಿರಿಯಲ್ಲಿ ‘ಸಿಎಂ ಆಗಿ’ ಘೋಷಣೆಗೆ ಪರಮೇಶ್ವರ್ ತೆಲುಗಿನಲ್ಲಿ ತಿರುಗೇಟು
ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ ಮಾಡುತ್ತಿದ್ದ ವೇಳೆ ಅಭಿಮಾನಿಯೊಬ್ಬರು “ನೀವು ಸಿಎಂ ಆಗಬೇಕು” ಎಂದು ಕೂಗಿದ ಪ್ರಸಂಗ ನಡೆದಿದೆ.
ಭಾಷಣದ ಅಂತ್ಯದಲ್ಲಿ ಈ ಘೋಷಣೆ ಕೇಳಿಬಂದಾಗ, ಪರಮೇಶ್ವರ್ ಅವರು ಕ್ಷಣಮಾತ್ರ ನಿಂತು ಕಾರ್ಯಕರ್ತನ ಮಾತಿಗೆ ತೆಲುಗಿನಲ್ಲಿ ಪ್ರತಿಕ್ರಿಯಿಸಿದರು. “ಉರ್ಕೆ ಉಂಡ್ರ… ನೀನು ಸಿಎಂ ಅಂಟ?” ಎಂದು ಹೇಳಿ, “ನಾನು ಸಿಎಂ ಆಗಬೇಕಂತೆ… ಸುಮ್ಮನಿರು” ಎಂದು ಹಾಸ್ಯಭರಿತವಾಗಿ ಹೇಳಿ ಕಾರ್ಯಕರ್ತನ ಬಾಯಿ ಮುಚ್ಚಿಸಿದರು.
ಈ ದೃಶ್ಯ ಅಲ್ಲಿದ್ದ ಜನರಲ್ಲಿ ನಗೆರಸ ಮೂಡಿಸಿದ್ದು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಾಜಕೀಯ ವಲಯದಲ್ಲೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಪರಮೇಶ್ವರ್ ಅವರ ಪ್ರತಿಕ್ರಿಯೆ ಬಗ್ಗೆ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಭಿವೃದ್ಧಿ, ಮೂಲಸೌಕರ್ಯ ಬಲಪಡಿಸುವುದು ಮತ್ತು ಸಾರ್ವಜನಿಕ ಸೇವೆ ಸುಧಾರಣೆ ಕುರಿತು ಗೃಹ ಸಚಿವರು ಮಾತನಾಡಿದರು. ಆದರೆ “ಸಿಎಂ ಆಗಿ” ಘೋಷಣೆಯ ಘಟನೆ ಸಮಾರಂಭದ ಪ್ರಮುಖ ಹೈಲೈಟ್ ಆಗಿದೆ.
-
ಬೆಂಗಳೂರು3 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ21 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ20 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ಕ್ರೀಡೆ21 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ದೇಶ19 hours agoLATEST : ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಪ್ರಸ್ತಾವನೆ? ರಿಜುಜು ಕಿಡಿ
-
ದೇಶ18 hours agoಎಪ್ಸ್ಟೀನ್ ಫೈಲ್ಸ್ನಲ್ಲಿ ಹರ್ದೀಪ್ ಪುರಿ ಹೆಸರು? ಸಂಸತ್ತಿನಲ್ಲಿ ಗದ್ದಲ, ಸಚಿವರ ಸ್ಪಷ್ಟನೆ
-
ಅಪರಾಧ20 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
-
ದೇಶ21 hours agoPOK-ಅಕ್ಸಾಯ್ ಚಿನ್ ಭಾರತದ ಭಾಗ ಎಂದ US… ನಂತರ ಡಿಲೀಟ್!
