Connect with us

ರಾಜಕೀಯ

ಆಸ್ತಿ ಮೌಲ್ಯ ಹೆಚ್ಚಾಗುತ್ತದೆ, ಭೂಮಿ ಮಾರಾಟ ಮಾಡಬೇಡಿ: ಕನಕಪುರ ಕ್ಷೇತ್ರದ ಜನರಿಗೆ ಡಿಕೆಶಿ ಕರೆ – KANAKAPUR DEVELOPMENT

Published

on

ರಾಮನಗರ: “ಕಾಯಕದಲ್ಲಿಯೇ ದೇವರನ್ನು ಕಾಣಬೇಕು. ನಮಗೆ ಅಭಿವೃದ್ಧಿಯೇ ತಂದೆ-ತಾಯಿ, ಗ್ಯಾರಂಟಿಗಳೇ ಬಂಧು-ಬಳಗ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಕನಕಪುರ ತಾಲೂಕಿನ ಭೂಹಳ್ಳಿ ಹೊಸಕೆರೆ ಬಳಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

“ನನ್ನ ಕ್ಷೇತ್ರಕ್ಕೆ ಸುಮಾರು 400 ಕೋಟಿ ರೂ.ಗಳಷ್ಟು ಅನುದಾನ ತಂದಿದ್ದೇನೆ. ಒಂದೇ ಸಲ ಅನುದಾನ ತಂದರೆ ಬೇರೆ ಕ್ಷೇತ್ರದವರು ಪ್ರಶ್ನೆ ಮಾಡುತ್ತಾರೆ. ಹಂತಹಂತವಾಗಿ ಅನುದಾನ ತಂದು ಅಭಿವೃದ್ಧಿ ಕೆಲಸದ ಮೂಲಕ ಜನರ ಋಣ ತೀರಿಸಲಾಗುವುದು. 250 ಕೋಟಿ ರೂ ಮೊತ್ತದ ಕಾಮಗಾರಿಗಳು ನೀರಾವರಿ ಇಲಾಖೆಯಿಂದಲೇ ನಡೆಯುತ್ತಿದೆ” ಎಂದರು.

“ಪಾದ್ದರೆಯಿಂದ ಭೂಹಳ್ಳಿ ಅರಣ್ಯ ತಪಾಸಣಾ ಕೇಂದ್ರದವರೆಗೆ ಸುಮಾರು 13 ಕೋಟಿ ರೂ ವೆಚ್ಚದಲ್ಲಿ ರಸ್ತೆ, ದೊಡ್ಡ ಆಲಹಳ್ಳಿಯಿಂದ ಕಬ್ಬಾಳಿನ ತನಕ 40 ಕೋಟಿ ರೂ ವೆಚ್ಚದಲ್ಲಿ 14.5 ಕಿ.ಮೀ ಉದ್ದದ ರಸ್ತೆ ಅಗಲೀಕರಣ ಮಾಡಲಾಗುತ್ತಿದೆ. ಇದರಿಂದ ನಮ್ಮ ಜನರ ಆಸ್ತಿ ಮೌಲ್ಯ ಹೆಚ್ಚಾಗಲಿದೆ. ಕನಕಪುರ, ಸಾತನೂರು, ದೊಡ್ಡ ಆಲಹಳ್ಳಿ ರಸ್ತೆಗಳನ್ನು ಅಗಲೀಕರಣ ಮಾಡಲು ಸಾಧ್ಯವಿಲ್ಲ ಎಂದು ಒಂದಷ್ಟು ಜನ ನಗುತ್ತಿದ್ದರು. ಆದರೆ ಇಂದು ಕೆಲಸ ಮಾಡಿ ತೋರಿಸಿದ್ದೇವೆ. ರಸ್ತೆ ಅಭಿವೃದ್ಧಿಗೆ 135 ಕೋಟಿ ರೂ, ಹೊಸಕೆರೆ ತುಂಬಿಸಲು 108 ಕೋಟಿ ರೂ ಖರ್ಚು ಮಾಡಲಾಗುತ್ತಿದೆ. ನಲ್ಲಳ್ಳಿ- ಮುಲ್ಲಳ್ಳಿ ಸಂಪರ್ಕ ಸೇತುವೆಗೆ 11 ಕೋಟಿ, ಅರ್ಕಾವತಿಯಿಂದ ನೀರನ್ನು ಎತ್ತಿ ದೊಡ್ಡ ಆಲಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಿಗೆ ಸೂಕ್ಷ್ಮ ನೀರಾವರಿ ಕಲ್ಪಿಸಲು 70 ಕೋಟಿಯ ಕಾಮಗಾರಿ ನಡೆಸಲಾಗುತ್ತಿದೆ. ಇದರಿಂದ 8 ಗ್ರಾಮಗಳ 2 ಸಾವಿರ ಎಕರೆ ಭೂಮಿಗೆ ಉಪಯೋಗವಾಗಲಿದೆ. ಅರ್ಕಾವತಿ ನದಿಗೆ ಅಡ್ಡಲಾಗಿ ಕೊಕ್ಕರೆ ಹೊಸಹಳ್ಳಿ ಬಳಿ ಸಂಪರ್ಕ ಸೇತುವೆ ನಿರ್ಮಾಣಕ್ಕೆ 10 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ” ಎಂದು ಡಿಕೆಶಿ ಮಾಹಿತಿ ನೀಡಿದರು.

ಕ್ಷೇತ್ರದ ಎಲ್ಲಾ ಕೆರೆಗಳನ್ನು ತುಂಬಿಸಲು ಕ್ರಮ: “ನನ್ನ ಕ್ಷೇತ್ರದಲ್ಲಿ ಎಷ್ಟು ಕೆರೆಗಳನ್ನು ತುಂಬಿಸಲು ಸಾಧ್ಯವೋ ಅಷ್ಟು ಕೆರೆಗಳನ್ನು ತುಂಬಿಸುತ್ತೇನೆ. ಹಂತ ಹಂತವಾಗಿ ಕೆಲಸಗಳನ್ನು ಮಾಡುತ್ತೇನೆ. ಅಧಿಕಾರ ಅವಧಿಯಲ್ಲಿ ಎಲ್ಲಾ ಕಡೆ ನೀರು ತುಂಬಿ ಹರಿಯಬೇಕು. ಚನ್ನಪಟ್ಟಣ, ರಾಮನಗರ, ಮಾಗಡಿಗೆ ಅನೇಕ ಕಾರ್ಯಕ್ರಮಗಳನ್ನು ನೀಡಲಾಗಿದೆ. ಅಲ್ಲಿನ ಜನಕ್ಕೂ ನಾನು ಕೆಲಸ ಮಾಡಿಸುವುದಾಗಿ ಮಾತು ಕೊಟ್ಟಿದ್ದೇನೆ. ಮೇಕೆದಾಟು ಕಚೇರಿ ಪ್ರಾರಂಭ ಮಾಡಲಾಗಿದ್ದು, ಎಷ್ಟು ಜಮೀನು ಮುಳುಗಡೆಯಾಗುತ್ತದೆ ಎಂದು ಅಂದಾಜು ಮಾಡಲು ಕಂದಾಯ ಹಾಗೂ ಅರಣ್ಯ ಅಧಿಕಾರಿಗಳು ಕೆಲಸ ಪ್ರಾರಂಭ ಮಾಡಿದ್ದಾರೆ. ಕಾವೇರಿ ನದಿಯಿಂದ ನೀರನ್ನು ತಂದು ಜನರ ಬದುಕನ್ನು ಬದಲಾವಣೆ ಮಾಡುವ ದೊಡ್ಡ ಕೆಲಸ ನಡೆಯುತ್ತಿದೆ” ಎಂದರು.

ಒಬ್ಬ ವ್ಯಕ್ತಿಯ ಹಿಂದೆ ಎಷ್ಟು ಜನ ಇದ್ದಾರೆ ಎನ್ನುವುದಕ್ಕಿಂತ ಆತ ಎಷ್ಟು ಜನರ ಬದುಕನ್ನು ಬದಲಾವಣೆ ಮಾಡಿದ ಎನ್ನುವುದು ಮುಖ್ಯ‌. ಕೆರೆ ತುಂಬಿಸುವ ಯೋಜನೆಯಿಂದ ಸಾವಿರಾರು ರೈತರಿಗೆ ಉಪಯೋಗವಾಗುತ್ತದೆ. ಅಂತರ್ಜಲ ಹೆಚ್ಚುತ್ತದೆ, ಭೂಮಿ ಸದಾ ಹಸಿರಾಗಿರುತ್ತದೆ. ಕೆರೆ ತುಂಬಿಸುವ ಯೋಜನೆ ಅನುಷ್ಠಾನಕ್ಕೆ ಸಾಕಷ್ಟು ಕಷ್ಟ ಪಟ್ಟಿದ್ದೇವೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ” ಎಂದು ತಿಳಿಸಿದರು.

“ಚೀನಾದಿಂದ ರೇಷ್ಮೆ ಆಮದು ಕಡಿಮೆಯಾಗಿದೆ. ಆದ ಕಾರಣಕ್ಕೆ ರೇಷ್ಮೆಗೆ ಉತ್ತಮ ಬೆಲೆ ಬಂದಿದೆ. ಅದಕ್ಕೆ ಯಾರೂ ಸಹ ಭೂಮಿಯನ್ನು ಮಾರಾಟ ಮಾಡಲು ಹೋಗಬೇಡಿ. ಮುಂದಕ್ಕೆ ನಿಮ್ಮ ಭೂಮಿಯ ಬೆಲೆ ಹೆಚ್ಚಲಿದೆ. ಶಿಡ್ಲಘಟ್ಟ ಭಾಗದಲ್ಲಿ ನಮಗಿಂತ ಹೆಚ್ಚು ರೇಷ್ಮೆ ಬೆಳೆಯುತ್ತಿದ್ದಾರೆ. ಸಿಲ್ಕ್ ಮತ್ತು ಮಿಲ್ಕ್ ಅನ್ನು ಕೋಲಾರ ಭಾಗದಲ್ಲಿ ಹೆಚ್ಚು ಉತ್ಪಾದನೆ ಮಾಡುತ್ತಿದ್ದಾರೆ” ಎಂದರು.

“ದೇವೆಗೌಡರು ಹಾಗೂ ಕುಮಾರಸ್ವಾಮಿ ಅವರು ಸಾತನೂರು ಹೋಬಳಿಯನ್ನು ರಾಮನಗರಕ್ಕೆ ಸೇರಿಸಲು ಹೊರಟಿದ್ದರು. ಕನಕಪುರದಲ್ಲಿಯೇ ಸಾತನೂರನ್ನು ಉಳಿಸಿಕೊಳ್ಳಬೇಕು ಎಂದು ಸ್ಥಳೀಯ ಮುಖಂಡರಿಂದ ದೊಡ್ಡ ಹೋರಾಟ ನಡೆದ ಕಾರಣಕ್ಕೆ ನನಗೆ ನಿಮ್ಮ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ವೇಳೆ ಎಸ್.ಎಂ.ಕೃಷ್ಣ ಅವರು ಹಾಗೂ ಕುಲದೀಪ್ ಸಿಂಗ್ ಅವರ ಪ್ರಯತ್ನದ ಫಲವಾಗಿ ಈ ಹೋಬಳಿ ಕನಕಪುರದಲ್ಲಿಯೇ ಉಳಿಯಿತು. ಕಾವೇರಿ ಸಂಗಮದಿಂದ ನೀರು ತಂದು ಈ ಭಾಗದ 21 ಕೆರೆಗಳಿಗೆ ತುಂಬಿಸುವ ಯೋಜನೆ ನನಗೆ ತೃಪ್ತಿ ನೀಡುತ್ತಿದೆ” ಎಂದು ಡಿಕೆಶಿ ಹೇಳಿದರು.

ದೇಶ

ರಾಮಲಿಂಗಾರೆಡ್ಡಿ ಬಳಿಕ ಮುನಿಯಪ್ಪ ಬಂಡಾಯ! ಕಾಂಗ್ರೆಸ್ ಹೈಕಮಾಂಡ್ ತುರ್ತು ಸಭೆ

Published

on

ದೇವನಹಳ್ಳಿ, ಜೂನ್ 5: ನೂತನ ಮುಖ್ಯಮಂತ್ರಿ D. K. Shivakumar ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಅಸಮಾಧಾನದ ಹೊಗೆ ದಟ್ಟವಾಗುತ್ತಿದೆ. ಹಿರಿಯ ನಾಯಕ Ramalinga Reddy ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ ಬೆನ್ನಲ್ಲೇ ಆಹಾರ ಸಚಿವ K. H. Muniyappa ಕೂಡ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ.

ಈ ಬೆಳವಣಿಗೆಯಿಂದ ಎಚ್ಚೆತ್ತುಕೊಂಡಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರದ ಆರಂಭದಲ್ಲೇ ಉಂಟಾಗಿರುವ ಬಿಕ್ಕಟ್ಟನ್ನು ಶಮನಗೊಳಿಸಲು ದೇವನಹಳ್ಳಿ ಬಳಿಯ Kempegowda International Airport ಸಮೀಪದ ವಿಐಪಿ ಲಾಂಜ್ ಹಾಗೂ ತಾಜ್ ಹೋಟೆಲ್‌ನಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಕಾಂಗ್ರೆಸ್ ನಾಯಕ Rahul Gandhi, ಎಐಸಿಸಿ ಉಸ್ತುವಾರಿ Randeep Singh Surjewala, ಮಾಜಿ ಮುಖ್ಯಮಂತ್ರಿ Siddaramaiah ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿದ್ದು, ಅಸಮಾಧಾನಗೊಂಡಿರುವ ನಾಯಕರನ್ನು ಮನವೊಲಿಸುವ ಪ್ರಯತ್ನ ನಡೆದಿದೆ.

ಖಾತೆ ಹಂಚಿಕೆಯಲ್ಲಿ ತಮ್ಮ ಹಿರಿತನಕ್ಕೆ ಸೂಕ್ತ ಗೌರವ ಸಿಕ್ಕಿಲ್ಲ ಎಂದು ಬೇಸರಗೊಂಡಿರುವ ಕೆ.ಎಚ್. ಮುನಿಯಪ್ಪ, ತಮಗೆ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ವರಿಷ್ಠರ ಮುಂದೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ತಮಗೆ ಹಂಚಿಕೆಯಾಗಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜವಾಬ್ದಾರಿಯನ್ನು ಸ್ವೀಕರಿಸುವುದಿಲ್ಲ ಎಂದು ಅವರು ಹಠ ಹಿಡಿದಿರುವುದು ಸರ್ಕಾರಕ್ಕೆ ಮತ್ತಷ್ಟು ಮುಜುಗರ ಉಂಟುಮಾಡಿದೆ.

ಇದಕ್ಕೂ ಮುನ್ನ ಬೆಂಗಳೂರು ನಗರಾಭಿವೃದ್ಧಿ ಖಾತೆ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಇದರಿಂದ ಸರ್ಕಾರ ರಚನೆಯಾದ ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಒಳಗೆ ಭಿನ್ನಮತದ ಧ್ವನಿ ಜೋರಾಗಿದೆ.

ಈ ಬೆಳವಣಿಗೆಗಳು ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸವಾಲುಗಳನ್ನು ತಂದೊಡ್ಡಿದ್ದು, ಹೈಕಮಾಂಡ್ ನಡೆಸುತ್ತಿರುವ ಈ ಹೈವೋಲ್ಟೇಜ್ ಸಭೆಯ ಫಲಿತಾಂಶದ ಮೇಲೆ ರಾಜ್ಯ ರಾಜಕಾರಣದ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ.

Continue Reading

ದೇಶ

ಹೊಸ ಪಕ್ಷ, ಹೊಸ ಹೋರಾಟ! ತಮಿಳುನಾಡಿನಲ್ಲಿ ಅಣ್ಣಾಮಲೈ ರಾಜಕೀಯ ಕ್ರಾಂತಿ

Published

on

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ಮಾಜಿ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ K. Annamalai ಅವರು ಭಾರತೀಯ ಜನತಾ ಪಕ್ಷಕ್ಕೆ ರಾಜೀನಾಮೆ ನೀಡಿದ ಬಳಿಕ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ತೊರೆದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ನಡೆಸಿದ ಅಣ್ಣಾಮಲೈ, ತಮ್ಮ ಹೊಸ ರಾಜಕೀಯ ವೇದಿಕೆಗೆ ‘We The People’ (ನಾವು ಜನರು) ಎಂದು ಹೆಸರು ಇಡಲಾಗುವುದು ಎಂದು ಘೋಷಿಸಿದರು. ಈ ಪಕ್ಷವು ಸಂಪೂರ್ಣವಾಗಿ ನಾಗರಿಕ ಕೇಂದ್ರಿತ ರಾಜಕೀಯ ಮಾದರಿಯನ್ನು ಅನುಸರಿಸಲಿದೆ ಎಂದು ಅವರು ತಿಳಿಸಿದರು.

“ಕಳೆದ 18 ತಿಂಗಳುಗಳಿಂದ ಹಲವು ವಿಚಾರಗಳಲ್ಲಿ ಬಿಜೆಪಿ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯಗಳಿದ್ದವು. 2025ರ ಡಿಸೆಂಬರ್‌ನಲ್ಲೇ ಪಕ್ಷ ಬಿಡುವ ನಿರ್ಧಾರವನ್ನು ಹೈಕಮಾಂಡ್‌ಗೆ ತಿಳಿಸಿದ್ದೆ. ಆದರೆ ಚುನಾವಣೆಯವರೆಗೆ ಜವಾಬ್ದಾರಿ ನಿರ್ವಹಿಸುವಂತೆ ಕೋರಿದ್ದರಿಂದ ಮುಂದುವರಿದಿದ್ದೆ,” ಎಂದು ಅಣ್ಣಾಮಲೈ ಹೇಳಿದ್ದಾರೆ.

ತಮ್ಮ ಭಾಷಣದಲ್ಲಿ ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ ದಿನಗಳನ್ನು ನೆನಪಿಸಿಕೊಂಡ ಅವರು, “ಅಧಿಕಾರ ಮತ್ತು ಹುದ್ದೆಗಳು ಯಾರಿಗೂ ಶಾಶ್ವತವಲ್ಲ. ರಾಜಕೀಯದಲ್ಲಿ ಒಂದೇ ಕುಟುಂಬ ಅಥವಾ ವ್ಯಕ್ತಿಗೆ ನಿರಂತರವಾಗಿ ಅಧಿಕಾರ ಸಿಗಬಾರದು. ಸಾಮಾನ್ಯ ಕುಟುಂಬಗಳಿಂದ ಬಂದವರಿಗೂ ಅವಕಾಶ ಸಿಗಬೇಕು,” ಎಂದು ವಂಶಾಡಳಿತ ರಾಜಕಾರಣದ ವಿರುದ್ಧ ವಾಗ್ದಾಳಿ ನಡೆಸಿದರು.

ಹೊಸ ಪಕ್ಷವು ಸ್ಥಳೀಯ ಸಂಸ್ಥೆಗಳಿಂದ ವಿಧಾನಸಭೆ ಚುನಾವಣೆಯವರೆಗೆ ಎಲ್ಲಾ ಹಂತದ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಭ್ರಷ್ಟಾಚಾರ ರಹಿತ, ಪಾರದರ್ಶಕ ಮತ್ತು ಜನಪರ ಆಡಳಿತವೇ ತಮ್ಮ ರಾಜಕೀಯ ಚಳವಳಿಯ ಮುಖ್ಯ ಗುರಿಯಾಗಿದೆ ಎಂದರು.

ಬಿಜೆಪಿಯಿಂದ ಹೊರಬಂದಿದ್ದರೂ ಪ್ರಧಾನಿ Narendra Modi ಅವರ ಮೇಲಿನ ಗೌರವ ಕಡಿಮೆಯಾಗಿಲ್ಲ ಎಂದು ಹೇಳಿದ ಅಣ್ಣಾಮಲೈ, “ಸಿದ್ಧಾಂತ ಮತ್ತು ಕಾರ್ಯವೈಖರಿಯಲ್ಲಿ ಭಿನ್ನಾಭಿಪ್ರಾಯಗಳಿದ್ದರೂ ಪ್ರಧಾನಿ ಮೋದಿ ಅವರ ನಾಯಕತ್ವದ ಬಗ್ಗೆ ನನಗೆ ಅಪಾರ ಗೌರವವಿದೆ” ಎಂದು ಸ್ಪಷ್ಟಪಡಿಸಿದರು.

ಅಣ್ಣಾಮಲೈ ಅವರ ಆಪ್ತ ವಲಯವು ಈ ಹೊಸ ರಾಜಕೀಯ ಪರಿಕಲ್ಪನೆಯನ್ನು ‘ದ್ರಾವಿಡ 2.0’ ಎಂದು ಬಣ್ಣಿಸುತ್ತಿದ್ದು, ಪ್ರಾದೇಶಿಕ ತಮಿಳು ಅಸ್ಮಿತೆ ಹಾಗೂ ರಾಷ್ಟ್ರೀಯ ದೃಷ್ಟಿಕೋನವನ್ನು ಒಟ್ಟುಗೂಡಿಸುವ ಪ್ರಯತ್ನ ಎಂದು ವಿಶ್ಲೇಷಿಸಲಾಗುತ್ತಿದೆ.

Continue Reading

ದೇಶ

ಡಿಕೆಶಿ ಸರ್ಕಾರಕ್ಕೆ ಮತ್ತೊಂದು ಶಾಕ್! ರಾಮಲಿಂಗಾ ರೆಡ್ಡಿ ಬಳಿಕ ಕೆ.ಹೆಚ್. ಮುನಿಯಪ್ಪ ಅಸಮಾಧಾನ ಸ್ಫೋಟ

Published

on

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಪಡೆದಿರುವ K. H. Muniyappa ಅವರು ಕೂಡ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖಾತೆ ಹಂಚಿಕೆ ವೇಳೆ ತಮ್ಮ ಹಿರಿತನಕ್ಕೆ ತಕ್ಕ ಮಹತ್ವ ನೀಡಿಲ್ಲ ಎಂದು ಮುನಿಯಪ್ಪ ಬೇಸರ ಹೊರಹಾಕಿದ್ದಾರೆ. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲೂ ಆಹಾರ ಖಾತೆಯನ್ನೇ ನಿರ್ವಹಿಸಿದ್ದ ಅವರು, ಈ ಬಾರಿ ಬೇರೆ ಖಾತೆಯ ನಿರೀಕ್ಷೆಯಲ್ಲಿದ್ದರು ಎನ್ನಲಾಗಿದೆ. ಆದರೆ ಮತ್ತೆ ಅದೇ ಇಲಾಖೆಯ ಜವಾಬ್ದಾರಿ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಏಳು ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ, “ಪಕ್ಷದಲ್ಲಿ ನನ್ನ ಹಿರಿತನವನ್ನು ಪರಿಗಣಿಸಿಲ್ಲ. ಆಹಾರ ಖಾತೆ ಬದಲು ಬೇರೆ ಇಲಾಖೆ ನೀಡುವಂತೆ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಖಾತೆ ಹಂಚಿಕೆಯಲ್ಲಿ ಹಿರಿಯ ನಾಯಕರಿಗೆ ಸೂಕ್ತ ಗೌರವ ಸಿಗಬೇಕಿತ್ತು” ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಬೆಂಗಳೂರು ಅಭಿವೃದ್ಧಿ ಇಲಾಖೆ ನಿರೀಕ್ಷಿಸಿದ್ದ Ramalinga Reddy ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸಂಕಷ್ಟವನ್ನುಂಟು ಮಾಡಿದೆ.

ಸರ್ಕಾರ ರಚನೆಯಾದ ಮೂರೇ ದಿನಗಳಲ್ಲಿ ಇಬ್ಬರು ಹಿರಿಯ ನಾಯಕರ ಅಸಮಾಧಾನ ಬಹಿರಂಗವಾಗಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ. ಅಸಮಾಧಾನಿತ ನಾಯಕರನ್ನು ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಮುಂದಾಗಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜ್ಯ ರಾಜಕೀಯ ವಲಯ ಕುತೂಹಲದಿಂದ ಗಮನ ಹರಿಸಿದೆ.

Continue Reading

Trending