ಕ್ರೀಡೆ
IPL 2025: ಕಾಲು ಫ್ರಾಕ್ಟರ್; ಬ್ಯಾಂಡೇಜ್ ಕಟ್ಟಿಕೊಂಡೇ ಕೋಚಿಂಗ್ ಗೆ ಬಂದ Rahul Dravid
ಜೈಪುರ: ಕ್ರಿಕೆಟ್ ಆಡುವಾಗ ಕಾಲಿಗೆ ಗಂಭೀರ ಗಾಯ ಮಾಡಿಕೊಂಡಿದ್ದ ಮಾಜಿ ಕ್ರಿಕೆಟಿಗ ಹಾಗೂ ಟೀಂ ಇಂಡಿಯಾ ಮಾಜಿ ಕೋಚ್ ಕಾಲಿಗೆ ಬ್ಯಾಂಡೇಜ್ ಕಟ್ಟಿಕೊಂಡೇ ರಾಜಸ್ತಾನ ರಾಯಲ್ಸ್ ತಂಡದ ಆಟಗಾರರಿಗೆ ಕೋಚಿಂಗ್ ನೀಡುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ.
ಹೌದು.. ಬೆಂಗಳೂರಿನಲ್ಲಿ ನಡೆದ ಸ್ಥಳೀಯ ಕ್ರಿಕೆಟ್ ಪಂದ್ಯದ ಸಮಯದಲ್ಲಿ ರಾಹುಲ್ ದ್ರಾವಿಡ್ ಗಾಯಗೊಂಡಿದ್ದರು. ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗನ ಕ್ರಿಕೆಟ್ ಮೈದಾನದಲ್ಲಿ ಯಂಗ್ ಲಯನ್ಸ್ ಕ್ಲಬ್ ವಿರುದ್ಧದ 50 ಓವರ್‌ಗಳ ಪಂದ್ಯದಲ್ಲಿ ದ್ರಾವಿಡ್ ಮತ್ತು ಅವರ ಮಗ ಅನ್ವಯ್ ವಿಜಯ ಕ್ರಿಕೆಟ್ ಕ್ಲಬ್ (ಮಾಲೂರು) ಅನ್ನು ಪ್ರತಿನಿಧಿಸಿದ್ದರು. ಅಲ್ಲಿ ದ್ರಾವಿಡ್ 6ನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಿ ಎಂಟು ಎಸೆತಗಳಲ್ಲಿ 10 ರನ್ ಗಳಿಸಿದರು. ತಂದೆ-ಮಗ ಜೋಡಿ ಐದನೇ ವಿಕೆಟ್‌ಗೆ 17 ರನ್‌ಗಳ ಸಂಕ್ಷಿಪ್ತ ಜೊತೆಯಾಟವಾಡಿತು.
ಆದರೆ ಅದೇ ಪಂದ್ಯದಲ್ಲಿ ರಾಹುಲ್ ದ್ರಾವಿಡ್ ಗಾಯಗೊಂಡರು. ಅವರ ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಕಾಲಿಗೆ ದೊಡ್ಡ ಮಟ್ಟದಲ್ಲೇ ಬ್ಯಾಂಡೇಜ್ ಕಟ್ಟಲಾಗಿತ್ತು. ಇದು ಅವರು ಮತ್ತೆ ಮೈದಾನಕ್ಕೆ ಇಳಿಯುವುದಿಲ್ಲ ಎಂದು ಹೇಳಲಾಗಿತ್ತು. ಇದೇ ವಿಚಾರ ಅವರು ಕೋಚಿಂಗ್ ಮಾಡುತ್ತಿರುವ ರಾಜಸ್ತಾನ ರಾಯಲ್ಸ್ ತಂಡದ ಆತಂಕಕ್ಕೂ ಕಾರಣವಾಗಿತ್ತು.
ಕೋಚಿಂಗ್ ಗೆ ಬಂದು ಅಚ್ಚರಿ ಮೂಡಿಸಿದ ಜಾಮಿ
ಇನ್ನು ದ್ರಾವಿಡ್ ಗುಣಮುಖರಾಗುವುದಿಲ್ಲ. ಹೀಗಾಗಿ ಹಾಲಿ ವರ್ಷದ ಐಪಿಎಲ್ ಟೂರ್ನಿಯಲ್ಲಿ ಅವರ ಸಲಹೆ ತರಬೇತಿ ಸಿಗುವುದಿಲ್ಲ ಎಂದು ರಾಜಸ್ತಾನ ರಾಯಲ್ಸ್ ತಂಡ ಭಾವಿಸಿತ್ತು. ಆದರೆ ಅಚ್ಚರಿ ಎಂಬಂತೆ ಇದೀಗ ರಾಹುಲ್ ದ್ರಾವಿಡ್ ಮೈದಾನಕ್ಕೆ ಆಗಮಿಸಿದ್ದಾರೆ. ಅಂದು ಎದ್ದು ನಿಲ್ಲಲೂ ಸಾಧ್ಯವಾಗದೇ ಅವರು ಕ್ರಚಸ್ ಅವಲಂಬಿಸಿದ್ದ ದ್ರಾವಿಡ್ ಇಂದು ಅದೇ ಕ್ರಚಸ್ ನೆರವಿನಿಂದ ಮೈದಾನಕ್ಕೆ ಬಂದಿದ್ದಾರೆ.
ಮಾತ್ರವಲ್ಲದೇ ಕಾಲಿನ ಗಾಯದ ಹೊರತಾಗಿಯೂ ತಂಡದ ತರಬೇತಿ ಅವಧಿಯಲ್ಲಿ ಅಚ್ಚರಿಯ ರೀತಿಯಲ್ಲಿ ಕಾಣಿಸಿಕೊಂಡು ಆಟಗಾರರಿಗೆ ತರಬೇತಿ ಕೂಡ ನೀಡಿದ್ದಾರೆ. ಪ್ರಸ್ತುತ ಸರಿಯಾಗಿ ನಡೆಯಲು ಸಾಧ್ಯವಾಗದ ದ್ರಾವಿಡ್, ಗಾಲ್ಫ್ ಕಾರ್ಟ್‌ನಲ್ಲಿ ಮೈದಾನಕ್ಕೆ ಆಗಮಿಸಿದ್ದು, ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್‌ಗೆ ಮಾರ್ಗದರ್ಶನ ನೀಡುತ್ತಾ ಕ್ರಚಸ್ ಸಹಾಯದಿಂದ ನಿಂತಿದ್ದರು.
ಈ ವಿಡಿಯೋವನ್ನು ರಾಜಸ್ತಾನ ರಾಯಲ್ಸ್ ತಂಡ ಟ್ವೀಟ್ ಮಾಡಿದ್ದು, ಟ್ವೀಟ್ ನಲ್ಲಿ, ‘ದಂತಕಥೆ ಭಾರತದ ಮಾಜಿ ಕೋಚ್ 10 ವರ್ಷಗಳ ನಂತರ ಆರ್‌ಆರ್‌ಗೆ ಮರಳುತ್ತಿದ್ದಾರೆ. ಈ ಹಿಂದೆ ನಾಯಕ ಮತ್ತು ಮಾರ್ಗದರ್ಶಕರಾಗಿ ನಿರ್ಣಾಯಕ ಪಾತ್ರ ವಹಿಸಿದ್ದರು. ಇದೀಗ ಕೋಚ್ ಆಗಿ ಮತ್ತೆ ತಂಡ ಸೇರ್ಪಡೆಯಾಗಿದ್ದಾರೆ ಎಂದು ಟ್ವೀಟ್ ಮಾಡಿದೆ.
ಶೇನ್ ವಾರ್ನ್ ನೇತೃತ್ವದಲ್ಲಿ ಐಪಿಎಲ್‌ನ ಉದ್ಘಾಟನಾ ಆವೃತ್ತಿಯನ್ನು ಗೆದ್ದ ನಂತರ, ರಾಜಸ್ಥಾನ್ ರಾಯಲ್ಸ್ ತಂಡವು ಎರಡನೇ ಬಾರಿಗೆ ಯಶಸ್ಸಿನ ಉತ್ತುಂಗದಲ್ಲಿದೆ. ಆದಾಗ್ಯೂ, ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ ತಂಡವು 2025 ರಲ್ಲಿ ತಮ್ಮ ಎರಡನೇ ಐಪಿಎಲ್ ಪ್ರಶಸ್ತಿಯನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಳೆದ ವರ್ಷ ರಾಯಲ್ಸ್ ತಂಡವು ಅಗ್ರ ನಾಲ್ಕರಲ್ಲಿ ಸ್ಥಾನ ಪಡೆದಿತ್ತು ಮತ್ತು ಪ್ಲೇ-ಆಫ್ ಪಂದ್ಯದಲ್ಲಿ ಸನ್‌ರೈಸರ್ಸ್ ತಂಡವು ಅವರನ್ನು 37 ರನ್‌ಗಳಿಂದ ಸೋಲಿಸಿ ಆರ್ ಆರ್ ತಂಡದ ಅಭಿಯಾನವನ್ನು ಕೊನೆಗೊಳಿಸಿತ್ತು.
ಅಂದಹಾಗೆ ಹಾಲಿ ಆವೃತ್ತಿಯ ಆರ್ ಆರ್ ತಂಡದಲ್ಲಿ ಸಂಜು ಸ್ಯಾಮ್ಸನ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್, ಶಿಮ್ರಾನ್ ಹೆಟ್ಮೈರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ವನಿಂದು ಹಸರಂಗ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ನಿತೀಶ್ ರಾಣಾ, ತುಷಾರ್ ದೇಶಪಾಂಡೆ, ಶುಭಂ ದುಬೆ, ಯುಧ್ವೀರ್ ಸಿಂಗ್, ಫಜಲ್ಹಕ್ ಫಾರೂಕಿ, ಕ್ವೇನಾ ಮಾಫಕ, ಕುನಾಲ್ ರಾಥೋಡ್, ಅಶೋಕ್ ಶರ್ಮಾಇದ್ದು, ಇವರಲ್ಲದೇ 13 ವರ್ಷದ ವೈಭವ್ ಸೂರ್ಯವಂಶಿ ಕೂಡ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಕ್ರೀಡೆ
IPL 2026ಕ್ಕೆ BCCI ಹೊಸ ನಿಯಮ: ಬೌಂಡರಿ ಬಳಿ ‘ಎಕ್ಸ್ಟ್ರಾ’ ಆಟಗಾರರಿಗೆ ಎಂಟ್ರಿ ಬ್ಯಾನ್!
ಮುಂಬೈ: Indian Premier League (IPL 2026) ಮುನ್ನ ಪಂದ್ಯಗಳ ಶಿಸ್ತು ಕಾಪಾಡಲು Board of Control for Cricket in India ಮಹತ್ವದ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಮೈದಾನದಲ್ಲಿ ಕಂಡುಬರುವ ಗೊಂದಲ ಮತ್ತು ಅನಗತ್ಯ ಆಟಗಾರರ ಓಡಾಟವನ್ನು ನಿಯಂತ್ರಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ.
ಹೊಸ ನಿಯಮದ ಪ್ರಕಾರ, ಪಂದ್ಯಕ್ಕೆ ಮುನ್ನ ತಂಡದ ಪಟ್ಟಿಯಲ್ಲಿ ಹೆಸರು ಪಡೆದಿರುವ 16 ಆಟಗಾರರು (ಪ್ಲೇಯಿಂಗ್ 11 + 5 ಬದಲಿ) ಮಾತ್ರ ಮೈದಾನಕ್ಕೆ ಪ್ರವೇಶಿಸಬಹುದು. ಡ್ರಿಂಕ್ಸ್ ತರುವುದು, ಬ್ಯಾಟ್ ನೀಡುವುದು ಅಥವಾ ಸಂದೇಶ ಸಾಗಿಸುವುದು ಈ ಆಟಗಾರರ ಜವಾಬ್ದಾರಿ ಆಗಿರುತ್ತದೆ.
ಇದಕ್ಕೂ ಮೊದಲು ಎಕ್ಸ್ಟ್ರಾ ಸ್ಕ್ವಾಡ್ ಸದಸ್ಯರು ಸಹ ಮೈದಾನಕ್ಕೆ ಬಂದು ಸಹಾಯ ಮಾಡುತ್ತಿದ್ದರು. ಆದರೆ ಇನ್ನುಮುಂದೆ ಅವರಿಗೆ ಮೈದಾನ ಪ್ರವೇಶ ಸಂಪೂರ್ಣ ನಿಷೇಧಿಸಲಾಗಿದೆ. ಅವರು ಕಡ್ಡಾಯವಾಗಿ ಡಗೌಟ್‌ನಲ್ಲಿಯೇ ಇರಬೇಕು.
ಇದಲ್ಲದೆ, ಬೌಂಡರಿ ಲೈನ್ ಬಳಿ ಇರುವ ಆಟಗಾರರ ಸಂಖ್ಯೆಯನ್ನೂ ನಿಯಂತ್ರಿಸಲಾಗಿದೆ. ಯಾವುದೇ ಸಮಯದಲ್ಲಿ ಕೇವಲ 5 ಆಟಗಾರರಿಗೆ ಮಾತ್ರ ಬೌಂಡರಿ ಬಳಿ ಇರಲು ಅವಕಾಶವಿದೆ. ಅವರು ‘ಬಿಬ್ಸ್’ ಧರಿಸಿಕೊಂಡು ಚೆಂಡು ಸಂಗ್ರಹಿಸುವುದು ಅಥವಾ ಸಹಾಯ ಮಾಡುವ ಕಾರ್ಯದಲ್ಲಿ ತೊಡಗಿರಬೇಕು.
ಈ ನಿಯಮಗಳ ಮುಖ್ಯ ಉದ್ದೇಶ ಮೈದಾನದಲ್ಲಿ ಶಿಸ್ತು ಕಾಪಾಡುವುದು, ಅನಗತ್ಯ ಸಮಯ ವ್ಯಯ ತಡೆಯುವುದು ಹಾಗೂ ಟಿವಿ ಪ್ರಸಾರದ ಗುಣಮಟ್ಟವನ್ನು ಉತ್ತಮಗೊಳಿಸುವುದಾಗಿದೆ.
ಒಟ್ಟಿನಲ್ಲಿ, IPL 2026ನಲ್ಲಿ ಈ ಹೊಸ ನಿಯಮಗಳು ಪಂದ್ಯಗಳ ರೂಪವನ್ನು ಬದಲಾಯಿಸುವ ಸಾಧ್ಯತೆ ಇದ್ದು, ತಂಡಗಳು ತಮ್ಮ ತಂತ್ರವನ್ನು ಬದಲಾಯಿಸಬೇಕಾಗಬಹುದು.
ಕ್ರೀಡೆ
ಕೊಹ್ಲಿ ಹೋಲಿಕೆಗೆ ಬಾಬರ್ ಅಜಮ್ ಕಿಡಿ: ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ
ಕರಾಚಿ: ಪಾಕಿಸ್ತಾನದ ಸ್ಟಾರ್ ಬ್ಯಾಟ್ಸ್‌ಮನ್ Babar Azam ಮತ್ತೆ ಸುದ್ದಿಯಲ್ಲಿದ್ದಾರೆ. Pakistan Super League (PSL 2026) ವೇಳೆ ಪತ್ರಿಕಾಗೋಷ್ಠಿಯಲ್ಲಿ ಕೇಳಲಾದ ಪ್ರಶ್ನೆಗೆ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿರುವುದು ವೈರಲ್ ಆಗಿದೆ.
ಪೇಶಾವರ್ ಝಲ್ಮಿ ತಂಡದ ನಾಯಕನಾಗಿರುವ ಬಾಬರ್, ಹೈದರಾಬಾದ್ ಕಿಂಗ್ಸ್‌ಮೆನ್ ವಿರುದ್ಧದ ಪಂದ್ಯದಲ್ಲಿ 43 ರನ್ ಗಳಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು. ಆದರೆ ಪಂದ್ಯವನ್ನು ಕೊನೆಗೊಳಿಸದೆ ಔಟ್ ಆದ ಬಗ್ಗೆ ಪ್ರಶ್ನೆ ಕೇಳಲಾಯಿತು. ವಿಶೇಷವಾಗಿ, ಅವರನ್ನು Virat Kohli ಜತೆ ಹೋಲಿಸಿ ಪ್ರಶ್ನೆ ಕೇಳಿದಾಗ ಬಾಬರ್ ಅಸಮಾಧಾನ ವ್ಯಕ್ತಪಡಿಸಿದರು.
“ಈ ಹೋಲಿಕೆಗಳನ್ನು ಇಲ್ಲಿ ಮುಗಿಸಿಬಿಡಿ. ನಿಮ್ಮಲ್ಲೇ ಇಟ್ಟುಕೊಳ್ಳಿ. ಪಂದ್ಯವನ್ನು ಫಿನಿಶ್ ಮಾಡಿಲ್ಲ ಎಂಬುದು ತಪ್ಪು ಕಲ್ಪನೆ” ಎಂದು ಅವರು ಸ್ಪಷ್ಟವಾಗಿ ಹೇಳಿದರು. ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳಿಂದ ವಿಭಿನ್ನ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಬಾಬರ್ ಅಜಮ್ ಅವರನ್ನು ಪಾಕಿಸ್ತಾನದ ಶ್ರೇಷ್ಠ ಆಟಗಾರರಲ್ಲಿ ಒಬ್ಬರೆಂದು ಪರಿಗಣಿಸಲಾದರೂ, ಟಿ20 ಕ್ರಿಕೆಟ್‌ನಲ್ಲಿ ಅವರ ಸ್ಟ್ರೈಕ್ ರೇಟ್ ಬಗ್ಗೆ ಟೀಕೆಗಳು ಕೇಳಿಬರುತ್ತಿವೆ. ಈ PSL ಸೀಸನ್‌ನಲ್ಲಿ ಅವರು ಎರಡು ಪಂದ್ಯಗಳಲ್ಲಿ 82 ರನ್ ಗಳಿಸಿದ್ದರೂ, ಸ್ಟ್ರೈಕ್ ರೇಟ್ ಮತ್ತು ಬೌಂಡರಿಗಳ ಕೊರತೆ ಚರ್ಚೆಗೆ ಕಾರಣವಾಗಿದೆ.
ಒಟ್ಟಿನಲ್ಲಿ, ಕೊಹ್ಲಿ ಹೋಲಿಕೆ ಪ್ರಶ್ನೆ ಮತ್ತೆ ಬಾಬರ್ ಮೇಲೆ ಒತ್ತಡ ಹೆಚ್ಚಿಸಿದ್ದು, ಮುಂದಿನ ಪಂದ್ಯಗಳಲ್ಲಿ ಅವರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಕ್ರೀಡೆ
ಚಿನ್ನಸ್ವಾಮಿಯಲ್ಲಿ ರನ್ ಮಳೆ: ಆರ್ಸಿಬಿ 250 ರನ್ ಸಿಡಿತ!
ಬೆಂಗಳೂರುದ ಎಂ. ಚಿನ್ನಸ್ವಾಮಿ ಕ್ರೀಡಾಂಗಣನಲ್ಲಿ ನಡೆಯುತ್ತಿರುವ Indian Premier League ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದೆ.
ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ರುತುರಾಜ್ ಗಾಯಕ್ವಾಡ್ ಮೊದಲು ಆರ್ಸಿಬಿಗೆ ಬ್ಯಾಟಿಂಗ್ ಆಹ್ವಾನಿಸಿದರು. ಆರಂಭದಲ್ಲಿ ವಿರಾಟ್ ಕೊಹ್ಲಿ (28) ಬೇಗ ಔಟ್ ಆದರೂ, ಫಿಲ್ ಸಾಲ್ಟ್ (46) ತಂಡಕ್ಕೆ ವೇಗ ನೀಡಿದರು.
ಆದರೆ, ನಂತರದ ಹಂತದಲ್ಲಿ ಆರ್ಸಿಬಿ ಬ್ಯಾಟಿಂಗ್ ಭರ್ಜರಿಯಾಗಿ ಸಿಡಿಯಿತು. ದೇವದತ್ತ ಪಡಿಕಲ್ (50) ಅರ್ಧಶತಕ ಸಿಡಿಸಿ ತಂಡಕ್ಕೆ ಬಲ ನೀಡಿದರೆ, ನಾಯಕ ರಜತ್ ಪಾಟೀದಾರ್ (48*) ವೇಗದ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ ಟಿಮ್ ಡೇವಿಡ್ (70*) ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳಿಂದ ಚೆನ್ನೈ ಬೌಲರ್ಗಳನ್ನು ಕಂಗೆಡಿಸಿದರು.
ಪವರ್ಪ್ಲೇಯಲ್ಲೇ ವಿಕೆಟ್ ಪಡೆಯಲು ವಿಫಲವಾದ ಸಿಎಸ್ಕೆ ಬೌಲರ್ಗಳು ಮತ್ತೆ ಅದೇ ತಪ್ಪನ್ನು ಮುಂದುವರೆಸಿದರು. ಪರಿಣಾಮವಾಗಿ, ಆರ್ಸಿಬಿ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಭಾರೀ 250 ರನ್ ಗಳಿಸಿತು.
ಈ ಬೃಹತ್ ಗುರಿಯನ್ನು ಬೆನ್ನತ್ತುತ್ತಿರುವ ಸಿಎಸ್ಕೆ, ತನ್ನ ಮೊದಲ ಗೆಲುವು ದಾಖಲಿಸಬಹುದೇ ಎಂಬುದು ಈಗ ಕುತೂಹಲ ಮೂಡಿಸಿದೆ.
ಆರ್ಸಿಬಿ ಬ್ಯಾಟಿಂಗ್ ವಿವರ:
- ವಿರಾಟ್ ಕೊಹ್ಲಿ – 28 (18)
- ಫಿಲ್ ಸಾಲ್ಟ್ – 46 (30)
- ದೇವದತ್ತ ಪಡಿಕಲ್ – 50 (29)
- ರಜತ್ ಪಾಟೀದಾರ್ – 48* (19)
- ಟಿಮ್ ಡೇವಿಡ್ – 70* (25)
-
ದೇಶ10 hours agoಇಸ್ಲಾಮಾಬಾದ್ನಲ್ಲಿ ಅಮೆರಿಕಾ-ಇರಾನ್ ಶಾಂತಿ ಮಾತುಕತೆ: 2 ದಿನ ಸಾರ್ವಜನಿಕ ರಜೆ ಘೋಷಣೆ
-
ಚುನಾವಣೆ13 hours agoತಮಿಳುನಾಡು ರಾಜಕೀಯಕ್ಕೆ ವಿಜಯ್ ಎಂಟ್ರಿ: ‘ಟಿವಿಕೆ’ ಭವಿಷ್ಯ ಏನು?
-
ದೇಶ13 hours agoAAP ಒಳಗಲ್ಲಾಟ: ರಾಘವ್ ಚಡ್ಡಾ sidelined ಆಗಿರುವ ಹಿನ್ನಲೆ ಏನು?
-
ದೇಶ17 hours agoಬಿಕಿನಿ ಬ್ಲೌಸ್ ಜೊತೆ ಸೀರೆ: ಆಕಾಂಕ್ಷಾ ಪುರಿಗೆ ಟ್ರೋಲ್ ಮಳೆ!
-
ದೇಶ17 hours agoBeauty Tips : ಟ್ಯಾನಿಂಗ್ ಸಮಸ್ಯೆಗೆ ಮನೆಮದ್ದು: ಅರಿಶಿನದ ಅದ್ಭುತ ಪ್ರಯೋಜನ
-
ದೇಶ9 hours agoಪಾಕಿಸ್ತಾನ ಮಧ್ಯಸ್ಥಿಕೆ ವಿರುದ್ಧ ಇಸ್ರೇಲ್ ಆಕ್ಷೇಪ: ಅಮೆರಿಕಾ-ಇರಾನ್ ಮಾತುಕತೆಗೆ ಹೊಸ ತಿರುವು
-
ಕ್ರೀಡೆ9 hours agoಕೊಹ್ಲಿ ಹೋಲಿಕೆಗೆ ಬಾಬರ್ ಅಜಮ್ ಕಿಡಿ: ಪತ್ರಿಕಾಗೋಷ್ಠಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ
-
ದೇಶ17 hours agoಪಾಕ್ PM ಪೋಸ್ಟ್ ಗೊಂದಲ: ‘ಡ್ರಾಫ್ಟ್’ ಬಿಟ್ಟು ಬಿಟ್ಟ ತಪ್ಪು ವೈರಲ್!
