Connect with us

ಕ್ರೀಡೆ

RCBಗೆ ಈ ಬಾರಿ ಹೊಸ ಸಾರಥಿ: ತಂಡದ ಬಲ, ದೌರ್ಬಲ್ಯಗಳೇನು ಗೊತ್ತಾ? – IPL 2025

Published

on

ಐಪಿಎಲ್​ 2025 ಮಾ.22ರಿಂದ ಅದ್ಧೂರಿಯಾಗಿ ಪ್ರಾರಂಭವಾಗಲಿದೆ. ಮೊದಲ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು (RCB) ಮತ್ತು ಹಾಲಿ ಚಾಂಪಿಯನ್​ ಕೋಲ್ಕತ್ತಾ ನೈಟ್​ ರೈಡರ್ಸ್​ (KKR) ತಂಡಗಳು ಕೋಲ್ಕತಾದ ಈಡನ್ಸ್ ಗಾರ್ಡನ್ಸ್‌ನಲ್ಲಿ ಮುಖಾಮುಖಿ ಆಗಲಿವೆ.

ಈ ಬಾರಿ ಚಾಂಪಿಯನ್​ ಆಗಿ ಕಪ್​ ಎತ್ತಿ ಹಿಡಿಯಲೇಬೇಕೆಂಬ ದೃಢಸಂಕಲ್ಪದಲ್ಲಿರುವ ಆರ್​ಸಿಬಿ ಬಲಿಷ್ಠ ತಂಡದೊಂದಿಗೆ ಅಖಾಡಕ್ಕಿಳಿಯುತ್ತಿದೆ. ಇದರ ಜೊತೆಗೆ, ಹೊಸ ನಾಯಕನೊಂದಿಗೆ ಅದೃಷ್ಠ ಪರೀಕ್ಷೆಗಿಳಿದಿದೆ. ಆದರೆ ಹೊಸ ಸೀಸನ್​ನಲ್ಲಿ ಆರ್​ಸಿಬಿಯ ಸಾಮರ್ಥ್ಯ ಮತ್ತು ದೌರ್ಬಲ್ಯಗಳೇನು ಎಂಬುದನ್ನು ನೋಡೋಣ.

ಬಲ: ಹೊಸ ನಾಯಕ ರಜತ್ ಪಟಿದಾರ್ ಅವರೊಂದಿಗೆ RCB ಟೂರ್ನಿ ಆಡಲಿದೆ. ರಜತ್​ ಕಳೆದ ಕೆಲವು ವರ್ಷಗಳಲ್ಲಿ ಐಪಿಎಲ್‌ ಮಾತ್ರವಲ್ಲದೇ ದೇಶಿ ಕ್ರಿಕೆಟ್‌ನಲ್ಲೂ ಉತ್ತಮ ಪ್ರದರ್ಶನ ತೋರಿದ್ದಾರೆ. ಕಳೆದ ಋತುವಿನಲ್ಲಿ ಕೆಲವು ಅದ್ಭುತ ಇನ್ನಿಂಗ್ಸ್‌ ಆಡಿದ್ದಾರೆ. ಇದೀಗ ನಾಯಕನಾಗಿ ತನ್ನ ಛಾಪು ಮೂಡಿಸಲು ಬಯಸುತ್ತಿದ್ದು, ಉತ್ತಮ ಪ್ರದರ್ಶನ ನಿರೀಕ್ಷಿಸಬಹುದು. ಅಲ್ಲದೆ ಮಧ್ಯಮ ಕ್ರಮಾಂಕದಲ್ಲಿ ಸ್ಪೋಟಕ ಪ್ರದರ್ಶನ ಕಾಣಬಹುದು.

ಇದಲ್ಲದೇ ಐಪಿಎಲ್​ಗೂ ಮುನ್ನವೇ ವಿರಾಟ್​ ಕೊಹ್ಲಿ ಉತ್ತಮ ಫಾರ್ಮ್‌ನಲ್ಲಿರುವುದು ತಂಡಕ್ಕೆ ಒಳ್ಳೆಯ ಸೂಚನೆ. ಇತ್ತೀಚೆಗೆ ನಡೆದ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಪ್ರಭಾವಶಾಲಿ ಪ್ರದರ್ಶನ ನೀಡಿದ್ದರು. ಇದರೊಂದಿಗೆ ಆರ್‌ಸಿಬಿಗೆ ಹಿರಿಯ ವೇಗಿ ಭುವನೇಶ್ವರ್ ಮತ್ತು ಆಲ್‌ರೌಂಡರ್ ಕೃನಾಲ್ ಪಾಂಡ್ಯ ಆಗಮನ ತಂಡದ ಬೌಲಿಂಗ್​ ವಿಭಾಗಕ್ಕೆ ಶಕ್ತಿ ತುಂಬಿದೆ.

ದೇವದತ್​ ಪಡಿಕ್ಕಲ್ ಕೂಡ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಫಿಲ್ ಸಾಲ್ಟ್, ಲಿವಿಂಗ್‌ಸ್ಟನ್, ಟಿಮ್ ಡೇವಿಡ್, ನುವಾನ್​ ತುಷಾರ, ಜೇಕಬ್ ಬೆಥೆಲ್ ಮತ್ತು ಹ್ಯಾಜಲ್‌ವುಡ್‌ರಂತಹ ಆಟಗಾರರು ತಂಡದಲ್ಲಿ ಹೆಚ್ಚು ಪ್ರಭಾವ ಬೀರುವ ಸಾಧ್ಯತೆ ಇದೆ.

ದೌರ್ಬಲ್ಯ: ಆರ್‌ಸಿಬಿಯ ದೀರ್ಘಕಾಲದ ಸಮಸ್ಯೆಯೆಂದರೆ, ತಂಡ ಬಲಿಷ್ಠವಾಗಿ ಕಂಡರೂ ಕೆಲವೊಮ್ಮೆ ಮೈದಾನದಲ್ಲಿ ವಿಫಲವಾಗಿ ಬಿಡುತ್ತದೆ. ಸ್ಟಾರ್ ಆಟಗಾರರು ಚೆನ್ನಾಗಿ ಆಡಿದರೂ, ನಿರ್ಣಾಯಕ ಸಮಯದಲ್ಲಿ ಫ್ಲಾಪ್​ ಆಗುತ್ತಾರೆ. ಮತ್ತೆ ಕೆಲವು ಸಂದರ್ಭದಲ್ಲಿ ಬ್ಯಾಟರ್‌ಗಳು ಮಿಂಚಿದರೂ, ಬೌಲರ್‌ಗಳು ಕಳಪೆ ಪ್ರದರ್ಶನ ನೀಡುತ್ತಾರೆ. ಪ್ರತಿ ಬಾರಿ ಬಲಿಷ್ಠ ಬ್ಯಾಟಿಂಗ್​ ಲೈನ್​ಅಪ್​ನೊಂದಿಗೆ ಬರುವ​ ಆರ್​ಸಿಬಿ ಬೌಲಿಂಗ್​ ವಿಚಾರದಲ್ಲಿ ವೀಕ್​​ ಆಗಿ ಕಾಣಿಸುತ್ತದೆ.

ಈ ಬಾರಿಯೂ ಉತ್ತಮ ಪ್ರದರ್ಶನ ನೀಡುವ ಸ್ವದೇಶಿ ಬೌಲರ್​ಗಳು ತಂಡದಲ್ಲಿಲ್ಲ. ವಯಸ್ಸು ಮತ್ತು ಫಾರ್ಮ್​ನಿಂದಾಗಿ ಹೊಡೆತ ಅನುಭವಿಸಿರುವ ಭುವನೇಶ್ವರ್ ಆರ್​ಸಿಬಿಯ ವೇಗದ ವಿಭಾಗವನ್ನು ಎಷ್ಟರ ಮಟ್ಟಿಗೆ ಮುನ್ನಡೆಸುತ್ತಾರೆ? ಎಂಬುದನ್ನು ಕಾದು ನೋಡಬೇಕಾಗಿದೆ.

ಉಳಿದಂತೆ, ಲಿವಿಂಗ್‌ಸ್ಟನ್ ಹೆಸರಿಗೆ ಅದ್ಭುತ ಆಲ್‌ರೌಂಡರ್. ಆದರೆ ಕಳೆದ ಆವೃತ್ತಿಯಲ್ಲಿ ಪಂಜಾಬ್ ಪರ ತಮ್ಮ ಸಾಮರ್ಥ್ಯವನ್ನು ತೋರಿಸಲು ಸಾಧ್ಯವಾಗಲಿಲ್ಲ. ಫಿಲ್​ ಸಾಲ್ಟ್, ಟಿಮ್​ ಡೇವಿಡ್, ಶೆಫರ್ಡ್ ರೊಮೆರಿಯೊ, ಜೇಕಬ್​ ಬೆಥೆಲ್, ಹ್ಯಾಜಲ್‌ವುಡ್, ನುವಾನ್​ ತುಷಾರಾ ಇವರೆಲ್ಲರೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಸಾಮರ್ಥ್ಯವನ್ನು ತೋರಿಸಿದ್ದಾರೆ. ಆದರೆ ಈ ಬಾರಿ ಐಪಿಎಲ್​ನಲ್ಲಿ ಬೆಂಗಳೂರು ತಂಡ ಸೇರಿರುವ ಇವರಿಗೆ ತಮ್ಮ ಸಾಮರ್ಥ್ಯವನ್ನು ಸಂಯೋಜಿಸುವುದು ಮತ್ತು ತೋರಿಸುವುದು ನಿರ್ಣಾಯಕವಾಗಿದೆ.

ಎಲ್ಲಕ್ಕಿಂತ ಹೆಚ್ಚಾಗಿ, ಯುವ ನಾಯಕ ರಜತ್​ ಪಾಟೀದಾರ್​ ತಂಡವನ್ನು ಒಗ್ಗಟ್ಟಿನಿಂದ ಹೇಗೆ ಮುನ್ನಡೆಸಲಿದ್ದಾರೆ ಎಂಬುದು ಕುತೂಹಲ ಕೆರಳಿಸಿದೆ. ಬ್ಯಾಟರ್‌ ಮತ್ತು ಬೌಲರ್‌ಗಳ ಸಮಸ್ಯೆಗಳನ್ನು ಸರಿದೂಗಿಸುವಲ್ಲಿ ಏನೆಲ್ಲಾ ನಿರ್ಣಯ ತೆಗೆದುಕೊಳ್ಳಲಿದ್ದಾರೆ ಎಂಬುದನ್ನು ನೋಡಬೇಕಿದೆ.

ಕ್ರೀಡೆ

ಕೊಹ್ಲಿಗೆ ಜೊತೆಯಾಗೋದು ಯಾರು? ಆರ್ಸಿಬಿ ಪ್ಲೇಯಿಂಗ್ ಇಲೆವೆನ್ ಗೊಂದಲ

Published

on

ಐಪಿಎಲ್ 2026ರ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಧರ್ಮಶಾಲಾದ ಹೆಚ್‌ಪಿಸಿಎ ಮೈದಾನದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಆರ್ಸಿಬಿ ತಂಡದಲ್ಲಿ ಆರಂಭಿಕ ಬ್ಯಾಟರ್ ಆಯ್ಕೆಯೇ ದೊಡ್ಡ ಚರ್ಚೆಯ ವಿಷಯವಾಗಿದೆ.

ಗಾಯದ ಕಾರಣ ಕಳೆದ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದ ಇಂಗ್ಲೆಂಡ್ ಆಟಗಾರ ಫಿಲ್ ಸಾಲ್ಟ್ ಇದೀಗ ತಂಡಕ್ಕೆ ಮರಳಿದ್ದಾರೆ. ಆದರೆ ಅವರು ಗುಜರಾತ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವರೇ ಎಂಬುದರ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ಈ ಬಗ್ಗೆ ಮಾತನಾಡಿರುವ ಆರ್ಸಿಬಿ ನಾಯಕ Rajat Patidar, “ಫಿಲ್ ಸಾಲ್ಟ್ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಅವರು ನೆಟ್ಸ್‌ನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ ವೈದ್ಯಕೀಯ ತಂಡದ ನಿಗಾದಲ್ಲಿದ್ದು, ಪಿಚ್ ಪರಿಸ್ಥಿತಿ ನೋಡಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.

ಆರ್ಸಿಬಿ ಪರ ಆರಂಭಿಕನಾಗಿ Virat Kohli ಕಣಕ್ಕಿಳಿಯುವುದು ಖಚಿತವಾಗಿದೆ. ಆದರೆ ಅವರ ಜೊತೆಗೆ ಫಿಲ್ ಸಾಲ್ಟ್ ಅಥವಾ ವೆಂಕಟೇಶ್ ಅಯ್ಯರ್ ಯಾರಿಗೆ ಅವಕಾಶ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ. ಜೇಕಬ್ ಬೆಥೆಲ್ ಗಾಯಗೊಂಡು ಹೊರಗುಳಿದ ಹಿನ್ನೆಲೆ, ಕಳೆದ ಪಂದ್ಯದಲ್ಲಿ ವೆಂಕಟೇಶ್ ಅಯ್ಯರ್ ಉತ್ತಮ ಆರಂಭ ಒದಗಿಸಿದ್ದರು.

ಇದೀಗ ಸಾಲ್ಟ್‌ಗೆ ಅವಕಾಶ ನೀಡಬೇಕಾದರೆ ಇನ್‌ಫಾರ್ಮ್‌ನಲ್ಲಿರುವ ಅಯ್ಯರ್ ಅವರನ್ನು ಕೈಬಿಡಬೇಕಾಗಬಹುದು ಅಥವಾ ಇಂಪ್ಯಾಕ್ಟ್ ಪ್ಲೇಯರ್ ಪಟ್ಟಿಗೆ ಸೇರಿಸಬೇಕಾಗಬಹುದು. ಹೀಗಾಗಿ ಆರಂಭಿಕರ ಆಯ್ಕೆಯೇ ಆರ್ಸಿಬಿ ಮ್ಯಾನೇಜ್ಮೆಂಟ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಧರ್ಮಶಾಲಾ ಪಿಚ್ ಪರಿಸ್ಥಿತಿಯನ್ನಾಧರಿಸಿ ಅಂತಿಮ ಪ್ಲೇಯಿಂಗ್ ಇಲೆವೆನ್ ಪ್ರಕಟವಾಗಲಿದ್ದು, ಆರ್ಸಿಬಿ ಪರ ಕೊಹ್ಲಿ ಜೊತೆ ಇನಿಂಗ್ಸ್ ಆರಂಭಿಸುವ ಆಟಗಾರ ಯಾರು ಎಂಬುದೇ ಈಗ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

Continue Reading

ಕ್ರೀಡೆ

ಕೃಣಾಲ್ ಪಾಂಡ್ಯ ಬೌಲಿಂಗ್‌ಗೆ ಕಾವ್ಯ ಮಾರನ್ ಆಕ್ಷೇಪ? ವೈರಲ್ ಆಯ್ತು SRH ಮಾಲಕಿಯ ರಿಯಾಕ್ಷನ್‌

Published

on

ಹೈದರಾಬಾದ್: Indian Premier League 2026ನಲ್ಲಿ ಶುಕ್ರವಾರ ನಡೆದ Sunrisers Hyderabad ಹಾಗೂ Royal Challengers Bengaluru ನಡುವಿನ ಹೈವೋಲ್ಟೇಜ್ ಪಂದ್ಯ ಇದೀಗ ಹೊಸ ವಿವಾದಕ್ಕೆ ಕಾರಣವಾಗಿದೆ. ಆರ್‌ಸಿಬಿ ಸ್ಪಿನ್ನರ್ Krunal Pandya ಎಸೆದ ಬೌನ್ಸರ್‌ಗಳಿಗೆ ಸನ್‌ರೈಸರ್ಸ್‌ ತಂಡದ ಸಿಇಒ ಹಾಗೂ ಮಾಲಕಿ Kavya Maran ಆಕ್ಷೇಪ ವ್ಯಕ್ತಪಡಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಕೃಣಾಲ್ ಪಾಂಡ್ಯ ಸತತವಾಗಿ ವೇಗದ ಬೌನ್ಸರ್‌ಗಳನ್ನು ಎಸೆದರು. ಸ್ಪಿನ್ನರ್ ಆಗಿದ್ದರೂ ಗಂಟೆಗೆ 120-130 ಕಿ.ಮೀ ವೇಗದಲ್ಲಿ ಚೆಂಡು ಎಸೆಯುತ್ತಿರುವುದರ ಬಗ್ಗೆ ಈಗಾಗಲೇ ಹಲವು ಮಾಜಿ ಕ್ರಿಕೆಟಿಗರು ಪ್ರಶ್ನೆ ಎತ್ತಿದ್ದರು. Ravichandran Ashwin ಸೇರಿ ಕೆಲ ದಿಗ್ಗಜರು ಅವರ ಬೌಲಿಂಗ್ ಶೈಲಿಯನ್ನು ಪರಿಶೀಲಿಸಬೇಕೆಂದು ಅಭಿಪ್ರಾಯಪಟ್ಟಿದ್ದರು.

ಪಂದ್ಯದ ವೇಳೆ ಕೃಣಾಲ್‌ ಎಸೆದ ಬೌನ್ಸರ್ ಕಂಡು ಗ್ಯಾಲರಿಯಲ್ಲಿ ಕುಳಿತಿದ್ದ ಕಾವ್ಯ ಮಾರನ್ ಅಸಮಾಧಾನ ವ್ಯಕ್ತಪಡಿಸುತ್ತಿರುವ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. “ಅವರು ಸರಿಯಾಗಿ ಬೌಲಿಂಗ್ ಮಾಡುತ್ತಿಲ್ಲ, ಚೆಂಡನ್ನು ಎಸೆಯುತ್ತಿದ್ದಾರೆ” ಎಂಬ ಅರ್ಥ ಬರುವ ರೀತಿಯಲ್ಲಿ ಸಹ ಸಿಬ್ಬಂದಿಗಳೊಂದಿಗೆ ಮಾತನಾಡುತ್ತಿರುವ ವಿಡಿಯೊ ಈಗ ಭಾರೀ ವೈರಲ್ ಆಗಿದೆ. ಕೆಲ ಅಭಿಮಾನಿಗಳು ಕಾವ್ಯ ಅವರಿಗೆ ಬೆಂಬಲ ಸೂಚಿಸಿದರೆ, ಇನ್ನೂ ಕೆಲವರು ಇದು ಕ್ರಿಕೆಟ್‌ನ ಭಾಗವೇ ಎಂದು ಪ್ರತಿಕ್ರಿಯಿಸಿದ್ದಾರೆ.

ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 55 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. Abhishek Sharma (56), Ishan Kishan (79) ಮತ್ತು Heinrich Klaasen (51) ಅರ್ಧಶತಕದ ನೆರವಿನಿಂದ ಎಸ್‌ಆರ್‌ಎಚ್ 255 ರನ್‌ಗಳ ಬೃಹತ್ ಮೊತ್ತ ಪೇರಿಸಿತು.

ಗುರಿ ಬೆನ್ನಟ್ಟಿದ ಆರ್‌ಸಿಬಿಗೆ Venkatesh Iyer ವೇಗದ ಆರಂಭ ನೀಡಿದರೂ, Virat Kohli ಮತ್ತು Devdutt Padikkal ಬೇಗ ಔಟಾದರು. ನಾಯಕ Rajat Patidar ಹಾಗೂ ಕೃಣಾಲ್ ಪಾಂಡ್ಯ ಹೋರಾಟ ನಡೆಸಿದರೂ ತಂಡ 200 ರನ್‌ಗಳಿಗೆ ಸೀಮಿತವಾಯಿತು.

Continue Reading

ಕ್ರೀಡೆ

ಮೈದಾನದಲ್ಲಿ ಕೋಪ ಸಿಡಿಸಿದ ವಿರಾಟ್ ಕೊಹ್ಲಿ: ವಿಡಿಯೊಗೆ ಭಾರೀ ಚರ್ಚೆ

Published

on

ಹೈದರಾಬಾದ್: Virat Kohli ಅವರ ಕ್ರೀಡಾಸ್ಫೂರ್ತಿಗೆ ಸಂಬಂಧಿಸಿದ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. Indian Premier League 2026ನಲ್ಲಿ ಶುಕ್ರವಾರ ನಡೆದ Sunrisers Hyderabad ಮತ್ತು Royal Challengers Bengaluru ನಡುವಿನ ಪಂದ್ಯದಲ್ಲಿ ಕೊಹ್ಲಿ, ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ Travis Head ಅವರಿಗೆ ಹ್ಯಾಂಡ್‌ಶೇಕ್ ನಿರಾಕರಿಸಿದ ಘಟನೆ ವೈರಲ್ ಆಗಿದೆ.

ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟ್ರಾವಿಸ್ ಹೆಡ್ 26 ರನ್ ಗಳಿಸಿ ರಾಸಿಖ್ ಸಲಾಮ್ ದಾರ್ ಎಸೆತಕ್ಕೆ ಕ್ಲೀನ್ ಬೌಲ್ಡ್ ಆದರು. ಈ ವೇಳೆ ಮೈದಾನದಲ್ಲಿದ್ದ ಕೊಹ್ಲಿ ಅತ್ಯಂತ ಆಕ್ರಮಣಕಾರಿ ರೀತಿಯಲ್ಲಿ ಸಂಭ್ರಮಾಚರಣೆ ನಡೆಸಿದ್ದರು. ವರದಿಗಳ ಪ್ರಕಾರ, ವಿಕೆಟ್ ಪತನದ ಬಳಿಕ ಹೆಡ್ ಕೂಡ ಕೊಹ್ಲಿಯನ್ನು ಕೆಣಕಿದರೆಂದು ಹೇಳಲಾಗಿದ್ದು, ಇದರಿಂದ ಕೊಹ್ಲಿ ಅಸಮಾಧಾನಗೊಂಡಿದ್ದರು.

ಪಂದ್ಯ ಮುಗಿದ ಬಳಿಕ ಆಟಗಾರರು ಪರಸ್ಪರ ಹಸ್ತಲಾಘವ ಮಾಡುತ್ತಿದ್ದ ವೇಳೆ ಕೊಹ್ಲಿ, Pat Cummins, Abhishek Sharma ಹಾಗೂ Ishan Kishan ಜೊತೆ ಹೃತ್ಪೂರ್ವಕವಾಗಿ ಮಾತನಾಡಿದರೂ, ಟ್ರಾವಿಸ್ ಹೆಡ್ ಅವರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ಹರಿದಾಡುತ್ತಿದೆ. ಇದಕ್ಕೆ ಕೆಲ ಅಭಿಮಾನಿಗಳು ಕೊಹ್ಲಿ ವಿರುದ್ಧ ಟೀಕೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಇದು ಪಂದ್ಯದಲ್ಲಿನ ತೀವ್ರ ಸ್ಪರ್ಧಾತ್ಮಕ ಮನೋಭಾವದ ಪರಿಣಾಮ ಎಂದು ಸಮರ್ಥಿಸಿಕೊಂಡಿದ್ದಾರೆ.

ಇನ್ನೊಂದೆಡೆ ಪಂದ್ಯದಲ್ಲಿ 55 ರನ್‌ಗಳಿಂದ ಸೋತಿದ್ದರೂ ಆರ್‌ಸಿಬಿ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡು ಕ್ವಾಲಿಫೈಯರ್-1ಕ್ಕೆ ಪ್ರವೇಶಿಸಿದೆ. ಮೇ 26ರಂದು ಧರ್ಮಶಾಲಾದಲ್ಲಿ Gujarat Titans ವಿರುದ್ಧ ಆರ್‌ಸಿಬಿ ಸೆಣಸಾಡಲಿದೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ.

Continue Reading

Trending