ಕ್ರೀಡೆ
RCB vs KKR ಮೊದಲ ಪಂದ್ಯ ರದ್ದು?: ಕಾರಣ ಏನು? – RCB AND KKR

RCB vs KKR: 18ನೇ ಆವೃತ್ತಿಯ ಐಪಿಎಲ್ ನಾಳೆಯಿಂದ ಪ್ರಾರಂಭವಾಗಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗುತ್ತಿವೆ. ಆದರೆ ಈ ಪಂದ್ಯ ಆರಂಭಕ್ಕೂ ಮೊದಲೇ ಕೆಟ್ಟಸುದ್ದಿಯೊಂದು ಹೊರಬಿದ್ದಿದ್ದು ಆರ್ಸಿಬಿ ಅಭಿಮಾನಿಗಳ ಆತಂಕ ಹೆಚ್ಚಿಸಿದೆ.
ಅದ್ದೂರಿ ಆರಂಭ: ಆರ್ಸಿಬಿ ಮತ್ತು ಕೆಕೆಆರ್ ನಡುವಿನ ಉದ್ಘಾಟನಾ ಪಂದ್ಯವನ್ನು ಅದ್ದೂರಿಯಾಗಿ ನಡೆಸಲು ಈಗಾಗಲೆ ಸಕಲ ಸಿದ್ಧತೆ ನಡೆಸಲಾಗಿದೆ. ಐಪಿಎಲ್ ಉದ್ಘಾಟನ ಕಾರ್ಯಕ್ರಮ ನಡೆಯುತ್ತಿದ್ದು ಇದರಲ್ಲಿ ದಿಶಾ ಪಟಾನಿ ಮತ್ತು ಶ್ರೇಯಾ ಘೋಷಾಲ್ ಹಾಡು ಮತ್ತು ನೃತ್ಯದ ಮೂಲಕ ರಂಜಿಸಲಿದ್ದಾರೆ. ಉದ್ಘಾಟನಾ ಸಮಾರಂಭಕ್ಕೆ ಈಗಾಗಲೇ ಬೃಹತ್ ವ್ಯವಸ್ಥೆ ಕೂಡ ಮಾಡಲಾಗಿದೆ.
ಆದರೆ, ಉದ್ಘಾಟನಾ ಸಮಾರಂಭಕ್ಕೆ ಕೇವಲ ಒಂದು ದಿನ ಮೊದಲೇ ಕೋಲ್ಕತ್ತಾದಿಂದ ಆಘಾತಕಾರಿ ಸುದ್ದಿ ಹೊರಬಿದ್ದಿದೆ. ಮುಂದಿನ ಎರಡು ದಿನಗಳ ಕಾಲ ಪಶ್ಚಿಮ ಬಂಗಾಳದಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಪಂದ್ಯದ ದಿನ ಭಾರೀ ಮಳೆ: ನಾಳೆ ನಡೆಯಲಿರುವ ಪಂದ್ಯಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ಭಾನುವಾರ ಯೆಲ್ಲೊ ಅಲರ್ಟ್ ನೀಡಲಾಗಿದೆ. ಅಕ್ಯೂವೆದರ್ ಪ್ರಕಾರ, ಶನಿವಾರ ಕೋಲ್ಕತ್ತಾದಲ್ಲಿ ಮಳೆಯಾಗುವ ಸಾಧ್ಯತೆ ಶೇ.74 ರಷ್ಟಿದ್ದರೆ, ಶೇ. 97ರಷ್ಟು ಮೋಡ ಕವಿದ ವಾತಾವರಣವಿರಲಿದೆ. ಅಲ್ಲದೆ, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಶೇ.90 ರಷ್ಟಿದೆ ಎಂದು ತಿಳಿಸಿದೆ. ಇದರಿಂದಾಗಿ ಈ ಪಂದ್ಯ ನಡೆಯುತ್ತದೋ ಇಲ್ಲವೋ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.