ದೇಶ
ಏಕನಾಥ್ ಶಿಂಧೆಗೆ ಅಪಹಾಸ್ಯ- ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕಾರ್ಯಕ್ರಮ ಸ್ಧಳವನ್ನೇ ಧ್ವಂಸಗೊಳಿಸಿದ ಕಾರ್ಯಕರ್ತರು!

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಕಾರ್ಯಕ್ರಮದ ಸ್ಧಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ,
ಮುಂಬೈನ ಖಾರ್ ನಲ್ಲಿರುವ ಹೋಟೆಲ್ ನಲ್ಲಿ ನಡೆದ ಕುನಾಲ್ ಕಮ್ರಾ ಅವರ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿಯನ್ನು ಅಪಹಾಸ್ಯ ಮಾಡಲಾಗಿದೆ, ಮಾತ್ರವಲ್ಲದೇ ಅವರನ್ನು ದೇಶದ್ರೋಹಿ ಎಂದು ಉಲ್ಲೇಖಿಸಿ ಭಾರೀ ವಿವಾದಕ್ಕೆ ಕಾರಣರಾಗಿದ್ದಾರೆ,
ಕುನಾಲ್ ಕಮ್ರಾನ ಅವರ ಹೇಳಿಕೆಗಳಿಂದ ಶಿವಸೇನೆ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ದಿ ಯುನಿಕಾಂಟಿನೆಂಟಲ್ ಮುಂಬೈ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ, ಕುನಾಲ್ ಕುಮ್ರಾ ಅವರನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ,