ದೇಶ

ಅಸಲಿ ಬುದ್ದಿ ಪ್ರದರ್ಶಿಸಿದ ತಮಿಳುನಾಡು!

ಚೆನ್ನೈ: ಮೇಕೆದಾಟು ಅಣೆಕಟ್ಟು ಯೋಜನೆಗೆ ಕರ್ನಾಟಕ ಸರ್ಕಾರ ಅನುಮತಿ ಕೋರಿದ ಬೆನ್ನಲ್ಲೇ ಇದನ್ನು ವಿರೋಧಿಸಿ ತಮಿಳುನಾಡು ಕಾನೂನು ಕ್ರಮ ತೆಗೆದುಕೊಳ್ಳವುದಾಗಿ ಎಚ್ಚರಿಕೆ ನೀಡಿದೆ, ಕಾವೇರಿ ನದಿಗೆ ಜಲಾಶಯ ನಿರ್ಮಿಸಿವ ಯೋಜನೆಗೆ ಯಾವ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಹೇಳಿದೆ,
ತಮಿಳುನಾಡು ಜಲಸಂಪನ್ಮೂಲ ಸಚಿವ ದೊರೈ ಮುರುಗನ್ ಈ ಬಗ್ಗೆ ತಮಿಳುನಾಡು ವಿಧಾನಸಭೆಯಲ್ಲಿ ಟಿಪ್ಪಣಿಯನ್ನು ಮಂಡಿಸಿದ್ದಾರೆ, 2025-26ರ ನೀತಿ ಟಿಪ್ಪಣಿಯನ್ನು ಮಂಡಿಸಿದ ಅವರು ಮೇಕೆದಾಟು ಯೋಜನೆ ಸಂಬಂಧ ಕರ್ನಾಟಕವು ಇನ್ನು ಅಂತಿಮ ಡಿಪಿಆರ್ ಸಲ್ಲಿಸಿಲ್ಲ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ಮಾಹಿತಿ ನೀಡಿದರು,
ಬೆಂಗಳೂರಿಗೆ ಕುಡಿಯುವ ನೀರು ಒದಗಿಸಲು ಕರ್ನಾಟಕವು 67.16 ಟಿಎಂಸಿ ಸಾಮಥ್ರ್ಯದ ಜಲಾಶಯವನ್ನು ನಿರ್ಮಿಸಲು ಪ್ರಸ್ತಾಪಿಸಿದೆ, ಆದರೆ ನದಿಪಾತ್ರದ ಕೆಳಗಿನ ರಾಜ್ಯವಾದ ತಮಿಳುನಾಡಿನ ಅಅನುಮತಿಯಿಲ್ಲದೆ ಕರ್ನಾಟಕವು ಯೋಜನೆಯನ್ನು ಮುಂದುವರಿಸಲು ಸಾಧ್ಯವಿಲ್ಲ, ಈ ಯೋಜನೆಯು ಕರ್ನಾಟಕದಿಂದ ನದಿ ನೀರಿನ ನೈಸರ್ಗಿಕ ನೀರಿನ ಹರಿವಿಗೆ ತಡೆಯೊಡ್ಡಲಿದೆ ಎಂದು ವಾದಿಸಿದ್ದಾರೆ.
ಕಾವೇರಿ ನ್ಯಾಯಮಂಡಳಿಯ ಅಂತಿಮ ಆದೇಶ ಮತ್ತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸಿ ಕರ್ನಾಟಕವು ಮೇಕೆದಾಟು ಅಥವಾ ಕರ್ನಾಟಕದ ಕಾವೇರಿ ನದಿಗೆ ಯಾವುದೇ ಸ್ಧಳದಲ್ಲಿ ಅಣೆಕಟ್ಟು ನಿರ್ಮಿಸುವುದನ್ನು ತಡೆಯಲು ತಮಿಳುನಾಡು ಸರ್ಕಾರ ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ದೊರೈ ಮುರುಗನ್ ಹೇಳಿದರು,

Leave a Reply

Your email address will not be published. Required fields are marked *

Trending

Exit mobile version