Connect with us

ದೇಶ

LPG Price Down: ದೇಶದ ಜನತೆಗೆ ಬೆಳ್ಳಂಬೆಳಗ್ಗೆಯೇ ಭರ್ಜರಿ ಗುಡ್‌ನ್ಯೂಸ್! LPG ಗ್ಯಾಸ್ ಸಿಲಿಂಡರ್‌ ಬೆಲೆ ಭಾರೀ ಇಳಿಕೆ!

Published

on

ದೇಶದ ಜನತೆಗೆ 2025ರ ಏಪ್ರಿಲ್ ತಿಂಗಳ ಮೊದಲ ದಿನವೇ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಭರ್ಜರಿ ಇಳಿಕೆಯಾಗಿದ್ದು, ಈ ತಿಂಗಳಲ್ಲಿ ಅನೇಕ ಹಬ್ಬಗಳು, ಮದುವೆ ಇರೋದ್ರಿಂದ ನಿಸ್ಸಂಶಯವಾಗಿ ಮನೆ ಅಥವಾ ಹೋಟೆಲ್‌ಗಳಲ್ಲಿ ಗ್ಯಾಸ್ ಅಗತ್ಯವು ಹೆಚ್ಚಾಗುತ್ತದೆ. ಆದರೆ ಏಪ್ರಿಲ್ ಆರಂಭದಿಂದಲೇ ಎಲ್‌ಪಿಜಿ ಸಿಲಿಂಡರ್‌ಗಳು ಇಳಿಕೆಯಾಗಿದೆ.

ಗ್ಯಾಸ್ ಸಿಲಿಂಡರ್ ಬೆಲೆ ಇಳಿಕೆ ಇಂದಿನಿಂದಲೇ ಜಾರಿಗೆ ಬರಲಿದ್ದು, ತೈಲ ಮಾರುಕಟ್ಟೆ ಕಂಪನಿಗಳು ಸಿಲಿಂಡರ್‌ ಬೆಲೆ ಇಳಿಕೆ ಮಾಡಲು ನಿರ್ಧರಿಸಿರುವುದರಿಂದ ಜನರಿಗೆ ನೆಮ್ಮದಿ ಸಿಕ್ಕಂತಾಗಿದೆ. ಎಲ್ಲೆಲ್ಲಿ ಯಾವ ಗ್ಯಾಸ್ ಬೆಲೆ ಏರಿಕೆಯಾಗಿದೆ ಅನ್ನೋದರ ವಿವರ ಇಲ್ಲಿದೆ.

ಅಂದಹಾಗೆ, LPG ಬೆಲೆಗಳಲ್ಲಿನ ಆಗಾಗ್ಗೆ ಏರಿಳಿತಗಳು ಮಾರುಕಟ್ಟೆಯ ಕ್ರಿಯಾತ್ಮಕ ಸ್ವರೂಪವನ್ನು ಪ್ರತಿಬಿಂಬಿಸುತ್ತವೆ, ಇದು ಅಂತರರಾಷ್ಟ್ರೀಯ ತೈಲ ಬೆಲೆಗಳು, ತೆರಿಗೆ ನೀತಿಗಳು ಮತ್ತು ಪೂರೈಕೆ-ಬೇಡಿಕೆ ಡೈನಾಮಿಕ್ಸ್‌ನಂತಹ ಅಂಶಗಳಿಂದ ಪ್ರಭಾವಿತವಾಗಿರುತ್ತದೆ. ಇತ್ತೀಚಿನ ಬೆಲೆ ಏರಿಕೆಯ ಹಿಂದಿನ ನಿಖರವಾದ ಕಾರಣಗಳನ್ನು ಬಹಿರಂಗಪಡಿಸಲಾಗಿಲ್ಲವಾದರೂ, ತೈಲ ಮಾರುಕಟ್ಟೆ ಕಂಪನಿಗಳು ಬದಲಾಗುತ್ತಿರುವ ಮಾರುಕಟ್ಟೆ ಪರಿಸ್ಥಿತಿಗಳಿಗೆ ಪ್ರತಿಕ್ರಿಯಿಸುತ್ತಿವೆ ಎಂಬುದು ಸ್ಪಷ್ಟವಾಗಿದೆ.

ಈ ತಿಂಗಳ ಮೊದಲ ದಿನವೇ ಗ್ಯಾಸ್‌ ಬೆಲೆ ಇಳಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳ ಬೆಲೆ ಬೆಂಗಳೂರಿನಲ್ಲಿ ಪ್ರತೀ ಸಿಲಿಂಡರ್‌ಗೆ ಬರೋಬ್ಬರಿ 43 ರೂಪಾಯಿ ಇಳಿಕೆಯಾಗಿದ್ದು, LPG ಸಿಲಿಂಡರ್‌ಗಳ ಹೊಸ ದರಗಳು ಇಂದು ಏಪ್ರಿಲ್ 1, 2025 ರಿಂದಲೇ ದೇಶಾದ್ಯಂತ ಜಾರಿಗೆ ಬಂದಿವೆ. ದೇಶದ ಪ್ರಮುಖ ನಗರಗಳಲ್ಲಿ ಗ್ಯಾಸ್ ಬೆಲೆ ಎಷ್ಟು ಹೆಚ್ಚಾಗಿದೆ ಎಂಬುದರ ವಿವರ ಈ ಕೆಳಗಿನಂತಿದೆ.

ಏಪ್ರಿಲ್ 1, 2025 ರಿಂದ, ತೈಲ ಮಾರುಕಟ್ಟೆ ಕಂಪನಿಗಳು (OMC ಗಳು) 19 ಕೆಜಿ ವಾಣಿಜ್ಯ LPG ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು ಹೊರ ರಾಜ್ಯಗಳಲ್ಲಿ 41 ರೂ.ಗಳಷ್ಟು ಕಡಿಮೆ ಮಾಡಿವೆ. ಬೆಂಗಳೂರಿನಲ್ಲಿ ವಾಣಿಜ್ಯ ಗ್ಯಾಸ್‌ನ ಪರಿಷ್ಕೃತ ಚಿಲ್ಲರೆ ಮಾರಾಟ ಬೆಲೆ ಈಗ ರೂ. 1836.50 ಇದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಲೆ ಇಳಿಕೆಯಲ್ಲಿ ವ್ಯತ್ಯಾಸಗಳಿದ್ದು, 41 ರೂಪಾಯಿಯಿಂದ ₹43.50 ಪೈಸೆ ತನಕ ವಿವಿಧ ಜಿಲ್ಲೆಗಳಲ್ಲಿ ಬೆಲೆ ಇಳಿಕೆಯಲ್ಲಿ ವ್ಯತ್ಯಾಸಗಳಿವೆ.

Continue Reading
Click to comment

Leave a Reply

Your email address will not be published. Required fields are marked *

ದೇಶ

20 ಗಂಟೆಗಳ ಕಾಲ ನೀರಿನಡಿ ಸಾಹಸ! ‘ಮೈಸಾ’ ಸಿನಿಮಾದಲ್ಲಿ ಇತಿಹಾಸ ಸೃಷ್ಟಿಸಿದ ರಶ್ಮಿಕಾ ಮಂದಣ್ಣ

Published

on

ನವದೆಹಲಿ: ಕನ್ನಡತಿ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ಬಹುನಿರೀಕ್ಷಿತ ಪ್ಯಾನ್-ಇಂಡಿಯಾ ಸಿನಿಮಾ ‘ಮೈಸಾ’ (Mysaa) ಮೂಲಕ ಭಾರತೀಯ ಚಿತ್ರರಂಗದಲ್ಲೇ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಚಿತ್ರದ ಪ್ರಮುಖ ಸಾಹಸ ದೃಶ್ಯಕ್ಕಾಗಿ ಅವರು ಯಾವುದೇ ಬಾಡಿ ಡಬಲ್ ಅಥವಾ ಡೂಪ್ ಬಳಸದೇ ಸ್ವತಃ ಅಂಡರ್‌ವಾಟರ್ (Underwater) ಫೈಟ್ ಸೀಕ್ವೆನ್ಸ್‌ನಲ್ಲಿ ಅಭಿನಯಿಸಿದ್ದು, ಮಹಿಳಾ ಪ್ರಧಾನ ನಟಿಯೊಬ್ಬರು ಇಂತಹ ಸಾಹಸ ಮಾಡಿದ ಮೊದಲ ಭಾರತೀಯ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

20 ಗಂಟೆಗಳ ಕಾಲ ನೀರಿನಡಿಯಲ್ಲೇ ಚಿತ್ರೀಕರಣ

ಈ ರೋಚಕ ಸಾಹಸ ದೃಶ್ಯದ ಚಿತ್ರೀಕರಣಕ್ಕಾಗಿ ರಶ್ಮಿಕಾ ಎರಡು ದಿನಗಳಲ್ಲಿ ಒಟ್ಟು 20 ಗಂಟೆಗಳ ಕಾಲ ನೀರಿನಡಿಯಲ್ಲೇ ಕಳೆದಿದ್ದಾರೆ. ಚಿತ್ರದ ನಿರ್ದೇಶಕ ರವೀಂದ್ರ ಪುಲ್ಲೆ (Ravindra Pulle) ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಚಿತ್ರೀಕರಣದ ಅಪರೂಪದ ಚಿತ್ರಗಳನ್ನು ಹಂಚಿಕೊಂಡು ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಹಂಚಿಕೊಂಡಿರುವ ಚಿತ್ರಗಳಲ್ಲಿ ರಶ್ಮಿಕಾ ವೆಟ್‌ಸೂಟ್ ಧರಿಸಿ ಡೈವಿಂಗ್ ತಂಡದೊಂದಿಗೆ ಸಾಹಸ ದೃಶ್ಯಕ್ಕೆ ಸಿದ್ಧತೆ ನಡೆಸುತ್ತಿರುವುದು ಕಾಣಿಸುತ್ತದೆ. ಮತ್ತೊಂದು ಚಿತ್ರದಲ್ಲಿ ಅವರ ಬೆನ್ನಿನ ಮೇಲಿನ ಗಾಯದ ಗುರುತುಗಳು ಪಾತ್ರದ ತೀವ್ರತೆಯನ್ನು ತೋರಿಸುತ್ತವೆ.

‘ಇದು ನನ್ನ ಜೀವನದ ಅತ್ಯಂತ ಕಠಿಣ ಚಿತ್ರೀಕರಣ’

ಈ ಅನುಭವದ ಬಗ್ಗೆ ರಶ್ಮಿಕಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

“ಇತ್ತೀಚೆಗೆ ನಾನು ಸಾಮಾಜಿಕ ಜಾಲತಾಣಗಳಿಂದ ಸ್ವಲ್ಪ ದೂರವಾಗಿದ್ದೆ. ಅದಕ್ಕೆ ಕಾರಣ ಇದೇ. ನನ್ನ ಜೀವನದಲ್ಲೇ ನಾನು ಎದುರಿಸಿದ ಅತ್ಯಂತ ಕಠಿಣ ಮತ್ತು ಸವಾಲಿನ ಚಿತ್ರೀಕರಣ ಇದಾಗಿದೆ. ಈ ಸಾಹಸಕ್ಕಾಗಿ ನಾವೆಲ್ಲರೂ ಸ್ವಲ್ಪ ಹುಚ್ಚುತನ ಮೆರೆದಿದ್ದೇವೆ. ಆದರೆ ಇದೇ ಅನುಭವ ನನಗೆ ಅಪಾರ ಉತ್ಸಾಹ ನೀಡಿದೆ.” ಎಂದು ಅವರು ತಿಳಿಸಿದ್ದಾರೆ.

ಗಿರಿಜನರ ಹಿನ್ನೆಲೆಯ ಆಕ್ಷನ್ ಥ್ರಿಲ್ಲರ್

‘ಮೈಸಾ’ ಚಿತ್ರವನ್ನು ಅನ್‌ಫಾರ್ಮುಲಾ ಫಿಲ್ಮ್ಸ್ ನಿರ್ಮಿಸುತ್ತಿದ್ದು, ನಿರ್ದೇಶನವನ್ನು ರವೀಂದ್ರ ಪುಲ್ಲೆ ಮಾಡಿದ್ದಾರೆ. ಗಿರಿಜನ ಸಮುದಾಯದ ಹಿನ್ನೆಲೆಯ ಭಾವನಾತ್ಮಕ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಶ್ಮಿಕಾ ಮೊದಲ ಬಾರಿಗೆ ಪೂರ್ಣ ಪ್ರಮಾಣದ ಪ್ಯಾನ್-ಇಂಡಿಯಾ ಆಕ್ಷನ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಫಸ್ಟ್ ಲುಕ್‌ನಲ್ಲೇ ಸದ್ದು ಮಾಡಿದ್ದ ಸಿನಿಮಾ

ಕಳೆದ ವರ್ಷ ಬಿಡುಗಡೆಯಾದ ಚಿತ್ರದ ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ರಶ್ಮಿಕಾ ರಕ್ತಸಿಕ್ತ ಅವತಾರದಲ್ಲಿ ಕೈಯಲ್ಲಿ ಆಯುಧ ಹಿಡಿದು ಕಾಣಿಸಿಕೊಂಡಿದ್ದು, ಸಿನಿಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿತ್ತು. ಈಗ ಅಂಡರ್‌ವಾಟರ್ ಫೈಟ್ ದೃಶ್ಯದ ಸುದ್ದಿಯಿಂದ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಚಿತ್ರದ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ‘ಮೈಸಾ’ ಸಿನಿಮಾ ಮುಂದಿನ ದಿನಗಳಲ್ಲಿ ಪ್ಯಾನ್-ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

Continue Reading

ದೇಶ

ಬಿಹಾರ ರಾಜಕೀಯದಲ್ಲಿ ಭಾರಿ ಟ್ವಿಸ್ಟ್: ನಾಮಪತ್ರದ ಮರುದಿನವೇ BJP ಅಭ್ಯರ್ಥಿ ಬದಲಾವಣೆ, ಪ್ರಶಾಂತ್ ಕಿಶೋರ್ ವಿರುದ್ಧ ಹೊಸ ಮುಖ!

Published

on

ನವದೆಹಲಿ: ಬಿಹಾರದ (Bihar) ಬ್ಯಾಂಕಿಪುರ (Bankipur Assembly) ವಿಧಾನಸಭಾ ಉಪಚುನಾವಣೆಯಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದೆ. ನಾಮಪತ್ರ ಸಲ್ಲಿಸಿದ ಕೇವಲ ಒಂದು ದಿನದ ಬಳಿಕವೇ ಭಾರತೀಯ ಜನತಾ ಪಕ್ಷ (BJP) ತನ್ನ ಅಭ್ಯರ್ಥಿಯನ್ನು ಬದಲಾಯಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಶುಕ್ರವಾರ ನೀರಜ್ ಕುಮಾರ್ ಸಿನ್ಹಾ (Neeraj Kumar Sinha) ಅವರನ್ನು ಬ್ಯಾಂಕಿಪುರ ಕ್ಷೇತ್ರದ ಅಧಿಕೃತ ಅಭ್ಯರ್ಥಿಯಾಗಿ ಘೋಷಿಸಿದೆ. ಈ ಮೂಲಕ ಅವರು ಜನ ಸುರಾಜ್ ಪಕ್ಷದ (Jan Suraaj Party) ಸಂಸ್ಥಾಪಕ ಪ್ರಶಾಂತ್ ಕಿಶೋರ್ (Prashant Kishor) ವಿರುದ್ಧ ಕಣಕ್ಕಿಳಿಯಲಿದ್ದಾರೆ.

ಅಭಿಷೇಕ್ ಬಂಟಿ ಹಿಂದೆ ಸರಿದಿದ್ದು ಏಕೆ?

ಈ ಹಿಂದೆ ಬಿಜೆಪಿ ಅಭ್ಯರ್ಥಿಯಾಗಿದ್ದ ಅಭಿಷೇಕ್ ಬಂಟಿ (Abhishek Bunty) ಗುರುವಾರ ಮುಖ್ಯಮಂತ್ರಿ ಸಮ್ರಾಟ್ ಚೌಧರಿ ಸೇರಿದಂತೆ ಎನ್‌ಡಿಎ (NDA) ನಾಯಕರ ಸಮ್ಮುಖದಲ್ಲಿ ಭರ್ಜರಿಯಾಗಿ ನಾಮಪತ್ರ ಸಲ್ಲಿಸಿದ್ದರು. ಆದರೆ ಶುಕ್ರವಾರ ರಾಜ್ಯ ಬಿಜೆಪಿ ಅಧ್ಯಕ್ಷ ಸಂಜಯ್ ಸರಾವಗಿ ಅವರಿಗೆ ಪತ್ರ ಬರೆದು “ವೈಯಕ್ತಿಕ ಕಾರಣಗಳಿಂದ” ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.

ನಂತರ ನಡೆದ ಸುದ್ದಿಗೋಷ್ಠಿಯಲ್ಲೂ ಇದೇ ಕಾರಣವನ್ನು ಪುನರುಚ್ಚರಿಸಿದ ಅವರು ಭಾವುಕರಾಗಿರುವುದು ಗಮನ ಸೆಳೆಯಿತು.

ಅಭ್ಯರ್ಥಿ ಬದಲಾವಣೆಯ ಹಿಂದಿನ ಕಾರಣವೇನು?

ಮೂಲಗಳ ಪ್ರಕಾರ, ಅಭಿಷೇಕ್ ಬಂಟಿ ಅವರ ತಂದೆ ರವೀಂದ್ರ ಪ್ರಸಾದ್ ಅವರು ಪ್ರಸಿದ್ಧ ಮೇವು ಹಗರಣ (Fodder Scam) ಪ್ರಕರಣದಲ್ಲಿ ಆರ್‌ಜೆಡಿ (RJD) ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಆರೋಪಿಯಾಗಿ ಶಿಕ್ಷೆಗೆ ಗುರಿಯಾಗಿದ್ದರು.

2022ರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಲಾಲು ಯಾದವ್ ಸೇರಿದಂತೆ 75 ಮಂದಿಯನ್ನು ದೋಷಿಗಳೆಂದು ಘೋಷಿಸಿತ್ತು. ಆ ವೇಳೆ ಮಗಧ್ ಕೆಮಿಕಲ್ ಕಾರ್ಪೊರೇಷನ್‌ನ ವ್ಯವಸ್ಥಾಪಕರಾಗಿದ್ದ ರವೀಂದ್ರ ಪ್ರಸಾದ್ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು. ಸುಮಾರು ₹139 ಕೋಟಿ ಮೌಲ್ಯದ ಮೇವು ಹಗರಣ ಪ್ರಕರಣದಲ್ಲಿ ಸಿಬಿಐ 2001ರಿಂದ 2003ರ ನಡುವೆ ಮೂರು ಆರೋಪಪಟ್ಟಿಗಳನ್ನು ಸಲ್ಲಿಸಿತ್ತು.

ಪ್ರಶಾಂತ್ ಕಿಶೋರ್ ತಂತ್ರಕ್ಕೆ BJP ಪ್ರತಿತಂತ್ರ

ಬಿಜೆಪಿ ಮೂಲಗಳ ಪ್ರಕಾರ, ಪ್ರಶಾಂತ್ ಕಿಶೋರ್ ಈ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಂಗ್ರಹಿಸಿ ಚುನಾವಣಾ ಪ್ರಚಾರದಲ್ಲಿ ಪ್ರಮುಖ ವಿಷಯವನ್ನಾಗಿಸಲು ಸಿದ್ಧತೆ ನಡೆಸಿದ್ದರು. ಇದು ಚುನಾವಣೆಯ ಮೇಲೆ ಪರಿಣಾಮ ಬೀರಬಹುದೆಂಬ ಆತಂಕದಿಂದ ಬಿಜೆಪಿ ಮುನ್ನೆಚ್ಚರಿಕೆ ಕ್ರಮವಾಗಿ ಅಭ್ಯರ್ಥಿಯನ್ನು ಬದಲಾಯಿಸಿದೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಸಾಮಾನ್ಯ ಪಕ್ಷದ ಕಾರ್ಯಕರ್ತರಾಗಿರುವ ನೀರಜ್ ಕುಮಾರ್ ಸಿನ್ಹಾ ಅವರಿಗೆ ಟಿಕೆಟ್ ನೀಡಲಾಗಿದೆ.

ಬ್ಯಾಂಕಿಪುರದಲ್ಲಿ ಹೈವೋಲ್ಟೇಜ್ ಕದನ

ರಾಜ್ಯಸಭೆಗೆ ಆಯ್ಕೆಯಾಗಿರುವ ಬಿಜೆಪಿ ರಾಜ್ಯಾಧ್ಯಕ್ಷ ನಿತಿನ್ ನವೀನ್ (Nitin Nabin) ಅವರು ಬ್ಯಾಂಕಿಪುರ ಕ್ಷೇತ್ರಕ್ಕೆ ರಾಜೀನಾಮೆ ನೀಡಿದ್ದರಿಂದ ಉಪಚುನಾವಣೆ ನಡೆಯುತ್ತಿದೆ.

1995ರಿಂದ ಈ ಕ್ಷೇತ್ರ ಬಿಜೆಪಿ ಭದ್ರಕೋಟೆಯಾಗಿದ್ದು, ಈ ಬಾರಿ ಪ್ರಶಾಂತ್ ಕಿಶೋರ್ ಕಣಕ್ಕಿಳಿದಿರುವುದರಿಂದ ಚುನಾವಣೆ ತೀವ್ರ ಕುತೂಹಲ ಕೆರಳಿಸಿದೆ. ಬಿಜೆಪಿ ಅಭ್ಯರ್ಥಿ ಬದಲಾವಣೆ ಈ ಚುನಾವಣೆಗೆ ಮತ್ತಷ್ಟು ರಂಗು ತುಂಬಿದೆ.

Continue Reading

ದೇಶ

Iran-ಅಮೆರಿಕ ಯುದ್ಧ ಆತಂಕ: ಮಂಗಳೂರಿನಲ್ಲಿ ಮತ್ತೊಂದು ಬೃಹತ್ ತೈಲ ಸಂಗ್ರಹಾಗಾರ, ಭಾರತದ ಇಂಧನ ಭದ್ರತೆಗೆ ONGC ಮಹತ್ವದ ನಿರ್ಧಾರ

Published

on

ನವದೆಹಲಿ: ಇರಾನ್-ಅಮೆರಿಕ (Iran-USA War) ಸಂಘರ್ಷದಿಂದ ಜಾಗತಿಕ ಕಚ್ಚಾ ತೈಲ ಪೂರೈಕೆಯಲ್ಲಿ ಅನಿಶ್ಚಿತತೆ ಹೆಚ್ಚುತ್ತಿರುವ ನಡುವೆಯೇ, ಭಾರತ ತನ್ನ ಇಂಧನ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ದೇಶದಲ್ಲಿ ತುರ್ತು ಪರಿಸ್ಥಿತಿಯಲ್ಲೂ ತೈಲ ಕೊರತೆ ಉಂಟಾಗದಂತೆ ತಡೆಯುವ ಉದ್ದೇಶದಿಂದ ಮಂಗಳೂರಿನಲ್ಲಿ (Mangaluru) ಮತ್ತೊಂದು ಬೃಹತ್ ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ (Strategic Petroleum Reserve – SPR) ನಿರ್ಮಾಣಕ್ಕೆ ಆಯಿಲ್ ಅಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೊರೇಷನ್ (ONGC) ತಾತ್ವಿಕ ಅನುಮೋದನೆ ನೀಡಿದೆ.

ಹೊಸದಾಗಿ ನಿರ್ಮಾಣವಾಗಲಿರುವ ಈ ಸಂಗ್ರಹಾಗಾರವು 1.75 MMT ಸಾಮರ್ಥ್ಯ ಹೊಂದಿದ್ದು, ದೇಶದ ತುರ್ತು ತೈಲ ಸಂಗ್ರಹ ಸಾಮರ್ಥ್ಯವನ್ನು ಗಮನಾರ್ಹವಾಗಿ ಹೆಚ್ಚಿಸಲಿದೆ. ಸುಮಾರು 1.28 ಕೋಟಿ ಬ್ಯಾರೆಲ್ ಕಚ್ಚಾ ತೈಲ ಸಂಗ್ರಹಿಸಬಹುದಾದ ಈ ಯೋಜನೆ, ಜಾಗತಿಕ ಬಿಕ್ಕಟ್ಟುಗಳ ಸಮಯದಲ್ಲಿ ಭಾರತದ ಇಂಧನ ಸುರಕ್ಷತೆಗೆ ದೊಡ್ಡ ಬಲವಾಗಲಿದೆ.

ಪ್ರಸ್ತುತ ಭಾರತದಲ್ಲಿ ಮಂಗಳೂರು, ಪಾದೂರು (ಉಡುಪಿ) ಹಾಗೂ ವಿಶಾಖಪಟ್ಟಣಂನಲ್ಲಿ ಒಟ್ಟು 5.33 MMT ಸಾಮರ್ಥ್ಯದ ಭೂಗತ ತೈಲ ಸಂಗ್ರಹಾಗಾರಗಳಿವೆ. ಈಗ ಮಂಗಳೂರಿನಲ್ಲಿ ಹೆಚ್ಚುವರಿಯಾಗಿ ನಿರ್ಮಾಣವಾಗುವ ಈ ಯೋಜನೆಯಿಂದ ದೇಶದ ತುರ್ತು ತೈಲ ಬ್ಯಾಕಪ್ ಮತ್ತಷ್ಟು ಬಲಿಷ್ಠವಾಗಲಿದೆ.

ಇದುವರೆಗೆ ದೇಶದ ತುರ್ತು ತೈಲ ಸಂಗ್ರಹಾಗಾರಗಳನ್ನು Indian Strategic Petroleum Reserves Limited (ISPRL) ನಿರ್ಮಿಸುತ್ತಿತ್ತು. ಆದರೆ, ಮೊದಲ ಬಾರಿಗೆ ONGC ತನ್ನ ಸ್ವಂತ ಸಂಪನ್ಮೂಲಗಳನ್ನು ಬಳಸಿ ಇಂತಹ ಬೃಹತ್ ಯೋಜನೆಯನ್ನು ಕೈಗೆತ್ತಿಕೊಳ್ಳುತ್ತಿರುವುದು ವಿಶೇಷವಾಗಿದೆ.

ಮಂಗಳೂರಿನಲ್ಲಿ ಈಗಾಗಲೇ MRPL ಸಂಸ್ಥೆಯು ದಿನಕ್ಕೆ ಸುಮಾರು 3 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಶುದ್ಧೀಕರಿಸುವ ಸಾಮರ್ಥ್ಯದ ರಿಫೈನರಿ ಹೊಂದಿದೆ. ಹೊಸ ಸಂಗ್ರಹಾಗಾರವನ್ನು ಇದೇ ಮೂಲಸೌಕರ್ಯಕ್ಕೆ ಸಂಪರ್ಕಿಸುವ ಯೋಜನೆ ರೂಪಿಸಲಾಗಿದ್ದು, ವಾಣಿಜ್ಯ ಬಳಕೆಗೆ ಅವಕಾಶ ನೀಡುವಂತೆ ಕೇಂದ್ರ ಸರ್ಕಾರವನ್ನು ONGC ಕೋರಿದೆ.

MRPL ಷೇರುಗಳಲ್ಲಿ ಭಾರಿ ಏರಿಕೆ

ಈ ಘೋಷಣೆಯ ಬಳಿಕ ONGC ಅಂಗಸಂಸ್ಥೆಯಾದ ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL) ಷೇರುಗಳು ಮಾರುಕಟ್ಟೆಯಲ್ಲಿ ಭರ್ಜರಿ ಏರಿಕೆ ಕಂಡಿವೆ. ಶುಕ್ರವಾರದ ವಹಿವಾಟಿನಲ್ಲಿ ಷೇರುಗಳು ಸುಮಾರು 9% (₹12.17) ಏರಿಕೆಯಾಗಿದ್ದು, ಮಾರುಕಟ್ಟೆ ತಜ್ಞರ ಪ್ರಕಾರ ₹165 ಮಟ್ಟ ದಾಟಿದರೆ ಮುಂದಿನ ದಿನಗಳಲ್ಲಿ ₹190 ರಿಂದ ₹200ರವರೆಗೆ ಏರಿಕೆ ಕಾಣುವ ಸಾಧ್ಯತೆಯಿದೆ.

ತುರ್ತು ತೈಲ ಸಂಗ್ರಹ ಏಕೆ ಅಗತ್ಯ?

ಭಾರತವು ವಿಶ್ವದ ಮೂರನೇ ಅತಿ ದೊಡ್ಡ ಕಚ್ಚಾ ತೈಲ ಆಮದುದಾರ ದೇಶವಾಗಿದೆ. ಯುದ್ಧ, ಜಾಗತಿಕ ಬಿಕ್ಕಟ್ಟು ಅಥವಾ ಪೂರೈಕೆ ವ್ಯತ್ಯಯದ ಸಂದರ್ಭದಲ್ಲಿ ದೇಶದಲ್ಲಿ ಇಂಧನ ಕೊರತೆ ಉಂಟಾಗದಂತೆ ತಡೆಯಲು ಸ್ಟ್ರಾಟೆಜಿಕ್ ಪೆಟ್ರೋಲಿಯಂ ರಿಸರ್ವ್ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ.

ಪ್ರಸ್ತುತ ಭಾರತದ ತುರ್ತು ತೈಲ ಸಂಗ್ರಹವು ಸುಮಾರು 9 ದಿನಗಳ ಅವಶ್ಯಕತೆಯನ್ನು ಪೂರೈಸುವ ಸಾಮರ್ಥ್ಯ ಹೊಂದಿದೆ. ಮುಂದಿನ ಹತ್ತು ವರ್ಷಗಳಲ್ಲಿ ಈ ಸಾಮರ್ಥ್ಯವನ್ನು 15 MMTಗೆ ಹೆಚ್ಚಿಸುವ ಗುರಿಯನ್ನು ಸರ್ಕಾರ ಹೊಂದಿದೆ. ಇಂಟರ್‌ನ್ಯಾಷನಲ್ ಎನರ್ಜಿ ಏಜೆನ್ಸಿ (IEA) ತನ್ನ ಸದಸ್ಯ ರಾಷ್ಟ್ರಗಳು ಕನಿಷ್ಠ 90 ದಿನಗಳ ತೈಲ ಸಂಗ್ರಹ ಹೊಂದಿರಬೇಕೆಂದು ಶಿಫಾರಸು ಮಾಡಿದೆ.

ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಈ ಹೊಸ ಯೋಜನೆ ಭವಿಷ್ಯದ ಜಾಗತಿಕ ಬಿಕ್ಕಟ್ಟುಗಳನ್ನು ಎದುರಿಸಲು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.

Continue Reading

Trending